BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
  • ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ
  • ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ
  • ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಡಿಕೆಶಿ ಪದಗ್ರಹಣ : ಯುವ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ
Trending

ಡಿಕೆಶಿ ಪದಗ್ರಹಣ : ಯುವ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

By News Desk BenkiyabaleUpdated:July 02, 2020 6:54 pm

ತುಮಕೂರು:

      ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಕ್ಷಣವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ತುಮಕೂರು ನಗರದಲ್ಲಿ ಹಬ್ಬದಂತೆ ಆಚರಿಸಿದರು

ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಆರ್.ರಾಜೇಂದ್ರ ಅವರ ಸಹಯೋಗದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಶಶಿ ಹುಲಿಕುಂಟೆಮಠ್ ಮತ್ತು ರಾಜೇಶ್ ದೊಡ್ಮನೆ ಅವರು ನಗರದ ಕನ್ನಡ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಯುವಕರು ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಸಮಾರಂಭ ನೇರ ಪ್ರಸಾರದಲ್ಲಿ ವೀಕ್ಷಿಸಲು ಎಲ್‍ಇಡಿ ಸ್ಕ್ರೀನ್ ಆಯೋಜನೆ ಮಾಡಿದ್ದರು. ಸುಮಾರು 200ಕ್ಕೂ ಹೆಚ್ಚು ಯುವಕರು ಮತ್ತು ಸೇವಾದಳದ ಪದಾಧಿಕಾರಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ವೀಕ್ಷಣೆ ಮಾಡಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಲಾಯಿತು.

      ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಶಶಿ ಹುಲಿಕುಂಟೆ ಮಠ್ ಮಾತನಾಡಿ, ಇಂದು ಡಿ.ಕೆ.ಶಿವಕುಮಾರ್ ಅವರ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತ 7,800ಕ್ಕೂ ಹೆಚ್ಚು ಸ್ಥಳಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಜನ, ಡಿಜಿಟಲ್ ಮತ್ತು ಝೂಮ್ ಸಂವಾದದ ಮೂಲಕ ಜನ ಪಾಲ್ಗೊಂಡಿದ್ದಾರೆ. ತುಮಕೂರು ನಗರವೂ ಸೇರಿದಂತೆ ಜಿಲ್ಲೆಯಲ್ಲೂ ಹೆಚ್ಚು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಭ್ರಮ ಪಡುತ್ತಿದ್ದಾರೆ ಎಂದರು.

     ಕೆಪಿಸಿಸಿ ನೂತನ ರಾಜ್ಯಾಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಬೆಂಬಲಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ನಿಂತಿದ್ದು, ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಾವೆಲ್ಲರೂ ಅವರ ಜೊತೆಯಲ್ಲಿದ್ದು, ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

      ಎಐಸಿಸಿ ಅಧ್ಯಕ್ಷರಾದ ಸೋನಿಯಾಗಾಂಧಿ ಮತ್ತು ಉಪಾಧ್ಯಕ್ಷರಾದ ರಾಹುಲ್ ಗಾಂಧಿ, ಕರ್ನಾಟಕ ಉಸ್ತುವಾರಿಗಳಾದ ವೇಣುಗೋಪಾಲ್ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆಗೆ ಕೆಪಿಸಿಸಿ ನೂತನ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕಾರ್ಯಾಧ್ಯಕ್ಷರನ್ನಾಗಿ ಈಶ್ವರಖಂಡ್ರೆ, ಸತೀಶ್ ಜಾರಕಿಹೊಳಿ ಮತ್ತು ಸಲೀಂ ಅಹಮ್ಮದ್ ಅವರನ್ನು ನೇಮಕ ಮಾಡಿದ್ದು, ಇವರೆಲ್ಲರಿಗೂ ಯುವ ಕಾಂಗ್ರೆಸ್ ಜೊತೆಯಲ್ಲಿದ್ದು, ಪೂರಕವಾಗಿ ಕೆಲಸ ಮಾಡಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ರಾಜ್ಯದ ಚುಕ್ಕಾಣಿ ಹಿಡಿಯಲಿದೆ ಎಂದು ಹೇಳಿದರು.

      ರಾಜೇಶ್ ದೊಡ್ಮನೆ ಮಾತನಾಡಿ, ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಆರ್.ರಾಜೇಂದ್ರ ಅವರ ಸಹಯೋಗದಲ್ಲಿ ಇಂದು ಕನ್ನಡ ಭವನದಲ್ಲಿ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಸಮಾರಂಭವನ್ನು ಎಲ್‍ಇಡಿ ಸ್ಕ್ರೀನ್ ಮೂಲಕ ವೀಕ್ಷಿಸಲು ಕಾರ್ಯಕ್ರಮ ಆಯೋಜಿಸಲಾಗಿದ್ದು, ಸುಮಾರು 200ಕ್ಕೂ ಹೆಚ್ಚು ಯುವಕರು ಭಾಗವಹಿಸಿ 7676366666 ಸಂಖ್ಯೆಗೆ ಕರೆ ಮಾಡುವ ಮೂಲಕ ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನು ಪಡೆದುಕೊಂಡು ಈ ವಿನೂತನ ಕಾರ್ಯಕ್ರಮಕ್ಕೆ ಬೆಂಬಲ ವ್ಯಕ್ತಪಡಿಸಿದರು ಎಂದು ತಿಳಿಸಿದರು.
ಯುವ ಕಾಂಗ್ರೆಸ್ ಉಪಾಧ್ಯಕ್ಷ ಇಲಾಹಿ ಸಿಖಂದರ್ ಮಾತನಾಡಿ, ಇಂದು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಪ್ರತಿಜ್ಞಾ ತೆಗೆದುಕೊಂಡಿದ್ದು, ಇವರ ಜೊತೆ ಕಾರ್ಯಾಧ್ಯಕ್ಷರಾಗಿ ಈಶ್ವರಖಂಡ್ರೆ, ಸತೀಶ್ ಜಾರಕಿಹೊಳಿ ಮತ್ತು ಸಲೀಂ ಅಹಮ್ಮದ್ ಅವರೂ ಸಹ ಪ್ರತಿಜ್ಞೆ ತೆಗೆದುಕೊಂಡಿದ್ದಾರೆ. ಇಂದಿನ ಈ ಪ್ರತಿಜ್ಞಾ ದಿನದ ಉದ್ದೇಶ ಡಿ.ಕೆ. ಶಿವಕುಮಾರ್ ಅವರ ಚಿಂತನೆ ಕೇವಲ ಅವರ ಪ್ರತಿಜ್ಞೆ ಅಲ್ಲ ರಾಜ್ಯದ ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಜ್ಞೆಯಾಗಿದೆ ಎಂದು ಹೇಳಿದರು.

     ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ನೂತನ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮತ್ತು ಕಾರ್ಯಾಧ್ಯಕ್ಷರುಗಳ ಜೊತೆಗಿದ್ದೇವೆ ಎಂಬುದನ್ನು ನಾವಿಂದು ಇಲ್ಲಿ ಪ್ರತಿಜ್ಞೆ ಮಾಡುವ ಮೂಲಕ ತೋರಿಸಿದ್ದೇವೆ ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ರಾಜೇಶ್ ದೊಡ್ಮನೆ, ಮೋಹನ್, ಎಸ್ಟಿ ಘಟಕದ ಅಧ್ಯಕ್ಷ ತು.ಬಿ.ಮಲ್ಲೇಶ್ ದರ್ಶನ್, ರಾಘವೇಂದ್ರ ಸ್ವಾಮಿ, ಶಿವಾಜಿ, ಆಕಾಶ್, ಅನಿಲ್‍ಕುಮಾರ್, ಪರಶುರಾಮ್, ಇ.ಟಿ.ನಾಗರಾಜು, ಮಾದೇವಗೌಡ್ರು, ಸುಶೀಲ್ ಕುಮಾರ್, ಬಿ.ಜಿ.ಲಿಂಗರಾಜು, ಜಿ.ಎಲ್.ಗೌಡ, ಸೇರಿದಂತೆ ಸೇವಾದಳದ ಪದಾಧಿಕಾರಿಗಳು, ಕಿಸಾನ್ ಘಟಕ, ಮಹಿಳಾ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.

(Visited 18 times, 1 visits today)
Previous Articleತುಮಕೂರಿನಲ್ಲಿ 183 ಕ್ಕೆ ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ!!
Next Article ಮನೆ ಮುಂದೆ ಚಿರತೆ ಪ್ರತ್ಯಕ್ಷ : ಆತಂಕದಲ್ಲಿ ಜನತೆ!!
News Desk Benkiyabale

Related Posts

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm news
ತಾಜಾ ಸುದ್ಧಿಗಳು
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm
news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm
news

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
news

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
news

ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ

August 08, 2026 4:26 pm
Our Youtube Channel
Our Picks

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

By News Desk BenkiyabaleAugust 08, 2026 5:13 pm

ತುಮಕೂರು: ಕೇಂದ್ರ ಸರಕಾರ ಸುಮಾರು ೩೦೦೦ ಕೋಟಿ ರೂಖರ್ಚು ಮಾಡುತ್ತಿರುವ ರಾಷ್ಟಿçÃಯ ಹೆದ್ದಾರಿ ೨೦೬ರಲ್ಲಿ ತಿಪಟೂರು ಸಮೀಪದ ಅಯ್ಯನ ಭಾವಿ…

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.