BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಗು ಮನಸ್ಸಿಗೆ ನೆಮ್ಮದಿ ನೀಡುವ ಔಷಧಿ
  • ನಗರದ ಹಲವು ವಾರ್ಡ್ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಪರಿಹಾರಕ್ಕೆ ಒತ್ತಾಯ
  • ಎಸ್.ಐ.ಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸ: ಆರೋಪ
  • ಪೋಕ್ಸೊ, ಬಾಲನ್ಯಾಯ ಕಾಯ್ದೆ ಕುರಿತ ಕಾನೂನು ಅರಿವು ಕಾರ್ಯಕ್ರಮ
  • ಹಿಂದೂ ಮಹಾಗಣಪತಿಯ ವೈಭವದ ಶೋಭಾಯಾತ್ರೆ
  • ಬಿಸಿರೊಟ್ಟಿ ಮತ್ತು ಇತರ ಕಥೆಗಳು ಕೃತಿಯ ಲೋಕಾರ್ಪಣೆ
  • ಸೋರುತ್ತಿರುವ ಪೊಲೀಸ್ ಠಾಣೆ: ಜೀವಭಯದಲ್ಲೇ ಸಿಬ್ಬಂದಿ
  • ಮಾವತ್ತೂರು ಸೊಸೈಟಿಯ ಕಾರ್ಯದರ್ಶಿ ಮೋಸದ ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶಾಲಾ ವಾಹನಗಳ ದೂರು ದಾಖಲಿಸಲು ಸಹಾಯವಾಣಿ ಸ್ಥಾಪಿಸಿ – ಡಿಸಿ
Trending

ಶಾಲಾ ವಾಹನಗಳ ದೂರು ದಾಖಲಿಸಲು ಸಹಾಯವಾಣಿ ಸ್ಥಾಪಿಸಿ – ಡಿಸಿ

By News Desk BenkiyabaleUpdated:December 18, 2019 6:51 pm

ತುಮಕೂರು :

      ಖಾಸಗಿ ಶಾಲಾ ವಾಹನಗಳಲ್ಲಿ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ಕೊಂಡೊಯ್ಯುವುದು, ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ತಿಳಿಸಲು ಅನುಕೂಲವಾಗುವಂತೆ ಡಿಡಿಪಿಐ ಕಚೇರಿಯಲ್ಲಿ ಸಹಾಯವಾಣಿಯನ್ನು ಸ್ಥಾಪಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿಂದು ಹಮ್ಮಿಕೊಂಡಿದ್ದ ಶಾಲಾ ವಾಹನಗಳಲ್ಲಿ ಮಕ್ಕಳ ಸುರಕ್ಷತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರಕು ವಾಹನಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆದೊಯ್ಯುವುದು ಕಡ್ಡಾಯವಾಗಿ ನಿಷೇಧಿಸಲಾಗಿದೆ ಆದರೂ ಗ್ರಾಮೀಣ ಭಾಗಗಳಲ್ಲಿ ಇದನ್ನು ಕಾಣುತ್ತಿದ್ದೇವೆ ಹಾಗೂ ಒಂದೇ ವಾಹನದಲ್ಲಿ ಹೆಚ್ಚು ಸಂಖ್ಯೆಯ ಮಕ್ಕಳನ್ನು ಕರೆದೊಯ್ಯವಂತಹ ಚಟುವಟಿಕೆಗಳು ಕಂಡು ಬಂದಲ್ಲಿ ಈ ದೂರುಗಳನ್ನು ದಾಖಲಿಸಿಕೊಳ್ಳಲು ಸಹಾಯವಾಣಿಯನ್ನು ಸ್ಥಾಪಿಸಬೇಕು ಎಂದರು.

      ಈ ದೂರುಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಶಾಲೆಯ ಹಾಗೂ ವಾಹನಗಳ ವಿರುದ್ದ ಅಗತ್ಯ ಕ್ರಮ ವಹಿಸಬೇಕು ಹಾಗೂ ಈ ಕುರಿತಂತೆ ಜಾಗೃತಿ ಮೂಡಿಸಲು ಆಟೋ ಚಾಲಕರ ಸಂಘ, ಸರಕು ವಾಹನಗಳ ಚಾಲಕರ ಸಂಘ ಹಾಗೂ ಖಾಸಗಿ ಶಾಲೆಯವರನ್ನು ಆಗಾಗ ಸಭೆ ಕರೆದು ತಿಳುವಳಿಕೆ ನೀಡಬೇಕು ಎಂದು ಬಿಇಒ ಗಳಿಗೆ ಸೂಚನೆ ನೀಡಿದರು.

      ಶಿಕ್ಷಣ ಸಂಸ್ಥೆಗಳೆಂದರೆ ಲಾಭದಾಯಕವಾಗಿ ನಡೆಸುವುದಲ್ಲ. ಜಿಲ್ಲೆಯಲ್ಲಿರುವ 251 ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚು ದಾಖಲಾತಿ ಇರುವ ಶಾಲೆಗಳಲ್ಲಿ ಶುಲ್ಕ ಹಾಗೂ ವಿವಿಧ ಮೂಲಭೂತ ಸೌಕರ್ಯಗಳಾದ ನೀರು, ಶೌಚಾಲಯ, ಆರೋಗ್ಯ ತಪಾಸಣೆ, ವಿಪತ್ತು ನಿರ್ವಹಣೆ, ಸಿಸಿ ಕ್ಯಾಮೆರಾ ಅಳವಡಿಕೆ ಕುರಿತಂತೆ ವಿವರವಾದ ಆಡಿಟ್ ಮಾಡಿಸಿ ವರದಿಯನ್ನು ನೀಡಬೇಕೆಂದು ಅವರು ತಿಳಿಸಿದರು. ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ಸಾಮೂಹಿಕವಾಗಿ ನೀಡುವ ತಿಂಡಿತಿನಿಸು ಅಥವಾ ಊಟವನ್ನು ಪ್ರಾಂಶುಪಾಲರು ಅಥವಾ ಶಿಕ್ಷಕರು ಮೊದಲು ಸೇವಿಸಿ ಪರಿಶೀಲಿಸಿ ಸಮಸ್ಯೆ ಇಲ್ಲವೆಂದು ದೃಢೀಕರಿಸಿದ ನಂತರ ಮಕ್ಕಳಿಗೆ ನೀಡಬೇಕು. ಹಾಗೆಯೇ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ನೀಡುವ ಊಟವನ್ನು ರುಚಿ ಮತ್ತು ಶುಚಿ ಪರಿಶೀಲಿಸಿ ನೀಡಬೇಕೆಂಬ ಸುತ್ತೊಲೆಯ ಕುರಿತು ಆಗಾಗ ಮುಖ್ಯ ಶಿಕ್ಷಕರ ಗಮನಕ್ಕೆ ತರಬೇಕು ಎಂದು ಅವರು ತಿಳಿಸಿದರು.

      ಸರ್ಕಾರಿ ಶಾಲೆಗಳಲ್ಲಿ ಶುದ್ದ ಕುಡಿಯುವ ನೀರು, ಶೌಚಾಲಯ, ಸುತ್ತಮುತ್ತಲ ಪರಿಸರ ಸ್ವಚ್ಛವಾಗಿಲ್ಲದ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಥವಾ ಗ್ರಾಮಪಂಚಾಯ್ತಿಗಳಿಗೆ ಕೂಡಲೆ ತಿಳಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಶಾಲೆಗಳಲ್ಲಿ ಮಕ್ಕಳಿಗೆ ಸ್ಪೂರ್ತಿ ತುಂಬಲು ವಿವಿಧ ಇಲಾಖೆಗಳಲ್ಲಿ ವೃತ್ತಿಯಲ್ಲಿರುವ ವಿವಿಧ ಅಧಿಕಾರಿಗಳನ್ನು ವಾರಕ್ಕೊಮ್ಮೆ ಶಾಲೆಗೆ ಕರೆಸಿ ಅವರ ವೃತ್ತಿಯ ಕುರಿತಂತೆ ತಿಳಿಸುವಂತಹ ವ್ಯವಸ್ಥೆ ಮಾಡಿದಲ್ಲಿ ಮಕ್ಕಳಿಗೆ ವಿವಿಧ ವೃತ್ತಿಯ ಬಗ್ಗೆ ಪರಿಚಯವಾಗುವುದು ಎಂದು ಸಲಹೆ ನೀಡಿದರು.

      ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರಂಗಧಾಮಪ್ಪ, ಅಶ್ವಥನಾರಾಯಣ, ಪ್ರಭುಸ್ವಾಮಿ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಬಿಇಒಗಳು, ಪ್ರಾದೇಶಿಕ ಸಾರಿಗೆ ಕಚೇರಿಯ ಅಧೀಕ್ಷಕ ದೇವರಾಜು, ನೋಡಲ್ ಅಧಿಕಾರಿಗಳು ಸೇರಿದಂತೆ ಶಿಕ್ಷಣ ಇಲಾಖೆಯ ಪದಾಧಿಕಾರಿಗಳು ಹಾಜರಿದ್ದರು.

(Visited 15 times, 1 visits today)
Previous Articleಬೆಳ್ಳಾವಿ ಹೋಬಳಿ 6 ಕೆರೆಗಳಿಗೆ ನೀರು ಹರಿಸಲು ಶಾಸಕರ ಒತ್ತಾಯ
Next Article ಸರ್ಕಾರಿ ಫಡ ಜಾಗದ ಮಂಜೂರಾತಿಗಾಗಿ 2 ಗುಂಪುಗಳ ನಡುವೆ ವಾಗ್ವಾದ!!
News Desk Benkiyabale

Related Posts

ನಗು ಮನಸ್ಸಿಗೆ ನೆಮ್ಮದಿ ನೀಡುವ ಔಷಧಿ

September 26, 2026 5:58 pm news

ನಗರದ ಹಲವು ವಾರ್ಡ್ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಪರಿಹಾರಕ್ಕೆ ಒತ್ತಾಯ

September 26, 2026 5:56 pm news

ಎಸ್.ಐ.ಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸ: ಆರೋಪ

September 26, 2026 5:53 pm news
ತಾಜಾ ಸುದ್ಧಿಗಳು
news

ನಗು ಮನಸ್ಸಿಗೆ ನೆಮ್ಮದಿ ನೀಡುವ ಔಷಧಿ

September 26, 2026 5:58 pm
news

ನಗರದ ಹಲವು ವಾರ್ಡ್ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಪರಿಹಾರಕ್ಕೆ ಒತ್ತಾಯ

September 26, 2026 5:56 pm
news

ಎಸ್.ಐ.ಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸ: ಆರೋಪ

September 26, 2026 5:53 pm
news

ಪೋಕ್ಸೊ, ಬಾಲನ್ಯಾಯ ಕಾಯ್ದೆ ಕುರಿತ ಕಾನೂನು ಅರಿವು ಕಾರ್ಯಕ್ರಮ

September 26, 2026 5:51 pm
news

ಹಿಂದೂ ಮಹಾಗಣಪತಿಯ ವೈಭವದ ಶೋಭಾಯಾತ್ರೆ

September 26, 2026 5:39 pm

ಬಿಸಿರೊಟ್ಟಿ ಮತ್ತು ಇತರ ಕಥೆಗಳು ಕೃತಿಯ ಲೋಕಾರ್ಪಣೆ

September 25, 2026 6:07 pm
Our Youtube Channel
Our Picks

ನಗು ಮನಸ್ಸಿಗೆ ನೆಮ್ಮದಿ ನೀಡುವ ಔಷಧಿ

September 26, 2026 5:58 pm

ನಗರದ ಹಲವು ವಾರ್ಡ್ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಪರಿಹಾರಕ್ಕೆ ಒತ್ತಾಯ

September 26, 2026 5:56 pm

ಎಸ್.ಐ.ಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸ: ಆರೋಪ

September 26, 2026 5:53 pm

ಪೋಕ್ಸೊ, ಬಾಲನ್ಯಾಯ ಕಾಯ್ದೆ ಕುರಿತ ಕಾನೂನು ಅರಿವು ಕಾರ್ಯಕ್ರಮ

September 26, 2026 5:51 pm

ಹಿಂದೂ ಮಹಾಗಣಪತಿಯ ವೈಭವದ ಶೋಭಾಯಾತ್ರೆ

September 26, 2026 5:39 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನಗು ಮನಸ್ಸಿಗೆ ನೆಮ್ಮದಿ ನೀಡುವ ಔಷಧಿ

By News Desk BenkiyabaleSeptember 26, 2026 5:58 pm

ತುಮಕೂರು: ನಮ್ಮ ಜೀವನದಲ್ಲಿ ಶಿಕ್ಷಣ, ಉದ್ಯೋಗ, ಸ್ಪರ್ಧೆ, ಭವಿಷ್ಯದ ಚಿಂತೆ, ಸಾಮಾಜಿಕ ಜವಾಬ್ದಾರಿ ಹೀಗೆ ಅನೇಕ ಒತ್ತಡಗಳಿವೆ. ಇಂತಹ ಸಂದರ್ಭದಲ್ಲಿ…

ನಗರದ ಹಲವು ವಾರ್ಡ್ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಪರಿಹಾರಕ್ಕೆ ಒತ್ತಾಯ

September 26, 2026 5:56 pm

ಎಸ್.ಐ.ಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸ: ಆರೋಪ

September 26, 2026 5:53 pm

ಪೋಕ್ಸೊ, ಬಾಲನ್ಯಾಯ ಕಾಯ್ದೆ ಕುರಿತ ಕಾನೂನು ಅರಿವು ಕಾರ್ಯಕ್ರಮ

September 26, 2026 5:51 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.