BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ
  • ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ
  • ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ
  • ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ
  • ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ
  • ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಒತ್ತಾಯ
  • ತೀವ್ರ ಬರ: ಸರ್ಕಾರವೇ ರೈತರ ವಿಮಾ ಹಣ ಭರಿಸಲಿ: ವಿಜಯೇಂದ್ರ ಆಗ್ರಹ
  • ಕಾವೇರಿ: ರಾಜ್ಯಕ್ಕೆ ಪದೇ ಪದೆ ಅನ್ಯಾಯ: ವಿಜಯಸೇನೆ ಆಕ್ರೋಶ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ‘ಮಾಧ್ಯಮರಂಗದ ಭವಿಷ್ಯ ಡಿಜಿಟಲ್ ಮಾಧ್ಯಮಗಳಲ್ಲಿದೆ’
Trending

‘ಮಾಧ್ಯಮರಂಗದ ಭವಿಷ್ಯ ಡಿಜಿಟಲ್ ಮಾಧ್ಯಮಗಳಲ್ಲಿದೆ’

By News Desk BenkiyabaleUpdated:July 12, 2019 7:00 pm

ತುಮಕೂರು:

      ಮಾಧ್ಯಮ ಕ್ಷೇತ್ರದ ಒಟ್ಟಾರೆ ಭವಿಷ್ಯ ಡಿಜಿಟಲ್ ಮಾಧ್ಯಮಗಳಲ್ಲಿ ಅಡಗಿದೆ ಎಂದು ದುಬೈಯ ಹೈಯರ್ ಕಾಲೇಜಸ್ ಆಫ್ ಟೆಕ್ನಾಲಜಿಯ ಅಪ್ಲೈಡ್ ಮೀಡಿಯ ವಿಭಾಗದ ಉಪನ್ಯಾಸಕ ಡಾ. ಶ್ರೀಶ ಎಂ. ಅಭಿಪ್ರಾಯಪಟ್ಟರು.

      ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗವು ಶುಕ್ರವಾರ ಹಮ್ಮಿಕೊಂಡಿದ್ದ ‘ಮಾಧ್ಯಮರಂಗ: ಭವಿಷ್ಯದಲ್ಲೇನಿದೆ?’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

      ಸಾಂಪ್ರದಾಯಿಕ ಮಾಧ್ಯಮಗಳ ಜಾಗವನ್ನು ಸಾಮಾಜಿಕ ಮಾಧ್ಯಮಗಳು ಆವರಿಸಿಕೊಳ್ಳುತ್ತಿವೆ. ಮುದ್ರಣ ಮಾಧ್ಯಮಕ್ಕೆ ಭವಿಷ್ಯವಿಲ್ಲ ಎಂದು ಇದರರ್ಥವಲ್ಲ. ಭವಿಷ್ಯದಲ್ಲಿ ಅದರ ಸ್ವರೂಪ ಬದಲಾಗಲಿದೆ. ವಾಸ್ತವವಾಗಿ ಸ್ಥಳೀಯ ಪತ್ರಿಕೆಗಳಿಗೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ ಎಂದರು.

      ಕಾರ್ಪೋರೇಟ್ ಕಂಪೆನಿಗಳು ತಮ್ಮ ಜಾಹೀರಾತು ಮೊತ್ತದ ಶೇ. 45 ಪಾಲನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರಕ್ಕಾಗಿ ಬಳಸಲಿವೆ. ಸೋಶಿಯಲ್ ಮೀಡಿಯಾ ಮ್ಯಾನೇಜರ್ ಎಂಬುದು ಮುಂದಿನ ಕೆಲವೇ ವರ್ಷಗಳಲ್ಲಿ ಪ್ರತಿಷ್ಠಿತ ಹುದ್ದೆಯಾಗಲಿದೆ ಎಂದು ಪ್ರತಿಪಾದಿಸಿದರು.

      2000ದಲ್ಲಿ ಭಾರತದಲ್ಲಿ ಅಂತರ್ಜಾಲ ಬಳಸುವವರ ಪ್ರಮಾಣ ಶೇ. 2 ಮಾತ್ರ ಇತ್ತು. ಆಗ ಅಮೇರಿಕದ ಶೇ. 52 ಜನಸಂಖ್ಯೆ ಇಂಟರ್ನೆಟ್ ಬಳಸುತ್ತಿತ್ತು. ಈಗ ಭಾರತದ ಶೇ. 60ರಷ್ಟು ಮಂದಿ ಅಂತರ್ಜಾಲ ಬಳಸುತ್ತಿದ್ದಾರೆ. ಮುಂದಿನ ಕೆಲವೇ ವರ್ಷಗಳಲ್ಲಿ ಭಾರತದ 90 ಕೋಟಿ ಜನರು ಇಂಟರ್ನೆಟ್ ಬಳಸಲಿದ್ದಾರೆ. ಇದರ ಅನುಕೂಲವನ್ನು ಮಾಧ್ಯಮರಂಗ ಬಳಸಿಕೊಳ್ಳಲಿದೆ ಎಂದರು.

      ಬರವಣಿಗೆ ರೂಪದ ವಿಷಯಗಳಿಗಿಂತ ವೀಡಿಯೋ ನೋಡುವುದರಲ್ಲಿ ಹೊಸ ತಲೆಮಾರು ಹೆಚ್ಚು ಆಸಕ್ತಿ ಹೊಂದಿದೆ ಎಂಬುದನ್ನು ಸಾಮಾಜಿಕ ಮಾಧ್ಯಮಗಳು ಅರ್ಥ ಮಾಡಿಕೊಂಡಿವೆ. ಇದಕ್ಕೆ ತಕ್ಕಂತೆ ಮುದ್ರಣ ಮಾಧ್ಯಮಗಳೂ ತಮ್ಮ ಸ್ವರೂಪ ಹಾಗೂ ವಿಧಾನವನ್ನು ಬದಲಿಸಿಕೊಳ್ಳುವುದು ಅನಿವಾರ್ಯವಾಗಿದೆ ಎಂದರು.

      ಅನಿಮೇಶನ್ ಇಂದು ಬಹುಕೋಟಿ ಉದ್ಯಮವಾಗಿ ಪತ್ರಿಕೋದ್ಯಮ ವಿದ್ಯಾರ್ಥಿಗಳು ಹೊಸ ಸಾಧ್ಯತೆಗಳತ್ತ ತಮ್ಮನ್ನು ತೆರೆದುಕೊಳ್ಳಬೇಕು. ಕೌಶಲ ಇಲ್ಲದ ಕೇವಲ ಪದವಿಗೆ ಮುಂದಿನ ದಿನಗಳಲ್ಲಿ ಯಾವ ಮೌಲ್ಯವೂ ಇರುವುದಿಲ್ಲ ಎಂದು ಎಚ್ಚರಿಸಿದರು.

      ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತುಮಕೂರು ವಿವಿ ಕುಲಪತಿ ಪ್ರೊ. ವೈ. ಎಸ್. ಸಿದ್ದೇಗೌಡ, ಭೂತ-ವರ್ತಮಾನ-ಭವಿಷ್ಯಗಳನ್ನು ಬೆಸೆಯುವ ಕೊಂಡಿಗಳಾಗಿರುವ ಮಾಧ್ಯಮಗಳು ಆಧುನಿಕ ಸಮಾಜದಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತಿವೆ ಎಂದರು.

      ಇಂದಿನ ಮಕ್ಕಳು ನಾಳೆಯ ಪ್ರಜೆಗಳು ಎಂಬ ಕಾಲ ಬದಲಾಗಿದೆ. ಇಂದಿನ ಮಕ್ಕಳು ಇಂದಿನ ಪ್ರಜೆಗಳು ಎಂದು ತಿದ್ದಿಕೊಳ್ಳಬೇಕಾಗಿದೆ. ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡು ಉತ್ತಮ ಭವಿಷ್ಯ ಪಡೆಯಬೇಕು ಎಂದು ಸಲಹೆ ನೀಡಿದರು.

      ಮಾಹಿತಿ ಸಂವಹನ ತಂತ್ರಜ್ಞಾನ ಈ ಕಾಲದ ದೊಡ್ಡ ವರ. ಆಡಳಿತದಲ್ಲಿ ಪಾರದರ್ಶಕತೆಯನ್ನು ತರುವುದರಲ್ಲಿ ಅದರ ಪಾತ್ರ ದೊಡ್ಡದು. ವಿದ್ಯಾರ್ಥಿಗಳು ಹೆಚ್ಚಿನ ಜ್ಞಾನಾರ್ಜನೆಗೆ ಅದನ್ನು ಬಳಸಿಕೊಳ್ಳಬೇಕು ಎಂದರು.

      ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ. ರಾಮಚಂದ್ರಪ್ಪ ಮಾತನಾಡಿ, ಜಗತ್ತಿನ ಕಿಟಕಿಗಳಂತಿರುವ ಮಾಧ್ಯಮಗಳು ಅಭಿವೃದ್ಧಿಯ ಆಧಾರ ಸ್ತಂಭಗಳು ಎಂದರು.

      ಉಪಪ್ರಾಂಶುಪಾಲ ಪ್ರೊ. ಟಿ. ಎನ್. ಹರಿಪ್ರಸಾದ್, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಸಿಬಂತಿ ಪದ್ಮನಾಭ ಕೆ. ವಿ., ಉಪನ್ಯಾಸಕರಾದ ದೇವರಾಜು ಸಿ., ಕೋಕಿಲ ಎಂ.ಎಸ್. ಮತ್ತಿತರರು ಉಪಸ್ಥಿತರಿದ್ದರು.

(Visited 18 times, 1 visits today)
Previous Articleಸಾರಿಗೆ ಬಸ್ ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ
Next Article ಶ್ರೀಗಂಧ ಮರಗಳ ಅಕ್ರಮ ಮಾರಾಟ ಆರೋಪಿಗಳಿಗೆ 5 ವರ್ಷಗಳ ಕಠಿಣ ಶಿಕ್ಷೆ!
News Desk Benkiyabale

Related Posts

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm news

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm news

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm news
ತಾಜಾ ಸುದ್ಧಿಗಳು
news

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm
news

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm
news

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm
news

ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ

August 05, 2026 4:56 pm
news

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ

August 05, 2026 4:54 pm
news

ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಒತ್ತಾಯ

August 05, 2026 4:52 pm
Our Youtube Channel
Our Picks

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

August 05, 2026 5:25 pm

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm

ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ

August 05, 2026 4:56 pm

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ

August 05, 2026 4:54 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನಂದಿಹಳ್ಳಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಚಾಲನೆ

By News Desk BenkiyabaleAugust 05, 2026 5:25 pm

ಹುಳಿಯಾರು: ಹುಳಿಯಾರು ಹೋಬಳಿಯ ನಂದಿಹಳ್ಳಿ ಗ್ರಾಮಸ್ಥರ ಬಹುದಿನಗಳ ಕನಸಾಗಿದ್ದ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಬಿ.ಸುರೇಶ್ ಬಾಬು ಅವರು…

ಬರ ಪರಿಸ್ಥಿತಿ, ಮುಂಗಾರು ಹಂಗಾಮು, ಕುಡಿಯುವ ನೀರಿನ ನಿರ್ವಹಣೆ ಸಮರ್ಪಕವಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

August 05, 2026 5:04 pm

ಗಡಿನಾಡು ಪಾವಗಡದಲ್ಲಿ ನಟಿ ರಾಗಿಣಿ ಸಂಭ್ರಮ

August 05, 2026 4:59 pm

ಸಮಯ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಧ್ಯ

August 05, 2026 4:56 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.