BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
  • ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ
  • ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ
  • ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನ.18ರಿಂದ ನಗರದ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣ ತಾತ್ಕಾಲಿಕ ಸ್ಥಳಾಂತರ!
Trending

ನ.18ರಿಂದ ನಗರದ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣ ತಾತ್ಕಾಲಿಕ ಸ್ಥಳಾಂತರ!

By News Desk BenkiyabaleUpdated:November 02, 2019 6:46 pm

ತುಮಕೂರು:

      ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಕೆಸ್ಸಾರ್ಟಿಸಿ ಬಸ್ಸು ನಿಲ್ದಾಣದ ನಿರ್ಮಾಣ ಕಾಮಗಾರಿಯು ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ನವೆಂಬರ್ ೧೮ ರಿಂದ ಜೆಸಿ ರಸ್ತೆಯಲ್ಲಿರುವ ಕೆಸ್ಸಾರ್ಟಿಸಿ ಘಟಕ ೧ ರ ಸ್ಥಳಕ್ಕೆ ತಾತ್ಕಾಲಿಕವಾಗಿ ಬಸ್ಸು ನಿಲ್ದಾಣವನ್ನು ಸ್ಥಳಾಂತರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ರಾಕೇಶ್ ಕುಮಾರ್ ಅವರು ತಿಳಿಸಿದ್ದಾರೆ.

      ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ನಡೆದ ಕೆಸ್ಸಾರ್ಟಿಸಿ, ಸ್ಮಾರ್ಟ್ ಸಿಟಿ ಮಹಾನಗರ ಪಾಲಿಕೆ ಹಾಗೂ ಪೋಲಿಸ್ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

      ತುಮಕೂರು ನಗರದಲ್ಲಿರುವ ಕೆಸ್ಸಾರ್ಟಿಸಿ ಬಸ್ಸು ನಿಲ್ದಾಣವನ್ನು ಹೈಟೆಕ್ ಆಗಿ ನಿರ್ಮಾಣ ಮಾಡಲು ಸ್ಮಾಟ್‌ಸಿಟಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಯು ಪೂರ್ಣ ಗೊಳ್ಳುವರೆಗೂ ಈಗಿರುವ ಬಸ್ಸು ನಿಲ್ದಾಣದ ಹತ್ತಿರದಲ್ಲಿರುವ ಜೆಸಿ ರಸ್ತೆಯ ಕೆಸ್ಸಾರ್ಟಿಸಿ ಬಸ್ಸು ಡಿಪೋ ಸ್ಥಳಕ್ಕೆ ನಿಲ್ದಾಣವನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸಿ ಅಲ್ಲಿಂದ ಬಸ್ಸುಗಳನ್ನು ಓಡಿಸಿದರೆ ಸಾರ್ವಜನಿಕರಿಗೆ ಅನೂಕೂಲವಾಗಲಿದೆ ಎಂಬುದರ ಬಗ್ಗೆ ಚರ್ಚಿಸಿ ಈ ನಿರ್ದಾರ ಕೈಗೋಳ್ಳಲಾಗಿದೆ ಎಂದರು.

      ಬಸ್ಸುಗಳು ಹೊಸ ಸ್ಥಳದಿಂದ ಕಾರ್ಯಾಚರಣೆ ಆರಂಭಿಸುವ ಮೊದಲು ಅಶೋಕ ರಸ್ತೆ, ಜೆಸಿ ರಸ್ತೆ, ಗುಬ್ಬಿ ವೀರಣ್ಣ ಕಲಾಕ್ಷೇತ್ರ ರಸ್ತೆ ಸೇರಿದಂತೆ ನಿಲ್ದಾಣವನ್ನು ಸಂಧಿಸುವ ರಸ್ತೆಗಳು ಸ್ವಚ್ಛವಾಗಿ ರಬೇಕು ಹಾಗೂ ಬಸ್ಸುಗಳ ಸಂಚಾರಕ್ಕೆ ಸಮರ್ಪಕವಾಗಿರುವಂತೆ ನವೆಂಬರ್ ೧೫ರೊಳಗೆ ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ಪೊರ್ಣಗೋಳಿಸಬೇಕು ಎಂದು ಸ್ಮಾಟ್‌ಸಿಟಿ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

     ಜೆಸಿ ರಸ್ತೆ, ಪ್ರಶಾಂತ ಚಿತ್ರಮಂದಿರ ರಸ್ತೆ, ಕೆನರಾಬ್ಯಾಂಕ್ ರಸ್ತೆ ಹಾಗೂ ಆಶೋಕ ರಸ್ತೆಗಳಲ್ಲಿ ವಾಹನ ನಿಲುಗಡೆ ಮುಕ್ತ ರಸ್ತೆಯನ್ನಾಗಿ ಘೋಷಿಸಬೇಕಾಗಿದೆ. ಗುಬ್ಬಿವೀರಣ್ಣ ಕಲಾ ಕ್ಷೇತ್ರದ ರಸ್ತೆಯಲ್ಲಿ ಕ್ಯಾಂಟರ್‌ಗಳು ಗೂಡ್ಸ್ ವಾಹನಗಳ ನಿಲ್ದಾಣವಿದ್ದು ಬೇರೆಡೆಗೆ ಸ್ಥಳಾಂತರಿಸಬೇಕಿದೆ. ಈ ವಾಹನಗಳು ಟ್ರಕ್ ಟರ್ಮಿನಲ್ಲಿ ನಿಲುಗಡೆ ಮಾಡಿಕೊಳ್ಳಲ್ಲಿ ನಗರದ ಒಳಗಡೆ ದೊಡ್ಡ ವಾಹನಗಳ ಪಾರ್ಕಿಂಗ್‌ಗೆ ಅವಕಾಶವಿಲ್ಲ ಮಂಡಿಪೇಟೆ ಸೇರಿದಂತೆ ನಗರದ ವಹಿವಾಟು ಪ್ರದೇಶಗಳಿಗೆ ಸರಕು ಗಳನ್ನು ತರುವ ದೊಡ್ಡ ವಾಹನಗಳಿಗೆ ರಾತ್ರಿ ೯ ಗಂಟೆಯಿಂದ ಬೆಳಿಗ್ಗೆ ೮ ಗಂಟೆಯವರೆಗೆ ಒಳ ಪ್ರವೇಶಿಸಲು ಅವಕಾಶ ನೀಡಿದರೆ ಸೂಕ್ತ. ಇದರಿಂದ ನಗರದ ಸಂಚಾರ ದಟ್ಟಣೆಯನ್ನು ತಡೆಗಟ್ಟಬಹುದು. ಈ ಕುರಿತು ಅಧಿಸೂಚನೆ ಹೊರಡಿಸಲು ಸೂಕ್ತ ಪ್ರಸ್ತಾವನೆಯನ್ನು ಇನ್ನೆರಡು ದಿನಗಳಲ್ಲಿ ಸಲ್ಲಿಸುವಂತೆ ತುಮಕೂರು ಡಿವೈಎಸ್‌ಪಿ ತಿಪ್ಪೇಸ್ವಾಮಿ ಅವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

     ಬಸ್ಸು ನಿಲ್ದಾಣದ ಬದಲಾವಣೆ ಹಾಗೂ ರಸ್ತೆ ಮಾರ್ಗದ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಪ್ರಚಾರ ನೀಡಬೇಕು. ರೂಟ್‌ಮ್ಯಾಪ್‌ನ ಬಗ್ಗೆ ೩೦ ಸೆಕೆಂಡಿನ ವಿಡೀಯೋವನ್ನು ಸಿದ್ದಪಡಿಸಿ ವಾಟ್ಸಾಪ್ ಗ್ರೂಫ್‌ಗಳಲ್ಲಿ ಶೇರ್ ಮಾಡಿ ಎಂದು ಸ್ಮಾರ್ಟ್ಸಿಟಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

      ತಾತ್ಕಾಲಿಕ ಬಸ್ಸು ನಿಲ್ದಾಣಕ್ಕೆ ಹೊಂದಿಕೊಂಡಂತೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಮುಂಭಾಗದಲ್ಲಿ ಆಟೋಗಳಿಗೆ ನಿಲ್ದಾಣವನ್ನು ಕಲ್ಪಿಸಲಾಗುವುದು ಎಂದು ಪೊಲೀಸ್ ಇಲಾಖೆಯ ಅಧಿಕಾರಿಗಳು ಸಭೆಗೆ ತಿಳಿಸಿದರು.

      ನಿರ್ಮಾಣ ಕಾಮಗಾರಿ ಕೈಗೊಂಡಿರುವ ಎಂ.ಜಿ.ಕ್ರೀಡಾಂಗಣ ಹಾಗೂ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣದಲ್ಲಿ ಕಾಂಕ್ರೀಟ್, ಜಲ್ಲಿ ಸೇರಿದಂತೆ ಅವಶ್ಯಕತೆಯಿರದ ತ್ಯಾಜ್ಯ ವಸ್ತುಗಳನ್ನು ತುಮಕೂರು ನಗರದ ಹೊರವಲಯದ ಅಮಲಾಪುರದಲ್ಲಿ ಗುರ್ತಿಸಿರುವ ಪ್ರದೇಶದಲ್ಲಿ ಸುರಿಯುವಂತೆ ಇಂಜಿನಿಯರ್‌ಗಳಿಗೆ ಸೂಚಿಸಿದ ಅವರು ತ್ಯಾಜ್ಯ ವಸ್ತುಗಳನ್ನು ಪುನರ್ ಬಳಕೆ ಮಾಡಲು ಚಿಂತಿಸಲಾಗಿದೆ ಎಂದರು.

     ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೆ.ವಂಶಿಕೃಷ್ಣ, ಕೆಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರಕುಮಾರ್ ಸೇರಿದಂತೆ ಸ್ಮಾರ್ಟ್ಸಿಟಿ, ಕೆಸ್ಸಾರ್ಟಿಸಿ ಅಧಿಕಾರಿಗಳು ಹಾಜರಿದ್ದರು.

(Visited 53 times, 1 visits today)
Previous Articleತುಮಕೂರು : ಎಂ.ಜಿ. ರಸ್ತೆಯಿಂದ ಬಿ.ಹೆಚ್. ರಸ್ತೆವರೆಗೆ ನೋ-ಪಾರ್ಕಿಂಗ್!!
Next Article ಕಾಮಗಾರಿ ಸ್ಥಳದಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳದ ಇಂಜಿನಿಯರುಗಳ ಮೇಲೆ ಕಾನೂನು ಕ್ರಮ!
News Desk Benkiyabale

Related Posts

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm news

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm news

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm news
ತಾಜಾ ಸುದ್ಧಿಗಳು

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm
Our Youtube Channel
Our Picks

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

By News Desk BenkiyabaleJune 22, 2026 5:23 pm

ತುಮಕೂರು: ರೈಲ್ವೆ ಇಲಾಖೆಯ ಕನ್ನಡ ಕಡೆಗಣನೆ ಮುಂದುವರೆದಿದೆ. ಈ ತಿಂಗಳ ೨೫ರಂದು ಕರ್ನಾಟಕದಲ್ಲಿಯೇ ನಡೆಯುವ ನೈರುತ್ಯ ರೈಲ್ವೆಯ ಗೂಡ್ಸ್ ಟ್ರೇನ್…

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.