Author: News Desk Benkiyabale

ತುಮಕೂರು: ಜನವರಿ 17 ರಿಂದ 19 ರವರೆಗೆ ಬಹುತ್ವ ಸಂಸ್ಕೃತಿ ಭಾರತೋತ್ಸವವನ್ನು ಕಲಬುರಗಿ ಮಹಾನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಡಾ. ಎಸ್.ವೈ. ಗುರುಶಾಂತ್ ತಿಳಿಸಿದರು. ಅವರು ತುಮಕೂರಿನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಏಕ ಸಂಸ್ಕೃತಿಯನ್ನು ಹೇರುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿರುವುದು ಇತ್ತಿಚಿನ ದಿನಗಳಲ್ಲಿ ಎದ್ದು ಕಾಣುತ್ತಿದೆ. ಬಹುಸಂಸ್ಕೃತಿಯು ಭಾರತದ ಹೆಗ್ಗುರುತು. ವೈವಿಧ್ಯತೆಯಲ್ಲಿ ಏಕತೆ ಭಾರತದ ವಿಶಿಷ್ಟತೆ. ಇಂತಹ ಬಹುತ್ವ ಭಾರತದ ಮೇಲೆ ವೈದಿಕ ಧಾರ್ಮಿಕತೆಯ ಯಜಮಾನಿಕೆಯ ಏಕ ಸಂಸ್ಕೃತಿಯನ್ನು ಹೇರುವ ಪ್ರಯತ್ನಗಳು ನಡೆಯುತ್ತಿರುವುದು ಆತಂಕಕಾರಿಯಾಗಿದ್ದು ಇದನ್ನು ವಿರೋಧಿಸಿ ‘ಬಹುತ್ವ ಸಂಸ್ಕೃತಿ ಭಾರತೋತ್ಸವ’ ವನ್ನು ಇದೇ 2025 ಜನವರಿ 17 ರಿಂದ 19 ರವರೆಗೆ ಕಲ್ಬುರ್ಗಿ ಮಹಾನಗರದಲ್ಲಿ ಆಯೋಜಿಸಲಾಗುತ್ತಿದೆ. ಸುಮಾರು ಐವತ್ತಕ್ಕೂ ಅಧಿಕ ವಿವಿಧ ಜನ ಸಂಘಟನೆಗಳು ಒಡಗೂಡಿದ ‘ಸೌಹಾರ್ದ ಕರ್ನಾಟಕ’ ವು ವ್ಯವಸ್ಥೆಗೊಳಿಸುತ್ತಿದ್ದು ರಾಜ್ಯದ ವಿವಿದೆಡೆಗಳಿಂದ 5000ಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ನೆಲಮೂಲ ಸಂಸ್ಕ್ರತಿಗಳನ್ನು ತುಳಿದಿಕ್ಕಿ, ವೈದಿಕ ಧಾರ್ಮಿಕತೆಯನ್ನೇ ಭಾರತೀಯ ಸಂಸ್ಕೃತಿ ಎಂದು ಬಿಂಬಿಸುವ ಹುನ್ನಾರಗಳನ್ನು ವಿರೋಧಿಸಿ ‘ಬಹುತ್ವ…

Read More

ತುಮಕೂರು: ಯುವಕರು ತರಗತಿಗಳಲ್ಲಿ, ಹಾಗೂ ಬಿಡುವಿನ ವೇಳೆಯಲ್ಲೆಲ್ಲ ಮೊಬೈಲಗಳನ್ನು ಬಳಸುತ್ತಾರೆ. ಹೆಚ್ಚು ಮೊಬೈಲ್ ಬಳಕೆ ಮಾಡುವುದರಿಂದ ಕುರುಡು ಮತ್ತು ಕಿವುಡುತನ ಚಿಕ್ಕ ವಯಸ್ಸಿನಲ್ಲಿಯೇ ಕಾಡುತ್ತದೆ ಎಂದು ಡಫ್ ಚಿಲ್ಡçನ್ ಫೌಂಡೇಶನ್‌ನ ಕಾರ್ಯಕ್ರಮ ವ್ಯವಸ್ಥಾಪಕ ವೀರೇಶ್ ವೈ. ಎಸ್. ಹೇಳಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಮತ್ತು ರೆಡ್ ರಿಬ್ಬನ್ ಕ್ಲಬ್ ಆಯೋಜಿಸಿದ್ದ ಉಚಿತ ಕಣ್ಣು ಮತ್ತು ಕಿವಿ ತಪಾಸಣಾ ಶಿಬಿರವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಹಿಂದೆ ಎಪ್ಪತ್ತು, ಎಂಬತ್ತು ವಯಸ್ಸಿನವರಿಗೆ ಕಾಡುತ್ತಿದ್ದ ಕಿವುಡುತನ ಮತ್ತು ಅಂಧತ್ವ ಇಂದು 10-15ನೇ ವಯಸ್ಸಿನ ಮಕ್ಕಳಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಹೆಚ್ಚಿನ ಶಬ್ದಮಾಲಿನ್ಯ ಮತ್ತು ಧ್ವನಿ ಉಪಕರಣಗಳ ಅತಿಯಾದ ಬಳಕೆ. ನವಜಾತ ಶಿಶುಗಳಲ್ಲೂ ಈ ಸಮಸ್ಯೆ ಹೆಚ್ಚುತ್ತಿದೆ ಎಂದರು. ಮಕ್ಕಳಿಗೆ ಐದು ವರ್ಷದ ಒಳಗೆ ಕಿವಿ ಕೇಳದಿದ್ದರೆ ಅವರು ಮಾತನಾಡುವುದನ್ನು ಕಲಿಯುವುದಿಲ್ಲ. ಹಾಗಾಗಿ ಮಕ್ಕಳ ಶ್ರವಣ ನ್ಯೂನತೆಯನ್ನು ಸೂಕ್ತ ಸಂದರ್ಭದಲ್ಲಿ ವೈದ್ಯರಿಗೆ ತೋರಿಸಿ ಪರಿಹಾರ ಕಂಡುಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ…

Read More

ಹುಳಿಯಾರು: ಹುಳಿಯಾರು ಹೋಬಳಿಯ ಕೋರಗೆರೆ ಗ್ರಾಮ ಪಂಚಾಯ್ತಿಯ ನೂತನ ಉಪಾಧ್ಯಕ್ಷರಾಗಿ ಭಟ್ಟರಹಳ್ಳಿ ಶೇಖರ್ ಚುನಾಯಿತರಾಗಿದ್ದಾರೆ. 15 ಮಂದಿ ಸದಸ್ಯ ಬಲವುಳ್ಳ ಕೋರಗೆರೆ ಗ್ರಾಪಂ ಉಪಾಧ್ಯಕ್ಷರ ಆಯ್ಕೆಗೆ ಬುಧವಾರ ಚುನಾವಣೆ ನಡೆದಿದ್ದು ಶಿವಮ್ಮ ಮತ್ತು ಶೇಖರ್ ಇಬ್ಬರು ನಾಮಪತ್ರ ಸಲ್ಲಿಸಿದ್ದರು. ಶೇಖರ್ 11 ಮತಗಳನ್ನು, ಶಿವಮ್ಮ 4 ಮತಗಳನ್ನು ಪಡೆದಿದ್ದರು. ಚುನಾವಣಾಧಿಕಾರಿಯಾಗಿ ಕೆ.ಪುರಂದಯ್ಯ ಕರ್ತವ್ಯ ನಿರ್ವಹಿಸಿದ್ದರು. ಪಿಡಿಒ ನವೀನ್, ಅಧ್ಯಕ್ಷರಾದ ದಿನೇಶ್, ಸೇರಿದಂತೆ ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.

Read More

ತುಮಕೂರು: ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇತ್ತೀಚೆಗೆ ನಿಧನರಾದ ಹಿರಿಯ ಕಾಂಗ್ರೆಸ್ ಮುಖಂಡರುಗಳಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹಾಗು ಮಾಜಿ ಶಾಸಕ ಆರ್.ನಾರಾಯಣ್ ಅವರುಗಳಿಗೆ ಶ್ರದ್ಧಾಂಜಲಿ ಹಾಗು ಜನವರಿ 21 ರಂದು ಬೆಳಗಾವಿಯಲ್ಲಿ ನಡೆಯಲಿರುವ ಜೈ ಬಾಪು,ಜೈ ಅಂಬೇಡ್ಕರ್ ಮತ್ತು ಜೈ ಸಂವಿಧಾನ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರ ಗೌಡ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು. ಕಾರ್ಯಕ್ರಮದಲ್ಲಿ ಅಗಲಿದ ಗಣ್ಯರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು.ಈ ವೇಳೆ ಮಾತನಾಡಿದ ಮುಖಂಡರಾದ ಇಕ್ಬಾಲ್ ಅಹಮದ್,ಇಡೀ ಪ್ರಪಂಚವೇ ಹಣದುಬ್ಬರದಿಂದ ತಲ್ಲಣಿಸಿದ್ದ ಸಂದರ್ಭದಲ್ಲಿ ಭಾರತ ಮಾತ್ರ ಇದರ ಹೊಡೆತಕ್ಕೆ ಸಿಕ್ಕದೆ ಸುರಕ್ಷಿತವಾಗಿರಲು ಹಣಕಾಸು ತಜ್ಞರಾದ ಮನಮೋಹನ್ ಸಿಂಗ್ ಅವರ ದೂರದೃಷ್ಟಿಯೇ ಕಾರಣ.ಐಎಂಎಫ್ ಅಧ್ಯಕ್ಷರಾಗಿ,ರಾಷ್ಟಿçÃಯ ನೀತಿ ಆಯೋಗದ ಅಧ್ಯಕ್ಷರಾಗಿ, ಆರ್.ಬಿ.ಐ ಗೌರ್ನರ್ ಆಗಿ,ಹಣಕಾಸು ಸಚಿವರಾಗಿ ಅವರು ಮಾಡಿದ ಸುಧಾರಣೆಗಳು ಇಡೀ ವಿಶ್ವಕ್ಕೆ ಮಾದರಿಯಾಗಿವೆ.ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಯಾಗಿದ್ದ ಸಂದರ್ಭದಲ್ಲಿ ತೆಗೆದುಕೊಂಡು ನಿರ್ಧಾರದ ಫಲವಾಗಿ ಇಂದು ಕರ್ನಾಟಕ ಐಟಿ,ಬಿಟಿ ಹಬ್ ಆಗಿ…

Read More

ತುಮಕೂರು: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆಯನ್ನು ಖಂಡಿಸಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ರವರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಮುಂದಾಗ ಶಾಸಕ ಸುರೇಶ್‌ಗೌಡ ಸೇರಿದಂತೆ ಹಲವು ಮಂದಿ ಬಿಜೆಪಿ ಕಾರ್ಯಕರ್ತರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಇಂದು ಗೃಹ ಸಚಿವರ ನಿವಾಸದ ಮುಂದೆ ಪ್ರತಿಭಟನೆ ನಡೆಸಲು ಕಾರ್ಯಕರ್ತರಿಗೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಗೃಹ ಸಚಿವರ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ನಗರದ ಹೊರವಲಯದ ಸಿದ್ದಾರ್ಥ ನಗರದಲ್ಲಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ನಿವಾಸದ ಮುಂದೆ ಬೆಳಿಗ್ಗೆಯಿಂದಲೇ ಬಿಜೆಪಿ ಪ್ರತಿಭಟನೆ ಕರೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಓರ್ವ ಅಡಿಷನಲ್ ಎಸ್ಪಿ, ಇಬ್ಬರು ಡಿವೈಎಸ್ಪಿ ನೇತೃತ್ವದಲ್ಲಿ ಸುಮಾರು 150ಕ್ಕೂ ಅಧಿಕ ಪೊಲೀಸರನ್ನು ಬಿಗಿ ಪೊಲೀಸ್ ಬಂದೋಬಸ್ತ್ಗೆ ನಿಯೋಜಿಸಲಾಗಿದ್ದು, ಪೊಲೀಸರು ಈ ಭಾಗದ ರಸ್ತೆಯಲ್ಲಿ…

Read More

ತುಮಕೂರು: ದೇಶದ ಜನರಲ್ಲಿ ಭಕ್ತಿ ಭಾವನೆ ಉಳಿದಿರುವುದರಿಂದ ಆಧುನಿಕತೆಯ ಎಷ್ಟೇ ಬದಲಾವಣೆಗಳಾದರೂ ಆಚರಣೆಗಳಿಂದ ನಮ್ಮ ಸಂಸ್ಕೃತಿ, ಸಂಪ್ರದಾಯಗಳು ಉಳಿದು ಮುಂದುವರೆದಿವೆ. ಶಬರಿಮಲೆಗೆ ಹೋಗಿ ಅಯ್ಯಪ್ಪನ ದರ್ಶನ ಮಾಡಿದರೆ ಜೀವನದಲ್ಲಿ ಬದಲಾವಣೆ ಆಗುತ್ತದೆ ಎಂದು ಅಲ್ಲಿಗೆ ಹೋಗಿಬಂದ ಅನೇಕರು ಹೇಳಿದ್ದಾರೆ. ಈ ನಂಬಿಕೆಯಿAದಲೇ ಶಬರಿಮಲೆ ಕ್ಷೇತ್ರ ವಿಶ್ವವಿಖ್ಯಾತವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ನಗರದ ಗೋಕುಲ ಬಡಾವಣೆಯ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಬಳಗದಿಂದ ಭಾನುವಾರ ಸಂಜೆ ನಡೆದ 30ನೇ ವರ್ಷದ ಅಯ್ಯಪ್ಪ ಸ್ವಾಮಿ ಭಜನಾ ಮಹೋತ್ಸವದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರಿಗೆ ಈ ವೇಳೆ ಅಯ್ಯಪ್ಪ ಸ್ವಾಮಿ ಭಕ್ತಿ ಬಳಗ ಪ್ರದಾನ ಮಾಡಿದ ತುಮಕೂರು ದಸರಾ ಹಮ್ಮೀರಾ ಪ್ರಶಸ್ತಿ ಹಾಗೂ ಬೆಳ್ಳಿ ಖಡ್ಗ ಸ್ವೀಕರಿಸಿ ಮಾತನಾಡಿದರು. ಶಬರಿಮಲೆ ಮಾದರಿಯಲ್ಲಿ ಮಂಟಪ ನಿರ್ಮಾಣ ಮಾಡಿ ಅಯ್ಯಪ್ಪ ಸ್ವಾಮಿ ಪ್ರತಿಷ್ಠಾಪನೆ ಮಾಡಿ, ಶಬರಿಮಲೆಗೆ ಹೋಗಲು ಸಾಧ್ಯವಾಗದವರಿಗೆ ಇಲ್ಲಿಯೇ ಅಯ್ಯಪ್ಪನ ದರ್ಶನದ ವ್ಯವಸ್ಥೆ ಮಾಡಿದ್ದಾರೆ. ಅಯ್ಯಪ್ಪಸ್ವಾಮಿಗೆ ಹೊರದೇಶಗಳಲ್ಲೂ ಭಕ್ತರಿದ್ದಾರೆ. ಅವರೂ ಶಬರಿಮಲೆಗೆ ಬಂದು ದೇವರ…

Read More

ತುಮಕೂರು: ಕರ್ನಾಟಕ ಸಂಸ್ಕೃತಿ ರಕ್ಷಣಾ ವೇದಿಕೆಯಿಂದ ಸೋಮವಾರ ನಗರದ ಸರ್ಕಾರಿ ಪಾಲಿಟೆಕ್ನಿಕ್ ಎದುರು ವೈಭವದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಇದರ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸಾಂಸ್ಕೃತಿಕ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಕನ್ನಡ ಸೇನೆ ಅಧ್ಯಕ್ಷ ಧನಿಯಾಕುಮಾರ್ ಕಾರ್ಯಕ್ರಮ ಉದ್ಘಾಟಿಸಿ, ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆಗೆ ಕನ್ನಡಪರ ಸಂಘಟನೆಗಳು ಸಕ್ರಿಯ ಹೋರಾಟ ನಡೆಸಿದ ಪರಿಣಾಮ ಇಂದು ನಾಡಿನಲ್ಲಿ ಕನ್ನಡಿಗರಿಗೆ ದೊಡ್ಡ ಶಕ್ತಿ ಬಂದಿದೆ. ಪರಭಾಷಿಕರ ಹಾವಳಿಯಲ್ಲಿ ಕನ್ನಡದ ಅಸ್ತಿತ್ವ ಕಾಪಾಡಿಕೊಳ್ಳುವಂತಾಗಿದೆ ಎಂದರು. ಕನ್ನಡ ಸಂಘಟನೆಗಳು ಕನ್ನಡ ರಾಜ್ಯೋತ್ಸವ ಆಚರಣೆ ಜೊತೆಗೆ ನಾಡಿನ ಎಲ್ಲರಲ್ಲೂ ಭಾಷಾಭಿಮಾನ ಬೆಳೆಸಬೇಕು. ಪೋಷಕರು ಮಕ್ಕಳಲ್ಲಿ ಕನ್ನಡ ಅಭಿಮಾನ ಮೂಡಿಸಬೇಕು, ಕನ್ನಡ ನಾಡಿಗೆ ಕೊಡುಗೆ ನೀಡಿದ ಮಹನೀಯರ ಸಾಧನೆಯನ್ನು ಪರಿಚಯಿಸಬೇಕು. ಕನ್ನಡ ನಾಡಿನಲ್ಲಿ ಕನ್ನಡದ ವೈಭವ ಮೆರೆಯಬೇಕು ಎಂಬ ಆಶಯ ವ್ಯಕ್ತಪಡಿಸಿದರು. ಕರ್ನಾಟಕ ಸಂಸ್ಕೃತಿ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಹೊಸಕೋಟೆ ನಟರಾಜ್, ಜಿಲ್ಲಾಧ್ಯಕ್ಷ ಧೃವಕುಮಾರ್, ಮಹಿಳಾ ಘಟಕ ಅಧ್ಯಕ್ಷೆ ಸುಧಾ, ಲಲಿತಾ ಹನುಮಂತಪ್ಪ, ವಿವಿಧ…

Read More

ತುಮಕೂರು: ಸಿರಿಧಾನ್ಯ ಕುರಿತು ಜನಾಂದೋಲನ ರೂಪದಲ್ಲಿ ಪ್ರಚಾರ ಕೈಗೊಂಡು ರಾಜ್ಯವನ್ನು ಸಿರಿಧಾನ್ಯಗಳಿಗೆ ಜಾಗತಿಕ ಕೇಂದ್ರವನ್ನಾಗಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 2 ದಿನಗಳ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಿರಿಧಾನ್ಯ ಉತ್ಪಾದಕರು ಮತ್ತು ಮಾರುಕಟ್ಟೆದಾರರ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಒನಕೆಯಲ್ಲಿ ಭತ್ತ ಕುಟ್ಟುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಸಿರಿಧಾನ್ಯಗಳು ಹೆಚ್ಚಿನ ರೋಗ ನಿರೋಧಕ ಶಕ್ತಿಯೊಂದಿಗೆ ಹೇರಳವಾದ ಪೋಷಕಾಂಶಗಳನ್ನು ಹೊಂದಿವೆ. ಸಿರಿಧಾನ್ಯ ಸೇವನೆಯಿಂದ ಆರೋಗ್ಯವರ್ಧನೆಯಾಗುವುದಲ್ಲದೆ ರೋಗ ಮುಕ್ತರಾಗಿ ಆಸ್ಪತ್ರೆಯಿಂದ ದೂರವಿರಬಹುದು ಎಂದು ತಿಳಿಸಿದರು. ತಾಯಂದಿರು ತಮ್ಮ ಮಕ್ಕಳಿಗೆ ಸಿರಿಧಾನ್ಯ ಪದಾರ್ಥಗಳ ಸೇವನೆಯ ಅಭ್ಯಾಸ ಮಾಡಿಸಬೇಕು. ನಿಧಾನವಾಗಿ ಜೀರ್ಣವಾಗಿ ದೇಹಕ್ಕೆ ಶಕ್ತಿವರ್ಧಕವಾಗಿ ಕೆಲಸ ಮಾಡುವ ಗುಣಧರ್ಮವನ್ನು ಹೊಂದಿರುವ ಸಿರಿಧಾನ್ಯಗಳನ್ನು ಜನರು ಹೆಚ್ಚಾಗಿ ಬಳಸಬೇಕು ಎಂದರಲ್ಲದೆ, ಜಿಲ್ಲೆಯು ಸಿರಿಧಾನ್ಯಗಳ ತವರೂರು ಎಂದೆನೆಸಿಕೊAಡಿದೆ.…

Read More

ತುಮಕೂರು; ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ತುಮಕೂರು ಇವರ ವತಿಯಿಂದ ಚೊಚ್ಚಲ ಬಾರಿಗೆ ಕಲ್ಪತರು ನಗರಿ ತುಮಕೂರಿನಲ್ಲಿ ರಾಜ್ಯಮಟ್ಟದ 39ನೇ ಪತ್ರಕರ್ತರ ಸಮ್ಮೇಳನವನ್ನು ನಡೆಸಲು ನಿಶ್ಚಯಿಸಿದ್ದು ಈಗಾಗಲೇ ನಿರೀಕ್ಷೆಗೂ ಮೀರಿದ ಸಿದ್ಧತೆಗಳನ್ನ ಕೈಗೊಳ್ಳಲಾಗಿದ್ದು ಕಲ್ಪತರು ನಾಡಿನಲ್ಲಿ ನಡೆಯುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಅರ್ಥಗರ್ಭಿತವಾಗಿ ನಡೆಯಬೇಕಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು. ನಗರದ ಎಸ್‌ಎಸ್‌ಐಟಿ ಕಾಲೇಜು ಕ್ಯಾಂಪಸ್ ಆವರಣದ ಸ್ಟೇಪ್ ಬಿಲ್ಡಿಂಗ್ ಸಭಾಂಗಣದಲ್ಲಿ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಕುರಿತಾಗಿ ತುಮಕೂರು ಜಿಲ್ಲಾ ಘಟಕದ ವಿವಿಧ ಉಪ ಸಮಿತಿಗಳ ಸಿದ್ಧತೆ ಮತ್ತು ಕಾರ್ಯವೈಕರಿಗಳ ಬಗ್ಗೆ ಚರ್ಚೆ ನಡೆಸಲು ಕರೆದಿದ್ದ ಸಭೆಯಲ್ಲಿ ಮಾತನಾಡಿದ ಅವರು ಶ್ರೇಷ್ಠತೆಗಳಲ್ಲಿ ವಿಶೇಷತೆ ಎನಿಸಿರುವ ತುಮಕೂರು ಜಿಲ್ಲೆಯು ಶೈಕ್ಷಣಿಕ, ಕಲೆ, ಸಾಹಿತ್ಯ, ರಂಗಭೂಮಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತನ್ನದೇ ಆದ ಸಾಧನೆಯನ್ನು ತನ್ನ ಮುಡಿಗೇರಿಸಿಕೊಂಡಿದೆ ಅದೇ ನಿಟ್ಟಿನಲ್ಲಿ ಈ ಬಾರಿ ಇಲ್ಲಿ ನಡೆಯುವ 39ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವೂ ಕೂಡ ಇತಿಹಾಸದ ಮೈಲಿಗಲ್ಲು…

Read More

ತುಮಕೂರು: ಕಳೆದ ಐದು ದಿವಗಳಿಂದ ಕರ್ನಾಟಕ ನಾಟಕ ಅಕಾಡೆಮಿ ಹಾಗೂ ಗುಬ್ಬಿ ವೀರಣ್ಣ ಟ್ರಸ್ಟï ವತಿಯಿಂದ ನಡೆದ ಐದು ದಿವಸಗಳ ಹಾಸ್ಯ ಬ್ರಹ್ಮ ದಿ. ನರಸಿಂಹರಾಜು ನಾಟಕೋತ್ಸವಕ್ಕೆ ವಿದ್ಯುಕ್ತವಾಗಿ ತೆರೆ ಬಿತ್ತು. ದಾಕ್ಷಾಯಿಣಿ ಭಟï ನಿರ್ದೇಶನದ ತಾಜï ಮಹಲï ಟೆಂರ್ಡ ನಾಟಕ ಪ್ರದರ್ಶಿಸುವ ಮೂಲಕ ನರಸಿಂಹರಾಜು ನಾಟಕೋತ್ಸವಕ್ಕೆ ತೆರ ಬಿತ್ತು. ಕಾರ್ಯಕ್ರಮದಲ್ಲಿ ಸಮಾರೋಪ ಭಾಷಣ ಮಾಡಿದ ಗುಬ್ಬಿ ವೀರಣ್ಣ ಟ್ರಸ್ಟï ನ ಅಧ್ಯಕ್ಷೆ ಬಿ. ಜಯಶ್ರೀ ಅವರು ನರಸಿಂಹರಾಜು ತುಂಬಿದ ಕೊಡ ಎಂದು ಶ್ಲಾಘಿಸಿದರು. ನಾನು ನಾಲ್ಕು ವರ್ಷದ ಹುಡುಗಿಯಾಗಿz್ದÁಗ ನರಸಿಂಹರಾಜಣ್ಣನವರನ್ನು ನೋಡಿದ್ದು ಅವರು ರಂಗದ ಮೇಲೆ ಬಂದರೆAದರೆ ಜನ ನಗುತ್ತಿದ್ದರು ನಮ್ಮ ಕಂಪೆನಿಯಲ್ಲಿz್ದÁಗ ಅವರು ಹೆಚ್ಚು ಹಾಸ್ಯ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದರು ಎಂದರು. ಗುಬ್ಬಿ ವೀರಣ್ಣನವರ ಹೆಸರಿನಲ್ಲಿ ಕಟ್ಟಿರುವ ರಂಗಮAದಿರದಲ್ಲಿ ಸಂಸ್ಕೃತಿ ಪರಂಪರೆಯನ್ನು ಉಳಿಸಲು ಇಲ್ಲಿಯವರೆಗೆ ಹಲವಾರು ನಾಟಕ ಗಳನ್ನು ಮಾಡಿದ್ದೀವಿ ಆದರೆ ಗುಬ್ಬಿಯ ಜನ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಂದು ನಾಟಕಗಳನ್ನು ಪ್ರೋತ್ಸಾಹಿಸುವ ಅವಶ್ಯಕತೆ ಇದೆ ಎಂದ ಅವರು ನರಸಿಂಹರಾಜು…

Read More