ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಪಣತೊಟ್ಟಿರುವ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ರವರು ಜಿಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಎಂ.ಜಿ.ರಸ್ತೆಯಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಭವನ ಹಾಗೂ ಬಾಳನಕಟ್ಟೆಯ ಹತ್ತಿರವಿರುವ ಬಾಬು ಜಗಜೀವನ ರಾಮ್ ಕಟ್ಟಡ ನಿವೇಶನಕ್ಕೆ ಸಂಬAಧಿಸಿದAತೆ ಸ್ಥಳ ಪರಿವೀಕ್ಷಣೆಗಾಗಿ ಖುದ್ದು ಭೇಟಿ ನೀಡಿ ಇಲ್ಲಿನ ವಾಸ್ತವ ಸ್ಥಿತಿಯನ್ನು ತಿಳಿದುಕೊಂಡರು. ಡಾ. ಬಾಬು ಜಗಜೀವನ್ ರಾಮ್ ಕಟ್ಟಡ ನಿವೇಶನಕ್ಕೆ ಸಂಬAಧಿಸಿದAತೆ ಪ್ರಸ್ತುತ ನ್ಯಾಯಾಲಯದಲ್ಲಿ ಹೂಡಿರುವ ಪ್ರಕರಣ ಸಂಬAಧ ಅಗತ್ಯ ಕ್ರಮವಹಿಸುವಂತೆ ಪಾಲಿಕೆಯ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದರಲ್ಲದೇ ಕಳೆದ ಹತ್ತಾರು ವರ್ಷಗಳಿಂದ ಇಲ್ಲಿ ಕಸ ಹಾಕುತ್ತಾ ಬಂದಿದ್ದು ಇದೊಂದು ಡಂಪಿAಗ್ ಯಾರ್ಡ್ ರೀತಿ ಮಾರ್ಪಾಡು ಆಗಿದೆ, ಇದು ಸ್ಮಾರ್ಟ್ ಸಿಟಿಯೋ ಗಬ್ಬು ಸಿಟಿಯೋ ಎಂದು ಅಧಿಕಾರಿಗಳ ವಿರುದ್ಧ ಗರಂ ಆದರು ಅಲ್ಲದೇ ಇನ್ನು ಮುಂದೆ ಇಲ್ಲಿ ಯಾರೂ ಸಹ ಕಸವನ್ನು ಸುರಿಯಬಾರದು ಕಸ ಸುರಿಯುವವರಿಗೆ ದಂಡ ವಿಧಿಸುವುದಲ್ಲದೇ ಕ್ರಿಮಿನಲ್ ಕೇಸ್‌ನ್ನು ದಾಖಲಿಸುವಂತೆ ಸಲಹೆ ನೀಡಿದರು. ನಗರದ ಹೃದಯ ಭಾಗವಾದ ಈ ಸ್ಥಳದಲ್ಲಿ ಬಹಳ ವರ್ಷಗಳಿಂದಲೂ ರಾಶಿಯಾಗಿ ಬಿದ್ದಿರುವ…
Author: News Desk Benkiyabale
ತುಮಕೂರು ಭಾರತದ ಒಟ್ಟು ಜನಸಂಖ್ಯೆಯಲ್ಲಿ ಹೆಚ್ಚಿನ ಜನರು ಗ್ರಾಮೀಣ ಭಾಗದಲ್ಲಿ ವಾಸಿಸುತ್ತಾರೆ. ಆದ್ದರಿಂದ ಗ್ರಾಮೀಣ ಭಾಗವು ಅಭಿವೃದ್ದಿ ಹೊಂದುವ ಮೂಲಕ ಅಲ್ಲಿನ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿದಾಗ ಮಾತ್ರ ದೇಶದ ಅಭಿವೃದ್ದಿ ಸಾಧ್ಯ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯಪಟ್ಟರು. ಕೊರಟಗೆರೆ ತಾಲ್ಲೂಕು ಕೋಳಾಲ ಗ್ರಾಮದ ಬಸವೇಶ್ವರ ಕೇಂದ್ರೀಯ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಿಸಿ ಮಾತನಾಡಿದ ಅವರು, ಪೋಷಕರು ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿದಾಗ ಮಾತ್ರ ಅವರು ತಮ್ಮ ಗುರಿಯನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದರು. ರಾಜ್ಯದಲ್ಲಿರುವ ಎಲ್ಲಾ ಮಠಗಳ ಮಠಾಧೀಶರು ಮಠದೊಂದಿಗೆ ವಿದ್ಯಾ ಸಂಸ್ಥೆಗಳನ್ನು ಸ್ಥಾಪಿಸಿ ಗ್ರಾಮೀಣ ಭಾಗದ ಹಾಗೂ ಬಡ ಕುಟುಂಬಗಳ ಮಕ್ಕಳಿಗೆ ಶಿಕ್ಷಣವನ್ನು ನೀಡುತ್ತಿದ್ದಾರೆ. ತ್ರಿವಿಧ ದಾಸೋಹಕ್ಕೆ ಹೆಸರಾದ ಶ್ರೀ ಸಿದ್ದಗಂಗಾ ಮಠದಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಶಿಕ್ಷಣ, ವಸತಿ ಹಾಗೂ ಅನ್ನವನ್ನು…
ತುಮಕೂರು ಉಡುಪಿಯ ನೇತ್ರಾವತಿ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬೆತ್ತಲೆ ವಿಡಿಯೋ ಪ್ರಕರಣದ ಬಗ್ಗೆ ಸರಕಾರದಿಂದ ನ್ಯಾಯ ಕೇಳಿ ಟ್ವಿಟ್ ಮಾಡಿದ ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಸರಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ತುಮಕೂರು ನಗರ ಶಾಸಕ ಜೋತಿ ಗಣೇಶ್ ಆರೋಪಿಸಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಿಜೆಪಿ ಐಟಿ ಸೇಲ್ ಸದಸ್ಯೆ ಶಕುಂತಲ ನಟರಾಜ್ ಅವರನ್ನು ಟ್ವೀಟರ್ ಕಾಮೆಂಟ್ ಗೋಸ್ಕರ್ ಬಂಧಿಸಿರುವ ಘಟನೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ಹಾಗೂ ರಸ್ತೆ ತಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತಿದ್ದ ಅವರು,ನ್ಯಾಯ ಕೇಳಿದವರನ್ನು ಬಂಧಿಸುವ ಮೂಲಕ ವಿರೋಧಪಕ್ಷಗಳ ಬಾಯಿ ಮುಚ್ಚಿಸುವ ಕೆಲಸ ಮಾಡಲು ಹೊರಟಿದೆ.ಈ ನಡವಳಿಗೆ ಸರಿಯಲ್ಲ ಎಂದರು. ಉಡುಪಿ ನೇತ್ರಾವತಿ ನರ್ಸಿಂಗ್ ಕಾಲೇಜಿನ ಘಟನೆಯ ಹಿಂದೆ ದೊಡ್ಡ ಷಡ್ಯಂತ್ರವಿದೆ.ಕೇರಳ ಫೈಲ್ ಸಿನಿಮಾವೇ ಇದಕ್ಕೆ ಉದಾಹರಣೆ.ಬಿಜೆಪಿ ಕಾರ್ಯಕರ್ತೆ ಶಕುಂತಲ ನಟರಾಜ್ ಅವರು ತಪ್ಪು ಮಾಡಿದ್ದಾರೆ ಎಂದಾದರೆ ಪೊಲೀಸರು ಅರೆಸ್ಟ್ ವಾರೆಂಟ್ ತರದೆ,ಮುಪ್ತಿಯಲ್ಲಿ ಬಂಧಿಸುವ ಅಗತ್ಯವೆನಿತ್ತು ಎಂದು ಪ್ರಶ್ನಿಸಿದ ಜೋತಿಗಣೇಶ್,ಮುಖ್ಯಮಂತ್ರಿಗಳು…
ತುಮಕೂರು ಸುಳ್ಳು ಸುದ್ದಿಗಳು ಸಮಾಜಕ್ಕೆ ಬಹಳ ಅಪಾಯಕಾರಿ. ಹಾಗಾಗಿ ಸುಳ್ಳು ಸುದ್ದಿಗಳನ್ನು ನಿಯಂತ್ರಿಸಲು ಸದ್ಯದಲ್ಲೇ ಹೊಸ ಕಾನೂನು ಜಾರಿಗೆ ತರುವ ಸಂಬAಧ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. ಸುಳ್ಳು ಸುದ್ದಿಗಳ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುತ್ತಿದೆ. ಸದ್ಯದಲ್ಲೇ ಫೇಕ್ ನ್ಯೂಸ್‌ಗಳ ನಿಯಂತ್ರಣಕ್ಕೆ ಕಾನೂನು ತರುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಅವರು ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ರಾಜಕೀಯ ವ್ಯಕ್ತಿಗಳು, ಸರ್ಕಾರದ ಬಗ್ಗೆ, ಅಧಿಕಾರಿಗಳ ಕುರಿತು ಸುಳ್ಳು ಸುದ್ದಿಗಳು ಪ್ರಕಟವಾಗುತ್ತಲೇ ಇವೆ. ಇದರಿಂದ ಆಗುವ ಅನಾಹುತವನ್ನು ಯಾರೂ ಊಹೆ ಮಾಡಿರುವುದಿಲ್ಲ ಎಂದರು. ರಾಜಕೀಯದಲ್ಲಿ ಟೀಕೆ, ಟಿಪ್ಪಣಿ ಸರ್ವೆ ಸಾಮಾನ್ಯ. ಪತ್ರಿಕೆಗಳಲ್ಲಿ ಬರುವ ಟೀಕೆಗಳು ರಾಜಕಾರಣಿಗಳು ಮಾಡುವ ತಪ್ಪನ್ನು ಎಚ್ಚರಿಸುವಂತಿರಬೇಕು.…
ತುಮಕೂರು ಮಹಾನಗರಪಾಲಿಕೆ ತುಮಕೂರು ಒಳಗೊಂಡAತೆ, ಜಿಲ್ಲೆಯ ವಿವಿಧ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಒಟ್ಟು ೨೭೬ ಸಂಖ್ಯೆಯ ಪೌರ ಕಾರ್ಮಿಕರನ್ನು ವಿಶೇಷ ನೇರ ನೇಮಕಾತಿಯಡಿ ಖಾಯಂಗೊಳಿಸಲಾಗುತ್ತಿದ್ದು, ಈ ಪೈಕಿ ಇಂದು ಜಿಲ್ಲೆಯ ೨೦೮ ಕಾರ್ಮಿಕರಿಗೆ ನೇಮಕಾತಿ ಆದೇಶಪತ್ರ ವಿತರಿಸುತ್ತಿರುವುದು ಸಂತಸ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ: ಜಿ. ಪರಮೇಶ್ವರ್ ಅವರು ತಿಳಿಸಿದರು. ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿAದು ಜಿಲ್ಲಾಡಳಿತ ಹಾಗೂ ಮಹಾನಗರಪಾಲಿಕೆ ವತಿಯಿಂದ ಏರ್ಪಡಿಸಿದ್ದ, ಮಹಾನಗರಪಾಲಿಕೆಯ ಪೌರಕಾರ್ಮಿಕರಿಗೆ ಖಾಯಂ ನೇಮಕಾತಿ ಆದೇಶ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಾ, ದಾಖಲಾತಿಗಳನ್ನು ಸಲ್ಲಿಸದಿರುವ ೬೮ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ನೀಡುವುದು ಬಾಕಿ ಇದ್ದು, ಸಿಂಧುತ್ವ ಹಾಗೂ ಇತರೆ ಪ್ರಮಾಣ ಪತ್ರಗಳನ್ನು ಸಲ್ಲಿಸುವ ಪೌರ ಕಾರ್ಮಿಕರಿಗೆ ಮುಂದಿನ ದಿನಗಳಲ್ಲಿ ಖಾಯಂ ಮಾಡಲಾಗುವುದು ಎಂದರು. ಸಮಾಜದ ಕೆಳಹಂತದಲ್ಲಿದ್ದುಕೊAಡು ಸಮಾಜಕ್ಕಾಗಿ ದುಡಿಯುವ ಜನರೇ ಪೌರಕಾರ್ಮಿಕರು. ನಗರ ಮತ್ತು ಪಟ್ಟಣ ಸ್ವಚ್ಛತಾ ಕಾರ್ಯದಲ್ಲಿ ಯಾವುದೇ ಕೀಳರಿಮೆಯನ್ನು ಮನಸ್ಸಿನಲ್ಲಿ…
ಬೆಂಗಳೂರು ಉಡುಪಿಯ ಕಾಲೇಜೊಂದರ ಟಾಯ್ಲೆಟ್‌ನಲ್ಲಿ ೩ ಮುಸ್ಲಿಂ ಯುವತಿಯರು ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪ ಇತ್ತೀಚೆಗೆ ಕೇಳಿಬಂದಿದ್ದು ಅದರ ಸುತ್ತ ನಾನಾ ಬಗೆಯ ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಕೆಲವರು ರಾಜ್ಯಸರ್ಕಾರದ ಮೇಲೆ ಆರೋಪ ಮಾಡಿದರೆ ಇನ್ನೂ ಕೆಲವರು ಮಹಿಳಾ ಆಯೋಗದ ಸದಸ್ಯೆ ಖುಷ್ಟೂ ಸುಂದರ್ ವಿರುದ್ಧ ಮಾತನಾಡುತ್ತಿದ್ದಾರೆ. ಈ ನಡುವೆ ಬಿಜೆಪಿಯ ಕಾರ್ಯಕರ್ತೆಯೊಬ್ಬರು, ಸಿದ್ದರಾಮಯ್ಯ ವಿರುದ್ಧ ಮಾತನಾಡಿ ಜೈಲು ಸೇರಿದ್ದಾರೆ. ಉಡುಪಿ ವಿಚಾರವಾಗಿ ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಉಡುಪಿಯ ಕಾಲೇಜಿನಲ್ಲಿ “ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ’ ಎಂದು ನಕಲಿ ಸುದ್ದಿ ಸೃಷ್ಟಿಸಿ ಕೋಮು ಪ್ರಚೋದನೆಗೆ ಮುಂದಾಗಿರುವ ಬಿಜೆಪಿ ತೀರ್ಥಹಳ್ಳಿಯಲ್ಲಿ ಹಿಂದೂ ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ಂಃಗಿP ಅಧ್ಯಕ್ಷನ ಅಸಲಿ ಸುದ್ದಿಯ ಬಗ್ಗೆ ಮೌನ ಮುರಿಯುವುದು ಯಾವಾಗ? ವಿದ್ಯಾರ್ಥಿನಿಯರ ಮಕಳಾಟವನ್ನು ರಾಜಕೀಯದ ಕಳ್ಳಾಟಕ್ಕೆ, ಬಳಸಿಕೊಳ್ಳಲು ಉಪ್ಪು ಖಾರ, ಮಸಾಲೆಗಳನ್ನು ಬೆರಸಿ ಚಪ್ಪರಿಸಲು ಹೊರಟಿದ್ದ @ಃಎP೪ಏಚಿಡಿಟಿಚಿಣಚಿಞಚಿ ಗೆ ನಮ್ಮ ದಕ್ಷಪೊಲೀಸರು ತಡಮಾಡದೆ ತನಿಖೆ ಮಾಡಿ ಸತ್ಯಾಂಶ ಬಯಲಿಗೆಳೆದು ನಿರಾಸೆ ಮೂಡಿಸಿದ್ದಾರೆ” ಎಂದು…
ತುಮಕೂರು ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಸರಕಾರ ಬಡ ಜನರ ಹಿತ ಕಾಯುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಗ್ಯಾರಂಟಿ ಗೊಂದಲದಲ್ಲಿ ಅಭಿವೃದ್ದಿಗೆ ಹಣ ಮೀಸಲಿಡದೆ ಜನತೆಗೆ ದ್ರೋಹ ಬಗೆದಿದೆ ಎಂದು ಅಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ನಮ್ಮ ಪಕ್ಷದ ಕಾರ್ಯಕ್ರಮಗಳನ್ನು ಕಾಫಿ ಮಾಡಿ, ಅದನ್ನು ಅನುಷ್ಠಾನಕ್ಕೆ ತರುವಲ್ಲಿ ಎಡವಿದ ಪರಿಣಾಮ ಇನ್ನಿತರ ಕಾರ್ಯಕ್ರಮಗಳಿಗೆ ಹಣವಿಲ್ಲದಂತಾಗಿದೆ.ಸ್ವತಹಃ ಡಿಕೆಶಿ ಅವರೇ ಈ ವಿಚಾರವನ್ನು ಒಪ್ಪಿಕೊಂಡಿರುವುದು ಸರಕಾರ ಸರಿದಾರಿಯಲ್ಲಿ ಇಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು. ಈ ಹಿಂದೆ ರಾಜ್ಯದಲ್ಲಿ ಇದ್ದ ಸರಕಾರ ಭ್ರಷ್ಟಾಚಾರ ಸರಕಾರವಾದರೆ,ಹಾಲಿ ಇರುವ ಸರಕಾರ ಲಂಚಾವಾತಾರ ಸರಕಾರ ವಾಗಿದೆ.ಆಳಂದ ಶಾಸಕರಾದ ಬಿ.ಆರ್.ಪಾಟೀಲ್ ಮತ್ತು ಇತರೆ ೩೩ ಜನ ಶಾಸಕರು ಬರೆದಿರುವ ಪತ್ರವೇ ಇದಕ್ಕೆ ಸಾಕ್ಷಿಯಾ ಗಿದೆ.ಬಾಣಲೆಯಿಂದ ಬೆಂಕಿಗೆ ಹಾರಿದಂತಾಗಿದೆ ರಾಜ್ಯದ ಜನತೆಯ ಸ್ಥಿತಿ ಎಂದ ಸಿ.ಎಂ.ಚAದ್ರು,ಜನರ ವಿಶ್ವಾಸ ಕಳೆದು ಕೊಳ್ಳುವ ಮುನ್ನ ಎಚ್ಚೆತ್ತುಕೊಂಡರೆ ಮಾತ್ರ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿದೆ.ಇಲ್ಲವೆಂದರೆ ರಾಜ್ಯದಿಂದಲೂ ಜನತೆ ಕಾಂಗ್ರೆಸ್ ಪಕ್ಷಕ್ಕೆ ಟಿಕೇಟ್…
ತುಮಕೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಳು ಕಾನೂನಿನ ಅಡಿಯಲ್ಲಿಯೇ ಸಹಾಯ ಮಾಡಬೇಕು. ಸಣ್ಣ ವೆತ್ಯಾಸ ಕಂಡುಬAದರೂ, ಲೋಕಾಯುಕ್ತ, ಕೋರ್ಟು ಅಂತ ಅಲೆಯುವುದರ ಜೊತೆಗೆ, ನಿರಂತರವಾಗಿ ಸಮಸ್ಯೆಗೆ ಒಳಗಾಗಬೇಕಾಗುತ್ತದೆ ಎಂದು ಶಾಸಕ ಬಿ.ಸುರೇಶಗೌಡ ಪಿಡಿಓಗಳಿಗೆ ಎಚ್ಚರಿಕೆ ನೀಡಿದ್ದಾರೆ. ತಾ.ಪಂ.ಸಭಾAಗಣದಲ್ಲಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಿಡಿಓಗಳ ಸಭೆ ನಡೆಸಿ ಮಾತನಾಡಿದ ಅವರು, ಯಾರಿಗೆ ಸಹಾಯ ಮಾಡಬೇಕೆಂದಿದ್ದರು ಕಾನೂನಿನ ಅಡಿಯಲ್ಲಿ ಸಹಾಯಮಾಡಿ, ಅನುಕಂಪ,ಒತ್ತಡಕ್ಕೆ ಒಳಗಾಗಿ ಕಾನೂನು ಮೀರಿದರೆ, ಸಹಾಯ ಪಡೆದವರೇ ಬ್ಲಾಕ್ ಮೇಲ್ ಮಾಡುವ ಸಾಧ್ಯತೆ ಇದೆ. ಹಾಗಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕೆಂದರು. ಕಳೆದ ಎರಡು ತಿಂಗಳ ಹಿಂದೆ ನಡೆದ ಪಿಡಿಓಗಳ ಸಭೆಯಲ್ಲಿ ಪ್ರತಿ ಗ್ರಾಮಪಂಚಾಯಿತಿಯಲ್ಲಿ ಬಡವರಿಗೆ ನಿವೇಶನ ನೀಡಲು ಜಾಗ ಗುರುತಿಸುವುದು, ಸ್ಮಶಾನಕ್ಕೆ ಜಾಗ ಗುರುತಿಸುವುದು, ಕಸ ವಿಲೇವಾರಿ ಘಟಕ ನಿಮಾರ್ಣಕ್ಕೆ ಜಾಗ ಗುರುತಿಸುವಂತೆ ನಿರ್ದೇಶನ ನೀಡಲಾಗಿತ್ತು,ಕೆಲವು ಗ್ರಾಮಪಂಚಾಯಿತಿಗಳಲ್ಲಿ ಕೆಲಸ ಆಗಿದೆ.ಕೆಲವು ಗ್ರಾಮಪಂಚಾಯಿತಿ ಗಳಲ್ಲಿ ಕೆಲಸ ಆಗಿಲ್ಲ.ಇದು ಕಡೆಯ ವಾರ್ನಿಂಗ್ ನೀವು ಸಮರ್ಪಕವಾಗಿ ಕಾರ್ಯನಿರ್ಹಿಸದಿದ್ದರೆ ನಿಮ್ನ ವಿರುದ್ದ ಶಿಸ್ತು ಕ್ರಮಕ್ಕೆ ಮೇಲಾಧಿಕಾರಿಗಳಿಗೆ…
ಹುಳಿಯಾರು ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಗಡಿಗ್ರಾಮಗಳು ಅದರಲ್ಲೂ ತಳ ಸಮುದಾಯದ ಊರುಗಳ ಬಗ್ಗೆ ನಿರ್ಲಕ್ಷö್ಯ ಧೋರಣೆ ಇದ್ದದ್ದೇ. ಇದಕ್ಕೆ ಹುಳಿಯಾರು ಹೋಬಳಿಯ ತಮ್ಮಡಿಹಳ್ಳಿ ಬಳಿಯ ಬಿಳಿಕಲ್ಲು ಗೊಲ್ಲರಹಟ್ಟಿ ಶಾಲೆ ಸ್ಪಷ್ಟ ನಿರ್ದಶನವಾಗಿದೆ. ಇಲ್ಲಿನ ಸರ್ಕಾರಿ ಶಾಲೆಗೆ ಉತ್ಸುಕತೆಯಿಂದ ಬರುವ ಮಕ್ಕಳಿಗೆ ಕೂರಲು ಕೊಠಡಿ ಇಲ್ಲ. ಶೌಚಾಲಯ ಇಲ್ಲ. ಬಿಸಿಯೂಟ ಸಿದ್ಧತೆಗೆ ಕೋಣೆ ಇಲ್ಲ. ಆದರೂ ಯಾರೊಬ್ಬರೂ ಇತ್ತ ಕಡೆ ಗಮನ ಹರಿಸದಿರುವುದು ಗ್ರಾಮಸ್ಥರನ್ನು ಕೆರಳಿಸಿದೆ. ಅಕ್ಷರದಿಂದ ವಂಚಿತರಾಗಿರುವ ಕಾಡುಗೊಲ್ಲರ ಮಕ್ಕಳು ನಾಲ್ಕು ಅಕ್ಷರ ಕಲಿಯಲೆಂದು ದಶಕಗಳ ಹಿಂದೆ ಬಿಳಿಕಲ್ಲು ಗೊಲ್ಲರಹಟ್ಟಿಗೆ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಆರಂಭಿಸಲಾಗಿತ್ತು. ನಾವಂತೂ ಓದಲಿಲ್ಲ ನಮ್ಮ ಮಕ್ಕಳಾದರೂ ಓದಲಿ ಎಂಬ ಗಾಮದ ಪೋಷಕರ ನಿರ್ಧಾರದಿಂದಾಗಿ ೧ ರಿಂದ ೫ ನೇ ತರಗತಿಯವರೆವಿಗೆ ಬರೋಬ್ಬರಿ ೪೮ ಮಕ್ಕಳು ಓದುತ್ತಿದ್ದಾರೆ. ಐದು ತರಗತಿಗಳಿಗೂ ಕೇವಲ ಎರಡೇ ಎರಡು ಕೊಠಡಿಗಳಿದ್ದವು. ಮೊದಲೇ ಕೂಲಿನಾಲಿ ಮಾಡುವವರಾದ್ದರಿಂದ ಪಟ್ಟಣದ ಖಾಸಗಿ ಶಾಲೆಗೆ ಕಳುಹಿಸಲಾಗದೆ. ಕಷ್ಟನೋ ನಷ್ಟಾನೋ ನಮ್ಮ ಮಕ್ಕಳ ಅಕ್ಷರ ಕಲಿತರಾಯ್ತು ಎಂದು…
ತುಮಕೂರು ಬಹುಪಾಲು ಉದ್ಯೋಗಿಗಳೇ ಪ್ರಯಾಣಿಸುವ ಅರಸೀಕೆರೆ-ಕೆಎಸ್‌ಆರ್ ಪ್ಯಾಸೆಂಜರ್ ರೈಲು ತುಂಬಾ ವಿಳಂಬವಾಗಿ ಸಂಚರಿಸುತ್ತಿದೆ. ಇದರಿಂದ ಕೆಲಸಗಳಿಗೆ ಹೋಗಲು ಇದೇ ರೈಲನ್ನು ಅವಲಂಬಿಸಿರುವ ಸಾವಿರಾರು ಜನರು ಉದ್ಯೋಗ ಕಳೆದುಕೊಳ್ಳು ಭೀತಿಯಲ್ಲಿದ್ದಾರೆ. ಸಮಯಕ್ಕೆ ಸರಿಯಾಗಿ ಬೆಂಗಳೂರು ತಲುಪುವಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ವಿಭಾಗೀಯ ವ್ಯವಸ್ಥಾಪಕರನ್ನು ಒತ್ತಾಯಿಸಲಾಯಿತು. ಮಂಗಳವಾರ ಬೆಂಗಳೂರಿನ ನೈಋತ್ಯ ರೈಲ್ವೇ ವಿಭಾಗೀಯ ಮುಖ್ಯಸ್ಥರ ಕಚೇರಿಯಲ್ಲಿ ನಡೆದ ರೈಲು ಪ್ರಯಾಣಿಕರ ಸಲಹಾ ಸಮಿತಿ ಸದಸ್ಯರ ಸಭೆಯಲ್ಲಿ ವೇದಿಕೆ ಕಾರ್ಯದರ್ಶಿ ಹಾಗೂ ಸಮಿತಿ ಸದಸ್ಯ ಕರಣಂ ರಮೇಶ್, ಸದಸ್ಯರಾದ ಟಿ.ಆರ್. ರಘೋತ್ತಮ ರಾವ್ ಹಾಗೂ ಪ್ರತಾಪ್ ಸಿಂಗ್ ವಿಷಯ ಪ್ರಸ್ತಾಪಿಸಿ ರೈಲು ಸಂಚಾರ ವಿಳಂಬದಿAದ ಆಗುತ್ತಿರುವ ತೊಂದರೆಗಳ ಬಗ್ಗೆ ಎಳೆಎಳೆಯಾಗಿ ವಿವರಿಸಿದರಲ್ಲದೆ, ಬೆಳಗ್ಗೆ ೯.೨೦ರ ವೇಳೆಗೆ ಬೆಂಗಳೂರು ತಲುಪುವಂತೆ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದರು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಅಧಿಕಾರಿಗಳು ಎಕ್ಸ್ಪ್ರೆಸ್ ರೈಲುಗಳ ಸಂಚಾರದಲ್ಲಿ ವಿಳಂಬವಾಗುತ್ತಿರುವುದರಿAದ ಹೀಗಾಗುತ್ತಿದೆ. ಇದನ್ನು ಸರಿಪಡಿಸಲು ಇರುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸುವ ಭರವಸೆ ನೀಡಿದರು. ಕೆಎಸ್‌ಆರ್-ಹುಬ್ಬಳ್ಳಿ ಸ್ಪೆಷಲ್ ರೈಲು ರದ್ದಾಗಿರುವುದರಿಂದ ಆ…











