BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗ್ರಾಮಕ್ಕೆ ರಸ್ತೆ ನಿರ್ಮಿಸಿಕೊಡಲು ಕುಪ್ಪೂರು ಗ್ರಾಮಸ್ಥರ ಆಗ್ರಹ
Trending

ಗ್ರಾಮಕ್ಕೆ ರಸ್ತೆ ನಿರ್ಮಿಸಿಕೊಡಲು ಕುಪ್ಪೂರು ಗ್ರಾಮಸ್ಥರ ಆಗ್ರಹ

By News Desk BenkiyabaleUpdated:March 17, 2020 6:38 pm

ತುಮಕೂರು :

     ತಾಲ್ಲೂಕಿನ ಕುಪ್ಪೂರು ಗ್ರಾಮಕ್ಕೆ ಮೂಲಭೂತ ರಸ್ತೆ ಸಂಪರ್ಕ ಕಲ್ಪಿಸಿಕೊಂಡುವಂತೆ ಗ್ರಾಮಸ್ಥರು ಆಗ್ರಹಿಸಿದರು.

      ಸ್ಮಾರ್ಟ್‍ಸಿಟಿ ಯೋಜನೆಯಡಿ ಬುಗುಡನಹಳ್ಳಿ ಕೆರೆಯಿಂದ ಹೇಮಾವತಿ ನೀರನ್ನು ತುಮಕೂರಿನ ಅಮಾನಿಕೆರೆಗೆ ತುಂಬಿಸುವ ಯೋಜನೆ ಕೊಳವೆ ಮಾರ್ಗ ಅಳವಡಿಸುವ ಕಾರ್ಯ ತಿಪ್ಪೂರು ಗ್ರಾಮದಲ್ಲಿ ನಡೆಯುತ್ತಿರುವ ಹಿನ್ನಲೆಯಲ್ಲಿ ಮೊದಲು ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸಿ ಆ ನಂತರ ತುಮಕೂರು ನಗರಕ್ಕೆ ನೀರು ಕೊಡೊಯ್ಯುವ ಕೊಳವೆ ಮಾರ್ಗ ಕಾಮಗಾರಿ ನಡೆಸಿ ಎಂದು ಗ್ರಾಮಸ್ಥರು ಅಡ್ಡಿಪಡಿಸಿದರು.

       ಈ ಸಂದರ್ಭದಲ್ಲಿ ಕುಪ್ಪೂರು ಗ್ರಾಮದ ಸರ್ಕಾರಿ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಕುಮಾರ್ ಮಾತನಾಡಿ, ನಮ್ಮ ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ಸಂಸದರಿಗೆ, ಶಾಸಕರಿಗೆ, ಜಿಲ್ಲಾಧಿಕಾರಿಗಳಿಗೆ, ಜಿಪಂ ಸಿಇಒ, ತಹಶೀಲ್ದಾರ್‍ರವರಿಗೆ ಮನವಿ ಸಲ್ಲಿಸಿದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ, ಜನಪ್ರತಿನಿಧಿಗಳು ಚುನಾವಣೆ ಬಂದಾಗ ಮಾತ್ರ ಮತ ಕೇಳಲು ಬಂದು ರಸ್ತೆ ಮಾಡಿಸುವ ಭರವಸೆ ನೀಡಿ ಹೋಗುತ್ತಾರೆಯೇ ವಿನಃ ನಂತರ ಇತ್ತ ತಿರುಗಿಯೂ ನೋಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

      ತುಮಕೂರು ನಗರಕ್ಕೆ ಹೋಗಬೇಕಾದರೆ 7 ಕಿ.ಮೀ. ದೂರ ಕ್ರಮಿಸಬೇಕು, ಬಸ್ ಸೌಲಭ್ಯವಿಲ್ಲ, ನಡದೇ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ 1 ರಿಂದ 7 ನೇ ತರಗತಿವರೆಗೆ ಸರ್ಕಾರಿ ಶಾಲೆ ಇದೆ. ಹೈಸ್ಕೂಲ್‍ಗೆ ತೆರಳಬೇಕಾದರೆ ಬುಗುಡನಹಳ್ಳಿಗೆ ನಡೆದೇ ಹೋಗಬೇಕು, ಇಲ್ಲವಾದರೆ ತುಮಕೂರಿನ ಶಿರಾಗೇಟ್‍ಗೆ ಮಕ್ಕಳು ನಡೆದೇ ಹೋಗಬೇಕಾದ ಪರಿಸ್ಥಿತಿ ಇದೆ. ಇಂತಹ ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸಬೇಕೆಂದು ಒತ್ತಾಯಿಸಿದರು.

       ಊರುಕೆರೆ ಗ್ರಾಪಂ ಸದಸ್ಯ ಕುಪ್ಪೂರಿನ ಮಂಜುನಾಥ್ ಮಾತನಾಡಿ, ಈ ಗ್ರಾಮದಲ್ಲಿ ಸುಮಾರು 2000 ಜನಂಖ್ಯೆ ಹೊಂದಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರೇ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಇದುವರೆಗೂ ಈ ಗ್ರಾಮದ ಸಮಸ್ಯೆ ನಿವಾರಿಸಲು ಯಾವ ಅಧಿಕಾರಿಗಳೂ ಬಂದಿಲ್ಲ, ನಾವು ಈ ಹಿಂದೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದ ಪರಿಣಾಮ ಇಂದು ಗ್ರಾಮಕ್ಕೆ ತಹಶೀಲ್ದಾರ್ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆದರೂ ನಮಗೆ ತ್ವರಿತವಾಗಿ ರಸ್ತೆ ನಿರ್ಮಾಣವಾಗಬೇಕೆಂಬುದು ನಮ್ಮ ಉದ್ಧೇಶ ಎಂದರು.

      ಗ್ರಾಮಕ್ಕೆ ತಹಶೀಲ್ದಾರ್ ಭೇಟಿ :

      ಕಾಮಗಾರಿ ತಡೆ ಹಿಡಿದಿರುವ ಮಾಹಿತಿ ಅರಿತ ತಹಶೀಲ್ದಾರ್ ಮೋಹನ್‍ಕುಮಾರ್ ಕುಪ್ಪೂರು ಗ್ರಾಮಕ್ಕೆ ಸೋಮವಾರ ಸಂಜೆ ಭೇಟಿ ನೀಡಿ, ಸಾರ್ವಜನಿಕರಿಂದ ಗ್ರಾಮದ ಸಮಸ್ಯೆಯನ್ನು ಆಲಿಸಿದರು.

      ನಂತರ ಮಾತನಾಡಿದ ತಹಶೀಲ್ದಾರ್ ಮೋಹನ್‍ಕುಮಾರ್, ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಕುಪ್ಪೂರು ಗ್ರಾಮಕ್ಕೆ ಭೇಟಿ ನೀಡಿ, ಸಮಸ್ಯೆ ಆಲಿಸಿದ್ದೇನೆ, ಪ್ರಸ್ತುತ 25-30 ಅಡಿ ರೂಢಿದಾರಿ ಇದೆ. ಈ ಭಾಗದಲ್ಲಿ ಕರಾಬು ಜಮೀನು ಎಲ್ಲೆಲ್ಲಿ ಇದೆ ಎಂಬುದನ್ನು ಸರ್ವೆ ಕಾರ್ಯ ಮಾಡಿಸಿ, ಕರಾಬು ಜಮೀನು ಇಲ್ಲದಿದ್ದರೆ, ಜಮೀನಿನ ಮಾಲೀಕರೊಂದಿಗೆ ಮನವೊಲಿಸಿ ರಸ್ತೆ ಸಂಪರ್ಕ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಈ ಗ್ರಾಮಕ್ಕೆ ರಸ್ತೆ ಸಂಪರ್ಕ ಇಲ್ಲ ಎಂಬುದನ್ನು ಮನಗಂಡಿದ್ದೇನೆ, ಇನ್ನು ನಾಲ್ಕೈದು ದಿನಗಳ ನಂತರ ಸರ್ವೆ ಕಾರ್ಯ ಮಾಡಿಸಿ, ಜಮೀನಿನ ಮಾಲೀಕರು ಯಾರಾದರೂ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿದ್ದರೆ, ಒತ್ತುವರಿ ತೆರವುಗೊಳಿಸಿ, ಕರಾಬು ಜಮೀನಿದ್ದರೆ ಅದನ್ನು ರಸ್ತೆಯನ್ನಾಗಿ ಮಾಡಲು ಕಂದಾಯಾಧಿಕಾರಿ ಮತ್ತು ಗ್ರಾಮ ಲೆಕ್ಕಾಧಿಕಾರಿಗಳ ಸಭೆ ಕರೆದು ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

     ನಂತರ ಗ್ರಾಮಸ್ಥರು ಬುಗುಡನಹಳ್ಳಿ ಕೆರೆಯಿಂದ ತುಮಕೂರು ಅಮಾನಿಕೆರೆಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವ ಕೊಳವೆ ಮಾರ್ಗ ಕಾಮಗಾರಿ ನಡೆಯಲು ಅನುವು ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

(Visited 28 times, 1 visits today)
Previous Articleಪಿಯುಸಿ ಪರೀಕ್ಷೆ : ಅರ್ಥಶಾಸ್ತ್ರ, ಜೀವಶಾಸ್ತ್ರ ವಿಷಯದಲ್ಲಿ 22860 ವಿದ್ಯಾರ್ಥಿಗಳು ಹಾಜರು
Next Article ಮನೆ-ಮನೆಗೆ ಭೇಟಿ ನೀಡಿ ಕೊರೊನಾ ಬಗ್ಗೆ ಅರಿವು ಮೂಡಿಸಲಾಗುವುದು – ಡೀಸಿ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.