Author: News Desk Benkiyabale

ಹುಳಿಯಾರು: ಹುಳಿಯಾರು ಹೋಬಳಿ ಕಂಪನಹಳ್ಳಿ ಬಳಿಯ ತೆಂಗಿನ ತೋಟವೊಂದರಲ್ಲಿ ನೀರಾ ಇಳಿಸುತ್ತಿದ್ದ ರೈತನ ಮೇಲೆ ಅಬಕಾರಿ ಅಧಿಕಾರಿಗಳು ಶುಕ್ರವಾರ ದಿಡೀರ್ ದಾಳಿ ಮಾಡಿದ್ದರು. ನೀರಾ ಇಳಿಸುತ್ತಿದ್ದ ರೈತ ಈರಣ್ಣ ಅವರನ್ನು ಬಂಧಿಸಿ ನೀರಾ ಇಳಿಸಲು ಬಳಸುತ್ತಿದ್ದ ಪರಿಕರಗಳನ್ನು ವಶ ಪಡಿಸಿಕೊಂಡರು. ವಿಚಾರ ತಿಳಿದ ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಘಟನಾ ಸ್ಥಳಕ್ಕೆ ದೌಡಾಯಿಸಿ ಅಬಕಾರಿ ಜೀಪಿಗೆ ಅಡ್ಡ ಕುಳಿತು ಈರಣ್ಣ ಅವನ್ನು ಬಿಡಿಸಿಕೊಂಡ ಪ್ರಕರಣ ನಡೆದಿದೆ. ರೈತ ಹೋರಾಟಗಾರ ಪ್ರೊ.ಎಂ.ಡಿ.ನAಜುAಡಸ್ವಾಮಿ ಅವರ ನೀರಾ ಚಳುವಳಿಯಿಂದ ಪ್ರಭಾವಿತರಾಗಿ ಹುಳಿಯಾರಿನ ಈರಣ್ಣ ಕಳೆದ ಮೂರು ದಶಕಗಳಿಂದಲೂ ಈ ಭಾಗದಲ್ಲಿ ನೀರಾ ಇಳಿಸುವ ಮೂಲಕ ನೀರಾ ಈರಣ್ಣನೆಂದೆ ಪ್ರಖ್ಯಾತರಾಗಿದ್ದಾರೆ. ಎಂದಿನAತೆ ಶುಕ್ರವಾರವೂ ಸಹ ನೀರಾ ಇಳಿಸುವಾಗ ಏಕಾಏಕಿ ಅಬಕಾರಿ ಇನ್ಸ್ಪೆಕ್ಟರ್ ಎ.ಕೆ.ನವೀನ್ ಅವರು ತಮ್ಮ ಹತ್ತನ್ನೆರಡು ಮಂದಿ ಪಡೆಯ ಜೊತೆ ದಾಳಿ ಮಾಡಿ ಈರಣ್ಣ ಅವನ್ನು ಬಂಧಿಸಿ ಅಲ್ಲಿದ್ದ ನೀರಾ, ನೀರಾ ಇಳಿಸಲು ಬಳಸುತ್ತಿದ್ದ ಪರಿಕರಗಳನ್ನು ವಶ ಪಡಿಸಿಕೊಂಡರು. ವಿಚಾರ ತಿಳಿದ ರೈತ ಸಂಘದ…

Read More

ತುಮಕೂರು: ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಲ್ಲಿಯೇ ತಮ್ಮ ಜೀವನದ ಗುರಿಯನ್ನು ನಿರ್ಧರಿಸಿ ಅದನ್ನು ತಲುಪಲು ಶ್ರಮವಹಿಸಿ ಕಲಿತು ಮುನ್ನಡೆಯಿರಿ ಎಂದು ಎಸ್‌ಎಸ್‌ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಎಸ್ ರವಿಪ್ರಕಾಶ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾನಿಲಯದಲ್ಲಿ ಎಲೆಕ್ಟಿçಕಲ್ ಆಂಡ್ ಎಲೆಕ್ಟಾçನಿಕ್ಸ್ ಇಂಜಿನಿಯರಿAಗ್ ಹಾಗೂ ಜಿಟಿಟಿ ಫೌಂಡೇಷನ್ ಬೆಂಗಳೂರು ಇವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ “ಎಲೆಕ್ಟಿçಕ್ ವೆಹಿಕಲ್ ಟೆಕ್ನಾಲಜಿ” ಎಂಬ ವಿಷಯದ ಕುರಿತು ಇಂದಿನಿAದ ಆರಂಭಗೊAಡ 30ದಿನಗಳ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮ ಜಗತ್ತಿಗೆ ಅಗತ್ಯವಿರುವ ತಂತ್ರಜ್ಞಾನವನ್ನು ಅರಿತುಕೊಂಡು ಮುನ್ನಡೆಯಬೇಕು ಆಗ ಮಾತ್ರ ನೀವು ಯಶಸ್ವಿಯಾಗುತ್ತೇವೆ. ಹಾಗಾಗಿ ವಿದ್ಯಾರ್ಥಿಗಳು ಪ್ರತಿನಿತ್ಯ ಕಲಿಯಬೇಕು.ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುಬೇಕು ಹಾಗೂ ಕೈಗಾರಿಕೆಗಳಿಗೆ ಬೇಕಾದ ಕೌಶಲವನ್ನು ಕಲಿಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಎಲೆಕ್ಟಿçಕ್ ಅಂಡ್ ಎಲೆಕ್ಟಾçನಿಕ್ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ.ರಾಜೇಶ್ ಕಾಮತ್ ಮಾತನಾಡಿ, ಕಾಲೇಜಿನಲ್ಲಿ ನಡೆಯುವ ತರಬೇತಿ ಕಾರ್ಯಗಾರಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ಭಾಗವಹಿಸಿ ಉತ್ತಮ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು. ನಿಮ್ಮಲ್ಲಿ…

Read More

ತುಮಕೂರು : ಇಂದು ತುಮಕೂರು ನಗರದಲ್ಲಿ ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ವಿ.ವೆಂಕಟೇಶ್‌ರವರ ಮನೆಗೆ ತುಮಕೂರು ಜಿಲ್ಲೆಯ ಭೋವಿ ಸಮಾಜದ ಕೆಲ ಮುಖಂಡರು ತೆರಳಿ ಅಭಿನಂದಿಸಿದರು. ಅಭಿನಂದನೆಗಳನ್ನು ಸಲ್ಲಿಸಿ ಉದ್ಯಮಿ, ಭೋವಿ ಸಮಾಜದ ಮುಖಂಡರು, ಸಮಾಜ ಸೇವಕರಾದ ಗೋಲ್ಡ್ ದೀಪು ಮಾತನಾಡಿ ನಮ್ಮ ಭೋವಿ ಸಮುದಾಯವು ಅತ್ಯಂತ ಹಿಂದುಳಿದ ಸಮುದಾಯವಾಗಿದ್ದು ಇಂತಹ ಸಮುದಾಯದಲ್ಲಿ ಹುಟ್ಟಿದಂತಹ ಕೆಲವಷ್ಟೇ ಮಂದಿ ಮಾತ್ರ ಸಮಾಜಮುಖಿಯಾಗಿ ಹಾಗೂ ಸಮಾಜದಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸಲು ಸಾಧ್ಯ ಅದರಂತೆ ಇತ್ತೀಚೆಗೆ ನಡೆದ ತುಮುಲ್ ಅಧ್ಯಕ್ಷೀಯ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ, ಆ ಪ್ರಯುಕ್ತ ಇಂದು ನಮ್ಮ ಸಮಾಜದ ಮುಖಂಡರುಗಳೊAದಿಗೆ ಶಾಸಕರು ಹಾಗೂ ತುಮುಲ್ ಅಧ್ಯಕ್ಷರಾದ ಹೆಚ್.ವಿ.ವೆಂಕಟೇಶ್‌ರವರನ್ನು ಇಂದು ಅಭಿನಂದಿಸುತ್ತಿದ್ದೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಭೋವಿಪಾಳ್ಯ ಉಮೇಶ್, ಆಕಾಶ್, ಶ್ರೀನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Read More

ತುಮಕೂರು: ಕರ್ನಾಟಕ ರಾಜ್ಯ ಹಿರಿಯ ಬಿಜೆಪಿ ಕಾರ್ಯಕರ್ತರ ವೇದಿಕೆ ಹಾಗು ಬಿ.ಎಸ್.ಯಡಿಯೂರಪ್ಪ ಅಭಿಮಾನಿ ಬಳಗದವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 83ನೇ ಹುಟ್ಟು ಹಬ್ಬವನ್ನು ಎಸ್.ಎಸ್.ಪುರಂನ ಉಮಾಮಹಾ ಗಣಪತಿ ದೇವಾಲಯದ ಬಳಿ ಅನಾಥ ಮಕ್ಕಳಿಗೆ ಉಪಹಾರ ನೀಡುವ ಮೂಲಕ ಆಚರಿಸಲಾಯಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 83ನೇ ಹುಟ್ಟು ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದ ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್,ಬಿ.ಎಸ್.ಯಡಿಯೂರಪ್ಪ ಓರ್ವ ಹುಟ್ಟು ಹೋರಾಟಗಾರರು,ಸೈಕಲ್‌ಮೇಲೆ ಶಿಕಾರಿಪುರದಿಂದ ವಿಧಾನಸೌಧದವರೆಗೆ ಯಾತ್ರೆ ಕೈಗೊಂಡು, ಬಿಜೆಪಿ ಪಕ್ಷವನ್ನು ಹಂತ ಹಂತವಾಗಿ ಅಧಿಕಾರಕ್ಕೆ ತಂದವರು. ಹಿಡಿದ ಕೆಲಸವನ್ನು ಎಂದಿಗೂ ಕೈಬಿಡದೆ ನಡೆಸುತ್ತಿದ್ದ ಅವರ ಜೀವನ ಇತರೆ ರಾಜಕಾರಣಿಗಳಿಗೆ ಮಾದರಿ.83ನೇ ವಯಸ್ಸಿನಲ್ಲಿಯೂ ಪಕ್ಷವನ್ನು ಮುನ್ನೆಡೆಸುವ ಪ್ರಾಮಾಣಿಕ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಭಗವಂತ ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಶುಭ ಹಾರೈಸಿದರು. ಹಿರಿಯ ಬಿಜೆಪಿ ಕಾರ್ಯಕರ್ತರ ವೇದಿಕೆ ಸಂಚಾಲಕ ಸದಾಶಿವಯ್ಯ ಮಾತನಾಡಿ,ಕರ್ನಾಟಕ ರಾಜ್ಯದ ಅಭಿವೃದ್ದಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕೊಡುಗೆ ಅಪಾರವಾಗಿದೆ.1972 ಶಿಕಾರಿಪುರದಲ್ಲಿ ಜನಸಂಘದ ಜಿಲ್ಲಾಧ್ಯಕ್ಷರಾಗಿ ಸಾರ್ವಜನಿಕ ಸೇವೆಗೆ…

Read More

ತುಮಕೂರು: ಐತಿಹಾಸಿಕ ಪ್ರಸಿದ್ದ ಸಿದ್ದಗಂಗೆಯಲ್ಲಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿAದ ನಡೆಯಿತು. ಶ್ರೀಕ್ಷೇತ್ರ ಸಿದ್ದಗಂಗೆಯ ಆರಾಧ್ಯದೈವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವಕ್ಕೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಬೆಳಿಗ್ಗೆ 11.55ಕ್ಕೆ ಸರಿಯಾಗಿ ಶುಭ ಲಗ್ನದಲ್ಲಿ ರಥದ ಗಾಲಿಗೆ ತೆಂಗಿನಕಾಯಿ ಒಡೆದು ಹಾಗೂ ಶ್ರೀಸ್ವಾಮಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು. ರಥೋತ್ಸವದಲ್ಲಿ ಶ್ರೀಕ್ಷೇತ್ರದ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ, ಶಾಸಕ ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಸಿಇಓ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜಾ, ವಿವಿಧ ಮಠಾಧೀಶರುಗಳು ಸೇರಿದಂತೆ ಅನೇಕ ಗಣ್ಯರು, ಭಕ್ತಾದಿಗಳು ಪಾಲ್ಗೊಂಡು ರಥವನ್ನು ಮುಂದಕ್ಕೆ ಎಳೆದು ಭಕ್ತಿ ಸಮರ್ಪಿಸಿದರು. ಇದಕ್ಕೂ ಮುನ್ನ ರಥಕ್ಕೆ ಗಣಪತಿ ಪೂಜೆ, ಸ್ವಸ್ತಿ ಪುಣ್ಯಾಃ, ಕಳಸಗಳ ಆರಾಧನೆ, ರಥಾಂಗ ಪೂಜೆ ಸೇರಿದಂತೆ ವಿವಿಧ ಪೂಜೆ ಸಲ್ಲಿಸಿ ಶ್ರೀಕ್ಷೇತ್ರದ…

Read More

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಪುಣ್ಯಕ್ಷೇತ್ರಗಳಲ್ಲೊಂದಾದ ತಮ್ಮಡಿಹಳ್ಳಿ ಶ್ರೀ ಪರ್ವತ ಮಲ್ಲಿಕಾರ್ಜುನಸ್ವಾಮಿ ಬೆಟ್ಟಕ್ಕೆ ಬೆಂಕಿ ತಗುಲಿ ಅಪಾರ ಪ್ರಮಾಣದ ಅರಣ್ಯ ಹಾಗೂ ಪೈಪ್‌ಲೈನ್‌ಗಳಿಗೆ ಹಾನಿಯಾದ ಘೆಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿ ಕುಪ್ಪೂರು-ತಮ್ಮಡಿಹಳ್ಳಯಲ್ಲಿನ ಶ್ರೀಪರ್ವತಮಲ್ಲಿಕಾರ್ಜುನ ಬೆಟ್ಟದ ಸುತ್ತಲಿನ ಕುರುಚಲು ಅರಣ್ಯ ಪ್ರದೇಶಕ್ಕೆ ಮಂಗಳವಾರ ಮದ್ಯಾಹ್ನ 1 ಗಂಟೆಯ ಸಮಯದಲಿ ಆಕಸ್ಮಿಕ ಬೆಂಕಿ ಕಾಣಸಿಕೊಂಡು ಕ್ಷಣಾರ್ಧದಲ್ಲಿ ಬೆಟ್ಟದ ಸುತ್ತಲೂ ವ್ಯಾಪಿಸಿದೆ. ಬೆಟ್ಟವು ಸುಮಾರು 100 ಎಕರೆ ವ್ಯಾಪ್ತಿಯ ವಿಸ್ತೀಣದವಿದ್ದು, ಜಾಲಿಗಿರಿ ಮರಗಳ ಬೀಡಾಗಿದೆ, ಇದರ ಜೊತೆಗೆ ಮುತ್ತುಗ ಮತ್ತಿತರ ಕಾಡುಮರಗಳಿಂದ ಬೆಟ್ಟ ಆವೃತಗೊಂಡಿದ್ದು ಯತೇಚ್ಚವಾಗಿ ದರ್ಬೆ ಹುಲ್ಲಿನ ಬಿಡಾಗಿದೆ. ಬೆಂಕಿಯ ಕೆನ್ನಾಲಿಗೆಯು ಒಣಗಿದ ದರ್ಬೆಹುಲ್ಲಿಗೆ ವ್ಯಾಪಿಸಿದ ಕಾರಣ ವೇಗವಾಗಿ ಎಲ್ಲಡೆ ವಿಸ್ತರಣೆಗೊಂಡಿದೆ. ಬೆಂಕಿ ಕಾಣಸಿಕೊಂಡ ತಕ್ಷಣ ಸ್ಥಳೀಯರು ಹಾಗೂ ಬೆಟ್ಟದ ಕೆಳಭಾಗದಲ್ಲಿನ ವಿರಕ್ತಮಠದ ಸಿಬ್ಬಂದಿಗಳು ಬೆಂಕಿ ನಂದಿಸಲು ಯತ್ನಿಸಿದರೂ ಸಫಲವಾಗದ ಕಾರಣ ತಕ್ಷಣ ಆಗ್ನಿಶಾಮಕ ವಾಹನ್ಕಕೆ ಕರೆಮಾಡಿ ಸ್ವಲ್ಪ ಸಮಯದಲ್ಲಿಯೇ ವಾಹನ ಆಗಮಿಸಿ ಸುಮಾರು 2 ಗಂಟೆಗಳ ಕಾಲ ಸಿಬ್ಬಂದಿ ಹರಸಾಹಸದಿಂದ ಬೆಂಕಿಯನ್ನು…

Read More

ತುಮಕೂರು: ದೇಶದಲ್ಲಿ ಸಾಮಾಜಿಕ ಚಿಂತಕರ ಸಂಖ್ಯೆ ಕಡಿಮೆಯಾಗುತ್ತಿದೆ, ವ್ಯಕ್ತಿಗತ ಚಿಂತನೆಗಳು ಮೇಲುಗೈ ಪಡೆಯುತ್ತಿವೆ. ಇಂತಹ ಸಂದರ್ಭದೊಳಗೆ ಸಾಮಾಜಿಕ ಸಹಿಷ್ಣುತೆಯ ಲೇಖಕರ ಅಗತ್ಯ ಹೆಚ್ಚಿದೆ ಎಂದು ಹಿರಿಯ ಜಾನಪದ ವಿದ್ವಾಂಸರಾದ ಡಾ.ಜಿ.ವಿ. ಆನಂದಮೂರ್ತಿ ವಿಶ್ಲೇಷಿಸಿದರು. ಜನಮುಖಿ ಬಳಗ ತುಮಕೂರು, ಗೋಪಿಕಾ ಪ್ರಕಾಶನ ಬೆಂಗಳೂರು ಇವರ ಸಹಯೋಗದಲ್ಲಿ ತುಮಕೂರಿನ ಜನ ಚಳವಳಿ ಕೇಂದ್ರದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಹಡವನಹಳ್ಳಿ ವೀರಣ್ಣಗೌಡ ಅವರ ಉರಿವ ದೀಪದ ಕೆಳಗೆ ಕಥಾ ಸಂಕಲನ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು ದೇಶದ ಉದ್ದಗಲಕ್ಕೂ ಇಂದು ಸಾಂಸ್ಕೃತಿಕ ಅರಾಜಕತೆ ಹೆಚ್ಚುತ್ತಿದೆ. ಸಾಂಸ್ಕೃತಿಕ ಮತ್ತು ರಾಜಕೀಯ ಅರಾಜಕತೆಯ ನಡುವೆ ಸಾಹಿತ್ಯ ಕ್ಷೇತ್ರದಲ್ಲೂ ಅರಾಜಕತೆ ಸೃಷ್ಟಿಯಾಗಿದೆ. ಸಂವಿಧಾನದ ಅಭಿವ್ಯಕ್ತಿ ಸ್ವಾತಂತ್ರö್ಯದ ದಮನವಾಗುತ್ತಿದೆ. ಹಿಂದಿನ ಚಿಂತನೆಗಳು ಮತ್ತು ಚರ್ಚೆಗಳು ಈಗ ನಡೆಯುತ್ತಿಲ್ಲ ಎಂದು ವಿಷಾದಿಸಿದರು. ಹಿಂದೆ ಚಳವಳಿಗೂ ಭಾಷೆಗೂ ಅವಿನಾಭಾವ ಸಂಬAಧವಿತ್ತು. ಈಗ ಭಾಷಾ ಚಿಂತಕರು ಮತ್ತು ಸಾಮಾಜಿಕ ಚಿಂತಕರ ಕೊರತೆಯನ್ನು ಕಾಣುತ್ತಿದ್ದೇವೆ. ಬಡತನ, ಜಾತಿಯತೆ, ಅಸ್ಪೃಷ್ಯತೆ ವಿರುದ್ಧ ಹೋರಾಡಲು ಸಾಮಾಜಿಕ ಚಳುವಳಿ ಹುಟ್ಟಿದ್ದವು. ಈ ಎಲ್ಲ ಹೋರಾಟಗಳು…

Read More

ಕೊರಟಗೆರೆ: ತಾಲೂಕಿನ ಚಿನ್ನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೆದ್ಮೇನಹಳ್ಳಿ ಸುಕದಹಳ್ಳಿ ಗ್ರಾಮಗಳ ನಡುವೆ ಇರುವ ಇತಿಹಾಸ ಪ್ರಸಿದ್ಧ ಈ ಹೊಳೆ ನಂಜುAಡೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ಅದ್ದೂರಿಯಾಗಿ ನಡೆದ ಜಾತ್ರಾ ಮಹೋತ್ಸವ ಪ್ರತಿ ವರ್ಷವೂ ಶಿವರಾತ್ರಿ ಹಬ್ಬದಂದು ನಡೆಯುತ್ತದೆ ಈ ಜಾತ್ರೆಯಲ್ಲಿ ಸಾವಿರಾರು ಭಕ್ತಾದಿಗಳು ಶ್ರೀ ಹೊಳೆ ನಂಜುAಡೇಶ್ವರ ಸ್ವಾಮಿಯ ವಿಶೇಷ ಹೂಗಳಿಂದ ಅಲಂಕಾರ ಗೊಂಡಿರುವ ಶ್ರೀ ನಂಜುAಡೇಶ್ವರ ಸ್ವಾಮಿಯನ್ನ ಕಣ್ತುಂಬಿ ಕೊಳ್ಳುತ್ತಾ ದರ್ಶನ ಪಡೆದು ಪುನೀತರಾಗುತ್ತಾರೆ.ಇನ್ನು ಚಿನ್ನಹಳ್ಳಿ ಗ್ರಾಮದ ಜಗದೀಶ್ ಕುಟುಂಬದ ವತಿಯಿಂದ ಪ್ರತಿ ವರ್ಷವೂ ಬರುವ ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆಯನ್ನು ಬೆಳಗ್ಗಿನಿಂದ ಸಂಜೆವರೆಗೂ ನೆರವೇರಿಸುತ್ತಾ ಬಂದಿದ್ದಾರೆ.ಕೇAದ್ರ ಸಚಿವ ವಿ. ಸೋಮಣ್ಣನವರು ಈ ಹೊಳೆ ನಂಜುAಡೇಶ್ವರ ಸ್ವಾಮಿಯ ಪರಮ ಭಕ್ತರು ಪ್ರತಿ ವರ್ಷವೂ ಕುಟುಂಬ ಸಮೇತರಾಗಿ ಬಂದು ದೇವರ ದರ್ಶನ ಪಡೆಯುತ್ತಾರೆ ಇಂದು ಕೂಡ ಕೇಂದ್ರ ಸಚಿವ ವಿ. ಸೋಮಣ್ಣನವರ ಧರ್ಮಪತ್ನಿ ಶೈಲಜಾಸೋಮಣ್ಣ ಸನ್ನಿಧಾನಕ್ಕೆ ಭೇಟಿ ನೀಡಿ ಶ್ರೀ ನಂಜುAಡೇಶ್ವರನ ದರ್ಶನ ಪಡೆದು ಭಕ್ತಾದಿಗಳಿಗೆ ಶಿವರಾತ್ರಿ ಹಬ್ಬದ ಶುಭಾಶಯಗಳನ್ನ ಕೊರಿದರು ಹಾಗೆಯೇ…

Read More

ತುರುವೇಕೆರೆ: ತಾಲೂಕಿನ ಶೆಟ್ಟಿಗೊಂಡನಹಳ್ಳಿಯಲ್ಲಿ ಸ್ಥಾಪಿತವಾಗಿರುವ ರಾಜ್ಯದ ಪ್ರತಿಷ್ಠಿತ ಹಳ್ಳಿಕಾರ್ ಮಠದ ಸರ್ವತೋಮುಖ ಅಭಿವೃದ್ಧಿಗೆ ತಾವು ಕಂಕಣಬದ್ದವಾಗಿರುವುದಾಗಿ ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ತಾಲೂಕಿನ ಶೆಟ್ಟಿಗೊಂಡನಹಳ್ಳಿಯಲ್ಲಿ ಶ್ರೀ ಹಳ್ಳಿಕಾರ್ ಮಠ ಟ್ರಸ್ಟ್ ವತಿಯಿಂದ ನಡೆದ ಶ್ರೀ ಹಳ್ಳಿಕಾರ್ ಮಠ ಹಾಗೂ ಶ್ರೀ ಕೃಷ್ಣ ದೇವಾಲಯದ ದ್ವಿತೀಯ ವಾರ್ಷಿಕೋತ್ಸವ ಹಾಗೂ ಅಲ್ಲಿನ ಮಠದ ಸ್ವಾಮೀಜಿಗಳಾದ ಶ್ರೀ ಬಾಲಕೃಷ್ಣಾನಂದ ಸ್ವಾಮೀಜಿಯವರ ದ್ವಿತೀಯ ಪಟ್ಟಾಭಿಷೇಕ ಮಹೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದ ಅವರು ರಾಜ್ಯದಾದ್ಯಂತ ಹಳ್ಳಿಕಾರ್ ಸಮುದಾಯವಿದೆ. ಆದರೆ ನಮ್ಮ ತಾಲೂಕಿನಲ್ಲೇ ರಾಜ್ಯದ ಮೊದಲ ಹಳ್ಳಿಕಾರ್ ಮಠ ಸ್ಥಾಪನೆ ಮಾಡಿರುವುದು ಹೆಮ್ಮೆಯ ಸಂಗತಿ. ಈ ಸಮುದಾಯ ಕಳೆದ ಮೂವತ್ತು ವರ್ಷಗಳಿಂದಲೂ ತಮ್ಮ ಬೆಂಬಲಕ್ಕೆ ನಿಂತಿದೆ. ಅದನ್ನು ಮರೆಯಲು ಸಾಧ್ಯವಿಲ್ಲ. ಈಗಾಗಲೇ ತಾವು ಮಠದ ಅಭಿವೃದ್ಧಿಗೆ ಅನುದಾನ ನೀಡಿದ್ದೇನೆ. ಮುಂಬರುವ ದಿನಗಳಲ್ಲೂ ಮಠದ ಸರ್ವತೋಮುಖ ಅಭಿವೃದ್ದಿಗಾಗಿ 25 ಲಕ್ಷ ರೂಗಳ ಅನುದಾನವನ್ನು ನೀಡುವುದಾಗಿ ಶಾಸಕ ಎಂ.ಟಿ.ಕೃಷ್ಣಪ್ಪ ಭರವಸೆ ನೀಡಿದರು. ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ್ ಹಾಲಪ್ಪ ಮಾತನಾಡಿ, ಒಕ್ಕಲಿಗರು…

Read More

ತುಮಕೂರು: ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಅಂಗವಿಕಲ ಪ್ರತ್ಯೇಕ ಸಚಿವಾಲಯ, ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದ್ಯತೆ ನೀಡಬೇಕು ಹಾಗೂ 2025- 26ನೇ ಸಾಲಿನ ಬಜೆಟ್‌ನಲ್ಲಿ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಜಿಲ್ಲಾ ಅಂಗವಿಕಲರ ಕಲ್ಯಾಣ ವೇದಿಕೆ ಒತ್ತಾಯಿಸಿದೆ. ಅಂಗವಿಕಲರ ಕಲ್ಯಾಣ ಇಲಾಖೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬೇರ್ಪಡಿಸಬೇಕು, ಅಂಗವಿಕಲರಿಗೆ ಮೀಸಲಿಟ್ಟ ಶೇ.5 ರ ಅನುದಾನ ಸಮರ್ಪಕವಾಗಿ ಬಳಸಬೇಕು, ಅಂಗವಿಕಲರ ಕುಂದುಕೊರತೆ ಸಭೆಯು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಸಬೇಕು ಎಂದು ವೇದಿಕೆ ಅಧ್ಯಕ್ಷ ಸಿ.ಗಂಗರಾಜು ಪ್ರಧಾನ ಕಾರ್ಯದರ್ಶಿ ಇನಾಯಿತ್ ಖಾನ್ ಒತ್ತಾಯಿಸಿದ್ದಾರೆ. ಸ್ವಯಂ ಉದ್ಯೋಗ ದೊರಕಿಸುವ ಆಧಾರ್ ಯೋಜನೆಯ ಸಹಾಯಧನವನ್ನು 1 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಬೇಕು, ಮಾಸಾಶನ ಹೆಚ್ಚಳ ಮಾಡಬೇಕು, ಸ್ವಯಂ ಉದ್ಯೋಗ ಕೈಗೊಳ್ಳಲು ತರಬೇತಿ ಸಂಸ್ಥೆ ಪ್ರಾರಂಭಿಸಬೇಕು, ಅಂಗವಿಕಲರು ತಯಾರಿಸಿದ ಉತ್ಪನ್ನ ಮಾರಾಟಕ್ಕೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವುದು, ಅಂಗವಿಕಲರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಹಾಗೂ ಕೆಎಸ್‌ಆರ್‌ಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಬೇಕು ಎಂದು ಅವರು ಸಚಿವರುಗಳಾದ ಡಾ.…

Read More