BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ
  • ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ
  • ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
  • ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
  • ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ
  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ
  • ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!
  • ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶಾಲಾ ಕೊಠಡಿಗಳಿಗೆ ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ವರ್ಗಾವಣೆ : ಓದುಗರಿಂದ ವ್ಯಾಪಕ ವಿರೋಧ
ತುಮಕೂರು ಜಿಲ್ಲಾ ಸುದ್ಧಿಗಳು

ಶಾಲಾ ಕೊಠಡಿಗಳಿಗೆ ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ವರ್ಗಾವಣೆ : ಓದುಗರಿಂದ ವ್ಯಾಪಕ ವಿರೋಧ

By News Desk BenkiyabaleUpdated:November 16, 2018 6:03 pm

ಚಿಕ್ಕನಾಯಕನಹಳ್ಳಿ :

    ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಖಾಲಿ ಇರುವ ಶಾಲಾ ಕಟ್ಟಡಗಳಿಗೆ ಸ್ಥಳಾಂತರಿಸಲು ಗ್ರಂಥಾಲಯ ಇಲಾಖೆ ಹೊರಡಿಸಿರುವ ಆದೇಶಕ್ಕೆ ಓದುಗರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.

      ತಾಲ್ಲೂಕಿನ 23 ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಶಾಲಾ ಕೊಠಡಿಗಳಿಗೆ ಸ್ಥಳಾಂತರಿಸಲು ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದೆ, 7 ಪಂಚಾಯಿತಿಗಳಲ್ಲಿ ಮಾತ್ರ ಶಾಲಾ ಕೊಠಡಿಗಳ ಲಭ್ಯತೆ ಇಲ್ಲದೆ ಇರುವುದರಿಂದ ಗ್ರಂಥಾಲಯಗಳನ್ನು ಇರುವ ಕಛೇರಿಯಲ್ಲೇ ಮುಂದುವರೆಸಲು ತೀರ್ಮಾನಿಸಲಾಗಿದೆ.

      ಇಲಾಖೆಯ ಆದೇಶದಲ್ಲಿ ಪಂಚಾಯಿತಿ ವ್ಯಾಪ್ತಿಯ ಯಾವುದೇ ಊರುಗಳಲ್ಲಿ ಖಾಲಿ ಶಾಲಾ ಕೊಠಡಿ ಗುರುತಿಸಿ ಗ್ರಂಥಾಲಯ ಸ್ಥಳಾಂತರಿಸುವ ಅವಕಾಶ ಕಲ್ಪಿಸಲಾಗಿದೆ, ಇದರಿಂದ ಈಗಾಗಲೇ ಗ್ರಂಥಾಲಯ ಹೊಂದಿರುವ ಕೆಲವು ಪಂಚಾಯ್ತಿ ಕಛೇರಿಗಳು ಗ್ರಂಥಾಲಯವನ್ನು ಕಳೆದುಕೊಳ್ಳುವಂತಾಗಿದೆ, ಅಲ್ಲದೆ ಜನಸಾಂದ್ರತೆ ಇಲ್ಲದ ಕುಗ್ರಾಮಗಳಿಗೆ ಗ್ರಂಥಾಲವನ್ನು ಸ್ಥಳಾಂತರಿಸಲಾಗಿದ್ದು ಇದರಿಂದ ಪುಸ್ತಕ ಪ್ರೇಮಿಗಳು ಆಕ್ರೋಶಗೊಂಡಿದ್ದಾರೆ.

      ಬರಕನಾಳು ಪಂಚಾಯ್ತಿಯ ಗ್ರಂಥಾಲಯವನ್ನು ಸಂಗೇನಹಳ್ಳಿಗೆ, ಹೊಯ್ಸಳಕಟ್ಟೆ ಪಂಚಾಯ್ತಿ ಗ್ರಂಥಾಲಯವನ್ನು ತಿಮ್ಮಪ್ಪನಹಟ್ಟಿಗೆ, ಮಲ್ಲಿಗೆರೆ ಪಂಚಾಯ್ತಿಯ ಗ್ರಂಥಾಲಯವನ್ನು ಕಾನ್ಕೆರೆಗೆ, ಬರಗೂರು ಗ್ರಂಥಾಲಯವನ್ನು ಟಿ.ತಾಂಡ್ಯಕ್ಕೆ, ಚೌಳಕಟ್ಟೆ ಗ್ರಂಥಾಲಯವನ್ನು ಸಬ್ಬೇನಹಳ್ಳಿಗೆ, ಹೊನ್ನೆಬಾಗಿ ಗ್ರಂಥಾಲಯವನ್ನು ಮೇಲನಹಳ್ಳಿಗೆ, ಕುಪ್ಪೂರು ಗ್ರಂಥಾಲಯವನ್ನು ದಿಬ್ಬದಹಳ್ಳಿಗೆ, ಕೋರಗೆರೆ ಗ್ರಂಥಾಲಯವನ್ನು ಬರಗೀಹಳ್ಳಿಗೆ, ಮತಿಘಟ್ಟ ಗ್ರಂಥಾಲಯವನ್ನು ಯಳ್ಳೇನಹಳ್ಳಿಗೆ, ತಿಮ್ಲಾಪುರ ಗ್ರಂಥಾಲಯವನ್ನು ನಂದಿಹಳ್ಳಿಗೆ ಸ್ಥಳಾಂತರಿಸಲಾಗಿದೆ.

     ಮತಿಘಟ್ಟ ಗ್ರಾಮ ಪಂಚಾಯಿತಿಯ ಗ್ರಂಥಾಲಯವನ್ನು 8ಕಿ.ಮೀ ದೂರದಲ್ಲಿರುವ ಯಳ್ಳೇನಹಳ್ಳಿಗೆ ಸ್ಥಳಾಂತರಿಸಲಾಗಿದ್ದು ಇದರ ವಿರುದ್ದ ಮತಿಘಟ್ಟ ಸುತ್ತಮುತ್ತಲಿನ ಏಳೆಂಟು ಗ್ರಾಮಗಳಾದ ಗಾಂಧಿನಗರ, ಚಟ್ಟಸಂದ್ರ, ಮದಾಪುರ, ಬಿಳಗಿಹಳ್ಳಿ, ಮಲ್ಲೇನಹಳ್ಳಿ, ದೊಡ್ಡಪಾಳ್ಯ, ಸೋರಲಮಾವು, ಬಂದ್ರೆಹಳ್ಳಿ ಗ್ರಾಮದ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು ಗ್ರಂಥಾಲಯವನ್ನು ಮತಿಘಟ್ಟದಲ್ಲೇ ಉಳಿಸಬೇಕು ಎಂದು ಮನವಿ ಮಾಡಿದ್ದಾರೆ.

      ಮತಿಘಟ್ಟ ಗ್ರಾಮದಲ್ಲಿ 400ಮನೆಗಳಿದ್ದು 1500ಸಾವಿರ ಜನಸಂಖ್ಯೆ ಇದೆ, ಅಲ್ಲದೆ ಕೋಡಿಪಾಳ್ಯ, ಬಿಳಿಗೆಹಳ್ಳಿ, ಸೋರಲಮಾವು ಸೇರಿದಂತೆ ಏಳೆಂಟು ಗ್ರಾಮದ ಜನರು ಗ್ರಂಥಾಲಯಕ್ಕೆ ಬಂದು ಹೋಗುತ್ತಿದ್ದಾರೆ, ಅಲ್ಲದೆ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಗ್ರಂಥಾಲಯದ ಸೌಲಭ್ಯ ಪಡೆಯುತ್ತಿದ್ದರು, ಪಶು ಆಸ್ಪತ್ರೆ, ಪೋಲಿಸ್ ಉಪಠಾಣೆ, ರೈತಸಂಪರ್ಕ ಕೇಂದ್ರ, ರಾಷ್ಟ್ರೀಕೃತ ಬ್ಯಾಂಕ್‍ಗಳು ಇದ್ದು ಸಾವಿರಾರು ಜನ ದಿನನಿತ್ಯ ಗ್ರಾಮಕ್ಕೆ ಬಂದು ಹೋಗುತ್ತಿದ್ದಾರೆ, ಸಾರ್ವಜನಿಕರು ಗ್ರಂಥಾಲಯಕ್ಕೆ ಬಂದು ಕುಳಿತು ತಮ್ಮ ಬಿಡುವಿನ ವೇಳೆಯನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದರು, ಆದರೆ, ಗ್ರಂಥಾಲಯವನ್ನು ಯಾವುದೇ ಜನಸಂಪರ್ಕವಿಲ್ಲದ ಕುಗ್ರಾಮವಾದ ಯಳ್ಳೇನಹಳ್ಳಿಗೆ ವರ್ಗಾಯಿಸಿದ್ದು ಓದುಗರಿಗೆ ತೊಂದರೆಯಾಗಿದೆ ಎಂದು ಓದುಗರಾದ ದೊಡ್ಡಪಾಳ್ಯದ ಉಮೇಶ್, ಕರಿಯಪ್ಪ, ಧರಣೀಶ್, ಮಂಜುನಾಥ್, ಭಾನುಪ್ರಕಾಶ್ ಮುಂತಾದವರು ದೂರಿದ್ದಾರೆ.

      ಗ್ರಂಥಾಲಯಗಳನ್ನು ಶಾಲಾ ಆವರಣಕ್ಕೆ ಸ್ಥಳಾಂತರಿಸಿರುವುದರಿಂದ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ, ಗ್ರಾಮಸ್ಥರು ಬಂದು ಗ್ರಂಥಾಲಯದಲ್ಲಿ ಕುಳಿತು ಚರ್ಚೆಯಲ್ಲಿ ತೊಡಗುವುದರಿಂದ ಪಾಠ-ಪ್ರವಚನಗಳಿಗೆ ಅಡ್ಡಿಯಾಗುತ್ತಿದೆ ಆದ್ದರಿಂದ ಗ್ರಂಥಾಲಯ ಇಲಾಖೆಯ ಈ ಕ್ರಮ ಅವೈಜ್ಞಾನಿಕವಾಗಿ ಎಂದು ಹಲವು ಶಿಕ್ಷಕರು ದೂರಿದ್ದಾರೆ.

(Visited 41 times, 1 visits today)
Previous Articleಅಕ್ರಮ ಮರಳು ಸಾಗಾಣೆ ಲಾರಿ ವಶ
Next Article ಅಪಘಾತ : ಶಾಲಾ ವಾಹನ ಚಾಲಕನಿಗೆ ಗಾಯ
News Desk Benkiyabale

Related Posts

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm news

ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

July 22, 2026 5:05 pm news

ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 22, 2026 5:04 pm news
ತಾಜಾ ಸುದ್ಧಿಗಳು
news

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm
news

ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

July 22, 2026 5:05 pm
news

ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 22, 2026 5:04 pm
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm
news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm
news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm
Our Youtube Channel
Our Picks

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm

ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

July 22, 2026 5:05 pm

ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 22, 2026 5:04 pm

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

By News Desk BenkiyabaleJuly 22, 2026 5:07 pm

ಗುಬ್ಬಿ: ತಾಲೂಕು ಬಿದರೆಹಳ್ಳ ಕಾವಲ್ ನಲ್ಲಿರುವ ಹೆಚ್.ಎ.ಎಲ್‌ಗೆ ಹೆಚ್ಚುವರಿ ಭೂಮಿಗಾಗಿ ರೈತರ ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಸಾಮಾಜಿಕ ಅರಣ್ಯ,…

ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

July 22, 2026 5:05 pm

ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 22, 2026 5:04 pm

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.