ಚಿಕ್ಕನಾಯಕನಹಳ್ಳಿ : ರಾಮನಹಳ್ಳಿ ಕುಮಾರಯ್ಯ ಮತ್ತು ಸೀಬಿ ಲಿಂಗಯ್ಯ’ರವರAತಹ ಹಿರಿಯ ರೈತ ಮುಖಂಡರೊAದಿಗೆ, ಕೃಷಿ ಇಲಾಖೆ ಕಚೇರಿಯ ಆವರಣದಲ್ಲಿ ಅಡಿಕೆ ಸಸಿ ನೆಡುವುದರ ಮೂಲಕ ಶಾಸಕ ಸಿ ಬಿ ಸುರೇಶ್ ಬಾಬು’ರವರು ರೈತ ದಿನಾಚರಣೆಯನ್ನು ರೈತರು ಮತ್ತು ಕೃಷಿ ಅಧಿಕಾರಿಗಳ ಜೊತೆಸೇರಿ ಆಚರಿಸಿದರು. ಸೋಮವಾರ ಬೆಳಗ್ಗೆ ತಾಲ್ಲೂಕು ಕೇಂದ್ರ ಚಿಕ್ಕನಾಯಕನಹಳ್ಳಿ ಪಟ್ಟದಲ್ಲಿರುವ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ 2024-25 ನೇ ಸಾಲಿನ ರೈತ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕರಾದ ಹೆಚ್ ಎಸ್ ಶಿವರಾಜಕುಮಾರ್’ರವರು, ಈ ಬಾರಿ ತಾಲ್ಲೂಕಿನ ನಿರೀಕ್ಷೆಗೂ ಮೀರಿ ಸುರಿದ ಮಳೆಯಿಂದ ರೈತರ ಎಲ್ಲ ಬೆಳೆಗಳಲ್ಲೂ ಉತ್ತಮ ಫಸಲು ಕಂಡುಬAದಿದೆ. ಇಂಥ ಸಮೃದ್ಧಿಯ ಕಾಲದಲ್ಲಿ ಮತ್ತು ಈಗಿನ ಸುಗ್ಗಿ-ಸೀಜ಼ನ್’ನಲ್ಲಿ ರೈತ ದಿನಾಚರಣೆ ಅರ್ಥಪೂರ್ಣ ಮತ್ತು ಸಾರ್ಥಕ ಅನಿಸುತ್ತಿದೆ ಎಂದರು. ಶಾಸಕ ಸಿ ಬಿ ಸುರೇಶ್ ಬಾಬು’ರವರು ಮಾತನಾಡಿ, ರೈತರಿಗೆ ಜಾತಿಯಿಲ್ಲ. ಪಕ್ಷವಿಲ್ಲ. ಅನ್ನದಾತ ಎಂಬುದೊAದೇ ಜಾತಿ ರೈತರದು. ನೇಗಿಲಧರ್ಮ ಎಂಬುದೊAದೇ ಧರ್ಮ ಅವರದು. ಹಾಗಾಗಿ,…
Author: News Desk Benkiyabale
ತುಮಕೂರು: ಆರ್ಥಿಕ ಚಟುವಟಿಕೆ ವೃದ್ಧಿಸಿ, ತುಮಕೂರಿನ ಕಲಾ ಕೀರ್ತಿಯನ್ನು ಬೆಳಗಿದ್ದ ಹೆಚ್‌ಎಂಟಿ ಕೈಗಡಿಯಾರ ಕಾರ್ಯಾನೆಯ ವೈಭವದ ದಿನಗಳನ್ನು ಇಂದಿನ ತಲೆಮಾರಿಗೆ ಪರಿಚಯಿಸಲು ನಗರದಲ್ಲಿ ಹೆಚ್‌ಎಂಟಿಯ ಸ್ಮಾರಕ ನಿರ್ಮಾಣ ಮಾಡಬೇಕು, ಇದಕ್ಕಾಗಿ ಆಸಕ್ತರು ಕೈ ಜೋಡಿಸಬೇಕು ಎಂದು ನಗರ ಪಾಲಿಕೆ ಮಾಜಿ ಮೇಯರ್ ಹಾಗೂ ನುಡಿ ಕನ್ನಡ ಕಲಾ ಸಂಘದ ಅಧ್ಯಕ್ಷ ಬಿ.ಜಿ.ಕೃಷ್ಣಪ್ಪ ಹೇಳಿದರು. ಕಲಾ ಸಂಘದಿAದ ಸೋಮವಾರ ಸಂಜೆ ಹೆಚ್‌ಎಂಟಿಯ ಹೆಸರಾಂತ ನಾಟಕ ನಿರ್ದೇಶಕ ತಿಪ್ಪೂರು ಕೃಷ್ಣಮೂರ್ತಿಯವರ ಸ್ಮರಣಾರ್ಥ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಪರಿಣತ ಕಲಾವಿದರನ್ನು ಒಳಗೊಂಡ ಹೆಚ್‌ಎಂಟಿಯ ಲಲಿತ ಕಲಾ ಸಂಘ ತನ್ನ ನಾಟಕಗಳ ಮೂಲಕ ನಾಡಿನಾದ್ಯಂತ ಹೆಸರಾಗಿತ್ತು. ತಂಡ ರಾಜ್ಯ, ರಾಷ್ಟç ಮಟ್ಟದ ನಾಟಕ ಸ್ಪರ್ಧೆಗಳಲ್ಲಿ ಬಹುಮಾನ ಪಡೆದು ತುಮಕೂರಿಗೆ ಕೀರ್ತಿ ತಂದಿತ್ತು. ಅಲ್ಲದೆ ನಗರದಲ್ಲಿ ಆರ್ಥಿಕ ಚಟುವಟಿಕೆ ವೃದ್ಧಿಯಾಗಲೂ ಹೆಚ್‌ಎಂಟಿ ಕಾರಣವಾಗಿತ್ತು ಎಂದರು. ಇAತಹ ಹೆಚ್‌ಎಂಟಿ ಈಗ ಇಲ್ಲವಾಗಿರುವುದು ಆರ್ಥಿಕ, ಕಲಾ ಕ್ಷೇತ್ರಕ್ಕೆ ನಷ್ಟವೇ ಆಗಿದೆ. ಅಂತಹ ಹೆಚ್‌ಎಂಟಿಯ ವೈಭವದ ದಿನಗಳನ್ನು ಅಜರಾಮರವಾಗಿಸಬೇಕು, ನಗರದಲ್ಲಿ…
ತುಮಕೂರು: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ(ರಿ) ಬೆಂಗಳೂರು ಇವರು ಅಖಿಲ ಕರ್ನಾಟಕ ಪ್ರಥಮ ಶರಣ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 29 ರ ಭಾನುವಾರ ಕುಣಿಗಲ್ ತಾಲೂಕು ಯಡಿಯೂರಿನ ಶ್ರೀತೋಂಟದ ಸಿದ್ದಲಿಂಗೇಶ್ವರ ಸ್ವಾಮಿ ಸನ್ನಿದಿಯಲ್ಲಿ ಆಯೋಜಿಸಲಾಗಿದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ತುಮಕೂರು ಜಿಲ್ಲಾಧ್ಯಕ್ಷ ಡಾ.ವಿಜಯಕುಮಾರ್ ಕಮ್ಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಅಖಿಲ ಕರ್ನಾಟಕ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರಸಿದ್ದ ಸಾಹಿತಿ,ಬಸವತತ್ವ ಮತ್ತು ಶರಣತತ್ವದ ಬಗ್ಗೆ ಆಳವಾದ ಜ್ಞಾನವುಳ್ಳ ರಂಜಾನ್ ದರ್ಗಾ ಅವರನ್ನು ಆಯ್ಕೆ ಮಾಡಲಾಗಿದೆ. ಡಿಸೆಂಬರ್ 29ರ ಬೆಳಗ್ಗೆ 10 ಗಂಟೆಗೆ ಜರುಗುವ ಅಖಿಲ ಕರ್ನಾಟಕ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯವನ್ನು ಕಲ್ಬುರ್ಗಿಯ ಆಳಂದದ ಶ್ರೀತೋಂಟದಾರ್ಯ ಅನುಭವ ಮಂಟಪದ ಶ್ರೀಕೋರಣೇಶ್ವರ ಸ್ವಾಮೀಜಿ ವಹಿಸಲಿದ್ದಾರೆ. ಪ್ರಾಸ್ತಾವಿಕ ನುಡಿಗಳನ್ನು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟೇಶ್ ಎಸ್.ಉಪ್ಪಾರ್ ನುಡಿಯಲಿದ್ದು,ಸಮ್ಮೇಳನವನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ.ಎಲ್.ಎನ್.ಮುಕುಂದರಾಜ್ ಉದ್ಘಾಟಿಸಲಿದ್ದಾರೆ ಎಂದರು. ಸಮ್ಮೇಳನಾಧ್ಯಕ್ಷರ ಭಾಷಣದ…
ತುಮಕೂರು: ಪ್ರಜಾಪ್ರಭುತ್ವದ ಕಾಳಜಿಗಳ, ಅಸ್ಮಿತೆಯ, ಬಹುತ್ವದ ಹಾಗೂ ಸಂಯುಕ್ತ ರಾಜಕಾರಣದ ಬಿಕ್ಕಟ್ಟನ್ನು ಎದುರಿಸುತ್ತಿದ್ದೇವೆ. ಊಳಿಗಮಾನ್ಯ ಪದ್ಧತಿಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿರುವುದು ದುರ್ದೈವದ ಸಂಗತಿ ಎಂದು ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಬೇಸರ ವ್ಯಕ್ತಪಡಿಸಿದರು. ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಕರ್ನಾಟಕ ರಾಜ್ಯ ರಾಜ್ಯಶಾಸ್ತç ಶಿಕ್ಷಕರ ಸಂಘ, ತುಮಕೂರು ವಿವಿ ರಾಜ್ಯಶಾಸ್ತç ಶಿಕ್ಷಕರ ಅಕಾಡೆಮಿ, ಸ್ನಾತಕೋತ್ತರ ರಾಜ್ಯಶಾಸ್ತç ಅಧ್ಯಯನ ಮತ್ತು ಸಂಶೋಧನ ವಿಭಾಗ ಹಾಗೂ ಸ್ನಾತಕೋತ್ತರ ಸಾರ್ವಜನಿಕ ಆಡಳಿತ ಅಧ್ಯಯನ ಮತ್ತು ಸಂಶೋಧನ ವಿಭಾಗದÀ ಸಹಯೋಗದಲ್ಲಿ ಆಯೋಜಿಸಿರುವ ‘ಭಾರತೀಯ ಪ್ರಜಾಪ್ರಭುತ್ವದ ಕಾಳಜಿಗಳು: ಅಸ್ಮಿತೆ, ಬಹುತ್ವ ಹಾಗೂ ಸಂಯುಕ್ತ ರಾಜಕಾರಣ’ ವಿಷಯದ ಕುರಿತ ಎರಡು ದಿನಗಳ 20ನೆಯ ಕರ್ನಾಟಕ ರಾಜ್ಯ ರಾಜ್ಯಶಾಸ್ತç ಶಿಕ್ಷಕರ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ದೇಶದ ಹಿತಚಿಂತನೆಯು ಪಕ್ಷದಿಂದ ನಾಯಕರ ಹಿತಚಿಂತನೆಗೆ ಇಳಿದಿದೆ. ವ್ಯಕ್ತಿಗತ ರಾಜಕಾರಣ ಎಂದಿಗೂ ಅಸಮಾನತೆಯನ್ನು ತೋರಿಸುತ್ತದೆ. ಸರ್ಕಾರವನ್ನು, ದುರಾಡಳಿತವನ್ನು ಟೀಕಿಸಿದರೆ ದೇಶವನ್ನು ಟೀಕಿಸಿದಂತೆ ಎಂದು, ದೇಶ ವಿರೋಧಿ ಚಟುವಟಿಕೆಯ ಕಾನೂನಿನ ಅಡಿಯಲ್ಲಿ ಬಂಧಿಸುತ್ತಾರೆ. ನಾಯಕತ್ವ ಏಕತ್ವವಾಗಿ ಸರ್ವಾಧಿಕಾರ…
ಚಿಕ್ಕನಾಯಕನಹಳ್ಳಿ : ಪಟ್ಟಣದ ಕಲ್ಪವೃಕ್ಷ ಕೋ-ಆಪರೇಟಿವ್ ಬ್ಯಾಂಕಿಗೆ ಆಡಳಿತ ಮಂಡಳಿಯ ಚುನಾವಣೆ ಭಾನುವಾರ ಸಂಜೆಯವರೆಗೂ ನಡೆಯಿತು. ನಂತರ ಮತ ಎಣಿಕೆ ನಡೆದು ಫಲಿತಾಂಶ ಹೊರಬಿದ್ದಿದೆ. ಚುನಾವಣಾಧಿಕಾರಿ ಹರೀಶ್ ಕುಮಾರ್ ಘೋಷಿಸಿದ ಫಲಿತಾಂಶದ ಪ್ರಕಾರ, ಚಲಾವಣೆಯಾಗಿರುವ ಒಟ್ಟು ಮತಗಳಲ್ಲಿ 12 ಮತಗಳು ತಿರಸ್ಕೃತಗೊಂಡಿವೆ. ಮಿಕ್ಕಂತೆ, ಕಣದಲ್ಲಿದ್ದ ಒಟ್ಟು ಅಭ್ಯರ್ಥಿಗಳಲ್ಲಿ, ರಮೇಶ್ ಬಾಬು 360 ಮತಗಳು, ಸಿಎಂ ರಂಗಸ್ವಾಮಿ 308 ಮತಗಳು, ಬೀರಪ್ಪ 304 ಮತಗಳು, ಸಿ ಎಸ್ ರಮೇಶ್ 284 ಮತಗಳು, ಮಂಜುನಾಥ್ 282 ಮತಗಳು, ಮಹಮ್ಮದ್ ಕಲಂದರ್ 280 ಮತಗಳು, ಸಿಬಿ ರೇಣುಕಸ್ವಾಮಿ 278 ಮತಗಳು, ಸಿ ಎಲ್ ದೊಡ್ಡಯ್ಯ 265 ಸಿ ಎಚ್ ದೊರೆ ಮುದ್ದಯ್ಯ 248 ಮತಗಳನ್ನು ಪಡೆಯುವ ಮೂಲಕ ಕೋ-ಆಪರೇಟಿವ್ ಬ್ಯಾಂಕ್’ನ ನೂತನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಅಲ್ಲದೆ ಈಗಾಗಲೇ ಮೀಸಲು ಹಿಂದುಳಿದ ವರ್ಗ ಹೇಗೆ ಶಶಿಧರ್ ಹಿಂದುಳಿದ ವರ್ಗ ಬಿ ಸಿಜಿ ಮಂಜುನಾಥ್ ಪರಿಶಿಷ್ಟ ಜಾತಿ ಸಿಎಚ್ ಪ್ರಕಾಶ್ ಪರಿಶಿಷ್ಟ ಪಂಗಡ ಮೀಸಲು…
ತುಮಕೂರು: ದೇಶದ ಪ್ರಜಾಪ್ರಭುತ್ವವು ವಿವಿಧ ರೀತಿಯಲ್ಲಿ ವ್ಯಾಖ್ಯಾನಕ್ಕೆ ಒಳಗಾಗುತ್ತಿರುವುದು ದುರದೃಷ್ಟಕರ. ಗಾಂಧಿ, ಅಂಬೇಡ್ಕರ್ ಅವರ ಕೊಡುಗೆಗಳನ್ನು ಬಯಸುವ ನಾಗರಿಕನಿಗೆ, ಅವರ ಆದರ್ಶ, ನಿಷ್ಠೆ, ತತ್ತ÷್ವಗಳನ್ನೂ ಪಾಲಿಸಬೇಕೆಂಬ ಕನಿಷ್ಠ ಪ್ರಜ್ಞೆಯೂ ಇಲ್ಲವಾಗಿದೆ ಎಂದು ಕರ್ನಾಟಕ ರಾಜ್ಯ ರಾಜ್ಯಶಾಸ್ತç ಶಿಕ್ಷಕರ ಸಂಘದ ಸಂಸ್ಥಾಪಕ ಅಧ್ಯಕ್ಷ ಪ್ರೊ. ಆರ್. ಎಲ್. ಎಂ. ಪಾಟೀಲ್ ಬೇಸರ ವ್ಯಕ್ತಪಡಿಸಿದರು. ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಕರ್ನಾಟಕ ರಾಜ್ಯ ರಾಜ್ಯಶಾಸ್ತç ಶಿಕ್ಷಕರ ಸಂಘ, ತುಮಕೂರು ವಿವಿ ರಾಜ್ಯಶಾಸ್ತç ಶಿಕ್ಷಕರ ಅಕಾಡೆಮಿ, ಸ್ನಾತಕೋತ್ತರ ರಾಜ್ಯಶಾಸ್ತç ಅಧ್ಯಯನ ಮತ್ತು ಸಂಶೋಧನ ವಿಭಾಗ ಹಾಗೂ ಸ್ನಾತಕೋತ್ತರ ಸಾರ್ವಜನಿಕ ಆಡಳಿತ ಅಧ್ಯಯನ ಮತ್ತು ಸಂಶೋಧನ ವಿಭಾಗದÀ ಸಹಯೋಗದಲ್ಲಿ ಆಯೋಜಿಸಿರುವ ‘ಭಾರತೀಯ ಪ್ರಜಾಪ್ರಭುತ್ವದ ಕಾಳಜಿಗಳು: ಅಸ್ಮಿತೆ, ಬಹುತ್ವ ಹಾಗೂ ಸಂಯುಕ್ತ ರಾಜಕಾರಣ’ ವಿಷಯದ ಕುರಿತ ಎರಡು ದಿನಗಳ 20ನೆಯ ಕರ್ನಾಟಕ ರಾಜ್ಯ ರಾಜ್ಯಶಾಸ್ತç ಶಿಕ್ಷಕರ ಸಮ್ಮೇಳನದಲ್ಲಿ ಮಾತನಡಿದರು. ಭಾರತ ಸ್ವತಂತ್ರವಾದ ಸಂದರ್ಭದಲ್ಲಿ- ರಾಜಕೀಯವೆಂದರೆ ಪ್ರಜೆಗಳ ಸೇವೆ. ಅಭಿವೃದ್ಧಿಯೇತರ ಆಡಳಿತದಿಂದ ರಾಷ್ಟç ನಿರ್ಮಾಣ ಸಾಧ್ಯ. ದೇಶವನ್ನು ಮುನ್ನಡೆಸಲು ಸಂವಿಧಾನ, ಕಾನೂನಿನ ಅಗತ್ಯವಿದೆ.…
ತುಮಕೂರು: ನಗರದ ಶೆಟ್ಟಿಹಳ್ಳಿ ಮುಖ್ಯ ರಸ್ತೆಯಲ್ಲಿರುವ ವಿಶಾಲಾಕ್ಷಮ್ಮ ಸದಾಶಿವಯ್ಯ ಕಲ್ಯಾಣ ಮಂಟಪದಲ್ಲಿ 2024ರ ಡಿಸೆಂಬರ್ 26ರಿಂದ 29ರವರೆಗೆ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದಕರ ಧನುರ್ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ ಧರ್ಮ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಜಗದ್ಗುರು ಪಂಚಾಚಾರ್ಯಸೇವಾ ಟ್ರಸ್ಟ್ (ರಿ) ನ ಅಧ್ಯಕ್ಷ ಟಿ.ಆರ್.ಸದಾಶಿವಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಡಿಸೆಂಬರ್ 26 ರಿಂದ 29ರವರಗೆ ಪ್ರತಿದಿನ ಬೆಳಗ್ಗೆ 5 ಗಂಟೆಯಿAದ 7 ಗಂಟೆಯವರೆಗೆ ಇಷ್ಟಲಿಂಗಪೂಜೆ ಮತ್ತು ಸಂಜೆ 6:30ರಿಂದ ಜನಜಾಗೃತಿ ಧರ್ಮ ಸಮಾರಂಭ ಜರುಗಲಿದೆ. ಮುಖ್ಯ ಅಥಿತಿಗಳಾಗಿ ಶಾಸಕರಾದ ಜಿ.ಬಿ.ಜೋತಿಗಣೇಶ್,ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಂಬಿಕಾ ಹುಲಿನಾಯ್ಕರ್,ಜಿ.ಮರಿಸ್ವಾಮಿ, ಟಿ.ಸಿ.ಓಹಿಲೇಶ್ವರ್,ಶಶಿ ಹುಲಿಕುಂಟೆ ಮಠ ಅವರುಗಳು ಪಾಲ್ಗೊಳ್ಳಲಿದ್ದಾರೆ. ಹಿರಿಯರಿಗೆ ಗುರುರಕ್ಷೆ ಇರುತ್ತದೆ. ಸುದ್ದಿಗೋಷ್ಠಿಯಲ್ಲಿ ಶ್ರೀಪಂಚಾಚಾರ್ಯ ಸೇವಾ ಟ್ರಸ್ಟ್ನ ಕಾರ್ಯದರ್ಶಿ ಹೆಚ್.ಎಸ್.ಬಸ್ಮಾಂಗಿ ರುದ್ರಯ್ಯ, ಸಹಕಾರ್ಯದರ್ಶಿ ಜಿ.ಎಸ್.ಸಿದ್ದರಾಜು, ಧರ್ಮದರ್ಶಿಗಳಾದ ಜ.ಸಿ.ವಿರೂಪಾಕ್ಷ, ಶ್ರೀಮತಿ ವೈ.ಕೆ.ಜೋತಿ, ಪಾಲ್ಗೊಂಡಿದ್ದರು.
ತುಮಕೂರು: ಉತ್ತರ ಭಾರತದ ಬೇರೆ ಬೇರೆ ರಾಜ್ಯಗಳಲ್ಲಿ ಇರುವಂತೆ ಕರ್ನಾಟಕದಲ್ಲೂ 4500 ಕೋಟಿ ರೂ. ವೆಚ್ಚದಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಯೋಜನೆಯನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭವಿಷ್ಯದಲ್ಲಿ ಗ್ರೀನ್ ಫೀಲ್ಡ್ ಕರ್ನಾಟಕದ ದೊಡ್ಡ ಯೋಜನೆಯಾಗಲಿದೆ ಎಂದು ಹೇಳಿದರು. ಹಾಸನ, ತಿಪಟೂರು, ಹುಳಿಯಾರು, ಗ್ರೀನ್ ಫೀಲ್ಡ್ ಕಾರಿಡಾರ್ ನಿರ್ಮಾಣವಾಗಲಿದೆ. ತುಮಕೂರು ಜಿಲ್ಲೆಯಲ್ಲಿ 40 ಕಿ.ಮೀ.ನಲ್ಲಿ ಹಾದು ಹೋಗಲಿದೆ. 500 ಕೋಟಿ ರೂ. ವೆಚ್ಚದಲ್ಲಿ ಪುಣೆ-ಬೆಂಗಳೂರು 500 ಕಿ.ಮೀ. ವ್ಯಾಪ್ತಿಯಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಆಗಲಿದೆ ಎಂದರು. ತುಮಕೂರು ಲೋಕಸಭಾ ಕ್ಷೇತ್ರದ ಪ್ರತಿ ಹೋಬಳಿಗೆ ಹೋಗಿ ಜನರ ಸಮಸ್ಯೆಗಳನ್ನು ಆಲಿಸುತ್ತೇನೆ. ಒಂದು ದಿನಕ್ಕೆ ಎರಡು ಹೋಬಳಿಯಂತೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ ಎಂದು ಅವರು ಹೇಳಿದರು. ಒಂದು ವಾರದಲ್ಲಿ ಮೂರು ದಿನ ಒಂದು ರೌಂಡ್ ಮಗಿಸಿ, ಎರಡನೇ ರೌಂಡ್‌ಗೆ…
ತುಮಕೂರು: ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂಧಿಗಳು ಒತ್ತಡದಿಂದ ಹೊರ ಬರಲು ಕ್ರೀಡಾಕೂಟ ಸಹಕಾರಿ ಎಂದು ನಾಗವಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಗೌರಮ್ಮ ಮೂಡ್ಲಯ್ಯ ಅಭಿಪ್ರಾಯಪಟ್ಟರು. ಗ್ರಾಮಾಂತರದ ನಾಗವಲ್ಲಿ ಗ್ರಾಮದ ಕರ್ನಾಟಕ ಪಬ್ಲೀಕ್ ಶಾಲೆಯ ಆವರಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ(ರಿ) ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಧಿಕಾರಿಗಳ ಮತ್ತು ನೌಕರರ ಸಂಘ, ತುಮಕೂರು ತಾಲೂಕು ಘಟಕದ ವತಿಯಿಂದ ಆಯೋಜಿಸಿದ್ದ ತುಮಕೂರು ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದ ಹಳ್ಳಿಗಳ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಮತ್ತು ಸಿಬ್ಬಂಧಿ ವರ್ಗದವರ ಪಾತ್ರ ಬಹಳ ಮುಖ್ಯವಾಗಿದೆ. ಹಳ್ಳಿಗಳಲ್ಲಿನ ಸಮಸ್ಯೆಗಳ ಪರಿಹಾರ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಹಳ್ಳಿಗಳಲ್ಲಿ ಮುಖ್ಯವಾಗಿ ಚರಂಡಿ,ಕುಡಿಯುವ ನೀರು ಮತ್ತು ಇತರೆ ಕೆಲಸ ಕಾರ್ಯಗಳಿಗೆ ಸದಾ ಒತ್ತು ನೀಡುತ್ತಿರುವ ಅಧಿಕಾರಿಗಳ ಆರೋಗ್ಯಕ್ಕೆ ಕ್ರೀಡಾಕೂಟ ಸಹಕಾರಿ ಎಂದು ಹೇಳಿದರು. ತುಮಕೂರು…
ತುಮಕೂರು: ಜಾಗತಿಕ ಸ್ಥಿತಿಗತಿ ನೋಡಿದರೆ ಆಂತರಿಕ ಶಾಂತಿಯ ಅಗತ್ಯವಿದೆ. ವಿಶ್ವದಲ್ಲಿ ಶಾಂತಿ ನೆಲೆಸಲು ಯೋಗ, ಧ್ಯಾನ ಬದುಕಿನ ಅನಿವಾರ್ಯ ಅಂಗವಾಗಬೇಕು ಎಂದು ಯೋಗ ಗುರು ಡಾ. ಎಂ. ಕೆ. ನಾಗರಾಜರಾವ್ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಯೋಗ ಅಧ್ಯಯನ ಮತ್ತು ಸಂಶೋಧನ ವಿಭಾಗವು ಶನಿವಾರ ಆಯೋಜಿಸಿದ್ದ ‘ವಿಶ್ವ ಧ್ಯಾನ ದಿನ’ ಆಚರಣೆಯಲ್ಲಿ ಮಾತನಾಡಿದರು. ಯೋಗ, ಧ್ಯಾನದ ಮಹತ್ವ ಹಾಗೂ ಅಭ್ಯಾಸ ಕ್ರಮಗಳ ಕುರಿತು ತಿಳಿಸುತ್ತ, ಪರರನ್ನು ಹಿಮ್ಮೆಟ್ಟಿಸುವ ಕ್ರೌರ್ಯ ಮನೋಭಾವ ನಾಶವಾಗಲು, ಸ್ವ-ಅರಿವಿನ ವಿಚಾರ ಮಾಡಲು ಮನಃಶಾಂತಿ ಆಂತರ್ಯದಲ್ಲಿ ನೆಲೆಸಬೇಕಿದೆ. ಶಾಂತಿ ನೆಲೆಸಲು ಧ್ಯಾನ ಸಹಕಾರಿಯಾಗಲಿದೆ ಎಂದರು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್ ಕೆ., ಯೋಗ ಅಧ್ಯಯನ ಮತ್ತು ಸಂಶೋಧನ ವಿಭಾಗದ ಸಂಯೋಜಕ ಡಾ. ಎ. ಎಂ. ಮಂಜುನಾಥ, ನೆದರ್ಲ್ಯಾಂಡ್ ಯೋಗ ಶಿಕ್ಷಕಿ ವೆಂಡಿ ಮ್ಯಾಂಡ್ರೆಸ್, ಜರ್ಮನಿಯ ಸುಸಾನ ಸ್ಟಾçಸ್ಬರ್ಗರ್, ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ನಾಗರಿಕರು ಭಾಗವಹಿಸಿದ್ದರು.











