Author: News Desk Benkiyabale

ತುಮಕೂರು ನಗರದಲ್ಲಿ ಕಳೆದ ೨ ದಿನಗಳಿಂದ ತುಂತುರು ಸೋನೆ ಮಳೆ ಸುರಿಯುತ್ತಿದ್ದು, ಜನಸಾಮಾನ್ಯರ ದಿನನಿತ್ಯದ ಕೆಲಸ ಕಾರ್ಯಗಳನ್ನು ಸುಗಮವಾಗಿ ನಿರ್ವಹಿಸಲಾಗದೆ ಹೈರಾಣಾಗಿದ್ದಾರೆ. ಬೆಳ್ಳಂಬೆಳ್ಳಿಗೆಯೇ ಮೋಡ ಕವಿದ ವಾತಾವರಣದೊಂದಿಗೆ ಜಿಟಿ ಜಿಟಿ ಮಳೆಯಾಗುತ್ತಿರುವುದರಿಂದ ಹಾಲು, ತರಕಾರಿ ತರಲು ಮನೆಯಿಂದ ಹೊರ ಬರಬೇಕಾದರೆ ಛತ್ರಿ ಆಶ್ರಯಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಿಗ್ಗೆಯೇ ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ತುಂತುರು ಮಳೆಯಾಗುತ್ತಿದ್ದು, ಜನಸಾಮಾನ್ಯರು ನಿತ್ಯದ ಸಾಮಗ್ರಿಗಳನ್ನು ಕೊಳ್ಳಲು ಮಾರುಕಟ್ಟೆ, ಅಂಗಡಿಗಳಿಗೆ ತೆರಳಲು ಕಸಿವಿಸಿ ಉಂಟಾಗುತ್ತಿದೆ. ಮಹಿಳೆಯರು, ಮಕ್ಕಳು, ವೃದ್ಧರು, ಯುವಕರು, ಯುವತಿಯರು ತುಂತುರು ಮಳೆ ನಡುವೆಯೇ ಛತ್ರಿಗಳನ್ನು ಹಿಡಿದು ಮನೆಗಳಿಂದ ಹೊರ ಬಂದು ಹಾಲು, ತರಕಾರಿ, ಹೂವು ಖರೀದಿಸುತ್ತಿದ್ದ ದೃಶ್ಯಗಳು ಕಂಡು ಬಂತು. ಇನ್ನು ಸರ್ಕಾರಿ ನೌಕರರು, ಖಾಸಗಿ ಸಂಸ್ಥೆಗಳ ನೌಕರರು, ಶಾಲಾ – ಕಾಲೇಜು ವಿದ್ಯಾರ್ಥಿಗಳು ಸಹ ಜರ್ಕಿನ್ ಧರಿಸಿ ಛತ್ರಿ ಹಿಡಿದು ತೆರಳುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿವೆ. ಗ್ರಾಮೀಣ ಪ್ರದೇಶಗಳಲ್ಲೂ ಜಿಟಿ ಜಿಟಿ ಮಳೆಯಾಗುತ್ತಿರುವುದರಿಂದ ದನ ಕರುಗಳ ಮೇವಿಗೂ ತೊಂದರೆ…

Read More

ತುಮಕೂರು ವೈದ್ಯಕೀಯ ಕ್ಷೇತ್ರ ಸೇವಾ ಕ್ಷೇತ್ರವಾಗಿದ್ದು, ಜನರ ಸೇವೆ ಮಾಡುವುದೇ ವೈದ್ಯರ ಪ್ರಥಮ ಆದ್ಯತೆಯಾಗಬೇಕು. ವೈದ್ಯರಲ್ಲಿ ಸೇವಾ ಮನಸ್ಥಿತಿ ಸದಾ ಜಾಗೃತವಾಗಿರಬೇಕು. ಜನರ ಜೀವನವನ್ನು ಬದಲಾಯಿಸುವ ಶಕ್ತಿ ವೈದ್ಯರಿಗೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡುರಾವ್ ಅಭಿಪ್ರಾಯ ಪಟ್ಟರು. ನಗರದ ಶ್ರೀ ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಸೂಪರ್ ಸ್ಪೆಷಾಲಿಟಿ ಹೊರ ರೋಗಿ ವಿಭಾಗ ಹಾಗೂ ಸಿಬ್ಬಂದಿ ವಸತಿ ಗೃಹ ಸಮುಚ್ಚಯದ ಉದ್ಘಾಟನೆ ನೆರವೇರಿಸಿ, ನಂತರ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಏರ್ಪಡಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಾವುದೇ ಅಭಿವೃದ್ದಿ ಹೊಂದುತ್ತಿರುವ ದೇಶಕ್ಕೆ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಬೆಳವಣಿಗೆ ಅತಿ ಮುಖ್ಯವಾಗುತ್ತದೆ. ಯಾವುದೇ ದೇಶದ ಅಥವಾ ರಾಜ್ಯದ ಆರೋಗ್ಯ ಮತ್ತು ಶೈಕ್ಷಣಿಕ ವಲಯ ಅತ್ಯುತ್ತಮವಾಗಿದ್ದಲ್ಲಿ ಆ ದೇಶವನ್ನು ಅಭಿವೃದ್ದಿ ಹೊಂದಿದ ದೇಶವೆಂದು ಪರಿಗಣಿಸಬಹುದಾಗಿದೆ. ಸಮಾಜದ ಸಾಮಾನ್ಯ ಮನುಷ್ಯನಿಗೂ ಸಹ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆಗಳು ದೊರಕಬೇಕು ಎಂಬುವುದೇ ತಮ್ಮ ಆಶಯವಾಗಿದೆ ಎಂದ…

Read More

ತುಮಕೂರು ವಿದ್ಯಾರ್ಥಿಗಳು ಕಾಣುವ ಕನಸಿಗೂ ನಡೆಯುತ್ತಿರುವ ದಾರಿಗೂ ಸಂಬAಧವಿದ್ದರಷ್ಟೇ ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧ್ಯ ಎಂದು ನವೋದಯ ಐ.ಎ.ಎಸ್ ಅಕಾಡೆಮಿ ನಿರ್ದೇಶಕ ಎಂ. ಉದಯ್ ಸಾಗರ್ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಸಮಾಜಶಾಸ್ತç ವಿಭಾಗವು ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ‘ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ತರಬೇತಿ’ಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ಪೋಷಕರು ತನ್ನ ಮಕ್ಕಳು ಒಳ್ಳೆಯ ಸ್ಥಾನ ತಲುಪಬೇಕೆಂಬ ನಿರೀಕ್ಷೆಯಲ್ಲಿರುತ್ತಾರೆ. ಅಂತಹ ನಿರೀಕ್ಷೆಯನ್ನು ವಿದ್ಯಾರ್ಥಿಯಾಗಿ ನೀವು ನನಸು ಮಾಡಬೇಕು ಎಂದರು. ವಿದ್ಯಾರ್ಥಿ ಜೀವನದ ಪ್ರತಿಕ್ಷಣವೂ ಅಮೂಲ್ಯವಾದ ಸಮಯವಾಗಿರುತ್ತದೆ. ಈ ಸಮಯವನ್ನು ವ್ಯರ್ಥ ಮಾಡದೆ ಉಪಯೋಗಿಸಿಕೊಳ್ಳಿ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ ಕರಿಯಣ್ಣ, ಕೇವಲ ಪದವಿ ಪಡೆದರೆ ಉನ್ನತ ಸ್ಥಾನಕ್ಕೆ ಏರುತ್ತೇವೆ ಎಂಬುದು ತಪ್ಪು ಗ್ರಹಿಕೆ. ಆದ್ದರಿಂದ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒಳ್ಳೆಯ ತಯಾರಿ ನಡೆಸಿ ಯಶಸ್ವಿಯಾಗಬೇಕು ಎಂದರು. ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಸಮಾಜಶಾಸ್ತç…

Read More

ತುಮಕೂರು ಹೇಮಾದ್ರಿ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಕೇಂದ್ರ ತುಮಕೂರು ಇವರ ವತಿಯಿಂದ ಲಕ್ಕೇನ ಹಳ್ಳಿ ಗ್ರಾಮ, ಒ.ಊ. ಪಟ್ಟಣ ಗ್ರಾಮ ಪಂಚಾಯ್ತಿ, ಗುಬ್ಬಿ ತಾಲ್ಲೂಕು, ತುಮಕೂರು ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಸಮಾಜ ಕಾರ್ಯ ಗ್ರಾಮೀಣ ಶಿಬರದ ಎರಡನೇ ದಿನದ ಬೆಳಗಿನ ಕಾರ್ಯಕ್ರಮವು ಸಹಭಾಗಿತ್ವದೊಂದಿಗೆ ಗ್ರಾಮೀಣ ವಿಶ್ಲೇಷಣೆ ಯಾಗಿದ್ದು ಇದರ ಮುಖ್ಯ ಉದ್ದೇಶ ಗ್ರಾಮದ ಬಗ್ಗೆ ತಿಳಿದುಕೊಳ್ಳುವುದಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮದ ಮುಖ್ಯಸ್ಥರಾದ ಶ್ರೀಯುತ ಪಾಂಡುರAಗಪ್ಪನವರು ವಹಿಸಿಕೊಂಡಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯರಾದ ಶ್ರೀಯುತ ಲಕ್ಷ್ಮಣ್ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಗ್ರಾಮೀಣ ಭಾಗದಲ್ಲಿ ನಡೆಯುವ ಶಿಬಿರದ ಮಹತ್ವವನ್ನು ಶಿಬಿರಾರ್ಥಿಗಳಿಗೆ ತಿಳಿಸಿದರು. ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದಂತಹ ಶ್ರೀಯುತ ಅ.ಅ. ಪಾವಟೆಯವರು ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿ, ಜನರ ಸಹಭಾಗಿತ್ವದೊಂದಿಗೆ ತಯಾರಾದ ಸಾಮಾಜಿಕ ನಕ್ಷೆ, ಸಂಪನ್ಮೂಲ ಶ್ರೇಣೀಕರಣ ಹಾಗೂ ಚಪಾತಿ ನಕ್ಷೆಯನ್ನು ವಿವರಿಸುವ ಮೂಲಕ, ಇರುವ ಸಂಪನ್ಮೂಲಗಳನ್ನು ಬಳಸಿಕೊಂಡು ಗ್ರಾಮದ ಅಭಿವೃದ್ಧಿಯನ್ನು ಮಾಡಬಹುದೆಂದು ಶಿಬಿರಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ವಿವರಿಸಿದರು. ಕಾರ್ಯಕ್ರಮದಲ್ಲಿ…

Read More

ತುಮಕೂರು ತಾವು ಮಾಡುವ ಸಾಮಾಜಿಕ ಕಾರ್ಯ ಇತರರಿಗೆ ಪ್ರೇರಣೆಯಾಗಬೇಕು ಹಾಗೂ ಮಾದರಿಯಾಗಬೇಕು ಎಂದು ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ದೀರಾನಂದ ಜೀ ಮಹಾರಾಜ್ ಅಭಿಪ್ರಾಯಪಟ್ಟರು. ಶ್ರೀ ಸಿದ್ಧಾರ್ಥ ವ್ಯವಹಾರ ಅಧ್ಯಯನ ಕೇಂದ್ರದ ಸಾಮಾಜ ಕಾರ್ಯ ವಿಭಾಗದ ವತಿಯಿಂದ ಹೋಬಳಿಯ ಕಾಟೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಸಮಾಜ ಕಾರ್ಯದ ನಡೆ ಮಾದರಿ ಗ್ರಾಮದ ಕಡೆ ಎಂಬ ೭ ದಿನಗಳ ಸಮಾಜ ಕಾರ್ಯ ಗ್ರಾಮೀಣ ಶಿಬಿರಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು. ಈ ಶಿಬಿರದ ಉದ್ದೇಶದಂತೆ ಗ್ರಾಮವನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ನಾಗರಿಕರಿಗೆ ವಿದ್ಯಾರ್ಥಿಗಳು ಜಾಗೃತಿ ಮೂಡಿಸಬೇಕು, ಗ್ರಾಮೀಣ ಭಾಗದಲ್ಲಿ ಕಂಡು ಬರುವ ಅನೈರ್ಮಲ್ಯ, ಅನಿಷ್ಟ ಪದ್ಧತಿ, ಮೌಢ್ಯ ತೊರೆಯುವಂತೆ ಅರಿವು ಮೂಡಿಸಬೇಕು ಎಂದರು. ಸ್ವಾಮಿ ವಿವೇಕಾನಂದರು ಹೇಳಿದಂತೆ ಯುವ ಸಮುದಾಯ ಜಾಗೃತವಾಗಬೇಕು, ಸಮಾಜದ ಅಂಕುಡೊAಕುಗಳನ್ನು ತಿದ್ದುವುದರ ಜೊತೆಗೆ ಕೇವಲ ಲಾಭ-ನಷ್ಟದ ಲೆಕ್ಕಾಚಾರ ಮಾಡದೇ ಎಲ್ಲರೂ ಸಾಮಾಜಿಕ ಬದ್ಧತೆಯೊಂದಿಗೆ ಸಾಮಾಜಿಕ ಜವಾಬ್ದಾರಿಯನ್ನು ಅರಿವು ಸಾಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಎಸ್‌ಎಸ್‌ಐಬಿಎಂನ ಪ್ರಾಂಶುಪಾಲರಾದ ಡಾ.ಮಮತಾ…

Read More

ಪಾವಗಡ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅಭಿಮಾನಿಗಳ ಮಹಾವೇದಿಕೆ ಪಾವಗಡ ರವರ ನೇತೃತ್ವದಲ್ಲಿ ಪಟ್ಟಣದ ಎಸ್ ಎಸ್ ಕೆ ಸಮುದಾಯ ಭವನದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರರಾದ ನಿಕೇತ್ ರಾಜ್ ಮೌರ್ಯ ರವರು ಶ್ರೀ ಶಿವಕುಮಾರ ಸ್ವಾಮಿಗಳು ಮತ್ತು ಡಾ.ಅಬ್ದುಲ್ ಕಲಾಂ ಇಬ್ಬರೂ ವಿದ್ಯಾರ್ಥಿಗಳ ಬೆನ್ನು ತಟ್ಟಿದವರು, ಅವರ ಹೆಸರಿನಲ್ಲಿ ಪ್ರತೀ ವರ್ಷ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿರುವ ಈ ಮಹಾ ವೇದಿಕೆಯ ಪದಾಧಿಕಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿ, ಸಾಧನೆಯ ಹಾದಿ ಸುಗಮವಲ್ಲ. ನಮ್ಮ ಕ್ರಿಯೆಗಳಿಗೆ ಪೂರಕವಾಗಿ ಪ್ರತಿಕ್ರಿಯೆ ಇರುತ್ತದೆ. ಅದೇ ರೀತಿ ನಾವು ಅಪೇಕ್ಷೆ ಪಟ್ಟಂತ ಫಲಿತಾಂಶವನ್ನು ಪಡೆಯಲು ಅತೀ ವೇಗವಾಗಿ ಸಾಧನೆಯ ಹಾದಿಯಲ್ಲಿ ಸಾಗಬೇಕಾಗಿದೆ. ಪ್ರತಿಭೆ ಎಲ್ಲರಲ್ಲೂ ಇದೆ.ಆದರೆ ಆಗಿನ ಆಧುನಿಕ ಜಗತ್ತಿನಲ್ಲಿ ಸ್ಪರ್ಧೆ ಅನಿವಾ‍ರ್ಯ. ಇವೆರಡರ ನಡುವೆ ಸಾಮಾಜಿಕ ಜವಾಬ್ದಾರಿಯ…

Read More

ತುಮಕೂರು ಪ್ರಶಿಕ್ಷಣಾರ್ಥಿಗಳಿಗೆ ಗ್ರಾಮದ ಜನರೊಂದಿಗೆ ಹೇಗೆ ಸಹಭಾಗಿಯಾಗಿ ಕೆಲಸ ಮಾಡಬೇಕು ಹೇಗೆ ಕಾರ್ಯಕ್ರಮಗಳಲ್ಲಿ ಹಾಗೂ ಗ್ರಾಮದಲ್ಲಿ ಕೆಲಸ ಮಾಡುವಾಗ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಮಾದ್ರಿ ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲರಾದ ನಟರಾಜ್ ಃ.ಏ. ಹಾಗೂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಮೋಹನ್ ಅವರೂ ಸಹ ಕಾರ್ಯಕ್ರಮದ ಕುರಿತು ತಿಳಿಸಿದರು. ಹೇಮಾದ್ರಿ ಎಜುಕೇಷನಲ್ ಅಂಡ್ ಡೆವಲಪ್ ಮೆಂಟಲ್ ಸೊಸೈಟಿ (ರಿ). ತುಮಕೂರು. ಹೇಮಾದ್ರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಇವರ ವತಿಯಿಂದ ತುಮಕೂರು ಜಿಲ್ಲೆ, ಗುಬ್ಬಿ ತಾಲೂಕು, ಒ.ಊ. ಪಟ್ಟಣ ಗ್ರಾಮ ಪಂಚಾಯಿತಿಯ ಲಕ್ಕೇನಹಳ್ಳಿ ಗ್ರಾಮದಲ್ಲಿ ಸಮಾಜ ಕಾರ್ಯ ಶಿಬಿರವನ್ನು ಹಮ್ಮಿಕೊಂಡಿದ್ದು ಮೊದಲ ದಿನದ ಶಿಬಿರವನ್ನು ಹೇಮಾದ್ರಿ ಎಜುಕೇಷನಲ್ ಸೊಸೈಟಿಯ ಕಾರ್ಯದರ್ಶಿಗಳಾದ ತಿಪ್ಪೇಸ್ವಾಮಿ ಗಿ.ಖಿ. ಅವರು ಹಾಗೂ ವೇದಿಕೆಯ ಮೇಲೆ ಉಪಸ್ಥಿತರಿದ್ದ ಎಲ್ಲಾ ಗಣ್ಯರೂ ನಡೆಸಿಕೊಟ್ಟರು. ಕೃಷ್ಣಮೂರ್ತಿ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡಿ ಎಲ್ಲಾ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಶಿಬಿರಾಧಿಕಾರಿಗಳಾದ ಶೇಖರಯ್ಯ ಅವರು ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಂತರ ಹೇಮಾದ್ರಿ ಎಜುಕೇಶನಲ್ ಟ್ರಸ್ಟ್ನ…

Read More

ತುಮಕೂರು ತೆಂಗು ಬೆಳೆಯುವ ಪ್ರದೇಶದಲ್ಲಿ ಕೊಬ್ಬರಿಯ ದರ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಕೊಬ್ಬರಿ ಬೆಳೆಗಾರರ ಹಿತ ಕಾಯುವಲ್ಲಿ ವಿಫಲವಾಗಿರುವ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ದ ಆಗಸ್ಟ್ ೨೧ ರಿಂದ ೧೬ರವರೆಗೆ ಕೊಬ್ಬರಿ ಬೆಳೆಯುವ ಎಲ್ಲಾ ತಾಲೂಕುಗಳಲ್ಲಿ ಬಂದ್ ನಡೆಸಲಾಗುವುದು ಎಂದು ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಆಗಸ್ಟ್ ೦೧ ರಂದು ಚಿಕ್ಕನಾಯಕನಹಳ್ಳಿ ತಾಲೂಕು ಕೇಂದ್ರದಲ್ಲಿ ಬಂದ್ ಆಚರಿಸಲಾಗುವುದು. ತದನಂತರದಲ್ಲಿ ತೆಂಗು ಬೆಳೆಯುವ ಸುಮಾರು ೩೩ ತಾಲೂಕು ಕೇಂದ್ರಗಳಲ್ಲಿಯೂ ಬಂದ್ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಇದಕ್ಕೆ ಸಾರ್ವಜನಿಕರು, ಕೊಬ್ಬರಿ ಮತ್ತು ತೆಂಗು ಬೆಳೆಗಾರರು ಸಹಕಾರ ನೀಡಿ, ಸರಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಬೇಕೆಂದರು. ಸುಮಾರು ೪೦ ವರ್ಷಗಳ ಹಿಂದೆ ಮುಕ್ತ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಕೊಬ್ಬರಿ ಬೆಲೆ ೯೯೦೦ ರೂ ಇತ್ತು.ನಲವತ್ತು ವರ್ಷಗಳಲ್ಲಿ ತೆಂಗು ಬೆಳೆಯಲು ಉಪಯೋಗಿಸುವ ಉಪಕರಣಗಳು, ಗೊಬ್ಬರ, ರಸಾಯನಿಕ ವಸ್ತುಗಳ ಬೆಲೆ ಎಷ್ಟು ಪ್ರಮಾಣ ದಲ್ಲಿ ಹೆಚ್ಚಾಗಿದೆ.ಆದರೆ ಕೊಬ್ಬರಿ…

Read More

ತುಮಕೂರು: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜೊತೆ ಕೌಶಲ್ಯವನ್ನು ರೂಢಿಸಿಕೊಳ್ಳುವುದರ ಮೂಲಕ ಮಾನಸಿಕವಾಗಿ ನಮಗೆ ಯಾವ ಕ್ಷೇತ್ರದಲ್ಲಿ ಕೆಲಸ ಮಾಡುವ ಸಾಮರ್ಥ್ಯವಿದೆ ಎಂಬುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಶ್ರೀನಿವಾಸ ಅಭಿಪ್ರಾಯಪಟ್ಟರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ರೋಟರಿ ಸೆಂಟ್ರಲ್ ತುಮಕೂರು ಇವರ ಸಹಯೋಗದೊಂದಿಗೆ ವಿಶ್ವ ಕೌಶಲ್ಯ ದಿನಾಚರಣೆ ಅಂಗವಾಗಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಬ್ಲಡ್ ಗ್ರೂಪಿಂಗ್ ಹಾಗೂ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಬ್ಲಡ್ ಗ್ರೂಪಿಂಗ್ ಮಾಡಿಸಿಕೊಳ್ಳಬೇಕು. ಅಪಘಾತ, ಯಾವುದೇ ವ್ಯಕ್ತಿಗಳಿಗೆ ತುರ್ತಾಗಿ ರಕ್ತದಾನ ಮಾಡಬೇಕಾದರೆ ಮೊದಲು ತಮ್ಮ ರಕ್ತದ ಗುಂಪನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು. ಪದವಿ ಮುಗಿಸಿದ ವಿದ್ಯಾರ್ಥಿಗಳು ಉದ್ದಿಮೆ ಸ್ಥಾಪಿಸುವ ಗುರಿಯನ್ನು ಹೊಂದಿದ್ದಲ್ಲಿ ಸಿಡಾಕ್ ಸಂಸ್ಥೆ ಉದ್ದಿಮೆ ಸ್ಥಾಪಿಸಲು ರೂಪುರೇಷೆ ಸಿದ್ದಪಡಿಸುವುದರ ಕುರಿತು ೨೧ ದಿನಗಳ…

Read More

ತುಮಕೂರು ಮಹಾನಗರದಿಂದ ಕೂಗಳೆತೆ ದೂರದಲ್ಲಿರುವ ಊರುಕೆರೆ ಗ್ರಾಮವು ಇತ್ತೀಚೆಗೆ ಬಹು ವೇಗವಾಗಿ ಬೆಳೆಯುತ್ತಿರುವ ಗ್ರಾಮವಾಗಿದೆ, ಈ ಗ್ರಾಮಕ್ಕೆ ಕಳೆದ ಎರಡು ಮೂರು ವರ್ಷಗಳಿಂದ ನಗರದ ಜನರು ಈ ಭಾಗದಲ್ಲಿ ಸೈಟುಗಳನ್ನು ಕೊಂಡು ಇಲ್ಲೇ ಮನೆಗಳನ್ನು ನಿರ್ಮಾಣ ಮಾಡುತ್ತಿರುವುದು ಕಂಡು ಬಂದಿದ್ದು, ಸೈಟುಗಳ ಬೆಲೆಯೂ ಸಹ ಗಗನಕ್ಕೇರಿದೆ. ಮೊದಲು ಈ ಭಾಗದಲ್ಲಿ ಕೇಳುವವರೇ ಇಲ್ಲದ ಜಾಗಗಳು ಇದೀಗ ಅವುಗಳಿಗೆ ಚಿನ್ನದ ಬೆಲೆ ಬಂದಿದೆ, ಅದಕ್ಕೆ ಕಾರಣ ವಸಂತನರಸಾಪುರ ಕೈಗಾರಿಕಾ ವಲಯ, ಏಕೆಂದರೆ ವಸಂತನರಸಾಪುರ ಮತ್ತು ತುಮಕೂರು ಮಧ್ಯದಲ್ಲಿ ಇರುವ ಈ ಗ್ರಾಮ ಎರಡಕ್ಕೂ ಸಂಪರ್ಕ ಸೇತುವೆಯಾಗಿದೆ. ಹೀಗಿರುವಲ್ಲಿ ಈ ಗ್ರಾಮ ಪಂಚಾಯಿತಿ ಕಾರ್ಯವೈಖರಿ ಮಾತ್ರ ಶೂನ್ಯ ಎಂಬುದು ಇಲ್ಲಿನ ಹೊಸ ನಿವಾಸಿಗಳ ಆಗ್ರಹವಾಗಿದೆ, ಏಕೆಂದರೆ ಈ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಮನೆಗಳು ಎಲ್ಲಾ ಊರುಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುತ್ತಿವೆ, ಪ್ರತಿಯೊಂದು ಸಂಪರ್ಕ ಪಡೆಯಲು ಗ್ರಾಮ ಪಂಚಾಯಿತಿಯ ಅನುಮೋದನೆ ಪಡೆದೇ ಮಾಡಬೇಕಾಗಿದೆ, ಜೊತೆಗೆ ಇಂತಿಷ್ಟು ತೆರಿಗೆಯನ್ನು ಸಹ ಕಟ್ಟಿಯೇ ಅವರು ಅಂಕಿತ ನೀಡುತ್ತಿದ್ದಾರೆ, ಜೊತೆಗೆ…

Read More