ತುಮಕೂರು:

      ತುಮಕೂರು ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಗಳನ್ನ ಸೀಲ್ ಡೌನ್ ಮಾಡಲಾಗಿದೆ.

      ಠಾಣೆಯ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಇಂದು ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಗಳೆರಡನ್ನೂ ಸೀಲ್ ಡೌನ್ ಮಾಡಲಾಗಿದೆ.

      ಹಾಗೆ, ಇಂದು ಮೀಸಲು ಪಡೆಯ 4 ಮಂದಿ ಸಿಬ್ಬಂದಿಗಳಿಗೆ ಸೋಂಕು ದೃಢಪಟ್ಟಿರುವುದು ಖಚಿತವಾಗಿದೆ.

      ನಿನ್ನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಸಿಬ್ಬಂದಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಎಸ್ಪಿ ಕಚೇರಿ ಸಂಪೂರ್ಣ ಸೀಲ್ ಡೌನ್ ಮಾಡಲಾಗಿತ್ತು.

      ಈ ಕುರಿತಂತೆ ಸ್ಪಷ್ಟನೆ ನೀಡಿರುವ ಜಿಲ್ಲಾ ಎಸ್ಪಿ ವಂಶಿಕೃಷ್ಣ, ಎರಡು ದಿನಗಳ ಕಾಲ ಕಚೇರಿಯಲ್ಲಿ ಯಾವುದೇ ಕೆಲಸಗಳು ನಡೆಯುವುದಿಲ್ಲ ಎಂದಿದ್ದರು.

      

 

(Visited 372 times, 1 visits today)