BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಡಿಕೆ ತೋಟದಲ್ಲಿ ಪತ್ತೆಯಾಯಿತು ಶಾಸನ
  • ಎಸ್‌ಐಆರ್: ಮನೆ ಮನೆಗೆ ತೆರಳಿ ಗಣತಿ ನಮೂನೆ ವಿತರಿಸುತ್ತಿರುವ ಬಿಎಲ್‌ಒಗಳು
  • ಆಧುನಿಕ ಕೃಷಿ ಪದ್ದತಿಗಳ ಬಳಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
  • ತಾತ್ಕಾಲಿಕವಾಗಿ ಪಿಂಚಣಿ ಸ್ಥಗಿತ: ದಾಖಲೆ ಲೋಪ ಕಾರಣ
  • ಬಹುದಿನಗಳಿಂದ ನೆನಗುದಿಗೆ ಬಿದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ
  • ಅಕ್ಟೋಬರ್ ವೇಳೆಗೆ ತುಮಕೂರಿಗೆ ಎತ್ತಿನ ಹೊಳೆ ನೀರು
  • ಸ್ಲಂ ಮಕ್ಕಳು ಭವಿಷ್ಯ ದೃಷ್ಠಿಯಿಂದ ವಿದ್ಯಾವಂತರಾಗಿ ಜಿ.ಬಿ.ಜ್ಯೋತಿ ಗಣೇಶ್ ಕರೆ
  •  ಜು.೨೯ರವರೆಗೆ ಮನೆ-ಮನೆ ಭೇಟಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನೆಹರು ಯೋಜನೆಗಳನ್ನು ಮೋದಿ ಬದಲಾಯಿಸಿ ದೇಶವನ್ನು ಅದೋಗತಿಗೆ ತಳ್ಳಿದ್ದಾರೆ : ಡಾ.ಜಿ.ಪರಮೇಶ್ವರ್
ತುಮಕೂರು ಜಿಲ್ಲಾ ಸುದ್ಧಿಗಳು

ನೆಹರು ಯೋಜನೆಗಳನ್ನು ಮೋದಿ ಬದಲಾಯಿಸಿ ದೇಶವನ್ನು ಅದೋಗತಿಗೆ ತಳ್ಳಿದ್ದಾರೆ : ಡಾ.ಜಿ.ಪರಮೇಶ್ವರ್

By News Desk BenkiyabaleUpdated:November 14, 2018 4:24 pm

 ತುಮಕೂರು:

      ದೇಶದ ಮೊದಲ ಪ್ರಧಾನಿ ಪಂಡಿತ್ ಜವಹರ ಲಾಲ್ ನೆಹರು ದೇಶದ ಅಭಿವೃದ್ದಿ ದೃಷ್ಟಿಯಿಂದ ಜಾರಿಗೆ ತಂದ ಪಂಚವಾರ್ಷಿಕ ಯೋಜನೆಗಳು, ಯೋಜನಾ ಆಯೋಗವನ್ನ ಇಂದಿನ ಪ್ರಧಾನಿ ನರೇಂದ್ರ ಮೋದಿ ಬದಲಾಯಿಸುವ ಮೂಲಕ ದೇಶವನ್ನು ಅದೋಗತಿಯತ್ತ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ.

      ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಪಂಡಿತ ಜವಹರಲಾಲ್ ನೆಹರು ಅವರ 129ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತಿದ್ದ ಅವರು,ದೇಶದ ಸರ್ವತೋಮುಖ ಅಭಿವೃದ್ದಿಗಾಗಿ ಮುಂದಿನ ಐದು ವರ್ಷಗಳ ಕಾಲ ಯಾವ ವಿಷಯಗಳಿಗೆ ಅದ್ಯತೆ ನೀಡಬೇಕೆಂದು ನಿರ್ಧರಿಸುವ ಪಂಚವಾರ್ಷಿಕ ಯೋಜನೆಗಳು ಹಾಗೂ ಅದನ್ನು ನಿರ್ಧರಿಸುವ ಯೋಜನಾ ಆಯೋಗವನ್ನು ನೀತಿ ಆಯೋಗವನ್ನು ಬದಲಿಸಿದ ಪರಿಣಾಮ, ದೇಶದ ಆರ್ಥಿಕ ಬೆಳವಣಿಗೆ ಕುಂಠಿತಗೊಂಡು,ಅದೋಗತ್ತಿಯತ್ತ ಸಾಗುತ್ತಿದೆ ಎಂದರು.

      ಸ್ವಾತಂತ್ರ ಪಡೆಯುವ ಉದ್ದೇಶದಿಂದ ರಚನೆಯಾದ ಕಾಂಗ್ರೆಸ್,ಸ್ವಾತಂತ್ರ ನಂತರದಲ್ಲಿ ರಾಜಕೀಯ ಪಕ್ಷವಾಗಿ ಪರಿವರ್ತನೆ ಯಾಗಿದ್ದು ಇತಿಹಾಸ. ಕಳೆದ 70  ವರ್ಷಗಳಲ್ಲಿ ಕಾಂಗ್ರೆಸ್ ರಾಷ್ಟ್ರಕ್ಕೆ ಏನು ಕೊಡುಗೆ ನೀಡಿದೆ ಎಂದು ಕೇಳುವ ಪ್ರಧಾನಿ ಆದಿಯಾಗಿ ಬಿಜೆಪಿ ಪಕ್ಷದ ಮುಖಂಡರು ಭಾರತದ ರಾಜಕೀಯ ಇತಿಹಾಸವನ್ನೋಮ್ಮೆ ಓದಿಕೊಳ್ಳಬೇಕಿದೆ. ನೆಹರು ಅವರ ಆಡಳಿತದಲ್ಲಿ ಹಾಕಿದ ಭದ್ರ ಬುನಾದಿಯ ಪರಿಣಾಮ ಇಂದು ದೇಶ ಪ್ರಪಂಚದ ಇತರೆ ರಾಷ್ಟ್ರಗಳಿಗೆ ಶಕ್ತಿಯನ್ನು ಬೆಳೆಸಿ ಕೊಂಡಿದೆ.ಅರ್ಥಿಕವಾಗಿ ಪ್ರಬಲ ರಾಷ್ಟ್ರವಾಗಿದೆ. ದೊಡ್ಡ ದೊಡ್ಡ ಕೈಗಾರಿಕೆ ಸ್ಥಾಪನೆಯಾಗಿ ಲಕ್ಷಾಂತರ ಜನ ಉದ್ಯೋಗ ಪಡೆದಿದ್ದಾರೆ. ಸಾರ್ವಜನಿಕ ವಲಯದ ಉದ್ದಿಮೆಗಳು ಕಾಂಗ್ರೆಸ್ ಕಾಲದಲ್ಲಿ ಲಾಭದಾಯಕವಾಗಿ ನಡೆಯುತ್ತಿದ್ದವು. ದುರಾದೃಷ್ಟ ಬಿಜೆಪಿ ಕಾಲದಲ್ಲಿ ನಷ್ಟದತ್ತ ದಾಪುಗಾಲು ಇಡುತ್ತಿವೆ. ಇದಕ್ಕೆ ಪ್ರಮುಖ ಕಾರಣ ಮೋದಿ ಅವರ, ಖಾಸಗಿ ಸ್ನೇಹಿ ಪರ ನೀತಿಗಳು ಎಂದು ಕುಟುಕಿದರು.

      ಮೋದಿ ಆಡಳಿತದಲ್ಲಿ ಸಂವಿಧಾನಾತ್ಮಕ ಸಂಸ್ಥೆಗಳಾದ ಸಿಬಿಐ, ಇಡಿ, ಐ.ಬಿ.ಗಳನ್ನು ದುರುಯೋಗ ಪಡಿಸಿಕೊಂಡು ವಿರೋಧ ಪಕ್ಷಗಳನ್ನು ಹಣಿಯುವ ಪ್ರಯತ್ನ ನಡೆಯುತ್ತಿದೆ.ನೋಟು ಅಮಾನೀಕರಣದಿಂದ ಜನಸಾಮಾನ್ಯರಿಗೆ ಉಂಟಾಗಿರುವ ತೊಂದರೆ ಇದುವರೆಗೂ ನಿವಾರಣೆಯಾಗಿಲ್ಲ.ಕಪ್ಪು ಹಣ ಮತ್ತು ಭಯೋತ್ಪಾಧನೆಯಂತಹ ಕೃತ್ಯಗಳಿಗೆ ಸರಕಾರ ಕಡಿವಾಣ ಹಾಕುವಲ್ಲಿ ವಿಫಲವಾಗಿದೆ.ಇದುವರೆಗೂ ಎಷ್ಟು ಕಪ್ಪು ಹಣ ಬಂದಿದೆ ಎಂದು ದೇಶದ ಜನರಿಗೆ ಲೆಕ್ಕ ನೀಡಿಲ್ಲ.ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡೇ ಜನರು ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರಕ್ಕೆ ಮತ ನೀಡಿದ್ದಾರೆ ಎಂದರು ಡಾ.ಜಿ.ಪರಮೇಶ್ವರ್ ನುಡಿದರು.

      ಕಳೆದ ನಾಲ್ಕುವರೆ ವರ್ಷದಲ್ಲಿ ರೈತರ ಯಾವುದೇ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ. ರಾಜ್ಯ ಸರಕಾರ ಹಲವು ಯೋಜನೆಗಳ ಮೂಲಕ ಆತ್ಮಹತ್ಯೆ ಮಾಡಿಕೊಂಡ ರೈತರ ನೆರವಿಗೆ ಬಂದಿದೆ.ಆದರೆ ಕೇಂದ್ರ ಸರಕಾರ ಒಂದು ನೈಯಾ ಪೈಸ ಪರಿಹಾರ ನೀಡಿಲ್ಲ. ದಲಿತರ ಕಗ್ಗೊಲೆ, ಮಹಿಳೆಯರ ಮೇಲಿನ ಅತ್ಯಾಚಾರ ನಿರಂತರವಾಗಿ ನಡೆಯುತ್ತಿದೆ. ಇವುಗಳಿಗೆ ಕಡಿವಾಣ ಹಾಕುವಲ್ಲಿ ಕೇಂದ್ರದ ಬಿಜೆಪಿ ವಿಫಲವಾಗಿದೆ.ಈ ಎಲ್ಲಾ ಅಂಶಗಳನ್ನು ಮುಂದಿಟ್ಟುಕೊಂಡು 2019ರ ಲೋಕಸಭಾ ಚುನಾವಣೆಯನ್ನು ಎದುರಿಸಬೇಕಿದೆ.ಮುದ್ದಹನುಮೇಗೌಡರೇ ಮೈತ್ರಿ ಸರಕಾರದ ಅಭ್ಯರ್ಥಿಯಾಗುವ ನಿರೀಕ್ಷೆಯಿದೆ.ಹಾಗಾಗಿ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಪಡೆದು, ರಾಹುಲ್‍ಗಾಂಧಿ ಅವರನ್ನು ಪ್ರಧಾನಿ ಮಾಡಲು ಮುಂದಾಗಬೇಕಿದೆ ಎಂದರು.

     ಮಾಜಿ ಶಾಸಕ ಡಾ.ರಫೀಕ್ ಅಹಮದ್ ಮಾತನಾಡಿ, 1912ರಲ್ಲಿ ಭಾರತೀಯ ನ್ಯಾಷನಲ್ ಕಾಂಗ್ರೆಸ್‍ಗೆ ಸೇರ್ಪಡೆಗೊಂಡ ನೆಹರು ಮಹಾತ್ಮಗಾಂಧಿ ಅವರೊಂದಿಗೆ ಸ್ವಾತಂತ್ರ ಹೋರಾಟದಲ್ಲಿ ಹೆಗಲಿಗೆ ಹೆಗಲು ಕೊಟ್ಟು ದುಡಿದರು.ಸ್ವಾತಂತ್ರ ನಂತರದ ಭಾರತದ ಮೊದಲ ಪ್ರಧಾನಿಯಾಗಿ, ದೇಶ ಆರ್ಥಿಕವಾಗಿ,ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಮುಂದೆ ಬರಲು ನೆಹರು ಕಾರಣ.ಅವರು ಜಾರಿಗೆ ತಂದ ಪಂಚಶೀಲ ತತ್ವಗಳು ಇಂದಿಗೂ ವಿದೇಶಾಂಗ ನೀತಿಯಲ್ಲಿ ಬಹಳ ಪ್ರಮುಖ ಪಾತ್ರ ವಹಿಸಿದೆ ಎಂದರು.

      ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ,ಮಾಜಿ ಅಧ್ಯಕ್ಷರಾದ ಎಸ್.ಷಪಿಅಹಮದ್,ಕೆಂಚಮಾರಯ್ಯ,ಕೆಪಿಸಿಸಿ ವಕ್ತಾರ ಮುರುಳೀಧರ ಹಾಲಪ್ಪ,ಬ್ಲಾಕ್‍ಕಾಂಗ್ರೆಸ್ ಅಧ್ಯಕ್ಷರಾದ ಆಟೋರಾಜು, ಮೆಹಬೂಬ್ ಪಾಷ,ಮುಖಂಡರಾದ ಅಪ್ತಾಬ್ ಅಹಮದ್, ನರಸೀಯಪ್ಪ,ಲಿಂಗರಾಜು,ಟಿ.ಬಿ.ಮಲ್ಲೇಶ್,ಮಹಿಳಾ ಘಟಕದ ಇಂದಿರಾ ದೇನಾನಾಯಕ್,ಗೀತಮ್ಮ,ಪಾಲಿಕೆ ಸದಸ್ಯರಾದ ಮಹೇಶ್, ಕುಮಾರ್, ಇನಾಯತ್ ಸೇರಿದಂತೆ ಹಲವರು ಭಾಗವಹಿಸಿದ್ದರು.

 

(Visited 27 times, 1 visits today)
Previous Articleಡೀಲ್ ಪ್ರಕರಣ : ಜನಾರ್ಧನ ರೆಡ್ಡಿಗೆ ‘ಬಿಗ್ ರಿಲೀಫ್’
Next Article ರೆಡ್ಡಿ ಬಂಧನದಲ್ಲಿ ಸರ್ಕಾರದ ಕೈವಾಡವಿಲ್ಲ: ಪರಮೇಶ್ವರ್
News Desk Benkiyabale

Related Posts

ಅಡಿಕೆ ತೋಟದಲ್ಲಿ ಪತ್ತೆಯಾಯಿತು ಶಾಸನ

July 02, 2026 4:59 pm news

ಎಸ್‌ಐಆರ್: ಮನೆ ಮನೆಗೆ ತೆರಳಿ ಗಣತಿ ನಮೂನೆ ವಿತರಿಸುತ್ತಿರುವ ಬಿಎಲ್‌ಒಗಳು

July 02, 2026 4:36 pm news

ಆಧುನಿಕ ಕೃಷಿ ಪದ್ದತಿಗಳ ಬಳಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

July 02, 2026 4:33 pm news
ತಾಜಾ ಸುದ್ಧಿಗಳು

ಅಡಿಕೆ ತೋಟದಲ್ಲಿ ಪತ್ತೆಯಾಯಿತು ಶಾಸನ

July 02, 2026 4:59 pm

ಎಸ್‌ಐಆರ್: ಮನೆ ಮನೆಗೆ ತೆರಳಿ ಗಣತಿ ನಮೂನೆ ವಿತರಿಸುತ್ತಿರುವ ಬಿಎಲ್‌ಒಗಳು

July 02, 2026 4:36 pm

ಆಧುನಿಕ ಕೃಷಿ ಪದ್ದತಿಗಳ ಬಳಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

July 02, 2026 4:33 pm

ತಾತ್ಕಾಲಿಕವಾಗಿ ಪಿಂಚಣಿ ಸ್ಥಗಿತ: ದಾಖಲೆ ಲೋಪ ಕಾರಣ

July 02, 2026 4:29 pm

ಬಹುದಿನಗಳಿಂದ ನೆನಗುದಿಗೆ ಬಿದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ

July 02, 2026 4:26 pm

ಅಕ್ಟೋಬರ್ ವೇಳೆಗೆ ತುಮಕೂರಿಗೆ ಎತ್ತಿನ ಹೊಳೆ ನೀರು

July 02, 2026 4:19 pm
Our Youtube Channel
Our Picks

ಅಡಿಕೆ ತೋಟದಲ್ಲಿ ಪತ್ತೆಯಾಯಿತು ಶಾಸನ

July 02, 2026 4:59 pm

ಎಸ್‌ಐಆರ್: ಮನೆ ಮನೆಗೆ ತೆರಳಿ ಗಣತಿ ನಮೂನೆ ವಿತರಿಸುತ್ತಿರುವ ಬಿಎಲ್‌ಒಗಳು

July 02, 2026 4:36 pm

ಆಧುನಿಕ ಕೃಷಿ ಪದ್ದತಿಗಳ ಬಳಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

July 02, 2026 4:33 pm

ತಾತ್ಕಾಲಿಕವಾಗಿ ಪಿಂಚಣಿ ಸ್ಥಗಿತ: ದಾಖಲೆ ಲೋಪ ಕಾರಣ

July 02, 2026 4:29 pm

ಬಹುದಿನಗಳಿಂದ ನೆನಗುದಿಗೆ ಬಿದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ

July 02, 2026 4:26 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಅಡಿಕೆ ತೋಟದಲ್ಲಿ ಪತ್ತೆಯಾಯಿತು ಶಾಸನ

By News Desk BenkiyabaleJuly 02, 2026 4:59 pm

ತುಮಕೂರು/ಶಿವಮೊಗ್ಗ: ತುಮಕೂರಿನ ಇತಿಹಾಸ ಸಂಶೋಧಕರ ತಂಡ ಶಿವಮೊಗ್ಗ ತಾಲೂಕಿನ ಬಿದಿರಿ ಗ್ರಾಮದಲ್ಲಿ ವಿಜಯನಗರ ಕಾಲದ ಅತ್ಯಂತ ಮಹತ್ವದ ಹಾಗೂ ಇಂದಿನವರೆಗೂ…

ಎಸ್‌ಐಆರ್: ಮನೆ ಮನೆಗೆ ತೆರಳಿ ಗಣತಿ ನಮೂನೆ ವಿತರಿಸುತ್ತಿರುವ ಬಿಎಲ್‌ಒಗಳು

July 02, 2026 4:36 pm

ಆಧುನಿಕ ಕೃಷಿ ಪದ್ದತಿಗಳ ಬಳಕೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

July 02, 2026 4:33 pm

ತಾತ್ಕಾಲಿಕವಾಗಿ ಪಿಂಚಣಿ ಸ್ಥಗಿತ: ದಾಖಲೆ ಲೋಪ ಕಾರಣ

July 02, 2026 4:29 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.