ತುಮಕೂರು : ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷಿö್ಮ, ಶಕ್ತಿ, ಯುವನಿಧಿ, ಗೃಹಜ್ಯೋತಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ವಿಳಂಬ ಧೋರಣೆ ತೋರಬಾರದು ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರು ತಿಳಿಸಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ 2024-25ನೇ ಸಾಲಿನ 3ನೇ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಬAಧಪಟ್ಟ ಇಲಾಖಾ ಅಧಿಕಾರಿಗಳು ಈ ಯೋಜನೆಗಳ ಕುರಿತು ಮಾಹಿತಿ ನೀಡುತ್ತಾ, ಗೃಹಲಕ್ಷಿö್ಮ ಯೋಜನೆಯಡಿ ಜಿಲ್ಲೆಯಲ್ಲಿ ಆಗಸ್ಟ್ 2023ರಿಂದ ಅಕ್ಟೋಬರ್ 2024ರವರೆಗೆ 90,38,371 ಫಲಾನುಭವಿಗಳಿಗೆ ಒಟ್ಟು 1807.67 ಕೋಟಿ ರೂ. ಪಾವತಿಸಲಾಗಿದೆ. ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 2023 ಜೂನ್‌ನಿಂದ ಜನವರಿ 2025ರವರೆಗೆ 1164.14 ಲಕ್ಷ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು, ಇದರ ಒಟ್ಟು ಆದಾಯ 34184.97 ಲಕ್ಷ ರೂ.ಗಳಾಗಿದೆ. ಯುವನಿಧಿ ಯೋಜನೆಯಲ್ಲಿ ಜನವರಿ 2025 ಅಂತ್ಯಕ್ಕೆ 7743 ಯುವಜನರು ನೋಂದಣಿಯಾಗಿದ್ದು, 5425 ಜನರಿಗೆ ಡಿಬಿಟಿ ಮೂಲಕ 7.60,83,000 ರೂ. ಪಾವತಿಸಲಾಗಿದೆ.…
Author: News Desk Benkiyabale
ತುಮಕೂರು: ಶೈಕ್ಷಣಿಕ ನಗರ ಎಂದು ಪ್ರಸಿದ್ಧಿಯಾಗಿರುವ ತುಮಕೂರು ಜಿಲ್ಲೆಯಲ್ಲಿ ಏಳು ಇಂಜಿನಿಯರಿAಗ್ ಕಾಲೇಜು, ಮೂರು ಮೆಡಿಕಲ್ ಕಾಲೇಜುಗಳು, ಸುಮಾರು ಐಟಿಐ ಕಾಲೇಜುಗಳು, ಪಾಲಿಟೆಕ್ನಿಕ್ ಕಾಲೇಜುಗಳು, ಹಾಗೂ ತುಮಕೂರು ಯೂನಿವರ್ಸಿಟಿ ಇದ್ದು, ಸುಮಾರು 50 ರಿಂದ 60 ಸಾವಿರ ಜನರು ತುಮಕೂರಿನಿಂದ ಬೆಂಗಳೂರಿಗೆ ವಿವಿಧ ಐಟಿ ಕಂಪೆನಿಗಳಿಗೆ ಕೆಲಸಕ್ಕೆ ಹೋಗುತ್ತಿರುವುದರಿಂದ ತುಮಕೂರಿನಲ್ಲೇ ಐಟಿ ಹಬ್ ನಿರ್ಮಾಣ ಮಾಡುವ ಸಂಬAಧ ಈ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ನಿಕಟಪೂರ್ವ ಅಧ್ಯಕ್ಷ ಟಿ.ಜೆ. ಗಿರೀಶ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಏಷ್ಯಾ ಖಂಡದಲ್ಲಿಯೆ ಅತಿ ದೊಡ್ಡ ಕೈಗಾರಿಕಾ ಪ್ರದೇಶವನ್ನು ಹೊಂದಿರುವ ತುಮಕೂರು ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸಬೇಕು ಎಂದು ಕೋರಿದ್ದಾರೆ. ಮಹಾನಗರ ಪಾಲಿಕೆಯ ಸರಹದ್ದಿನಲ್ಲಿ ಬರುವ ಕೈಗಾರಿಕಾ ಪ್ರದೇಶಗಳ ಆಸ್ತಿ ತೆರಿಗೆಯನ್ನು ಪ್ರತ್ಯೇಕ ಕೈಗಾರಿಕಾ ವರ್ಗ ಮಾಡಿ ಕಮರ್ಷಿಯಲ್ ಹಾಗೂ ರೆಸಿಡೆನ್ಷಿಯಲ್ ಸ್ಲಾಬ್ ಗಿಂತ ಕಡಿಮೆ ಮಾಡುವ ಬೇಡಿಕೆಯು ಸರ್ಕಾರದ ಮುಂದಿದ್ದು, ಕೆಐಎಡಿಬಿಯಿಂದ ಮಹಾನಗರ ಪಾಲಿಕೆಗೆ ವರ್ಗಾವಣೆ…
ತುಮಕೂರು: ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ, ಸಾವಿತ್ರಿ ಪಾಯಿಪುಲೆ ಮಹಿಳಾ ಘಟಕದ ನಗರದ ಸ್ಲಂ ಭವನದಲ್ಲಿ ಪತ್ರಿಕಾ ಹೇಳಿಕೆ ಸಭೆ ಹಮ್ಮಿಕೊಳ್ಳಲಾಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸ್ಲಂ ಜನಾಂದೋಳನದ ರಾಜ್ಯ ಸಂಚಾಲಕರ ಎ.ನರಸಿಂಹಮೂರ್ತಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿಬಾಯಿಪುಲೆ ಮಹಿಳಾ ಸಂಘಟನೆಯಿAದ ಇದೇ ಫೆಬ್ರವರಿ 24 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸ್ಲಂ ಜನರ ಮೇಲಿನ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಹಾಗೂ ಖಾಸಗೀ ಮಾಲೀಕತ್ವದ ಕೊಳಚೆ ಪ್ರದೇಶಗಳ ಘೋಷಣೆಗೆ ತೊಡಕಾಗಿರುವ ಸಂವಿಧಾನ ವಿರೋಧಿ ವಸತಿ ಇಲಾಖೆ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಲು ಆಗ್ರಹಿಸಿ 2025-26ನೇ ಸಾಲಿನ ಬಜೆಟ್‌ನಲ್ಲಿ ಸ್ಲಂ ಜನರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಪಾಲು. 2023ರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ನೀಡಿರುವ ಪ್ರಣಾಳಿಕೆ ಭರವಸೆಗಳನ್ನು ಈಡೇರಿಸಲು ಒತ್ತಾಯಿಸಿ ಹಾಗೂ ಸ್ಲಂ ಜನರಿಗೆ ಪ್ರತ್ಯೇಕ ಸಚಿವಾಲಯ ಮತ್ತು ನಗರ ಉದ್ಯೋಗ ಖಾತ್ರಿ ಯೋಜನೆ ಘೋಷಣೆ ಸೇರಿದಂತೆ ನಿವೇಶನ…
ತುಮಕೂರು: ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಪಿ.ಆರ್. ಕುರಂದವಾಡ ಹಾಗೂ ಕಾರ್ಯದರ್ಶಿ ಟಿ.ಎನ್. ಶ್ರೀಕಂಠಸ್ವಾಮಿ ಅವರು ಭೇಟಿ ಮಾಡಿ ಜಿಲ್ಲೆಯ ವಾಣಿಜ್ಯ, ಕೈಗಾರಿಕಾ ಅಭಿವೃದ್ಧಿ ಹಾಗೂ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ವಿಚಾರವಾಗಿ ಬೇಡಿಕೆಗಳ ಪ್ರಸ್ತಾವನೆಯನ್ನು ಸಲ್ಲಿಸಿ, 2025-26 ನೇ ಸಾಲಿನ ಬಜೆಟ್ ನಲ್ಲಿ ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಶೈಕ್ಷಣಿಕ ನಗರ ಎಂದು ಪ್ರಸಿದ್ದಿಯಾಗಿರುವ ತುಮಕೂರು ಜಿಲ್ಲೆಯಲ್ಲಿ ಏಳು ಇಂಜನಿಯರಿAಗ್ ಕಾಲೇಜು, ಮೂರು ಮೆಡಿಕಲ್ ಕಾಲೇಜುಗಳು. ಸುಮಾರು ಐಟಿಐ ಕಾಲೇಜುಗಳು, ಪಾಲಿಟೆಕ್ನಿಕ್ ಕಾಲೇಜುಗಳು ಹಾಗೂ ತುಮಕೂರು ಯನಿರ್ವಸಿಟಿ ಇದ್ದು ಸುಮಾರು 50ರಿಂದ 60 ಸಾವಿರ ಜನರು ತುಮಕೂರಿನಿಂದ ಬೆಂಗಳೂರಿಗೆ ವಿವಿಧ ಐಟಿ ಕಂಪನಿಗಳಿಗೆ ಹೋಗುತ್ತಿರುವುದರಿಂದ ತುಮಕೂರಿನಲ್ಲೇ ಐಟಿ ಹಬ್ ನ್ನು ನಿರ್ಮಾಣ ಮಾಡಬೇಕು ಎಂದು ಕೋರಿದ್ದಾರೆ. ನಗರದ ಮಹಾನಗರ ಪಾಲಿಕೆಯ ಸರಹದ್ದಿನಲ್ಲಿ ಬರುವ ಕೈಗಾರಿಕೆಗಳಿಗೆ ಆಸ್ತಿತೆರಿಗೆಯನ್ನು ಏIಂಆಃ ಇಂದ ಮಹಾನಗರಪಾಲಿಕೆಗೆ ವರ್ಗಾವಣೆ ಮಾಡಿಕೊಂಡು ನಂತರ ಪ್ರತ್ಯೇಕ ಕೈಗಾರಿಕಾ ವರ್ಗಮಾಡಿ ಕಮರ್ಷಿಯಲ್ ಹಾಗೂ ರೆಸಿಡೆನ್‌ಷಿಯಲ್…
ತುರುವೇಕೆರೆ: ಪಟ್ಟಣದ ಆಸ್ತಿಗಳ ಮಾಲೀಕರು ಇ-ಖಾತೆ ಆಂದೋಲನ ಕಾರ್ಯಕ್ರಮದಲ್ಲಿ ತಮ್ಮ ಆಸ್ತಿಗಳ ಅಗತ್ಯ ಧಾಖಲೆಗಳನ್ನು ಪಟ್ಟಣ ಪಂಚಾಯ್ತಿಗೆ ಸಲ್ಲಿಸಿ ಇ -ಖಾತೆ ಮಾಡಿಸಿಕೊಳ್ಳಬೇಕೆಂದು ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಸ್ವಪ್ನ ನಟೇಶ್ ಮನವಿ ಮಾಡಿದರು. ಪಟ್ಟಣ ಪಂಚಾಯ್ತಿ ಕಚೇರಿಯಲ್ಲಿ ಇ.ಖಾತೆ ಆಂದೋಲನ ಕಾರ್ಯಕ್ರಮದ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರದ ಆದೇಶದಂತೆ ಯಾವ ಆಸ್ತಿಗಳ ಇ ಖಾತೆ ಮತ್ತು ಯಾವೆಲ್ಲಾ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಟ್ಟಿಲ್ಲ. ಅಂತಹ ಆಸ್ತಿಗಳನ್ನು ಪಟ್ಟಣದ ವ್ಯಾಪ್ತಿಯಲ್ಲಿನ ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಪ್ರಕರಣ 94 ಮತ್ತು ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ಪ್ರಕರಣ ವಿನಾಯಿತಿಗೊಳ ಪಟ್ಟಣ ಆಸ್ತಿಗಳನ್ನು ಹೊರತು ಪಡಿಸಿದ ಆಸ್ತಿಗಳು ತೆರಿಗೆ ವ್ಯಾಪ್ತಿಗೆ ಒಳಪಡುತ್ತವೆ, 110ರಲ್ಲಿ ಉಳಿದಂತಹ ಸರ್ಕಾರ ಅಥವಾ ಸರ್ಕಾರದ ನಿಗಮ ಮಂಡಳಿಗಳಿAದ ನೀಡಲಾದ ಹಕ್ಕು ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿ ಅಡಿ ನೀಡಲಾದ ಹಕ್ಕು ಪತ್ರ, ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ಬಡಾವಣೆಯಲ್ಲಿನ ಆಸ್ತಿಗಳನ್ನು ಅಧಿಕೃತ ಎಂದು ಪರಿಗಣಿಸಿದ್ದು, ಅಂತಹ…
ತುಮಕೂರು: ಬ್ಯಾಂಕ್ ಆಫ್ ಬರೋಡಾ ಗುರುವಾರ (20.02.2025) ರೂ. ತಮಕೂರು ಎಸ್ಪಿ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಥಮ ವಿಭಾಗದ ಗುಮಾಸ್ತರಾದ ಶ್ರೀ ರಮೇಶ್ ಕೋಲಿಯವರ ಪತ್ನಿ ಸುಧಾ ಕೋಲಿ ಅವರಿಗೆ ಪೊಲೀಸ್ ವೇತನ ಪ್ಯಾಕೇಜ್ ಯೋಜನೆಯ ವಿಮಾ ರಕ್ಷಣೆಯಡಿಯಲ್ಲಿ 10 ಲಕ್ಷ ರೂ. ಬ್ಯಾಂಕ್ ಆಫ್ ಬರೋಡಾ ಕರ್ನಾಟಕ ಪೊಲೀಸ್ ಸಿಬ್ಬಂದಿ ಮತ್ತು ರಕ್ಷಣಾ ವಲಯಗಳಿಗೆ ಸಂಬಳ ಪ್ಯಾಕೇಜ್ ಯೋಜನೆಯನ್ನು ನೀಡುತ್ತದೆ, ಇದು ಸಂಬಳ ಯೋಜನೆಯಲ್ಲಿ ವಿಮಾ ರಕ್ಷಣೆಯನ್ನು ಒಳಗೊಂಡಿದೆ. ವಿಮೆಯು ಬರೋಡಾ ಪೋಲಿಸ್ ಸಂಬಳದಲ್ಲಿ ಬ್ಯಾಂಕ್ ನೀಡುವ ಸಂಬಳದ ಖಾತೆದಾರರಿಗೆ ಉಚಿತವಾಗಿ ನೀಡಲಾಗುವ ಸಂಬಳ ಪ್ಯಾಕೇಜ್‌ನ ಪೋರ್ಟ್ ಆಗಿದೆ. ಶ್ರೀ ಗಿರಿಧರ್, ಜಿ ಕಡ್ಕೊಂಕರ್, ಬೆಂಗಳೂರು ಗ್ರಾಮಾಂತರ ಪ್ರದೇಶದ ಡಿಆರ್‌ಎಂ ಮತ್ತು ಏರ್ ಸಿಎಂಡಿಇ ಶ್ರೀ ತರುಣ್ ಸಿನ್ಹಾ, ಬೆಂಗಳೂರು ವಲಯದ ಡಿಫೆನ್ಸ್ ವರ್ಟಿಕಲ್ ಮುಖ್ಯಸ್ಥ ಶ್ರೀ ಮಂಚಿಕಟ್ಟಿ ಶ್ರೀರಾಮ ಚಂದ್ರರಾವ್, ಬ್ರಾಂಚ್ ಹೆಡ್ ತುಮಕೂರು ಎಸ್‌ಐಟಿ ಶಾಖೆ, ಶ್ರೀಮತಿ ಅಸ್ಮಾ ಖಾನ್ ಶಾಖಾ ಮುಖ್ಯಸ್ಥ ತುಮಕೂರು ಮುಖ್ಯ ಶಾಖೆ,…
ತುಮಕೂರು: ಅಂತಾರಾಷ್ಟಿçÃಯ ಮಟ್ಟದಲ್ಲಿ ಖ್ಯಾತಿಗಳಿಸಿರುವಂತಹ ತುಮಕೂರಿನ ಸಾಹೇ ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ ಡಾ. ಅಶೋಕ್ ಮೆಹ್ತಾರವರು ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ಸಾಹೇ ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಾದ ಡಾ.ಕೆ.ಬಿ ಲಿಂಗೇಗೌಡರವರು ಡಾ. ಅಶೋಕ್ ಮೆಹ್ತಾ ರವರಿಗೆ ಹೂಗುಚ್ಚವನ್ನು ನೀಡುವ ಮೂಲಕ ಅಭಿನಂದನೆ ತಿಳಿಸಿದರು. ಈ ಸಂದರ್ಭದಲ್ಲಿ ಸಾಹೇ ವಿಶ್ವವಿದ್ಯಾಲಯದ ಪರೀಕ್ಷಾಂಗ ನಿಯಂತ್ರಕರಾದ ಡಾ.ಗುರುಶಂಕರ್, ಸಾಹೇ ವಿವಿಯ ಕುಲಾಧಿಪತಿಗಳ ಸಲಹೆಗಾರರಾದ ಡಾ. ವಿವೇಕ್ ವೀರಯ್ಯ, ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಪ್ರವೀಣ್ ಕೊಡುವ, ಹಾಗೂ ಸಾಹೇ ವಿಶ್ವವಿದ್ಯಾನಿಲಯದ ಆಡಳಿತ ವರ್ಗದವರು ಹಾಜರಿದ್ದರು. ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕಳೆದ ಮೂರು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಅಶೋಕ್ ಮೆಹ್ತಾ ಅವರು (ತಾಂತ್ರಿಕ ಶಿಕ್ಷಣ ಗುಣಮಟ್ಟ ಸುಧಾರಣೆ ಕಾರ್ಯಕ್ರಮ) ಕಾರ್ಯಕ್ರಮದ ನಿರ್ದೇಶಕರಾಗಿ, ಎಸ್‌ಎಸ್‌ಐಟಿ ಎಂಜಿನಿಯರಿAಗ್ ಕಾಲೇಜಿನ ಪ್ಲೇಸ್‌ಮೆಂಟ್ ಮತ್ತು ತರಬೇತಿಯ ವಿಭಾಗದ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅವರು ಸಾಹೇ ವಿವಿಯ ನೂತನ ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಬೋಧನೆ ಮತ್ತು ಆಡಳಿತ ನಿರ್ವಹಣೆಯಲ್ಲಿ ಅನುಭವ ಹೊಂದಿರುವ ಅವರು ಹಲವಾರು ಅಂತಾರಾಷ್ಟ್ರೀಯ,…
ತುಮಕೂರು: ನೇರ, ನಿಷ್ಟೂರ ನಡೆಯ ಮನೋಭಾವನೆ ರೂಪಿಸಿಕೊಂಡಿದ್ದ ಸರ್ವಜ್ಞ ಕವಿಯ ಆಶಯ ಸಮಾಜದ ಓರೆ, ಕೋರೆಗಳನ್ನು ತಿದ್ದುವುದೇ ಆಗಿತ್ತು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಅಭಿಪ್ರಾಯಪಟ್ಟಿದ್ದಾರೆ. ನಗರದ ಡಾ.ಗುಬ್ಬಿ ವೀರಣ್ಣ ರಂಗಮAದಿರದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಕನ್ನಡ ಸಾಹಿತ್ಯ ಪರಿಷತ್ ಹಾಗೂ ತುಮಕೂರು ಜಿಲ್ಲಾ ಕುಂಬಾರರ ಸಂಘ,ಸರ್ವಜ್ಞ ಯುವ ವೇದಿಕೆ, ಶ್ರೀಕುಂಭೇಶ್ವರಿ ಮಹಿಳಾ ಸಂಘ,ಶ್ರೀಕುAಭೇಶ್ವರಿ ಹಿಂದುಳಿದ ವರ್ಗಗಳ ವಿವಿದೋದ್ದೇಶ ಸಹಕಾರ ಸಂಘವತಿಯಿAದ ಆಯೋಜಿಸಿದ್ದ ಸರ್ವಜ್ಞ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು, ತೆಲುಗಿನಲ್ಲಿ ವೇಮನ, ಕನ್ನಡದಲ್ಲಿ ಸರ್ವಜ್ಞ ತಮ್ಮ ತ್ರಿಪದಿಗಳ ಮೂಲಕ ಸಮಾಜದ ಅಂಕು, ಡೊಂಕುಗಳನ್ನು ತಿದ್ದುವ ಕೆಲಸವನ್ನು ನಿರಂತರವಾಗಿ ಮಾಡಿದ್ದಾರೆ ಎಂದರು. ಮನುಷ್ಯರಲ್ಲಿ ಯಾರು ಮೇಲಲ್ಲ, ಕೀಳಲ್ಲ ಎಂಬುದನ್ನು ಸರ್ವಜ್ಞ ಕವಿ ಹೂವು ಯಾವ ಜಾತಿಯದ್ದಾದರೇನು, ಅದರ ಪರಿಮಳವಷ್ಟೇ ಮುಖ್ಯ ಎಂಬುದನ್ನು ಸಾರಿ ಹೇಳಿದ್ದಾರೆ. ಜಾತಿ ಹೀನನ ಮನೆಯ ಜೋತಿ ತಾ ಹೀನವೇ ?,ಅನ್ನ ದೇವರ ಮುಂದೆ ಅನ್ಯ ದೇವರು ಉಂಟೆ,…
ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯ ಅನಧಿಕೃತ ಆಸ್ತಿಗಳನ್ನು ಬಿ-ಖಾತಾ ರಿಜಿಸ್ಟರ್‌ನಲ್ಲಿ ದಾಖಲಿಸಲು ನಗರದಾದ್ಯಂತ ಹಮ್ಮಿಕೊಂಡಿರುವ ಬಿ-ಖಾತಾ ಆಂದೋಲನಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಗುರುವಾರ ಚಾಲನೆ ನೀಡಿದರು. ನಗರದ ಸಿರಾಗೇಟ್ ಐ.ಡಿ.ಎಸ್.ಎಂ.ಟಿ. ಕಾಂಪ್ಲೆಕ್ಸ್ನಲ್ಲಿAದು ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆಂದೋಲನದಲ್ಲಿ ಇ-ಆಸ್ತಿ ತಂತ್ರಾAಶದಲ್ಲಿ ಆಸ್ತಿಗಳನ್ನು ಬಿ-ಖಾತಾ ರಿಜಿಸ್ಟರ್‌ನಲ್ಲಿ ದಾಖಲಿಸಲು ಮಾಲೀಕರಿಗೆ ನಿಗಧಿತ ಅರ್ಜಿಯನ್ನು ವಿತರಿಸಲಾಗುವುದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸ್ವೀಕರಿಸಲು ವಾರ್ಡ್ವಾರು ಸ್ಥಳಗಳನ್ನು ನಿಗಧಿಪಡಿಸಲಾಗಿದೆ. ಸಾರ್ವಜನಿಕರು ಸೀಮಿತ ಕಾಲಾವಧಿಯೊಳಗೆ ಅರ್ಜಿ ಸಲ್ಲಿಸಿ ತಮ್ಮ ಆಸ್ತಿಯನ್ನು ಬಿ-ಖಾತಾ ರಿಜಿಸ್ಟರ್‌ನಲ್ಲಿ ದಾಖಲಿಸಬಹುದಾಗಿದೆ ಎಂದು ತಿಳಿಸಿದರು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಹಾನಗರ ಪಾಲಿಕೆ ವ್ಯಾಪ್ತಿಯ 11 ಸ್ಥಳಗಳಲ್ಲಿ ಬಿ-ಖಾತಾ ರಿಜಿಸ್ಟರ್ ದಾಖಲಾತಿ ಆಂದೋಲನ ನಡೆಯಲಿದ್ದು, ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಸಾರ್ವಜನಿಕರು ಸಕಾಲದಲ್ಲಿ ತೆರಿಗೆ ಹಣವನ್ನು ಪಾವತಿಸಬೇಕು. ಇದರಿಂದ ನಗರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ನೆರವಾಗುತ್ತದೆ ಎಂದು ತಿಳಿಸಿದರು. ಸಾರ್ವಜನಿಕರು ತಮ್ಮ ಆಸ್ತಿಗೆ ಸಂಬAಧಿಸಿದAತೆ ಬಿ ಅಥವಾ ಎ ಖಾತಾ…
ತುಮಕೂರು: ಸಿದ್ದಗಂಗೆಯ ಲಿಂಗೈಕ್ಯ ಡಾ.ಶ್ರೀಶಿವಕುಮಾರಸ್ವಾಮೀಜಿಗಳ ದೂರದೃಷ್ಟಿಯ ಫಲವಾದ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನ, ರೈತರಿಗೆ, ಕೈಗಾರಿಕೋದ್ಯಮಿಗಳಿಗೆ ಮಾಹಿತಿ ಒದಗಿಸುವ ಒಂದು ವೇದಿಕೆಯಾಗಿದೆ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ. ಸಿದ್ದಗಂಗಾ ಮಠದವತಿಯಿಂದ ನಡೆಯುವ ಶ್ರೀಸಿದ್ದಲಿಂಗೇಶ್ವರ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸುಮಾರು 61 ವರ್ಷಗಳ ಹಿಂದೆ ಡಾ.ಶ್ರೀಶಿವಕುಮಾರಸ್ವಾಮೀಜಿಗಳು ಶ್ರೀಮಠಕ್ಕೆ ಬರುವ ಭಕ್ತರಿಗೆ ಧಾರ್ಮಿಕ ಉತ್ಸವ, ಆಚರಣೆಗಳ ಜೊತೆಗೆ, ಕೃಷಿ ಮತ್ತು ಕೃಷಿಗೆ ಪೂರಕವಾದ ಅಂಶಗಳ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಈ ವಸ್ತುಪ್ರದರ್ಶನವನ್ನು ಆಯೋಜಿಸಿದ್ದು, ಶ್ರೀಸಿದ್ದಲಿಂಗಸ್ವಾಮೀಜಿಗಳು ಅದನ್ನು ಮುಂದುವರೆಸಿಕೊAಡು ಬರುತಿದ್ದಾರೆ ಎಂದರು. ಸಿದ್ದಗAಗಾ ಮಠದ ಭಕ್ತರು, ಇಲ್ಲಿಗೆ ಬರುವ ರೈತರು, ಉದ್ಯಮಿದಾರರಿಗೆ ದೇಶದಲ್ಲಿ ನಡೆಯುವ ಹೊಸ ಅವಿಷ್ಕಾರದ ಬಗ್ಗೆ ತಿಳುವಳಿಕೆ ನೀಡುವ ಉದ್ದೇಶದಿಂದ ಆರಂಭಿಸಿದ ವಸ್ತು ಪ್ರದರ್ಶನವನ್ನು ಜಿಲ್ಲಾಡಳಿತದ ಸಹಕಾರದೊಂದಿಗೆ ಯಾವುದೇ ರೀತಿಯ ಲೋಪದೋಷಗಳು ಬರದಂತೆ ಹಲವಾರು ವರ್ಷಗಳಿಂದ ಸುಸೂತ್ರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಪ್ರತಿವರ್ಷ ಹೊಸತನವನ್ನು ಈ ವಸ್ತುಪ್ರದರ್ಶನದಲ್ಲಿ ಕಾಣಬಹುದು. ಇದರಿಂದ ಶ್ರೀಶಿವಕುಮಾರಸ್ವಾಮೀಜಿಗಳ ಆಶಯ…











