ಹೆಬ್ಬೂರು: ನಾವು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿಯನ್ನು ನಿರ್ಮಾಣ ಮಾಡಿಯೇ ತೀರುತ್ತೇವೆ. ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಜಯಗಳಿಸಿದರೆ ಇತಿಹಾಸ ಸೃಷ್ಟಿಯಾಗುತ್ತದೆ. ಹೋರಾಟಗಳಲ್ಲಿ ನಾವು ಸತ್ತರೆ ನಮ್ಮ ಮುಂದಿನ ಪೀಳಿಗೆ ಕನಸುಗಳನ್ನು ಸಾಕಾರಗೊಳಿಸಲಿದೆ ಎಂಬ ನಂಬಿಕೆ ನಮಗಿದೆ ಎಂದು ಮುಖಂಡರಾದ ಹೆತ್ತೇನಹಳ್ಳಿ ಮಂಜುನಾಥ್ ಅವರು ತಿಳಿಸಿದರು. ಹೋಬಳಿಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಅವರ ಕಂಚಿನ ಪುತ್ಥಳಿ ನಿರ್ಮಾಣದ ಭೂಮಿ ಪೂಜೆಯನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಂಜುನಾಥ್, ಸಮ ಸಮಾಜಕ್ಕಾಗಿ ನಮ್ಮ ರಕ್ತದ ಕಣಕಣವೂ ಮಿಡಿಯುತ್ತಿದೆ. ಈ ನಾಡಿನ ಜನರಿಗಾಗಿ ನಮ್ಮ ಪ್ರಾಣ ತ್ಯಾಗಕ್ಕೂ ಸಿದ್ಧರಿದ್ದೇವೆ. ನಾವೆಲ್ಲರೂ ಜಾತಿ ಭೇದಗಳನ್ನು ಮರೆತು ಪರಸ್ಪರ ಕೈ ಹಿಡಿದು ಬದುಕೋಣ ಎಂದು ಸಾರಿದರು. ನಾವೆಲ್ಲಾ ಒಂದಾದಾಗ ಮಾತ್ರ ಈ ಸಾಮಾಜಿಕ ವ್ಯವಸ್ಥೆ ಸರಿಹೋಗುತ್ತದೆ. ಅಂಬೇಡ್ಕರ್ ಭಾರತದ ಕಣ್ತೆರೆಸಿದರು. ಆದರೆ, ಶ್ರೀವಾಲ್ಮೀಕಿ ಬದುಕಿನ ಮೌಲ್ಯಗಳನ್ನು ತಿಳಿಸಿಕೊಟ್ಟರು. ಇಂತಹ ದಾರ್ಶನಿಕರ ಮಾರ್ಗದರ್ಶನದಲ್ಲಿ…
Author: News Desk Benkiyabale
ತುಮಕೂರು: ತುಮಕೂರು ಹಾಲು ಒಕ್ಕೂಟದ ನೂತನ ಅಧ್ಯಕ್ಷ ಹಾಗೂ ಶಾಸಕ ಹೆಚ್.ವಿ. ವೆಂಕಟೇಶ್ ಅವರು ಸೋಮವಾರ ತುಮುಲ್‌ನ ಅಧ್ಯಕ್ಷರ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಅಧಿಕಾರ ವಹಿಸಿಕೊಂಡರು. ನಂತರ ಮಾತನಾಡಿದ ಅವರು, ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡಿದ್ದೇನೆ. ಹಾಲು ಒಕ್ಕೂಟದ ಅಭಿವೃದ್ಧಿಗೆ ಹೆಚ್ಚಿನ ಶ್ರಮ ವಹಿಸಿ ಕೆಲಸ ಮಾಡುವ ನಿಟ್ಟಿನಲ್ಲಿ ಎಲ್ಲ ನಿರ್ದೇಶಕರನ್ನು ವಿಶ್ವಾಸಕ್ಕೆ ಪಡೆದು ಕಾರ್ಯನಿರ್ವಹಿಸುತ್ತೇನೆ ಎಂದರು. ಹಾಲು ಒಕ್ಕೂಟವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಜಿಲ್ಲೆಯ ಸಚಿವರುಗಳು, ಶಾಸಕರು ಹಾಗೂ ಹಾಲು ಒಕ್ಕೂಟದ ನಿರ್ದೇಶಕರುಗಳ ಸಲಹೆ, ಮಾರ್ಗದರ್ಶನದೊಂದಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅವರು ಹೇಳಿದರು. ಹಾಲು ಒಕ್ಕೂಟದ ವತಿಯಿಂದ ರೈತರಿಗೆ ಏನೇನು ಅನುಕೂಲ ಮಾಡಲು ಸಾಧ್ಯವೋ ಆ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ನಾಗೇಶ್‌ಬಾಬು, ಎಸ್.ಆರ್. ಗೌಡ, ಡಿ. ಕೃಷ್ಣಕುಮಾರ್, ಮಾದಿಹಳ್ಳಿ ಪ್ರಕಾಶ್, ನಂಜೇಗೌಡ, ಸಿ.ವಿ. ಮಹಲಿಂಗಯ್ಯ, ಸಿದ್ದಗಂಗಯ್ಯ, ಚಂದ್ರಶೇಖರೆಡ್ಡಿ, ತುಮುಲ್ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಕಲ್ಲಹಳ್ಳಿ ದೇವರಾಜು,…
ತುಮಕೂರು : ರಾಷ್ಟçದ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ ಜನವರಿ 26ರ ಭಾನುವಾರ ನಡೆದ ಗಣರಾಜ್ಯೋತ್ಸವ ಸ್ತಬ್ಧಚಿತ್ರ ಪಥ ಸಂಚಲನದಲ್ಲಿ ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ : ಶಿಲ್ಪಕಲೆಯ ತೊಟ್ಟಿಲುʼ ರಾಜ್ಯದ ಸ್ತಬ್ಧಚಿತ್ರವು ನೆರೆದ ಜನಸ್ತೋಮವನ್ನು ಮಂತ್ರಮುಗ್ಧರನ್ನಾಗಿಸಿದ್ದಲ್ಲದೇ, ಚಪ್ಪಾಳೆಯ ಕರತಾಡನದ ಮೂಲಕ ಅದ್ದೂರಿ ಸ್ವಾಗತ ದೊರೆಯಿತು. ರಾಜಧಾನಿಯ ಕರ್ತವ್ಯ ಪಥದಲ್ಲಿ ರಾಜ್ಯದ ಸ್ತಬ್ಧಚಿತ್ರ ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ, ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಿತು. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ನಮ್ಮ ರಾಜ್ಯವು ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದ್ದು, ಈ ಬಾರಿ ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿರುವ ಐತಿಹಾಸಿಕ ದೇವಾಲಯಗಳು ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಿತು. ನಿಗಧಿತ ರೂಪು-ರೇಷೆಗಳಂತೆ ಈ ಸ್ತಬ್ಧಚಿತ್ರ ದಿನಗಳ ಲೆಕ್ಕದಲ್ಲಿ ಮೈದಳೆದಿದೆ. ಕಡಿಮೆ ಅವಧಿಯಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಸ್ತಬ್ಧಚಿತ್ರ ಕಣ್ಣಿಗೆ ಕಟ್ಟುವ ರೀತಿಯಲ್ಲಿ…
ಚಿಕ್ಕನಾಯಕನಹಳ್ಳಿ: ಚಿಕ್ಕನಾಯಕನಹಳ್ಳಿ, ತುಮುಲ್ ಅಧ್ಯಕ್ಷರನ್ನಾಗಿ ಚುನಾಯಿತರನ್ನು ಆಯ್ಕೆ ಮಾಡದೆ ನಾಮ ನಿರ್ದೇಶಕರಾಗಿದ್ದ ಶಾಸಕರನ್ನು ಮಾಡಿರುವುದು ರೈತರ ಪಾಲಿನ ಕರಾಳ ದಿನಗಳ ಆರಂಭ ಇದು ರೈತರ ಮುಖಕ್ಕೆ ಬಾರಿಸಿ ದಂತಾಗಿದೆ ಎಂದು ಮಾಜಿ ಸಚಿವ ಜೆಸಿ ಮಾಧುಸ್ವಾಮಿ ತೀವ್ರವಾಗಿ ಟೀಕಿಸಿದರು. ಪಟ್ಟಣದ ನಂದಿನಿ ಭವನದ ಆವರಣದಲ್ಲಿ ನಡೆದ ತುಮುಲ್ ನಾ ಆಡಳಿತ ಮಂಡಳಿ ಚುನಾವಣೆಯಲ್ಲಿ ತಾಲೂಕಿನ ನಿರ್ದೇಶಕರಾಗಿ ಆಯ್ಕೆಯಾದ ಬಿಎನ್ ಶಿವಪ್ರಕಾಶ್ ರವರು ಆಯೋಜಿಸಿದ್ದ ಮತದಾರರ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಜಾಪ್ರಭುತ್ವ ಮೌಲ್ಯಗಳಿಗೆ ತಿಲಾಂಜಲಿ ನೀಡಿ ಸಹಕಾರ ಕ್ಷೇತ್ರಗಳನ್ನು ಕುಟುಂಬದ ಸಂಸ್ಥೆಗಳನ್ನಾಗಿಸುವ ಹುನ್ನಾರಕ್ಕೆ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಕೆ ಎನ್ ರಾಜಣ್ಣ ಕೈಜೋಡಿಸಿ ಇರುವುದು ಇಡೀ ರೈತ ಸಮೂಹಕ್ಕೆ ಕಾಪಾಳ ಮೋಕ್ಷ ಮಾಡಿದಂತಾಗಿದೆ ಎಂದರು ಡಾ. ವರ್ಗೀಸ್ ಕುರಿಯನ್ ರವರ ಆಶಯವನ್ನು ಮಣ್ಣು ಪಾಲು ಮಾಡಿದ ಮಹನೀಯರ ನಡೆ ಕ್ಷಮಿಸಲಾರದೆಂದ ಅವರು ಹಾಲು ಒಕ್ಕೂಟದ ಎಲ್ಲಾ ವ್ಯವಸ್ಥೆಗಳು ಡೈರಿಗೆ ಹಾಲು ಹಾಕವ ರೈತರ ಹಕಾಗಿರಬೇಕೆನ್ನುವುದು ಕೊನೆ ಕುರಿಯನ್…
ತುರುವೇಕೆರೆ: ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋದಿಸಿ ಹಾಗೂ ಮೈಕ್ರೋ ಫೈನಾನ್ಸ್ ಹಾವಳಿ ಮತ್ತು ಕಿರುಕುಳ Àಡೆಗಟ್ಟುವಂತೆ ಆಗ್ರಹಿಸಿ ಜ.29 ರಂದು ಬೆಂಗಳರಿನ ರಿಸರ್ವ್ ಬ್ಯಾಂಕ್ ಕಚೇರಿ ಎದುರು ರೈತರ ಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾದ್ಯಕ್ಷ ರಾಜ್ಯ ಕಾರ್ಯದರ್ಶಿ ಎ.ಗೊವಿಂದರಾಜ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾರತ ದೇಶ ಕೃಷಿ ಪ್ರದಾನ ದೇಶವಾಗಿದೆ ಕೃಷಿ ಮಾಡುವ ರೈತರೂ ಇಂದಿಗೂ ಸಾಲದ ಸುಳಿಯಲ್ಲಿ ಸಿಲುಕಿ ಸಾಯುವಂತಹ ಪರಿಸ್ಥಿತಿ ಇದೆ. ದೇಶದಲ್ಲಿ 36 ನಿಮಿಷಕೊಬ್ಬ ರೈತರುಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು ದೇಶದಲ್ಲಿ 1ಲಕ್ಷದ 46 ಸಾವಿರ ರೈತರು ಸಾಲದ ಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ವರದಿ ಇದೆ. ಈ ಹಿಂದೆ ಕೃಷಿ ಕ್ಷೇತ್ರವನ್ನು ಸದೃಡಗೊಳಿಸುವ ದೃಷ್ಟಿಯಿಂದ ನಬಾರ್ಡ್ ಬ್ಯಾಂಕ್ ಸಾಲದ ಮೂಲಕ ಆರ್ಥಿಕ ನೆರವುನೀಡುತಿತ್ತು. ಆದರೆ ನಬಾರ್ಡ್ ಕೃಷಿಗೆ ನೀಡುತ್ತಿದ್ದ ಅಲ್ಪಾವದಿ ಸಾಲದ ಮೊತ್ತವನ್ನು ಕಡಿತ ಗೊಳಿಸಿದ್ದು ಕೃಷಿ ಕ್ಷೇತ್ರದ…
ತುಮಕೂರು: ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಸಂಸ್ಥೆಯಿAದ ಈ ತಿಂಗಳ 27ರಂದು ಸೋಮವಾರ ನಗರದಲ್ಲಿ ಸಂವಿಧಾನ ಸನ್ಮಾನ, ‘ಸಂವಿಧಾನ ಬದಲಾಯಿಸಿದ್ದು ಯಾರು’ ಎಂಬ ಪುಸ್ತಕ ಬಿಡುಗಡೆ ಹಾಗೂ ಸಂವಿಧಾನ ಗ್ರಂಥದ ಶೋಭಾಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಹೆಚ್.ಎ.ಆಂಜಿನಪ್ಪ ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿ, 27ರಂದು ಸೋಮವಾರ ನಗರÀದ ಬಿಜಿಎಸ್ ವೃತ್ತದಿಂದ ಮಂಗಳಾ ವಾದ್ಯದೊಂದಿಗೆ ಸಂವಿಧಾನ ಗ್ರಂಥದ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಂತರ ಬೆಳಿಗ್ಗೆ 10.30ಕ್ಕೆ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಡೆಯುವ ಸಂವಿಧಾನ ಸನ್ಮಾನ ಸಮಾರಂಭವನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಉದ್ಘಾಟಿಸುವರು. ಮಾಜಿ ಉಪ ಮುಖ್ಯಮಂತ್ರಿ, ಲೋಕಸಭಾ ಸದಸ್ಯ ಗೋವಿಂದ ಕಾರಜೋಳ ಅವರು ವಿಕಾಸ್ ಪುತ್ತೂರು ರಚಿಸಿರುವ ‘ಸಂವಿಧಾನ ಬದಲಾಯಿಸಿದ್ದು ಯಾರು?’ ಪುಸ್ತಕ ಬಿಡುಗಡೆ ಮಾಡುವರು. ಶಾಸಕ ಬಿ.ಸುರೇಶ್‌ಗೌಡ ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು. ಲೇಖಕ, ಸಾಮಾಜಿಕ ಕಾರ್ಯಕರ್ತ ವಾದಿರಾಜ್ ವಿಚಾರ ಮಂಡನೆ ಮಾಡುವರು, ಶಾಸಕ ಜಿ.ಬಿ.ಜ್ಯೋತಿಗಣೇಶ್, ಬಿಜೆಪಿ ಮುಖಂಡ…
ತುಮಕೂರು: ನೀವು ಎತ್ತರಕ್ಕೆ ಏರಬೇಕೆಂದರೆ ಕಷ್ಟಪಟ್ಟು ಕೆಲಸಮಾಡುವುದೊಂದೇ ದಾರಿ. ಯಾವ ಕ್ಷೇತ್ರದಲ್ಲಿ ನಿಮಗೆ ಅಭಿರುಚಿ, ಸಾಮರ್ಥ್ಯ ಇದೆಯೋ ಅದನ್ನು ಕಂಡುಕೊAಡು ಅದರಲ್ಲಿ ಸಮರ್ಪಣಾ ಭಾವದಿಂದ ದುಡಿಯಿರಿ. ಯಾವ ದೇಶದಲ್ಲಿಯೂ ಸರ್ಕಾರವೇ ಎಲ್ಲರಿಗೂ ಉದ್ಯೋಗ ಕೊಡುತ್ತಿಲ್ಲ ಎಂದು ಇನ್ಫೋಸಿಸ್ ಸಂಸ್ಥೆಯ ಸಹಸಂಸ್ಥಾಪಕ ಎನ್. ಆರ್. ನಾರಾಯಣ ಮೂರ್ತಿ ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯವು ಶನಿವಾರ ಹಮ್ಮಿಕೊಂಡಿದ್ದ ಪ್ರೇರಣಾ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ನಾಯಕತ್ವ ಗುಣವುಳ್ಳವನನ್ನು ಸಮಾಜ ಗೌರವಿಸುತ್ತದೆ. ಉತ್ತಮ ಮೌಲ್ಯಗಳು, ಪ್ರಾಮಾಣಿಕತೆಯುಳ್ಳ ಶಿಕ್ಷಣವು ನಿಮ್ಮನ್ನು ಉತ್ತಮ ನಾಯಕನನ್ನಾಗಿಸುತ್ತದೆ. ಆ ನಾಯಕತ್ವವು ಉದ್ಯೋಗವನ್ನು ಕಲ್ಪಿಸುತ್ತದೆ. ಆಹಾರ, ವಸತಿ, ಶಿಕ್ಷಣ ಇವುಗಳ ಅಭಿವೃದ್ಧಿಯಾಗದ ಹೊರತು ದೇಶವು ಅಭಿವೃದ್ಧಿಯಾಗದು ಎಂದರು. ಖಾಸಗಿ ವಲಯ ಬಡತನವನ್ನು ದೂರ ಮಾಡುವಲ್ಲಿ ತಕ್ಕಮಟ್ಟಿಗೆ ಕಾರ್ಯನಿರ್ವಹಿಸುತ್ತಿದೆ. ಭಾರತೀಯ ಜನಸಂಖ್ಯೆಯಲ್ಲಿ ಇಂದಿಗೂ ಶೇ. 60ರಷ್ಟು ಜನರಲ್ಲಿ ಬಡತನ ಕಾಡುತ್ತಿದ್ದು ಅದನ್ನು ದೂರ ಮಾಡಲು ಸಾಧ್ಯವಾಗಿಲ್ಲ ಎಂದರು. ನಾವು ವರ್ತಮಾನದ ತಂತ್ರಜ್ಞಾನವನ್ನು ಅರಿಯುವ ಪ್ರಯತ್ನ ಮಾಡಬೇಕು. ಸಮಯದ ಸದುಪಯೋಗ, ನಾಳೆಗೆ ನಮ್ಮನ್ನು…
ತುಮಕೂರು: ಮಣೆಗಾರ ಕೃತಿಯಲ್ಲಿ ದಲಿತ ಸಮುದಾಯದಲ್ಲಿನ ಬಡತನ, ದೌರ್ಜನ್ಯ, ಕ್ರೌರ್ಯ, ಅಸಹಾಯಕತೆಯನ್ನು ತುಂಬಾಡಿ ರಾಮಯ್ಯ ಮನಮುಟ್ಟುವಂತೆ ಚಿತ್ರಿಸಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ಡಿವಿಜಿ ಕನ್ನಡ ಅಧ್ಯಯನ ಮತ್ತು ಸಂಶೋಧನ ಕೇಂದ್ರ ಹಾಗೂ ತುಂಬಾಡಿ ರಾಮಯ್ಯ ಸ್ನೇಹ ಬಳಗದ ಸಂಯುಕ್ತಾಶ್ರಯದಲ್ಲಿ ಬುಧವಾರ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ `ಮಣೆಗಾರ 25’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಡತನ ಶ್ರೇಣಿಕರಣದ ಅತ್ಯಂತ ಕೆಳಮಟ್ಟದಲ್ಲಿ ಇರುವಂತಹ ದಲಿತರ ಮೇಲೆ ಮೇಲ್ವರ್ಗದವರಿಂದ ಆಗುವ ದೌರ್ಜನ್ಯಗಳು, ಅವಮಾನ, ಕ್ರೌರ್ಯಗಳನ್ನು ಈ ಪುಸ್ತಕದಲ್ಲಿ ಕಾಣಬಹುದು ಎಂದರು. ಪತ್ರಕರ್ತ ರಘುನಾಥ್ ಚ. ಹ. ಮಾತನಾಡಿ, ಈ ಕೃತಿಯಲ್ಲಿ ಸಾಂಸ್ಕೃತಿಕ ಸಾಮಾಜಿಕ ಮಹತ್ವ ಎದ್ದು ಕಾಣಿಸುತ್ತದೆ. ಈ ಕೃತಿಯ ಮುಖಾಂತರ ಮಣೆಗಾರ ಎಂಬ ವ್ಯಕ್ತಿಯನ್ನು ವಿಶ್ವಮಾನವನನ್ನಾಗಿ ಲೇಖಕರು ಚಿತ್ರಿಸಿದ್ದಾರೆ. ಸೃಜನಶೀಲ ಭಾಷೆಯ ಉಪಯೋಗ ಮತ್ತು ಕಹಿಯನ್ನು ಮೀರಿದ ಕಾರುಣ್ಯ, ಶೋಷಣೆಯ ವಿರುದ್ಧದ ತಣ್ಣನೆಯ ಧ್ವನಿಯ ಮೂಲಕ ಸಾಂಸ್ಕೃತಿಕ ಅನನ್ಯತೆಯನ್ನು ಕಟ್ಟುವಲ್ಲಿ ಈ ಕೃತಿ…
ತುಮಕೂರು: ನಗರದ ಕಲ್ಪತರು ಸಾಂಸ್ಕೃತಿಕ ವೇದಿಕೆ ಬರುವ ಫೆಬ್ರವರಿ 19ರಿಂದ 23ರ ವರೆಗೆ ನಗರದಲ್ಲಿ ವಿವಿಧ ಸಾಂಸ್ಕೃತಿಕ ಕಲೆ ಹಾಗೂ ಮನರಂಜನಾ ಸ್ಪರ್ಧೆಗಳು ಒಳಗೊಂಡ ವೈಭವದ ಕಲ್ಪತರು ಕಲಾ ಉತ್ಸವ ಏರ್ಪಡಿಸಿದೆ. ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯುವ ಐದು ದಿನಗಳ ಈ ಉತ್ಸವದಲ್ಲಿ ನಾಡಿನ ಹೆಸರಾಂತ ಕಲಾವಿದರು, ಗಣ್ಯರು ಭಾಗವಹಿಸಲಿದ್ದಾರೆ ಎಂದು ವೇದಿಕೆಯ ಸೋಮಶೇಖರ್, ತನುಜ್‌ಕುಮಾರ್ ಹೇಳಿದ್ದಾರೆ. ನಗರದ ಆರ್‌ಟಿಓ ಕಚೇರಿ ಆವರಣದ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಪೂಜೆ ಸಲ್ಲಿಸಿ ಕಾರ್ಯಕ್ರಮದ ಕರಪತ್ರಗಳನ್ನು ಅನಾವರಣಗೊಳಿಸಿದರು. ಉತ್ಸವದಲ್ಲಿ ಲಿಟಲ್ ರಾಜ, ರಾಣಿ ಫ್ಯಾಷನ್ ಷೋ, 18ರಿಂದ 24 ವಯಸ್ಸಿನ ಯುವತಿಯರಿಗೆ ಮಿಸ್ ತುಮಕೂರು ಸ್ಪರ್ಧೆ, 18ರಿಂದ 24 ವರ್ಷದ ಯುವಕರಿಗೆ ಮಿಸ್ಟರ್ ತುಮಕೂರು ಸ್ಪರ್ಧೆ, 13 ವರ್ಷ ಮೇಲ್ಪಟ್ಟ ಮಕ್ಕಳ ವಾಯ್ಸ್ ಆಫ್ ತುಮಕೂರು ಗೀತಗಾಯನ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಇದರ ಜೊತೆಗೆ ಆಕರ್ಷಕ ವಸ್ತುಪ್ರದರ್ಶನ, ಆಹಾರ ಮೇಳ, ಮನರಂಜನಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ವಿದ್ಯಾವಾಹಿನಿ ಶಿಕ್ಷಣ ಸಂಸ್ಥೆ…
ತುಮಕೂರು: ವಿದ್ಯಾರ್ಥಿ, ಯುವಜನರಲ್ಲಿ ಸಂಚಾರಿ ನಿಯಮಗಳು ಹಾಗೂ ಸುರಕ್ಷಿತ ಸಂಚಾರ ಕುರಿತಂತೆ ಅನುಸರಿಸಬೇಕಾದ ಎಚ್ಚರಿಕೆ ಬಗ್ಗೆ ವಿವಿಧ ಸಂಘಸAಸ್ಥೆಗಳ ನೇತೃತ್ವದಲ್ಲಿ ಬುಧವಾರ ನಗರದ ಸಿದ್ಧಗಂಗಾ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ನೆಹರೂ ಯುವ ಕೇಂದ್ರ, ತುಮಕೂರು ಸಂಚಾರಿ ಪೊಲೀಸ್ ವಿಭಾಗ, ರೂಟರಿ ಕ್ಲಬ್, ಡಾ.ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿದ ಸಂಚಾರಿ ಪೊಲೀಸ್ ಠಾಣೆಯ ಉಪ ನಿರೀಕ್ಷಕ ರಮೇಶ್ ಅವರು ಮಾತನಾಡಿ, ಸಂಚಾರಿ ನಿಯಮಗಳ ಪಾಲನೆಯಿಂದ ಸುರಕ್ಷಿತ ಸಂಚಾರ ಸಾಧ್ಯ. ನಿಯಮ ಉಲ್ಲಂಘಿಸಿದರೆ ಅಪಘಾತವಾಗುವ ಅಪಾಯವೂ ಇದೆ, ದಂಡ ವಿಧಿಸಲು ಅವಕಾಶವಿದೆ. ವಿಶೇಷವಾಗಿ ವಿದ್ಯಾರ್ಥಿಗಳು, ಯುವ ಜನರು ರಸ್ತೆ ನಿಯಮಗಳನ್ನು ಪಾಲನೆ ಮಾಡಿ, ಉಲ್ಲಂಘನೆ ಮಾಡದಂತೆ ಎಚ್ಚರಿಕೆಯಿಂದ ಸಂಚರಿಸಬೇಕು ಎಂದರು. ಸಿದ್ಧಗAಗಾ ಡ್ರೆöÊವಿಂಗ್ ಸ್ಕೂಲ್ ಪ್ರಾಂಶುಪಾಲರಾದ ಟಿ.ಆರ್.ಸದಾಶಿವಯ್ಯ ಮಾತನಾಡಿ, ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಕಡ್ಡಾಯವಾಗಿ ತಿಳಿದುಕೊಳ್ಳಬೇಕು. ವಾಹನ ಚಲಾವಣೆ ಮಾಡಲು ಚಾಲನಾ ಪರವಾನಗಿ ಹೊಂದಿರಬೇಕು, ವಾಹನದ ದಾಖಲಾತಿಗಳು, ಇನ್ಷೂರೆನ್ಸ್ ಮತ್ತಿತರ…











