Author: News Desk Benkiyabale

ತುಮಕೂರು: ವಿದ್ಯುತ್ ಪ್ರವಹಿಸುತ್ತಿದ್ದ ಕೇಬಲ್ ವೈರ್ ಮೈಮೇಲೆ ಬಿದ್ದ ಪರಿಣಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ಬಾಯಿ ಜಾದವ್ (೩೬) ಮೃತ ದುರ್ದೈವಿಯಾಗಿದ್ದಾರೆ. ಮೃತ ದುರ್ದೈವಿಯಾದ ಲಕ್ಷ್ಮೀ ಬಾಯಿ ಜಾದವ್ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಚಿಂಚಲಕಟ್ಟೆ ಮೂಲದವರಾಗಿದ್ದಾರೆ. ಇತ್ತೀಚೆಗಷ್ಟೇ ಮೃತ ಲಕ್ಷ್ಮೀಬಾಯಿಗೆ ಮದುವೆ ನಿಶ್ಚಯವಾಗಿತ್ತು. ಇವರು ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕುಣಿಗಲ್ ಪಟ್ಟಣದಲ್ಲಿ ವಾಸವಿದ್ದ ಲಕ್ಷ್ಮೀಬಾಯಿ, ಕೆಲಸ ಮುಗಿಸಿ ಇಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಲಕ್ಣ್ಮಣ್ ಜೊತೆ ಕುಣಿಗಲ್ ಗೆ ಬೈಕ್ ನಲ್ಲಿ ಲಕ್ಷ್ಮೀ ಬಾಯಿ ಬರುತ್ತಿದ್ದರು. ದಾರಿಯಲ್ಲಿ ಹಾದುಹೋಗಿದ್ದ ಕೇಬಲ್ ವೈರ್ ಗೆ, ವಿದ್ಯುತ್ ತಂತಿ ತಗುಲಿ ಲಕ್ಷ್ಮೀಬಾಯಿ ಮೇಲೆ ಕೇಬಲ್ ವೈರ್ ಬಿದ್ದಿದೆ. ಕೇಬಲ್ ವೈರ್ ಮೇಲೆ ಬಿದ್ದ ಪರಿಣಾಮ ಲಕ್ಷ್ಮೀಬಾಯಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಬೈಕ್…

Read More

ತುಮಕೂರು ಜಿಲ್ಲೆಯ ಕುಚ್ಚಂಗಿ ಕೆರೆಯ ಬಳಿ ಕಾರೊಂದು ಸಂಪೂರ್ಣ ಸುಟ್ಟು ಹೋಗಿ, ಕಾರಿನಲ್ಲಿ ಮೂವರ ಮೃತದೇಹ ಪತ್ತೆಯಾಗಿರುವ ಘಟನೆ ಶುಕ್ರವಾರ ವರದಿಯಾಗಿತ್ತು. ಈ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೂವರು ಸಾವನ್ನಪ್ಪಿರುವುದು ಪತ್ತೆ ಹಚ್ಚಲಾಗಿತ್ತು. ಈ ಘಟನೆಗೆ ಸಂಬAಧಪಟ್ಟAತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ. ಪ್ರಕರಣದ ಪ್ರಮುಖ ಆರೋಪಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಎಲ್ಲ ಆರೋಪಿಗಳನ್ನು ಮಾ.೨೨ರ ರಾತ್ರಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಪೊಲೀಸರು ಇನ್ನೂ ಕೂಡ ಅಧಿಕೃತ ಮಾಹಿತಿ ನೀಡಿಲ್ಲ. ಹನ್ನೊಂದು ದಿನದ ಹಿಂದೆ ತುಮಕೂರಿಗೆ ವ್ಯವಹಾರ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಮದ್ದಡ್ಕದ ರಫೀಕ್ ಎಂಬುವವರ ಮಾಲೀಕತ್ವದ ಎಸ್‌ಪ್ರೆಸ್ ಕಾರನ್ನು ಬೆಳ್ತಂಗಡಿ ತಾಲೂಕಿನ ಇಸಾಕ್(೫೬), ಶಾಹುಲ್ ಹಮೀದ್ (೪೫), ಇಮ್ತಿಯಾಝ್ ಸಿದ್ದೀಕ್( ೩೪) ಎಂಬವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು…

Read More

ತುಮಕೂರು ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ವಾಣಿಜ್ಯ ತೆರಿಗೆ ಇಲಾಖೆ ಜಾಗೃತಿ ದಳ ಹಾಗೂ ಕೃಷಿ ಇಲಾಖೆಯ ಜಾಗೃತಿ ದಳದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸಿರಾ ತಾಲ್ಲೂಕಿನ ತಾವರೆಕೆರೆ ಬಳಿ ವಾಣಿಜ್ಯ ತೆರಿಗೆ ಇಲಾಖೆ (ಜಾಗೃತಿ)ಯ ಜಂಟಿ ಆಯುಕ್ತ ಟಿ.ಆರ್. ಕೃಷ್ಣಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ರಾಯಚೂರಿ ಜಿಲ್ಲೆಯಿಂದ ಬೇವು ಲೇಪಿತ ಯೂರಿಯಾ ರಸಗೊಬ್ಬರ ತುಂಬಿಕೊAಡು ಬೆಂಗಳೂರು ಮೂಲಕ ಕೇರಳ ರಾಜ್ಯಕ್ಕೆ ಸಾಗಿಸುತ್ತಿದ್ದ ಲಾರಿಯನ್ನು ಅಡ್ಡಗಟ್ಟಿ ಪರಿಶೀಲನೆ ನಡೆಸಿದಾಗ ಲಾರಿಯಲ್ಲಿ ದಾಸ್ತಾನಿದ್ದ ಬೇವು ಲೇಪಿತ ಯೂರಿಯಾ ರಸಗೊಬ್ಬರಕ್ಕೂ ಬಿಲ್‌ನಲ್ಲಿ ನಮೂದಿಸಿದ್ದ ಸಾಮಗ್ರಿಗೂ ತುಂಬಾ ವ್ಯತ್ಯಾಸ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಲಾರಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಲಾರಿಯಲ್ಲಿ ೭೦೦ ಚೀಲ ಬೇವು ಲೇಪಿತ ಯೂರಿಯಾ ಸಾಗಿಸಲಾಗುತ್ತಿದ್ದು, ಇದರ ಮೌಲ್ಯ ೧೩.೫೫ ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಕಾನೂನು ಪ್ರಕಾರ ಕೃಷಿ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದು, ಕೃಷಿ…

Read More

ತುಮಕೂರು ಕುಡಿಯುವ ಉದ್ದೇಶಕ್ಕಾಗಿ ಕೆರೆಗಳನ್ನು ತುಂಬಿಸಲು ಹೇಮಾವತಿ ನಾಲೆ ನೀರನ್ನು ಜಿಲ್ಲೆಗೆ ಹರಿಸಿದ್ದು, ನಾಲೆ ನೀರನ್ನು ದುರ್ಬಳಕೆ ಮಾಡಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ರಾತ್ರಿ ಜಿಲ್ಲೆಯಲ್ಲಿ ಬರ ನಿರ್ವಹಣೆ ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ಸಂಬAಧಿಸಿದAತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ತುರ್ತು ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು, ಹೇಮಾವತಿ ನಾಲೆ ನೀರನ್ನು ಅಕ್ರಮವಾಗಿ ಡಿಸೇಲ್ ಪಂಪ್‌ನಿAದ ಬಳಸಿಕೊಳ್ಳುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅಕ್ರಮವಾಗಿ ಬಳಸಿಕೊಳ್ಳುವವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. ಕುಡಿಯುವ ನೀರಿಗಾಗಿ ಮಾತ್ರ ನಾಲೆ ನೀರನ್ನು ಬಳಸಿಕೊಳ್ಳಬೇಕು. ಕೃಷಿ ಮತ್ತಿತರ ಚಟುವಟಿಕೆಗಳಿಗೆ ಅಕ್ರಮವಾಗಿ ಬಳಸಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರಲ್ಲದೆ ನಾಲೆ ನೀರನ್ನು ಶುದ್ಧೀಕರಿಸಿದ ನಂತರ ಜನರಿಗೆ ಪೂರೈಕೆ ಮಾಡುವ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆಗೊಳಪಡಿಸಿ ಕುಡಿಯಲು ಯೋಗ್ಯವಿದ್ದರೆ ಮಾತ್ರ ಪೂರೈಕೆ ಮಾಡಬೇಕೆಂದು ನಿರ್ದೇಶನ ನೀಡಿದರು.…

Read More

ತುಮಕೂರು ಜಿಲ್ಲೆ ಗುಬ್ಬಿ ಪೋಲಿಸ್ ಠಾಣೆಯಲ್ಲಿ ಪೋಲೀಸರ ವಶದಲ್ಲಿದ್ದ ಡಕಾಯಿತಿ ಕೇಸಿನ ಆರೋಪಿ ತಡರಾತ್ರಿ ಪರಾರಿಯಾಗಿರುವ ಘಟನೆ ನೆಡೆದಿದೆ. ನ್ಯಾಯಾಲಯದ ಅನುಮತಿ ಮೇರೆಗೆ ಗದಗ ಮೂಲದ ಡಕಾಯತಿ ಕೇಸಿನ ಆರೋಪಿ ಸೈಯದ್ ಆಲಿ ಬಾಳಾ ಸಾಹೇಬ್ ನದಾಫ್ ಎನ್ನುವವರನ್ನು ತನಿಖೆಗಾಗಿ ಗುಬ್ಬಿ ಪೋಲಿಸ್ ಠಾಣೆಯ ಸಬ್ಬ್ ಇನ್ಸ್ಪೆಕ್ಟರ್ ದೇವಿಕಾ ದೇವಿ ರವರು ಇಲಾಖೆಯ ವಶಕ್ಕೆ ಪಡೆದಿದ್ದರು ಅಲ್ಲಿಂದ ಕರೆತಂದು ಗುಬ್ಬಿ ಪೋಲಿಸ್ ಠಾಣೆಯ ಲಾಕಪ್ ನಲ್ಲಿ ತನಿಖೆಗಾಗಿ ಇಟ್ಟುಕೊಂಡಿದ್ದರು ಆದರೆ ಫೆಬ್ರವರಿ ೧ ರ ತಡರಾತ್ರಿ ಲಾಕಪ್ ನಿಂದ ಆರೋಪಿಯು ತಪ್ಪಿಸಿಕೊಂಡು ಓಡಿ ಹೋಗಿದ್ದಾನೆ ಎನ್ನುವ ಮಾಹಿತಿ ಹೊರಬಿದ್ದಿದೆ ತಪ್ಪಿಸಿಕೊಂಡ ಆರೋಪಿ ಪತ್ತೆಗಾಗಿ ಪೋಲೀಸರು ಹರಸಾಹಸ ಪಡುತ್ತಿದ್ದಾರೆ , ತಪ್ಪಿಸಿಕೊಂಡು ಓಡಿ ಹೋದ ಆರೋಪಿಯು ವೃತ್ತಿನಿರತ ಆರೋಪಿಯಾಗಿದ್ದು ಕಳ್ಳತನವನ್ನೇ(ಕಸಬು) ಇತ ನಿರಂತರವಾಗಿ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಮೂಲತಃ ಗದಗ ಜಿಲ್ಲೆಯ ಲಕ್ಷ್ಮೀಶ್ವರ ಹೋಬಳಿ ಹುಲ್ಲೂರು ಗ್ರಾಮದ ವಾಸಿಯಾದ ಸೈಯದ್ ಆಲಿ ಬಾಳಾ ಸಾಹೇಬ್ ನದಾಫ್ @ ಹರ್ಷವರ್ಧನ ೨೫ ವರ್ಷ…

Read More

ತುಮಕೂರು ಕರ್ನಾಟಕ ರತ್ನ ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ.ಶ್ರೀ..ಶಿವಕುಮಾರ ಮಹಾಸ್ವಾಮೀಜಿ ಅವರ ೫ನೇ ವರ್ಷದ ಪುಣ್ಯಸ್ಮರಣೆ ಸಂಸ್ಮರಣೋತ್ಸವವನ್ನು ನಾಳೆ ಅಂದರೆ ಜ.೨೧ರಂದು ಬೆಳಿಗ್ಗೆ ೧೧ಕ್ಕೆ ಸಿದ್ಧಗಂಗಾ ಮಠದಲ್ಲಿ ಆಯೋಜಿಸಲಾಗಿದ್ದು, ಸಿಎಂ, ಮಾಜಿ ಸಿಎಂ, ಸಚಿವರು ಸೇರಿ ಹಲವು ಗಣ್ಯರು, ಶ್ರೀಗಳು ಪಾಲ್ಗೊಂಡು ನುಡಿನಮನ ಸಲ್ಲಿಸುವರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿದ್ದಗಂಗಾ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಟಿ.ಕೆ.ನಂಜುAಡಪ್ಪ ಅವರು, ಪೂಜ್ಯ ಡಾ.ಶ್ರೀ.ಶಿವಕುಮಾರಸ್ವಾಮೀಜಿ ಅವರು ಲಿಂಗೈಕ್ಯರಾದ ಜ.೨೧ರ ದಿನವನ್ನು ದಾಸೋಹ ದಿನವನ್ನಾಗಿ ರಾಜ್ಯ ಸರ್ಕಾರ ಆಚರಣೆ ಮಾಡುತ್ತಿದೆ. ಮಠದಿಂದ ಪುಣ್ಯ ಸ್ಮರಣೆ ಕಾರ್ಯಕ್ರಮ ಆಯೋಜಿಸಿದ್ದು, ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಸೇರುವ ನಿರೀಕ್ಷೆಯಿದೆ . ಮುಂಜಾನೆಯಿAದಲೇ ಮಠದಲ್ಲಿ ಪೂಜಾ ಕೈಂಕರ್ಯಗಳು, ಧಾರ್ಮಿಕ ಕಾರ್ಯಗಳು ನೆರವೇರಲಿದ್ದು, ಶಿವಕುಮಾರ ಸ್ವಾಮೀಜಿ ಪುತ್ಥಳಿಯ ಮೆರವಣಿಗೆ ಮಾಡಲಾಗುತ್ತದೆ. ನಂತರ ವೇದಿಕೆ ಕಾರ್ಯಕ್ರಮ ಇರುತ್ತದೆ ಎಂದರು. ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಸ್ವಾಮೀಜಿ ಕಾರ್ಯಕ್ರಮದ ದಿವ್ಯ ನೇತೃತ್ವ ವಹಿಸಲಿದ್ದು, ಗದಗ ಡಂಬಳ ಮಠದ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಅಧ್ಯಕ್ಷರಾದ ಡಾ.ಶ್ರೀ.ತೋಂಟದಸಿದ್ಧರಾಮಮಹಾಸ್ವಾಮೀಜಿ…

Read More

ಕೊರಟಗೆರೆ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ರಾಸುಗಳ ಜಾತ್ರೆಗೆ ರಾಜ್ಯದ ಮೂಲೆಮೂಲೆಯಿಂದ ಆಗಮಿಸಿದ ರೈತರು, ೮ ವರ್ಷಗಳ ನಂತರ ಮತ್ತೆ ರಾಸುಗಳ ಜಾತ್ರೆಗೆ ಅದ್ದೂರಿಯಾಗಿ ಪ್ರಾರಂಭವಾಗಿ ಭರ್ಜರಿಯಾಗಿ ವ್ಯಾಪಾರ ವಹಿವಾಟು ನಡೆಯುತ್ತಿದೆ. ದಕ್ಷಿಣ ಭಾರತದ ಐತಿಹಾಸಿಕ ಕಮನೀಕ್ಷೇತ್ರ ಎಂದೇ ಪ್ರಸಿದ್ದಿ ಪಡೆದಿರುವ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ದೇವಸ್ಥಾನದ ಅವರಣದಲ್ಲಿ ಪ್ರತಿವರ್ಷದಂತೆ ಸಂಕ್ರಾAತಿ ಹಬ್ಬದ ಮಾರನೇ ದಿನದಿಂದ ರಾಸುಗಳ ಜಾತ್ರೆ ಪ್ರಾರಂಭವಾಗಿದ್ದು ರಾಸುಗಳನ್ನ ಕೊಳ್ಳಲು ಮಾರಲು ರಾಜ್ಯದ ಮೂಲೆ ಮೂಲೆಯಿಂದ ರೈತರು ಆಗಮಿಸಿ ಭರ್ಜರಿ ವಹಿವಾಟು ನಡೆಸುತ್ತಿದ್ದಾರೆ. ಕಳೆದ ಎರಡು ಮೂರು ವರ್ಷಗಳಿಂದ ಕರೋನಾ ಹಾಗೂ ಕಾಳು ಬಾಯಿ ರೋಗದಿಂದ ಜಾತ್ರೆ ರಾಸುಗಳು ಬಾರದೆ ನೀರಸ ಪ್ರತಿಕ್ರಯೆ ವ್ಯಕ್ತವಾಗುತ್ತಿತ್ತು. ಅದರೆ ಈ ಬಾರಿ ಯಾವುದೆ ಅಂತಹ ತೊಂದರೆ ಇಲ್ಲದೆ ಇರುವ ಕಾರಣ ಜಾತ್ರೆ ಸುಗಮವಾಗಿ ನಡೆಯುತ್ತಿದೆ. ರಾಸುಗಳ ಜಾತ್ರೆಗೆ ೫೦ ಸಾವಿರದಿಂದ ೫ ಲಕ್ಷದವರೆಗೂ ವಿವಿಧ ತಳಿಯ ರಾಸುಗಳು ಆಗಮಿಸಿದ್ದು ವಿಶೇಷವಾಗಿದೆ. ರಾಸುಗಳ ಜಾತ್ರೆಗೆ ವಿವಿಧ ತಳಿ ಆಗಮನ; ಸಂಕ್ರಾAತಿ ಹಬ್ಬದಿಂದ ೮ ದಿನಗಳ ಕಾಲ ನಡೆಯುವ…

Read More

ತುಮಕೂರು ಭಾರತೀಯ ಪರಂಪರೆಯಲ್ಲಿ ಸಮಾಜಕ್ಕೆ ಸಕಾರಾತ್ಮಕ ತಿರುವು ಕೊಟ್ಟಂತಹ ವಿಭೂತಿ ಪುರುಷರಲ್ಲಿ ಮಹಾಯೋಗಿ ವೇಮನ ಕೂಡ ಒಬ್ಬರು. ಅವರು ತಮ್ಮ ವಚನಗಳಲ್ಲಿ ಹೇಳುವಂತೆ ವಿದ್ಯೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ನಗರದ ಶ್ರೀ ರಾಮಕೃಷ್ಣ ವಿವೇಕಾಂದ ಆಶ್ರಮದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮಿ ಅಭಿಪ್ರಾಯ ಪಟ್ಟರು. ನಗರದ ಕನ್ನಡ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಜಿಲ್ಲಾ ರೆಡ್ಡಿ ಜನಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು ವೇಮನರು ಸಾಮಾನ್ಯನಂತೆ ಸಂಚರಿಸಿ ಆಧ್ಯಾತ್ಮ ಅರಿವಿನಿಂದ ಮಹಾಯೋಗಿಯಾದರು. ಅವರು ಸಮಾಜವನ್ನು ಮಾನವೀಯ ದೃಷ್ಟಿಯಲ್ಲಿ ನೋಡುತ್ತಿದ್ದರು. ಅವರ ಜೀವನ ನಮ್ಮೆಲ್ಲರಿಗೂ ಮಾರ್ಗದರ್ಶನವಾಗಬೇಕು ಎಂದು ತಿಳಿಸಿದರು. ನಂತರ ಮಾತನಾಡಿದ ತುಮಕೂರು ವಿಶ್ವ ವಿದ್ಯಾನಿಲಯದ ಪ್ರಾಧ್ಯಾಪಕ ವೆಂಕಟರೆಡ್ಡಿ ರಾಮರೆಡ್ಡಿ ವೇಮನ ಅವರು ತಮ್ಮ ವಚನಗಳ ಮೂಲಕ ಬಾಹ್ಯ ಪೂಜೆ ಬದಲಾಗಿ ಆಂತರಿಕ ಭಕ್ತಿಭಾವ ಹೊಂದಿರಬೇಕು. ಅವರ…

Read More

ತುಮಕೂರು ನಗರದಾದ್ಯಂತ ಜನವರಿ ೧೨ರಂದು ತುಮಕೂರು ಮಹಾನಗರ ಪಾಲಿಕೆ ಮತ್ತು ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಸಹಯೋಗದಲ್ಲಿ “ಸ್ವಚ್ಚ ಭಾರತ ಅಭಿಯಾನ ೨.೦”ದ ಭಾಗವಾಗಿ ನಗರದ ೩೫ ವಾರ್ಡ್ಗಳಲ್ಲಿ ಸ್ವಚ್ಛತೆಗಾಗಿ ಪ್ಲಾಗಥಾನ್ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ ಎಂದು ತುಮಕೂರು ಮಹಾನಗರ ಪಾಲಿಕೆ ಆಯುಕ್ತರು ಹಾಗೂ ತುಮಕೂರು ಸ್ಮಾರ್ಟ್ಸಿಟಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿರುವ ಅಶ್ವಿಜ ಬಿ.ವಿ ತಿಳಿಸಿದರು. ಪಾಲಿಕೆ ಕಚೇರಿಯಲ್ಲಿಂದು ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ಲಾಗಥಾನ್ ಎಂದರೆ ಜಾಗಿಂಗ್ ಮಾಡುತ್ತಲೇ ಕಸವನ್ನು ತೆಗೆಯುವುದು. ಮೊದಲು ಈ ಪ್ಲಾಗಥಾನ್ ಸ್ವೀಡನ್ ದೇಶದಲ್ಲಿ ಪ್ರಾರಂಭಗೊAಡು ಎಲ್ಲಾ ಕಡೆಯಲ್ಲೂ ಈ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ತುಮಕೂರು ಮಹಾನಗರ ಪಾಲಿಕೆ ಮತ್ತು ತುಮಕೂರು ಸ್ಮಾರ್ಟ್ ಸಿಟಿ ವತಿಯಿಂದ ನಗರದಲ್ಲಿ ತ್ಯಾಜ್ಯ ನಿರ್ವಹಣೆ ಮತ್ತು ಸ್ವಚ್ಛ ಪರಿಸರದ ಬಗ್ಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜ.೧೨ರಂದು ಬೆಳಿಗ್ಗೆ ೭:೩೦ ರಿಂದ ೯:೩೦ ಗಂಟೆವರೆಗೆ ನಡೆಯಲಿದ್ದು, ‘ಪ್ಲಾಗಥಾನ್’ ಮೂಲಕ ನಗರದ ೩೫ ವಾರ್ಡ್ಗಳಲ್ಲಿ ತ್ಯಾಜ್ಯವನ್ನು ಸಂಗ್ರಹಿಸಲಾಗುತ್ತದೆ ಎಂದು ತಿಳಿಸಿದರು. ಪ್ಲಾಗಥಾನ್‌ನಲ್ಲಿ ಭಾಗವಹಿಸಲು ನೋಂದಣಿ ಕೂಡ…

Read More

ತುಮಕೂರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎಲ್ಲಿಯವರೆಗೆ ಶಾಸಕರ ಬೆಂಬಲ, ಹೈಕಮಾಂಡ್ ಆಶೀರ್ವಾದ ಇರುತ್ತದೆಯೋ ಅಲ್ಲಿಯವರೆಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಇಂದಿಲ್ಲಿ ಪ್ರತಿಕ್ರಿಯಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ೫ ವರ್ಷ ಪೂರೈಸುತ್ತಾರಾ, ಲೋಕಸಭಾ ಚುನಾವಣೆ ನಂತರ ಮುಖ್ಯಮಂತ್ರಿಗಳು ಬದಲಾಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆಯಲ್ಲಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ರಾಜಣ್ಣನವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏಕೆ ೫ ವರ್ಷ ಪೂರೈಸಬಾರದು ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿಗಳಿಗೆ ಶಾಸಕರ ಬೆಂಬಲ, ಪಕ್ಷದ ಹೈಕಮಾಂಡ್ ಆಶೀರ್ವಾದ ಎಲ್ಲಿಯವರೆಗೆ ಇರುತ್ತದೋ ಅಲ್ಲಿಯವರೆಗೆ ಅವರೇ ಮುಖ್ಯಮಂತ್ರಿಗಳಾಗಿ ಇರುತ್ತಾರೆ ಎಂದರು. ಮೂರು ಡಿಸಿಎಂ ಈಗಾಗಲೇ ಮೂರು ಡಿಸಿಎಂ ನೇಮಕದ ವಿಚಾರವನ್ನು ಪಕ್ಷದ ಉಸ್ತುವಾರಿ ಸುರ್ಜೇವಾಲಾ ಅವರ ಮುಂದೆ ಪ್ರಸ್ತಾಪ ಮಾಡಿದ್ದೇವೆ. ಇನ್ನು ಮುಂದೆ ಈ ಸಂಬAಧ ಯಾರು ತೀರ್ಮಾನ ತೆಗೆದುಕೊಳ್ಳುತ್ತಾರೋ ಅವರ ಮುಂದೆ ಈ ವಿಚಾರ ಪ್ರಸ್ತಾಪ ಮಾಡಿದರೆ ಸೂಕ್ತ ಎನ್ನುವುದು ನನ್ನ ಭಾವನೆ ಎಂದರು. ಪಕ್ಷದ ರಾಷ್ಟಿçÃಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮೂರು ಡಿಸಿಎಂ ಬೇಡಿಕೆ ವಿಚಾರ…

Read More