ತುಮಕೂರು:
ನಗರದ 24ನೇ ವಾರ್ಡ್‍ನ ಉಪ್ಪಾರಹಳ್ಳಿಯ ಮುನೇಶ್ವರ ದೇವಸ್ಥಾನದ ಬಳಿ ಸರಿಯಾದ ರಸ್ತೆ, ಒಳಚರಂಡಿ ವ್ಯವಸ್ಥೆ ಇಲ್ಲದೆ ಸಾರ್ವಜನಿಕರು, ಶಾಲಾ ಮಕ್ಕಳು ಓಡಾಡಲು ಹರಸಾಹಸ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಇತ್ತೀಚೆಗೆ ಸುರಿದ ಮಳೆಯಿಂದ ರಸ್ತೆ ಕೆಸರು ಗದ್ದೆಯಂತಾಗಿದ್ದು, ಚರಂಡಿ ನೀರು ರಸ್ತೆಯಲ್ಲಿ ಹರಿಯುವುದರಿಂದ ಶಾಲೆಗೆ ಹೋಗುವ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಓಡಾಡಲು ತುಂಬಾ ಕಷ್ಟವಾಗಿದೆ. ಈ ಸಂಬಂಧ ಪಾಲಿಕೆ ಸದಸ್ಯರು ಇತ್ತ ಗಮನಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ.
ಇಷ್ಟೇ ಅಲ್ಲದೆ ಈ ಜಾಗದಲ್ಲಿ ಹಂದಿಗಳ ಹಾವಳಿ ಹೆಚ್ಚಾಗಿದ್ದು, ಡೆಂಗ್ಯೂ ರೋಗ ಹರಡುವ ಭೀತಿಯಲ್ಲಿ ಜನರಿದ್ದಾರೆ.
ಸ್ಥಳಕ್ಕೆ ಪಾಲಿಕೆ ವಿರೋಧ ಪಕ್ಷದ ನಾಯಕ ರಮೇಶ್ ಭೇಟಿ ನೀಡಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಎಂಜಿನಿಯರ್‍ಗೆ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಂಕರ್, ಬಾಬು ಮತ್ತಿತರರು ಉಪಸ್ಥಿತರಿದ್ದರು.
(Visited 15 times, 1 visits today)