BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೈಗಾರಿಕೆಗಳ ಅಭಿವೃದ್ಧಿಗಾಗಿ ಕೇಂದ್ರದಿಂದ ಪಿಎಲ್‍ಐ ಯೋಜನೆಯಡಿ 11500 ಕೋಟಿ ರೂ. ಬಿಡುಗಡೆ
  • ರಸ್ತೆಯಲ್ಲಿನ ಗುಂಡಿಗಳನ್ನ ಮುಚ್ಚುವಂತೆ ಪ್ರತಿಭಟನೆ
  • ನಿರಾಮ್ ಪ್ಯಾಲಿಯೇಟಿವ್ ಕೇರ್ ಕೇಂದ್ರದಿಂದ ಹೋಂ ಕೇರ್ ಸೇವೆ
  • ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸರಣಿ ಅಪಘಾತಗಳು
  • ಇತಿಹಾಸ ಪ್ರಸಿದ್ದ ಗೂಳೂರು ಮಹಾ ಗಣಪತಿ ಮೂರ್ತಿ ಪ್ರಷ್ಠಾಪನೆ
  • ಕನ್ನಡ ರಾಜ್ಯೋತ್ಸವ, ಟಿಪ್ಪು ಸುಲ್ತಾನ್ ಜಯಂತಿ ಆಚರಣೆ
  • ಸಾಂಸ್ಕೃತಿಕ ಉತ್ಸವಗಳು ಒಗ್ಗಟ್ಟು ತರಲು ಸಹಕಾರಿ
  • ಒನಕೆ ಓಬವ್ವ ಸ್ತ್ರೀಯರ ಧೈರ್ಯದ ಸಂಕೇತ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯ : ಪ್ರತಿಭಟನೆ
Trending

ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯ : ಪ್ರತಿಭಟನೆ

By News Desk BenkiyabaleUpdated:September 05, 2019 7:21 pm

ತುಮಕೂರು:

      60 ವರ್ಷ ತುಂಬಿದ ರೈತರಿಗೆ ಕನಿಷ್ಠ ಪಿಂಚಣಿ, ಕೃಷಿ ಭೂಮಿಯಲ್ಲಿ ಅಂರ್ತಜಲ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಭಾ ತುಮಕೂರು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

      ರೈತರ ಹಕ್ಕೋತ್ತಾಯ ದಿನದ ಅಂಗವಾಗಿ ಟೌನ್‍ಹಾಲ್‍ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿ ಅವರಿಗೆ ಮನವಿ ಸಲ್ಲಿಸ ಲಾಯಿತು.

      ಈ ವೇಳೆ ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಸಂಚಾಲಕ ಗಿರೀಶ್, ತೀವ್ರ ಬರಗಾಲಕ್ಕೆ ತುತ್ತಾಗಿರುವ ಜಿಲ್ಲೆಯಲ್ಲಿ ತೆಂಗು ಮತ್ತು ಅಡಿಕೆ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದು, ನಷ್ಟಕ್ಕೆ ಒಳಗಾಗಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು, ರೈತರಿಗೆ ವೈಜ್ಞಾನಿಕವಾಗಿ ಫಸಲ್ ಭೀಮಾ ಯೋಜನೆಯನ್ನು ಜಾರಿ ಮಾಡ ಬೇಕೆಂದು ಒತ್ತಾಯಿಸಿದರು.

      ಜಿಲ್ಲೆಯ ನೀರಾವರಿ ಯೋಜನೆಗಳಾದ ಹೇಮಾವತಿ, ಭದ್ರಾ ಮೇಲ್ದಂಡೆ, ಎತ್ತಿನಹೊಳೆ ಯೋಜನೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು, ಜಿಲ್ಲೆಗೆ ನೀರಾವರಿಯೋಜನೆ ಮತ್ತು ಸಮರ್ಪಕ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಿದ್ದು, ರೈತ ಕಾರ್ಮಿಕರಿಗೆ ಕೂಲಿಯನ್ನು ಹೆಚ್ಚಳ ಮಾಡಬೇಕೆಂದು ಹೇಳಿದರು.ಕಾರ್ಮಿಕ ಇಲಾಖೆಯಲ್ಲಿ ರೈತರು ಕಟ್ಟಡ ಕೆಲಸ ಮಾಡುವಂತಿಲ್ಲ ಎಂದು ಅಧಿಕಾರಿಗಳು ರೈತರಿಗೆ ಸೌಲಭ್ಯ ಸಿಗದಂತೆ ಮಾಡಿದ್ದಾರೆ, ವ್ಯವಸಾಯದ ಅವಧಿ ನಂತರ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ರೈತರಿಗೆ ಅಗತ್ಯ ಸೌಲಭ್ಯ ದೊರಕಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

     ಜಿಲ್ಲೆಯ 11 ತಾಲ್ಲೂಕುಗಳು ಬರಪೀಡಿತವಾಗಿದ್ದು, ಮಧುಗಿರಿ, ಪಾವಗಡ, ಶಿರಾ, ಕೊರಟಗೆರ ತಾಲ್ಲೂಕುಗಳಲ್ಲಿ ಶೇಂಗಾ ಬೆಳೆಗಾರರು ಹೆಚ್ಚಾಗಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಬರ ಪರಿಹಾರ ಅನುದಾನ ಹಾಗೂ ಶೇಂಗಾ ಬೆಳೆಗಾರರಿಗೆ ವಿಶೇಷ ಅನುದಾನವನ್ನು ನೀಡುವ ಮೂಲಕ ರೈತರ ಹಿತವನ್ನು ಕಾಪಾಡಬೇಕಿದೆ, ಗ್ರಾಮೀಣಾ ಉದ್ಯೋಗಾ ಖಾತ್ರಿ ಯೋಜನೆಯಡಿ ದಿನಕ್ಕೆ 600 ರೂ ಕೂಲಿ ನೀಡಬೇಕು ಎಂದು ಆಗ್ರಹಿಸಿದರು.

      ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕರಾದ ಅಶ್ವತ್ಥನಾರಾಯಣ, ಶಶಿ ಕಾಂತ್, ದೊಡ್ಡತಿಮ್ಮಯ್ಯ, ಶಿವಾನಂದ್, ಗಂಗಣ್ಣ, ನಾಗರತ್ನಮ್ಮ, ಚಂದ್ರಣ್ಣ, ಮಂಜುನಾಥ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

(Visited 6 times, 1 visits today)
Previous Articleಅರಿವನ್ನು ಮೂಡಿಸುವವರೇ ನಿಜವಾದ ಗುರು-ಸಚಿವ ಜೆ.ಸಿ.ಮಾಧುಸ್ವಾಮಿ
Next Article ಕೊರಟಗೆರೆ ಪೊಲೀಸರಿಂದ ಅಂತಾರಾಜ್ಯ ದರೋಡೆಕೋರರ ಬಂಧನ!
News Desk Benkiyabale

Related Posts

ಕೈಗಾರಿಕೆಗಳ ಅಭಿವೃದ್ಧಿಗಾಗಿ ಕೇಂದ್ರದಿಂದ ಪಿಎಲ್‍ಐ ಯೋಜನೆಯಡಿ 11500 ಕೋಟಿ ರೂ. ಬಿಡುಗಡೆ

November 12, 2026 5:16 pm news

ರಸ್ತೆಯಲ್ಲಿನ ಗುಂಡಿಗಳನ್ನ ಮುಚ್ಚುವಂತೆ ಪ್ರತಿಭಟನೆ

November 12, 2026 5:13 pm news

ನಿರಾಮ್ ಪ್ಯಾಲಿಯೇಟಿವ್ ಕೇರ್ ಕೇಂದ್ರದಿಂದ ಹೋಂ ಕೇರ್ ಸೇವೆ

November 12, 2026 5:09 pm news
ತಾಜಾ ಸುದ್ಧಿಗಳು
news

ಕೈಗಾರಿಕೆಗಳ ಅಭಿವೃದ್ಧಿಗಾಗಿ ಕೇಂದ್ರದಿಂದ ಪಿಎಲ್‍ಐ ಯೋಜನೆಯಡಿ 11500 ಕೋಟಿ ರೂ. ಬಿಡುಗಡೆ

November 12, 2026 5:16 pm
news

ರಸ್ತೆಯಲ್ಲಿನ ಗುಂಡಿಗಳನ್ನ ಮುಚ್ಚುವಂತೆ ಪ್ರತಿಭಟನೆ

November 12, 2026 5:13 pm
news

ನಿರಾಮ್ ಪ್ಯಾಲಿಯೇಟಿವ್ ಕೇರ್ ಕೇಂದ್ರದಿಂದ ಹೋಂ ಕೇರ್ ಸೇವೆ

November 12, 2026 5:09 pm
news

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸರಣಿ ಅಪಘಾತಗಳು

November 11, 2026 4:46 pm
news

ಇತಿಹಾಸ ಪ್ರಸಿದ್ದ ಗೂಳೂರು ಮಹಾ ಗಣಪತಿ ಮೂರ್ತಿ ಪ್ರಷ್ಠಾಪನೆ

November 11, 2026 4:44 pm
news

ಕನ್ನಡ ರಾಜ್ಯೋತ್ಸವ, ಟಿಪ್ಪು ಸುಲ್ತಾನ್ ಜಯಂತಿ ಆಚರಣೆ

November 11, 2026 4:42 pm
Our Youtube Channel
Our Picks

ಕೈಗಾರಿಕೆಗಳ ಅಭಿವೃದ್ಧಿಗಾಗಿ ಕೇಂದ್ರದಿಂದ ಪಿಎಲ್‍ಐ ಯೋಜನೆಯಡಿ 11500 ಕೋಟಿ ರೂ. ಬಿಡುಗಡೆ

November 12, 2026 5:16 pm

ರಸ್ತೆಯಲ್ಲಿನ ಗುಂಡಿಗಳನ್ನ ಮುಚ್ಚುವಂತೆ ಪ್ರತಿಭಟನೆ

November 12, 2026 5:13 pm

ನಿರಾಮ್ ಪ್ಯಾಲಿಯೇಟಿವ್ ಕೇರ್ ಕೇಂದ್ರದಿಂದ ಹೋಂ ಕೇರ್ ಸೇವೆ

November 12, 2026 5:09 pm

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸರಣಿ ಅಪಘಾತಗಳು

November 11, 2026 4:46 pm

ಇತಿಹಾಸ ಪ್ರಸಿದ್ದ ಗೂಳೂರು ಮಹಾ ಗಣಪತಿ ಮೂರ್ತಿ ಪ್ರಷ್ಠಾಪನೆ

November 11, 2026 4:44 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ZP CEO ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕೈಗಾರಿಕೆಗಳ ಅಭಿವೃದ್ಧಿಗಾಗಿ ಕೇಂದ್ರದಿಂದ ಪಿಎಲ್‍ಐ ಯೋಜನೆಯಡಿ 11500 ಕೋಟಿ ರೂ. ಬಿಡುಗಡೆ

By News Desk BenkiyabaleNovember 12, 2026 5:16 pm

ತುಮಕೂರು: ಕೈಗಾರಿಕೆಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ಮೇಕ್ ಇನ್ ಇಂಡಿಯಾದ ಪೆÇ್ರಡೆಕ್ಷನ್ ಲಿಂಕ್ಡ್ ಇನ್‍ಸೆಂಟೀವ್ ಯೋಜನೆಯಡಿ 11500 ಕೋಟಿ ರೂ.ಗಳನ್ನು…

ರಸ್ತೆಯಲ್ಲಿನ ಗುಂಡಿಗಳನ್ನ ಮುಚ್ಚುವಂತೆ ಪ್ರತಿಭಟನೆ

November 12, 2026 5:13 pm

ನಿರಾಮ್ ಪ್ಯಾಲಿಯೇಟಿವ್ ಕೇರ್ ಕೇಂದ್ರದಿಂದ ಹೋಂ ಕೇರ್ ಸೇವೆ

November 12, 2026 5:09 pm

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸರಣಿ ಅಪಘಾತಗಳು

November 11, 2026 4:46 pm
News by Date
November 2026
M T W T F S S
 1
2345678
9101112131415
16171819202122
23242526272829
30  
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.