BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
  • ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
  • ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » 227 ಕೋಟಿ ರೂಗಳ 5641 ವಿವಿಧ ಅಭಿವೃದ್ಧಿ ಕಾಮಗಾರಿಗಳು ಪೂರ್ಣ
Trending

227 ಕೋಟಿ ರೂಗಳ 5641 ವಿವಿಧ ಅಭಿವೃದ್ಧಿ ಕಾಮಗಾರಿಗಳು ಪೂರ್ಣ

By News Desk BenkiyabaleUpdated:June 12, 2020 6:52 pm

ಮಧುಗಿರಿ:

      ಉಪವಿಭಾಗದ ಲೋಕೋಪಯೋಗಿ ವಿಭಾಗ ವ್ಯಾಪ್ತಿಯಲ್ಲಿ 2019-20 ನೇ ಸಾಲಿನಲ್ಲಿ ಒಟ್ಟು 227 ಕೋಟಿ ರೂಗಳ 5641 ವಿವಿಧ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿದ್ದು, ಕೆಲವು ಪ್ರಗತಿಯಲ್ಲಿವೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.

      ಪಟ್ಟಣದ ಸಿರಾಗೇಟ್‍ನಲ್ಲಿ ಶುಕ್ರವಾರ ನೂತನ ಲೋಕೋಪಯೋಗಿ ವಿಭಾಗೀಯ ಕಚೇರಿ ಉದ್ಘಾಟಿಸಿ ಮಾತನಾಡಿದರು. 2020-21 ನೇ ಸಾಲಿನಲ್ಲಿ ಬಜೆಟ್‍ನಲ್ಲಿ ಇವುಗಳ ದುರಸ್ತಿ ಕಾಮಗಾರಿಗಳಿಗೆ ಮೊದಲ ಆದ್ಯತೆ ನೀಡಿ ತುರ್ತು ದುರಸ್ಥಿಗಾಗಿ 750 ಕೋಟಿ ಬಿಡುಗಡೆ ಮಾಡಿ ಕೆಲಸ ಕೈಗೆತ್ತಿಕೊಂಡಿದ್ದು, ಬಜೆಟ್ ಅನುಮೋದನೆಗೆ ಹೋಗುವ ಸಮಯದಲ್ಲಿ ಮಾರ್ಚ್‍ನಲ್ಲಿ ಕರೊನಾ ಹಾವಳಿಯಿಂದಾಗಿ ಇಡೀ ದೇಶವೇ ಲಾಕ್‍ಡೌನ್ ಸಮಸ್ಯೆಗೆ ಸಿಲುಕಿದ್ದರಿಂದ ಕಾಮಗಾರಿಗಳ ಪ್ರಗತಿಗೆ ಹಿನ್ನಡೆಯಾಗಿದೆ.

      ಲಾಕ್‍ಡೌನ್ ವೇಳೆಯಲ್ಲಿ ಕಾರ್ಮಿಕರು ತಮ್ಮ ತಮ್ಮ ರಾಜ್ಯಗಳಿಗೆ ಮರಳಿರುವುದರಿಂದ ಹೊರ ರಾಜ್ಯದ ಕಾರ್ಮಿಕರ ಕೊರತೆಯೂ ಕಾಮಗಾರಿ ವಿಳಂಬಕ್ಕೆ ಕಾರಣವಾಗಿದೆ. ಕಾರ್ಮಿಕರ ಲಭ್ಯತೆಯ ನಂತರ ಕಾಮಗಾರಿಗಳನ್ನು ಪೂರ್ಣ ಪ್ರಮಾಣದಲ್ಲಿ ಹಮ್ಮಿಕೊಳ್ಳಲಾಗುವುದು ಎಂದರು.

      ಪಟ್ಟಣದಲ್ಲಿ 3.55 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಲೋಕೋಪಯೋಗಿ ಇಲಾಖೆಯ ಕಟ್ಟಡವು ಬಹಳಷ್ಟು ಸುಂದರವಾಗಿದ್ದು, ಜನತೆ ತೊಂದರೆ ಅನುಭವಿಸಬಾರದೆಂಬ ಉದ್ದೇಶದಿಂದ ಕಚೇರಿಯನ್ನು ಉದ್ಘಾಟಿಸಲಾಗಿದೆ. ಮುಂದಿನ ದಿನಗಳಲ್ಲಿ ಒಂದೇ ಸೂರಿನಲ್ಲಿ ಲೋಕೋಪಯೋಗಿ ಇಲಾಖೆಯ ಕಚೇರಿಗಳು ಕಾರ್ಯ ನಿರ್ವಹಿಸಲಿವೆ ಎಂದರು.

      ಸಂಸದ ಜಿ.ಎಸ್. ಬಸವರಾಜು ಮಾತನಾಡಿ 35 ವರ್ಷಗಳ ಹಿಂದೆ ಚಿನ್ನದ ನಾಡಾಗಿದ್ದ ಮಧುಗಿರಿಯು ಸತತ ಬರಗಾಲದಿಂದಾಗಿ ಜಯಮಂಗಲಿ, ಸುವರ್ಣಮುಖಿ ನದಿಗಳು ಹರಿಯದೇ ಇಂದು ಸೊರಗಿ ಹೋಗಿದೆ. ಎತ್ತಿನಹೊಳೆ ಯೋಜನೆಯಡಿ ನಿಗದಿಯಾಗಿರುವ 24 ಟಿಎಂಸಿ ನೀರು ಸಾಕಾಗುವುದಿಲ್ಲ. ಇದರ ಜೊತೆ ಪರ್ಯಾಯವಾಗಿ ಕುಮಾರಧಾರದಿಂದ 8 ಟಿಎಂಸಿ, ಗುರುತ್ವಾಕರ್ಷಣೆಯ ಮೂಲಕ 7 ಟಿಎಂಸಿ ನೀರು ಸೇರಿ ಹೆಚ್ಚುವರಿಯಾಗಿ 15 ಟಿಎಂಸಿ ಬರುವುದರಿಂದ ಮಧುಗಿರಿಗೆ 3, ತುಮಕೂರಿಗೆ 2.5, ಗುಬ್ಬಿಗೆ 0.5, ಚಿಕ್ಕನಾಯಕನಹಳ್ಳಿಗೆ 3, ತಿಪಟೂರಿಗೆ 3 ಪಾವಗಡಕ್ಕೆ 2 ಟಿಎಂಸಿ ನೀರು ದೊರೆಯುವುದರಿಂದ ಸಮಗ್ರ ನೀರಾವರಿಗೆ ಒತ್ತು ನೀಡಿದಂತಾಗುತ್ತದೆ. ಇದರ ಬಗ್ಗೆ ಸಣ್ಣ ನೀರಾವರಿ ಸಚಿವರು ಮತ್ತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ ಎಂದರು.

      ಅಲೆಮಾರಿ ಮತ್ತು ಕಾಡುಗೊಲ್ಲರ ಜನಾಂಗಕ್ಕೆ 4 ಸಾವಿರ ಮನೆಗಳು, ತಾಲೂಕಿನ ಹೋಬಳಿ ಕೇಂದ್ರಗಳಿಗೆ ತಲಾ 1 ಸಾವಿರದಂತೆ 5 ಸಾವಿರ ಮನೆಗಳು, ಪುರಸಭೆ ವ್ಯಾಪ್ತಿಗೆ 1500 ಮನೆಗಳು 2.50 ಲಕ್ಷ ರೂಗಳ ಸಹಾಯಧನದೊಂದಿಗೆ ಕೇಂದ್ರ ಸರ್ಕಾರದ ಯೋಜನೆಯಡಿ ಮಂಜೂರಾಗಿದ್ದು, ಮುಂದಿನ ಎರಡೂವರೆ ವರ್ಷದಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಮಾತನಾಡಿ ಈ ಭಾಗವು ಸತತ ಬರಗಾಲ ಪೀಡಿತ ಪ್ರದೇಶವಾಗಿದೆ. ಎರಡು ಪ್ರಮುಖ ಖಾತೆಗಳನ್ನು ಹೊಂದಿರುವ ಡಿಸಿಎಂ ಗೋವಿಂದ ಕಾರಜೋಳರವರು ಈ ಭಾಗಕ್ಕೆ ಹೆಚ್ಚಿನ ಪ್ರೀತಿ, ವಿಶ್ವಾಸ ತೋರಲಿ ಎಂದರು.

      ಶಾಸಕ ಎಂ.ವಿ. ವೀರಭದ್ರಯ್ಯ ಮಾತನಾಡಿ ಮಧುಗಿರಿ ಕ್ಷೇತ್ರವು ಸತತ ಬರಗಾಲಕ್ಕೆ ತುತ್ತಾಗಿದ್ದು, ಅತ್ಯಂತ ಹಿಂದುಳಿದ ಪ್ರದೇಶವಾಗಿದೆ. ಇಬ್ಬರೂ ಮಂತ್ರಿಗಳು ಹೆಚ್ಚಿನ ಅನುಧಾನ ನೀಡುವಂತೆ ಮನವಿ ಮಾಡಿದರು.

      ಈ ಸಂದರ್ಭದಲ್ಲಿ ಜಿ.ಪಂ. ಅಧ್ಯಕ್ಷೆ ಲತಾ ರವಿಕುಮಾರ್, ಉಪಾಧ್ಯಕ್ಷೆ ಶಾರದ ನರಸಿಂಹಯ್ಯ, ಸಿಇಓ ಶುಭ ಕಲ್ಯಾಣ್, ಎಂಎಲ್ಸಿ ತಿಪ್ಪೇಸ್ವಾಮಿ, ತಾ.ಪಂ. ಅಧ್ಯಕ್ಷೆ ಇಂದಿರಾ ದೇನಾನಾಯ್ಕ, ಲೋಕೋಪಯೋಗಿ ಇಲಾಖೆಯ ಇಇ ವಿರುಪಾಕ್ಷಪ್ಪ, ಎಇಇ ಹೊನ್ನೇಶಯ್ಯ, ಉಪವಿಭಾಗಾಧಿಕಾರಿ ಡಾ. ನಂದಿನಿದೇವಿ, ತಹಶೀಲ್ದಾರ್ ಡಾ. ವಿಶ್ವನಾಥ್, ಇಓ ದೊಡ್ಡಸಿದ್ದಯ್ಯ, ಪುರಸಭೆ ಸದಸ್ಯರಾದ ಎಂ.ಆರ್.ಜಗನ್ನಾಥ್, ಎಂ.ಎಲ್.ಗಂಗರಾಜು ಇದ್ದರು.

(Visited 8 times, 1 visits today)
Previous Articleಮಧುಗಿರಿ : ಮದುವೆಗೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಹಲ್ಲೆ!!
Next Article ಮಧುಗಿರಿ : ಕೆ.ಸಿ.ರೊಪ್ಪ ಕೊರೊನಾ ಕೇಸ್ ಪತ್ತೆ : ಸಿಇಓ ಪರಿಶೀಲನೆ!!
News Desk Benkiyabale

Related Posts

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm news
ತಾಜಾ ಸುದ್ಧಿಗಳು
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm
news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm
news

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
news

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
Our Youtube Channel
Our Picks

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

By News Desk BenkiyabaleAugust 25, 2026 3:57 pm

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರೀಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ…

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.