BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
  • ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ
  • ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ
  • ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು
  • ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ
  • ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ
  • ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ
  • ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುರ್ತು ಬರ ಪರಿಹಾರ ಕ್ರಮ ಕೈಗೊಳ್ಳಲು ಡಿಸಿಎಂ ಸೂಚನೆ
Trending

ತುರ್ತು ಬರ ಪರಿಹಾರ ಕ್ರಮ ಕೈಗೊಳ್ಳಲು ಡಿಸಿಎಂ ಸೂಚನೆ

By News Desk BenkiyabaleUpdated:May 10, 2019 7:17 pm

ತುಮಕೂರು :

     ತುಮಕೂರು ಜಿಲ್ಲೆ ತೀವ್ರ ಬರದಿಂದ ತತ್ತರಿಸಿದ್ದು, ಜನ-ಜಾನುವಾರುಗಳಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ನರೇಗಾ ಯೋಜನೆಯಡಿ ದುಡಿಯಲು ಕೆಲಸವನ್ನು ಒದಗಿಸಲು ತುರ್ತು ಕ್ರಮ ಕೈಕೊಳ್ಳುವಂತೆ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಜಿ.ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಪರಿಹಾರ ಕಾರ್ಯಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ತುಮಕೂರು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಸಮಪರ್ಕವಾಗಿ ಬರನಿರ್ವಹಣೆ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಇರುವ ಕಡೆ, ಹೊಸದಾಗಿ ಬೋರ್‍ವೆಲ್‍ಗಳನ್ನು ಕೊರೆಯಲಾಗಿದೆ. ವಿದ್ಯುತ್ ಸಂಪರ್ಕ ಕಲ್ಪಿಸಿ, ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಜಿಲ್ಲೆಯ 74 ಗ್ರಾಮ ಪಂಚಾಯಿತಿಗಳ 122 ಗ್ರಾಮಗಳಿಗೆ 455 ಟ್ರಿಪ್‍ಗಳಲ್ಲಿ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಪೂರೈಕೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 182 ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಿದ್ದು, ಪ್ರತಿ ಕೊಳವೆಬಾವಿಗೆ ಮಾಸಿಕ 16 ಸಾವಿರ ರೂ.ಗಳಿಂದ 18 ಸಾವಿರ ರೂ.ಗಳವರೆಗೆ ಬಾಡಿಗೆ ಹಣ ಪಾವತಿಸಿ ನೀರು ಪಡೆಯಲಾಗುತ್ತಿದೆ. ಒಟ್ಟಾರೆ ಜಿಲ್ಲೆಯಲ್ಲಿ ಪ್ರತಿ ವ್ಯಕ್ತಿಗೆ 40 ಲೀಟರ್‍ನಂತೆ ಪ್ರತಿನಿತ್ಯ ನೀರು ಪೂರೈಕೆ ಮಾಡಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

      ಜಿಲ್ಲೆಯಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಆರ್.ಓ. ಪ್ಲಾಂಟ್‍ಗಳ ಕಾರ್ಯನಿರ್ವಹಣೆಯ ಬಗ್ಗೆ ಪ್ರತಿನಿತ್ಯ ಇಂಜಿನಿಯರ್‍ಗಳು ಪರಿಶೀಲನೆ ನಡೆಸಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು ಮತ್ತು ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಆರ್.ಓ. ಪ್ಲಾಂಟ್‍ಗಳನ್ನು ಸುಸ್ಥಿತಿಯಲ್ಲಿಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

      ಜಿಲ್ಲೆಯಲ್ಲಿ 7,08,175(ದನ ಮತ್ತು ಎಮ್ಮೆ) ಜಾನುವಾರುಗಳಿದ್ದು, ರೈತರ ದಾಸ್ತಾನಿನಲ್ಲಿ 2,64,519 ಟನ್ ಒಣಮೇವು ಲಭ್ಯವಿದೆ. ಲಭ್ಯವಿರುವ ಮೇವು ಇನ್ನೂ 11 ವಾರಗಳಿಗೆ ಸಾಕಾಗುತ್ತದೆ ಎಂದು ಅಂದಾಜಿಸಲಾಗಿದೆ. ಬರಪೀಡಿತ ಜಿಲ್ಲೆಯೆಂದು ಘೋಷಣೆಯಾಗುವ ಮುನ್ನವೇ ರೈತರಿಗೆ ಮೇವಿನ ಕಿರು-ಪೊಟ್ಟಣಗಳನ್ನು ವಿತರಿಸಲಾಗಿತ್ತು. ಇದರಿಂದ 7,35,237 ಟನ್‍ಗಳಷ್ಟು ಹಸಿರು ಮೇವು ಉತ್ಪಾದನೆಯಾಗಿದೆ. ಪ್ರತಿ ವಾರ ಜಿಲ್ಲೆಯಲ್ಲಿ ಮೇವು ಲಭ್ಯತೆಯ ಬಗ್ಗೆ ಅಂದಾಜಿಸಿ ಸರ್ಕಾರಕ್ಕೆ ಹಾಗೂ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 21 ಮೇವು ಬ್ಯಾಂಕ್‍ಗಳನ್ನು ಪ್ರಾರಂಭಿಸಿ ಮೇವನ್ನು ವಿತರಿಸಲಾಗುತ್ತಿದೆ ಎಂದು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಡಾ|| ಪ್ರಕಾಶ್ ಸಭೆಗೆ ಮಾಹಿತಿ ನೀಡಿದರು.

      ಜಿಲ್ಲೆಯರುವ ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲೂ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು. ಕುಡಿಯುವ ನೀರಿಗೆ ಸಮಸ್ಯೆ ಉಂಟಾದರೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ನೀರು ಪೂರೈಸಬೇಕು. ಯಾವುದೇ ಅನುಮತಿಗಾಗಿ ಕಾಯಬಾರದು. ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

     ಬರದ ಸಮಸ್ಯೆಗಳ ಬಗ್ಗೆ ದೂರುಗಳನ್ನು ಸಲ್ಲಿಸಲು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದ್ದು, ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಸಹಾಯ ವಾಣಿಯ ನೋಡಲ್ ಅಧಿಕಾರಿಗಳಾಗಿರುತ್ತಾರೆ. ಈ ಸಹಾಯವಾಣಿ ಮೂಲಕ ನಿಯಂತ್ರಣಾ ಕೊಠಡಿಗೆ ಬರುವ ದೂರುಗಳ ಬಗ್ಗೆ ಪ್ರತ್ಯೇಕ ವಹಿಗಳನ್ನು ನಿರ್ವಹಿಸಬೇಕು. ಈ ವಹಿಗಳನ್ನು ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ಕಚೇರಿಗೆ ತೆರಳಿ ಬರ ಪರಿಹಾರ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು 2 ಪ್ರತ್ಯೇಕ ಪ್ರವಾಸ ಡೈರಿಗಳನ್ನು ನಿರ್ವಹಿಸಬೇಕು. ಈ ಡೈರಿಗಳನ್ನು ಮುಂದಿನ ಸಭೆಗಳಲ್ಲಿ ಪರಿಶೀಲನೆಗೆ ಹಾಜರುಪಡಿಸಬೇಕು ಎಂದು ಅವರು ಸೂಚನೆ ನೀಡಿದರು.

      ಜಿಲ್ಲೆಯ ಜನರು ಕೆಲಸವಿಲ್ಲದೆ ಗೂಳೆ ಹೋಗುವುದನ್ನು ತಪ್ಪಿಸಲು, ನರೇಗಾ ಯೋಜನೆಯಡಿ ಕೆಲಸವನ್ನು ನೀಡಬೇಕು. ಕಳೆದ 2018-19ನೇ ಸಾಲಿನಲ್ಲಿ ಜಿಲ್ಲೆಗೆ ನೀಡಿದ್ದ 50 ಲಕ್ಷ ಮಾನವ ದಿನಗಳಿಗೆ ಎದುರಾಗಿ 51 ಲಕ್ಷ ಮಾನವ ದಿನಗಳನ್ನು ಸೃಜಿಸಿ ಶೇ.102ರಷ್ಟು ಪ್ರಗತಿ ಸಾಧಿಸಲಾಗಿದೆ. ಒಟ್ಟು 206 ಕೋಟಿ ರೂ.ಗಳಷ್ಟು ವೆಚ್ಚದ ಕಾಮಗಾರಿ ಪೂರ್ಣಗೊಂಡಿದ್ದು, ಈ ಪೈಕಿ 80 ಕೋಟಿ ರೂ.ಗಳಷ್ಟು ಮಾತ್ರ ಬಿಡುಗಡೆಯಾಗಬೇಕಿದೆ. ಇದರಲ್ಲಿ ಕೂಲಿ ಹಣ 30 ಕೋಟಿ ರೂ.ಗಳನ್ನು ಇನ್ನೆರಡು ದಿನಗಳಲ್ಲಿ ರಾಜ್ಯ ಸರ್ಕಾರ ಬಿಡುಗಡೆ ಮಾಡಲಿದೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ 3820 ಕೋಟಿ ರೂ. ಹಣ ಬಿಡುಗಡೆ ಮಾಡಬೇಕಿತ್ತು. ಆದರೆ ಈವರೆಗೂ ಕೇಂದ್ರದಿಂದ ಹಣ ಬಿಡುಗಡೆಯಾಗಿಲ್ಲ. ಆದರೂ ರಾಜ್ಯ ಸರ್ಕಾರ ನರೇಗಾ ಯೋಜನೆಗೆ 1200 ಕೋಟಿ ರೂ.ಗಳನ್ನು ಎಲ್ಲ ಜಿಲ್ಲೆಗಳಿಗೆ ಬಿಡುಗಡೆ ಮಾಡಿದೆ ಎಂದು ಅವರು ತಿಳಿಸಿದರು.

      ಬರ ನಿರ್ವಹಣೆಗೆ ಸಿಆರ್‍ಎಫ್ ಟಾಸ್ಕ್ ಫೋರ್ಸ್ ಮತ್ತಿತರ ಕಾರ್ಯಕ್ರಮದಡಿ ಒಟ್ಟು 45 ಕೋಟಿ ರೂ.ಗಳನ್ನು ಜಿಲ್ಲೆಗೆ ಬಿಡುಗಡೆ ಮಾಡಲಾಗಿದೆ. ಈ ಪೈಕಿ 13.40 ಕೋಟಿ ರೂ. ಹಣವನ್ನು ಬರಪರಿಹಾರ ಕಾಮಗಾರಿಗೆ ಖರ್ಚು ಮಾಡಲಾಗಿದೆ ಎಂದು ಅವರು ತಿಳಿಸಿದರು.

       ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ ನಡೆದ ಮೇವು ಖರೀದಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ 94 ಅಧಿಕಾರಿಗಳ ಮೇಲೆ ಇಲಾಖಾ ವಿಚಾರಣೆ ನಡೆಯುತ್ತಿದ್ದು, ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

      ಸಭೆಯಲ್ಲಿ ಜಿಲ್ಲಾಧಿಕಾರಿ ಡಾ|| ರಾಕೇಶ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್, ಪಾಲಿಕೆ ಆಯುಕ್ತ ಟಿ. ಭೂಬಾಲನ್, ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

(Visited 19 times, 1 visits today)
Previous Articleಕಾರು ಡಿಕ್ಕಿಯಾಗಿ ರಾಷ್ಟ್ರೀಯ ಹಾಕಿ ಆಟಗಾರ್ತಿ ದುರ್ಮರಣ!
Next Article ಗ್ರಾ.ಪಂ. ಚುನಾವಣೆ: ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಆದೇಶ
News Desk Benkiyabale

Related Posts

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm news
ತಾಜಾ ಸುದ್ಧಿಗಳು
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm
news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm
news

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
news

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
news

ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ

September 08, 2026 5:26 pm
Our Youtube Channel
Our Picks

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

By News Desk BenkiyabaleSeptember 09, 2026 5:41 pm

ಪಾವಗಡ: ಮಹರ್ಷಿ ವಾಲ್ಮೀಕಿ ಆಶ್ರಮ, ವಾಲ್ಮೀಕಿ ಜಾಗೃತಿ ವೇದಿಕೆ, ನಿಡಗಲ್ಲು ಗ್ರಾಮಸ್ಥರು ಮತ್ತು ದುರ್ಗದ ಅಭಿಮಾನಿಗಳ ವತಿಯಿಂದ ೧೦ನೇ ವರ್ಷದ…

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.