ತುಮಕೂರು: ವಿಪ್ರ ಸಮುದಾಯದಲ್ಲಿ ಒಗ್ಗಟ್ಟು ಹಾಗೂ ಜಾಗೃತಿ ಮೂಡಿಸಲು ಮತ್ತು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸ್ಥಾಪನೆಗೊಂಡು 50 ವರ್ಷಗಳಾದ ಹಿನ್ನೆಲೆಯಲ್ಲಿ ಮುಂಬರುವ ಜನವರಿ ತಿಂಗಳಿನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಎರಡು ದಿನದ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಶಿವಶಂಕರ್ ಅವರು ಹೇಳಿದರು. ಅವರು ತುಮಕೂರಿನಲ್ಲಿ ಡಿಸೆಂಬರ್ 15 ರಂದು ತುಮಕೂರು ಜಿಲ್ಲಾ ಬ್ರಾಹ್ಮಣ ಸಭಾ ವತಿಯಿಂದ ರಾಜ್ಯ ಮಹಾಸಭಾವು ಸ್ಥಾಪನೆಗೊಂಡು 50 ವರ್ಷಗಳಾದ ಸುಸಂದರ್ಭದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆ ಮತ್ತು ಭಗವದ್ಗೀತೆ ಕಂಠಪಾಠ ಸ್ಪರ್ಧೆಯ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಪ್ರಸ್ತುತ ಯಾವ ರಾಜಕೀಯ ಪಕ್ಷಗಳಲ್ಲೂ ಬ್ರಾಹ್ಮಣ ಸಮುದಾಯಕ್ಕೆ ಸೂಕ್ತ ಸ್ಥಾನಮಾನ, ಪ್ರಾತಿನಿಧ್ಯ ಹಾಗೂ ಪ್ರಾಶಸ್ತö್ಯ ಸರಿಯಾಗಿ ದೊರೆಯುತ್ತಿಲ್ಲ. ಅಸಡ್ಡೆಯಿಂದ ಕಾಣಲಾಗುತ್ತಿದೆ. ಈ ನಿಟ್ಟಿನಲ್ಲಿ ವಿಪ್ರ ಸಮುದಾಯದ ಒಗ್ಗಟ್ಟನ್ನು ಪ್ರದರ್ಶಿಸಲೂ ಸಹ ಈ ಸಮಾವೇಶ ಉತ್ತಮ ವೇದಿಕೆಯಾಗಲಿದೆ ಎಂದು ಸಮಾವೇಶದಲ್ಲಿ ನಡಯುವ ವಿವಿಧ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.…
Author: News Desk Benkiyabale
ಚೇಳೂರು: ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಿ ನ್ಯಾಯಾಲಯ ತೀರ್ಪು ನೀಡಿ ಆದೇಶಿಸಿದೆ. ಅಪರಾಧಿ ಮೋಹನ ಮನೆಯವರ ಮೇಲೆ ನನಗೆ ಒಳ್ಳೆ ಹುಡುಗಿ ನೋಡಿ ಮದುವೆ ಮಾಡಲಿಲ್ಲ ಎಂದು ಆಗಾಗ್ಗೆ ಮನೆಯಲ್ಲಿ ಜಗಳ ಮಡುತ್ತಿದ್ದನು. ಈ ವಿಚಾರದಲ್ಲಿ ಮೋಹನನಿಗೂ ಅವನ ತಮ್ಮ ಉಮೇಶ ಮತ್ತು ತಂದೆ ಮಲ್ಲಯ್ಯ ವರಿಗೆ ಹಲವು ಬಾರೀ ಗಲಾಟೆ ಆಗಿತ್ತು. ಉಮೇಶನು ಮಲಗಿದ್ದಾಗ ಆರೋಪಿ ಇವನು ಯಾವಾಗಲೂ ಗಲಾಟೆ ಮಾಡುತ್ತಾನೆ ಹಾಗೂ ತನ್ನ ತಂದೆ ಮಲ್ಲಯ್ಯ ಗಲಾಟೆ ಬಿಡಿಸಲು ಬರುತ್ತಾನೆ ಎಂಬ ದ್ವೇಷದಿಂದ ಮಚ್ಚಿನಿಂದ ತನ್ನ ತಮ್ಮನನ್ನು ಹೊಡೆದು ಕೊಲೆಮಾಡಿದ್ದನು. ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಮತ್ತು. 50 ಸಾವಿರ ದಂಡ ಮತ್ತು 10 ವರ್ಷ ಕಾರಾಗೃಹ ಮತ್ತು 25 ಸಾವಿರ ದಂಢ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ತುಮಕೂರು: ಜೀವನದಲ್ಲಿ ಸ್ಪಷ್ಟ ಗುರಿ, ಛಲ, ಶ್ರಮ, ಶ್ರದ್ಧೆ ಹೊಂದಿದ್ದರೆ ಸಾಧನೆ ಮಾಡಬಹುದು. ತಮಿಳು ನಾಡಿನ 18ನೇ ವಯಸ್ಸಿನ ಗುಕೇಶ್ ಚೆಸ್‌ನಲ್ಲಿ 18ನೇ ವಿಶ್ವ ಚಾಂಪಿಯನ್ ಆಗಿ ಭಾರತಕ್ಕೆ ಕೀರ್ತಿ ತಂದಿದ್ದಾರೆ. ಶ್ರದ್ಧೆ, ಪರಿಶ್ರಮದಿಂದ ಇದು ಸಾಧ್ಯವಾಗಿದೆ. ಚೆಸ್ ನಮ್ಮ ದೇಶದ ಆಟ. ಏಕಾಗ್ರತೆ, ಬುದ್ಧಿಶಕ್ತಿ ವೃದ್ಧಿಸುವ ಆಟ ಎಂದು ರಾಜ್ಯ ಚೆಸ್ ಅಸೋಸಿಯೇಷನ್ ಅಧ್ಯಕ್ಷ ಟಿ.ಎನ್.ಮಧುಕರ್ ಹೇಳಿದರು. ನಗರದ ವಿದ್ಯಾನಿಕೇತನ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ಕ್ರೀಡಾ ಜ್ಯೋತಿ ಸ್ವೀಕರಿಸಿ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಶಾಲೆಗಳಲ್ಲಿ ಕ್ರೀಡೆಯೂ ಅಧ್ಯಯನದ ಭಾಗವಾಗಿ ಇರಬೇಕು. ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿ. ಇಂದು ಉದ್ಯೋಗದಲ್ಲಿ, ಶಿಕ್ಷಣದಲ್ಲಿ ಕ್ರೀಡಾ ಸಾಧಕರಿಗೆ ಮೀಸಲಾತಿ ಸೌಲಭ್ಯವಿದೆ. ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಪೋಷಕರು ಪ್ರೋತ್ಸಾಹ ನೀಡಬೇಕು ಎಂದರು. ಚೆನ್ನೆöÊನಲ್ಲಿ ನಡೆದ ಚೆಸ್ ಒಲಂಪಿಯಾಡ್‌ಗೆ ಪ್ರಧಾನಿ ನರೇಂದ್ರ ಮೋದಿಯವರು ಹೆಚ್ಚಿನ ಪ್ರೋತ್ಸಾಹ ನೀಡಿದರು. ಇದಾಗಿ ಒಂದೂವರೆ ವರ್ಷದಲ್ಲಿ ಚೆಸ್‌ನಲ್ಲಿ ಚಿನ್ನದ ಪದಕ ಪಡೆಯುವವರ ಸಂಖ್ಯೆ ಹೆಚ್ಚಾಗಿದೆ. ಗುಕೇಶ್…
ತುಮಕೂರು: ಒಳಮೀಸಲಾತಿ ಜಾರಿ ಕುರಿತು ಚಳಿಗಾಲದ ಅಧಿವೇಶನದಲ್ಲಿ ಮಾತನಾಡಬೇಕು ಎಂದು ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟದವತಿಯಿಂದ ಸಚಿವರಾದ ಕೆ.ಎನ್.ರಾಜಣ್ಣ,ಡಾ.ಜಿ.ಪರಮೇಶ್ವರ್,ಶಾಸಕರಾದ ಜೋತಿಗಣೇಶ್, ಆರ್.ರಾಜೇಂದ್ರ ಅವರುಗಳಿಗೆ ಮನವಿ ಸಲ್ಲಿಸಲಾಯಿತು. ಸುಪ್ರಿಂಕೋರ್ಟಿನ 7 ನ್ಯಾಯಾಧೀಶರನ್ನು ಒಳಗೊಂಡ ಸಂವಿಧಾನ ಪೀಠವು ಒಳಮೀಸಲಾತಿ ಜಾರಿ ಕುರಿತಂತೆ ಸಂಪೂರ್ಣ ಅಧಿಕಾರವನ್ನು ರಾಜ್ಯ ಸರಕಾರಗಳಿಗೆ ನೀಡಿದ್ದು, ಒಳಮೀಸಲಾತಿ ಜಾರಿಯಾದರೆ ಪರಿಶಿಷ್ಟ ಜಾತಿಯಲ್ಲಿನ ಎಲ್ಲಾ 101 ಜಾತಿಗಳಿಗೂ ಸಾಮಾಜಿಕ ನ್ಯಾಯ ದೊರಕಿದಂತಾಗುತ್ತದೆ ಅಭಿಪ್ರಾಯ ವ್ಯಕ್ತಪಡಿಸಿದೆ. ಸುಪ್ರಿಂಕೋರ್ಟಿನ ತೀರ್ಪು ಬಂದ ನಂತರ ಅಧಿಕಾರಕ್ಕೆ ಬಂದ ಹರಿಯಾಣದ ಬಿಜೆಪಿ ಸರಕಾರ ತಾನು ಅಧಿಕಾರ ವಹಿಸಿಕೊಂಡ ಒಂದೇ ವಾರದಲ್ಲಿ ಸುಪ್ರಿಂಕೋರ್ಟಿನ ಆದೇಶದಂತೆ ಒಳಮೀಸಲಾತಿ ಜಾರಿಗೊಳಿಸಿದೆ.ಆದರೆ ಕರ್ನಾಟಕದಲ್ಲಿ ತಾವು ಅಧಿಕಾರಕ್ಕೆ ಬಂದರೆ 60 ದಿನದಲ್ಲಿ ಒಳಮೀಸಲಾತಿ ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು 1ವರ್ಷ 10 ತಿಂಗಳು ಕಳೆದರೂ ಒಳಮೀಸಲಾತಿ ಜಾರಿಗೊಳಿಸಲು ಮೀನಾಮೇಷ ಎಣಿಸುತ್ತಿದೆ.ಅಲ್ಲದೆ ಕರಾರುವಾಕಾದ ಜನಸಂಖ್ಯೆಯ ಅಂಕಿ ಅಂಶ ಪಡೆಯಲು ರಚಿಸಿರುವ ನ್ಯಾ.ನಾಗಮೋಹನ್‌ದಾಸ್ ನೇತೃತ್ವದ ಸಮಿತಿಗೂ ಸರಿಯಾದ ರೀತಿ ಸ್ಪಂದಿಸದೆ ಅನಗತ್ಯ…
ತುಮಕೂರು: ಹೊಸ ಶಿಕ್ಷಣ ನೀತಿ-2020 ಬಂದ ನಂತರ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಈ ಬದಲಾವಣೆಗೆ ಅಗತ್ಯ ತಯಾರಿ ಮಾಡಿಕೊಂಡರಷ್ಟೇ ಸವಾಲುಗಳನ್ನು ಎದುರಿಸಿ, ನಿಲ್ಲಲ್ಲು ಸಾಧ್ಯ ಎಂದು ಬೆಂಗಳೂರು ವಿವಿ ಅರ್ಥಶಾಸ್ತç ವಿಭಾಗದ ಅಧ್ಯಕ್ಷರಾದ ಪ್ರೊ.ಎಸ್.ಆರ್.ಕೇಶವ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಸರಕಾರಿ ಪ್ರಥಮದರ್ಜೆಕಾಲೇಜು ಹಾಗೂ ಸರಕಾರಿ ಸಂಜೆ ಪ್ರಥಮದರ್ಜೆ ಕಾಲೇಜುವತಿಯಿಂದ ಆಯೋಜಿಸಿದ್ದ 2024-25ನೇ ಸಾಲಿನ ಸಾಂಸ್ಕೃತಿಕ ಕ್ರೀಡೆ, ಎನ್.ಎಸ್.ಎಸ್, ಸೇರಿದಂತೆ ವಿವಿಧ ಘಟಕಗಳ ಚಟುವಟಿಕೆಗಳ ಸಂಭ್ರಮ-2024 ಹಾಗೂ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತಿದ್ದ ಅವರು,ತಂತ್ರಜ್ಞಾನದÀ ಬಳಕೆಯಿಂದ ಗುತ್ತಿಗೆದಾರ, ಅಡಿಟರ್ ಸೇರಿದಂತೆ ಸುಮಾರು 40ರಷು ಹುದ್ದೆಗಳು ತನ್ನ ಅಸ್ಥಿತ್ವ ಕಳೆದುಕೊಳ್ಳಲಿವೆ. ಮುಂದಿನ ಮೂರು ವರ್ಷದ ನಂತರ ಪದವಿ ಪಡೆದ ಬರುವ ನೀವುಗಳು, ಈ ಸವಾಲನ್ನು ಸ್ವೀಕರಿಸಲು ಅಗತ್ಯವಿರುವ ತಯಾರಿ ಮಾಡಿಕೊಂಡರೆ ಮಾತ್ರ ಪೈಪೋಟಿಯುತ ಜಗತ್ತಿನಲ್ಲಿ ಉಳಿಯಲು ಸಾಧ್ಯ.ಹಾಗಾಗಿ ಈಗಿನಿಂದಲೇ ತಯಾರಿ ನಡೆಸಿ ಎಂದು ಸಲಹೆ ನೀಡಿದರು. ಹೊಸ ಶಿಕ್ಷಣ ನೀತಿ ಬಂದ ನಂತರ ಪಠ್ಯ ಮತ್ತು ಪಠ್ಯೇತರದ ನಡುವಿನ ಅಂತರ ಕುಸಿದಿದೆ.ಎರಡು ಒಂದೇ ಎನ್ನುವ…
ತುಮಕೂರು: ಶ್ರೀದೇವಿ ಇಂಜಿನಿಯರಿAಗ್ ಕಾಲೇಜು ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇವರುಗಳ ಸಹಯೋಗದೊಂದಿಗೆ ಕೇಂದ್ರ ಕರ್ನಾಟಕ ವಿಭಾಗೀಯ ಮಟ್ಟದ ಮಹಿಳಾ ಥ್ರೋಬಾಲ್ ಪಂದ್ಯಾವಳಿಯನ್ನು ಡಿ.12 ಮತ್ತು 13 ರವರೆಗೆ ಆಯೋಜಿಸಲಾಗಿತ್ತು. ಪಂದ್ಯಾವಳಿಯನ್ನು ಉದ್ಘಾಟಿಸಿದ ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್‌ರವರು ಮಾತನಾಡಿ ಈ ಪಂದ್ಯಾವಳಿಯನ್ನು ಆಯೋಜಿಸಲು ಅವಕಾಶ ನೀಡಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಧನ್ಯವಾದಗಳು. ಪ್ರತಿಯೊಬ್ಬ ವಿದ್ಯಾರ್ಥಿಗಳು ಕ್ರೀಡಾಮನೋಭಾವನೆಯಿಂದ ಆಟದಲ್ಲಿ ಭಾಗವಹಿಸಬೇಕು, ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಫೂರ್ತಿಯನ್ನು ಮೆರೆಯಬೇಕೆಂದರು. ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಆಗಮಿಸಿದ್ದ ಬೆಂಗಳೂರಿನ ವಿಟಿಯು ಪ್ರಾದೇಶಿಕ ಕಚೇರಿಯ ನಿರ್ದೇಶಕರಾದ ಡಾ.ಹೆಚ್.ಆರ್.ಸುದರ್ಶನರೆಡ್ಡಿರವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಸದಾ ಮೊಬೈಲ್‌ನಲ್ಲಿ ನಿರಂತರರಾಗಿರುವುದರಿAದ ಕ್ರೀಡಾಸಕ್ತಿ ಕಡಿಮೆಯಾಗುತ್ತಿದೆ. ಹಾಗೆಯೇ ಆರೋಗ್ಯವು ಅಸೌಖ್ಯವಾಗುತ್ತಿದೆಯೆಂದು ಕಳವಳ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಪ್ರತಿದಿನದಲ್ಲಿ 1 ರಿಂದ 2 ಗಂಟೆಯಲ್ಲಿ ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಆರೋಗ್ಯ ಮತ್ತು ಬುದ್ದಿಮಟ್ಟವು ಹೆಚ್ಚಾಗುತ್ತದೆ. ಪೋಷಕರು ಮತ್ತು ತಮ್ಮ ಮಕ್ಕಳನ್ನು ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಅಂತರಾಷ್ಟಿçÃಯ ಥ್ರೋಬಾಲ್ ಆಟಗಾರ್ತಿ ಜಾಯ್ಸ್ವೆಸ್ಲಿರವರು…
ಹುಳಿಯಾರು: ರಾಷ್ಟçಪತಿ ಪದಕ ವಿಜೇತ ಪ್ರಬಂಧಕಾರ, ಸಾಹಿತಿ ಹಾಗೂ ವಿಶ್ರಾಂತ ಉಪನ್ಯಾಸಕ ಡಾ.ಅಬ್ದುಲ್ ಹಮೀದ್ (ವಯಸ್ಸು 88) ಅವರು ವಯೋಸಹಜ ಶುಕ್ರವಾರ ನಿಧನರಾಗಿದ್ದಾರೆ. ಸುಮಾರು ಮೂವತ್ತೆöÊದಕ್ಕೂ ಹೆಚ್ಚಿನ ವರ್ಷಗಳ ಉಪನ್ಯಾಸಕ ಸೇವೆ ಹಾಗೂ ಸಾ.ಶಿ.ಮರುಳಯ್ಯ ಮತ್ತು ಜಿ.ಎಸ್.ಶಿವರುದ್ರಪ್ಪನವರ ಆಪ್ತ ಬಳಗ ಮೃತರು ಸೂಫಿ ಪಥ ಮತ್ತು ಶರಣ ಪಥಗಳ ತೌಲನಿಕ ಅಧ್ಯಯನ ನಡೆಸಿ, ಮಂಡಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಗೌರವ ಸಂದಿತ್ತು. ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದವರು ಶನಿವಾರ ಹಂದನಕೆರೆ ಗ್ರಾಮದ ತೋಟದ ಮನೆ ಕೆಂಗಲಾಪುರ ಮಾರ್ಗದಲ್ಲಿರುವ ತಾಜ್ ಕುರಿ ಫಾರಂ ಅಂತ್ಯಕ್ರಿಯೆ ನೆರವೇರಲಿದೆ.
ತುಮಕೂರು: ಮೋಡ ಕವಿದ ವಾತಾವರಣದ, ಶೀತಗಾಳಿ ನಡುವೆಯೂ ಕಲ್ಪತರುನಾಡಿನ ವಿವಿಧೆಡೆ ಮುಂಜಾನೆಯಿAದಲೇ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿಸುವ ಮೂಲಕ ಹನುಮ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ನಗರದ ಇತಿಹಾಸ ಪ್ರಸಿದ್ಧ ಕೋಟೆ ಆಂಜನೇಯಸ್ವಾಮಿ ದೇವಾಲಯ, ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ದೇವಾಲಯ, ಶೆಟ್ಟಿಹಳ್ಳಿ ಗೇಟ್‌ನಲ್ಲಿರುವ ಅಭಯ ಆಂಜನೇಯ ಸ್ವಾಮಿ ದೇವಾಲಯ, ಬಿ.ಹೆಚ್. ರಸ್ತೆಯ ಆರ್‌ಟಿಓ ಕಚೇರಿ ಮುಂಭಾಗದಲ್ಲಿರುವ ವರಪ್ರಸಾದ ವೀರಾಂಜನೇಯ ಸ್ವಾಮಿ ದೇಗುಲ, ಶ್ರೀರಾಮನಗರದ ಕಿಕ್ಕೇರಿ ಆಂಜನೇಯಸ್ವಾಮಿ ದೇವಾಲಯ, ಬಟವಾಡಿ ಸಮೀಪದ ಭಕ್ತಾಂಜನೇಯಸ್ವಾಮಿ ದೇವಾಲಯ, ವಿದ್ಯಾನಗರದ ಪುಟ್ಟಾಂಜನೇಯ ಸ್ವಾಮಿ ದೇವಸ್ಥಾನ, ಹನುಂತಪುರದ ಬಯಲಾಂಜನೇಯಸ್ವಾಮಿ ದೇವಾಲಯ, ಬನಶಂಕರಿಯ ಮಾರುತಿ ದೇವಾಲಯ, ಮೆಳೇಕೋಟೆಯ ಅಭಯ ಆಂಜನೇಯಸ್ವಾಮಿ ದೇವಾಲಯ ಸೇರಿದಂತೆ ಜಿಲ್ಲೆಯ ವಿವಿಧೆಡೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊAದಿಗೆ ಹನುಮ ನಾಮ ಸ್ಮರಣೆ, ವೇದ ಘೋಷಗಳು, ಭಜನೆಗಳು ಮೊಳಗಿದವು. ಹನುಮ ಜಯಂತಿ ಪ್ರಯುಕ್ತ ಕೋಟೆ ಶ್ರೀಆಂಜನೇಯ ಸ್ವಾಮಿ ವೃತ್ತ, ಟೌನ್ ಹಾಲ್ ವೃತ್ತ, ಕಾಲ್ಟ್ಟ್ಯಾಕ್ಸ್, ಎಂ.ಜಿ. ರಸ್ತೆ, ಬಾರ್‌ಲೈನ್ ರಸ್ತೆ, ಎಸ್.ಎಸ್.ಪುರಂ…
ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ಅಭಿವೃದ್ಧಿ ನಿಗಮಗಳಿಗೆ ನೀಡಬೇಕಾದ ಅನುದಾನ ಬಿಡುಗಡೆ ಮಾಡದೆ, ಈ ವರ್ಗದ ಜನರಲ್ಲಿ ಆರ್ಥಿಕ ಶಕ್ತಿ ತುಂಬುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆಪಾದಿಸಿ, ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಯಿತು. ಬಿಜಿಎಸ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಅಹಿಂದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ. ಹಿಂದುಳಿದ ವರ್ಗದ ಜನರ ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ, ಕೃಷಿ ಅನುದಾನ ಬಿಡುಗಡೆ ಮಾಡದೆ ಅನ್ಯಾಯ ಮಾಡಿದೆ. ಹಿಂದಿನ ಬಿಜೆಪಿ ಸರ್ಕಾರ ಹಿಂದುಳಿದವರ ಅಭಿವೃದ್ಧಿಗಾಗಿ ಒಂದು ಸಾವಿರ ಕೋಟಿ ರೂ.ಗಳನ್ನು ನಿಗಮಗಳಿಗೆ ಬಿಡುಗಡೆ ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ 1500 ಕೋಟಿ ರೂ.ಗಳಲ್ಲಿ ಕೇವಲ 170 ಕೋಟಿ ರೂ. ಬಿಡುಗಡೆ ಮಾಡಿದೆ ಎಂದರು.…
ತುಮಕೂರು: ಪರಿಶುದ್ಧ ರಾಜಕಾರಣ ನಡೆಸಿದ ಎಸ್.ಎಂ.ಕೃಷ್ಣ ತಮ್ಮ ಘನತೆ, ಗಾಂಭೀರ್ಯ, ತೂಕದ ಮಾತುಗಳಿಂದ ಎಲ್ಲ ಸಮುದಾಯಗಳ ಮನಸ್ಸನ್ನು ಗೆದ್ದಿದ್ದವರು ಶ್ರೀಮಂತ ಕುಟುಂಬದ ಹಿನ್ನೆಲೆಯಿಂದ ಬಂದಿದ್ದರೂ ಬಡವರ ಬಗ್ಗೆ ಅಪಾರ ಕಾಳಜಿ ಇಟ್ಟುಕೊಂಡಿದ್ದ ಇವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದು ಕರ್ನಾಟಕದಲ್ಲಿ ಪಾಂಚಜನ್ಯ ಮೊಳಗಿಸಿದ ಮೂಲಕ ಆ ಪಕ್ಷವನ್ನು ಅಧಿಕಾರಕ್ಕೆ ತಂದು ಮುಖ್ಯಮಂತ್ರಿ ಪಟ್ಟವನ್ನಲಂಕರಿಸಿದ ಧಿಮಂತನಾಯಕ ಎಸ್.ಎಂ.ಕೃಷ್ಣರಾಗಿದ್ದಾರೆ ಎಂದು ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ನುಡಿದರು. ಅವರು ಜಿಲ್ಲಾ ಕ.ಸಾ.ಪ. ನಗರದ ಕನ್ನಡ ಭವನದಲ್ಲಿ ಏರ್ಪಡಿಸಿದ್ದ ಎಸ್.ಎಂ.ಕೃಷ್ಣರವರ ಶ್ರದ್ಧಾಂಜಲಿ ಸಭೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ನುಡಿನಮನ ಸಲ್ಲಿಸಿದರು. ರಾಜಕಾರಣದಲ್ಲಿ ಯುವಕರ ಮೇಲೆ ಅಪಾರ ಭರವಸೆ ಇಟ್ಟುಕೊಂಡಿದ್ದ ಇವರು ತಾವು ಮುಖ್ಯಮಂತ್ರಿಯಾಗಿದ್ದಾಗ ಅಪಾರ ಸವಾಲುಗಳನ್ನು ಎದುರಿಸಬೇಕಾಯಿತು. ಈ ಎಲ್ಲ ಸವಾಲುಗಳನ್ನು ಜಾಣ್ಮೆಯಿಂದ ಬಗೆಹರಿಸಿ ಸರ್ಕಾರವನ್ನು ಮುನ್ನಡೆಸಿದ ಮುತ್ಸದ್ಧಿ ರಾಜಕಾರಣಿಯಾಗಿದ್ದಾರೆ. ದೂರದ ಅಮೆರಿಕಾದಲ್ಲಿ ವಿದ್ಯಾಭ್ಯಾಸವಾಗಿದ್ದರೂ ತಮ್ಮ ಶಿಸ್ತಿನ ದಿನಚರಿಯಿಂದ ಅವರು ಎಲ್ಲರ ಗಮನ ಸೆಳೆಯುತ್ತಾರೆ. ಇವರ ಮರಣ ರಾಜಕಾರಣ, ಕಲೆ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ತುಂಬಲÁರದ…










