BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : ಸಿದ್ದಗಂಗಾ ಮಠದ ದ್ವಾರದಲ್ಲಿ ಕಲ್ಪಶುದ್ಧಿ ಸ್ಯಾನಿಟೈಸ್ ಘಟಕ
Trending

ತುಮಕೂರು : ಸಿದ್ದಗಂಗಾ ಮಠದ ದ್ವಾರದಲ್ಲಿ ಕಲ್ಪಶುದ್ಧಿ ಸ್ಯಾನಿಟೈಸ್ ಘಟಕ

By News Desk BenkiyabaleUpdated:June 15, 2020 6:09 pm

ತುಮಕೂರು:

      ಕೊರೊನಾ ಮಹಾಮಾರಿಯಿಂದ ಪಾರಾಗುವ ಸಲುವಾಗಿ ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡುವ ಭಕ್ತರಿಗಾಗಿ ಸ್ಯಾನಿಟೈಜೇಶನ್, ಕಲ್ಪಶುದ್ಧಿ ಸ್ಯಾನಿಟರಿ ಘಟಕ (ಗೇಟ್ ವೇ)ವನ್ನು ಸ್ಥಾಪಿಸಲಾಗಿದೆ.

      ಈ ಕಲ್ಪಶುದ್ಧಿ ಸ್ಯಾನಿಟರ್ ಘಟವನ್ನು ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಉದ್ಘಾಟಿಸಿದರು.
ಸಂಜೀವಿನಿ ರಕ್ತನಿಧಿ ಕೇಂದ್ರದ ಅರುಣ್‍ಕುಮಾರ್ ಕೊಡುಗೆಯಾಗಿ ನೀಡಿರುವ ಸ್ಯಾನಿಟೈಸ್ ಗೇಟ್ ವೇಯನ್ನು ಎಸ್‍ಐಟಿ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿ ಚಿದಾನಂದ್ ಸ್ಥಾಪಿಸಿದ್ದು, ಮಠಕ್ಕೆ ಬರುವ ಭಕ್ತಾದಿಗಳಿಗೆ ಸ್ವಯಂ ಚಾಲಿತವಾಗಿ ಈ ಘಟಕದ ಉಪಕರಣ ಸ್ಯಾನಿಟೈಸ್ ಮಾಡಲಿದೆ.

      ಈ ಘಟಕ ಉದ್ಘಾಟಿಸಿದ ನಂತರ ಮಾತನಾಡಿದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಕ್ಯಾತ್ಸಂದ್ರದಿಂದ ಶ್ರೀಮಠಕ್ಕೆ ಪ್ರವೇಶ ಪಡೆಯುವ ವಸ್ತುಪ್ರದರ್ಶನದ ಮುಂಭಾಗದ ಗೇಟ್ ಬಳಿ ಈ ಸ್ಯಾನಿಟೈಸ್ ಗೇಟ್ ವೇ ಸ್ಥಾಪಿಸಲಾಗಿದೆ. ಈ ಬೂತ್‍ನಲ್ಲಿನ ಉಪಕರಣ ಮನುಷ್ಯನಿಗೆ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಿದೆ. ಹೀಗಾಗಿ ಮಠಕ್ಕೆ ಬರುವ ಭಕ್ತರಿಗೆ ಪ್ರತ್ಯೇಕವಾಗಿ ಸ್ಯಾನಿಟೈಸ್ ಹಾಕುವ ಅವಶ್ಯಕತೆ ಇಲ್ಲ ಎಂದರು.

      ಮಠಕ್ಕೆ ಬರುವ ಭಕ್ತಾದಿಗಳಿಗೆ ಈ ಗೇಟ್‍ನಲ್ಲೆ ಥರ್ಮಲ್ ಸ್ಕ್ಯಾನಿಂಗ್ ಸಹ ಮಾಡಲಾಗುವುದು ಎಂದು ಅವರು ಹೇಳಿದರು.
ಶ್ರೀಮಠಕ್ಕೆ ಆಗಮಿಸುವ ಭಕ್ತರು ಕಡ್ಡಾಯಾಗಿ ಮಾಸ್ಕ್ ಧರಿಸಿರಬೇಕು. ಜತೆಗೆ ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜತೆಗೆ ಮುಂಜಾಗ್ರತಾ ಕ್ರಮಗಳನ್ನು ಚಾಚೂತಪ್ಪದೇ ಪಾಲಿಸಬೇಕು ಎಂದು ಅವರು ಮನವಿ ಮಾಡಿದರು.

      ಸಂಜೀವಿನಿ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ಎಸ್‍ಐಟಿ ಕಾಲೇಜಿನ ಬಯೋಟೆಕ್ನಾಲಜಿಯ ವಿದ್ಯಾರ್ಥಿ ಚಿದಾನಂದ್ ಮತ್ತು ಸ್ನೇಹಿತರು ಒಟ್ಟಾಗಿ ಸೇರಿ ಕೊರೊನಾ ಸಂದರ್ಭದಲ್ಲಿ ಈ ಘಟಕ ಸ್ಥಾಪನೆ ಮಾಡಿರುವುದು ಉತ್ತಮ ಕಾರ್ಯವಾಗಿದೆ ಎಂದು ಶ್ಲಾಘಿಸಿದರು.

      ಪ್ರತಿಯೊಬ್ಬ ಇಂಜಿನಿಯರ್‍ಗಳು ಸಹ ಪ್ರಾಯೋಗಿಕವಾಗಿ ಆಲೋಚಿಸಿ ಸಮಸ್ಯೆ ಬಂದಾಗ ಸಮಾಜಕ್ಕೆ ಕೊಡುಗೆ ನೀಡುವುದು ಅತ್ಯವಶ್ಯಕ. ಈ ನಿಟ್ಟಿನಲ್ಲಿ ಎಲ್ಲ ತಾಂತ್ರಿಕ ಹಿನ್ನೆಲೆಯುಳ್ಳವರಿಗೆ ಈ ಕಾರ್ಯ ಮಾದರಿಯಾಗಿದೆ ಎಂದರು.

      ಸ್ಯಾನಿಟೈಸ್ ಗೇಟ್ ವೇ ಬಹಳ ಹೆಚ್ಚು ಜನಸಂದಣಿ ಇರುವ ಮಾಲ್, ಚಿತ್ರಮಂದಿರ ಹಾಗೂ ದೇವಸ್ಥಾನಗಳಲ್ಲಿ ಅತ್ಯವಶ್ಯಕವಾಗಿದೆ. ಈ ಘಟಕದ ಸೌಲಭ್ಯವನ್ನು ಶ್ರೀಮಠಕ್ಕೆ ಬರುವ ಎಲ್ಲ ಭಕ್ತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

      ಎಸ್‍ಐಟಿ ಕಾಲೇಜಿನ ಸಿಇಓ ಶಿವಕುಮಾರಯ್ಯ ಮಾತನಾಡಿ, ನಮ್ಮ ಕಾಲೇಜಿನ ಜೈವಿಕ ತಂತ್ರಜ್ಞಾನದ ವಿದ್ಯಾರ್ಥಿ ಚಿದಾನಂದ್ ಕೊರೊನಾ ಸಂದರ್ಭದಲ್ಲಿ ಜೈವಿಕ ಸ್ಯಾನಿಟೈಸರ್‍ನ್ನು ಕಂಡು ಹಿಡಿದು ಪ್ರಥಮ ಬಾರಿಗೆ ತುಮಕೂರಿನ ಅಂತರಸನಹಳ್ಳಿ ಮಾರುಕಟ್ಟೆಯ ಮುಂಭಾಗದಲ್ಲಿ ಅಳವಡಿಸಿದ್ದರು. ಈಗ ಶ್ರೀಮಠದ ಆವರಣದಲ್ಲಿ ಸಂಜೀವಿನಿ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಉಚಿತವಾಗಿ ಈ ಘಟಕವನ್ನು ಅಳವಡಿಸಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

      ಇಂಜಿನಿಯರಿಂಗ್ ವಿದ್ಯಾರ್ಥಿಗಳು ಕೇವಲ ಪಾಠ, ಪ್ರವಚನಕ್ಕೆ ಸೀಮಿತವಾಗದೆ ಸಮಾಜಕ್ಕೆ ಅತ್ಯವಶ್ಯಕವಾಗಿರುವ ಕೊಡುಗೆಯನ್ನು ನೀಡಲು ಮುಂದಾಗಬೇಕು. ಈ ನಿಟ್ಟಿನಲ್ಲಿ ಚಿದಾನಂದ್ ಮತ್ತು ಸ್ನೇಹಿತರು ಕಾರ್ಯೋನ್ಮುಖರಾಗಿದ್ದಾರೆ. ಇವರ ಕಾರ್ಯಕ್ಷಮತೆ ಯುವ ವಿದ್ಯಾರ್ಥಿ ಸಮುದಾಯಕ್ಕೆ ಮಾದರಿಯಾಗಿದೆ ಎಂದರು.

      ಈ ಸಂದರ್ಭದಲ್ಲಿ ಎಸ್‍ಐಟಿ ನಿರ್ದೇಶಕ ಡಾ. ಎಂ.ಎನ್. ಚನ್ನಬಸಪ್ಪ, ಪ್ರಾಂಶುಪಾಲರಾದ ಶಿವಾನಂದ್, ಪುನೀತ್, ಅರುಣ್‍ಕುಮಾರ್, ಚಿದಾನಂದ್, ಸುರೇಶ್, ಗೌರಿಶಂಕರ್, ಲೋಹಿತ್ ಮತ್ತಿತರರು ಉಪಸ್ಥಿತರಿದ್ದರು.

(Visited 30 times, 1 visits today)
Previous Articleಮದುವೆ ಮಾಡದಕ್ಕೆ ತಂದೆಯನ್ನೇ ಕೊಂದ ಮಗ
Next Article ವಕ್ಫ್ ಆಡಳಿತ ಸಮಿತಿಗೆ ಚುನಾವಣೆ ನಡೆಸುವಂತೆ ಸದಸ್ಯರ ಒತ್ತಾಯ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.