ಹುಳಿಯಾರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನಲೆಯಲ್ಲಿ ಗೌರವಾರ್ಥ ಶುಕ್ರವಾರ ಎಲ್ಲಾ ಸರ್ಕಾರಿ ಕಛೇರಿಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಆದರೆ ಹುಳಿಯಾರು ಪಟ್ಟಣ ಪಂಚಾಯತಿ ಸಿಬ್ಬಂದಿ ಮಾತ್ರ ರಜೆ ಮಾಡದೆ ಕೆಲಸದಲ್ಲಿ ನಿರತರಾಗಿದ್ದರು. ಕೆಲಸದ ಸಮಯದಲ್ಲೇ ಕಛೇರಿಯಲ್ಲಿ ಇಲ್ಲದ ಸಿಬ್ಬಂದಿ ರಜೆಯಲ್ಲಿ ಕೆಲಸ ಮಾಡುತ್ತಿರುವುದ ಅಚ್ಚರಿ ಎನ್ನಿಸಿತ್ತು. ಸಾರ್ವಜನಿಕರು, ಪತ್ರಿಕೆಯವರು ಈ ಬಗ್ಗೆ ಪ್ರಶ್ನಿಸಲು ಮುಂದಾದಾಗ ಸಿಬ್ಬಂದಿ ಕಕ್ಕಾಬಿಕ್ಕಿಯಾಗಿ ಕಛೇರಿಯಿಂದ ಹೊರಬಂದರು. ಕೆಲಸದ ದಿನಗಳಲ್ಲೇ ಸರ್ಕಾರಿ ಸಿಬ್ಬಂದಿ ಸರಿಯಾಗಿ ಕೆಲಸ ಮಾಡುವುದಿಲ್ಲ ಎನ್ನುವ ಮಾತುಗಳು ಕೇಳಿಬರುವುದು ಸಹಜ. ಆದರಲ್ಲೂ ಹುಳಿಯಾರು ಪಂಚಾಯ್ತಿಯಲ್ಲಿ ಸಾರ್ವಜನಿಕರ ಯಾವ ಕೆಲಸವೂ ಆಗುತ್ತಿಲ್ಲ ಎಂಬ ಆರೋಪ ಇದೆ. ಅಂತಹದರಲ್ಲಿ ಮಾಜಿ ಪ್ರಧಾನಿಯ ಗೌರವಾರ್ಥ ರಜೆಯಲ್ಲಿ ಪಂಚಾಯತಿ ಮುಖ್ಯಾಧಿಕಾರಿ ಸೇರಿದಂತೆ ಕೆಲ ಸಿಬ್ಬಂದಿ ಮಾತ್ರ ಕಛೇರಿಯಲ್ಲಿ ಬಿಡುವಿಲ್ಲದ ರೀತಿ ಕೆಲಸ ಮಾಡಿದ್ದಾರೆ. ಈ ಮೂಲಕ ಮನಮೋಹನ್ ಸಿಂಗ್ ಅವರಿಗೆ ಅಗೌರವ ತೋರಿದ್ದಾರೆ. ರಜಾ ದಿನದಲ್ಲೂ ಕೆಲಸ ಮಾಡುತ್ತಿರುವ ವಿಚಾರ ತಿಳಿದು ಎಂಜಿನಿಯರ್ ಲಿಂಗರಾಜು ಅವರು ಕಛೇರಿಗೆ…
Author: News Desk Benkiyabale
ಪಾವಗಡ: ಅನ್ನದಾನಕ್ಕಿಂತ ಮಿಗಿಲಾದ ದಾನವಿಲ್ಲಾ, ಕಲಿತ ವಿದ್ಯೆಯನ್ನು ಇನ್ನೊಬ್ಬರಿಗೆ ಕಲಸಿದರೆ ವಿದ್ಯಾದಾನವಾಗುತ್ತದೆ, ಶಿಕ್ಷಣಜೊತೆಗೆ ಅನ್ನದಾನ ಮಾಡುವುದರ ಜೊತೆಗೆ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಮೂಲ ಸೌಕರ್ಯಗಳನ್ನು ವದಗಿಸಬೇಕು ಎಂದು ಮಾಜಿ ಸಚಿವರಾದ ವೆಂಕಟರವಣಪ್ಪ ತಿಳಿಸಿದರು. ಗುರುವಾರ ಶಾಂತಿ ಎಸ್.ಎಸ್.ಕೆ. ಕಾಲೇಜಿನ ಅವರಣದಲ್ಲಿ ಎಸ್.ಎಸ್.ಕೆ. ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಭಕ್ತಾಧಿಗಳಿಗೆ ಹೆಚ್ಚುವರಿ ಪ್ರಸಾದ ವಿತರಣೆ ಹಾಗೂ ಶ್ರಿ ಶನಿಮಹಾತ್ಮ ವಿದ್ಯಾ ಮತ್ತು ಔದಾರ್ಯ ದತ್ತಿಯ ವಿದ್ಯಾರ್ಥಿಗಳಿಗೆ ಮದ್ಯಾಹ್ನದ ಲಘು ಉಪಹಾರ ವಿತರಣಾ ಮತ್ತು ಶುದ್ದಕುಡಿಯುವ ನೀರಿನ ಘಟಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, 90 ರ ದಶಕದಲ್ಲಿ ಪಾವಗಡದ ಶನಿಮಹಾತ್ಮ ದೇವಸ್ಥಾನವನ್ನು ಸರ್ಕಾರದ ಸುಪರ್ಧಿಗೆ ನೀಡಲು ಅಂದಿನ ಸರ್ಕಾರ ತಿರ್ಮಾನಿಸಿತ್ತು ಅದರೆ ನಾನು ಅದನ್ನು ತಡೆದು ಅಡಳಿತ ಮಂಡಳಿ ಮುಂದುವರೆಯಲು ಅವಕಾಶ ಮಾಡಿಕೊಟ್ಟಿದ್ದೆ, ಇಂದು ದೇವಸ್ಥಾನ ಸಾಕಷ್ಟು ಅಭಿವೃದ್ದಿ ಹೊಂದುತ್ತಿದ್ದು, ದೇವಸ್ಥಾನಕ್ಕೆ ಸಾಕಷ್ಟು ವರಮಾನ ಬರುತ್ತಿದ್ದು ಅಡಳಿತ ಮಂಡಳಿ ಯಾವುದೆ ಪ್ರತಿಪಲಾಪೇಕ್ಷೆ ಇಲ್ಲದೆ ಸೇವೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು. ಅಲ್ಲದೆ ವಿದ್ಯಾರ್ಥಿಗಳು ಉತ್ತಮವಾಗಿ ಅಬ್ಯಾಸ…
ತುಮಕೂರು: ರಾಸಾಯನಿಕಗಳು ಮತ್ತು ಕೀಟನಾಶಕಗಳ ಬಳಕೆಯಿಂದ ಭೂಮಿ ತನ್ನ ಫಲವತ್ತತೆಯನ್ನು ಕಳೆದುಕೊಂಡಿದೆ. ಸಾವಯವ ಕೃಷಿಯಿಂದ ಮಾತ್ರ ಭೂಮಿ ಮತ್ತೊಮ್ಮೆ ಉಸಿರಾಡಲು ಸಾಧ್ಯ ಎಂದು ಉತ್ತರಪ್ರದೇಶ ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯ ಅಧ್ಯಕ್ಷ ಪ್ರೊ. ಹರಿಕೇಶ್ ಬಹದ್ದೂರ್ ಸಿಂಗ್ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಜೀವತಂತ್ರಜ್ಞಾನ ಮತ್ತು ಸೂಕ್ಷö್ಮ ಜೀವವಿಜ್ಞಾನ ಅಧ್ಯಯನ ಮತ್ತು ಸಂಶೋಧನ ವಿಭಾಗವು ಗುರುವಾರ ಆಯೋಜಿಸಿದ್ದ ನೂತನ ಸ್ನಾತಕೋತ್ತರ ಮತ್ತು ಸಂಶೋಧನಾ ಪ್ರಯೋಗಾಲಯಗಳ ಉದ್ಘಾಟನೆ ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಸೂಕ್ಷö್ಮ ಜೀವವಿಜ್ಞಾನ ಕೌಶಲ್ಯ ವಿಜ್ಞಾನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಪ್ರಾಚೀನ ಇತಿಹಾಸದಲ್ಲಿ ವೈಜ್ಞಾನಿಕ ಬೀಜಗಳ ಅಭಿವೃದ್ಧಿಯನ್ನು ವೃಕ್ಷಾಯುರ್ವೇದದಿಂದ ಕಲಿಯಬಹುದು. ತಾಯಿಯ ಎದೆ ಹಾಲಿಗಿಂತ ಶ್ರೇಷ್ಠ ಹಸುವಿನ ಹಾಲೆಂದು ವೈಜ್ಞಾನಿಕವಾಗಿ ಪರಿಗಣಿಸಲಾಗಿತ್ತು. ರಾಸಾಯನಿಕ ಮಿಶ್ರಿತ ಕಳಪೆ ಗುಣಮಟ್ಟದ ಆಹಾರವನ್ನು ಸೇವಿಸುತ್ತಿರುವಾಗ ಹಾಲು ವಿಷವಾಗಿದೆ. ಇದರಿಂದ ಆನುವಂಶಿಕ ಸಮಸ್ಯೆಗಳನ್ನು ಎದುರಿಸುವ ಪರಿಸ್ಥಿತಿ ಉಂಟಾಗಲಿದೆ ಎಂದರು. ‘ಸುಸ್ಥಿರ ಕೃಷಿಯಲ್ಲಿ ಜೈವಿಕ ಕೀಟನಾಶಕಗಳ ಪಾತ್ರ: ಪ್ರಸ್ತುತ ಸನ್ನಿವೇಶ, ನಿಯಂತ್ರಕ ಅವಶ್ಯಕತೆಗಳು ಮತ್ತು ವಾಣಿಜ್ಯೀಕರಣ’ ಕುರಿತು…
ತುಮಕೂರು: ವಿದ್ಯಾರ್ಥಿಗಳ ಜೀವನದಲ್ಲಿ ಪಾಠದ ಜೊತೆಗೆ ಆಟನೂ ಸಹ ಉತ್ತಮವಾದ ಪಾತ್ರವನ್ನು ವಹಿಸುತ್ತದೆ ಎಂದು ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಕೆ.ಬಿ ಲಿಂಗೇಗೌಡ ತಿಳಿಸಿದರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಸಾಹೇ ವಿಶ್ವವಿದ್ಯಾಲಯ ಹಾಗೂ ಎಸ್‌ಎಸ್‌ಐಟಿ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿರುವ ಎರಡು ದಿನಗಳ ರಾಜ್ಯಮಟ್ಟದ ಅಂತರ್ ಕಾಲೇಜು ವಾಲಿಬಾಲ್ ಪಂದ್ಯಾವಳಿಗೆ ಚಾಲನೆಯನ್ನು ನೀಡಿ ಮಾತನಾಡಿದ ಅವರು ವಿದ್ಯಾರ್ಥಿಗಳು ಕಾಲೇಜಿನಲ್ಲಿ ನಡೆಯುವಂತಹ ಕ್ರೀಡಾಕೂಟದಂತಹ ಹಲವು ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಸ್ಪರ್ಧಾತ್ಮಕ ಜಗತ್ತಿಗೆ ತಮ್ಮನ್ನು ತಾವು ತೆರೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಸಾಹೇ ವಿವಿಯೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ಫ್ಲೋರಿಡಾ ಯೂನಿವರ್ಸಿಟಿಯ ಪ್ರೊ. ಎಸ್. ಎಸ್. ಅಯ್ಯಂಗಾರ್ ಮಾತನಾಡಿ ಕ್ರೀಡೆ ಎನ್ನುವುದು ಜೀವನದಲ್ಲಿ ಪ್ರಮುಖವಾದ ಒಂದು ಅಂಶ. ಕ್ರೀಡೆ ಮನುಷ್ಯನಿಗೆ ಉತ್ತಮ ಯೋಚನೆ, ಕ್ರಿಯಾ ಶೀಲತೆ, ಧನಾತ್ಮಕ ಚಿಂತನೆಯನ್ನು ನೀಡುತ್ತದೆ ಅಲ್ಲದೆ ಮನುಷ್ಯ ದೈಹಿಕವಾಗಿ, ಆರೋಗ್ಯವಾಗಿ ಉತ್ತಮ ಜೀವನ ನಡೆಸಲು ಸಹಕಾರಿ ಎಂದು ಹೇಳಿದರು. ಸಾಹೇ ವಿವಿಯ ಕುಲಸಚಿವರಾದ ಡಾ. ಎಂ.…
ತುಮಕೂರು : ತಾಲ್ಲೂಕಿನಲ್ಲಿ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಶೇ.100ರಷ್ಟು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ತುಮಕೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪಿ.ಎಲ್.ರಮೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ತುಮಕೂರು ತಾಲ್ಲೂಕು ಪಂಚಾಯಿತಿಯಲ್ಲಿ ಇತ್ತೀಚೆಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬoಧಿಸಿದoತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರದ ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಹಾಗೂ ಯುವನಿಧಿ ಗ್ಯಾರಂಟಿ ಯೋಜನೆಗಳ ಕುರಿತು ಸಂಕ್ಷಿಪ್ತ ಮಾಹಿತಿಯನ್ನು ಪಡೆದರು. ಗ್ಯಾರಂಟಿ ಯೋಜನೆಗಳನ್ನು ತಾಲ್ಲೂಕಿನ ಅರ್ಹ ಫಲಾನುಭವಿಗಳಿಗೆ ಶೀಘ್ರಗತಿಯಲ್ಲಿ ತಲುಪಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ನಿರ್ದೇಶಿಸಿದರು. ಸಭೆಯಲ್ಲಿ ತುಮಕೂರು ತಾಲ್ಲೂಕಿನ ಗ್ಯಾರಂಟಿ ಯೋಜನೆಗಳ ಸದಸ್ಯ ಕಾರ್ಯದರ್ಶಿಗಳು ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಕುಮಾರ್ ಕೆ., ತಾಲ್ಲೂಕು ಯೊಜನಾಧಿಕಾರಿ ಮತ್ತಿತರರು ಹಾಜರಿದ್ದರು.
ತುಮಕೂರು: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಜಿಲ್ಲಾ ಪ್ರಾಚಾರ್ಯರ ಸಂಘದ ಸಹಯೋಗದಲ್ಲಿ ಡಿಸೆಂಬರ್ 28ರಂದು ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ: ಬಾಲಗುರುಮೂರ್ತಿ ತಿಳಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮೊದಲ ಬಾರಿಗೆ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ತಾಲ್ಲೂಕು, ಜಿಲ್ಲೆ ಮತ್ತು ವಿಭಾಗ ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳು ಈ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ. ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪ್ರಬಂಧ ಸ್ಪರ್ಧೆ ಮತ್ತು ಚರ್ಚಾ ಸ್ಪರ್ಧೆಯನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಪ್ರತ್ಯೇಕವಾಗಿ ನಡೆಸಲಾಗುವುದು. ಅಲ್ಲದೆ ರಸಪ್ರಶ್ನೆ, ಏಕಪಾತ್ರಾಭಿನಯ, ಭಾವಗೀತೆ, ಜನಪದ ಗೀತೆ, ಚಿತ್ರಕಲೆ, ಭಕ್ತಿ ಗೀತೆ ಮತ್ತು ಆಶುಭಾಷಣ ಸ್ಪರ್ಧೆಗಳನ್ನೂ ಸಹ…
ತುರುವೇಕೆರೆ: ಪಟ್ಟಣದ ಪ್ರಸಿದ್ಧ ಸತ್ಯಗಣಪತಿಯನ್ನು ಅಪಾರ ಸಂಖ್ಯೆಯಭಕ್ತಾಧಿಗಳ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿAದ ತುರುವೇಕೆರೆ ಕೆರೆಯಲ್ಲಿ ತೆಪ್ಪೋತ್ಸವದ ಮೂಲಕ ಮಂಗಳವಾರ ಸಂಜೆ ವಿಸರ್ಜನೆ ಮಾಡಲಾಯಿತು. ಪಟ್ಟಣದ ಸತ್ಯಗಣಪತಿ ಸ್ವಾಮಿಯನ್ನು ಗೌರಿ ಗಣೇಶ ಹಬ್ಬದ ದಿನ ಪ್ರತಿಷ್ಠಾಪಿಸಲಾಗಿತ್ತು. ಅಲ್ಲಿಂದ ಇಲ್ಲಿಯ ತನಕವೂ ದಿನ ನಿತ್ಯ ಪೂಜಾ ಕಾರ್ಯಗಳು ನಡೆಯುತ್ತಿದ್ದವು. ಜಾತ್ರೆಯ ಅಂಗವಾಗಿ ಕಳೆದ ಹದಿನೈದು ದಿನಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿಸರ್ಜನ ಮಹೋತ್ಸವದ ಅಂಗವಾಗಿ ಪಟ್ಟಣದ ಎಲ್ಲ ಅಂಗಡಿ ಮಾಲೀಕರು ತಮ್ಮ ಅಂಗಡಿಗಳನ್ನು ವಿದ್ಯುತ್ ದೀಪಗಳಿಂದ ಸಿಂಗರಿಸಿದ್ದರು. ಇಡೀ ಪಟ್ಟಣವೇ ಹೂ ಹಾಗೂ ದೀಪಗಳಿಂದ ಮದುವಣಗಿತ್ತಿಯಂತೆ ಸಿಂಗಾರಗೊAಡಿತ್ತು. ಸೋಮವಾರ ಸಂಜೆ ಮಹಾಮಂಗಳಾರತಿಯೊAದಿಗೆ ಭವ್ಯವಾದ ಪುಷ್ಫ ಮಂಟಪದ ವಿಶೇಷ ಅಲಂಕಾರದೊAದಿಗೆ ಸತ್ಯಗಣಪತಿಹಾಗುಗ್ರಾಮ ದೇವತೆ ಉಡಿಸಲಮ್ಮ ದೇವಿಯನ್ನು ಕುಳ್ಳರಿಸಿ ಪಟ್ಟಣದ ರಾಜ ಬೀದಿಗಳಲ್ಲಿ ಸಂಚರಿಸಿ, ಉತ್ಸವ ಮಾಡಲಾಯಿತು. ಮೆರವಣಿಗೆವೇಳೆಕೀಲು ಕುದುರೆ, ಚಂಡೆವಾದ್ಯ, ಹುಲಿವೇಷಧಾರಿಗಳ ನೃತ್ಯ ಪ್ರದರ್ಶನ, ಡಿಜಿ ಸೌಂಡ್, ದೊಳ್ಳು ಕುಣಿತ, ನಾಸಿಕ್ ಬ್ಯಾಂಡ್ ಆರ್ಕೆಸ್ಟ್ರಾ ಸೇರಿದಂತೆ ಹಲವಾರು ಜಾನಪದ ಕಲಾ ತಂಡಗಳು ಜಾತ್ರೆಗೆ ಮೆರುಗು ತಂದಿದ್ದವು.…
ತುಮಕೂರು: ನಗರದ ಖಾಸಗಿ ಆಸ್ಪತ್ರೆ ಬಳಿ ಸಿಕ್ಕಿದ್ದ ಮಹಿಳೆಯೊಬ್ಬರ ಬ್ಯಾಗ್‌ನ್ನು ಪೊಲೀಸರ ಮುಖಾಂತರ ವಾರಸುದಾರ ಮಹಿಳೆಗೆ ಹಿಂತಿರುಗಿಸುವ ಮೂಲಕ ಆರ್‌ಟಿಓ ಇನ್ಸ್ಪೆಕ್ಟರ್ ಸದ್ರುಲ್ಲಾ ಷರೀಫ್ ಅವರು ಮಾನವೀಯತೆ ಮೆರೆದಿದ್ದಾರೆ. ನಗರದ ಮಡಿಲು ಆಸ್ಪತ್ರೆಯ ಮೆಟ್ಟಿಲುಗಳ ಮೇಲೆ ಅನಾಮಾಧೇಯ ಬ್ಯಾಗ್ ಬಿದ್ದಿರುವುದನ್ನು ಕಂಡ ಆರ್‌ಟಿಓ ಇನ್ಸ್ಪೆಕ್ಟರ್ ಸದ್ರುಲ್ಲಾ ಷರೀಫ್ ಅವರು ಅನುಮಾನಾಸ್ಪದವಾಗಿ ಆ ಬ್ಯಾಗ್‌ನ್ನು ಎತ್ತಿಕೊಂಡು ಅಕ್ಕಪಕ್ಕ ಈ ಬ್ಯಾಗ್‌ನ ವಾರಸುದಾರರು ಇದ್ದಾರೆಯೇ ಎಂದು ನೋಡಿದ್ದಾರೆ. ಆದರೆ ಆ ಬ್ಯಾಗ್ ವಾರಸುದಾರರು ಯಾರೂ ಪತ್ತೆಯಾಗದ ಕಾರಣ ತಕ್ಷಣ ಸಮೀಪದಲ್ಲೇ ಇದ್ದ ಹೊಸಬಡಾವಣೆ ಪೊಲೀಸ್ ಠಾಣೆಗೆ ತೆರಳಿ ತಮಗೆ ದೊರೆತ ಬ್ಯಾಗ್‌ನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ. ನಂತರ ಕಾರ್ಯಪ್ರವೃತ್ತರಾದ ಹೊಸಬಡಾವಣೆ ಠಾಣೆ ಪೊಲೀಸರು ಬ್ಯಾಗ್‌ನಲ್ಲಿದ್ದ ಕೆಲ ಚೀಟಿಯ ಮಾಹಿತಿ ಮೇರೆಗೆ ಮಡಿಲು ಆಸ್ಪತ್ರೆ, ಸ್ಕಾ÷್ಯನಿಂಗ್ ಸೆಂಟರ್‌ಗೆ ತೆರಳಿ ವಾರಸುದಾರರ ಪತ್ತೆಗಾಗಿ ಹುಡುಕಾಡಿದ್ದಾರೆ. ನಂತರ ಆಸ್ಪತ್ರೆ ಸಿಬ್ಬಂದಿ ಮೂಲಕ ವಾರಸುದಾರರ ಮೊಬೈಲ್ ನಂಬರ್ ಪಡೆದು ಸಂಪರ್ಕಿಸಿ ಅವರನ್ನು ಪೊಲೀಸ್ ಠಾಣೆಗೆ ಕರೆ ಬ್ಯಾಗ್ ಹಿಂತಿರುಗಿಸಿದ್ದಾರೆ. ಬ್ಯಾಗ್…
ಚಿಕ್ಕನಾಯಕನಹಳ್ಳಿ: ಸೋಮವಾರದಂದು ರಾತ್ರಿ 9.00 ಗಂಟೆಯವರೆಗೂ ನಿರಂತರವಾಗಿ ಕೆಲಸ ಮಾಡಿದ ತಾಲ್ಲೂಕು ಆಡಳಿತ ಕಡೆಗೂ ದಬ್ಬೇಘಟ್ಟದ ಸುಡುಗಾಡು ಸಿದ್ಧ ಜನಾಂಗದವರಿಗೆ ಹಂಚಿಕೆಯಾಗಿರುವ ನಿವೇಶನಗಳ ಹಕ್ಕುಪತ್ರವನ್ನು ವಿತರಿಸಿ ನಿಟ್ಟುಸಿರು ಬಿಟ್ಟಿತು. ಪುರಸಭೆ ವ್ಯಾಪ್ತಿ ಎಂದು ಪರಿಗಣಿಸಿ ಈ ಹಿಂದೆ ಮಂಜೂರು ಮಾಡಿದ್ದ ನಿವೇಶನಗಳ ಹಕ್ಕುಪತ್ರಗಳನ್ನು ವಿತರಿಸಲಾಗಿತ್ತು. ಆದರೆ, ನಿವೇಶನ ಹಂಚಿಕೆ ಮಾಡಲಾಗಿರುವ 122’ ಸರ್ವೆ ನಂಬರ್ ಪುರಸಭೆ ವ್ಯಾಪ್ತಿಗಲ್ಲದೆ ಹೊನ್ನೇಬಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ್ದು ಎಂದಾದ ಮೇಲೆ ಹಕ್ಕುಪತ್ರಗಳನ್ನು ಮತ್ತೆ ತಿದ್ದಿ ಹೊಸದಾಗಿ ವಿತರಿಸಲಾಗಿದೆ. ಪ್ರತಿ ಸೋಮವಾರದ ತಮ್ಮ ಜನಸ್ಪಂದನ ಕಾರ್ಯಕ್ರಮ ಮುಗಿಸಿಕೊಂಡು ಅಲ್ಲಿಂದ ನೇರ ತಾಲ್ಲೂಕು ಆಡಳಿತ ಸೌಧಕ್ಕೆ ಆಗಮಿಸಿದ ಶಾಸಕ ಸಿ ಬಿ ಸುರೇಶ್ ಬಾಬು, ಫಲಾನುಭವಿ ಅಲೆಮಾರಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿದರು. ತಹಸೀಲ್ದಾರ್ ಕೆ ಪುರಂದರ್, ಪುರಸಭಾ ಅಧ್ಯಕ್ಷ ಸಿ ಹೆಚ್ ದಯಾನಂದ್ ಹಾಗೂ ಉಪಾಧ್ಯಕ್ಷ ರಾಜಶೇಖರ್ ಮತ್ತು ಸಮಾಜ ಕಲ್ಯಾಣಾಧಿಕಾರಿ ಶ್ರೀಧರಮೂರ್ತಿ, ಅದೀಬ್ ಉಪಸ್ಥಿತರಿದ್ದರು.
ತುಮಕೂರು: ಅತ್ಯಂತ ಕುಗ್ರಾಮದಲ್ಲಿ ಹುಟ್ಟಿ, ಯಾವುದೇ ಆಧುನಿಕ ಪರಿಕರಗಳಿಲ್ಲದೆ, ತಾಯಿ, ಅಜ್ಜಿಯಿಂದ ಕಲಿತ ವಿದ್ಯೆಯಿಂದಲೂ ಸಾವಿರಾರು ಹೆರಿಗೆಗಳನ್ನು ಸುಸೂತ್ರವಾಗಿ ಮಾಡಿಸುವ ಮೂಲಕ ಪದ್ಮಶ್ರೀ ಡಾ.ಸೂಲಗಿತ್ತಿ ನರಸಮ್ಮ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ. ನಗರದ ಟೌನ್‌ಹಾಲ್ ಮುಂಭಾಗದಲ್ಲಿರುವ ಪದ್ಮಶ್ರೀ ಡಾ.ಸೂಲಗಿತ್ತಿ ನರಸಮ್ಮ ಪಾರ್ಕಿನಲ್ಲಿ ಆಯೋಜಿಸಿದ್ದ ಡಾ.ಸೂಲಗಿತ್ತಿ ನರಸಮ್ಮ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ನರಸಮ್ಮ ನವರ ಭಾವಚಿತ್ರ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಅವರು,ಪದ್ಮಶ್ರೀಯಂತಹ ದೇಶದ ಅತ್ಯುನ್ನತ ಗೌರವಕ್ಕೆ ಪಾತ್ರರಾದ ಡಾ.ಸೂಲಗಿತ್ತಿ ನರಸಮ್ಮ ಅವರ ಹೆಸರನ್ನು ಶಾಶ್ವತವಾಗಿ ಉಳಿಸುವ ನಿಟ್ಟಿನಲ್ಲಿ ಅವರ ಮಗನಾದ ಪಾವಗಡ ಶ್ರೀರಾಮ್ ಕೆಲಸ ಮಾಡುತ್ತಿದ್ದಾರೆ ಎಂದರು. ಎಲೆಮೆರೆಯ ಕಾಯಿಯಂತೆ ತಮ್ಮ ಕಾಯಕದಲ್ಲಿ ತೊಡಗಿದ್ದ ಡಾ.ಸೂಲಗಿತ್ತಿ ನರಸಮ್ಮ ಅವರ ಕೊಡುಗೆಯನ್ನು ಗುರುತಿಸಿ, ಪ್ರಧಾನಿ ನರೇಂದ್ರಮೋದಿ ಅವರು ಪದ್ಮಶ್ರೀ ಪ್ರಶಸ್ತಿ ನೀಡಿ,ಜನಸಾಮಾನ್ಯರು ದೇಶದ ಉನ್ನತ ಪ್ರಶಸ್ತಿಗೆ ಆರ್ಹರು ಎಂದು ತೋರಿಸಿಕೊಟ್ಟಿದ್ದಾರೆ. ನರಸಮ್ಮ ಅವರು ನಂಬಿದ್ದ ದಾರಿಯಲ್ಲಿ ನಾವೆಲ್ಲರೂ ನಡೆಯುವ ಮೂಲಕ…











