BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ
  • ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ
  • ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ
  • ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ
  • ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗುಬ್ಬಿ: ಗ್ರಾ.ಪಂ.ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರ ತೀರ್ಮಾನ!!
Trending

ಗುಬ್ಬಿ: ಗ್ರಾ.ಪಂ.ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರ ತೀರ್ಮಾನ!!

By News Desk BenkiyabaleUpdated:July 25, 2020 6:54 pm

ಗುಬ್ಬಿ:

      ಮೂಲಭೂತ ಸೌಲಭ್ಯ ಒದಗಿಸುವ ಅಭಿವೃದ್ಧಿ ಕೆಲಸಗಳೇ ಮರೀಚಿಕೆಯಾದ ಹಿನ್ನಲೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಮತ ಬಹಿಷ್ಕರಿಸಲು ತಾಲ್ಲೂಕಿನ ಜಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜವರೇಗೌಡನಪಾಳ್ಯ ಗ್ರಾಮಸ್ಥರು ಒಕ್ಕರಲಿನ ತೀರ್ಮಾನಕ್ಕೆ ನಿಂತಿದ್ದಾರೆ.

      ಜಿ.ಹೊಸಹಳ್ಳಿ ಗ್ರಾಮ ಪಂಚಾಯಿತಿಯ ಬ್ಯಾಡಗೆರೆ ಕ್ಷೇತ್ರಕ್ಕೆ ಒಳಪಟ್ಟ ಮೂರು ಗ್ರಾಮಗಳಿಂದ ಒಟ್ಟು 700 ಮತದಾರರಿದ್ದಾರೆ. ಪಂಚಾಯಿತಿ ನಿಯಮಾನುಸಾರ ಈ ಕ್ಷೇತ್ರ ಎರಡು ಸದಸ್ಯತ್ವ ಪಡೆಯಬೇಕಿದೆ. ಈ ಬಗ್ಗೆ ಕಳೆದ 5 ವರ್ಷದ ಹಿಂದೆಯೇ ಪ್ರಸ್ತಾಪ ಮಾಡಿ ಮತದಾನ ಬಹಿಷ್ಕಾರದ ಪ್ರತಿಭಟನೆ ನಡೆಸಲಾಗಿತ್ತು. ಯಾವುದೇ ಮೂಲ ಸವಲತ್ತು ಪಡೆಯಲು ಬಹಿಷ್ಕಾರದ ಅಸ್ತ್ರ ಬಳಸಬೇಕಿದೆ. ಚುನಾವಣಾ ಸಂದರ್ಭದಲ್ಲಿ ಮಾತ್ರವೇ ಒಂದಿಷ್ಟು ಕೆಲಸ ಮಾಡಿಕೊಡುವ ಅಧಿಕಾರಿಗಳು ಪ್ರತಿಭಟನೆಗೆ ಮಾತ್ರ ಬೆಲೆ ನೀಡುತ್ತಿದ್ದಾರೆ. ಮೌಖಿಕ ಚರ್ಚೆ ಮಾಡಿದರೆ ವರ್ಷನಾಗಟ್ಟಲೇ ಯಾವ ಕೆಲಸ ಮಾಡಿಕೊಡುವುದಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

      ಇದೇ ಗ್ರಾಮ ಪಂಚಾಯಿತಿಯಲ್ಲಿ 470 ಮತದಾರರು, 550 ಜನಸಂಖ್ಯೆ ಇರುವ ಗೋಪಾಲಪುರ ಕ್ಷೇತ್ರಕ್ಕೂ ಎರಡು ಸದಸ್ಯ ಸ್ಥಾನ ಕಲ್ಪಿಸಿದ್ದಾರೆ. ಸಾಮಾನ್ಯ ಮೀಸಲಿನ ಈ ಕ್ಷೇತ್ರಗಳಿಗೆ ದೊರೆತ ಸ್ಥಾನಮಾನ ಬ್ಯಾಡಗೆರೆ ಕ್ಷೇತ್ರಕ್ಕೆ ದೊರೆಕಿಲ್ಲ. ಬ್ಯಾಡಗೆರೆ, ಜವರೇಗೌಡನಪಾಳ್ಯ ಹಾಗೂ ಎಕೆ ಕಾಲೋನಿ ಮೂರು ಗ್ರಾಮಗಳು ಸೇರಿ ಸರಿ ಸುಮಾರು 800 ಮತದಾರರು ಬರಲಿದ್ದಾರೆ. ಆದರೂ ಒಂದೇ ಕ್ಷೇತ್ರವೆಂದು ಪರಿಗಣಿಸಿ ಯಾವುದೇ ಅಭಿವೃದ್ದಿ ಕೆಲಸಕ್ಕೂ ಒಂದು ಸಾವಿರಕ್ಕೂ ಅಧಿಕ ಜನಸಂಖ್ಯೆ ಗಣನೆ ಬರುತ್ತಿಲ್ಲ. ಈ ನಿಟ್ಟಿನಲ್ಲಿ ಮೂಲ ಸವಲತ್ತಿನ ಕೊರತೆ ಎದ್ದು ಕಾಣುತ್ತಿದೆ. ಈ ಬಗ್ಗೆ ಅಧಿಕಾರಿಗಳು ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ಸ್ಥಳೀಯ ಜೆ.ಎಂ.ನರಸಿಂಹಮೂರ್ತಿ ಕಿಡಿಕಾರಿದರು.

      ಈ ಮೊದಲು ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿ ಮೂರ್ನಾಲ್ಕು ಕಿಮೀ ದೂರದಿಂದ ನೀರು ತರುವ ಅನಿವಾರ್ಯ ಬಂದೊದಗಿತ್ತು. ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಪುರಸ್ಕರಿಸಿರಲಿಲ್ಲ. ಅದೇ ಸಂದರ್ಭಕ್ಕೆ ಬಂದ ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕರಿಸುವ ಫಲಕದೊಂದಿಗೆ ಪ್ರತಿಭಟನೆ ಮಾಡಿದ ವೇಳೆ ಗ್ರಾಮಕ್ಕೆ ಧಾವಿಸಿದ ಅಂದಿನ ತಹಸೀಲ್ದಾರ್ ಸಿದ್ದಪ್ಪ ಕುಡಿಯುವ ನೀರಿಗೆ ವಾರದೊಳಗೆ ವ್ಯವಸ್ಥೆ ಮಾಡುವ ಕೆಲಸ ಮಾಡಿದ್ದರು. ನಂತರ ಯಾವುದೇ ಕೆಲಸ ಅನುಷ್ಠಾನಕ್ಕೂ ಚುನಾವಣೆ ಬರುವವರಿಗೆ ಕಾಯುವ ದುಸ್ಥಿತಿ ಅಧಿಕಾರಿ ವರ್ಗ ತಂದಿರುವುದು ವಿಪರ್ಯಾಸ. ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿಯೇ ಕೆಲಸ ಮಾಡುವ ಜಡ್ಡು ಅಧಿಕಾರಿಗಳಲ್ಲಿ ಕಾಣಿಸುತ್ತಿದೆ ಎಂದು ಸ್ಥಳೀಯ ಮಹೇಶ್ ಸಿಡಿಮಿಡಿಗೊಂಡರು.

      ಅಭಿವೃದ್ಧಿ ಕುಂಟಿತಕ್ಕೆ ಕ್ಷೇತ್ರ ವಿಂಗಡಣೆ ಮಾಡದಿರುವುದು ಕಾರಣವಾಗಿದೆ. ಸಾವಿರ ಜನಸಂಖ್ಯೆಯ ಕ್ಷೇತ್ರಕ್ಕೆ ನಿಯಮಾನುಸಾರ ಎರಡು ಕ್ಷೇತ್ರ ಪನರ್‍ವಿಂಗಡಿಸಬೇಕಿದೆ. ಗ್ರಾಮ ಪಂಚಾಯಿತಿ ಚುನಾವಣಾ ಸಮೀಪಿಸುತ್ತಿದೆ. ಈ ಬಗ್ಗೆ ಕ್ರಮವಹಿಸಲು ಗ್ರಾಮಸ್ಥರು ಕಳೆದ ಜನವರಿ ತಿಂಗಳಲ್ಲಿ ತಹಸೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳ ಮನವಿ ಸಲ್ಲಿಸಿದ್ದರು. ಕೋವಿಡ್-19 ವೈರಸ್ ಹಿನ್ನಲೆ ಈ ಮನವಿಗೆ ಬೆಲೆ ಸಿಕ್ಕಿಲ್ಲ. ಈಚೆಗೆ ಮಳೆ ಬಂದು ಇಡೀ ಜವರೇಗೌಡನಪಾಳ್ಯ ಗ್ರಾಮದ ಎಲ್ಲಾ ರಸ್ತೆಗಳು ಸಂಪೂರ್ಣ ಕೆಸರುಮಡುವಾಗಿದ್ದ ಬಗ್ಗೆ ತಿಳಿಸಲಾಗಿತ್ತು. ಆದರೂ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿಲ್ಲ. ಈ ನಿಟ್ಟಿನಲ್ಲಿ ಮುಂಬರುವ ಗ್ರಾಮ ಪಂಚಾಯಿತಿ ಮತದಾನ ಬಹಿಷ್ಕರಿಸುವ ಬಗ್ಗೆ ಗ್ರಾಮಸ್ಥರು ತೀರ್ಮಾನಿಸಲು ಸಭೆ ನಡೆಸಲಿದ್ದಾರೆ. ಈ ಬಗ್ಗೆ ತಾಲ್ಲೂಕು ಆಡಳಿತ ಶೀಘ್ರ ಕ್ರಮವಹಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

(Visited 8 times, 1 visits today)
Previous Articleತುಮಕೂರು : ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ!!
Next Article ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯ ಸೀಲ್ ಡೌನ್!!
News Desk Benkiyabale

Related Posts

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm news
ತಾಜಾ ಸುದ್ಧಿಗಳು
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm
news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm
news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm
news

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
news

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
Our Youtube Channel
Our Picks

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

By News Desk BenkiyabaleAugust 26, 2026 4:41 pm

ಪಾವಗಡ: ಹೆಸರಾಂತ ಮಕ್ಕಳ ನೇತ್ರ ತಜ್ಞರಾದ ಡಾ.ವಸುಧಾ ನರೇಶ್ ರವರು ಮಕ್ಕಳಿಗೆ ನೇತ್ರ ತಪಾಸಣೆಯನ್ನು ನಡೆಸಿದರು. ಈ ಶಿಬಿರಕ್ಕೆ ಬಹು…

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.