ತುಮಕೂರು :

      ಟಿಪ್ಪರ್ , ಟಾಟಾ ಏಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟು. ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ತುಮಕೂರು ಶಿವಮೊಗ್ಗ ಹೆದ್ದಾರಿಯ ಮಲ್ಲಸಂದ್ರ ಬಳಿ ನಡೆದಿದೆ.

    ಬೋಲೆರೋನಲ್ಲಿದ್ದ ವ್ಯಕ್ತಿ ಹಾಗೂ ಎಕ್ಸ್‌ಯುವಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

     ಕಾರಿನಲ್ಲಿ ಆರು ಜನ ಗುಬ್ಬಿ ಕಡೆಗೆ ಮದುವೆಗೆ ತೆರಳುತ್ತಿದ್ದರು. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು. ಅವರನ್ಗನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

(Visited 10 times, 1 visits today)
FacebookTwitterInstagramFacebook MessengerEmailSMSTelegramWhatsapp
FacebookTwitterInstagramFacebook MessengerEmailSMSTelegramWhatsapp