BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
  • ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ
  • ವಾಗ್ವಾದವಿಲ್ಲದೆ ೬೦ ವಿಷಯಗಳಿಗೆ ಕ್ಷಿಪ್ರ ಒಪ್ಪಿಗೆ
  • ಕೋರಗೆರೆ ಬಳಿ ಭೀಕರ ಅಪಘಾತ: ಸೇತುವೆಗೆ ಕಾರು ಡಿಕ್ಕಿ, ವ್ಯಕ್ತಿ ಸಜೀವ ದಹನ
  • ಕಲೆಯಲ್ಲಿ ಸಂಗೀತಕ್ಕೆ ವಿಶೇಷ ಸ್ಥಾನ: ಶಾಸಕ
  • ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ
  • ದೇಶದ ಜಿಡಿಪಿಯ ಬೆಳವಣಿಗೆಯಲ್ಲಿ ಸಾಫ್ಟ್ ವೇರ್ ಕ್ಷೇತ್ರದ ಕೊಡುಗೆ ಅಪಾರ: ಡಾ. ಜಿ. ಪರಮೇಶ್ವರ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪೊಕ್ಸೊ ಕಾಯ್ದೆಯಡಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು – ಡಿಸಿ ಡಾ||ಕೆ.ರಾಕೇಶ್‍ಕುಮಾರ್
Trending

ಪೊಕ್ಸೊ ಕಾಯ್ದೆಯಡಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು – ಡಿಸಿ ಡಾ||ಕೆ.ರಾಕೇಶ್‍ಕುಮಾರ್

By News Desk BenkiyabaleUpdated:February 07, 2020 7:28 pm

ತುಮಕೂರು :

         ತುಮಕೂರು ಜಿಲ್ಲೆಯಲ್ಲಿ 2019-20ನೇ ಸಾಲಿನಲ್ಲಿ ಪೊಕ್ಸೊ ಕಾಯ್ದೆಯಡಿ 105 ಪ್ರಕರಣಗಳು ದಾಖಲಾಗಿದ್ದು, ಅವುಗಳ ಪೈಕಿ 11 ಖುಲಾಸೆಯಾಗಿದ್ದು, 2 ಶಿಕ್ಷೆಯಾಗಿದೆ ಉಳಿದ 92 ಪ್ರಕರಣಗಳು ಬಾಕಿಯಿವೆ. ಒಮ್ಮೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾದರೆ ಯಾರೇ ತಪ್ಪಿತಸ್ಥರಿದ್ದರೂ ಅವರಿಗೆ ಕಾನೂನಿನಡಿಯಲ್ಲಿ ಶಿಕ್ಷೆ ಆಗಬೇಕು ಆಗ ಮಾತ್ರ ಇಂತಹ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ಜಿಲ್ಲಾಧಿಕಾರಿ ಡಾ||ಕೆ.ರಾಕೇಶ್‍ಕುಮಾರ್ ತಿಳಿಸಿದರು.

       ಅವರು ಇಂದು ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆ ಹಾಗೂ ಜಿಲ್ಲಾಮಟ್ಟದ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಪೊಕ್ಸೊ ಕಾಯ್ದೆಯಡಿ ಪ್ರಕರಣಗಳ ಸರಿಯಾದ ತನಿಖೆಯಾಗಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಮತ್ತು ತೊಂದರೆಗೊಳಗಾದವರಿಗೆ ನ್ಯಾಯ ದೊರಕಿಸಬೇಕೆಂದು ಅವರು ಹೇಳಿದರು.

      ಬಾಲಕಿಯರ ಬಾಲಮಂದಿರಗಳಲ್ಲಿ ಗೃಹಪಾಲಕರ ಪುರುಷ ಸಿಬ್ಬಂದಿಯ ಬದಲು ಮಹಿಳಾ ಸಿಬ್ಬಂದಿಯರವನ್ನು ನೇಮಿಸಬೇಕು ಹಾಗೂ ರಾತ್ರಿ ಕಾವಲುಗಾರರಾಗಿ ಗೃಹರಕ್ಷದಳದ ಸೇವೆಯನ್ನು ಪಡೆಯಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

      ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಮತ್ತು ಶಿಸ್ತು ಹೊರತುಪಡಿಸಿ, ಹೊಡೆಯುವುದು ಹೀನಾಯವಾಗಿ ಕಾಣುವುದು ಮತ್ತು ಆತ್ಮಹತ್ಯೆ ಮಾಡಿಕೊಳ್ಳುವಂತಹ ಒತ್ತಡ ಹೇರದಂತೆ ಸಂಬಂಧಿಸಿದ ವಸತಿ ಶಾಲೆಗಳ ಮುಖ್ಯಸ್ಥರೊಂದಿಗೆ ಸಮಾಲೋಚನೆ ನಡೆಸಿ ಸರಿಯಾದ ಕ್ರಮ ಜರುಗಿಸಬೇಕು. ಇದಕ್ಕಾಗಿ ರಕ್ಷಣಾ ಇಲಾಖೆಯ ಸಹಕಾರ ಪಡೆಯಬೇಕೆಂದು ಅವರು ತಿಳಿಸಿದರು.

      ಗ್ರಾಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಕ್ಕಳ ರಕ್ಷಣಾ ಕೇಂದ್ರಗಳಿಗೆ ಮತ್ತು 567 ಶಾಲೆಗಳಿಗೆ ಕಾಪೌಂಡ್, ವಾಟರ್ ಫಿಲ್ಟರ್ ವ್ಯವಸ್ಥೆ ಮಾಡಿಕೊಡುವಂತೆ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ತಿಳಿಸಿದರು. ಶಾಲೆ ಬಿಟ್ಟ ಮಕ್ಕಳನ್ನು ಮರು ಶಾಲೆಗೆ ಕರೆದು ತರುವುದು ಮತ್ತು ಶಾಲೆಗೆ ದಾಖಲಾಗದೇ ಇರುವ ಅಲೆಮಾರಿ ಜನಗಳ ಮಕ್ಕಳನ್ನು ಸಹ ಶಾಲೆಗೆ ಸೇರಿಸುವಲ್ಲಿ ಅಧಿಕಾರಿಗಳು ನಿಗಾವಹಿಸಿ ಕಾರ್ಯಪ್ರವೃತ್ತರಾಗಬೇಕೆಂದು ಸೂಚಿಸಿದರು.

      ಬಾಲ್ಯವಿವಾಹ ನಿಷೇಧ, ಮಕ್ಕಳ ಮಾರಾಟ ಸಾಗಾಣಿಕೆ, ಮಕ್ಕಳ ಹಕ್ಕು ಮತ್ತು ಮಹಿಳೆಯರ ರಕ್ಷಣೆ ಕುರಿತು ಇಲಾಖೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ಅವರು ತಾಕೀತು ಮಾಡಿದರು. ಪರಿತ್ಯಕ್ತ ಮಕ್ಕಳನ್ನು ಮೊದಲು ಇಲಾಖೆ ವ್ಯಾಪ್ತಿಯಲ್ಲಿ ಸರಿಯಾದ ಚಿಕಿತ್ಸೆ ಮತ್ತು ಆರೈಕೆ ಮಾಡಿ ದತ್ತು ಕೊಡುವ ವ್ಯವಸ್ಥೆ ಮುಂದುವರೆಸಬೇಕೆಂದು ಅವರು ಸಲಹೆ ಮಾಡಿದರು. 

      ಬಾಲ ನ್ಯಾಯ ಮಂಡಳಿಯಲ್ಲಿ 66 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 8 ಪ್ರಕರಣಗಳು ಇತ್ಯರ್ಥಗೊಂಡಿದ್ದು, 58 ಪ್ರಕರಣಗಳು ಬಾಕಿಯಿವೆ. ಪರಿತ್ಯಕ್ತ ಮಕ್ಕಳ ಸ್ವೀಕಾರದ ಬಗ್ಗೆ ಜಿಲ್ಲೆಯಲ್ಲಿ 344 ಶಿಬಿರಗಳನ್ನು ನಡೆಸಿ ಜಾಗೃತಿ ಮೂಡಿಸಲಾಗಿದೆ ಎಂದು ಮಹಿಳಾ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ಸಭೆಗೆ ಮಾಹಿತಿ ನೀಡಿದರು.

      ಸಭೆಯಲ್ಲಿ ವಿಶೇಷ ಪಾಲನಾ ಯೋಜನೆ, ಪ್ರಾಯೋಗಿಕ ಕಾರ್ಯಕ್ರಮಗಳ ಪ್ರಗತಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು, ತಾಲೂಕುಮಟ್ಟದ ಮಕ್ಕಳಾ ರಕ್ಷಣಾ ಸಮಿತಿ ಹಾಗೂ ಪಾಲನಾ ಸಂಸ್ಥೆಗಳಿಗೆ ಜಿಲ್ಲಾ ಸಮಿತಿ ಭೇಟಿ ನೀಡಿ ವಿವರ ನೀಡಿದ ಬಗ್ಗೆ ಚರ್ಚಿಸಲಾಯಿತು.

      ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ನಟರಾಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 25 times, 1 visits today)
Previous Articleತುಮಕೂರು : ಸಿದ್ದಗಂಗಾ ಮಠಕ್ಕೆ ನೂತನ ಸಚಿವರ ಭೇಟಿ!!
Next Article ತುಮಕೂರು : ಶಿರಾಗೇಟ್ ಐಡಿಎಸ್‍ಎಂಟಿ ಲೇಔಟ್: ಕ್ರಮಕ್ಕೆ ತೀರ್ಮಾನ
News Desk Benkiyabale

Related Posts

ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ

April 02, 2026 4:11 pm ತುಮಕೂರು ಜಿಲ್ಲಾ ಸುದ್ಧಿಗಳು

ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ

April 02, 2026 3:59 pm ತುಮಕೂರು ಜಿಲ್ಲಾ ಸುದ್ಧಿಗಳು

ವಾಗ್ವಾದವಿಲ್ಲದೆ ೬೦ ವಿಷಯಗಳಿಗೆ ಕ್ಷಿಪ್ರ ಒಪ್ಪಿಗೆ

April 02, 2026 3:55 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು
ತುಮಕೂರು ಜಿಲ್ಲಾ ಸುದ್ಧಿಗಳು

ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ

April 02, 2026 4:11 pm
ತುಮಕೂರು ಜಿಲ್ಲಾ ಸುದ್ಧಿಗಳು

ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ

April 02, 2026 3:59 pm
ಇತರೆ ಸುದ್ಧಿಗಳು

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm
ತುಮಕೂರು ಜಿಲ್ಲಾ ಸುದ್ಧಿಗಳು

ವಾಗ್ವಾದವಿಲ್ಲದೆ ೬೦ ವಿಷಯಗಳಿಗೆ ಕ್ಷಿಪ್ರ ಒಪ್ಪಿಗೆ

April 02, 2026 3:55 pm
ತುಮಕೂರು ಜಿಲ್ಲಾ ಸುದ್ಧಿಗಳು

ಕೋರಗೆರೆ ಬಳಿ ಭೀಕರ ಅಪಘಾತ: ಸೇತುವೆಗೆ ಕಾರು ಡಿಕ್ಕಿ, ವ್ಯಕ್ತಿ ಸಜೀವ ದಹನ

April 02, 2026 3:52 pm
ತುಮಕೂರು ಜಿಲ್ಲಾ ಸುದ್ಧಿಗಳು

ಕಲೆಯಲ್ಲಿ ಸಂಗೀತಕ್ಕೆ ವಿಶೇಷ ಸ್ಥಾನ: ಶಾಸಕ

April 02, 2026 3:49 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು ಜಿಲ್ಲಾ ಸುದ್ಧಿಗಳು

ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ

By News Desk BenkiyabaleApril 02, 2026 4:11 pm

ತುಮಕೂರು: ಗುಣಮಟ್ಟದ ಹಾಲು ಶೇಖರಣೆ ಮಾಡುತ್ತಿರುವ ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನಗಳಿಸಿದೆ ಎಂದು ತುಮಕೂರು ಜಿಲ್ಲಾ ಹಾಲು ಒಕ್ಕೂಟದ…

ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ

April 02, 2026 3:59 pm

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ವಾಗ್ವಾದವಿಲ್ಲದೆ ೬೦ ವಿಷಯಗಳಿಗೆ ಕ್ಷಿಪ್ರ ಒಪ್ಪಿಗೆ

April 02, 2026 3:55 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.