BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
  • ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ
  • ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ
  • ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬುಗುಡನಹಳ್ಳಿ ಜಲ ಸಂಗ್ರಹಾಗಾರದಲ್ಲಿ ನೀರು ಖಾಲಿ
Trending

ಬುಗುಡನಹಳ್ಳಿ ಜಲ ಸಂಗ್ರಹಾಗಾರದಲ್ಲಿ ನೀರು ಖಾಲಿ

By News Desk BenkiyabaleUpdated:May 20, 2020 6:31 pm

ತುಮಕೂರು:

       ನಗರಕ್ಕೆ ಹೇಮಾವತಿ ನೀರು ಪೂರೈಕೆ ಮಾಡುವ ಬುಗುಡನಹಳ್ಳಿ ಜಲ ಸಂಗ್ರಹಾಗಾರದಲ್ಲಿ ಕೇವಲ ಒಂದೂವರೆ ತಿಂಗಳಿಗಾಗುವಷ್ಟು ನೀರು ಸಂಗ್ರಹಣೆ ಮಾತ್ರ ಇದ್ದು, ಈಗಾಗಲೇ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಿ ಜನರು ಪರಿತಪಿಸುವಂತಾಗಿದೆ ಎಂದು ಸರ್ಕಾರ ಮತ್ತು ಮಹಾನಗರಪಾಲಿಕೆ ಆಡಳಿತಕ್ಕೆ ಸಾರ್ವಜನಿಕ ಸುರಕ್ಷಾ ಸಮಿತಿ ಜಿಲ್ಲಾಧ್ಯಕ್ಷ ಹಾಗೂ ಮಹಾನಗರಪಾಲಿಕೆ ಮಾಜಿ ಸದಸ್ಯ ಕೆ.ಪಿ. ಮಹೇಶ ಆಕ್ಷೇಪಿಸಿದ್ದಾರೆ.

      ಹೇಮಾವತಿ ನೀರನ್ನು ಬುಗುಡನಹಳ್ಳಿ ಜಲ ಸಂಗ್ರಹಾಗಾರದಿಂದ ನಗರದ ಬಹುತೇಕ ಬಡಾವಣೆಗಳಿಗೆ ವಿತರಿಸುತ್ತಿದ್ದು ಸದ್ಯ ಬುಗುಡನಹಳ್ಳಿಯಲ್ಲಿ ನೀರಿನ ಸಂಗ್ರಹಣೆ ಕಡಿಮೆಯಾಗುತ್ತಿರುವುದರಿಂದ ಇದೀಗ ಹಲವು ಬಡಾವಣೆಗಳಲ್ಲಿ ಶೇಕಡ ಮೂವತ್ತೈದರಷ್ಟು ನೀರು ಪೂರೈಕೆ ಕಡಿಮೆಯಾಗಿ ನೀರಿಗೆ ತೊಂದರೆ ಅನುಭವಿಸುವಂತಾಗಿದೆ.

      ಇಂದು ಬುಗುಡನಹಳ್ಳಿ ಜಲಸಂಗ್ರಹಾಗಾರದ ಪ್ರದೇಶಕ್ಕೆ ಭೇಟಿ ನೀಡಿದ ಸಾರ್ವಜನಿಕ ಸಮಿತಿಯ ಜಿಲ್ಲಾಧ್ಯಕ್ಷ ಕೆ.ಪಿ. ಮಹೇಶ, ಪದಾಧಿಕಾರಿಗಳಾದ ಕೆ. ಹರೀಶ್, ಎಂ.ಎಸ್. ಚಂದ್ರಪ್ಪ, ಮದನ್‍ಸಿಂಗ್, ಕರ್ನಾಟಕ ಮಾನವ ಹಕ್ಕುಗಳ ಜನಜಾಗೃತಿ ಸಮಿತಿಯ ಜಿಲ್ಲಾಧ್ಯಕ್ಷ ಬನಶಂಕರಿಬಾಬು ರವರುಗಳು ವೀಕ್ಷಿಸಿ, ನೀರಿನ ಸಂಗ್ರಹದ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

        ತುಮಕೂರಿಗೆ ಬುಗುಡನಹಳ್ಳಿ ಜಲಸಂಗ್ರಹಾಗಾರದಿಂದ ಪಂಚರಾಯನಪಾಳ್ಯದ ಜಲ ಶುದ್ಧೀಕರಣ ಕೇಂದ್ರಕ್ಕೆ ನೀರು ಪಂಪ್ ಮಾಡಿ, ಶುದ್ಧೀಕರಿಸಿದ ನೀರನ್ನು ಈವರೆವಿಗೂ ಪ್ರತಿದಿನ ಮಹಾನಗರಪಾಲಿಕೆ ಆವರಣದ ಐವತ್ತು ಲಕ್ಷ ಲೀಟರ್ ಸಾಮಥ್ರ್ಯದ ಪಂಪ್‍ಹೌಸ್‍ಗೆ ಇಪ್ಪತ್ತು ಗಂಟೆ ಪಂಪ್ ಮಾಡಿದ ನೀರನ್ನು 215 ಹೆಚ್.ಪಿ. ಎರಡು ಮೋಟಾರ್‍ಗಳ ಮೂಲಕ ಇಪ್ಪತ್ತು ಗಂಟೆ ನೀರು ಪಂಪ್ ಮಾಡುಲಾಗುತ್ತಿದ್ದನ್ನು ಇದೀಗ ಸಿಂಗಲ್ 215 ಹೆಚ್.ಪಿ. ಮೋಟಾರ್‍ನಲ್ಲಿ ಹದಿಮೂರು ಗಂಟೆ ವಿತರಿಸಲಾಗುತ್ತಿದೆ. ಇದೇ ರೀತಿ ವಿದ್ಯಾನಗರ ವಾಟರ್ ವಕ್ರ್ಸ್‍ಗೆ ಇಪ್ಪತ್ತು ಗಂಟೆ ನೀರು ಪೂರೈಕೆಯಲ್ಲಿ ಎರಡು ಸಂಖ್ಯೆಯ 100 ಹೆಚ್.ಪಿ., ಎರಡು ಸಂಖ್ಯೆಯ 180 ಹೆಚ್.ಪಿ., ಎರಡು ಸಂಖ್ಯೆಯ 120 ಹೆಚ್.ಪಿ. ಒಂದು ಸಂಖ್ಯೆಯ 40 ಹೆಚ್.ಪಿ.ಗಳ ಮೂಲಕ ದಿನವೂ ಇಪ್ಪತ್ತು ಗಂಟೆ ನೀರು ಪೂರೈಕೆಯಾಗುತ್ತಿದ್ದು, ಇದೀಗ ಕೇವಲ ಒಂದೊಂದು ಸಂಖ್ಯೆಯ ಮೋಟಾರ್‍ಗಳ ಮೂಲಕ ಏಳು ಗಂಟೆ ನೀರು ಪೂರೈಸಲಾಗುತ್ತಿದೆ.

       ಇನ್ನೊಂದು ಜಲಸಂಗ್ರಹಾಗಾರ ಸಂತೇಪೇಟೆಗೆ ಹದಿನೆಂಟು ಗಂಟೆ ನೀರು ಪೂರೈಕೆಯಲ್ಲಿ ಎರಡು ಸಂಖ್ಯೆ 120 ಹೆಚ್.ಪಿ. ಮೋಟಾರ್‍ಗಳು ಚಾಲನೆ ಮಾಡುತ್ತಿದ್ದು, ಇದೀಗ ಕೇವಲ ಹದಿನಾಲ್ಕು ಗಂಟೆ ನೀರು ವಿತರಣೆ ಮಾಡಲಾಗುತ್ತಿದೆ ಎಂಬ ಮಾಹಿತಿಯನ್ನು ಕೆ.ಪಿ. ಮಹೇಶ ವಿವರಿಸಿ, ಒಟ್ಟಾರೆ ಹೇಮಾವತಿ ಕುಡಿಯುವ ನೀರಿನ ವ್ಯತ್ಯಯದ ವಾಸ್ತವ ಸ್ಥಿತಿ ಬಗ್ಗೆ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

   ಹೇಮಾವತಿ ನೀರು ಕೊರತೆ :

       ತುಮಕೂರಿಗೆ ಹೇಮಾವತಿ ನೀರು ಪೂರೈಕೆ ಮಾಡುವ ಹೆಬ್ಬಾಕದ ಕೆರೆ ಪೂರ್ಣ ಖಾಲಿಯಾಗಿದ್ದು, ಬುಗುಡನಹಳ್ಳಿ ಜಲಸಂಗ್ರಹಾಗಾರದಲ್ಲಿ ಕೇವಲ ಒಂದುವರೆ ತಿಂಗಳಿಗಾಗುವಷ್ಟು ನೀರು ಸಂಗ್ರಹಣೆ ಇದ್ದು, ಮುಂದಿನ ದಿನಗಳಲ್ಲಿ ತುಮಕೂರು ನಗರಕ್ಕೆ ಕುಡಿಯುವ ನೀರಿನ ಹಾಹಾಕಾರವಾಗುವುದು ನಿಶ್ಚಿತ ಎಂದು ಸಾರ್ವಜನಿಕ ಸುರಕ್ಷಾ ಸಮಿತಿ ಸರ್ಕಾರ, ಜಿಲ್ಲಾಡಳಿತ, ಮಹಾನಗರಪಾಲಿಕೆ ಆಡಳಿತಕ್ಕೆ ಗಮನ ಸೆಳೆದಿದೆ. ಈ ಕೂಡಲೇ ಸರ್ಕಾರ, ಜಿಲ್ಲಾಡಳಿತ ಗೊರೂರು ಹೇಮಾವತಿ ಜಲಾಶಯದಿಂದ ತುಮಕೂರು ನಗರದ ಜನತೆಗೆ ಕುಡಿಯುವ ನೀರಿನ ಪೂರೈಕೆ ಮಾಡುವ ದೃಷ್ಠಿಯಿಂದ ನೀರು ಕೂಡಲೇ ಹರಿಸಬೇಕೆಂದು ಒತ್ತಾಯಿಸಿ, ನೀರು ಹರಿಸದಿದ್ದರೆ ಪರಿಸ್ಥಿತಿ ಗಂಭೀರವಾಗುವುದೆಂದು ಎಚ್ಚರಿಸಿದೆ.

 ಮುಖ್ಯಮಂತ್ರಿಗಳಿಗೆ ಮನವಿ :

      ತುಮಕೂರು ನಗರದ ನಾಗರೀಕರ ಹಿತದೃಷ್ಠಿಯಿಂದ ಬುಗುಡನಹಳ್ಳಿ ಜಲಸಂಗ್ರಹಾಗಾರದಲ್ಲಿ ನೀರಿನ ವಿತರಣೆಗೆ ಇದೀಗ ಒಂದೂವರೆ ತಿಂಗಳಿಗಾಗುವಷ್ಟು ಕುಡಿಯುವ ನೀರು ಸಂಗ್ರಹ ಇರುವುದರಿಂದ, ನಗರದ ನಾಗರೀಕರಿಗೆ ಅನುಕೂಲವಾಗುವಂತೆ ಈ ಕೂಡಲೇ ಗೊರೂರು ಹೇಮಾವತಿ ಜಲಾಶಯದಿಂದ ತುಮಕೂರಿನ ಬುಗುಡನಹಳ್ಳಿ ನೀರು ಸಂಗ್ರಹಾಗಾರಕ್ಕೆ ನೀರು ಹರಿಸುವಂತೆ ಮಾನ್ಯ ಮುಖ್ಯಮಂತ್ರಿಗಳವರಿಗೆ ಸಾರ್ವಜನಿಕ ಸುರಕ್ಷಾ ಸಮಿತಿ ಪತ್ರದ ಮುಖೇನ ಮನವಿ ಮಾಡಿದೆ.

(Visited 5 times, 1 visits today)
Previous Articleಮಧುಗಿರಿ: ಹೇಮಾವತಿ ನೀರು ಚರಂಡಿ ಪಾಲು!!
Next Article ತುಮಕೂರು: ಮಾವು ಬೆಳೆಗಾರರಿಗೆ “ಕಲ್ಪತರು” ಬ್ರಾಂಡೆಡ್ ಮಾರುಕಟ್ಟೆ
News Desk Benkiyabale

Related Posts

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm news
ತಾಜಾ ಸುದ್ಧಿಗಳು
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm
news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm
news

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
news

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
news

ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ

August 08, 2026 4:26 pm
Our Youtube Channel
Our Picks

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

By News Desk BenkiyabaleAugust 08, 2026 5:13 pm

ತುಮಕೂರು: ಕೇಂದ್ರ ಸರಕಾರ ಸುಮಾರು ೩೦೦೦ ಕೋಟಿ ರೂಖರ್ಚು ಮಾಡುತ್ತಿರುವ ರಾಷ್ಟಿçÃಯ ಹೆದ್ದಾರಿ ೨೦೬ರಲ್ಲಿ ತಿಪಟೂರು ಸಮೀಪದ ಅಯ್ಯನ ಭಾವಿ…

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.