Author: News Desk Benkiyabale

ತುಮಕೂರು: ಕಾಲೇಜಿನ ಕ್ಯಾಂಪಸ್‌ನಲ್ಲಿ ಅಧ್ಯಯನ ಮಾಡುವಾಗಲೇ ಉದ್ಯಮಿಯಾಗಲು ಗುರಿಯಿಟ್ಟುಕೊಂಡು ಸರ್ಕಾರದಿಂದ ಸಿಗುವ ಅನುದಾನಗಳನ್ನು ಬಳಸಿಕೊಂಡು ನಿಮ್ಮ ಯೋಜನೆಗಳು ಮತ್ತು ಆವಿಷ್ಕಾರಗಳಿಗೆ ಮಾಡಿದಾಗ ಮಾತ್ರ ದೊಡ್ಡ ಉದ್ಯಮಿಯಾಗಬಹುದು ಎಂದು ಕರ್ನಾಟಕ ಸರ್ಕಾರದ ಖಜಾನೆ ಇಲಾಖೆಯ ತಾಂತ್ರಿಕ ಸಮಾಲೋಚಕರಾದ ಚೈತನ್ಯ ನಾಯಕ್ ಅವರು ಅಭಿಪ್ರಾಯಪಟ್ಟರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎಲೆಕ್ಟಾçನಿಕ್ಸ್ ಮತ್ತು ಟೆಲಿಕಮ್ಯುನಿಕೇಷನ್ ಇಂಜಿನಿಯರಿAಗ್ ವಿಭಾಗದ ವತಿಯಿಂದ ಇಂದು ಹಮ್ಮಿಕೊಂಡಿದ್ದ “ಬ್ರಾಡ್ ಕಾಸ್ಟ್-2024 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿರುವಾಗಲೇ ಪ್ರಾಜೆಕ್ಟ÷್ಗಳನ್ನು ಮಾಡಲು ಮುಂದಾಗಿ, ನಾಲ್ಕು ವರ್ಷ ಪೂರ್ಣಗೊಳಿಸಿದ ನಂತರ ಉದ್ಯೋಗಿಗಲಾಗುತ್ತೇನೆ ಎಂದು ಕಾಲಹರಣ ಮಾಡಬೇಡಿ ಎಂದು ಚೈತನ್ಯ ನಾಯಕ್ ಕಿವಿ ಮಾತು ಹೇಳಿದರು. ಪ್ರಾಂಶುಪಾಲರಾದ ಡಾ. ಎಂಎಸ್ ರವಿಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳು ಮೂರನೇ ಸೆಮಿಸ್ಟರ್ನಿಂದಲೇ ಪ್ರಾಜೆಕ್ಟ್ಗಳನ್ನು ಹೊಸ ಐಡಿಯಾಗಳೊಂದಿಗೆ ಪ್ರಾರಂಭ ಮಾಡಬೇಕು. ಆಗ ಮಾತ್ರ ಆರನೇ ಸೆಮಿಸ್ಟರ್ನ ಕೊನೆಯಲ್ಲಿ ಉತ್ತಮ ಪ್ರಾಜೆಕ್ಟ್ ಗಳು ಹೊರಬರಲಿವೆ. ಹಲವಾರು ರೀತಿಯ ಸ್ಪರ್ಧೆಗಳಿದ್ದು, ನಿಮ್ಮ ವ್ಯಕ್ತಿತ್ವ ಬರವಣಿಗೆ ಶೈಲಿ, ಕ್ರೀಡೆಗಳಲ್ಲಿ ಬೆಳವಣಿಗೆಯನ್ನು…

Read More

ತುಮಕೂರು : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರಥಮ ಬಾರಿಗೆ ಕಲ್ಪತರು ನಗರಿಗೆ ತುಮಕೂರು ಜಿಲ್ಲೆಯಲ್ಲಿ ಪತ್ರಕರ್ತರಿಗಾಗಿ ರಾಜ್ಯಮಟ್ಟದ ಸುವರ್ಣ ಸಂಭ್ರಮ ಕ್ರೀಡಾಕೂಟವನ್ನು ಆಯೋಜನೆ ಮಾಡುತ್ತಿದ್ದು ನವಂಬರ್ ನಲ್ಲಿ ನಡೆಯುವ ಕ್ರೀಡಾ ಕೂಟಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಈಗಾಗಲೇ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಹಾಗೂ ಸಹಕಾರ ಸಚಿವ ಕೆ ಎನ್ ರಾಜಣ್ಣ ಸೇರಿದಂತೆ ವಿವಿಧ ಗಣ್ಯರು ಶುಭಕೋರಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಸುವರ್ಣ ಸಂಭ್ರಮ ಕ್ರೀಡಾಕೂಟ ಲಾಂಛನವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದ್ದಾರೆ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಕೂಡ ತುಮಕೂರಿನಲ್ಲಿ ನಡೆಸಲು ನಿಶ್ಚಯಿಸಿರುವುದರಿಂದ ಜನವರಿಯಲ್ಲಿ ಪತ್ರಕರ್ತರ ಸಮ್ಮೇಳನ ನಡೆಸುವಂತೆ ದಿನಾಂಕ ನಿಶ್ಚಯಗೊಳಿಸಿದ್ದಾರೆ ಎಲ್ಲ ಕಾರಣಗಳಿಂದಾಗಿ ಜಿಲ್ಲೆಯಲ್ಲಿ ನಡೆಯುವ ಸುವರ್ಣ ಸಂಭ್ರಮ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಎಲ್ಲ ಪತ್ರಕರ್ತರ ಸಹಕಾರ ಮುಖ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾ ಘಟಕದ ಜಿಲ್ಲಾ ಪುರುಷೋತ್ತಮ ಅವರು ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ…

Read More

ತುರುವೇಕೆರೆ: ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ತೊಂದರೆಗಳ ಬಗ್ಗೆ ತಾಲೂಕಿನಾದ್ಯಂತ ಜಾಗೃತಿ ಆಂದೋಲನ ಮಾಡಲಾಗುವುದು ಎಂದು ತಹಸೀಲ್ದಾರ್ ಎ.ಎನ್. ಕುಂಇ ಅಹಮದ್ ತಿಳಿಸಿದರು. ತಾಲೂಕು ಕಛೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಮಾದಕ ದ್ರವ್ಯಗಳು ತಾಲೂಕಿನಲ್ಲಿ ಮಾರಾಟವಾಗುತ್ತಿದೆ ಎಂಬ ಸಂಗತಿ ತಿಳಿದು ಬಂದಿದ್ದು. ಯುವಕರು ಮಾದಕ ವಸ್ತುಗಳಿಗೆ ದಾಸರಾಗಿ ಹಲವಾರು ತಮ್ಮ ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೇ ಸಮಾಜಘಾತುಕ ಕಾರ್ಯಕ್ಕೆ ಮುಂದಾಗುತ್ತಿದ್ದಾರೆ ಇದನ್ನು ತಪ್ಪಿಸುವ ಸಲುವಾಗಿ ತಾಲೂಕು ಆಡಳಿತ ಮಾದಕ ವಸ್ತುಗಳ ಮುಕ್ತ ತಾಲೂಕನ್ನಾಗಿ ಮಾಡಲು ಪಣ ತೊಟ್ಟಿದೆ ಎಂದು ತಿಳಿಸಿದರು. ತಾಲೂಕಿನ ಪ್ರತಿಯೊಂದು ಗ್ರಾಮದಲ್ಲೂ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಉಂಟು ಮಾಡುವುದು. ಮಾದಕ ವಸ್ತುಗಳನ್ನು ಮಾರಾಟ ಮಾಡುವವರು ಮತ್ತು ಮಾದಕ ವಸ್ತುಗಳನ್ನು ಸೇವಿಸುವವರ ಬಗ್ಗೆಯೂ ಮಾಹಿತಿ ನೀಡಲು ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಅಲ್ಲದೆ ಅವರಿಗೆ ತಾಲೂಕು ಆಡಳಿತದಿಂದ ಗೌಪ್ಯವಾಗೇ ಬಹುಮಾನವನ್ನೂ ಸಹ ನೀಡಲಾಗುವುದು. ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾಗೃತ ತಂಡ…

Read More

ತುಮಕೂರು : ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಹಂತದ ತಂಬಾಕು ಮುಕ್ತ ಯುವ ಅಭಿಯಾನ ಹಾಗೂ ಗುಲಾಬಿ ಆಂದೋಲನ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಅಭಿಯಾನದ ಅಂಗವಾಗಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಸುಮಾರು 3 ಲಕ್ಷ ವಿದ್ಯಾರ್ಥಿಗಳಿಂದ ಸಾರ್ವಜನಿಕರಿಗೆ ಗುಲಾಬಿ ನೀಡುವ ಮೂಲಕ ತಂಬಾಕು ದುಷ್ಪರಿಣಾಮಗಳು ಹಾಗೂ ತಂಬಾಕು ಚಟದಿಂದ ಮುಕ್ತಿ ಹೊಂದುವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಚಂದ್ರಶೇಖರ್, ಸ್ಥಾನಿಕ ವೈದ್ಯಾಧಿಕಾರಿ ಡಾ: ಚೇತನ್, ತಾಲೂಕು ಆರೋಗ್ಯ ಅಧಿಕಾರಿ ಡಾ: ಲಕ್ಷ್ಮೀಕಾಂತ್, ಸರ್ಕಾರಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲ ಹೆಚ್. ಬಿ. ಪ್ರಕಾಶ್, ಜಿಲ್ಲಾ ಆರೋಗ್ಯ…

Read More

ತುಮಕೂರು : ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಚಂದ್ರಶೇಖರ್ ಸೂಚನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಅನುಷ್ಟಾನಗೊಳಿಸುವಲ್ಲಿ ಪೊಲೀಸ್ ಇಲಾಖೆ ಸಹಕಾರ ಅಗತ್ಯ. ತಂಬಾಕಿನಿAದ ತಯಾರಿಸಿದ ಉತ್ಪನ್ನಗಳನ್ನು ಬಳಕೆ ಮಾಡಿದರೆ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಬಗ್ಗೆ ಯುವ ಜನರಲ್ಲಿ ಅರಿವು ಮೂಡಿಸಬೇಕು. ತಂಬಾಕಿನ ಚಟದಿಂದ ಹಲವಾರು ಕುಟುಂಬಗಳು ಬಡತನ ರೇಖೆಗಿಂತ ಕೆಳಗೆ ಬರುತ್ತಿವೆ. ಈ ನಿಟ್ಟಿನಲ್ಲಿ ತಂಬಾಕು ನಿಯಂತ್ರಣಕ್ಕಾಗಿ ತಂಬಾಕು ನಿಷೇಧ ಕಾಯ್ದೆಯ ಕಟ್ಟುನಿಟ್ಟಿನ ಅನುಷ್ಠಾನಕ್ಕಾಗಿ ಆರೋಗ್ಯ ಇಲಾಖೆಯೊಂದಿಗೆ ಪೊಲೀಸ್, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮತ್ತಿತರ ಇಲಾಖೆಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಈ…

Read More

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ, ಸಮಾಜಕಾರ್ಯ ವಿಭಾಗ, ರಾಜ್ಯಶಾಸ್ತç ವಿಭಾಗ, ಕಲಾ ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಸ್ನಾತಕೋತ್ತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಪುರುಷ ವಿದ್ಯಾರ್ಥಿ ನಿಲಯಗಳು ರಾಷ್ಟಿçÃಯ ಗ್ರಂಥಾಲಯದ ಸಪ್ತಾಹದ ಅಂಗವಾಗಿ ಗುರುವಾರ ಆಯೋಜಿಸಿದ್ದ ‘ಗ್ರಂಥಾಲಯ ಜಾಥಾ’ಗೆ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಮತ್ತು ಕುಲಸಚಿವೆ ನಾಹಿದಾ ಜûಮ್ ಜûಮ್ ಚಾಲನೆ ನೀಡಿದರು. ಸ್ನಾತಕೋತ್ತರ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಅಧ್ಯಕ್ಷ ಪ್ರೊ. ಬಿ. ಟಿ. ಸಂಪತ್ ಕುಮಾರ್, ಸಮಾಜಕಾರ್ಯ ವಿಭಾಗದ ಅಧ್ಯಕ್ಷ ಪ್ರೊ. ರಮೇಶ್ ಬಿ., ರಾಜ್ಯಶಾಸ್ತç ವಿಭಾಗದ ಅಧ್ಯಕ್ಷ ಪ್ರೊ. ಬಸವರಾಜ ಜಿ., ಕಲಾ ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಸುಮಾದೇವಿ ಎಸ್., ಸ್ನಾತಕೋತ್ತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಪುರುಷ ವಿದ್ಯಾರ್ಥಿ ನಿಲಯಗಳ ನಿಲಯಪಾಲಕರಾದ ಡಾ. ಕುಮಾರ…

Read More

ತುಮಕೂರು: ಸ್ವಾತಂತ್ರ÷್ಯ ಭಾರತದ ಮೊದಲ ಪ್ರಧಾನಿ ಪಂಡಿತ ಜವಹರ್ ನೆಹರು ಅವರು ಅಧುನಿಕ ಭಾರತದ ನಿರ್ಮಾತೃವಾಗಿದ್ದು, ಅವರ ದೂರದೃಷ್ಟಿ ಆಡಳಿತದಿಂದಲೇ ಭಾರತ ಅಭಿವೃದ್ಧಿ ಶೀಲ ರಾಷ್ಟçಗಳ ಪಾಲಿಗೆ ಸೇರಲು ಸಾಧ್ಯವಾಯಿತು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ. ಚಂದ್ರಶೇಖರಗೌಡ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಪಂಡಿತ್ ನೆಹರು ಅವರು 134 ನೇ ಜನ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಗರ್ಭ ಶ್ರೀಮಂತ ಮನೆತನದಲ್ಲಿ ಜನಿಸಿ, ದೇಶಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ಮಹಾನ್ ದೇಶಪ್ರೇಮಿ ನೆಹರು ಎಂದು ಬಣ್ಣಿಸಿದರು. ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿ, ದೇಶದ ಸ್ವಾತಂತ್ರ÷್ಯ ಹೋರಾಟದಲ್ಲಿ ಪಾಲ್ಗೊಂಡ ನೆಹರು ಅವರ ಬಗ್ಗೆ ಕೆಲ ವಿಕೃತ ಮನಸ್ಸುಗಳು ಮನಬಂದತೆ ಮಾತನಾಡುವುದನ್ನು ನೋಡಿದಾಗ ಮನಸ್ಸಿಗೆ ನೋವಾಗುತ್ತದೆ. ನೆಹರು ಅವರಿಗೆ ಮಕ್ಕಳು ಮತ್ತು ಗುಲಾಬಿ ಎಂದರೆ ಎಲ್ಲಿಲ್ಲದ ಪ್ರೀತಿ. ಹಾಗಾಗಿಯೇ ತಮ್ಮ ಜನ್ಮ ದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಲು ಸಲಹೆ ನೀಡಿದ್ದರು. ಮಕ್ಕಳಿಗೆ ಅಚ್ಚುಮೆಚ್ಚಿನ ಚಾಚಾ ಆಗಿ,…

Read More

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತುಮಕೂರು ಹಾಗೂ ತುಮಕೂರು ಜಿಲ್ಲಾ ಕುಳುವ ಮಹಾಸಂಘ (ರಿ.)ವತಿಯಿಂದ ನವೆಂಬರ್ 17 ರ ಭಾನುವಾರ ಬೆಳಗ್ಗೆ 10:30 ಗಂಟೆಗೆ ಕನ್ನಡ ಭವನದಲ್ಲಿ ನಿಜ ನುಲಿಚಂದಯ್ಯ ಅವರ 917 ನೇ ಜನ್ಮ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಕುಳುವ ಮಹಾ ಸಂಘದ ಜಿಲ್ಲಾಧ್ಯಕ್ಷ ಲೋಕೇಶ್ ಸ್ವಾಮಿ ತಿಳಿಸಿದ್ದಾರೆ. ಕರ್ನಾಟದ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿರುವ ಸಾಮಾಜಿಕ ಪರಿವರ್ತನಾ ಕ್ರಾಂತಿಯು 12ನೇ ಶತಮಾನದಲ್ಲಿ ಬಸವಾದಿ ಪ್ರಮಥರಿಂದ ಕಾಯಕತ್ವದ ಆಧಾರದಲ್ಲಿ ಜಾತಿ, ಲಿಂಗ, ಧರ್ಮವೆಂಬ ಬೇಧಭಾವವಿಲ್ಲದೆ ಶರಣರ ದಾಸೋಹದ ಮೂಲಕ ಕಾಯಕಗೈದವರುಶರಣ ಶ್ರೀ ನುಲಿಯ ಚಂದಯ್ಯ. ಇವರು ಬಸವಣ್ಣನವರ ಸಮಕಾಲೀನರಾಗಿದ್ದು, ಅವರ ಜೊತೆ ಕೈಜೋಡಿಸಿದ ಪ್ರಮುಖ ಶರಣರಲ್ಲಿ ಇವರು ಒಬ್ಬರಾಗಿರುತ್ತಾರೆ. ಕಾಯಕ ಮತ್ತು ದಾಸೋಹದ ಮೂಲಕ ಸಮಾಜಕ್ಕೆ ಬೆಳಕು ನೀಡಿರುವ ಇವರು ಹುಟ್ಟಿದ್ದು ವಿಜಾಪುರ ಜಿಲ್ಲೆ ಶವಣಗಿ, ಮುಂದೆ ಕಲ್ಯಾಣಕ್ಕೆ ಬಂದು, ಕಾಯಕ ದಾಸೋಹಗಳಲ್ಲಿ…

Read More

ತುಮಕೂರು: ಕ್ರೀಡೆ, ನಾಟಕ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ತುಮಕೂರು ತಾಲೂಕಿನ ಮೇಳೆಹಳ್ಳಿ ಗ್ರಾಮದ ಮಕ್ಕಳು ನಿರಂತರವಾಗಿ ರಾಜ್ಯ ಮತ್ತು ರಾಷ್ಟçಮಟ್ಟದ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಊರಿನ ಹೆಸರನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ರ‍್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ. ನಗರಕ್ಕೆ ಸಮೀಪದ ಮೇಳೆಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ರಾಜ್ಯಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಭಾಗವಹಿಸಲು ತೆರಳುತ್ತಿರುವ ಹಿನ್ನೆಲೆಯಲ್ಲಿ ಹಿಮಾಲಯ ಜೊತೆಗೂಡಿ ಮಕ್ಕಳನ್ನು ಬೀಳ್ಕೂಡುವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಗ್ರಾಮೀಣ ಭಾಗದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ.ಆದರೆ ಅವರಿಗೆ ಸರಿಯಾದ ಮರ‍್ಗರ‍್ಶನ ಮತ್ತು ಹಣಕಾಸಿನ ನೆರವು ನೀಡಿದರೆ, ಅವರು ಸಹ ಒಲಂಪಿಕ್‌ನಂತಹ ಕ್ರೀಡೆಗಳಲ್ಲಿ ಭಾಗವಹಿಸಿ ದೇಶಕ್ಕೆ ಹೆಸರು ತರುವ ಕೆಲಸ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮೀಣ ಕ್ರೀಡಾಪಟುಗಳಿಗೆ ಅಗತ್ಯ ನೆರವು ನೀಡಲು ಹಿಮಾಲಯ ಕಂಪನಿ ಮುಂದೆ ಬಂದಿರುವುದು ಸ್ವಾಗತರ‍್ಹ ಬೆಳೆವಣಿಗೆ. ಇದೇ ರೀತಿ ತುಮಕೂರು ಪರಿಸರದಲ್ಲಿ ಕರ‍್ಯಚಟುವಟಿಕೆ ನಡೆಸುತ್ತಿರುವ ಕೈಗಾರಿಕೆಗಳು ಗ್ರಾಮೀಣ…

Read More

ಸಮಾಜದಲ್ಲಿ ಮಕ್ಕಳಿಲ್ಲದ ಎಷ್ಟೋ ದಂಪತಿಗಳು ಬದುಕಿನುದ್ದಕ್ಕೂ ಕೊರಗಿನಲ್ಲೆ ಅಂತ್ಯ ಕಾಣುತ್ತಾರೆ. ಕೆಲ ತಾಯಂದಿರು ವಿವಿಧ ಕಾರಣಗಳಿಂದ ಹೆತ್ತ ಮಗುವನ್ನೇ ಆಸ್ಪತ್ರೆ, ಬೀದಿ ಪಾಲು ಮಾಡುತ್ತಿದ್ದಾರೆ. ಮಗು ಬೇಡವಾದಲ್ಲಿ ಆಸ್ಪತ್ರೆ ಆವರಣ, ಶೌಚಾಲಯ, ರಸ್ತೆ ಬದಿ, ಪೊದೆಗಳಲ್ಲಿ ಎಸೆದು ಹೋಗುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ. ಬೇಡವಾದ ಮಗುವನ್ನು ಎಲ್ಲೆಂದರಲ್ಲಿ ಎಸೆದು ಹಿಂಸಿಸದೆ ಜಿಲ್ಲಾಸ್ಪತ್ರೆ ಹೆರಿಗೆ ವಾರ್ಡ್, ನಗರದಲ್ಲಿರುವ ಬಾಲಕಿಯರ ಬಾಲಮಂದಿರದ ಆವರಣ, ಕುಣಿಗಲ್ ತಾಲೂಕು ಭಕ್ತರಹಳ್ಳಿ ವಾಣಿಗೆರೆಯಲ್ಲಿರುವ ದಯಾಕಿರಣ ದತ್ತು ಕೇಂದ್ರದಲ್ಲಿ ಪರಿತ್ಯಕ್ತ ಮಕ್ಕಳಿಗಾಗಿಯೇ ಅಳವಡಿಸಿರುವ “ಮಮತೆಯ ತೊಟ್ಟಿಲು”ನಲ್ಲಿ ಹಾಕುವ ಮೂಲಕ ಎಳೆಯ ಜೀವಗಳನ್ನು ರಕ್ಷಿಸಬೇಕು. ಪರಿತ್ಯಕ್ತ ಮಕ್ಕಳನ್ನು ಗಮನಿಸಿ ವರದಿ ಮಾಡದಿದ್ದಲ್ಲಿ ಅಪರಾಧ: ಬಾಲನ್ಯಾಯ ಕಾಯ್ದೆ-2015 ತಿದ್ದುಪಡಿ 2021ರನ್ವಯ ಯಾವುದೇ ವ್ಯಕ್ತಿ, ಯಾವುದೇ ಸಂಸ್ಥೆ, ಆಸ್ಪತ್ರೆ, ಹೆರಿಗೆ ಆಸ್ಪತ್ರೆ, ನರ್ಸಿಂಗ್ ಹೋಂ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತೊರೆಯಲ್ಪಟ್ಟ ಮಕ್ಕಳನ್ನು 24 ಗಂಟೆಯೊಳಗಾಗಿ ಮಕ್ಕಳ ಸಹಾಯವಾಣಿ-1098, ಸ್ಥಳೀಯ ಪೊಲೀಸ್ ಠಾಣೆ, ಮಕ್ಕಳ ಕಲ್ಯಾಣ ಸಮಿತಿ ಅಥವಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕ…

Read More