Author: News Desk Benkiyabale

ತುಮಕೂರು : ಜಿಲ್ಲೆಯ ಪಾವಗಡ ತಾಲ್ಲೂಕಿನ ನಿವೇಶನ ರಹಿತರಿಗೆ ವಿವಿಧ ವಸತಿ ಯೋಜನೆಗಳಡಿ 2,800 ನಿವೇಶನಗಳ ವಿತರಣೆ ಮಾಡಲು ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು ತಿಳಿಸಿದರು. ಪಾವಗಡ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ನೀವೇಶನ ರಹಿತರಿಗೆ ನಿವೇಶನ ವಿತರಣೆ ಮಾಡಲು ಸುಮಾರು 189 ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು, ಈಗಾಗಲೇ ವಿತರಣೆ ಮಾಡಲು ಉದ್ದೇಶಿತ ನಿವೇಶನಗಳನ್ನು ಸಮತಳ ಮಾಡಿಸಲಾಗಿದೆ ಎಂದರು. ನಿವೇಶನ ವಿತರಣೆ ಪಾರದರ್ಶP Àತೆಯಿಂದ ಕೂಡಿರಬೇಕು. ಅರ್ಹ ಫಲಾನುಭವಿಗಳಿಗೆ ಮಾತ್ರ ನಿವೇಶನ ಹಂಚಿಕೆಯಾಗಬೇಕು ಎಂದರಲ್ಲದೆ, ತಾಲ್ಲೂಕಿನಲ್ಲಿ ಕೈಗೊಂಡಿರುವ ಜಲಜೀವನ್ ಮಿಷನ್ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಕಾಮಗಾರಿಗಳಲ್ಲಿ ಲೋಪ ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮವಹಿಸುವುದಾಗಿ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ(ಅಭಿವೃದ್ಧಿ) ಸಂಜೀವಪ್ಪ, ಮುಖ್ಯ ಕಾರ್ಯಪಾಲಕ ಅಭಿಯಂತರರು ಕುಮಾರಸ್ವಾಮಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಜಾನಕೀರಾಮ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು…

Read More

ತುಮಕೂರು: ಇಪಿಎಸ್-95 ಪಿಂಚಿಣಿದಾರರ ಸಮಸ್ಯೆಗಳ ಕುರಿತು ಪ್ರಧಾನಿ ಮತ್ತು ವಿತ್ತ ಸಚಿವರ ಜೊತೆ ಎರಡರೆಡು ಬಾರಿ ಚರ್ಚೆ ನಡೆಸಿದ್ದು, ಸುಪ್ರಿಂಕೋರ್ಟಿನ ಆದೇಶದಂತೆ ಕನಿಷ್ಠ 7500 ರೂ ಮಾಸಿಕ ಪಿಂಚಿಣಿ ನೀಡುವ ಭರವಸೆಯನ್ನು ನೀಡಿದ್ದಾರೆ. ಒಂದು ವೇಳೆ ಸರಕಾರ ಮಾತಿಗೆ ತಪ್ಪಿದರೆ, ದೇಶದ 78 ಲಕ್ಷ ನಿವೃತ್ತ ನೌಕರರು ತಮ್ಮ ಹಕ್ಕುಗಳಿಗಾಗಿ ಬೀದಿಗಿಳಿಯುವುದು ಅನಿವಾರ್ಯವಾಗಲಿದೆ ಎಂದು ಎನ್.ಎ.ಸಿ. ರಾಷ್ಟಿçÃಯ ಅಧ್ಯಕ್ಷರಾದ ಕಮಾಂಡರ್ ಅಶೋಕ್ ರಾವುತ್ ತಿಳಿಸಿದ್ದಾರೆ. ನಗರದ ಕೊಲ್ಲಾಪುರದಮ್ಮ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ತುಮಕೂರು ವಿಭಾಗ, ನಿವೃತ್ತ ನೌಕರರ ಕ್ಷೇಮಾಭಿವೃದ್ದಿ ಟ್ರಸ್ಟ್ (ರಿ) ವತಿಯಿಂದ ನಿವೃತ್ತ ನೌಕರರ ಕ್ಷೇಮಾಭಿವೃದ್ದಿ ಟ್ರಸ್ಟ್ಗೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ತಮ್ಮ ಜೀವಿತಾವಧಿಯನ್ನು ಜನರ ಸೇವೆಗೆ ಮುಡಿಪಾಗಿಟ್ಟಿರುವ ನಾವುಗಳು ಮಾಸಿಕ 800 ರೂಗಳಿಂದ 1800ವರೆಗೆ ಮಾತ್ರ ಪಿಂಚಿಣಿ ಪಡೆಯುತ್ತಿದ್ದು,ಇಂದಿನ ಬೆಲೆ ಹೆಚ್ಚಳದಲ್ಲಿ ಯಾವುದಕ್ಕೂ ಸಾಲದಾಗಿದೆ. ಹಾಗಾಗಿ ಸುಪ್ರಿಂಕೋರ್ಟಿನ ಆದೇಶದಂತೆ ಕನಿಷ್ಠ ಮಾಸಿಕ 7500 ರೂ ಪಿಂಚಿಣಿ ಮತ್ತು ಡಿ.ಎ. ನೀಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ…

Read More

ತುಮಕೂರು : ಯುವ ಜನರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಯಡಿ ನೀಡುವ ಸೌಲಭ್ಯಗಳಿಗಾಗಿ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ, ಯೋಜನೆಯ ಲಾಭ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು. ಜಿಲ್ಲಾಧಿಕಾರಿ ಕೊಠಡಿಯಲ್ಲಿ ಸೋಮವಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು. ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಲಾಗಿದ್ದು, 2023ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮಾದಲ್ಲಿ ಉತ್ತೀರ್ಣರಾದ ಸರ್ಕಾರ/ಖಾಸಗಿ ಉದ್ಯೋಗ ಹೊಂದದೇ ಇರುವ, ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವ ರಾಜ್ಯದಲ್ಲಿ ವಾಸವಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್, ಇಲಾಖೆಯ ಸಿಬ್ಬಂದಿ ಅರುಣ್…

Read More

ತುಮಕೂರು : ರಾಜ್ಯದಲ್ಲಿ ಕೃಷಿ ಕ್ಷೇತ್ರವನ್ನು ಸಬಲೀಕರಣಗೊಳಿಸುವ ಸಲುವಾಗಿ ಸೌರಶಕ್ತಿ ಮೂಲಕ ಹಗಲಿನಲ್ಲಿ ರೈತರಿಗೆ ವಿದ್ಯುತ್ ಪೂರೈಕೆ ಮಾಡಲು ಯೋಜಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಜಿಲ್ಲೆಯ ಶಿರಾ ತಾಲ್ಲೂಕು ಚಂಗಾವರ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿ ಪಿಎಂ ಕುಸುಮ್ ಘಟಕ ಸಿ ಯೋಜನೆಯಡಿ ನಿರ್ಮಿಸುತ್ತಿರುವ 2.4 ಮೆಗಾ ವ್ಯಾಟ್ ಸಾಮರ್ಥ್ಯದ ಸೋಲಾರ್ ಪ್ಲಾಂಟ್ ಅಳವಡಿಕೆ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದ ಅವರು, ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುವಾಗುವಂತೆ ತಡೆರಹಿತ ಸುಸ್ಥಿರ ವಿದ್ಯುತ್ ಸರಬರಾಜು ಮಾಡಲು ಈ ಸೋಲಾರ್ ಪ್ಲಾಂಟ್‌ಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು. ಜಿಲ್ಲೆಯ ಶಿರಾ ತಾಲ್ಲೂಕಿನ ಚಂಗಾವರದಲ್ಲಿ ನಿರ್ಮಿಸಿರುವ ಸೋಲಾರ್ ಪ್ಲಾಂಟ್‌ನಿAದ 944 ಕೃಷಿ ಪಂಪ್ ಸೆಟ್‌ಗಳಿಗೆ ವಿದ್ಯುತ್ ಒದಗಿಸಲು ಸಾಧ್ಯವಾಗಲಿದೆ. ಈ ಸೋಲಾರ್ ಪ್ಲಾಂಟ್ ನಿರ್ಮಾಣಕ್ಕಾಗಿ 11 ಎಕರೆ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಚಂಗಾವರದಲ್ಲಷ್ಟೇ ಅಲ್ಲದೆ ಶಿರಾ ತಾಲ್ಲೂಕಿನ ಚಿಕ್ಕಬಾಣಗೆರೆಯಲ್ಲಿಯೂ 25 ಎಕರೆ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡು 6.5 ಮೆಗಾ ವ್ಯಾಟ್ ಸಾಮರ್ಥ್ಯದ ಸೋಲಾರ್…

Read More

ಹುಳಿಯಾರು: ಅಧಿಕಾರಿಗಳಿಗೆ ಕರ್ತವ್ಯದ ಪ್ರಜ್ಞೆ ಮತ್ತು ಜನಪ್ರತಿನಿಧಿಗಳಿಗೆ ಇಚ್ಚಾಶಕ್ತಿ ಇಲ್ಲದಿದ್ದರೆ ಸಾರ್ವಜನಿಕರ ಹಣ ಹೇಗೆ ವ್ಯರ್ಥವಾಗುತ್ತದೆ ಎನ್ನುವುದಕ್ಕೆ ಹುಳಿಯಾರು ಪಟ್ಟಣ ಪಂಚಾಯ್ತಿಯ ಪದವಿ ಕಾಲೇಜಿನ ಪಕ್ಕದಲ್ಲಿರುವ ನೀರಿನ ಓವರ್ ಹೆಡ್ ಟ್ಯಾಂಕ್ ನಿದರ್ಶನವಾಗಿದೆ. ಈ ಟ್ಯಾಂಕ್ ಕಟ್ಟಿ ಬರೋಬ್ಬರಿ ಹದಿನೈದು ವರ್ಷಗಳು ಕಳೆದಿದ್ದರೂ ಇಲ್ಲಿಯವರೆಗೂ ಒಂದೇ ಒಂದು ಹನಿ ನೀರನ್ನು ಟ್ಯಾಂಕ್ ಕಂಡಿಲ್ಲ. ಹೌದು, ಹುಳಿಯಾರು ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಲಿಂಗಪ್ಪನಪಾಳ್ಯ, ಸೋಮಜ್ಜನಪಾಳ್ಯ, ವೈ.ಎಸ್.ಪಾಳ್ಯ ಗ್ರಾಮಗಳ ನೀರಿನ ಬವಣೆ ನೀಗಿಸುವ ಸಲುವಾಗಿ 2007 ರಲ್ಲಿ ಸ್ವಜಲದಾರೆ ಯೋಜನೆಯಡಿ ಲಕ್ಷಾಂತರ ಹಣ ವ್ಯಯಿಸಿ ಪದವಿ ಕಾಲೇಜು ಪಕ್ಕದಲ್ಲಿ ಓವರ್ ಹೆಡ್ ಟ್ಯಾಂಕ್ ಕಟ್ಟಲಾಗಿತ್ತು. ಈ ಟ್ಯಾಂಕ್‌ಗೆ ಹುಳಿಯಾರು ಕೆರೆಯಲ್ಲಿನ ಕೊಳವೆಬಾವಿಯಿಂದ ನೀರು ಪೂರೈಸಿ ಈ ಮೂರು ಹಳ್ಳಿಗಳಿಗೆ ಸಮರ್ಪಕವಾಗಿ ನೀರು ಪೂರೈಸುವುದು ಉದ್ದೇಶವಾಗಿತ್ತು. ಆದರೆ ಇಲ್ಲಿಯವರೆವಿಗೆ ಈ ಟ್ಯಾಂಕ್‌ಗೆ ಒಂದೇ ಒಂದು ದಿನ ನೀರು ತುಂಬಿಸಿದ ನಿದರ್ಶನವಿಲ್ಲ.ಲಿಂಗಪ್ಪನಪಾಳ್ಯದ ನೂರಾರು ಮನೆಗಳಿಗೆ ಇರುವ ಏಕೈಕ ಕೊಳವೆಬಾವಿಯಿಂದ ನೀರು ಪೂರೈಸಲಾಗುತ್ತಿದೆ. ಈ ಕೊಳವೆಬಾವಿ ಕೆಟ್ಟು ರಿಪೇರಿ…

Read More

ಮಧುಗಿರಿ : ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರುವುದಿಲ್ಲ ಎಂಬ ಗಾದೆ ಮಾತಿನಂತೆ ಸಮಾಜದಲ್ಲಿ ಪ್ರಜ್ಞಾವಂತರೆನಿಕೊAಡ ಸರ್ಕಾರಿ ನೌಕರರ ಪದಾಧಿಕಾರಿಗಳು ಮದ್ಯದ ಅಮಲಿನಲ್ಲಿ ಬಾಟಲಿಗಳಿಂದ ಹೊಡೆದಾಡಿಕೊಂಡಿರುವ ಘಟನೆ ಪಟ್ಟಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ನೌಕರರ ಸಂಘದ ಚುನಾವಣೆ ಸಂಪೂರ್ಣಗೊAಡಿದ್ದರೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ನೌಕರ ಸಂಘದ ಪದಾಧಿಕಾರಿಗಳು ಪರಸ್ಪರ ನಿಂದನೆಗಳನ್ನು ಮಾಡಿಕೊಳ್ಳುವುದರ ಜೊತೆಗೆ ಚಪ್ಪಲಿಗಳಲ್ಲಿ ಹೊಡೆದಾಡಿಕೊಂಡು ಕುಡಿದ ಅಮಲಿನಲ್ಲಿ ಮಧ್ಯದ ಬಾಟಲ್ ಗಳಿಂದ ಕೊಲೆ ಯತ್ನಕ್ಕೆ ಪ್ರಯತ್ನಿಸಿರುವ ಘಟನೆ ನೆಲಮಂಗಲ ಸಮೀಪದ ಡಾಬಾದಲ್ಲಿ ನಡೆದಿರುವ ಬಗ್ಗೆ ಮದುಗಿರಿಯಲ್ಲಿ ಬೆಳ್ಳಂ ಬೆಳಗ್ಗೆ “”ಟಾಕ್ ಆಫ್ ದಿ ಟೌನ್’’ ಆಗಿದೆ. ಶನಿವಾರ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರ ಚುನಾವಣೆ ನಡೆದು ಷಡಾಕ್ಷರಿ ಅವರು ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಮಧುಗಿರಿಯ ಸರ್ಕಾರಿ ನೌಕರರ ಸಂಘದವರು ಮಧುಗಿರಿಗೆ ವಾಪಾಸ್ಸಾಗುತ್ತಿದ್ದಾಗ, ಘಟನೆ ನಡೆದಿದ್ದು, ಷಡಾಕ್ಷರಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕೆಲವರಿಗೆ ಇಷ್ಟವಾಗಿಲ್ಲ. ಈ ವಿಷಯವೇ ಈ ಎಲ್ಲಾ ಘಟನಾವಳಿಗಳಿಗೆ ಕಾರಣವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೃಷ್ಣೆಗೌಡರಿಗೆ ಬೆಂಬಲ ನೀಡಿದ್ದ ಲಿಂಗಾಯಿತ ಸಮುದಾಯಕ್ಕೆ…

Read More

ತುಮಕೂರು: ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಏರ್ಪಾಡಾಗಿದ್ದ ರಾಜ್ಯ ಮಟ್ಟದ ಅಂತರ ಕಾಲೇಜು ವಾಲಿ ಬಾಲ್ ಸ್ಪರ್ದೆಯಲ್ಲಿ, ಪುರುಷರ ವಿಭಾಗದಲ್ಲಿ, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬಿಜಿಎಸ್ ಕಾಲೇಜಿಗೆ ಚಾಂಪಿಯನ್ ಪಟ್ಟ ದೊರೆತಿದೆ. ಮಂಗಳೂರಿನ ನಿಟ್ಟೆ ಕಾಲೇಜು ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ. ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನವನ್ನು ತುಮಕೂರಿನ ಎಸ್.ಎಸ್.ಐ.ಟಿ ಮತ್ತು ಎಸ್.ಐ.ಟಿ ಕಾಲೇಜುಗಳು ಪಡೆದುಕೊಂಡಿವೆ. ಮಹಿಳೆಯರ ವಿಭಾಗದಲ್ಲಿ ತುಮಕೂರಿನ ಎಸ್.ಎಸ್.ಐ.ಟಿ ಕಾಲೇಜಿನ ಮಹಿಳೆಯರ ತಂಡ ಮೊದಲ ಸ್ಥಾನ ಪಡೆದುಕೊಂಡರೆ, ಹಾಸನದ ಎನ್.ಎ.ವಿ.ಕೆೆ.ಐ.ಎಸ್ಎಂ ಜಿನಿಯರಿAಗ್ ಕಾಲೇಜು ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ. ಸ್ಟರ್ಧೆಯಲ್ಲಿ 16 ಪುರುಷರ ತಂಡಗಳು, ಮತ್ತು 6 ಮಹಿಳೆಯರ ತಂಡಗಳು ರಾಜ್ಯದ ಹಾಸನ, ಮಂಗಳೂರು, ಮೈಸೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳ ಕಾಲೇಜುಗಳಿಂದ ಆಗಮಿಸಿದ್ದವು. ಸ್ಪರ್ಧೆಯಲ್ಲಿ ಭಾಗವಹಿಸಿ ಗೆದ್ದ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಎಸ್.ಎಸ್.ಐ.ಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಎಸ್. ರವಿಪ್ರಕಾಶ ಅವರು ರಾಜ್ಯದ ವಿವಿಧ ಜಿಲ್ಲಾ ಕಾಲೇಜುಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ…

Read More

ತುಮಕೂರು : ನಗರದ ಪ್ರಮುಖ ರಸ್ತೆಗಳ ಅಭಿವೃದ್ಧಿ, ರಸ್ತೆ ಬದಿ ಚರಂಡಿ ನಿರ್ಮಾಣ, ಮೇಲ್ಸೇತುವೆ ಮತ್ತು ಕೆಳ ಸೇತುವೆಗಳ ನಿರ್ಮಾಣ, ಪಾದಚಾರಿ ಮಾರ್ಗ, ನಗರದ ಒಳ ಮತ್ತು ಹೊರ ವರ್ತುಲ ರಸ್ತೆ, ಪ್ರಮುಖ ವೃತ್ತಗಳು, ಉದ್ಯಾನವನಗಳ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರದಿಂದ 200 ಕೋಟಿ ರೂ.ಗಳ ಅನುದಾನ ಬಿಡುಗಡೆಯಾಗಿದ್ದು, ಅನುದಾನವನ್ನು ಸದ್ಬಳಕೆ ಮಾಡಿಕೊಂಡು ತುಮಕೂರು ನಗರವನ್ನು ಮಾದರಿ ನಗರವನ್ನಾಗಿ ನಿರ್ಮಿಸಬೇಕೆಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, 2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿದಂತೆ ಸರ್ಕಾರದಿಂದ ತುಮಕೂರು ಸೇರಿ ರಾಜ್ಯದ 10 ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಮಗ್ರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ತಲಾ 200 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಬಿಡುಗಡೆಯಾಗುವ ಹಣವನ್ನು ಕಾಮಗಾರಿಗಳಿಗೆ ಸದ್ವಿನಿಯೋಗಿಸಿ 2026-27ನೇ ಸಾಲಿನೊಳಗಾಗಿ ಪೂರ್ಣಗೊಳಿಸಬೇಕೆಂದು ಸೂಚಿಸಿದರು.…

Read More

ತುರುವೇಕೆರೆ: ರಾಜ್ಯ ಸರ್ಕಾರ ನಿವೃತ್ತ ಸರ್ಕಾರಿ ನೌಕರರ ಮೂಲಭೂತ ಬೇಡಿಕೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸುವ ಮೂಲಕ ನಮ್ಮಗಳ ಕುಟುಂಬಕ್ಕೆ ನೈತಿಕ ಚೇತನ ನೀಡಬೇಕೆಂದು ಸರ್ಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರಹ್ಲಾದ್ ಹೇಳಿದರು. ಪಟ್ಟಣದ ಹೊರಪೇಟೆಯಲ್ಲಿರುವ ವಿರಕ್ತ ಮಠದಲ್ಲಿ ತಾಲ್ಲೂಕು ನಿವೃತ್ತ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ನಿವೃತ್ತ ನೌಕರರ ದಿನಾಚರಣೆ ಹಾಗು ಹಿರಿಯ ನಾಗರಿಕರಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ರಾಜ್ಯ ಜಂಟಿ ಕಾರ್ಯದರ್ಶಿ ರಾಜಯ್ಯ, ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಅರಳೀಕೆರೆ ಶಿವಯ್ಯ, ನಿವೃತ್ತ ಬಿಇಓ ಸೋಮಶೇಖರ್, ನಿವೃತ್ತ ಡಿಡಿಪಿಐ ರಂಗಯ್ಯ, ಜಿಲ್ಲಾ ಉಪಾಧ್ಯಕ್ಷ ಅನಂತರಾಮು, ಖಜಾಂಚಿ ನರಸಿಂಹರೆಡ್ಡಿ, ಪತ್ತಿನ ಸಹಕಾರ ಸಂಘದ ಸಿಇಓ ಸುಜಾತ, ಉಪಸ್ಥಿತರಿದ್ದರು.

Read More

ಚಿಕ್ಕನಾಯಕನಹಳ್ಳಿ: ಪಟ್ಟಣದ ಬಹುತೇಕ ರಸ್ತೆಗಳಲ್ಲಿ ನೀರಿನಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದ್ದರು ಸಂಬAಧಿಸಿದ ಪುರಸಭೆ ಗಮನ ಹರಿಸದೆ ನಿರ್ಲ್ಯಕ್ಷಿಸಿರುವುದು ನಾಗರೀಕರ ಆಕ್ರೋಶಕ್ಕೆ ಕಾರಣವಾಗಿದೆ. ಪಟ್ಟಣದಲ್ಲಿ ಒಳಚರಂಡಿ ಕಾಮಗಾರಿ ಆರಂಭಗೊAಡಿದ್ದೇ ತಡ ಪಟ್ಟಣದ ತುಂಬೆಲ್ಲಾ ಉತ್ತಮ ಸ್ಥಿತಿಯಲ್ಲಿದ್ದ ರಸ್ತೆಗಳನ್ನು ಅಗೆದು ಜನ ಹಾಗೂ ವಾಹನಗಳು ಓಡಾಡದಂತೆ ಮಾಡಿ ಎರಡುವರ್ಷ ಕಳೆದರೂ ನಾಗರೀಕರು ಈ ದುರ್ವ್ಯೆವಸ್ಥೆಗೆ ಹಿಡಿಶಾಪ ಹಾಕುತ್ತಾ ಓಡಾಡುತ್ತಿದ್ದಾರೆ. ಇದರ ಜೊತೆಗೆ ಮತ್ತೊಂದು ಅಧ್ವಾನವೆಂಬAತೆ ಬುಹುತೇಕ ರಸ್ತೆಗಳಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಒಡೆದು ಪ್ರವಾಹೋಪಾದಿಯಲ್ಲಿ ಅಮೂಲ್ಯ ನೀರು ವ್ಯರ್ಥವಾಗುತ್ತಿರುವುದು. ಟ್ಯಾಂಕ್ ನಿಂದ ನಾಗರೀಕರಿಗೆ ಕೊಳಾಯಿ ಮೂಲಕ ನೀರು ಬಿಟ್ಟಾಗ ಪಟ್ಟಣದ ಹೆದ್ದಾರಿಯ ನೆಹರೂ ವೃತ್ತ, ಸರ್ಕಾರಿ ಬಸ್ ನಿಲ್ದಾಣ, ಪೊಲೀಸ್‌ಠಾಣೆ ಮುಂಬಾಗ ಇನ್ನು ಹಲವೆಡೆ ಟಾರ್ ರಸ್ತೆಯ ಕೆಳಗಿನಿಂದ ಒಡೆದ ಪೈಪ್ ಮೂಲಕ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಇನ್ನೂ ಪಟ್ಟಣದ ಬ್ರಾಹ್ಮಣರ ಬೀದಿ, ಅಡ್ಡರಸ್ತೆ, ಹಳ್ಳಿಕಾರರ ಬೀದಿ, ಮಾರುಕಟ್ಟೆ ರಸ್ತೆ ಮುಂತಾದೆಡೆ ಒಡೆದ ಪೈಪ್ ಮೂಲಕ ಹಳ್ಳದೋಪಾದಿಯಲ್ಲಿ ನೀರು ರಸ್ತೆಯ…

Read More