ಹುಳಿಯಾರು: ಗಣಿಬಾದಿತ ಪ್ರದೇಶಾಭಿವೃದ್ಧಿಗಾಗಿ ಮೀಸಲಾಗಿರುವ ಗಣಿ ದುಡ್ಡಲ್ಲಿ ಗಣಿಬಾದಿತ ಪ್ರದೇಶದ ಹಳ್ಳಿಗಳಿಗೆ ಮನೆಗೆರಡು ಹಸುಗಳನ್ನು ಕೊಡಿಸುವ ಚಿಂತನೆಯಿದ್ದಿ ಇದಕ್ಕಾಗಿ ಪಶು ಇಲಾಖೆಯಿಂದ ಸಮೀಕ್ಷೆ ಮಾಡಿಸಿ ವರದಿ ಸಲ್ಲಿಸಲಾಗಿದೆ ಎಂದು ಶಾಸಕ ಸಿ.ಬಿ.ಸುರೇಶ್‌ಬಾಬು ತಿಳಿಸಿದರು. ಚಿಕ್ಕನಾಯಕನಹಳ್ಳಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಗ್ರಾಮ ಪಂಚಾಯ್ತಿ ಸಂಯುಕ್ತ ಆಶ್ರಯದಲ್ಲಿ ಹುಳಿಯಾರು ಹೋಬಳಿಯ ಸೀಗೆಬಾಗಿ ಗೇಟ್‌ನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಿಶ್ರ ತಳಿ ಹಸುಗಳ ಹಾಲು ಕರೆಯುವ ಸ್ಪರ್ಧೆ ಮತ್ತು ಕರುಗಳ ಪ್ರದರ್ಶನ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ತಾಲೂಕಿನ ಅನೇಕ ಕುಟುಂಬಗಳು ಇಂದು ಹೈನುಗಾರಿಕೆಯಿಂದ ನಡೆಯುತ್ತಿವೆ. ಹಾಗಾಗಿ ಹೈನುಗಾರಿಕೆಗೆ ಉತ್ತೇಜನ ನೀಡುವ ಜೊತೆಗೆ ವೈಜ್ಞಾನಿಕವಾಗಿಯೂ ಖರ್ಚು ಕಡಿಮೆ ಮಾಡಿ ಹಾಲು ಉತ್ಪಾದಿಸುವ ಸಲುವಾಗಿ ಪಶು ಇಲಾಖೆಯ ಸಹಾಯಕ ನಿರ್ದೇಶಕ ರೆ.ಮ.ನಾಗಭೂಷಣ್ ಅನೇಕ ಕಾರ್ಯಕ್ರಮಗಳನ್ನು ಸಂಘಟಿಸುತ್ತಿದ್ದಾರೆ. ರೈತರನ್ನು ಅಧ್ಯಯನ ಪ್ರವಾಸಕ್ಕೆ ಕರೆದೊಯ್ಯುವ, ಉಚಿತ ತಪಾಸಣಾ ಶಿಬಿರ, ಬರಡು ರಾಸು ಚಿಕಿತ್ಸಾ ಶಿಬಿರ, ತರಬೇತಿ, ಸ್ಪರ್ಧೆ ಹೀಗೆ ಅನೇಕ…
Author: News Desk Benkiyabale
ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಇಂದು ತುಮಕೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ10 ಗಂಟೆಗೆ ಹೆಚ್.ಎ.ಎಲ್ ವಿಮಾನ ನಿಲ್ದಾಣ, ಬೆಂಗಳೂರು ಮೂಲಕ ತುಮಕೂರು ವಿಶ್ವವಿದ್ಯಾಲಯ ಹೆಲಿಪ್ಯಾಡ್‌ಗೆ ಬಂದು ಇಳಿಯಲಿದ್ದಾರೆ. ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಪ್ರಗತಿ ಸಂಕ್ರಾAತಿ ಸುಗ್ಗಿ-2” ಸಮಾರಂಭ ಉದ್ಘಾಟಸಿ ನಂತರ 11.30ರ ಸಮಯಕ್ಕೆ ಕುಣಿಗಲ್ ರಸ್ತೆಯ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಹಮ್ಮಿಕೊಂಡಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹುಳಿಯಾರು: ಹುಳಿಯಾರು ಹೋಬಳಿಯ ಗೋಪಾಲಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತಿಚೆಗೆ ಮಕ್ಕಳ ಸಂತೆ ಏರ್ಪಡಿಸಲಾಗಿತ್ತು. ಈ ಭಾಗದ ಪ್ರಮುಖ ವಾಣಿಜ್ಯ ಬೆಳೆಗಳಾದ ಹುರುಳಿಕಾಳು, ಅವರೆಕಾಯಿ ಮಾರಾಟ ಗಮನ ಸೆಳೆಯುವ ಜೊತೆಗೆ ಹೆಚ್ಚು ಮಾರಾಟವಾಯಿತು. ಶಾಲೆಯ ಮುಖ್ಯಶಿಕ್ಷಕಿ ನಾಗರತ್ನಮ್ಮ ಮಾತನಾಡಿ ನಾಲ್ಕು ಗೋಡೆಗಳ ಮದ್ಯೆ ಕಲಿಯುವ ಪಾಠ ಜ್ಞಾನಾರ್ಜನೆ ನೀಡಿದರೆ ಅನುಭವ ಕಲಿಸುವ ಪಾಠ ಜೀವನಕ್ಕೆ ಉಪಯುಕ್ತವಾಗುತ್ತದೆ. ಶೈಕ್ಷಣಿಕ ಹಂತದಲ್ಲಿ ವ್ಯವಹಾರ ಜ್ಞಾನ ಕಲಿತರೆ ಮುಂದೆ ಜೀವನ ನಿರ್ವಹಣೆಗೆ ನೆರವಾಗುತ್ತದೆ. ಈ ನಿಟ್ಟಿನಲ್ಲಿ ಶಾಲೆಯಲ್ಲಿ ಮಕ್ಕಳ ಸಂತೆ ಏರ್ಪಡಿಸಿರುವುದಾಗಿ ತಿಳಿಸಿದರು. ಮಕ್ಕಳ ಸಂತೆಯಲ್ಲಿ ವಿದ್ಯಾರ್ಥಿಗಳು ತೆಂಗಿನ ಕಾಯಿ, ಎಳನೀರು, ತರಕಾರಿ, ಸೊಪ್ಪು, ಚರುಮುರಿ, ಚಾಕ್ಲೇಟ್, ಬಿಸ್ಕೇಟ್ ಸೇರಿದಂತೆ ವಿವಿಧ ಅಂಗಡಿಗಳನ್ನು ಹಾಕಿದ್ದರು. ಕೆಲವು ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಬೆಳೆಯುವ ಅವರೆಕಾಯಿ, ಹುರುಳಿಕಾಯಿ, ಅಲಸಂದೆ, ರಾಗಿ ಮುಂತಾದವುಗಳನ್ನು ಸಂತೆಯಲ್ಲಿ ಇಟ್ಟು ಸಾರ್ವಜನಿಕರ ಗಮನ ಸೆಳೆದು, ಉತ್ತಮ ವ್ಯಾಪಾರ ಮಾಡಿದರು. ಶಾಲೆಯ ಶಿಕ್ಷಕಿ ಯರು ತಮಗಿಷ್ಟವಾದ ವಸ್ತುಗಳನ್ನು ಖರೀದಿಸಿದರು.
ತುಮಕೂರು: ಕಲ್ಪತರು ನಗರದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದ್ದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 39ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಅಂತಿಮ ಅಂತದ ಸಿದ್ಧತೆಗಳು ಪೂರ್ಣಗೊಂಡಿದ್ದು ಶುಭಕೋರಿನ 39ನೇ ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಸುದ್ದಿ ಮನೆಯ ಎಲ್ಲಾ ಸ್ನೇಹಿತರಿಗೂ ಸ್ವಾಗತ ಕೋರಲಿದ್ದು ನಾಳೆ ನಡೆಯುವ ಸಮ್ಮೇಳನವನ್ನ ನಾವೆಲ್ಲರೂ ಸೇರಿ ಯಶಸ್ವಿಗೊಳಿಸೋಣ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ತಿಳಿಸಿದರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಈಗಾಗಲೇ ಅಂತಿಮ ಹಂತ ಸಿದ್ಧತೆಗಳನ್ನ ಪೂರ್ಣಗೊಳಿಸಿ ನಿರ್ಮಾಣ ಗೊಂಡಿರುವ ವೇದಿಕೆಯ ಸಿದ್ದತೆ ಕಾರ್ಯಗಳನ್ನು ಪರಿಶೀಲಿಸಿ ಮಾತನಾಡಿದ ಅವರು ಸಂಘದ ಜಿಲ್ಲಾ ಘಟಕ ತುಮಕೂರು ಇವರು ಅದ್ದೂರಿಯಾಗಿ 39ನೇ ಸಮ್ಮೇಳನಕ್ಕೆ ಸಿದ್ಧ ಮಾಡಿದ್ದು, ಸಮ್ಮೇಳನದ ಮುಖ್ಯ ರೂವಾರಿಗಳಾದ ಡಾಕ್ಟರ್ ಜಿ ಪರಮೇಶ್ವರ್ ಅವರು ಸಮ್ಮೇಳನದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು ನಾಡಿನ ವಿವಿಧ ಗಣ್ಯರು ಮಠಾಧೀಶರು ಸೇರಿ ಸಮ್ಮೇಳನವನ್ನು ಯಶಸ್ವಿಗೊಳಿಸಲಿದ್ದಾರೆ ಎಂದು ತಿಳಿಸಿದರು. ನಗರದ ಟೌನ್ ಹಾಲ್ ವೃತ್ತದಿಂದ ನಡೆಯಲಿರುವ ರಾಜ್ಯ…
ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿಯ ಸೀಗೆಹಳ್ಳಿ ಮಜರೆ ಚಟ್ಟನಹಳ್ಳಿ ಗ್ರಾಮದ ಶ್ರೀ ಹನುಮಂತರಾಯ ಮತ್ತು ಶ್ರೀ ನರಸಿಂಹಸ್ವಾಮಿ ದೇವಾಲಯವನ್ನು ಉಳಿಸಿ ಮತ್ತು ದೇವಸ್ಥಾನದ ಆಸ್ತಿಯನ್ನು ಸರ್ಕಾರವು ವಶಕ್ಕೆ ಪಡೆಯುವಂತೆ ಚಟ್ಟನಹಳ್ಳಿ ಗ್ರಾಮಸ್ಥರು ತಾಲೂಕಿನ ದಂಡಾಧಿಕಾರಿಯಾದ ಕುಂ.ಞ. ಅಹಮ್ಮದ್ ರವರಿಗೆ ಮನವಿ ಮಾಡಿದರು. ಚಟ್ಟನಹಳ್ಳಿ ಗ್ರಾಮಕ್ಕೆ ಗ್ರಾಮಸ್ಥರ ಮನವಿ ಮೇರೆಗೆ ಆಗಮಿಸಿದ ತಹಶೀಲ್ದಾರ್ ರವರಿಗೆ ಗ್ರಾಮಸ್ಥರು ತಮ್ಮ ಮನವಿ ಸಲ್ಲಿಸುವ ಮೂಲಕ ಗ್ರಾಮದಲ್ಲಿ ಪುರಾತನ ಕಾಲದ ಇತಿಹಾಸವುಳ್ಳ ಶ್ರೀ ಹನುಮಂತರಾಯ ಸ್ವಾಮಿ ಮತ್ತು ಶ್ರೀ ನರಸಿಂಹ ಸ್ವಾಮಿ ದೇವಾಲಯವು, ಧಾರ್ಮಿಕ ದತ್ತಿ ಮುಜರಾಯಿ ಇಲಾಖೆಗೆ ಸೇರಿದೆ. ವೆಂಕಟೇಶ ಎಂಬುವನು ಶ್ರೀ ಹನುಮಂತರಾಯ ದೇವರಿಗೆ ಅರ್ಚಕನಾಗಿ, ಗಣೇಶ ಎಂಬುವನು ಶ್ರೀ ನರಸಿಂಹಸ್ವಾಮಿ ದೇವಾಲಯದ ಅರ್ಚಕನಾಗಿ ಸರ್ಕಾರ ನೇಮಿಸುತ್ತದೆ ಎಂದರು. ಈ ಸಂದರ್ಭದಲ್ಲಿ ಮಾಯಸಂದ್ರ ಆರ್.ಐ. ರಂಗಸ್ವಾಮಿ. ಕಸಬಾ ಶಿವಕುಮಾರ್. ಗ್ರಾಮ ಲೆಕ್ಕಾಧಿಕಾರಿ ಸತೀಶ್ ಮತ್ತು ಗುಡಿಗೌಡರಾದ ನಾರಾಯಣ. ಪಟೇಲರಾದ ನಾರಾಯಣ. ಯುವ ಮುಖಂಡ ಗಂಗಣ್ಣ. ವಿಶ್ವನಾಥ್. ವೆಂಕಟೇಶ್. ಮಗ್ಗದಪಾಳ್ಯ ಗಂಗಣ್ಣ ಮಾಜಿ ಗ್ರಾಫಂ ಅಧ್ಯಕ್ಷರು.…
ಬೆಂಗಳೂರು: ಕಲ್ಪತರು ನಾಡು ತುಮಕೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಸಂಘಟನೆ ಮಾಡುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಜ.18 ಮತ್ತು 19 ರಂದು ಎರಡು ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ. ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ, ಜ.18ರಂದು ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದರು. ಡಿವಿಜಿ ಸಂಸ್ಥಾಪಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಶತಮಾನೋತ್ಸದತ್ತ ಮುನ್ನಡೆಯುತ್ತಿದ್ದು, ರಾಜ್ಯದ ಹತ್ತು ಸಾವಿರಕ್ಕೂ ಹೆಚ್ಚಿನ ಕಾರ್ಯನಿರತ ಪತ್ರಕರ್ತರ ಸದಸ್ಯತ್ವ ಉಳ್ಳ ದೇಶದ ಏಕೈಕ ಬೃಹತ್ ಸಂಘಟನೆಯಾಗಿದೆ ಎಂದರು. ಪತ್ರಕರ್ತರು ಎದುರಿಸುತ್ತಿರುವ ವೃತ್ತಿ ಪರ ಸಮಸ್ಯೆಗಳು , ಆರೋಗ್ಯ, ಪ್ರೋತ್ಸಾಹಕ ಯೋಜನೆಗಳ ಸಂಬAಧಿಸಿದAತೆ ಸರ್ಕಾರದ ಗಮನ ಸೆಳೆಯಲು ಸಮ್ಮೇಳನಗಳು ಸಮರ್ಥ ವೇದಿಕೆಯಾಗುತ್ತವೆ. ಈ ಎಲ್ಲಾ ಸಂಘಟನಾತ್ಮಕ ಚಟುವಟಿಕೆಗಳನ್ನು ವಾರ್ಷಿಕ ಸಮ್ಮೇಳನಗಳಲ್ಲಿ ಮಂಥನ ಮಾಡುವ ಅವಕಾಶವನ್ನು ಸೃಷ್ಟಿಕೊಳ್ಳಲಾಗಿದೆ. ಪತ್ರಿಕೋದ್ಯಮ, ಪತ್ರಕರ್ತರು ಸೇರಿದಂತೆ ನ್ಯೂಸ್ ರೂಂ ನ ಎಲ್ಲಾ ಆಯಾಮಗಳ…
ತುಮಕೂರು: ನವಭಾರತ ನಿರ್ಮಾಣಕ್ಕೆ ಯುವಜನತೆ ಮುಂದಾಗಬೇಕು. ಭಾರತವನ್ನು ಸುಭದ್ರವನ್ನಾಗಿ ಮಾಡುವ ಜವಾಬ್ದಾರಿ ಎಲ್ಲರದು ಎಂದು ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಸ್ವಾಮಿ ಜಪಾನಂದಜೀ ಮಹಾರಾಜ್ ಹೇಳಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಅಧ್ಯಯನ ಪೀಠದ ವತಿಯಿಂದ ಗುರುವಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ 162ನೇ ಜನ್ಮ ಮಹೋತ್ಸವದ ಹಾಗೂ ರಾಷ್ಟಿçÃಯ ಯುವದಿನಾಚರಣೆ ನೆರವೇರಿಸಿ ಮಾತನಾಡಿದ ಅವರು, ದೇಶಕ್ಕೋಸ್ಕರ ಜೀವನದುದ್ದಕ್ಕೂ ಪ್ರಾರ್ಥನೆ ಮಾಡಿ, ದೇಶವು ಪಾಶ್ಚಿಮಾತ್ಯರ ಹಿಡಿತದಿಂದ ಮುಕ್ತಿ ಪಡೆಯಬೇಕು ಎಂದು ಹೋರಾಡಿದ ಮಹಾನ್ ವ್ಯಕ್ತಿ ವಿವೇಕಾನಂದರು ಎಂದರು. ಶಾಲೆಯ ಶಿಕ್ಷಣದಲ್ಲಿ ಅಗತ್ಯ ವಿಚಾರಗಳಿಗಿಂತ ಅನಗತ್ಯ ವಿಚಾರಗಳನ್ನು ತುಂಬುತ್ತಿದ್ದಾರೆ. ಸ್ವಾಮಿ ವಿವೇಕಾನಂದರವರ ವಿಚಾರಧಾರೆ ಕಣಕಣದಲ್ಲಿ ಬರಬೇಕು. ಯುವಜನತೆ ಶಕ್ತಿಯ ಜ್ವಾಲೆಗಳಾಗಬೇಕು ಎಂದರು. ಶಿಕ್ಷಣ ತಜ್ಞರಾದ ಕೆ. ಆರ್. ಪದ್ಮಿನಿ ಮಾತನಾಡಿ ಸ್ವಾಮಿ ವಿವೇಕಾನಂದರು ಪರೀಕ್ಷಿಸದೆ ಯಾವುದನ್ನೂ ಒಪ್ಪಿಕೊಳ್ಳುತ್ತಿರಲಿಲ್ಲ. ಏಕಾಗ್ರತೆ ಎಂಬುದು ಜೀವನದ ಮುಖ್ಯ ಘಟಕ ಎಂದರು. ಶಕ್ತಿಯು ನಮ್ಮೊಳಗೆ ಇದೆ ನಾವು ಏನು ಬೇಕಾದರೂ ಸಾಧಿಸಬಹುದು. ಶಕ್ತಿಯ ಗಣಿಗಳಾಗಿ ಒಳ್ಳೆಯ ವಿಚಾರಗಳಿಗೆ…
ತುಮಕೂರು: ಜನವರಿ 17 ರಿಂದ 19 ರವರೆಗೆ ಬಹುತ್ವ ಸಂಸ್ಕೃತಿ ಭಾರತೋತ್ಸವವನ್ನು ಕಲಬುರಗಿ ಮಹಾನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಡಾ. ಎಸ್.ವೈ. ಗುರುಶಾಂತ್ ತಿಳಿಸಿದರು. ಅವರು ತುಮಕೂರಿನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಏಕ ಸಂಸ್ಕೃತಿಯನ್ನು ಹೇರುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿರುವುದು ಇತ್ತಿಚಿನ ದಿನಗಳಲ್ಲಿ ಎದ್ದು ಕಾಣುತ್ತಿದೆ. ಬಹುಸಂಸ್ಕೃತಿಯು ಭಾರತದ ಹೆಗ್ಗುರುತು. ವೈವಿಧ್ಯತೆಯಲ್ಲಿ ಏಕತೆ ಭಾರತದ ವಿಶಿಷ್ಟತೆ. ಇಂತಹ ಬಹುತ್ವ ಭಾರತದ ಮೇಲೆ ವೈದಿಕ ಧಾರ್ಮಿಕತೆಯ ಯಜಮಾನಿಕೆಯ ಏಕ ಸಂಸ್ಕೃತಿಯನ್ನು ಹೇರುವ ಪ್ರಯತ್ನಗಳು ನಡೆಯುತ್ತಿರುವುದು ಆತಂಕಕಾರಿಯಾಗಿದ್ದು ಇದನ್ನು ವಿರೋಧಿಸಿ ‘ಬಹುತ್ವ ಸಂಸ್ಕೃತಿ ಭಾರತೋತ್ಸವ’ ವನ್ನು ಇದೇ 2025 ಜನವರಿ 17 ರಿಂದ 19 ರವರೆಗೆ ಕಲ್ಬುರ್ಗಿ ಮಹಾನಗರದಲ್ಲಿ ಆಯೋಜಿಸಲಾಗುತ್ತಿದೆ. ಸುಮಾರು ಐವತ್ತಕ್ಕೂ ಅಧಿಕ ವಿವಿಧ ಜನ ಸಂಘಟನೆಗಳು ಒಡಗೂಡಿದ ‘ಸೌಹಾರ್ದ ಕರ್ನಾಟಕ’ ವು ವ್ಯವಸ್ಥೆಗೊಳಿಸುತ್ತಿದ್ದು ರಾಜ್ಯದ ವಿವಿದೆಡೆಗಳಿಂದ 5000ಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ನೆಲಮೂಲ ಸಂಸ್ಕ್ರತಿಗಳನ್ನು ತುಳಿದಿಕ್ಕಿ, ವೈದಿಕ ಧಾರ್ಮಿಕತೆಯನ್ನೇ ಭಾರತೀಯ ಸಂಸ್ಕೃತಿ ಎಂದು ಬಿಂಬಿಸುವ ಹುನ್ನಾರಗಳನ್ನು ವಿರೋಧಿಸಿ ‘ಬಹುತ್ವ…
ತುಮಕೂರು: ಯುವಕರು ತರಗತಿಗಳಲ್ಲಿ, ಹಾಗೂ ಬಿಡುವಿನ ವೇಳೆಯಲ್ಲೆಲ್ಲ ಮೊಬೈಲಗಳನ್ನು ಬಳಸುತ್ತಾರೆ. ಹೆಚ್ಚು ಮೊಬೈಲ್ ಬಳಕೆ ಮಾಡುವುದರಿಂದ ಕುರುಡು ಮತ್ತು ಕಿವುಡುತನ ಚಿಕ್ಕ ವಯಸ್ಸಿನಲ್ಲಿಯೇ ಕಾಡುತ್ತದೆ ಎಂದು ಡಫ್ ಚಿಲ್ಡçನ್ ಫೌಂಡೇಶನ್‌ನ ಕಾರ್ಯಕ್ರಮ ವ್ಯವಸ್ಥಾಪಕ ವೀರೇಶ್ ವೈ. ಎಸ್. ಹೇಳಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಮತ್ತು ರೆಡ್ ರಿಬ್ಬನ್ ಕ್ಲಬ್ ಆಯೋಜಿಸಿದ್ದ ಉಚಿತ ಕಣ್ಣು ಮತ್ತು ಕಿವಿ ತಪಾಸಣಾ ಶಿಬಿರವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಹಿಂದೆ ಎಪ್ಪತ್ತು, ಎಂಬತ್ತು ವಯಸ್ಸಿನವರಿಗೆ ಕಾಡುತ್ತಿದ್ದ ಕಿವುಡುತನ ಮತ್ತು ಅಂಧತ್ವ ಇಂದು 10-15ನೇ ವಯಸ್ಸಿನ ಮಕ್ಕಳಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಹೆಚ್ಚಿನ ಶಬ್ದಮಾಲಿನ್ಯ ಮತ್ತು ಧ್ವನಿ ಉಪಕರಣಗಳ ಅತಿಯಾದ ಬಳಕೆ. ನವಜಾತ ಶಿಶುಗಳಲ್ಲೂ ಈ ಸಮಸ್ಯೆ ಹೆಚ್ಚುತ್ತಿದೆ ಎಂದರು. ಮಕ್ಕಳಿಗೆ ಐದು ವರ್ಷದ ಒಳಗೆ ಕಿವಿ ಕೇಳದಿದ್ದರೆ ಅವರು ಮಾತನಾಡುವುದನ್ನು ಕಲಿಯುವುದಿಲ್ಲ. ಹಾಗಾಗಿ ಮಕ್ಕಳ ಶ್ರವಣ ನ್ಯೂನತೆಯನ್ನು ಸೂಕ್ತ ಸಂದರ್ಭದಲ್ಲಿ ವೈದ್ಯರಿಗೆ ತೋರಿಸಿ ಪರಿಹಾರ ಕಂಡುಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ…
ಹುಳಿಯಾರು: ಹುಳಿಯಾರು ಹೋಬಳಿಯ ಕೋರಗೆರೆ ಗ್ರಾಮ ಪಂಚಾಯ್ತಿಯ ನೂತನ ಉಪಾಧ್ಯಕ್ಷರಾಗಿ ಭಟ್ಟರಹಳ್ಳಿ ಶೇಖರ್ ಚುನಾಯಿತರಾಗಿದ್ದಾರೆ. 15 ಮಂದಿ ಸದಸ್ಯ ಬಲವುಳ್ಳ ಕೋರಗೆರೆ ಗ್ರಾಪಂ ಉಪಾಧ್ಯಕ್ಷರ ಆಯ್ಕೆಗೆ ಬುಧವಾರ ಚುನಾವಣೆ ನಡೆದಿದ್ದು ಶಿವಮ್ಮ ಮತ್ತು ಶೇಖರ್ ಇಬ್ಬರು ನಾಮಪತ್ರ ಸಲ್ಲಿಸಿದ್ದರು. ಶೇಖರ್ 11 ಮತಗಳನ್ನು, ಶಿವಮ್ಮ 4 ಮತಗಳನ್ನು ಪಡೆದಿದ್ದರು. ಚುನಾವಣಾಧಿಕಾರಿಯಾಗಿ ಕೆ.ಪುರಂದಯ್ಯ ಕರ್ತವ್ಯ ನಿರ್ವಹಿಸಿದ್ದರು. ಪಿಡಿಒ ನವೀನ್, ಅಧ್ಯಕ್ಷರಾದ ದಿನೇಶ್, ಸೇರಿದಂತೆ ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.











