ತುಮಕೂರು: ಒರ್ವ ವ್ಯಕ್ತಿ ಪರಿಪೂರ್ಣ ವ್ಯಕ್ತಿತ್ವವನ್ನು ಹೊಂದಲು ನಾಲ್ಕು ಗೋಡೆಗಳ ಮದ್ಯೆ ಕಲಿಯುವ ಶಿಷ್ಠ ಶಿಕ್ಷಣದ ಜೊತೆಗೆ, ಜಾನಪದಿಂದ ಕಲಿಯುವ ಮಾನವೀಯ ಮೌಲ್ಯಗಳು ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಸಿಇಓ ಜಿ.ಪ್ರಭು ಅಭಿಪ್ರಾಯಪಟ್ಟಿದ್ದಾರೆ. ತುಮಕೂರು ವಿವಿ ವಿಜ್ಞಾನ ಕಾಲೇಜಿನ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ, ತುಮಕೂರು ವಿವಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಾನಪದದ ನಡೆ, ವಿದ್ಯಾರ್ಥಿಗಳ ಕಡೆ ಎಂಬ ವಿಚಾರ ಸಂಕಿರಣ, ಜಾನಪದ ಗಾಯಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಬದುಕಿಬೇಕಾದ ಶೇ45-50ರಷ್ಟು ಅನುಭವಗಳನ್ನು ಶಿಷ್ಠ ಶಿಕ್ಷಣದಿಂದ ಪಡೆದರೆ, ಶೇ35-40ರಷ್ಟು ಅಂಶಗಳನ್ನು ನಾವು ಸಮಾಜವನ್ನು ನೋಡುವುದರಿಂದ ಕಲಿಯುತ್ತೇವೆ.ಆದರೆ ಉಳಿದ 10ರಷ್ಟು ಅಂಶಗಳು ನಮಗೆ ಜಾನಪದದಿಂದ ಸಿಗುತ್ತವೆ.ನಮ್ಮ ನಡೆ, ನುಡಿ, ಆಚಾರ, ವಿಚಾರ ಎಲ್ಲದರ ಮೇಲೆ ಆಯಾಯ ಭಾಗದ ಜನಪದ ಆಚರಣೆಗಳ ಮೇಲೆ ಅವಲಂಬಿತವಾಗಿರುತ್ತವೆ ಎಂದರು. ಜಗತ್ತಿನ ಬೇರೆ ದೇಶಗಳಿಗೆ ಹೊಲಿಸಿದರೆ ಭಾರತದ ದುಡಿಯವ ವಯಸ್ಸಿನ ಮಾನವ ಸಂಪನ್ಮೂಲಕ್ಕೆ ಇಡೀ ಪ್ರಪಂಚದಾದ್ಯAತ ಬೇಡಿಕೆ ಇದೆ. ಐದು ಸಾವಿರದಿಂದ 10 ಸಾವಿರ ವರ್ಷಗಳ ನಾಗರಿಕತೆಯ…
Author: News Desk Benkiyabale
ಕೊರಟಗೆರೆ: ತುಮಕೂರು ಅಥವಾ ನೆಲಮಂಗಲ ಸಮೀಪ ಅಂತರಾಷ್ಟಿçÃಯ ವಿಮಾನ ನಿಲ್ದಾಣ ಆಗ್ಬೇಕು. ಇದರ ಬಗ್ಗೆ ಗೃಹಸಚಿವ ಡಾ.ಜಿ.ಪರಮೇಶ್ವರ ಜೊತೆ ನಾನು ಈಗಾಗಲೇ ಚರ್ಚಿಸಿದ್ದೀನಿ. ನೀವೇನಾದ್ರು ಬೇರೆಕಡೆ ಮಾಡೋಕೆ ಪ್ರಯತ್ನ ಪಟ್ರೇ ನಮಗೇ ಹೆಚ್‌ಎಎಲ್ ನಿಲ್ದಾಣವೇ ಸಾಕು ಅಂತೀವಿ. ರಾಜ್ಯ ಸರಕಾರಕ್ಕೆ ನಾನು ಟ್ರಂಪ್‌ಕಾರ್ಡ್ ಕೊಟ್ಟಿದ್ದೀನಿ ಎಂದು ಕೇಂದ್ರ ರೈಲ್ವೆಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು. ಕೊರಟಗೆರೆ ತಾಲೂಕು ಕೋಳಾಲದ 7ಗ್ರಾಪಂ ಮತ್ತು ಕಸಬಾ ಹೋಬಳಿಯ 6ಗ್ರಾಪಂ ವ್ಯಾಪ್ತಿಯ ಸಾರ್ವಜನಿಕರ ಕುಂದುಕೊರತೆ ಸಭೆ ಹಾಗೂ ಕೇಂದ್ರ ಸರಕಾರದ ಯೋಜನೆಯಡಿ ಬರುವ ಪಲಾನುಭವಿಗಳಿಗೆ ವಿವಿಧ ಇಲಾಖೆಯ ಸವಲತ್ತು ವಿತರಣೆ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಹಣಕಾಸು ಮಂತ್ರಾಲಯ ರಾಜ್ಯ ಸರಕಾರಕ್ಕೆ 6310ಕೋಟಿ ಹಣ ಬಿಡುಗಡೆ ಮಾಡಿದೆ. ಭದ್ರಾಮೆಲ್ದಂಡೆ ಯೋಜನೆಯ ನೀರಾವರಿ ಯೋಜನೆಗೆ ನರೇಂದ್ರಮೋದಿ ಸರಕಾರ ಅಸ್ತು ಅಂದಿದೆ. ತುಮಕೂರು ಜಿಲ್ಲೆಯಲ್ಲಿ 4ದಿಕ್ಕಿನಲ್ಲಿಯು ಅಂತರಾಷ್ಟಿçÃಯ ಹೈವೇಗಳಿವೆ. 40ಸಾವಿರ ಎಕರೇ ಪ್ರದೇಶದಲ್ಲಿ ಇಂಡಸ್ಟಿçÃಯಲ್ ಏರಿಯಾ ಇದೆ. ತುಮಕೂರು ನಗರ ರಾಜಧಾನಿಗೆ ಹತ್ತಿರವಾಗಿ ಬೆಳೆಯುತ್ತೀದೆ. ಗೃಹಸಚಿವ ಡಾ.ಜಿ.ಪರಮೇಶ್ವರ ಹತ್ತಿರ…
ತುಮಕೂರು : ಜಿಲ್ಲೆಯಲ್ಲಿ ಕಳೆದ 2024ರ ಏಪ್ರಿಲ್ ಮಾಹೆಯಿಂದ ಡಿಸೆಂಬರ್‌ವರೆಗೆ ಒಟ್ಟು 13 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದ್ದು, ಬಾಲ್ಯ ವಿವಾಹವನ್ನು ತಡೆಯುವ ನಿಟ್ಟಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಭೆಯಲ್ಲಿ ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 2 ಮತ್ತು 3ನೇ ತ್ರೆöÊಮಾಸಿಕಕ್ಕೆ ಸಂಬAಧಿಸಿದAತೆ ಗುರುವಾರ ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹಗಳು ನಡೆಯುವಾಗ ಅಧಿಕಾರಿಗಳ ಗಮನಕ್ಕೆ ಯಾಕೆ ಬಂದಿಲ್ಲ? ಇಂತಹ ಪ್ರಕರಣಗಳು ಮರುಕಳಿಸಬಾರದು. ಕರ್ತವ್ಯ ನಿರ್ಲಕ್ಷತೆ ತೋರುವ ಯಾವುದೇ ಸಿಬ್ಬಂದಿಯನ್ನು ಸೇವೆಯಲ್ಲಿ ಮುಂದುವರೆಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಬಾಲ್ಯ ವಿವಾಹಗಳನ್ನು ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ಕೂಡಲೇ ತಾಲ್ಲೂಕುವಾರು ವರದಿ ನೀಡಬೇಕು ಎಂದು ನಿರ್ದೇಶನ ನೀಡಿದರು. ಬಾಲ್ಯ ವಿವಾಹಗಳು ನಡೆಯದಂತೆ ತಡೆಯಲು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು…
ತುಮಕೂರು: ನಾವು ವಾಸಿಸುವ ಹಟ್ಟಿಯೊಳಗೆ ಹೋಗಲು ದಾರಿ ಬಿಡದಂತೆ ಅಕ್ರಮವಾಗಿ ಬೇಲಿ ಹಾಕಿಕೊಂಡಿರುವ ವ್ಯಕ್ತಿಯ ವಿರುದ್ಧ ಕ್ರಮ ಜರುಗಿಸಿ ದಾರಿ ಬಿಡಿಸಿಕೊಡುವಂತೆ ಶಿರಾ ತಾಲ್ಲೂಕು ಹುಲಿಕುಂಟೆ ಹೋಬಳಿ ಬೆಜ್ಜಿಹಳ್ಳಿ ಗೊಲ್ಲರಹಟ್ಟಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಶುಕ್ರವಾರ ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿಗೆ ಅಗಮಿಸಿದ ಬೆಜ್ಜಿಹಳ್ಳಿ ಗೊಲ್ಲರಹಟ್ಟಿಯ ಗ್ರಾಮಸ್ಥರುಗಳು ಹಟ್ಟಿಗೆ ಹೋಗಲು ಇರುವ ಕಾನೂನು ಬದ್ಧ ದಾರಿಯನ್ನೇ ಅತಿಕ್ರಮಿಸಿ ಬಲಾಢ್ಯರು ಬೇಲಿ ನಿರ್ಮಿಸಿಕೊಂಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಕಿತಾಪತಿ ಮಾಡುತ್ತಿದ್ದು, ಇದೀಗ ದಾರಿಯನ್ನೇ ಬಂದ್ ಮಾಡಿದ್ದಾರೆ. ಹೀಗಾದರೆ ನಾವು ನಮ್ಮ ವಾಸ ಸ್ಥಳದ ಊರಿಗೆ ಹೋಗುವುದಾದರೂ ಹೇಗೆ? ಈ ಕೂಡಲೇ ಸದರಿ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಂಡು ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು. ಬೆಜ್ಜಿಹಳ್ಳಿ ಗ್ರಾಮದ ಸ.ನಂ.102/1, 102/2, 102/3 ರಲ್ಲಿ ಮೂಲ ದಾಖಲೆಯಲ್ಲಿ ದಾರಿ ಗುರುತಿಸಿದೆ. ಕ್ರಯ ಪತ್ರದಲ್ಲಿನ ದಾಖಲೆಯಲ್ಲಿ ಪಾಲುಪತ್ರ ವಿಭಾಗ ನೋಂದಣಿ ದಾಖಲೆಯಲ್ಲಿ ದಾರಿ ಇದೆ. ಆಕಾರ್ ಬಂದ್‌ನAತೆ ಒಂದು ಎಕರೆ ನಾಲ್ಕು ಗುಂಟೆ ಜಮೀನಿನಲ್ಲಿ…
ತುಮಕೂರು: ವಿದ್ಯಾರ್ಥಿಗಳು ಉತ್ತಮ ಕಲಿಕೆಯೊಂದಿಗೆ ದೇಶದ ಮುಂದಿನ ಸಂಪದ್ಭರಿತ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಡಯಟ್ ಪ್ರಾಂಶುಪಾಲರಾದ ಕೆ. ಮಂಜುನಾಥ್ ಕರೆ ನೀಡಿದರು. ತಾಲ್ಲೂಕಿನ ಗೊಲ್ಲಹಳ್ಳಿ ಬಳಿ ಇರುವ ಜವಹರ್ ನವೋದಯ ವಿದ್ಯಾಲಯದಲ್ಲಿ ಏರ್ಪಡಿಸಿದ್ದ 36ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಪಠ್ಯ ಮತ್ತು ಪಠ್ಯೇತರ ಜ್ಞಾನ ಪಡೆಯುತ್ತಿರುವ ವಿದ್ಯಾರ್ಥಿಗಳು ತಮ್ಮ ಮುಂದಿನ ಹೆಜ್ಜೆಯನ್ನು ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಇಡಬೇಕು. ಈ ಮೂಲಕ ಹೆತ್ತವರು ಹಾಗೂ ಶಾಲೆಯ ಶಿಕ್ಷಕರ ಕನಸನ್ನು ಈಡೇರಿಸಬೇಕು ಎಂದು ಸಲಹೆ ನೀಡಿದರು. ಈ ಹಿಂದೆ ಋಷಿಮುನಿಗಳ ಆಶ್ರಮದಲ್ಲಿ ಇದ್ದ ಶಿಕ್ಷಣ ಕಲಿಕೆಯ ಪರಿಕಲ್ಪನೆಯಲ್ಲಿ ಜವಹರ್ ನವೋದಯ ವಿದ್ಯಾಲಯದಲ್ಲಿ ಮಕ್ಕಳಿಗೆ ಶಿಕ್ಷಣ ದೊರೆಯುತ್ತಿದೆ. ಈ ಶಾಲೆಯಲ್ಲಿ ಕಲಿಯುವ ಅವಕಾಶ ಎಲ್ಲ ಮಕ್ಕಳಿಗೂ ಸಿಗುವುದಿಲ್ಲ. ಇಲ್ಲಿ ಕಲಿಯುತ್ತಿರುವ ಮಕ್ಕಳ ಪೂರ್ವಜನ್ಮದ ಪುಣ್ಯ ಎಂದರು. 1986 ರಲ್ಲಿ ಅಂದಿನ ಪ್ರಧಾನಿಗಳು ಇಡೀ ದೇಶಕ್ಕೆ ನೀಡಿದ ಬಹುದೊಡ್ಡ ಕೊಡುಗೆ ನವೋದಯ ವಿದ್ಯಾಲಯ. ಅಂದು ಅವರು ರೂಪಿಸಿದ ಶಿಕ್ಷಣ ನೀತಿ…
ತುಮಕೂರು : ವಾಹನ ಚಲಾಯಿಸುವವರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ತುಮಕೂರು ನಗರ ಸಂಚಾರಿ ಪೊಲೀಸ್ ಠಾಣೆ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ಇತ್ತೀಚೆಗೆ ನಗರದ ಜಿಲ್ಲಾ ಬಾಲಭವನದಲ್ಲಿ ಹಮ್ಮಿಕೊಂಡಿದ್ದ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಶಿಸ್ತುಬದ್ಧ ಜೀವನ ಮುಖ್ಯ. ಅಪ್ರಾಪ್ತ ವಯಸ್ಸಿನ ಮಕ್ಕಳು ದ್ವಿಚಕ್ರ ವಾಹನ ಚಾಲನೆ ಮಾಡಿದರೆ ಅಪರಾಧ. ಕಾನೂನು ಮೀರಿ ವಾಹನ ಚಾಲನೆ ಮಾಡಿದ ಅಪ್ರಾಪ್ತ ವಯಸ್ಸಿನ ಮಕ್ಕಳ ಪೋಷಕರು ನ್ಯಾಯಾಲಯಕ್ಕೆ ದಂಡ ಕಟ್ಟಬೇಕು. ಚಾಲನಾ ಪರವಾನಗಿ ಹೊಂದಿದ ಹಾಗೂ 18 ವರ್ಷ ತುಂಬಿದವರು ಮಾತ್ರ ವಾಹನ ಚಲಾಯಿಸಬಹುದು. ವೇಗವಾಗಿ ವಾಹನ ಚಾಲನೆ, ಹೆಲ್ಮೆಟ್ ಧರಿಸದೆ ವಾಹನ ಚಾಲನೆ…
ತುಮಕೂರು: ಗ್ರಾಮೀಣ ವಿದ್ಯಾರ್ಥಿಗಳು ವಿಜ್ಞಾನ ಕೋರ್ಸ್ಗಳಿಗೆ ಸೇರಲು ಹಿಂಜರಿಯಬಾರದು ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ: ಬಾಲಗುರುಮೂರ್ತಿ ಕರೆ ನೀಡಿದರು. ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ 2 ದಿನಗಳ ಸಿಇಟಿ, ನೀಟ್ ತರಬೇತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಮಾಹಿತಿ ಕೊರತೆ ಕಾರಣದಿಂದಾಗಿ ಬಹುತೇಕ ಗ್ರಾಮೀಣ ವಿದ್ಯಾರ್ಥಿಗಳು ವಿಜ್ಞಾನದ ಕೋರ್ಸುಗಳಿಗೆ ಸೇರಲು ಹಿಂದೇಟು ಹಾಕುವಂತಾಗಿದೆ. ಇದನ್ನು ಹೋಗಲಾಡಿಸಲು ಜಿಲ್ಲೆಯಾದ್ಯಂತ ವಿಜ್ಞಾನ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸುಗಳ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳಿಂದ ಒದಗಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು. ಗ್ರಾಮೀಣ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಕೀಳರಿಮೆ ಬೆಳೆಸಿಕೊಳ್ಳದೇ ಸಿಕ್ಕ ಶೈಕ್ಷಣಿಕ ಅವಕಾಶಗಳನ್ನು ಆತ್ಮವಿಶ್ವಾಸದಿಂದ ಬಳಸಿಕೊಂಡು ಯಶಸ್ಸು ಸಾಧಿಸಬೇಕು. ಅವಕಾಶ ಇದ್ದವರು ಉನ್ನತ ಶಿಕ್ಷಣ ಗಳಿಸುವುದು ಮುಖ್ಯವಲ್ಲ. ಬದಲಾಗಿ ಅವಕಾಶ ವಂಚಿತರು ಛಲದಿಂದ ಉನ್ನತ ಶಿಕ್ಷಣ ಗಳಿಸುವುದು ಮುಖ್ಯ ಎಂದರಲ್ಲದೆ, ಬರುವ ಫೆಬ್ರವರಿ ತಿಂಗಳಲ್ಲಿ ಸರ್ಕಾರಿ ಹಾಗೂ ಅನುದಾನಿತ ಕಾಲೇಜಿನ ವಿಜ್ಞಾನ ವಿದ್ಯಾರ್ಥಿಗಳಿಗೆ 10 ದಿನಗಳ…
ತುಮಕೂರು: ದೇಶವನ್ನು ಸೂಪರ್ ಪವರ್ ಆಗಿಸುವಲ್ಲಿ ವಿದ್ಯಾರ್ಥಿಗಳು ಮತ್ತು ನವ ಯುವಕರ ಕೊಡುಗೆ ಅತ್ಯಗತ್ಯ. ಪ್ರತಿಯೊಬ್ಬ ಯುವಕನು ಉದ್ಯೋಗವನ್ನು ಹುಡುಕುವುದರ ಜೊತೆಗೆ ತಮ್ಮಲ್ಲಿರುವ ಕೌಶಲ್ಯವನ್ನು ಬಳಸಿಕೊಂಡು ಉದ್ಯೋಗ ಸೃಷ್ಟಿ ಸುವಂತಾಗಬೇಕು. ಮೊದಲು ಸಿಕ್ಕಿರುವ ಉದ್ಯೋಗಾವಕಾಶಗಳನ್ನು ಉಪಯೋಗಿಸಿಕೊಂಡು ನಂತರ ವೇತನದ ಬಗ್ಗೆ ಯೋಚಿಸಿ, ಉದ್ಯೋಗಾವಕಾಶಗಳು ಚಿಕ್ಕದಿರಲಿ ದೊಡ್ಡದಿರಲಿ ಬಳಸಿಕೊಳ್ಳುವ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಎಂದು ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿ ಶುಭಕಲ್ಯಾಣ್ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಬೆಂಗಳೂರು, ಜಿಲ್ಲಾ ಕೌಶಲ್ಯ ಮಿಷನ್, ತುಮಕೂರು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ತುಮಕೂರು ವಿಶ್ವವಿದ್ಯಾನಿಲಯದ ಉದ್ಯೋಗ ಕೋಶ, ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ರೆಡ್ಡೀಸ್ ಫೌಂಡೇಶನ್ (ರಿ), ತುಮಕೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು ನಡೆದ ಉದ್ಯೋಗ ಮೇಳ-2025 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್ ಮಾತನಾಡಿದರು. ಈ ಉದ್ಯೋಗ ಮೇಳಕ್ಕೆ…
ತುಮಕೂರು: ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನಿರ್ದೇಶಕರ ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಇಂದು ಹೊರ ಬಿದ್ದಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ನಗರದ ತಾಲ್ಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಗೌರವಕುಮಾರ್ ಶೆಟ್ಟಿರವರ ಸಮಕ್ಷದಲ್ಲಿ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿ 10 ಗಂಟೆ ವೇಳೆಗೆ ಸಂಪೂರ್ಣ ಫಲಿತಾಂಶ ಪ್ರಕಟವಾಯಿತು. ತುಮಕೂರು ಗ್ರಾಮಾಂತರ, ತಿಪಟೂರು, ಮಧುಗಿರಿ, ಪಾವಗಡ ಹಾಗೂ ಗುಬ್ಬಿ ತಾಲ್ಲೂಕುಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ಕುಣಿಗಲ್, ಸಿರಾ, ಕೊರಟಗೆರೆ ತಾಲ್ಲೂಕಿನಿಂದ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು, ತುರುವೇಕೆರೆ ಮತ್ತು ಚಿಕ್ಕನಾಯಕನಹಳ್ಳಿ ತಾಲ್ಲೂಕಿನಿಂದ ಸ್ವತಂತ್ರ ಅಭ್ಯರ್ಥಿ ಜಯಗಳಿಸಿದ್ದಾರೆ. ತುಮಕೂರು ತಾಲ್ಲೂಕಿನಿಂದ ಸ್ಪರ್ಧಿಸಿದ್ದ ಹೆಚ್.ಎಂ. ನಂಜೇಗೌಡ 83 ಮತಗಳನ್ನು ಪಡೆದು ಹೆಚ್.ಕೆ. ರೇಣುಕಾಪ್ರಸಾದ್ (66 ಮತ) ರವರ ವಿರುದ್ಧ ಗೆಲುವು ಸಾಧಿಸಿದ್ದಾರೆ. ಗುಬ್ಬಿ ತಾಲ್ಲೂಕಿನಿಂದ ಶಾಸಕ ಹಾಗೂ ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ…
ತುಮಕೂರು: ತುಮಕೂರು ಜಿಲ್ಲೆಯಲ್ಲಿ ಹಲವಾರು ಕೈಗಾರಿಕೆಗಳು ಸ್ಥಾಪನೆಯಾಗಿವೆ, ಗುಬ್ಬಿಯಲ್ಲಿ ಹೆಚ್‌ಎಲ್‌ಎಲ್ ಆರಂಭಗೊAಡಿದೆ, ಈ ಕೈಗಾರಿಕೆಗಳಲ್ಲಿ ಸ್ಥಳೀಯ ವಿದ್ಯಾವಂತರಿಗೆ ಉದ್ಯೋಗ ಕಲ್ಪಿಸುವಂತಹ ಕಾರ್ಯಕ್ರಮ ರೂಪಿಸುವ ಕುರಿತು ಶಾಸಕರುಗಳೊಂದಿಗೆ ಸಮಾಲೋಚಿಸಿ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ತುಮಕೂರು ತಾಲ್ಲೂಕು ಗೂಳೂರಿನಲ್ಲಿ ಗುರುವಾರ ನಡೆದ ಗೂಳೂರು ಹೋಬಳಿ ಮಟ್ಟದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ವಿತರಣೆ ಮಾಡಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು. ದೂರದೃಷ್ಟಿ ಚಿಂತನೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನೂರಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಯೋಜನೆಗಳ ಫಲ ಜನರಿಗೆ ತಲುಪಬೇಕು. ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ತಂದು ತುಮಕೂರು ಜಿಲ್ಲೆಯನ್ನು ಮಾದರಿಯನ್ನಾಗಿ ಮಾಡುವ ಪ್ರಯತ್ನ ಮಾಡುತ್ತಿದ್ದೇನೆ. ಆರು ತಿಂಗಳಲ್ಲಿ ಸುಮಾರು 20 ರೈಲ್ವೆ ಗೇಟುಗಳಲ್ಲಿ ಮೇಲುಸೇತುವೆ, ಕೆಳಸೇತುವೆ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ನೆನೆಗುದಿಗೆ…











