BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 
  • KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
  • ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್
  • ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೃಷಿ ಚಟುವಟಿಕೆ ಯಾವುದೇ ನಿಬಂಧವಿಲ್ಲ- ಸಚಿವ ಬಿ.ಸಿ ಪಾಟೀಲ್
Trending

ಕೃಷಿ ಚಟುವಟಿಕೆ ಯಾವುದೇ ನಿಬಂಧವಿಲ್ಲ- ಸಚಿವ ಬಿ.ಸಿ ಪಾಟೀಲ್

By News Desk BenkiyabaleUpdated:April 22, 2020 6:12 pm

ತುಮಕೂರು:

ಕೊರೊನಾ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಬಾಧಕವಾಗದಂತೆ ನಿಗಾವಹಿಸಲು ಕೃಷಿ ಚಟುವಟಿಕೆಗೆ ಪೂರಕವಾದ ಪರಿಕರಗಳು ಮತ್ತು ಬೋರ್‍ವೆಲ್, ಟ್ರ್ಯಾಕ್ಟರ್ ರಿಪೇರಿಗೆ ಅವಕಾಶ ಮಾಡಿ ಕೊಡಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚಿಸಿದರು

      ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಬೇಕಾದ ಬಿತ್ತನೆ ಬೀಜಗಳು, ಗೊಬ್ಬರ ಮತ್ತು ಇನ್ನಿತರ ಅವಶ್ಯಕ ಪರಿಕರಗಳ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ರೈತರು ನಿಶ್ಚಿಂತೆಯಿಂದ ಕೃಷಿ ಕಾಯಕ ಮುಂದುವರಿಸಲು ಮನವಿ ಮಾಡಿದರು.

      ಇದುವರೆಗೂ ತಾವು ತುಮಕೂರು ಸೇರಿದಂತೆ 26 ಜಿಲ್ಲೆಗಳ ಕೃಷಿ ಪರಿಸ್ಥಿಗಳ ಬಗ್ಗೆ ಅಧ್ಯಯನ ಮಾಡಿದ್ದೇನೆ.ಸರಣಿ ಪರಿಶೀಲನಾ ಸಭೆಗಳನ್ನು ನಡೆಸಿದ್ದೇನೆ. 19 ಜಿಲ್ಲೆಗಳ ಕೃಷಿ ಸ್ಥಿತಿಗತಿ – ಪರಿಹಾರ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಅವರಿಗೆ ವರದಿ ಸಲ್ಲಿಸಿದ್ದೇನೆ. ಇನ್ನೂ 4 ಜಿಲ್ಲೆಗಳ ಪರಿಶೀಲನೆ ನಂತರ ಮತ್ತೊಮ್ಮೆ ಸಮಗ್ರ ವರದಿ ಸಲ್ಲಿಸುತ್ತೇನೆ ಎಂದು ವಿವರಿಸಿದರು.

      ಹಣ್ಣು – ತರಕಾರಿಗಳನ್ನು ಹೆಚ್ಚಾಗಿ ಬೆಳೆಯುವ ಪ್ರದೇಶಗಳಲ್ಲಿ ಪ್ರತಿ ತಾಲ್ಲೂಕಿಗೆ ಒಂದರಂತೆ ಶೀತಲ ಶೇಖರಣ ಬೃಹತ್ ಘಟಕಗಳನ್ನು ನಿರ್ಮಾಣ ಮಾಡಬೇಕಾಗಿದೆ. ಎಪಿಎಂಸಿಗಳನ್ನು ಮತ್ತಷ್ಟು ಬಲಪಡಿಸಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

      ರಾಜ್ಯದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದ ಅನಾನಸ್ – ಕಲ್ಲಂಗಡಿ ಹಣ್ಣುಗಳನ್ನು ಬೆಳೆಯುತ್ತಾರೆ. ಸಮರ್ಪಕ ಪ್ರಮಾಣದಲ್ಲಿ ಮಾರಾಟವಾಗದ ಕಾರಣ ಅವುಗಳು ಕೊಳೆತು ಹೋಗುತ್ತಿವೆ. ಈ ಹಿನ್ನೆಲೆಯಲ್ಲಿ ಕೃಷಿಕರ ಪರಿಶ್ರಮ ವ್ಯರ್ಥವಾಗದಂತೆ ಮೌಲ್ಯವರ್ಧನಾ ಘಟಕಗಳ ಸ್ಥಾಪನೆಗೆ ಉದ್ದೇಶಿಸಲಾಗಿದೆ. ಇದರಿಂದ ಹಣ್ಣುಗಳ ಜ್ಯೂಸ್ ಮಾಡಿ ಹೆಚ್ಚು ಅವಧಿ ಬಾಳಿಕೆ ಬರುವ ಪ್ಯಾಕೇಟುಗಳ ಮೂಲಕ ಮಾರಾಟ ಮಾಡುವುದು ಸೂಕ್ತ ಎಂದರು.

      ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆಬೀಜ, ಗೊಬ್ಬರಗಳು, ಕೀಟನಾಶಕಗಳು ಇನ್ನಿತರ ಪರಿಕರಗಳನ್ನು ಪೂರೈಸಲು ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಎಲ್ಲಿಯಾದರೂ ಇವುಗಳ ಕಳಪೆ ಮಾರಾಟ ಕಂಡು ಬಂದು ರೈತರಿಗೆ ತೊಂದರೆಯಾದರೆ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು, ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಅವರ ಮೇಲೆ ಕಠಿಣ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.

      ಕೃಷಿ ಇಲಾಖೆಯ ಜಾಗೃತ ದಳವನ್ನು ಕಟ್ಟೆಚ್ಚರದ ಸ್ಥಿತಿಯಲ್ಲಿಡಲಾಗಿದೆ. ಈಗಾಗಲೇ ರಾಜ್ಯದ ವಿವಿಧೆಡೆ ಸರಣಿ ದಾಳಿಗಳನ್ನು ನಡೆಸಿ ಕಳಪೆ ಬಿತ್ತನೆಬೀಜ, ಇನ್ನಿತರ ಪರಿಕರಗಳನ್ನು ಜಪ್ತಿ ಮಾಡಲಾಗಿದೆ.ಸಂಬಂಧಿಸಿದ ಅಂಗಡಿಗಳ ಲೈಸನ್ಸ್ ಗಳನ್ನು ಅಮಾನತ್ತಿನಲ್ಲಿಡಲಾಗಿದೆ. ಮಾಲೀಕರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದೆ ಎಂದು ವಿವರಿಸಿದರು.

      ಲಾಕ್‍ಡೌನ್ ಹಿನ್ನೆಲೆಯಲ್ಲಿ ಹಣ್ಣು-ತರಕಾರಿಗಳನ್ನು ಆನ್‍ಲೈನ್ ಮೂಲಕ ಮಾರಾಟ ಮಾಡುವುದರಿಂದ ರೈತರಿಗೆ ಅನುಕೂಲವಾಗುವುದಿಲ್ಲ. ಟೊಮಟೊ ಬೆಲೆ ಕುಸಿತ ಕಂಡಿದ್ದು, ರೈತರು ನಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಸರ್ಕಾರ ರೈತರಿಗೆ ನೆರವಾಗಬೇಕು ಎಂದು ರೈತರೊಬ್ಬರು ಸಚಿವರಿಗೆ ಮನವಿ ಮಾಡಿದರು.

      ಕೃಷಿ ಇಲಾಖೆ ಜಂಟಿ ನಿದೇರ್ಶಕ ರಾಜ ಸುಲೋಚನ ಮಾತನಾಡಿ, ಮುಂಗಾರು ಪೂರ್ವ ಬಿತ್ತನೆಗೆ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ. ರೈತರಿಗೆ ಯಾವುದೇ ಸಮಯದಲ್ಲಿಯೂ ಕೂಡ ತೊಂದರೆಯಾಗದಂತೆ ಬಿತ್ತನೆ ಬೀಜಗಳನ್ನು ಸರಬರಾಜು ಮಾಡಲು ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಹಾಗೂ ರೈತ ಸಂಪರ್ಕ ಕೇಂದ್ರಗಳ ಮೂಲಕ ಬಿತ್ತನೆ ಬೀಜಗಳನ್ನು ವಿತರಿಸಲು ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ರೈತರಿಗೆ ಕರಪತ್ರ ಮೂಲಕ ಮಾಹಿತಿ ನೀಡಲಾಗುತ್ತಿದೆ. ಕೋವಿಡ್-19 ಹಿನ್ನಲೆಯಲ್ಲಿ ಬಿತ್ತನೆ ಬೀಜ ಹಂಚುವ ಕೇಂದ್ರಗಳಲ್ಲಿ ಸ್ಯಾನಿಟೈಜರ್ ವ್ಯವಸ್ಥೆ ಮಾಡಿದ್ದು, ಅಗತ್ಯವಿದ್ದವರಿಗೆ ಮಾಸ್ಕ್‍ಗಳನ್ನು ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರ ರಘು ಮಾತನಾಡಿ, ಮೇ ತಿಂಗಳಿಂದ ಮಾವಿನ ಬೆಳೆ ಕೊಯ್ಲಿಗೆ ಬರುತ್ತದೆ. ಆದ್ದರಿಂದ ಅದಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಜಿಲ್ಲೆಯಲ್ಲಿ 50 ಟ್ರೇಡರ್ಸ್‍ಗಳೊಂದಿಗೆ ಚರ್ಚಿಸಿದ್ದು, ಮಾವು ಮಾರಾಟ ಮಾಡಲು ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ರೈತರು ಬೆಳೆದಿರುವ ತರಕಾರಿಗಳನ್ನು ಖರೀದಿ ಮಾಡುತ್ತಿದ್ದೇವೆ. ಅಲ್ಲದೇ ನಗರದ ಪ್ರದೇಶಗಳಲ್ಲಿ ಪ್ರತಿ ವಾರ್ಡಿನಲ್ಲಿ 4 ಹಾಪ್‍ಕಾಮ್ಸ್‍ಗಳನ್ನು ತೆರೆಯಲಾಗಿದೆ. ತೋಟಗಾರಿಕಾ ಇಲಾಖೆ ವತಿಯಿಂದ 2 ಕಂಟ್ರೋಲ್ ರೂಂಗಳನ್ನು ಆರಂಭಿಸಿ, ರೈತ ಬೆಳೆದಿರುವ ಬೆಳೆಗಳ ಸಂಪೂರ್ಣ ಮಾಹಿತಿಯನ್ನು ಪಡೆಯುತ್ತಿದ್ದೇವೆ ಎಂದರು.

      ರೈತರು ಬೆಳೆದಿರುವ ಬೆಳೆಗಳನ್ನು ಮಧ್ಯವರ್ತಿಗಳು ಕಡಿಮೆ ಬೆಲೆ ಕೊಂಡು, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇದರಿಂದ ರೈತರಿಗೆ ನಷ್ಟವಾಗುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ಕೇರಳ ಮಾದರಿಯಲ್ಲಿ ರೈತರಿಂದ ನೇರವಾಗಿ ಬೆಳೆಯನ್ನು ಕೊಂಡು, ಅವುಗಳನ್ನು ಮಾರಾಟ ಮಾಡುವ ವ್ಯವಸ್ಥೆ ಮಾಡಬೇಕು. ಇದರಿಂದ ರೈತರಿಗೂ ಅನುಕೂಲವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ ತಿಳಿಸಿದರು.

      ರೈತರಿಗೆ ಪಾಸ್ ಬದಲು ಆಧಾರ್‍ಕಾರ್ಡ್ ಮತ್ತು ಪಾಣಿ ತೊರಿಸಿ ಸಂಚರಿಸಲು ಅನುಮತಿ ಮಾಡಿಕೊಡಿ, ಹಸಿರು ಪಾಸ್ ಕೆಲವೇ ರೈತರಿಗೆ ಮಾತ್ರ ದೊರೆತಿದೆ ಎಂದು ರೈತರೊಬ್ಬರು ಸಚಿವರಿಗೆ ಮನವಿ ಮಾಡಿದರು.

      ಸಭೆಯಲ್ಲಿ ಸಚಿವ ಮಾಧುಸ್ವಾಮಿ, ಸಂಸದ ಜಿ.ಎಸ್ ಬಸವರಾಜು, ವಿಧಾನ ಪರಿಷತ್ ಸದಸ್ಯರುಗಳಾದ ತಿಪ್ಪೇಸ್ವಾಮಿ, ಚೌಡರಡ್ಡಿ ತೂಪ್ಪಲ್ಲಿ, ಬೆಮೆಲ್ ಕಾಂತರಾಜ್, ಶಾಸಕರಾದ ವೀರಭದ್ರಯ್ಯ, ಸತ್ಯನಾರಾಯಣ, ಜ್ಯೋತಿ ಗಣೇಶ್, ಜಯರಾಮ್, ಜಿಲ್ಲಾ ಪಂಚಾಯಿತಿ ಸಿಇಓ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೋನವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಸೇರಿದಂತೆ ಕೃಷಿ ಮತ್ತು ತೋಟಗಾರಿಕಾ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

      ಸಭೆ ಬಳಿಕ ನೇರ ಸಿದ್ದಗಂಗಾ ಮಠಕ್ಕೆ ತೆರಳಿದ ಸಚಿವ ಬಿ.ಸಿ. ಪಾಟೀಲ್, ಸಿದ್ದಗಂಗಾ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

(Visited 9 times, 1 visits today)
Previous Articleಹೇಮಾವತಿ ಬಾಕಿ ನೀರು ಕೂಡಲೇ ಬಿಡಬೇಕು – ಸುರೇಶ ಗೌಡ
Next Article ಹೊರರಾಜ್ಯಕ್ಕೆ ಹುಣಸೆ ಮತ್ತು ಕೊಬ್ಬರಿ : ಸಚಿವ ಮಾಧುಸ್ವಾಮಿ
News Desk Benkiyabale

Related Posts

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm news

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm news
ತಾಜಾ ಸುದ್ಧಿಗಳು
news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
news

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm
news

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
Our Youtube Channel
Our Picks

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

By News Desk BenkiyabaleSeptember 19, 2026 6:04 pm

ತುಮಕೂರು: ಗ್ರಾಮೀಣ ಭಾಗದ ರೈತರು, ಕೂಲಿಕಾರ್ಮಿಕರು ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಜನರು ತಮ್ಮ ಕೆಲಸಗಳಿಗಾಗಿ ಕಚೇರಿಗಳಿಗೆ…

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.