ತುಮಕೂರು ಸುಳ್ಳು ಸುದ್ದಿಗಳು ಸಮಾಜಕ್ಕೆ ಬಹಳ ಅಪಾಯಕಾರಿ. ಹಾಗಾಗಿ ಸುಳ್ಳು ಸುದ್ದಿಗಳನ್ನು ನಿಯಂತ್ರಿಸಲು ಸದ್ಯದಲ್ಲೇ ಹೊಸ ಕಾನೂನು ಜಾರಿಗೆ ತರುವ ಸಂಬAಧ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. ಸುಳ್ಳು ಸುದ್ದಿಗಳ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುತ್ತಿದೆ. ಸದ್ಯದಲ್ಲೇ ಫೇಕ್ ನ್ಯೂಸ್‌ಗಳ ನಿಯಂತ್ರಣಕ್ಕೆ ಕಾನೂನು ತರುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಅವರು ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ರಾಜಕೀಯ ವ್ಯಕ್ತಿಗಳು, ಸರ್ಕಾರದ ಬಗ್ಗೆ, ಅಧಿಕಾರಿಗಳ ಕುರಿತು ಸುಳ್ಳು ಸುದ್ದಿಗಳು ಪ್ರಕಟವಾಗುತ್ತಲೇ ಇವೆ. ಇದರಿಂದ ಆಗುವ ಅನಾಹುತವನ್ನು ಯಾರೂ ಊಹೆ ಮಾಡಿರುವುದಿಲ್ಲ ಎಂದರು. ರಾಜಕೀಯದಲ್ಲಿ ಟೀಕೆ, ಟಿಪ್ಪಣಿ ಸರ್ವೆ ಸಾಮಾನ್ಯ. ಪತ್ರಿಕೆಗಳಲ್ಲಿ ಬರುವ ಟೀಕೆಗಳು ರಾಜಕಾರಣಿಗಳು ಮಾಡುವ ತಪ್ಪನ್ನು ಎಚ್ಚರಿಸುವಂತಿರಬೇಕು.…
Author: News Desk Benkiyabale
ತುಮಕೂರು ಮಹಾನಗರಪಾಲಿಕೆ ತುಮಕೂರು ಒಳಗೊಂಡAತೆ, ಜಿಲ್ಲೆಯ ವಿವಿಧ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಒಟ್ಟು ೨೭೬ ಸಂಖ್ಯೆಯ ಪೌರ ಕಾರ್ಮಿಕರನ್ನು ವಿಶೇಷ ನೇರ ನೇಮಕಾತಿಯಡಿ ಖಾಯಂಗೊಳಿಸಲಾಗುತ್ತಿದ್ದು, ಈ ಪೈಕಿ ಇಂದು ಜಿಲ್ಲೆಯ ೨೦೮ ಕಾರ್ಮಿಕರಿಗೆ ನೇಮಕಾತಿ ಆದೇಶಪತ್ರ ವಿತರಿಸುತ್ತಿರುವುದು ಸಂತಸ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ: ಜಿ. ಪರಮೇಶ್ವರ್ ಅವರು ತಿಳಿಸಿದರು. ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿAದು ಜಿಲ್ಲಾಡಳಿತ ಹಾಗೂ ಮಹಾನಗರಪಾಲಿಕೆ ವತಿಯಿಂದ ಏರ್ಪಡಿಸಿದ್ದ, ಮಹಾನಗರಪಾಲಿಕೆಯ ಪೌರಕಾರ್ಮಿಕರಿಗೆ ಖಾಯಂ ನೇಮಕಾತಿ ಆದೇಶ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಾ, ದಾಖಲಾತಿಗಳನ್ನು ಸಲ್ಲಿಸದಿರುವ ೬೮ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ನೀಡುವುದು ಬಾಕಿ ಇದ್ದು, ಸಿಂಧುತ್ವ ಹಾಗೂ ಇತರೆ ಪ್ರಮಾಣ ಪತ್ರಗಳನ್ನು ಸಲ್ಲಿಸುವ ಪೌರ ಕಾರ್ಮಿಕರಿಗೆ ಮುಂದಿನ ದಿನಗಳಲ್ಲಿ ಖಾಯಂ ಮಾಡಲಾಗುವುದು ಎಂದರು. ಸಮಾಜದ ಕೆಳಹಂತದಲ್ಲಿದ್ದುಕೊAಡು ಸಮಾಜಕ್ಕಾಗಿ ದುಡಿಯುವ ಜನರೇ ಪೌರಕಾರ್ಮಿಕರು. ನಗರ ಮತ್ತು ಪಟ್ಟಣ ಸ್ವಚ್ಛತಾ ಕಾರ್ಯದಲ್ಲಿ ಯಾವುದೇ ಕೀಳರಿಮೆಯನ್ನು ಮನಸ್ಸಿನಲ್ಲಿ…
ಬೆಂಗಳೂರು ಉಡುಪಿಯ ಕಾಲೇಜೊಂದರ ಟಾಯ್ಲೆಟ್‌ನಲ್ಲಿ ೩ ಮುಸ್ಲಿಂ ಯುವತಿಯರು ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪ ಇತ್ತೀಚೆಗೆ ಕೇಳಿಬಂದಿದ್ದು ಅದರ ಸುತ್ತ ನಾನಾ ಬಗೆಯ ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಕೆಲವರು ರಾಜ್ಯಸರ್ಕಾರದ ಮೇಲೆ ಆರೋಪ ಮಾಡಿದರೆ ಇನ್ನೂ ಕೆಲವರು ಮಹಿಳಾ ಆಯೋಗದ ಸದಸ್ಯೆ ಖುಷ್ಟೂ ಸುಂದರ್ ವಿರುದ್ಧ ಮಾತನಾಡುತ್ತಿದ್ದಾರೆ. ಈ ನಡುವೆ ಬಿಜೆಪಿಯ ಕಾರ್ಯಕರ್ತೆಯೊಬ್ಬರು, ಸಿದ್ದರಾಮಯ್ಯ ವಿರುದ್ಧ ಮಾತನಾಡಿ ಜೈಲು ಸೇರಿದ್ದಾರೆ. ಉಡುಪಿ ವಿಚಾರವಾಗಿ ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಉಡುಪಿಯ ಕಾಲೇಜಿನಲ್ಲಿ “ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ’ ಎಂದು ನಕಲಿ ಸುದ್ದಿ ಸೃಷ್ಟಿಸಿ ಕೋಮು ಪ್ರಚೋದನೆಗೆ ಮುಂದಾಗಿರುವ ಬಿಜೆಪಿ ತೀರ್ಥಹಳ್ಳಿಯಲ್ಲಿ ಹಿಂದೂ ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ಂಃಗಿP ಅಧ್ಯಕ್ಷನ ಅಸಲಿ ಸುದ್ದಿಯ ಬಗ್ಗೆ ಮೌನ ಮುರಿಯುವುದು ಯಾವಾಗ? ವಿದ್ಯಾರ್ಥಿನಿಯರ ಮಕಳಾಟವನ್ನು ರಾಜಕೀಯದ ಕಳ್ಳಾಟಕ್ಕೆ, ಬಳಸಿಕೊಳ್ಳಲು ಉಪ್ಪು ಖಾರ, ಮಸಾಲೆಗಳನ್ನು ಬೆರಸಿ ಚಪ್ಪರಿಸಲು ಹೊರಟಿದ್ದ @ಃಎP೪ಏಚಿಡಿಟಿಚಿಣಚಿಞಚಿ ಗೆ ನಮ್ಮ ದಕ್ಷಪೊಲೀಸರು ತಡಮಾಡದೆ ತನಿಖೆ ಮಾಡಿ ಸತ್ಯಾಂಶ ಬಯಲಿಗೆಳೆದು ನಿರಾಸೆ ಮೂಡಿಸಿದ್ದಾರೆ” ಎಂದು…
ತುಮಕೂರು ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಸರಕಾರ ಬಡ ಜನರ ಹಿತ ಕಾಯುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಗ್ಯಾರಂಟಿ ಗೊಂದಲದಲ್ಲಿ ಅಭಿವೃದ್ದಿಗೆ ಹಣ ಮೀಸಲಿಡದೆ ಜನತೆಗೆ ದ್ರೋಹ ಬಗೆದಿದೆ ಎಂದು ಅಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ನಮ್ಮ ಪಕ್ಷದ ಕಾರ್ಯಕ್ರಮಗಳನ್ನು ಕಾಫಿ ಮಾಡಿ, ಅದನ್ನು ಅನುಷ್ಠಾನಕ್ಕೆ ತರುವಲ್ಲಿ ಎಡವಿದ ಪರಿಣಾಮ ಇನ್ನಿತರ ಕಾರ್ಯಕ್ರಮಗಳಿಗೆ ಹಣವಿಲ್ಲದಂತಾಗಿದೆ.ಸ್ವತಹಃ ಡಿಕೆಶಿ ಅವರೇ ಈ ವಿಚಾರವನ್ನು ಒಪ್ಪಿಕೊಂಡಿರುವುದು ಸರಕಾರ ಸರಿದಾರಿಯಲ್ಲಿ ಇಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು. ಈ ಹಿಂದೆ ರಾಜ್ಯದಲ್ಲಿ ಇದ್ದ ಸರಕಾರ ಭ್ರಷ್ಟಾಚಾರ ಸರಕಾರವಾದರೆ,ಹಾಲಿ ಇರುವ ಸರಕಾರ ಲಂಚಾವಾತಾರ ಸರಕಾರ ವಾಗಿದೆ.ಆಳಂದ ಶಾಸಕರಾದ ಬಿ.ಆರ್.ಪಾಟೀಲ್ ಮತ್ತು ಇತರೆ ೩೩ ಜನ ಶಾಸಕರು ಬರೆದಿರುವ ಪತ್ರವೇ ಇದಕ್ಕೆ ಸಾಕ್ಷಿಯಾ ಗಿದೆ.ಬಾಣಲೆಯಿಂದ ಬೆಂಕಿಗೆ ಹಾರಿದಂತಾಗಿದೆ ರಾಜ್ಯದ ಜನತೆಯ ಸ್ಥಿತಿ ಎಂದ ಸಿ.ಎಂ.ಚAದ್ರು,ಜನರ ವಿಶ್ವಾಸ ಕಳೆದು ಕೊಳ್ಳುವ ಮುನ್ನ ಎಚ್ಚೆತ್ತುಕೊಂಡರೆ ಮಾತ್ರ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿದೆ.ಇಲ್ಲವೆಂದರೆ ರಾಜ್ಯದಿಂದಲೂ ಜನತೆ ಕಾಂಗ್ರೆಸ್ ಪಕ್ಷಕ್ಕೆ ಟಿಕೇಟ್…
ತುಮಕೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಳು ಕಾನೂನಿನ ಅಡಿಯಲ್ಲಿಯೇ ಸಹಾಯ ಮಾಡಬೇಕು. ಸಣ್ಣ ವೆತ್ಯಾಸ ಕಂಡುಬAದರೂ, ಲೋಕಾಯುಕ್ತ, ಕೋರ್ಟು ಅಂತ ಅಲೆಯುವುದರ ಜೊತೆಗೆ, ನಿರಂತರವಾಗಿ ಸಮಸ್ಯೆಗೆ ಒಳಗಾಗಬೇಕಾಗುತ್ತದೆ ಎಂದು ಶಾಸಕ ಬಿ.ಸುರೇಶಗೌಡ ಪಿಡಿಓಗಳಿಗೆ ಎಚ್ಚರಿಕೆ ನೀಡಿದ್ದಾರೆ. ತಾ.ಪಂ.ಸಭಾAಗಣದಲ್ಲಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಿಡಿಓಗಳ ಸಭೆ ನಡೆಸಿ ಮಾತನಾಡಿದ ಅವರು, ಯಾರಿಗೆ ಸಹಾಯ ಮಾಡಬೇಕೆಂದಿದ್ದರು ಕಾನೂನಿನ ಅಡಿಯಲ್ಲಿ ಸಹಾಯಮಾಡಿ, ಅನುಕಂಪ,ಒತ್ತಡಕ್ಕೆ ಒಳಗಾಗಿ ಕಾನೂನು ಮೀರಿದರೆ, ಸಹಾಯ ಪಡೆದವರೇ ಬ್ಲಾಕ್ ಮೇಲ್ ಮಾಡುವ ಸಾಧ್ಯತೆ ಇದೆ. ಹಾಗಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕೆಂದರು. ಕಳೆದ ಎರಡು ತಿಂಗಳ ಹಿಂದೆ ನಡೆದ ಪಿಡಿಓಗಳ ಸಭೆಯಲ್ಲಿ ಪ್ರತಿ ಗ್ರಾಮಪಂಚಾಯಿತಿಯಲ್ಲಿ ಬಡವರಿಗೆ ನಿವೇಶನ ನೀಡಲು ಜಾಗ ಗುರುತಿಸುವುದು, ಸ್ಮಶಾನಕ್ಕೆ ಜಾಗ ಗುರುತಿಸುವುದು, ಕಸ ವಿಲೇವಾರಿ ಘಟಕ ನಿಮಾರ್ಣಕ್ಕೆ ಜಾಗ ಗುರುತಿಸುವಂತೆ ನಿರ್ದೇಶನ ನೀಡಲಾಗಿತ್ತು,ಕೆಲವು ಗ್ರಾಮಪಂಚಾಯಿತಿಗಳಲ್ಲಿ ಕೆಲಸ ಆಗಿದೆ.ಕೆಲವು ಗ್ರಾಮಪಂಚಾಯಿತಿ ಗಳಲ್ಲಿ ಕೆಲಸ ಆಗಿಲ್ಲ.ಇದು ಕಡೆಯ ವಾರ್ನಿಂಗ್ ನೀವು ಸಮರ್ಪಕವಾಗಿ ಕಾರ್ಯನಿರ್ಹಿಸದಿದ್ದರೆ ನಿಮ್ನ ವಿರುದ್ದ ಶಿಸ್ತು ಕ್ರಮಕ್ಕೆ ಮೇಲಾಧಿಕಾರಿಗಳಿಗೆ…
ಹುಳಿಯಾರು ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಗಡಿಗ್ರಾಮಗಳು ಅದರಲ್ಲೂ ತಳ ಸಮುದಾಯದ ಊರುಗಳ ಬಗ್ಗೆ ನಿರ್ಲಕ್ಷö್ಯ ಧೋರಣೆ ಇದ್ದದ್ದೇ. ಇದಕ್ಕೆ ಹುಳಿಯಾರು ಹೋಬಳಿಯ ತಮ್ಮಡಿಹಳ್ಳಿ ಬಳಿಯ ಬಿಳಿಕಲ್ಲು ಗೊಲ್ಲರಹಟ್ಟಿ ಶಾಲೆ ಸ್ಪಷ್ಟ ನಿರ್ದಶನವಾಗಿದೆ. ಇಲ್ಲಿನ ಸರ್ಕಾರಿ ಶಾಲೆಗೆ ಉತ್ಸುಕತೆಯಿಂದ ಬರುವ ಮಕ್ಕಳಿಗೆ ಕೂರಲು ಕೊಠಡಿ ಇಲ್ಲ. ಶೌಚಾಲಯ ಇಲ್ಲ. ಬಿಸಿಯೂಟ ಸಿದ್ಧತೆಗೆ ಕೋಣೆ ಇಲ್ಲ. ಆದರೂ ಯಾರೊಬ್ಬರೂ ಇತ್ತ ಕಡೆ ಗಮನ ಹರಿಸದಿರುವುದು ಗ್ರಾಮಸ್ಥರನ್ನು ಕೆರಳಿಸಿದೆ. ಅಕ್ಷರದಿಂದ ವಂಚಿತರಾಗಿರುವ ಕಾಡುಗೊಲ್ಲರ ಮಕ್ಕಳು ನಾಲ್ಕು ಅಕ್ಷರ ಕಲಿಯಲೆಂದು ದಶಕಗಳ ಹಿಂದೆ ಬಿಳಿಕಲ್ಲು ಗೊಲ್ಲರಹಟ್ಟಿಗೆ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಆರಂಭಿಸಲಾಗಿತ್ತು. ನಾವಂತೂ ಓದಲಿಲ್ಲ ನಮ್ಮ ಮಕ್ಕಳಾದರೂ ಓದಲಿ ಎಂಬ ಗಾಮದ ಪೋಷಕರ ನಿರ್ಧಾರದಿಂದಾಗಿ ೧ ರಿಂದ ೫ ನೇ ತರಗತಿಯವರೆವಿಗೆ ಬರೋಬ್ಬರಿ ೪೮ ಮಕ್ಕಳು ಓದುತ್ತಿದ್ದಾರೆ. ಐದು ತರಗತಿಗಳಿಗೂ ಕೇವಲ ಎರಡೇ ಎರಡು ಕೊಠಡಿಗಳಿದ್ದವು. ಮೊದಲೇ ಕೂಲಿನಾಲಿ ಮಾಡುವವರಾದ್ದರಿಂದ ಪಟ್ಟಣದ ಖಾಸಗಿ ಶಾಲೆಗೆ ಕಳುಹಿಸಲಾಗದೆ. ಕಷ್ಟನೋ ನಷ್ಟಾನೋ ನಮ್ಮ ಮಕ್ಕಳ ಅಕ್ಷರ ಕಲಿತರಾಯ್ತು ಎಂದು…
ತುಮಕೂರು ಬಹುಪಾಲು ಉದ್ಯೋಗಿಗಳೇ ಪ್ರಯಾಣಿಸುವ ಅರಸೀಕೆರೆ-ಕೆಎಸ್‌ಆರ್ ಪ್ಯಾಸೆಂಜರ್ ರೈಲು ತುಂಬಾ ವಿಳಂಬವಾಗಿ ಸಂಚರಿಸುತ್ತಿದೆ. ಇದರಿಂದ ಕೆಲಸಗಳಿಗೆ ಹೋಗಲು ಇದೇ ರೈಲನ್ನು ಅವಲಂಬಿಸಿರುವ ಸಾವಿರಾರು ಜನರು ಉದ್ಯೋಗ ಕಳೆದುಕೊಳ್ಳು ಭೀತಿಯಲ್ಲಿದ್ದಾರೆ. ಸಮಯಕ್ಕೆ ಸರಿಯಾಗಿ ಬೆಂಗಳೂರು ತಲುಪುವಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ವಿಭಾಗೀಯ ವ್ಯವಸ್ಥಾಪಕರನ್ನು ಒತ್ತಾಯಿಸಲಾಯಿತು. ಮಂಗಳವಾರ ಬೆಂಗಳೂರಿನ ನೈಋತ್ಯ ರೈಲ್ವೇ ವಿಭಾಗೀಯ ಮುಖ್ಯಸ್ಥರ ಕಚೇರಿಯಲ್ಲಿ ನಡೆದ ರೈಲು ಪ್ರಯಾಣಿಕರ ಸಲಹಾ ಸಮಿತಿ ಸದಸ್ಯರ ಸಭೆಯಲ್ಲಿ ವೇದಿಕೆ ಕಾರ್ಯದರ್ಶಿ ಹಾಗೂ ಸಮಿತಿ ಸದಸ್ಯ ಕರಣಂ ರಮೇಶ್, ಸದಸ್ಯರಾದ ಟಿ.ಆರ್. ರಘೋತ್ತಮ ರಾವ್ ಹಾಗೂ ಪ್ರತಾಪ್ ಸಿಂಗ್ ವಿಷಯ ಪ್ರಸ್ತಾಪಿಸಿ ರೈಲು ಸಂಚಾರ ವಿಳಂಬದಿAದ ಆಗುತ್ತಿರುವ ತೊಂದರೆಗಳ ಬಗ್ಗೆ ಎಳೆಎಳೆಯಾಗಿ ವಿವರಿಸಿದರಲ್ಲದೆ, ಬೆಳಗ್ಗೆ ೯.೨೦ರ ವೇಳೆಗೆ ಬೆಂಗಳೂರು ತಲುಪುವಂತೆ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದರು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಅಧಿಕಾರಿಗಳು ಎಕ್ಸ್ಪ್ರೆಸ್ ರೈಲುಗಳ ಸಂಚಾರದಲ್ಲಿ ವಿಳಂಬವಾಗುತ್ತಿರುವುದರಿAದ ಹೀಗಾಗುತ್ತಿದೆ. ಇದನ್ನು ಸರಿಪಡಿಸಲು ಇರುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸುವ ಭರವಸೆ ನೀಡಿದರು. ಕೆಎಸ್‌ಆರ್-ಹುಬ್ಬಳ್ಳಿ ಸ್ಪೆಷಲ್ ರೈಲು ರದ್ದಾಗಿರುವುದರಿಂದ ಆ…
ತುಮಕೂರು ಮಹಿಳೆಯರಲ್ಲಿ ಕ್ಯಾನ್ಸರ್ ಪತ್ತೆಹಚ್ಚುವಿಕೆ (ಉಚಿತ) ಹೆಚ್ಚು ಪರಿಣಾಮಕಾರಿಯಾಗಿಸವು ತಮ್ಮ ಅಧ್ಯಕ್ಷತೆಯಲ್ಲಿ ಆಶಾ ಕಾರ್ಯಕರ್ತೆಯರ ಸಮಾವೇಶ ನಡೆಸಬೇಕು ಎಂದು ಅಶ್ವಿನಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಜಿಲ್ಲಾ ಒಕ್ಕಲಿಗರ ಒಕ್ಕೂಟ ಹಾಗೂ ವಿಜಯ ಆಸ್ಪತ್ರೆ ವತಿಯಿಂದ ಡಾ. ಟಿ.ಎಸ್. ವಿಜಯಕುಮಾರ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದರು. ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದ ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್ ಅವರನ್ನು ಭೇಟಿ ಮಾಡಿದ ಡಾ. ವಿಜಯಕುಮಾರ್ ಅವರು, ಈಗಾಗಲೇ ೩೦ ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ ಸ್ತನದ ಕ್ಯಾನ್ಸರ್, ಮಾಮ್ಮೊಗ್ರಫಿ, ಗರ್ಭಕೋಶದ ಕಂಠದ ಕ್ಯಾನ್ಸರ್, ಪ್ಯಾಪ್‌ಸ್ಮಿಯರ್, ಅಲ್ಟಾçಸೌಂಡ್ ಸ್ಕಾ÷್ಯನ್ ಪರೀಕ್ಷೆಗಳನ್ನು ಕಳೆದ ನವೆಂಬರ್ ತಿಂಗಳಿನಿAದ ಉಚಿತವಾಗಿ ನಡೆಸಿಕೊಂಡು ಬರುತ್ತಿದ್ದೇವೆ. ಸಾವಿರಾರು ಮಹಿಳೆಯರು ಇದರ ಪ್ರಯೋಜನೆ ಪಡೆದಿದ್ದಾರೆ. ಈ ಕಾರ್ಯಕ್ರಮ ೧೪ ತಿಂಗಳ ವರೆಗೆ ಮುಂದುವರೆಸಿಕೊAಡು ಹೋಗಲು ತಮ್ಮ ಸಹಕಾರ ಅಗತ್ಯವಿದೆ ಎಂದು ತಿಳಿಸಿದರು. ಮಹಿಳೆಯರಲ್ಲಿ ಕ್ಯಾನ್ಸರ್ ಪತ್ತೆ ಹಚ್ಚುವಿಕೆ ಮತ್ತಷ್ಟು ಪರಿಣಾಮಕಾರಿಯಾಗಿಸಲು ಆಶಾ ಕಾರ್ಯಕರ್ತೆಯರ ಪಾತ್ರ ಬಹಳ…
ತುಮಕೂರು ಪ್ಲಾಸ್ಟಿಕ್ ಬಳಕೆ ನಿಲ್ಲಿಸುವುದರಿಂದ ಆಗುವ ಅನುಕೂಲಗಳ ಬಗ್ಗೆ ಮಕ್ಕಳು ಪೋಷಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಮಹಾನಗರಪಾಲಿಕೆಯ ೧೫ನೇ ವಾರ್ಡಿನ ಸದಸ್ಯೆ ಶ್ರೀಮತಿ ಗಿರಿಜಾ ಧನಿಯಕುಮಾರ್ ತಿಳಿಸಿದ್ದಾರೆ. ನಗರದ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿರುವ ಬಯಲು ರಂಗಮAದಿರದಲ್ಲಿ ಜುಲೈ ೨೮ರ ವಿಶ್ವ ಪರಿಸರ ಸಂರಕ್ಷಣಾ ದಿನ ಹಾಗೂ ಪ್ಲಾಸ್ಟಿಕ್ ಮುಕ್ತ ತುಮಕೂರು ಅಭಿಯಾನದ ಅಂಗವಾಗಿ ನಗರಪಾಲಿಕೆ,೧೫ನೇ ವಾರ್ಡಿನ ಸದಸ್ಯರಾದ ಶ್ರೀಮತಿ ಗಿರಿಜಾ ಧನಿಯಕುಮಾರ್,ಜೆ.ಡಿ.ಸ್ಕೂಲ್ ಅಫ್ ಅರ್ಟ್ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶಾಲಾ ಮಕ್ಕಳಿಗೆ ಸ್ಥಳದಲ್ಲಿಯೇ ಚಿತ್ರ ಬಿಡುಸುವ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಭವಿಷ್ಯ ಪ್ರಜೆಗಳಾದ ಮಕ್ಕಳು,ತಾವು ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿಕೊಳ್ಳು ವುದಲ್ಲದೆ,ಮನೆಯಲ್ಲಿ ತಮ್ಮ ತಂದೆ,ತಾಯಿಗಳಿಗೆ, ನೆರೆ, ಹೊರೆಯವರಿಗೂ ತಿಳಿಸುವ ಪರಿಸರ ರಾಯಭಾರಿಗಳಾಗಿ ಕೆಲಸ ಮಾಡಬೇಕೆಂದರು. ಬಾಲಾಜಿ ಪುಡ್‌ವರ್ಲ್ಡ್ನ ಸಂತೋಷ್ ಮಾತನಾಡಿ,ಕನ್ನಡ ಸೇನೆಯ ಅಧ್ಯಕ್ಷ ಧನಿಯಕುಮಾರ್ ಮತ್ತು ಶ್ರೀಮತಿ ಗಿರಿಜಾ ಧನಿಯಕುಮಾರ್ ಅವರದ್ದು ಸೃಜನ ಶೀಲ ವ್ಯಕ್ತಿತ್ವ.ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ…
ತುಮಕೂರು ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿಯಾಗಿ ರಾಜ್ಯದ ಸ್ಲಂ ನಿವಾಸಿಗಳ ಹಕ್ಕೋತ್ತಾಯಗಳಿಗೆ ಸಂಬAಧಿಸಿದ ಮನವಿ ಪತ್ರವನ್ನು ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿ ಸಲ್ಲಿಸಿ ಗಮನ ಸೆಳೆದರು. ಮನವಿ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನೂ ಹಿಂದಿನ ಅವಧಿಯಲ್ಲಿ ಸ್ಲಂ ನಿವಾಸಿಗಳಿಗೆ ಸಂಬAಧಿಸಿದAತೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದೇನೆ. ನಗರ ಪ್ರದೇಶದ ಸ್ಲಂಗಳಲ್ಲಿ ಅತಿಹೆಚ್ಚು ಬಡವರು ಕೊಳಗೇರಿಗಳಿಲ್ಲಿದ್ದಾರೆ. ಅಹಿಂದ ಸಮುದಾಯಕ್ಕೆ ಸೇರಿದ ಇಲ್ಲಿನ ಜನರ ಸಮಗ್ರವಾದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು ನಮ್ಮ ಪÀಕ್ಷದ ಪ್ರಣಾಳಿಕೆಯಲ್ಲಿ ಸ್ಲಂ ನಿವಾಸಿಗಳು, ಪೌರಕಾರ್ಮಿಕರು, ಅಸಂಘಟಿತ ಕಾರ್ಮಿಕರಿಗೆ ನೀಡಿರುವ ಭರವಸೆಯನ್ನು ಈಡೇರಿಸುತ್ತೇವೆ. ಈ ಮೂಖೇನ ಸಾಮಾಜಿಕ ಅರ್ಥಿಕವಾಗಿ ಹಿಂದುಳಿದಿರುವ ಸ್ಲಂ ನಿವಾಸಿಗಳಿಗೆ ಸಾಮಾಜಿಕ ನ್ಯಾಯವನ್ನು ನೀಡಿರುವ ಮೂಲಕ ಸಂವಿಧಾನದ ಖಾತ್ರಿಗಳನ್ನು ನೀಡಲಾಗುವುದೆಂದರು. ಭೂಮಿ ಆಧಾರಿತ ವಸತಿ ಹಕ್ಕು ಕಾಯಿದೆ ಜಾರಿಯಾಗಲಿ: ಎ.ನರಸಿಂಹಮೂರ್ತಿ ಸ್ಲA ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ ಮಾತನಾಡಿ ಸ್ಲಂ ಜನಾಂದೋಲನ ಸಂಘಟನೆ ಚುನಾವಣಾ ಪೂರ್ವದಲ್ಲಿ ಸಂವಿಧಾನ ಉಳಿಸಿ…











