ತುಮಕೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರಡಿ ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಸಂಬ0ಧಿಸಿದAತೆ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕರಡು ಮತದಾರರ ಪಟ್ಟಿಯನ್ನು ನಿಗದಿತ ದಿನಾಂಕದAದು ಪ್ರಕಟಿಸಲು ಅಗತ್ಯ ಸಿದ್ಧತೆಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು ಎಂದರು. ಮತದಾರರ ಪಟ್ಟಿಗೆ ಸಂಬAಧಿಸಿದAತೆ ಪ್ರತಿದಿನ ನೋಟಿಸ್ ಜಾರಿಗೊಳಿಸಿ, ಅಗತ್ಯವಿರುವಲ್ಲಿ ವಿಚಾರಣೆ ವೇಳಾಪಟ್ಟಿಯನ್ನು ಸಿದ್ಧಪಡಿಸಬೇಕು. ಅರ್ಹ ಮತದಾರರು ಯಾವುದೇ ಕಾರಣಕ್ಕೂ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ, ಅರ್ಹರನ್ನು ಮತದಾರರ ಪಟ್ಟಿಗೆ ಸೇರಿಸುವ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು. ಮತದಾರರ ಪಟ್ಟಿಗೆ ಸಂಬAಧಿಸಿದ ಮಾಹಿತಿಯನ್ನು ವೆಬ್‌ಸೈಟ್‌ಗಳಲ್ಲಿ ಅಪ್‌ಲೋಡ್ ಮಾಡುವುದರ ಜೊತೆಗೆ, ಮತಗಟ್ಟೆ ಮಟ್ಟದ ಅಧಿಕಾರಿಗಳ ಕಾರ್ಯಚಟುವಟಿಕೆಗಳ ಬಗ್ಗೆಯೂ ಸೂಕ್ತ ಗಮನಹರಿಸಬೇಕು. ಹೊಸದಾಗಿ ನೇಮಕಗೊಂಡಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಪ್ರಕ್ರಿಯೆ ಹಾಗೂ ಮೊಬೈಲ್ ಆ್ಯಪ್ ಬಳಕೆ ಕುರಿತು ತರಬೇತಿ ನೀಡಿ, ಆ್ಯಪ್ ಅನ್ನು ಸರಿಯಾಗಿ ಬಳಸುವಂತೆ ಮಾರ್ಗದರ್ಶನ…
Author: News Desk Benkiyabale
ಕೊರಟಗೆರೆ: ಯಾವುದೇ ಕಾರಣಕ್ಕೂ ಕ್ಷೇತ್ರವನ್ನು ಬಿಟ್ಟು ಹೊರಗೆ ಹೋಗುವುದಿಲ್ಲ ಎಂದು ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟಪಡಿಸಿದ್ದಾರೆ. ಅಭಿಮಾನಿಗಳು ಹಾಗೂ ಕಾರ್ಯಕರ್ತರು ಆಯೋಜಿಸಿದ್ದ ತಮ್ಮ ೫೮ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡ ಅವರು, ಪಟ್ಟಣದ ಕಟ್ಟೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅಭಿಮಾನಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ೨೫ ಕೆ.ಜಿ. ತೂಕದ ಕೇಕ್ ಕತ್ತರಿಸಿ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಂಭ್ರಮಕ್ಕೆ ಸಾಕ್ಷಿಯಾದರು. ಈ ಸಂದರ್ಭದಲ್ಲಿ ಪತ್ರಕರ್ತರು, ಮಾಜಿ ಶಾಸಕರು ಕ್ಷೇತ್ರವನ್ನು ತೊರೆಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ನಿಮ್ಮ ಪ್ರತಿಕ್ರಿಯೆ ಏನು? ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸುಧಾಕರ್ ಲಾಲ್, ಇಂದು ನನ್ನ ಹುಟ್ಟುಹಬ್ಬ. ಈ ದಿನ ಈ ಮಾತು ಬೇಡ. ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೊರಗೆ ಹೋಗುವುದಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಎಲ್ಲವನ್ನೂ ತಿಳಿಸುತ್ತೇನೆ ಎಂದು ಹೇಳಿದರು. ಮಾಜಿ ಶಾಸಕರ ಈ ಹೇಳಿಕೆಗೆ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿ ಸಂಭ್ರಮಿಸಿದರು. ಹುಟ್ಟುಹಬ್ಬದ ಅಂಗವಾಗಿ…
ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಮಣೆಚಂಡೂರಿನಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಘಟನೆ ಸೋಮವಾರ ನಡೆದಿದೆ. ವಸತಿ ಶಾಲೆಯ ೬ ಮತ್ತು ೭ನೇ ತರಗತಿಯ ವಿದ್ಯಾರ್ಥಿಗಳು ಬೆಳಗಿನ ತಿಂಡಿ ಸೇವಿಸಿದ್ದಾರೆ. ಸ್ವಲ್ಪ ಸಮಯದಲ್ಲೇ ಮಕ್ಕಳು ಗ್ಯಾಸ್ಟಿçಕ್ ಎಂದು ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಶಿಕ್ಷಕರು ಮತ್ತು ವಸತಿ ಶಾಲೆಯ ಸಿಬ್ಬಂದಿಗಳು ೧೨ ವಿದ್ಯಾರ್ಥಿಗಳನ್ನು ಮಾಯಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ಕರೆತಂದಿದ್ದಾರೆ. ಅಲ್ಲಿAದ ೧೧ ಗಂಟೆಗೆ ಅಸ್ವಸ್ಥಗೊಂಡ ಮಕ್ಕಳನ್ನು ತುರುವೇಕೆರೆ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗೆ ದಾಖಲಿಸಿದ್ದಾರೆ. ಮಧ್ಯಾಹ್ನದ ನಂತರ ೯ ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದಾರೆ. ಇನ್ನುಳಿದ ೩ ವಿದ್ಯಾರ್ಥಿಗಳಿಗೆ ಪುನಃ ಸುತ್ತಾದ ಕಾರಣ ಇಲ್ಲಿನ ವೈದ್ಯರು ಸಮೀಪದ ಆದಿಚುಂಚನಗಿರಿ ಐಟಿ ಆಸ್ಪತ್ರೆಗೆ ಚಿಕಿತ್ಸೆ ಕರೆದೊಯ್ಯವಂತೆ ಶಿಕ್ಷಕರಿಗೆ ತಿಳಿಸಿದ್ದಾರೆ. ಆಂಬ್ಯೂಲೆನ್ಸ್ ಮೂಲಕ ಐಟಿ ಆಸ್ಪತ್ರೆಗೆ ಮಕ್ಕಳು ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಮಕ್ಕಳು ಸೇವಿಸಿದ ತಿಂಡಿ ಮತ್ತು ನೀರನ್ನು ಸಂಗ್ರಹಿಸಿ ಜಿಲ್ಲಾ…
ತುಮಕೂರು: ಕನಿಷ್ಠ ವೇತನ ಜಾರಿಗೊಳಿಸಿ ಸೇವಾ ಭದ್ರತೆ ಒದಗಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಶುಭಾಕಲ್ಯಾಣ್ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ನಗರದ ಟೌನ್ ಹಾಲ್ ನಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಸೇವಾ ಖಾಯಮಾತಿಗೆ ಒತ್ತಾಯಿಸಿದರು. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮೇಗೌಡ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಪರಿಶಿಷ್ಟ ವರ್ಗಗಳ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಕಳೆದ ೧೫-೨೦ ವರ್ಷಗಳಿಂದಲೂ ಕಡಿಮೆ ಸಂಬಳಕ್ಕಾಗಿ ದುಡಿಯುತ್ತಿದ್ದಾರೆ. ಯಾವುದೇ ಜೀವನ ಭದ್ರತೆಯಿಲ್ಲ ಎಂದು ದೂರಿದರು. ವಸತಿ ನಿಲಯ, ಶಾಲಾ-ಕಾಲೇಜುಗಳಲ್ಲಿ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಚತಾಗಾರರು, ಕಾವಲುಗಾರರು, ಡಿ.ಗ್ರೂಪ್ ಅಟೆಂಡರ್, ಕಂಪ್ಯೂಟರ್ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್ಗಳು ಹೊರ ಗುತ್ತಿಗೆ ಅತಿಥಿ ಶಿಕ್ಷಕರುಗಳು ಕೆಲಸ ಮಾಡುತ್ತಿದ್ದಾರೆ. ಅವರುಗಳನ್ನೆಲ್ಲಾ ಖಾಯಂಗೊಳಿಸಿ ಕನಿಷ್ಠ ವೇತನ…
ತುಮಕೂರು: ಉತ್ತರಾಖಾಂಡದ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಜಾಗವನ್ನು ಗೋ ಮೂತ್ರ ಮತ್ತು ಸಗಣಿಯಿಂದ ಸ್ವಚ್ಚಗೊಳಿಸಿದ ಶ್ರೀರಾಮ ಸೇನೆ ಹಾಗೂ ಬಿಜೆಪಿಯ ಪಕ್ಷದ ಅಂಗ ಸಂಸ್ಥೆಗಳ ಕ್ರಮವನ್ನು ಖಂಡಿಸಿ ಇಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಅವರ ನೇತೃತ್ವದಲ್ಲಿ ಟೌನ್‌ಹಾಲ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಟೌನ್‌ಹಾಲ್ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಮುಂಭಾಗದಿAದ ಬಿಜಿಎಸ್ ವೃತ್ತದವರೆಗೆ ಪಾದಯಾತ್ರೆ ನಡೆಸಿ, ಕೆಲ ಕಾಲ ಮಾನವ ಸರಪಳಿ ನಿರ್ಮಿಸಿದ ಕಾಂಗ್ರೆಸ್ ಕಾರ್ಯಕರ್ತರು,ದೇಶದಲ್ಲಿ ಇಂದಿಗೂ ಅಸ್ಪöÈಷ್ಯತೆ ಆಚರಣೆಯಲ್ಲಿದೆ ಎಂಬುದಕ್ಕೆ ಉತ್ತರಾಖಂಡದಲ್ಲಿ ನಡೆದಿರುವ ಈ ಘಟನೆಯೇ ಸಾಕ್ಷಿಯಾಗಿದೆ.ಕೇಂದ್ರ ಸರಕಾರ ಮತ್ತು ಉತ್ತರಾಖಂಡದ ಸರಕಾರಗಳು ಮೈದಾನವನ್ನು ಗೋ ಮೂತ್ರ ಮತ್ತು ಸಗಣಿಯಿಂದ ಸ್ವಚ್ಚಗೊಳಿಸಿ ಕಿಡಿಗೇಡಿಗಳನ್ನು ಬಂಧಿಸಿ, ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಇಕ್ಬಾಲ್ ಅಹಮದ್,ಶ್ರೀರಾಮಸೇನೆಯ ಕಾರ್ಯಕರ್ತರು ಮಾಡಿರುವ ಈ ಘೋರ ಕೃತ್ಯ ಇಡೀ ರಾಷ್ಟçವೇ ತಲೆತಗ್ಗಿಸುವಂತಹ ವಿಚಾರವಾಗಿದೆ.ಭಾರತಕ್ಕೆ…
ಹುಳಿಯಾರು: ಪಟ್ಟಣದ ಬಸ್ ನಿಲ್ದಾಣದ ಸಮೀಪದ ಕೆರೆ ಅಂಗಳದಲ್ಲಿ ಒತ್ತುವರಿ ಮಾಡಿಕೊಂಡು ಇಡಲಾಗಿದ್ದ ಸುಮಾರು ೫೦ ಕ್ಕೂ ಹೆಚ್ಚು ಗೂಡಂಗಡಿಗಳನ್ನು ಸಣ್ಣ ನೀರಾವರಿ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದ್ದಾರೆ. ಉಚ್ಚ ನ್ಯಾಯಾಲಯದ ಆದೇಶ ಹಾಗೂ ಇತ್ತೀಚೆಗೆ ಕೆರೆಗೆ ಔಷಧೀಯ ತ್ಯಾಜ್ಯ ಸುರಿಯುತ್ತಿರುವ ಬಗ್ಗೆ ಪತ್ರಿಕಾ ವರದಿ ಆಧರಿಸಿ ಉಪಲೋಕಾಯುಕ್ತರು ಸ್ವಯಂಪ್ರೇರಿತ (ಸುಮೊಟೊ) ಪ್ರಕರಣ ದಾಖಲಿಸಿಕೊಂಡು ಸ್ಥಳ ಪರಿಶೀಲನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿ ಹಾಗೂ ನೀರಾವರಿ ಇಲಾಖೆಗೆ ನೋಟಿಸ್ ನೀಡಲಾಗಿದ್ದು, ಇಂದಿನ ತೆರವು ಕಾರ್ಯಾಚರಣೆ ಕೈಗೊಳ್ಳಲು ಕಾರಣ ಎನ್ನಲಾಗಿದೆ. ಸೋಮವಾರ ಬೆಳಿಗ್ಗೆ ನೀರಾವರಿ ಇಲಾಖೆಯ ಎಇಇ ಗಂಗಾಧರಯ್ಯ, ಎಇ ಚಿತ್ತಯ್ಯ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್ ಅವರ ನೇತೃತ್ವದಲ್ಲಿ ಜೆಸಿಬಿ ಹಾಗೂ ಪೌರಕಾರ್ಮಿಕರೊಂದಿಗೆ ಕಾರ್ಯಾಚರಣೆ ಆರಂಭಿಸಲಾಯಿತು. ತೆರವು ಕಾರ್ಯಾಚರಣೆಯ ವೇಳೆಯಲ್ಲಿ ಜಯ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ಮೋಹನ್ ಕುಮಾರ್ ರೈ, ಕಾಮನಬಿಲ್ಲು ಫೌಂಡೇಶನ್‌ನ ಚೆನ್ನಕೇಶವ ಹಾಗೂ ಆರ್.ಟಿ.ಓ. ರಾಜಣ್ಣ ಸೇರಿದಂತೆ…
ತುರುವೇಕೆರೆ: ತಾಲ್ಲೂಕಿನ ಎನ್.ಡಿ.ಎ ಪಕ್ಷದ ಹೋರಾಟದ ಪಲವಾಗಿ ಜಿಲ್ಲೆಗೆ ಹೇಮಾವತಿ ನೀರು ಹರಿದಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ರೈತರು ಅತಂಕ ಪಡುವುದು ಬೇಡ ನಿಮ್ಮ ಜೊತೆ ನಾವು ಸದಾ ಇರುತ್ತೇವೆ. ಜಿಲ್ಲೆಯ ರೈತರ ಹಿತ ದೃಷ್ಟಿಯಿಂದ ಹೋರಾಟ ಅನಿವಾರ್ಯ. ಸಾವಿರಾರು ರೈತರ ಹೋರಾಟದಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಿದ್ದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಎಲ್ಲಾ ಎನ್.ಡಿ.ಎ ಮುಖಂಡರು ಹಾಗೂ ತಾಲೂಕಿನ ರೈತರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಹಾಗೂ ಜಿಲ್ಲೆಗೆ ಹೇಮಾವತಿ ನೀರು ಹರಿಸಿದ ಸರ್ಕಾರಕ್ಕೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ತಾಲೂಕಿನಲ್ಲಿ ಈ ವರ್ಷ ಮಳೆ ಇಲ್ಲದೆ ಬರಗಾಲ ಆವರಿಸಿದ. ಯಾವ ರೈತರು ರಾಗಿ ಸೇರಿದಂತೆ ಯಾವುದೇ ಬೆಳೆ ಬಿತ್ತನೆ ಮಾಡಿಲ್ಲ. ತಾಲ್ಲೂಕಿನ ಒಂದು ಎಕರೆ ಕೂಡ ಬಿತ್ತನೆ ಹಾಗಿಲ್ಲ. ಕೂಡಲೇ ಸರ್ಕಾರ ಬರಗಾಲ ಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಜೊತೆಗೆ ಪ್ರತಿ ಎಕರೆಗೆ ೫೦ ಸಾವಿರ ಪರಿಹಾರ ನೀಡಬೇಕು ಎಂದು ಸರ್ಕಾರವನ್ನು…
ತುಮಕೂರು: ಸಮಾಜದಲ್ಲಿರುವ ಹಣ ಬಲ, ಜನಬಲ, ರಾಜಕೀಯ ಬಲವಿಲ್ಲದೆ ಸಣ್ಣ ಸಣ್ಣ ಸಮುದಾಯಗಳು ಮುಂದೆ ಬರಬೇಕೆಂದರೆ ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಮುಂದುವರಿಯಲು ಇರುವ ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ತುಮಕೂರಿನ ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್ (ರಿ).ನ ಕಾರ್ಯ ಮಾದರಿ ಎಂದು ಕಲಾವಿದ ಹಾಗೂ ರಾಜಕಾರಣಿ ಡಾ.ಮುಖ್ಯಮಂತ್ರಿ ಚಂದ್ರು ಅಭಿಪ್ರಾಯಪಟ್ಟಿದ್ದಾರೆ. ನಗರದ ಶ್ರೀಮಂಜುನಾಥ ಕಲ್ಯಾಣ ಮಂಟಪದಲ್ಲಿ ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್(ರಿ), ತುಮಕೂರು ವತಿಯಿಂದ ಆಯೋಜಿಸಿದ್ದ ಪ್ರತಿಭಾಪುರಸ್ಕಾರ ಹಾಗೂ ಸಾದರ ಸಮಾನ ಮನಸ್ಕ ಐಎಎಸ್/ಐಪಿಎಸ್ ತರಬೇತಿ ವೇದಿಕೆ ವತಿಯಿಂದ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಾದರು ಅಲ್ಪಸಂಖ್ಯಾತರಲ್ಲಿ ಸ್ವಲ್ಪ ಸಂಖ್ಯಾತರು. ನಮ್ಮಂತಹ ತುಳಿಕೆ ಒಳಗಾದ ಸಮುದಾಯಗಳು ಮೇಲೆ ಬರಲು ಇಂತಹ ಕಾರ್ಯಕ್ರಮಗಳು ಸ್ಪೂರ್ತಿಯಾಗಲಿವೆ ಎಂದರು. ಇAದಿನ ಪೈಪೋಟಿ ಯುಗದಲ್ಲಿ ನಮ್ಮ ಮಕ್ಕಳು ನಮಗಿಂತ ಬೌದ್ಧಿಕವಾಗಿ ಮೇಲಿದ್ದಾರೆ.ತಾಂತ್ರಿಕತೆಯಲ್ಲಿ ಒಬ್ಬರನ್ನೊಬ್ಬರು ಮೀರಿಸುವಂತಿದ್ದಾರೆ. ಆದರೆ ತಮ್ಮ ಸಾಧನೆಗೆ ಆಸರೆಯಾದವರನ್ನು ಕನಿಷ್ಠ ಸ್ಮರಿಸುವ ಕೆಲಸ ಆಗುತ್ತಿಸಲ್ಲ.…
ತುಮಕೂರು: ನಗರದ ಹೊರಪೇಟೆ ಕರಿಬಸವೇಶ್ವರ ಸ್ವಾಮಿ ಮಠದ ಜಗದ್ಗುರು ಲಿಂಗೈಕ್ಯ ಚನ್ನಬಸವ ರಾಜೇಂದ್ರ ಮಹಾಸ್ವಾಮಿಗಳವರ ಮಾಸಿಕ ಪುಣ್ಯ ಸಂಸ್ಮರಣೋತ್ಸವ ನೆರವೇರಿತು. ವಿವಿಧ ಮಠಗಳ ಸ್ವಾಮೀಜಿಗಳು, ಸಮಾಜದ ಗಣ್ಯರು ಭಾಗವಹಿಸಿ ಲಿಂಗೈಕ್ಯ ಜಗದ್ಗುರುಗಳಿಗೆ ಭಕ್ತಿ ಸಮರ್ಪಣೆ ಮಾಡಿದರು. ಮಾಜಿ ಸಂಸದ ಜಿ.ಎಸ್. ಬಸವರಾಜು ಮಾತನಾಡಿ, ಲಿಂಗೈಕ್ಯ ಚನ್ನಬಸವ ರಾಜೇಂದ್ರ ಸ್ವಾಮೀಜಿಗಳು ಮಠದ ಪರಂಪರೆ, ಧಾರ್ಮಿಕ ಆಚರಣೆಗಳನ್ನು ನಿರ್ವಹಿಸಿಕೊಂಡು ಬರುತ್ತಿದ್ದರು. ಸಾಮಾಜಿಕ ಪರಿವರ್ತನೆಗಾಗಿ ಜನ ಜಾಗೃತಿ ಮೂಡಿಸುತ್ತಿದ್ದರು. ಕಷ್ಟವೆಂದು ಬಂದವರಿಗೆ ಸಾಂತ್ವನ ಹೇಳಿ ಸಹಾಯ ಮಾಡುತ್ತಿದ್ದರು ಎಂದರು. ಸುಮಾರು ೯೯ ವರ್ಷ ಕಾಲ ಬಾಳಿದ್ದ ಸ್ವಾಮೀಜಿಗಳು ಮಠದ ಆಸ್ತಿಯನ್ನು ರಕ್ಷಣೆ ಮಾಡಿ, ಭಕ್ತರ ಇಷ್ಟಾರ್ಥಗಳನ್ನು ನೆರವೇರಿಸಿ ತಾವೇ ಸಮಾಜದ ಆಸ್ತಿಯಾಗಿದ್ದರು. ಅವರ ಪರಂಪರೆಯನ್ನು ಅವರ ಉತ್ತರಾಧಿಕಾರಿಗಳು ಮುಂದುವರೆಸಿಕೊAಡು ಹೋಗಬೇಕು ಎಂದು ಹೇಳಿದರು. ಶಾಸಕ ಜಿ.ಬಿ. ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ನಗರ ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಕೋರಿ ಮಂಜುನಾಥ್ ಮತ್ತಿತರ ಗಣ್ಯರು ಭಾಗವಹಿಸಿ ಪೂಜ್ಯರಿಗೆ ಭಕ್ತಿ ನಮನ ಸಲ್ಲಿಸಿದರು. ಕರಿಬಸವೇಶ್ವರಸ್ವಾಮಿ…
ಕೊರಟಗೆರೆ: ಮಹಿಳೆಯರು ಮೂಢನಂಬಿಕೆಗಳು ಹಾಗೂ ಅನಗತ್ಯ ಸಾಮಾಜಿಕ ಕಟ್ಟು ಪಾಡುಗಳಿಂದ ಹೊರಬಂದು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು. ಪುರುಷರಷ್ಟೇ ಆತ್ಮವಿಶ್ವಾಸ ದಿಂದ ದುಡಿದು ಕುಟುಂಬದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಸಮಾ ಜದ ಮುಖ್ಯವಾಹಿನಿಗೆ ಬರಬೇಕು ಎಂದು ಉರ್ದು ಶಾಲೆಯ ಮುಖ್ಯೋಪಾಧ್ಯಾಯರಾದ ಜಮೀಲಾ ಬೀ ಹೇಳಿದರು. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂ ಕಿನ ಅಕ್ಕಿರಾಂಪುರದಲ್ಲಿ ಅಭಿನವ ರಂಗ ಸಂಪನ್ಮೂಲ ಕೇಂದ್ರ (ರಿ.), ತುಮಕೂರು ವತಿಯಿಂದ ಆಯೋಜಿಸಿದ್ದ ಕರುನಾಡಿನಲ್ಲಿ ಹೆಂಗೆಳಯರ ಬಾಂಧವ್ಯ (ಹಾಡು, ಆಟ, ಹರಟೆ) ಕಾರ್ಯಕ್ರ ಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮಕ್ಕೆ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಲಾಯಿತು. ಬಳಿಕ ಮಾತನಾಡಿದ ಜಮೀಲಾ ಬೀ, ಮಹಿಳೆಯರು ಮೂಢನಂಬಿಕೆಗಳಿAದ ಹೊರಬಂದು ತಮ್ಮ ಬದುಕಿನ ನಿರ್ಧಾರಗಳನ್ನು ತಾವೇ ತೆಗೆದು ಕೊಳ್ಳುವಷ್ಟು ಶಿಕ್ಷಣ, ಆತ್ಮಸ್ಥೆöÊರ್ಯ ಮತ್ತು ಸ್ವಾವಲಂಬನೆಯನ್ನು ಬೆಳೆಸಿಕೊಳ್ಳಬೇಕು. ಮಹಿಳೆ ಯರು ಪುರುಷರಷ್ಟೇ ದುಡಿದು ಕುಟುಂಬದ ಜವಾಬ್ದಾರಿಯನ್ನು ನಿಭಾಯಿಸುವ ಸಾಮರ್ಥ್ಯ ಹೊಂದಬೇಕು ಎಂದು ಹೇಳಿದರು. ಶಾಲೆಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಣ್ಣುಮಕ್ಕಳು…











