BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೆರೆ ಅಂಗಳದ ಗೂಡಂಗಡಿಗಳ ತೆರವು ಕಾರ್ಯಾಚರಣೆ
  • ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು
  • ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ
  • ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ
  • ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು
  • ಸ್ವಾತಂತ್ರೊeತ್ಸವದ ಸಂಭ್ರಮಕ್ಕೆ ರೋಟರಿ ಸೇವಾ ಸ್ಪರ್ಶ
  • ಬೆಂಕಿಗೆ ಸುಟ್ಟು ಬೂದಿಯಾದ ರೇಷ್ಮೆ ಬೆಳೆಗಾರನ ಬದುಕು
  • ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತಿಪಟೂರಿನ ಅನ್ನಪೂರ್ಣೇಶ್ವರಿ ಸ್ತ್ರೀಶಕ್ತಿ ಸಂಘ ಜಿಲ್ಲೆಯಿಂದ ಆಯ್ಕೆ!
Trending

ತಿಪಟೂರಿನ ಅನ್ನಪೂರ್ಣೇಶ್ವರಿ ಸ್ತ್ರೀಶಕ್ತಿ ಸಂಘ ಜಿಲ್ಲೆಯಿಂದ ಆಯ್ಕೆ!

By News Desk BenkiyabaleUpdated:January 24, 2020 7:02 pm

ತುಮಕೂರು:

      ಜಿಲ್ಲೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ತಿಪಟೂರಿನ ಅನ್ನಪೂರ್ಣೇಶ್ವರಿ ಸ್ತ್ರೀಶಕ್ತಿ ಸಂಘವನ್ನು ರಾಜ್ಯ ಪ್ರಶಸ್ತಿಗಾಗಿ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಿ ರಾಜ್ಯಕ್ಕೆ ಶಿಫಾರಸ್ಸು ಮಾಡಿ ಕಳುಹಿಸಿಕೊಡಲು ನಿರ್ಧರಿಸಲಾಯಿತು.

      ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭಾ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

      ತುಮಕೂರು ಜಿಲ್ಲೆಯಲ್ಲಿ ಒಟ್ಟು 11036 ಸ್ತ್ರೀಶಕ್ತಿ ಗುಂಪುಗಳಿದ್ದು, 177032 ಮಹಿಳೆಯರು ಸದಸ್ಯರಿದ್ದಾರೆ. 2019-20ನೇ ಸಾಲಿನಲ್ಲಿ ರೂ. 10ಲಕ್ಷ ಸುತ್ತುನಿಧಿ ಮತ್ತು ತರಬೇತಿಗಾಗಿ ರೂ. 218400 ಬಿಡುಗಡೆ ಮಾಡಲಾಗಿದೆ, ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕಾಗಿ ರೂ. 75000 ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಇದುವರೆಗೂ ರೂ. 50000 ವೆಚ್ಚವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಸ್. ನಟರಾಜ್ ಸಭೆಗೆ ಮಾಹಿತಿ ನೀಡಿದರು.

      ಜಿಲ್ಲೆಯಲ್ಲಿ 10 ಸಾಂತ್ವಾನ ಕೇಂದ್ರಗಳು ಮಹಿಳೆಯರ ಮತ್ತು ಮಕ್ಕಳ ಯೋಗಕ್ಷೇಮ, ವರದಕ್ಷಿಣೆ ಮತ್ತು ಕೌಟುಂಬಿಕ ಕಲಹಗಳ ನಿವಾರಣೆಗಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸಕ್ತ ವರ್ಷದಲ್ಲಿ ಜಿಲ್ಲೆಯಲ್ಲಿ ಒಟ್ಟು 1315 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 937 ಪ್ರಕರಣಗಳನ್ನು ಇದುವರೆಗೂ ಆಪ್ತ ಸಮಾಲೋಚನೆಯ ಮೂಲಕ ಇತ್ಯರ್ಥಪಡಿಸಲಾಗಿದೆ. 378 ಪ್ರಕರಣಗಳು ಬಾಕಿ ಉಳಿದಿವೆ ಎಂದು ಅವರು ಸಭೆಗೆ ಮಾಹಿತಿ ನೀಡಿದರು.

      ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಯೋಜನೆ ಅಡಿಯಲ್ಲಿ ಬಾಲ್ಯವಿವಾಹ ನಿಷೇಧಕ್ಕಾಗಿ ಮಹಿಳೆಯರ ಮತ್ತು ಮಕ್ಕಳ ಕಾವಲು ಸಮಿತಿ ರಚಿಸಲಾಗಿದೆ. ಈ ಕುರಿತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಸಮಿತಿಗಳು ಕಾರ್ಯನಿರ್ವಹಿಸಲು ಕ್ರಮ ಜರುಗಿಸಲಾಗಿದೆ ಎಂದು ಅವರು ಹೇಳಿದರು.

      ಸಭೆಯ ಅಧ್ಯಕ್ಷತೆ ವಹಿಸಿದ್ದ ಸಿಇಓ ಶುಭ ಕಲ್ಯಾಣ್ ಅವರು ಮಾತನಾಡಿ, ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ಮನೋಸ್ಥೈರ್ಯ ಹೆಚ್ಚಿಸುವಂತಹ ಕೆಲಸವನ್ನು ಸಾಂತ್ವಾನ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆಪ್ತಸಮಾಲೋಚಕರು ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲೆಗಳಿಗೆ ಮತ್ತು ಮನೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಮತ್ತು ಅವರ ಪೋಷಕರಿಗೆ ಮಾರ್ಗದರ್ಶನ ಮಾಡಬೇಕು, ಎಸ್‍ಎಸ್‍ಎಲ್‍ಸಿ ಫಲಿತಾಂಶ ಉತ್ತಮ ಸಾಧನೆಗೆ ಪ್ರೇರಣೆ ನೀಡಬೇಕೆಂದು ಅವರು ಸಲಹೆ ನೀಡಿದರು.

      ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಎಂ. ಆರ್. ಕಾಮಾಕ್ಷಮ್ಮ, ಆರ್‍ಸಿಎಚ್ ಅಧಿಕಾರಿ ಕೇಶವರಾಜ್ ಮತ್ತು ಜಿಲ್ಲಾಮಟ್ಟದ, ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಾಂತ್ವಾನ ಕೇಂದ್ರಗಳ ಆಪ್ತ ಸಮಾಲೋಚಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

(Visited 16 times, 1 visits today)
Previous Articleನಾವು ಕಾಲೇಜು ಮುಚ್ಚುಸುವುದಿಲ್ಲ, ಉಳಿಸುತ್ತೇವೆ-ಸಚಿವ ಜೆ.ಸಿ.ಮಾಧುಸ್ವಾಮಿ
Next Article ಅತಿಕ್ರಮಣ ಹಾಗೂ ಅಕ್ರಮ ಖಾತೆಯ ಪ್ರಕರಣ ಬೆಳಕಿಗೆ
News Desk Benkiyabale

Related Posts

ಕೆರೆ ಅಂಗಳದ ಗೂಡಂಗಡಿಗಳ ತೆರವು ಕಾರ್ಯಾಚರಣೆ

August 18, 2026 3:33 pm news

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

August 17, 2026 5:14 pm news

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm news
ತಾಜಾ ಸುದ್ಧಿಗಳು
news

ಕೆರೆ ಅಂಗಳದ ಗೂಡಂಗಡಿಗಳ ತೆರವು ಕಾರ್ಯಾಚರಣೆ

August 18, 2026 3:33 pm
news

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

August 17, 2026 5:14 pm
news

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm
news

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm
news

ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು

August 17, 2026 5:09 pm
news

ಸ್ವಾತಂತ್ರೊeತ್ಸವದ ಸಂಭ್ರಮಕ್ಕೆ ರೋಟರಿ ಸೇವಾ ಸ್ಪರ್ಶ

August 17, 2026 5:07 pm
Our Youtube Channel
Our Picks

ಕೆರೆ ಅಂಗಳದ ಗೂಡಂಗಡಿಗಳ ತೆರವು ಕಾರ್ಯಾಚರಣೆ

August 18, 2026 3:33 pm

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

August 17, 2026 5:14 pm

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm

ಮುಸ್ಲಿಂ ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು

August 17, 2026 5:09 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕೆರೆ ಅಂಗಳದ ಗೂಡಂಗಡಿಗಳ ತೆರವು ಕಾರ್ಯಾಚರಣೆ

By News Desk BenkiyabaleAugust 18, 2026 3:33 pm

ಹುಳಿಯಾರು: ಪಟ್ಟಣದ ಬಸ್ ನಿಲ್ದಾಣದ ಸಮೀಪದ ಕೆರೆ ಅಂಗಳದಲ್ಲಿ ಒತ್ತುವರಿ ಮಾಡಿಕೊಂಡು ಇಡಲಾಗಿದ್ದ ಸುಮಾರು ೫೦ ಕ್ಕೂ ಹೆಚ್ಚು ಗೂಡಂಗಡಿಗಳನ್ನು…

ಎನ್‌ಡಿಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು

August 17, 2026 5:14 pm

ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ  ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ

August 17, 2026 5:12 pm

ಚನ್ನಬಸವ ರಾಜೇಂದ್ರ ಸ್ವಾಮಿಗಳ ಮಾಸಿಕ ಪುಣ್ಯಸ್ಮರಣೆ

August 17, 2026 5:10 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.