BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ
  • ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ
  • ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ
  • ಪುಟ್ಟ ಮನೆ ಬೆಂಕಿಗೆ ಆಹುತಿ
  • ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ
  • ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ
  • ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಂಗನವಾಡಿಗಳಲ್ಲೇ ಎಲ್‍ಕೆಜಿ, ಯುಕೆಜಿ ಆರಂಭಿಸಲು ಆಗ್ರಹ!
Trending

ಅಂಗನವಾಡಿಗಳಲ್ಲೇ ಎಲ್‍ಕೆಜಿ, ಯುಕೆಜಿ ಆರಂಭಿಸಲು ಆಗ್ರಹ!

By News Desk BenkiyabaleUpdated:December 06, 2019 6:43 pm

ತುಮಕೂರು :

     ಅಂಗನವಾಡಿ ಸಂಬಂಧ ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ವಾಪಸ್ ಪಡೆಯಬೇಕು. ಅಂಗನವಾಡಿಗಳಲ್ಲೇ ಎಲ್‍ಕೆಜಿ ಮತ್ತು ಯುಕೆಜಿ ಆರಂಭಿಸಬೇಕು ಎಂದು ಒತ್ತಾಯಿಸಿ ಸಹಸ್ರ ಸಹಸ್ರ ಅಂಗನವಾಡಿ ಕಾರ್ಯಕರ್ತೆಯರು ತುಮಕೂರು ನಗರದಲ್ಲಿ ಬೃಹತ್ ಮೆರವಣಿಗೆ ನಡೆಸಿದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

      ತುಮಕೂರು ನಗರದ ಟೌನ್‍ಹಾಲ್‍ನಲ್ಲಿ ಸಮಾವೇಶಗೊಂಡ ಸುಮಾರು 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತೆಯರು ಬಿಎಚ್.ರಸ್ತೆ ಎಂ.ಜಿ.ರಸ್ತೆ ಮೂಲಕ ಬೃಹತ್ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಿದರು. ರಾಜ್ಯ ಸರ್ಕಾರದ ವಿರುದ್ದ ಗೋµಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

      ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮಿ ಅಂಗನವಾಡಿ ಕೇಂದ್ರ ವೇಳಾಪಟ್ಟಿಯಲ್ಲಿ ಮೂರು ಗಂಟೆ ಶಾಲಾಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಮಾತೃಪೂರ್ಣ ಯೋಜನೆ ಯಶಸ್ವಿಗೆ ಹೆಚ್ಚುವರಿ ಸಹಾಯಕಿಯನ್ನು ಕೊಡಬೇಕು. ಅಂಗನವಾಡಿಗಳಿಗೆ ಗುಣಾತ್ಮಕ ಮೂಲಭೂತ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.

      1995 ರಿಂದ ಪ್ರಾರಂಭವಾಗಿರುವ ಎಲ್ಲಾ ಯೋಜನೆಗಳಲ್ಲಿ ಆಯ್ಕೆಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಎಸ್.ಎಸ್.ಎಲ್.ಸಿ ಪಾಸಾದವರು ಅನೇಕರು ಪಧವೀಧರರು ಇದ್ದು ಅವರಿಗೆ ತರಬೇತಿ ನೀಡಿ ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್.ಕೆ.ಜಿ-ಯು.ಕೆ.ಜಿ ಪ್ರಾರಂಭಿಸಬೇಕು. ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಆರಂಭಿಸಿರುವ ಎಲ್.ಕೆ.ಜಿ – ಯು.ಕೆ.ಜಿಯನ್ನು ಪ್ರಾರಂಭಿಸದಂತೆ ಇಲಾಖೆಯಿಂದ ತಡೆಯೊಡ್ಡಬೇಕು ಮತ್ತು ಕ್ರಮ ವಹಿಸಬೇಕು. ಐಸಿಡಿಎಸ್ 6 ಉದ್ದೇಶಗಳಿಗೆ ಬಿಟ್ಟು ಉಳಿದ ಯಾವುದೇ ಕೆಲಸವನ್ನು ಅಂಗನವಾಡಿ ನೌಕರರಿಂದ ಕಡ್ಡಾಯವಾಗಿ ಮಾಡಿಸಬಾರದು ಎಂದರು.

      ಹೊಸ ಶಿಕ್ಷಣ ನೀತಿಯ ಶಿಫಾರಸ್ಸಿನಲ್ಲಿರುವ 3 ರಿಂದ 9 ವರ್ಷದ ವರ್ಗೀಕರಣವನ್ನು ವಿರೋಧಿಸಬೇಕು. ಈಗಿರುವ ನಿವೃತ್ತಿ ಸೌಲಭ್ಯವನ್ನು ಬದಲಾಯಿಸಿ. ಎಲ್.ಐ.ಸಿ ಆಧಾರಿತ ಪೆನ್‍ಷನ್ ನೀಡಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರಿಗೆ ಕೊಡುವ ಎನ್.ಪಿ.ಎಸ್ ಮಾನದಂಡದಂತೆ ವೇತನ ವಂತಿಕೆ ಆಧಾರಿತ ಪಿಂಚಣಿ ಯೋಜನೆ ಜಾರಿ ಮಾಡಬೇಕು. ನಿವೃತ್ತಿ ಆದ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಗೆ ಇಡುಗಂಟು ತಕ್ಷಣ ಬಿಡುಗಡೆ ಆಗಬೇಕು. ಇಲಾಖೆಯ ಲೋಪದೋಷಗಳಿಂದ ಪ್ರಾನ್ ಕಾರ್ಡು ನೀಡದವರಿಗೆ ಹಣ ಕಡಿತ ಆಗದವರಿಗೂ ನಿವೃತ್ತಿ ಸೌಲಭ್ಯ ಬಿಡುಗಡೆ ಮಾಡಬೇಕು. ಕಾರ್ಯಕರ್ತೆ ಸಹಾಯಕಿಯರಿಗೆ ಪ್ರಾನ್ ಕಾರ್ಡು ನೀಡದವರಿಗೆ ತಕ್ಷಣ ನೀಡಬೇಕು. 2016 ಏಪ್ರಿಲ್ ನಿಂದ ಆಯ್ಕೆ ಆದ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಖಾಯಂ ನಿವೃತ್ತಿ ಸೌಲಭ್ಯದಡಿ ತರಬೇಕು. ನಿವೃತ್ತಿ ಆದವರಿಗೆ ಕನಿಷ್ಠ 6000 ರೂ ಪಿಂಚಣಿ ನೀಡಬೇಕು ಎಂದು ಆಗ್ರಹಿಸಿದರು.

     ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಮೀನಾಕ್ಷಿಸುಂದರಂ ಮಾತನಾಡಿ, ದೇಶದಾದ್ಯಂತ ಈರುಳ್ಳಿ, ಬೆಳ್ಳುಳ್ಳಿ ಬೆಲೆ ಏರುತ್ತಿದೆ. ಇದರಿಂದ ಜನರು ತತ್ತರಿಸುತ್ತಿದ್ದಾರೆ. ಆದರೆ ನಾವು ಈರುಳ್ಳಿ ತಿನ್ನಲ್ಲ, ನಮಗೂ ಅದಕ್ಕೂ ಸಂಬಂಧವಿಲ್ಲವೆಂಬಂತೆ ಕೇಂದ್ರ ಸರ್ಕಾರದ ಸಚಿವರು ವರ್ತಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

      ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇನ್ನೂ ಹಲವು ಸಮಸ್ಯೆಗಳು ಜನರನ್ನು ಬಾಧಿಸುತ್ತಿವೆ. ಈ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಳ್ಳುವುದು ಬಿಟ್ಟು ಕೇಂದ್ರ ಸರ್ಕಾರ ವೃಥಾ ಅನ್ಯವಿಷಯಗಳಿಗೆ ಹೆಚ್ಚಿನ ಮಹತ್ವ ನೀಡುತ್ತಿದೆ. ಅಂಗನವಾಡಿಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಆಹಾರ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗಾಗಿ ಇರುವ ಯೋಜನೆಗಳ ಪ್ರಮುಖ ಜವಾಬ್ದಾರಿಗಳನ್ನು ಬೇರೆಡೆಗೆ ವರ್ಗಾಯಿಸುವ ಮುಖಾಂತರ ಬಲಹೀನಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಇದರಿಂದ ಸಾವಿರಾರು ಮಹಿಳೆಯರು ಕೆಲಸ ಕಳೆದು ಕೊಳ್ಳುವುದಲ್ಲದೇ ಐಸಿಡಿಎಸ್ ಯೋಜನೆ ತನ್ನ ಉದ್ದೇಶ ಕಳೆದುಕೊಳ್ಳಲಿದೆ ಎಂದು ಹೇಳಿದರು.

       ರಾಜ್ಯದಲ್ಲಿ ಸಾರ್ವಜನಿಕ, ಪೋಷಕರ ಸಹಿ ಸಂಗ್ರಹ ಮಾಡಿಸಲಾಗಿದೆ.30 ಜಿಲ್ಲೆಗಳನ್ನೊಳಗೊಂಡ 6 ಜಾಥಗಳನ್ನು ನಡೆಸಲಾಗಿದೆ.
ಸರ್ಕಾರ ಅಂಗನವಾಡಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಡಿಸೆಂಬರ್ 10 ರಿಂದ ಅನಿರ್ಧಿಷ್ಟವಾಧಿ ಹೋರಾಟಕ್ಕೆ ಸಿದ್ದವಾಗಿದೆ ಎಂದರು.

      ಮೇಲ್ವೀಚಾರಕಿಯಾಗಿ ಮುಂಬಡ್ತಿ ಹೊಂದುವ ಹುದ್ದೆಗಳನ್ನು ಸಂಪೂರ್ಣ ಅಂಗನವಾಡಿ ನೌಕರರಿಗೆ ಕೊಡಬೇಕು. ಮೇಲ್ವಿಚಾರಕಿಯರ ಹುದ್ದೆಗಳಿಗೆ 2015ರ ಭಾರತ ಸರ್ಕಾರದ ಸುತ್ತೋಲೆ ಪ್ರಕಾರ ಈಗಾಗಲೇ ಇರುವಂತೆ, 50ರಷ್ಟು ಹುದ್ದೆಗಳಿಗೆ ಮುಂಬಡ್ತಿ ಪ್ರಕ್ರಿಯೆ ತಕ್ಷಣ ಪ್ರಾರಂಭಿಸಬೇಕು. ಅಂಗನವಾಡಿ ಸಹಾಯಕಿ ಕಾರ್ಯಕರ್ತೆಯಾಗಿ ಮುಂಬಡ್ತಿ ಪಡೆಯಲು ಇರುವ ವಯಸ್ಸಿನ ಭೌಗೋಳಿಕ ವಿಸ್ತೀರ್ಣದ ಮಿತಿಯನ್ನು ಸಡಿಲಿಸಬೇಕು. ಅನುಕಂಪದ ಆಧಾರದಲ್ಲಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹೆಣ್ಣು ಮಕ್ಕಳಿಗೆ ಮಾತ್ರ ವಲ್ಲದೆ ಕುಟುಂಬದವರಿಗೆ ಎಂದು ತಿದ್ದುಪಡಿಯಾಗಬೇಕು. ಖಾಲಿಯಿರುವ ಸಹಾಯಕಿ ಮತ್ತು ಕಾರ್ಯಕರ್ತೆಯರ ಹುದ್ದೆಗಳನ್ನು ತುಂಬಬೇಕು. ಹಲವು ಯೋಜನೆಗಳಿಗೆ ಡಿಡಿ, ಪಿಓ, ಸಿಡಿಪಿಓ, ಎಸಿಡಿಪಿಓ ಮೇಲ್ವಿಚಾರಕಿಯರನ್ನು ಖಾಯಂ ಆಗಿ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

      ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್, ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಎನ್..ಕೆ.ಸುಬ್ರಮಣ್ಯ, ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಜಿ.ಕಮಲ, ಪ್ರಧಾನ ಕಾರ್ಯದರ್ಶಿ ಗುಲ್ಜಾರ್ ಬಾನು, ಅನಸೂಯ, ಪುಷ್ಪ, ಗುಬ್ಬಿ ಅನಸೂಯ, ಶಾಂತಕುಮಾರಿ, ಮಂಗಳ ಮೊದಲಾದವರು ಇದ್ದರು.

(Visited 20 times, 1 visits today)
Previous Articleಚಿಕ್ಕನಾಯಕನಹಳ್ಳಿ : ಬೇವಿನಮರದಿಂದ ಹಾಲಿನಧಾರೆ!!
Next Article ಸ್ವಚ್ಛತೆ ಇರುವ ಕಡೆ ನೆಮ್ಮದಿ ಇರುತ್ತದೆ-ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ
News Desk Benkiyabale

Related Posts

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

September 22, 2026 5:12 pm news

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm Trending

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm news
ತಾಜಾ ಸುದ್ಧಿಗಳು
news

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

September 22, 2026 5:12 pm
Trending

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm
news

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm
ಇತರೆ ಸುದ್ಧಿಗಳು

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm
Trending

ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ

September 22, 2026 4:57 pm
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm
Our Youtube Channel
Our Picks

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

September 22, 2026 5:12 pm

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm

ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ

September 22, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

By News Desk BenkiyabaleSeptember 22, 2026 5:12 pm

ತುಮಕೂರು ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಸ್ಥಳೀಯ ಸಂಸ್ಥೆಗಳ ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಪೌರಕಾರ್ಮಿಕರ ರೀತಿ…

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.