ತುಮಕೂರು :
ಸ್ಮಾರ್ಟ್ ಸಿಟಿ ಯೋಜನೆಯಡಿ ಆಯ್ಕೆಯಾದ ದೇಶದ 100 ಸ್ಮಾರ್ಟ್ ಸಿಟಿಗಳ ರ್ಯಾಂಕಿಂಗ್ ಪಟ್ಟಿಯಲ್ಲಿ 20ನೇ ಸ್ಥಾನದಲ್ಲಿದ್ದ ತುಮಕೂರು ಸ್ಮಾರ್ಟ್ ಸಿಟಿಯು 19ನೇ ಸ್ಥಾನಕ್ಕೆ ಏರಿದೆ ಎಂದು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಯ್.ವಿ ಅವರು ಸಂತಸ ಹಂಚಿಕೊಂಡಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಹಮ್ಮಿಕೊಂಡ ಯೋಜನೆಗಳ ಅನುಷ್ಠಾನದಲ್ಲಿ ಪ್ರಗತಿಯ ವೇಗ ಹೆಚ್ಚಾಗಿದ್ದು, ಈ ಸಿಟಿ ರ್ಯಾಂಕಿಂಗ್ ಏರಿಕೆಗೆ ಸಾಧ್ಯವಾಗಿದೆ. ಮುಂಬರುವ ದಿನಗಳಲ್ಲಿಯೂ ಸಹ ಸ್ಮಾರ್ಟ್ ಸಿಟಿಯ ಎಲ್ಲಾ ಕಾಮಗಾರಿಗಳ ಪ್ರಗತಿಯನ್ನು ಹೆಚ್ಚಿಸಿ ನಗರವನ್ನು ಸ್ಮಾರ್ಟ್ ಸಿಟಿ ಮಾಡಲು ಶ್ರಮವಹಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(Visited 7 times, 1 visits today)