ಹುಳಿಯಾರು: ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ, ಕಾಲೇಜು, ಹುಳಿಯಾರು-ಕೆಂಕೆರೆ, ಇಲ್ಲಿನ ಸಾಂಸ್ಕöÈತಿಕ ಸಂಘದ ವತಿಯಿಂದ ಏರ್ಪಡಿಸಿದ್ದ “ಕಿರುನಾಟಕಗಳ ಸ್ಪರ್ಧೆ’’ಯಲ್ಲಿ ವಿಜೇತರಾದವರಿಗೆ ಮಂಗಳವಾರ ಬಹುಮಾನ ವಿತರಿಸಲಾಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಚಾರ್ಯ ವೀರಣ್ಣ ಎಸ್.ಸಿ. ಅವರು ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆಗಳು ಸಹಕಾರಿಯಾಗಿದ್ದು, ಈ ನಿಟ್ಟಿನಲ್ಲಿ ರಂಗ ಅಭಿನಯ ಕೂಡ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ನೆರವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಸಂಚಾಲಕರಾದ ಡಾ. ಮೋಹನ್ ಕುಮಾರ್ ಮಿರ್ಲೆ ಅವರು ಪ್ರಾಸ್ತಾವಿಕ ನುಡಿಗಳನ್ನು ಆಡುತ್ತಾ, ವಿದ್ಯಾರ್ಥಿಗಳಲ್ಲಿ ಅಡಗಿರುವ ಅಭಿನಯ ಕೌಶಲ್ಯವನ್ನು ಗುರುತಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ರಂಗಭೂಮಿಯು ಸಾಮಾಜಿಕ ಜಾಗೃತಿ ಮೂಡಿಸುವ ಪ್ರಭಾವಶಾಲಿ ಮಾಧ್ಯಮವಾಗಿದ್ದು, ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಕಲಾವಿದರ ಚಿಂತನಾ ಲಹರಿಗಳ ಮೇಲೂ ಇದು ಧನಾತ್ಮಕ ಪರಿಣಾಮ ಬೀರುತ್ತದೆ ಎಂದು ಹೇಳಿದರು. ಸ್ಪರ್ಧೆಯಲ್ಲಿ ಒಟ್ಟು ಏಳು ತಂಡಗಳು ಭಾಗವಹಿಸಿದ್ದು, ಐತಿಹಾಸಿಕ ಮತ್ತು ಪೌರಾಣಿಕ ಸಂಗತಿಗಳು, ಸಾಮಾಜಿಕ ಜಾಗೃತಿ, ಆರ್ಥಿಕ ಜಾಗೃತಿ, ಕನ್ನಡಾಭಿಮಾನ, ಸಂವಿಧಾನದ ಮಹತ್ವ, ಮಹಿಳಾ ಸಬಲೀಕರಣ, ಹಾಸ್ಯ, ಹೀಗೆ ವೈವಿಧ್ಯಮಯ…
Author: News Desk Benkiyabale
ತುಮಕೂರು ಸೋಮನ ಕುಣಿತ, ಮ್ಯಾಸಿಫ್ ಡೋಲು, ಗಾರುಡಿಗೊಂಬೆ, ಚಕ್ಕೆ ಭಜನೆ, ಸುಗಮ ಸಂಗೀತ, ಜನಪದ ಗೀತೆ, ರಂಗಗೀತೆ, ಪೌರಾಣಿಕ ನಾಟಕಗಳಂತಹ ಗ್ರಾಮೀಣ ಕಲೆಗಳು ನಶಿಸಿ ಹೋಗದಂತೆ ಜೀವಂತವಾಗಿಡಲು ಗಿರಿಜನ ಉತ್ಸವದಂತಹ ಕಾರ್ಯಕ್ರಮಗಳು ಸಹಕಾರಿ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷಾಧಿಕಾರಿ ಡಾ ನಾಗಣ್ಣ ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊರಟಗೆರೆ ತಾಲ್ಲೂಕು ಹಂಚಿಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮುಂಭಾಗದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ “ಗಿರಿಜನ ಉತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗಿರಿಜನ ಉತ್ಸವವು ಸರ್ಕಾರದ ಅತ್ಯುತ್ತಮ ಯೋಜನೆಯಾಗಿದ್ದು, ಜಿಲ್ಲೆಯ ಪ್ರತಿಭಾವಂತ ಪರಿಶಿಷ್ಟ ಪಂಗಡದ ಕಲಾವಿದರಿಗೆ ವೇದಿಕೆ ಒದಗಿಸುವ ಮೂಲಕ ಗ್ರಾಮೀಣ ಕಲೆಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿರುವುದು ಶ್ಲಾಘನೀಯ ಎಂದು ತಿಳಿಸಿದರು. ಹಂಚಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಎಸ್. ಭೀಮರಾಜು ಅವರು ಮೆರವಣಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಇಂತಹ ಕಾರ್ಯಕ್ರಮಗಳನ್ನು ಗಡಿ ತಾಲ್ಲೂಕು ಮತ್ತು ಗ್ರಾಮದಲ್ಲಿ ನಡೆಸುತ್ತಿರುವುದು…
ತುಮಕೂರು ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ತಮ್ಮ ಉದ್ದಿಮೆಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬಳಸಬೇಕು. ತಪ್ಪಿದಲ್ಲಿ ಉದ್ದಿಮೆಗಳ ಪರವಾನಗಿಗಳನ್ನು ರದ್ದುಪಡಿಸಿ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರಾದ ಅಶ್ವಿಜ ಬಿ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕನ್ನಡವು ಆಡಳಿತ ಭಾಷೆಯಾಗಿದ್ದು, ರಾಜ್ಯದಲ್ಲಿನ ನಾಮಫಲಕಗಳಲ್ಲಿ ಕನ್ನಡವನ್ನು ಬಳಸುವುದು ಕಡ್ಡಾಯವಾಗಿದೆ. ಕನ್ನಡ ಬಳಕೆಯ ಸಮಗ್ರ ಅನುಷ್ಟಾನಕ್ಕೆ ಸಂಬAಧಿಸಿದAತೆ ಅಂಗಡಿ, ಮತ್ತಿತರ ಉದ್ದಿಮೆಗಳ ಪರವಾನಗಿ ನೀಡುವಾಗ ನಾಮಫಲಕಗಳಲ್ಲಿ ಅಗ್ರಸ್ಥಾನದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸದಿದ್ದರೆ ಉದ್ದಿಮೆ ಪರವಾನಗಿಗಳನ್ನು ರದ್ದುಪಡಿಸಲಾಗುವುದು ಎಂದು ನಿರ್ಬಂಧ ವಿಧಿಸಲು ಸರ್ಕಾರ ಆದೇಶ ನೀಡಿದೆ. ಸರ್ಕಾರದ ಆದೇಶದನ್ವಯ ಯಾವುದೇ ಉದ್ದಿಮೆಯ ನಾಮಫಲಕವು ಪ್ರಧಾನವಾಗಿ ಕನ್ನಡದಲ್ಲಿರತಕ್ಕದ್ದು. ನಾಮಫಲಕದಲ್ಲಿ ಅಗ್ರ ಪಂಕ್ತಿಯಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಬೇಕು. ಅಶ್ಲೀಲ ಭಾಷೆ ಹಾಗೂ ಚಿತ್ರಗಳನ್ನು ಪ್ರದರ್ಶಿಸುವಂತಿಲ್ಲ. ಅನ್ಯಭಾಷೆಯ ನಾಮಫಲಕಕ್ಕಿಂತ ಕನ್ನಡದ ನಾಮಫಲಕ ದೊಡ್ಡದಾಗಿರುವಂತೆ ಅಳವಡಿಸಬೇಕು. ಈ ಪ್ರಕಟಣೆ ಹೊರಡಿಸಿದ ೧೫ ದಿನಗಳೊಳಗಾಗಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಾ ಉದ್ದಿಮೆಗಳ ನಾಮಫಲಕಗಳು ಪ್ರಧಾನವಾಗಿ ಕನ್ನಡದಲ್ಲಿರಬೇಕು. ತಪ್ಪಿದಲ್ಲಿ ಅಂತಹ ಉದ್ದಿಮೆಗಳ ಉದ್ದಿಮೆ…
ತುಮಕೂರು ನಗರದ ಬಾರ್‌ಲೈನ್‌ನಲ್ಲಿರುವ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರತಿಯೊಂದು ಕಡತಗಳನ್ನು ಖುದ್ಧು ವೀಕ್ಷಿಸಿದ ಸಚಿವರು, ಕಳ್ಳತನ, ಅಪಘಾತ, ಜೂಜಾಟ ಸೇರಿದಂತೆ ಇನ್ನಿತರೆ ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ. ಪರಮೇಶ್ವರ್ ಅವರು, ಪೊಲೀಸ್ ಠಾಣೆಗಳ ವಸ್ತುಸ್ಥತಿ ತಿಳಿಯಲು ಇಂದು ಗ್ರಾಮಾಂತರ ಠಾಣೆಗೆ ದಿಢೀರ್ ಭೇಟಿ ನೀಡಿದ್ದೇನೆ. ಅಂಕಿ-ಅAಶಗಳನ್ನು ಪರಿಶೀಲಿಸಿದ್ದು, ಕಳ್ಳತನ, ಟ್ರಾಫಿಕ್, ಅಪರಾಧ, ಜೂಜು ಪ್ರಕರಣಗಳು ಈ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚಿರುವುದು ಕಂಡು ಬಂದಿದೆ. ಈ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಗ್ರಾಮಾAತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ತಾಕೀತು ಮಾಡಿದ್ದೇನೆ. ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಇ-ಬೀಟ್ ವ್ಯವಸ್ಥೆಯಡಿ ಸಮರ್ಪಕವಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದರು. ಸಿಬ್ಬAದಿ…
ತುಮಕೂರು: ಪ್ರಜಾಪ್ರಭುತ್ವ ಇಂದು ಅತ್ಯಂತ ಬಿಕ್ಕಟ್ಟು ಎದುರಿಸುತ್ತಿದ್ದು, ಸಾಹಿತಿಗಳು ತಮ್ಮ ಜವಾಬ್ದಾರಿ ಮರೆತು ಮೌನಕ್ಕೆ ಶರಣಾಗಿ, ಅವರು ಏನೇ ಬರೆದರೂ ಅದು ಬೂಸಾ ಸಾಹಿತ್ಯವಾಗಲಿದೆ ಎಂದು ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ನಗರದ ಗಾಜಿನಮನೆಯ ಶಿಕ್ಷಣ ಭೀಷ್ಮ ಹೆಚ್.ಎಂ.ಗAಗಾಧರಯ್ಯ ವೇದಿಕೆಯಲ್ಲಿ ಜಿಲ್ಲಾ ಕಸಾಪ ಆಯೋಜಿಸಿದ್ದ ೧೫ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ಜನರ ಸಮಸ್ಯೆಗಳಿಗೆ ದ್ವನಿಯಾಗದ ಸಾಹಿತ್ಯ ಬೂಸಾ ಎಂಬ ದಿ.ಬಿ.ಬಸವಲಿಂಗಪ್ಪ ಅವರ ಹೇಳಿಕೆಯನ್ನು ಪ್ರಸ್ತಾಪಿಸಿದ ಪ್ರೊ.ಎಸ್.ಜಿ.ಸಿದ್ದರಾಮಯ್ಯ,ಸಾಹಿತಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುವುದು ನಮಗೆ ದೊರೆತ ಜವಾಬ್ದಾರಿಯಿಂದ ನುಣುಚಿಕೊಂಡAತೆ. ಈ ಬಗ್ಗೆ ಎಲ್ಲಾ ಸಾಹಿತಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದರು. ಸಮ್ಮೇಳನದ ಸ್ಮರಣ ಸಂಚಿಕೆ ಕಲ್ಪ ಸೌರಭ ಬಿಡುಗಡೆ ಮಾಡಿ ಮಾತನಾಡಿದ ಸಿಇಓ ಜಿ.ಪ್ರಭು,ವಿಜ್ಞಾನ ತಂತ್ರಜ್ಞಾನಗಳು, ಎಲ್ಲರಿಗೂ ಶಿಕ್ಷಣ ಇಲ್ಲದ ಕಾಲದಲ್ಲಿಯೂ ಕನ್ನಡ ಭಾಷೆ ಸಾವಿರಾರು ವರ್ಷಗಳಿಂದ ಕನ್ನಡಿಗರಿಗೆ ನೆಲೆ ಒದಗಿಸಿದೆ.ಆದರೆ ಎಲ್ಲರಿಗೂ ಜ್ಞಾನ ದೊರೆತ ನಂತರ ಕನ್ನಡವನ್ನು ಉಳಿಸಬೇಕೆಂಬ ಪ್ರಯತ್ನ ನಡೆದಿದೆ.ಎಂದರು. ತುಮಕೂರು ಜಿಲ್ಲಾ ೧೫ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ…
ಹುಳಿಯಾರು: ಹುಳಿಯಾರಿನಿಂದ ಕೆಂಕೆರೆಗೆ ಹೋಗುವ ರಾಷ್ಟಿçÃಯ ಹೆದ್ದಾರಿಯ ಇಕ್ಕೆಲಗಳಲ್ಲಿ ಹಾಕಿರುವ ಮಣ್ಣನ್ನು ಬದಲಾಯಿಸುವಂತೆ ಒತ್ತಾಯಿಸಿ ಕೆಲಸ ನಿರ್ವಹಿಸುತ್ತಿದ್ದ ಮಣ್ಣು, ಜಲ್ಲಿ ಲಾರಿಗಳನ್ನು ತಡೆದು ಪ್ರತಿಭಟನೆ ಮಾಡಿದ ಘಟನೆ ಹುಳಿಯಾರು ಹೋಬಳಿಯ ಕೆಂಕೆರೆಯಲ್ಲಿ ಬುಧವಾರ ಜರುಗಿದೆ. ಹಿರಿಯೂರಿನಿಂದ ಕೆಂಕೆರೆ ಗ್ರಾಮದವರೆವಿಗೂ ರಾಷ್ಟಿçÃಯ ಹೆದ್ದಾರಿಯ ಅಗಲೀಕರಣ ಮಾಡಿ ಗುಣಮಟ್ಟದ ಕಾಮಗಾರಿ ಮಾಡಿದ್ದಾರೆ. ಆದರೆ ಕೆಂಕೆರೆಯಿAದ ಹುಳಿಯಾರಿನವರೆವಿಗೆ ನಾಲ್ಕು ಕಿಮೀ ರಸ್ತೆಯನ್ನು ಅಗಲೀಕರಣ ಮಾಡದೆ ಹಾಲಿ ಇದ್ದ ರಸ್ತೆಯ ಮೇಲೆಯೇ ಮರು ಡಾಂಬರೀಕರಣ ಮಾಡಿದ್ದಾರೆ. ಅಲ್ಲದೆ ರಸ್ತೆಯ ಇಕ್ಕೆಲಗಳಲ್ಲಿ ಗ್ರಾವೆಲ್ ಮಣ್ಣು ಹಾಕದೆ ಧೂಳು ಏಳುವ ಪೌಡರ್ ರೀತಿಯ ಮಣ್ಣು ಸುರಿದಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ರಸ್ತೆ ಅಗಲೀಕರಣ ಮಾಡದೆ ಇರುವ ರಸ್ತೆಯ ಮೇಲೆ ಡಾಂಬರ್ ಹಾಕಿರುವುದರಿಂದ ರಸ್ತೆ ತೀರ ಕಿರಿದಾಗಿದ್ದು ಎರಡೂ ಕಡೆಯಿಂದ ವಾಹನಗಳು ಬಂದಾಗ ಅನಿವಾರ್ಯವಾಗಿ ರಸ್ತೆ ಕೆಳಗೆ ಇಳಿದು ಚಲಿಸಬೇಕಿದೆ. ಈ ಸಂದರ್ಭದಲ್ಲಿ ಧೂಳು ಎದ್ದು ಹಿಂಬದಿಯ ವಾಹನ ಸವಾರರಿಗೆ, ಪಾದಚಾರಿಗಳಿಗೆ ಧೂಳಿನ ಅಭಿಷೇಕ ಮಾಡಿಸಿಕೊಂಡು ಪ್ರಯಾಣಿಸಬೇಕಿದೆ. ಅಲ್ಲದೆ ಗಂಟಲು ಮತ್ತು…
ತುರುವೇಕೆರೆ: ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಫಾರೀಕ್ ಪಾಷ (೩೦), ಮೊಹಮದ್ ಸಾಹಿಲ್ (೨೦) ಬಂಧಿತ ಆರೋಪಿಗಳಾಗಿದ್ದು, ಇವರಿಂದ ಒಂದು ಮೊಬೈಲ್‌ಅನ್ನು ವಶಪಡಿಸಿಕೊಳ್ಳಲಾಗಿದೆ. ತಾಲ್ಲೂಕಿನ ದಂಡಿನಶಿವರ ಪೊಲೀಸ್ ಠಾಣೆಯ ವ್ಯಾಪ್ತಿಯ ಕೆಬ್ಬೆಪಾಳ್ಯ ಗ್ರಾಮದ ರಾಮಯ್ಯ ಎಂಬುವವರ ಪುತ್ರಿ ಭಾಗ್ಯಲಕ್ಷಿöಯವರು ಕಾಲೇಜು ಮುಗಿಸಿಕೊಂಡು ಮನೆಗೆ ಹಿಂದಿರುಗುವಾಗ ಬಾಣಸಂದ್ರ ಮಾರ್ಗದಿಂದ ಬಂದ ಅಪರಿಚಿತರಿಬ್ಬರು ವಿದ್ಯಾರ್ಥಿನಿ ಭಾಗ್ಯಲಕ್ಷಿöಯನ್ನು ವಿಳಾಸ ಕೇಳುವ ನೆಪದಲ್ಲಿ ಮನೆವರೆಗೂ ಹಿಂಬಾಲಿಸಿದ್ದಾರೆ ಮತ್ತು ಕೆಟ್ಟ ದೃಷ್ಟಿಯಿಂದ ನೋಡಿ ಲೈಂಗಿಕ ಕಿರುಕುಳ ನೀಡಿರುತ್ತಾರೆ. ಭಯಗೊಂಡ ವಿದ್ಯಾರ್ಥಿನಿಯು ತನ್ನ ಅಕ್ಕನಿಗೆ ಕರೆ ಮಾಡಲು ಹೋದಾಗ ಮೊಬೈಲ್ ಕಸಿದುಕೊಂಡು ಹೋಗಿರುತ್ತಾರೆ. ಈ ಸಂಬAಧವಾಗಿ ದೂರು ದಾಖಲಾಗಿದ್ದು, ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣ ಪತ್ತೆಗೆ ಕುಣಿಗಲ್ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ಲಕ್ಷಿöÃಕಾಂತ್ ಅವರ ನೇತೃತ್ವದಲ್ಲಿ ತುರುವೇಕೆರೆ ವೃತ್ತದ ಸಿ.ಪಿ.ಐ ಲೋಹಿತ್.ಬಿ.ಎನ್‌ರವರ ಕ್ರೆöÊಂ ತಂಡವನ್ನು ರಚಿಸಲಾಗಿತ್ತು.
ತುಮಕೂರು ಕಲೆ, ಸಾಹಿತ್ಯ, ಶಿಕ್ಷಣಗಳ ಜೊತೆಗೆ ವೈವಿಧ್ಯಮಯ ಸಂಗೀತ, ನೃತ್ಯ, ಜಾನಪದ, ಯಕ್ಷಗಾನ ಹಾಗೂ ರಂಗಭೂಮಿಯ ಸಂಗಮ ಹಾಗೂ ಶೈಕ್ಷಣಿಕವಾಗಿ ಕಲೆ ಸಾಹಿತ್ಯ ಸಂಸ್ಕೃತಿಗಳ ಶ್ರೀಮಂತಿಕೆಯಿAದ ಕೂಡಿರುವ ತುಮಕೂರು ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಿಸೆಂಬರ್ ೨೯ ಮತ್ತು ೩೦ರಂದು “ಜಿಲ್ಲಾ ೧೫ನೇ ಕನ್ನಡ ಸಾಹಿತ್ಯ ಸಮ್ಮೇಳನ”ವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ ತಿಳಿಸಿದರು. ಅವರಿಂದು ನಗರದ ಕನ್ನಡ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನು ್ನದ್ದೇಶಿಸಿ ಮಾತನಾಡಿದರು. ನಾಡು ನುಡಿ ಜಲಗಳ ಕುರಿತಾದ ಅರ್ಥಪೂರ್ಣ ವಿಚಾರ ವಿನಿಮಯಗಳಿಗೆ ಸಮ್ಮೇಳನ ಒಂದು ವೇದಿಕೆಯಾಗಿದೆ. ನಮ್ಮ ಜಿಲ್ಲೆಯವರೇ ಆದ ಅಂತರ ರಾಷ್ಟಿçÃಯ ಖ್ಯಾತಿಯ ಸಾಹಿತಿಗಳಾದ ಡಾ. ಹೆಚ್.ಎಸ್.ಶಿವಪ್ರಕಾಶ್‌ರವರು ಸಮ್ಮೇಳನಾಧ್ಯಕ್ಷರಾಗಿರುತ್ತಾರೆ ಎಂದು ತಿಳಿಸಿದರು. ಡಿಸೆಂಬರ್ ೨೯ರಂದು ಶುಕ್ರವಾರ ಬೆಳಿಗ್ಗೆ ೭.೩೦ ಗಂಟೆಗೆ ಧ್ವಜಾರೋಹಣದ ಮೂಲಕ ಸಮ್ಮೇಳನಕ್ಕೆ ಚಾಲನೆ ದೊರೆಯಲಿದೆ. ಅಪರ ಜಿಲ್ಲಾಧಿಕಾರಿ ಶಿವಾನಂದ್ ಬಿ.ಕರಾಳೆ ರಾಷ್ಟçಧ್ವಜಾರೋಹಣ ಮಾಡುವರು. ಮಹಾನಗರಪಾಲಿಕೆಯ ಉಪ ಮಹಾಪೌರರಾದ ಟಿ.ಕೆ.ನರಸಿಂಹಮೂರ್ತಿ ನಾಡ ಧ್ವಜಾರೋಹಣ ನೆರವೇರಿಸುವರು,…
ತುಮಕೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಹಾಗೂ ವಿಶೇಷವಾಗಿ ತುರುವೇಕೆರೆ ತಾಲ್ಲೂಕಿನಲ್ಲಿ ಚಿರತೆಗಳು ಓಡಾಡುತ್ತಿರುವುದನ್ನು ಗಮನಿಸಲಾಗಿದ್ದು, ಚಿರತೆಗಳನ್ನು ಸುರಕ್ಷಿತವಾಗಿ ಸೆರೆ ಹಿಡಿಯುವುದರೊಂದಿಗೆ ಚಿರತೆಗಳಿಂದ ಮಾನವ ಹಾನಿ ಅಥವಾ ಪ್ರಾಣಿಗಳ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿAದು ಚಿರತೆಗಳ ಸುರಕ್ಷತಾ ಕ್ರಮಗಳ ಕುರಿತು ನಡೆಸಿದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡುತ್ತಾ, ಜಿಲ್ಲೆಯ ಎಲ್ಲಾ ಹೋಬಳಿ ಮಟ್ಟದಲ್ಲಿ ಈ ಕುರಿತು ಟಾಂಟಾA ಮೂಲಕ ವ್ಯಾಪಕ ಪ್ರಚಾರ ಮಾಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾರ್ವಜನಿಕರಿಗೆ ಎಲ್ಲಿಯಾದರೂ ಚಿರತೆಗಳ ಕುರುಹುಗಳು ಕಂಡು ಬಂದಲ್ಲಿ ಸಂಬAಧಪಟ್ಟ ವಲಯ ಅರಣ್ಯಾಧಿಕಾರಿಗಳಿಗೆ ತಕ್ಷಣವೇ ಟೋಲ್ ಫ್ರೀ ನಂಬರ್ ೧೯೨೬ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದರಲ್ಲದೆ, ವಲಯ ಅರಣ್ಯಾಧಿಕಾರಿಗಳು ಮತ್ತು ವನರಕ್ಷಕರು ಸುರಕ್ಷತೆಯಿಂದ ಚಿರತೆಗಳ ಚಲನವಲನಗಳ ಬಗ್ಗೆ ನಿಗಾ ಇರಿಸಬೇಕು. ಅರಣ್ಯ ಪ್ರದೇಶಗಳ ಅಂಚಿನಲ್ಲಿ ಸುರಕ್ಷತೆಯಿಂದ ಸಂಚರಿಸಬೇಕು ಎಂದು ತಿಳಿಸಿದರು. ವಲಯ ಅರಣ್ಯಾಧಿಕಾರಿಗಳು ಆಯಾ ತಾಲ್ಲೂಕು ಮಟ್ಟದ ತಹಶೀಲ್ದಾರರು, ತಾಲ್ಲೂಕು ಪಂಚಾಯತ್ ಕಾರ್ಯ…
ತುಮಕೂರು ಜಿಲ್ಲೆಯಲ್ಲಿ ಇಂದಿನಿAದ ಯುವನಿಧಿ ಯೋಜನೆಗೆ ಚಾಲನೆ ನೀಡಿದ್ದು, ಯೋಜನೆಯಡಿ ನೋಂದಾಯಿಸಿಕೊAಡ ಪದವಿ ಹಾಗೂ ಡಿಪ್ಲೋಮಾ ಪೂರ್ಣಗೊಳಿಸಿರುವ ಅರ್ಹ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನಿರುದ್ಯೋಗ ಭತ್ಯೆ ಜಮೆ ಮಾಡಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಯುವನಿಧಿ ಯೋಜನೆ ಕುರಿತು ಭಿತ್ತಿ ಪತ್ರವನ್ನು ಬಿಡುಗಡೆ ಮಾಡುವ ಮೂಲಕ ಯೋಜನೆಗೆ ಚಾಲನೆ ನೀಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ೫ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಅದರಂತೆ ಅನ್ನಭಾಗ್ಯ, ಗೃಹಲಕ್ಷಿö್ಮ, ಗೃಹಜ್ಯೋತಿ, ಶಕ್ತಿ ಸೇರಿದಂತೆ ೪ ಗ್ಯಾರಂಟಿ ಯೋಜನೆಗಳನ್ನು ವ್ಯವಸ್ಥಿತವಾಗಿ ಅನುಷ್ಟಾನ ಮಾಡುವ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದು, ೫ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಬೆಂಗಳೂರಿನಲ್ಲಿAದು ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು. ಯುವನಿಧಿ ಯೋಜನೆಯಡಿ ಪದವಿ ಮುಗಿಸಿದ ಅರ್ಹ ಫಲಾನುಭವಿಗಳಿಗೆ…











