BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ
  • ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ
  • ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ
  • ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ
  • ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ
  • ಮಹಿಳೆಯರು ರಾಜಕೀಯ ನಾಯಕತ್ವ ಗುಣ ಬೆಳೆಸಿಕೊಳ್ಳಿ
  • ತುಮಕೂರು ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ದೀರ್ಘಕಾಲಿಕ ಪರಿಹಾರ ಕ್ರಮ: ದೀಪ ಚೋಳನ್
  • ಕ್ರೀಡೆ ಕೇವಲ ಆಟವಲ್ಲ, ಉದ್ಯೋಗಕ್ಕೂ ಸಹಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರಾಜಕೀಯ ಜೀವನದಲ್ಲಿ ಕೊಟ್ಟ ಮಾತಿಗೆ ಎಂದೂ ತಪ್ಪಿ ನಡೆದಿಲ್ಲ-ಹೆಚ್.ಡಿ.ದೇವೆಗೌಡ
Trending

ರಾಜಕೀಯ ಜೀವನದಲ್ಲಿ ಕೊಟ್ಟ ಮಾತಿಗೆ ಎಂದೂ ತಪ್ಪಿ ನಡೆದಿಲ್ಲ-ಹೆಚ್.ಡಿ.ದೇವೆಗೌಡ

By News Desk BenkiyabaleUpdated:April 15, 2019 6:53 pm

ತುಮಕೂರು:

      ಜಿಲ್ಲೆಯ ಮತದಾರರು ಈ ಬಾರಿ ನನ್ನ ಕೈ ಹಿಡಿದರೆ,ಅವರ ಋಣ ತೀರಿಸಿಯೇ ಜಿಲ್ಲೆಯಿಂದ ನಿಗರ್ಮಿಸುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.

     ಜಿಲ್ಲಾ ಕುಂಚಿಟಿಗರ ಸಮುದಾಯಭವನದಲ್ಲಿ ತುಮಕೂರು ಜಿಲ್ಲಾ ಮಡಿವಾಳ ಸಮಾಜ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತಿದ್ದ ಅವರು,ಜಿಲ್ಲೆಯ ಮತದಾರರು ವಿರೋಧ ಪಕ್ಷದವರು ಮಾಡುವ ಅಪಪ್ರಚಾರಗಳಿಗೆ ಕಿವಿಗೊಡದೆ,ನನ್ನನ್ನು ಆರಿಸಿ ಕಳುಹಿಸಿಕೊಡಿ, ಜಿಲ್ಲೆಯ ನೀರಾವರಿ ಸೇರಿದಂತೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಯೇ ಇಲ್ಲಿಂದ ನಿಗರ್ಮಿಸುತ್ತೇನೆ.ನನ್ನ 60 ವರ್ಷಗಳ ರಾಜಕೀಯ ಜೀವನದಲ್ಲಿ ಎಂದಿಗೂ ಕೊಟ್ಟ ಮಾತಿಗೆ ತಪ್ಪಿ ನಡೆದಿಲ್ಲ.ನನ್ನ ಜೀವನದ ಕೊನೆಯ ವರೆಗೂ ಅದನ್ನು ಉಳಿಸಿಕೊಂಡು ಹೋಗಲಿದ್ದೇನೆ ಎಂದರು.

      ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ 16 ಲಕ್ಷ ಮತದಾರರಲ್ಲಿ ಸುಮಾರು 10 ಲಕ್ಷಕ್ಕೂ ಅಧಿಕ ಮತಗಳು ಸುಮಾರು 23 ಸಣ್ಣ ಸಣ್ಣ ಸಮುದಾಯಗಳಿಗೆ ಸೇರಿದ್ದು,ಅವರ ಸ್ಥಿತಿಗತಿಯನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ.ನೀರಾವರಿ ವಿಚಾರವಾಗಿ ಮೂರು ಬಾರಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ.ನೀರಾವರಿ ವಿಚಾರದಲ್ಲಿ ನಾನು ಹುಟ್ಟು ಹೋರಾಟಗಾರ.ವಿರೋಧಪಕ್ಷಗಳ ಅಪಪ್ರಚಾರದ ನಡುವೆಯೂ ಈ ಜಿಲ್ಲೆಯ ಮತದಾರರು ನನ್ನ ಕೈ ಹಿಡಿಯಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದ ದೇವೇ ಗೌಡರು,ನಾನು ಮುಖ್ಯಮಂತ್ರಿಯಾಗಿದ್ದಾಗ ಮುಸ್ಲಿಂರಿಗೆ,ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ಕಲ್ಪಿಸಲಾಯಿತು. ಸ್ಥಳೀಯ ಸಂಸ್ಥೆಗಳಲ್ಲಿ ಶೇ33ರಷ್ಟು ಮೀಸಲಾತಿಯನ್ನು ಮಹಿಳೆಯರಿಗೆ ನೀಡಲಾಗಿದೆ.ಇದರ ಫಲವಾಗಿ ಎಲ್ಲ ತಳ ಸಮುದಾಯ ಗಳು ರಾಜಕೀಯ ಅಧಿಕಾರ ಅನುಭವಿಸುವಂತಾಗಿವೆ ಎಂದು ದೇವೇಗೌಡರು ವಿಶ್ಲೇಷಿಸಿದರು.

      ನನಗೀತ 87 ವರ್ಷ.ಚುನಾವಣೆಗೆ ನಿಲ್ಲಬಾರದು ಎಂಬ ತೀರ್ಮಾನಕ್ಕೆ ಬಂದಿದ್ದೆ.ಆದರೆ ಕೆಲ ಹಿರಿಯ ನಾಯಕರು, ದೇಶದ ಕೆಟ್ಟ ರಾಜಕೀಯ ಪರಿಸ್ಥಿತಿಯ ವಿರುದ್ದ ಹೋರಾಡಲು ನಿಮ್ಮಂತ ಹಿರಿಯ ನಾಯಕರು ಚುನಾವಣೆಗೆ ಸ್ಪರ್ಧಿಸಬೇಕು ಎಂದು ಒತ್ತಾಯ ಮಾಡಿದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಿಂದ ಸ್ಪರ್ಧಿಸುತ್ತಿದ್ದೇನೆ. ಸಿದ್ದರಾಮಯ್ಯ ನಾನು ಒಗ್ಗೂಡಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಹೋರಾಟ ನಡೆಸುತ್ತಿದ್ದೇವೆ.ಮಡಿವಾಳ ಜನಾಂಗಕ್ಕೆ ಅರ್ಥಿಕ ಶಕ್ತಿ ತುಂಬಲು ಈಗಾಗಲೇ ಅಭಿವೃದ್ದಿ ನಿಗಮ ಸ್ಥಾಪಿಸಲಾಗಿದೆ. ಸಮುದಾಯದ ಮುಖಂಡರಾದ ಅಮರನಾಥ ಅವರಿಗೆ ರಾಜಕೀಯ ಶಕ್ತಿ ತುಂಬುವ ಕೆಲಸವನ್ನು ಮಾಡಲಿದ್ದೇವೆ.ನಿಮ್ಮ ಬೇಡಿಕೆಗಳ ಕಡೆಗೂ ಗಮನ ಹರಿಸಲಿದ್ದೇವೆ.ಇಂದು ಚಿತ್ರದುರ್ಗ ಪ್ರವಾಸ ಮಾಡುತಿದ್ದು, ಮುಂದಿನ ಎರಡು ದಿನ ಕ್ಷೇತ್ರದಲ್ಲಿದ್ದು, ಏ.18ರಂದು ಮತ ಚಲಾಯಿಸಲು ಹುಟ್ಟೂರಿಗೆ ತೆರಳುವುದಾಗಿ ಹೆಚ್.ಡಿ.ದೇಗೌಡರು ನುಡಿದರು.

      ಸಚಿವ ಎಸ್.ಆರ್.ಶ್ರೀನಿವಾಸ್ ಮಾತನಾಡಿ,ನಮ್ಮ ಎದುರಾಳಿ ಅಭ್ಯರ್ಥಿ ಜಿ.ಎಸ್.ಬಸವರಾಜು, ದೇವೇಗೌಡರು ನೀರು ತಡೆಹಿಡಿದಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ.ಹಾಗಾದರೆ ನಾಲ್ಕು ಬಾರಿ ಸಂಸದರಾದ ಇವರು ಜಿಲ್ಲೆಗೆ ನೀರು ತರುವಲ್ಲಿ ವಿಫಲರಾಗಿದ್ದಾರೆ. ಇವರಿಗೆ ಜಿಲ್ಲೆಯ ಜನತೆ ಪುನಃ ಮತ ನೀಡಬೇಕೆ ಎಂದು ಪ್ರಶ್ನಿಸಿದರು.

      ಇದೇ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಮಡಿವಾಳ ಸಮಾಜದಿಂದ ಮಾಚಿದೇವ ಅಭಿವೃದ್ದಿ ನಿಗಮಕ್ಕೆ ನೀಡಿರುವ 25 ಕೋಟಿಗೆ ಬದಲು 50 ಕೋಟಿ ಮೀಸಲಿಡುವಂತೆ ಹಾಗೂ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಮನವಿ ಸಲ್ಲಿಸಿದರು.

 

(Visited 14 times, 1 visits today)
Previous Articleವಿಜೃಂಭಣೆಯಿಂದ ಜರುಗಿದ ಎಡೆಯೂರು ಸಿದ್ದಲಿಂಗೇಶ್ವರ ಸ್ವಾಮಿ ಮಹಾರಥೋತ್ಸವ
Next Article ಜಿಲ್ಲಾಧಿಕಾರಿಗಳಿಂದ ಚುನಾವಣಾ ಕೈಪಿಡಿ ಬಿಡುಗಡೆ
News Desk Benkiyabale

Related Posts

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm news

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm news

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm news
ತಾಜಾ ಸುದ್ಧಿಗಳು

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm

ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ

July 04, 2026 4:12 pm

ಮಹಿಳೆಯರು ರಾಜಕೀಯ ನಾಯಕತ್ವ ಗುಣ ಬೆಳೆಸಿಕೊಳ್ಳಿ

July 03, 2026 5:50 pm
Our Youtube Channel
Our Picks

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

July 04, 2026 5:05 pm

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm

ವರದಿಯ ನಂತರ ಹೆದ್ದಾರಿ ಬದಿಯಲ್ಲಿ ಎತ್ತರದ ಶಾಶ್ವತ ತಡೆಗೋಡೆ

July 04, 2026 4:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ವಿಶೇಷ ಚೇತನರಿಂದ ಎಸ್‌ಐಆರ್ ಕುರಿತು ಜಾಗೃತಿ ಜಾಥಾ

By News Desk BenkiyabaleJuly 04, 2026 5:05 pm

ತಿಪಟೂರು: ನಗರದಲ್ಲಿ ವಿಶೇಷ ಚೇತನರಿಂದ ತ್ರಿಚಕ್ರ ವಾಹನದ ಮೂಲಕ ಎಸ್ ಐ ಆರ್ ಕುರಿತು ಜಾಗೃತಿ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿತ್ತು.…

ಗ್ರಾಮೀಣಾಭಿವೃದ್ಧಿಗೆ ಸಹಕಾರ ತತ್ವವೇ ಬುನಾದಿ

July 04, 2026 4:20 pm

ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದರೂ ನ್ಯಾಯಾಲಯಗಳಲ್ಲಿ ಬಾಕಿ

July 04, 2026 4:18 pm

ಆರೋಗ್ಯಕರ ಬದುಕಿಗೆ ಕಲೆಯಂತಹ ಹವ್ಯಾಸಗಳು ಅವಶ್ಯಕ

July 04, 2026 4:13 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.