Author: News Desk Benkiyabale

ಬೆಂಗಳೂರು ಕರ್ನಾಟಕದ ನೂತನ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭ ಶನಿವಾರ ಮಧ್ಯಾಹ್ನ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೀಗಾಗಿ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೨.೩೦ ಗಂಟೆಯವರೆಗೆ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಅವುಗಳ ಹಾಗೂ ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ. ಸ್ಟೀನ್ ವೃತ್ತದ ಕಡೆಯಿಂದ ಸಿದ್ದಲಿಂಗಯ್ಯ ವೃತ್ತದ ಕಡೆಗೆ ಎಲ್ಲಾ ಮಾದರಿಯ ವಾಹನಗಳನ್ನು ನಿರ್ಭಂದಿಸಿದ್ದು, ರಸ್ತೆ ಬಳಕೆದಾರರು ಕ್ಲೀನ್ಸ್ ವೃತ್ತದಲ್ಲಿ ಎಡ ಅಥವಾ ಬಲ ತಿರುವು ಪಡೆದು ಲ್ಯಾವಲ್ಲೆ ರಸ್ತೆ ಅಥವಾ ಕ್ಲೀನ್ಸ್ ರಸ್ತೆಯ ಮೂಲಕ ಸಂಚರಿಸಬಹುದಾಗಿದೆ. ಬಾಳೇಕುAದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ಕಡೆಗೆ ತೆರಳುವ ವಾಹನಗಳನ್ನು ಪಟ್ಟಾ ಜಂಕ್ಷನ್‌ನಲ್ಲಿ ಪೊಲೀಸ್ ತಿಮ್ಮಯ್ಯ ವೃತ್ತದ ಕಡೆಗೆ ಡೈವರ್ಷನ್ ಮಾಡುವುದರಿಂದ ಬಿಎಂಟಿಸಿ ಹಾಗು ಇತರೆ ವಾಹನಗಳು ಪೊಲೀಸ್ ತಿಮ್ಮಯ್ಯ ವೃತ್ತದಲ್ಲಿ ಎಡ…

Read More

ತುಮಕೂರು ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಅತಿಯಾದ ಆತ್ಮವಿಶ್ವಾಸದ ಜೊತೆಗೆ, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡುಗಳ ಬಗ್ಗೆ ನಿರ್ಲಕ್ಷ ತೋರಿದ್ದೇ ಕಾರಣ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ತಿಳಿಸಿದ್ದಾರೆ. ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಎಂ.ಎಲ್.ಸಿ. ಚಿದಾನಂದಗೌಡ ಅಭಿಮಾನಿ ಬಳಗ ಹಾಗೂ ವಿಧಾನಪರಿಷತ್ ಸದಸ್ಯ ವೈ.ಎನ್.ನಾರಾಯಣಸ್ವಾಮಿ ಬಳಗದವತಿಯಿಂದ ತುಮಕೂರು ನಗರ ಮತ್ತು ಗ್ರಾಮಾಂತರ ಶಾಸಕರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಸರಕಾರದ ವಿರುದ್ದ ಇದ್ದ ಜನಾಕೋಶ್ರವನ್ನು ಅಷ್ಟಾಗಿ ಗಣನೆಗೆ ತೆಗೆದುಕೊಳ್ಳದೆ ಹೋಗಿದ್ದು ಸಹ ಪಕ್ಷದ ಸೋಲಿಗೆ ಕಾರಣವಾಯಿತು ಎಂದರು. ಬಿಜೆಪಿ ಪಕ್ಷದ ಹೊಸ ಪ್ರಯತ್ನದ ಫಲವಾಗಿ ಹೊಸಮುಖಗಳಿಗೆ ಟಿಕೇಟ್ ನೀಡಿದ್ದರಿಂದ ೫೩ ಜನರ ಹಿರಿಯರು ಪಕ್ಷ ಬಿಟ್ಟು ಹೊರ ನಡೆದರು.ಇದು ಒಂದು ರೀತಿಯ ಒಳ್ಳೆಯ ಬೆಳವಣಿಗೆಯಾದರೂ,ಅದರ ನಷ್ಟವನ್ನು ತುಂಬಿಕೊಳ್ಳಲು ನಮಗೆ ಸಮಯಾವಕಾಶ ದೊರೆಯಲಿಲ್ಲ.ನಮ್ಮ ಜಿಲ್ಲೆಯಲ್ಲಿಯೂ ಚಿಕ್ಕನಾಯಕನಹಳ್ಳಿಯ ಕೆ.ಎಸ್.ಕಿರಣಕುಮಾರ್,ಗುಬ್ಬಿಯ ಬೆಟ್ಟಸ್ವಾಮಿ ಮತ್ತು ತುಮಕೂರು ನಗರದ ಎಸ್.ಶಿವಣ್ಣ ಅವರುಗಳು ಪಕ್ಷದಿಂದ ಹೊರಹೋಗದಂತೆ ತಡೆಯುವ ಪ್ರಯತ್ನ ಆಗಬೇಕಿತ್ತು.ಇದರಿಂದ ನಾವುಗಳು ಐದು ಕ್ಷೇತ್ರಗಳನ್ನು…

Read More

ಕೊರಟಗೆರೆ ಸಸ್ಯ ಸಂಜೀವಿನಿ ಎಂದೇ ಪ್ರಸಿದ್ಧಿಯನ್ನು ಪಡೆದಿರುವ ಸಿದ್ದರಬೆಟ್ಟದಲ್ಲಿ ಪ್ಲಾಸ್ಟಿಕ್ ಎಂಬ ಮಹಾಮಾರಿ ಮಿತಿಮೀರಿ ತುಂಬಿಕೊಳ್ಳುತ್ತದೆ. ಸ್ವಚ್ಛತೆಯ ಬಗ್ಗೆ ಅರಣ್ಯ ಇಲಾಖೆಯ ಉದಾಸೀನತೆ ಎದ್ದು ಕಾಣುತ್ತಿದೆ. ಸಿದ್ದರಬೆಟ್ಟ ಕ್ಷೇತ್ರವು ತುಮಕೂರಿನ ಪ್ರಸಿದ್ಧ ಐತಿಹಾಸಿಕ ಸ್ಥಳಗಳಲ್ಲಿ ಒಂದಾಗಿದೆ. ಟ್ರಕಿಂಗ್ ಗೆ ಎಂದು ವಾರಾಂತ್ಯದಲ್ಲಿ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಮತ್ತು ಭಕ್ತಾದಿಗಳು ಈ ಸ್ಥಳಕ್ಕೆ ಆಗಮಿಸುತ್ತಾರೆ. ಅವರು ತರುವಂತಹ ಆಹಾರದ ಪೊಟ್ಟಣಗಳು, ಪ್ಲಾಸ್ಟಿಕ್ ಬಾಟಲಿಗಳು ಮತ್ತು ಇತರ ವಸ್ತುಗಳನ್ನು ಎಲ್ಲೆಂದರಲ್ಲಿ ಮನಬಂದAತೆ ಎಸೆಯುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಇಲ್ಲಿ ಸರಿಯಾದ ಕಸದ ಬುಟ್ಟಿಗಳ ವ್ಯವಸ್ಥೆ ಇಲ್ಲ. ಇರುವ ಒಂದೆರಡು ಕಸ್ತ ಬುಟ್ಟಿಗಳು ತುಂಬಿಹೋಗಿ ತಿಂಗಳುಗಳೇ ಕಳೆದಿವೆ. ಬೆಟ್ಟದ ತುಂಬಿಲ್ಲ ಪ್ಲಾಸ್ಟಿಕ್ ಹರಡಲು ಪ್ರಾರಂಭಿಸಿದೆ. ಬೆಟ್ಟವನ್ನು ಏರುವಂತಹ ಪ್ರವಾಸಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಇದು ಒಂದು ಕಡೆಯಾದರೆ, ಇನ್ನೂ ನಮ್ಮ ಅರಣ್ಯ ಇಲಾಖೆಯಂತೂ ಸ್ವಚ್ಛತೆಯನ್ನು ಕಾಪಾಡಿ ಎಂಬ ಬಿತ್ತಿ ಚಿತ್ರಗಳನ್ನು ಬರೆಸುವುದಷ್ಟೇ ಅದರ ಕೆಲಸವಾಗಿದೆ. ಸ್ವಚ್ಛತೆಯ ಕೆಲಸ ಮಾತ್ರ ಮಾಡುತ್ತಿಲ್ಲ. ಬಂಡೆಗಳ ನಡುವೆ ಪ್ಲಾಸ್ಟಿಕ್ ರಾಶಿ…

Read More

ಮಧುಗಿರಿ ತಾಲೂಕಿನ ಎಲ್ಲಾ ಪಿಡಿಓ ಗಳು ಸಮರ್ಪಕವಾಗಿ ಕೆಲಸ ನಿರ್ವಹಿಸಿ, ಸರ್ಕಾರದ ಕೆಲಸ ಆದರೆ ಆಯ್ತು, ಹೋದರೆ ಹೋಯಿತು ಎಂಬ ಬೇಜವಾಬ್ದಾರಿ ಬೇಡ ಜನರಿಗೆ ತೊಂದರೆಯಾಗದAತೆ ಕೆಲಸ ಮಾಡಿ ಎಂದು ಶಾಸಕ ಕೆ.ಎನ್. ರಾಜಣ್ಣ ತಾಕೀತು ಮಾಡಿದರು. ಪಟ್ಟಣದ ತಾ.ಪಂ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಕೆಲಸ ನಿರ್ವಹಿಸಿ. ಗ್ರಾಮಗಳಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಿ, ವಾಟರ್ ಮನ್ ಗಳು ಉತ್ತಮವಾಗಿ ಕೆಲಸ ನಿರ್ವಹಿಸಿದರೆ ನಿಮಗೇ ಒಳ್ಳೆಯ ಹೆಸರು ಬರುತ್ತದೆ. ವಾರದಲ್ಲಿ ಒಂದು ದಿನ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಿಗೆ ಬೇಟಿ ನೀಡಿ ಪರಿಶೀಲಿಸಿ. ಶಾಲಾ ಕೊಠಡಿಗಳು, ಅಂಗನವಾಡಿಗಳು ಇನ್ನಿತರೆ ಶಾಶ್ವತ ಕಾಮಗಾರಿ ಕೆಲಸಗಳನ್ನು ಹೆಚ್ಚಾಗಿ ನಿರ್ವಹಿಸಿ. ಗ್ರಾಮದ ಶಾಲೆಗಳಲ್ಲಿ ಶೌಚಾಲಯ, ಕುಡಿಯುವ ನೀರಿನ ಕೊರತೆ ಬಾರದಂತೆ ಕೆಲಸ ನಿರ್ವಹಿಸಿ, ಬಾಲಕ, ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ಇರುವಂತೆ ನೋಡಿಕೊಳ್ಳಿ. ನಾನು ಯಾರಿಗೂ ತೊಂದರೆ ನೀಡಲು…

Read More

ತುಮಕೂರು ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ೧೩೫ ಸ್ಥಾನಗಳ ಸ್ಪಷ್ಟ ಬಹುಮತ ಬರಲು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರ ಪರಿಶ್ರಮ ಬಹಳ ದೊಡ್ಡದಿದೆ. ಅದರಲ್ಲೂ ಸಿದ್ದರಾಮಯ್ಯನವರು ಪರಿಶ್ರಮ ಜಾಸ್ತಿಯಿದ್ದು, ಈ ಬಾರಿ ಸಿದ್ದರಾಮಯ್ಯವರನ್ನೇ ಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡಬೇಕು ಎಂದು ನಗರದಲ್ಲಿ ಕುರುಬರ ಸಂಘಟನೆಗಳ ಮುಖಂಡರು ಕಾಂಗ್ರೆಸ್ ಹೈಕಮಾಂಡ್‌ನ್ನು ಒತ್ತಾಯಿಸಿದ್ದಾರೆ. ನಗರದ ಬಿ.ಹೆಚ್. ರಸ್ತೆಯಲ್ಲಿರುವ ಶ್ರೀ ಕಾಳಿದಾಸ ವಿದ್ಯಾವರ್ಧಕ ಸಂಘದ ಕಚೇರಿ ಮುಂಭಾಗ ಜಮಾಯಿಸಿದ ಶ್ರೀ ಕಾಳಿದಾಸ ವಿದ್ಯಾವರ್ಧಕ ಸಂಘ, ಜಿಲ್ಲಾ ಕುರುಬರ ಸಂಘ, ಸಂಗೊಳ್ಳಿ ರಾಯಣ್ಣನ ಸಂಘ, ಕನಕ ಪತ್ತಿನ ಸಹಕಾರ ಸಂಘ, ಕನಕ ಪತ್ತಿನ ಮಹಿಳಾ ಸಹಕಾರ ಸಂಘ, ಕವಿರತ್ನ ಕಾಳಿದಾಸ ಸಂಘ ಸೇರಿದಂತೆ ವಿವಿಧ ಕುರುಬರ ಸಂಘಟನೆಗಳ ಅಧ್ಯಕ್ಷರು, ಪದಾದಿಕಾರಿಗಳು ಹಾಗೂ ಮುಖಂಡರು ಈ ಬಾರಿ ಸಿದ್ದರಾಮಯ್ಯನವರನ್ನೇ ಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತೊಂದರೆಯಾಗಲಿದೆ ಎಂಬ ಎಚ್ಚರಿಕೆಯನ್ನು ನೀಡಿದರು. ಶ್ರೀ ಕಾಳಿದಾಸ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮೈಲಪ್ಪ…

Read More

ತುಮಕೂರು: ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ನನಗೆ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಜನತೆ ನನಗೆ ಆಶೀರ್ವಾದ ಮಾಡಿದ್ದಾರೆ.ಅಲ್ಲದೆ ಪಕ್ಷದ ಕಾರ್ಯಕರ್ತರು, ಮುಖಂಡರು ಹಗಲಿರುಳೆನ್ನದೆ ದುಡಿದು ನನ್ನನ್ನು ವಿಧಾನಸಭೆಗೆ ಆಯ್ಕೆ ಮಾಡಿ ಕಳುಹಿಸಿದ್ದಾರೆ.ಅವರ ಆಶೀರ್ವಾದದ ಜೊತೆಗೆ,ಶ್ರೀಸಿದ್ದಗಂಗಾ ಶ್ರೀಗಳ ಆಶೀರ್ವಾದಕ್ಕಾಗಿ ಇಲ್ಲಿಗೆ ಬಂದಿದ್ದೇನೆ ಎಂದು ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ತಮ್ಮ ಕುಟುಂಬದ ಸದಸ್ಯರೊಂದಿಗೆ ಇಂದು ಸಿದ್ದಗಂಗಾ ಮಠಕ್ಕೆ ಆಗಮಿಸಿ,ಹಿರಿಯ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿ, ಸಿದ್ದಲಿಂಗಸ್ವಾಮೀಜಿಗಳ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ತಂದೆಯವರು ಯಾವುದೇ ಒಳ್ಳೆಯ ಕೆಲಸ ಮಾಡುವ ಮುನ್ನ ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆಯುವುದು ವಾಡಿಕೆ. ಹಾಗಾಗಿ ನಾನು ಕೂಡ ವಿಧಾನಸಭೆ ಪ್ರವೇಶಿಸುವ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದೇನೆ ಎಂದರು. ಬಿಜೆಪಿ ಸೋಲಿಗೆ ಹಲವಾರು ವಿಚಾರಗಳು ಕಾರಣವಾಗಿದ್ದು, ಅವುಗಳ ಬಗ್ಗೆ ಪಕ್ಷದ ಮುಖಂಡರು ಈಗಾಗಲೇ ಚರ್ಚೆ ನಡೆಸುತಿದ್ದಾರೆ.ಮುಂದಿನ ದಿನಗಳಲ್ಲಿ ಯಾವ ರೀತಿ ಪಕ್ಷ ಸಂಘಟನೆ ಮಾಡಬೇಕು ಎಂಬುದರ ಕುರಿತು ಚರ್ಚೆ…

Read More

ತುಮಕೂರು ಸಿದ್ದಗಂಗಾ ಮಠ ಒಳ್ಳೆಯ ಕೆಲಸಗಳಿಗೆ ಸ್ಪೂರ್ತಿ ನೀಡುವಂತಹ ಮಠ. ಹಾಗಾಗಿಯೇ ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದು ನನ್ನ ಶಾಸಕ ಜವಾಬ್ದಾರಿಯನ್ನು ಇಂದಿನಿAದ ಆರಂಭಿಸುತ್ತಿದ್ದೇನೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶಗೌಡ ತಿಳಿಸಿದರು. ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಹಿರಿಯ ಶ್ರೀಗಳಾದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ೨೦೦೮ರಲ್ಲಿ ಶಾಸಕನಾಗಿ ಆಯ್ಕೆಯಾದ ಸಂದರ್ಭದಲ್ಲಿಯೂ ಡಾ. ಶ್ರೀ ಶಿವಕುಮಾರಸ್ವಾಮಿಜೀಗಳ ಆಶೀರ್ವಾದ ಪಡೆದು ಕೆಲಸ ಆರಂಭಿಸಿದ್ದೆ. ಈಗಲೂ ಕೂಡ ಅದೇ ಕೆಲಸವನ್ನು ಮುಂದುವರೆಸಿದ್ದೇನೆ ಎಂದರು. ಸಿದ್ದಗAಗಾ ಮಠದ ಆಶೀರ್ವಾದಿಂದ ೨೦೦೮ ಮತ್ತು ೨೦೧೩ ರಲ್ಲಿ ಶಾಸಕನಾಗಿ ಆಯ್ಕೆಯಾಗಲು ಅವಕಾಶವಾಯಿತು. ಆ ವೇಳೆ ಕ್ಷೇತ್ರದ ಜನರು ಬಹುದಿನದ ಬೇಡಿಕೆಯಾಗಿದ್ದ ಹೆಬ್ಬೂರು-ಗೂಳೂರು ಏತನೀರಾವರಿ ಜಾರಿ, ಶಾಲೆಗಳ ಅಭಿವೃದ್ದಿ, ರೈತರಿಗೆ ನಿರಂತರ ವಿದ್ಯುತ್ ಹೀಗೆ, ಹತ್ತು ಹಲವು ಅಭಿವೃದ್ದಿ ಕಾರ್ಯಕ್ರಮಗಳನ್ನು ಕ್ಷೇತ್ರದಲ್ಲಿ ನಡೆಸಲು…

Read More

ತುರುವೇಕೆರೆ ತುರುವೇಕೆರೆ ವಿಧಾನಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಎಲ್ಲಾ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ. ಪಟ್ಟಣದ ಸರ್ಕಾರಿ ಪಧವಿ ಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ ನೆಡೆದ ಮಸ್ಟಿರಿಂಗ್ ಕೇಂದ್ರದಲ್ಲಿ ಮಾತನಾಡಿದ ಅವರು ಕ್ಷೇತ್ರದಲ್ಲಿ ಗಂಡು ಮತದಾರರು 90932 ಹೆಣ್ಣು 91718 ಇತರೆ 2 ಸೇರಿ ಒಟ್ಟು 182652 ಮತದಾರಿದ್ದಾರೆ, ಕ್ಷೇತ್ರದ 229 ಮತಗಟ್ಟೆಗಳ ಪೈಕಿ 46 ಸೂಕ್ಷ್ಮ ಮತ ಕೇಂದ್ರಗಳು 5 ಸಖಿ ಮತಗಟ್ಟೆ, ಮೂನಿಯೂರು ವಿಶೇಷ ಚೇತನ ಮತಗಟ್ಟೆ, ಗೋಣಿ ತುಮಕೂರು, ಮಾವಿನಕೆರೆ ಯುವ ಮತಗಟ್ಟೆಗಳನ್ನು ಮಾಡಲಾಗಿದೆ. ಒಂದು ಮತಗಟ್ಟೆಗೆ ಪಿಆರ್.ಓ ಎಪಿಆರ್.ಓ 1 ಹೋಂ ಗಾರ್ಡ್, 1 ಪೊಲೀಸ್ ಪೇದೆಯೊಂದಿಗೆ ಸೇರಿ 6 ರಿಂದ 10 ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗುತ್ತದೆ. ಸೂಕ್ಷ್ಮ ಮತಗಟ್ಟೆಗಳಿಗೆ ವೆಬ್ ಕ್ಯಾಮರಾಗಳನ್ನು ಅಳವಡಿಸಿ ಪ್ರತಿಯೊಬ್ಬರ ಚಲನ ವಲನಗಳ ಬಗ್ಗೆ ನಿಗಾ ವಹಿಸಲಾಗಿದೆ. ಎಲ್ಲಾ ಮತಘಟ್ಟೆಗಳಲ್ಲೂ ವಿಡಿಯೋ ಚಿತ್ರೀಕರಣದೊಂದಿಗೆ ಸೂಕ್ಷ್ಮವಾಗಿ ಗಮನಿಸಲಾಗುವುದು. 1 ಕೆಎಸ್.ಆರ್.ಪಿ. ತುಕಡಿ ಸೇರಿ ಪೋಲೀಸರು ಸೇರಿ 500…

Read More

ತುಮಕೂರು ರಾಜ್ಯದಲ್ಲಿ ಇಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ 2683 ಮತಗಟ್ಟೆಗಳಲ್ಲಿ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು ಚುನಾವಣಾ ಆಯೋಗದ ಸೂಚನೆ ಮೇರೆಗೆ ಜಿಲ್ಲಾಡಳಿತ ಸಕಲ ಸಿದ್ದತೆ ಕೈಗೊಂಡಿದೆ. ನಾಳೆ ಜಿಲ್ಲೆಯ 2683 ಮತಗಟ್ಟೆಗಳಲ್ಲಿ ನಡೆಯುವ ಮತದಾನ ಕಾರ್ಯಕ್ಕೆ 11644 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಈ ಅಧಿಕಾರಿಗಳು ಮತ್ತು ಸಿಬ್ಬಂದಿ ಇಂದು ಜಿಲ್ಲಾ ಕೇಂದ್ರ ತುಮಕೂರು ಸೇರಿದಂತೆ 10 ತಾಲ್ಲೂಕು ಕೇಂದ್ರಗಳಿಂದಲೂ 11 ವಿಧಾನಸಭಾ ಕ್ಷೇತ್ರಗಳಿಗೆ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್‍ಗಳನ್ನು ಪಡೆದು ಬಸ್‍ಗಳಲ್ಲಿ ನಿಯೋಜನೆಗೊಂಡಿರುವ ಮತಗಟ್ಟೆಗಳಿಗೆ ತೆರಳಿದರು. ಚಿಕ್ಕನಾಯಕನಹಳ್ಳಿ ಕ್ಷೇತ್ರದ 262 ಮತಗಟ್ಟೆಗಳಿಗೆ 1152 ಅಧಿಕಾರಿಗಳು ಮತ್ತು ಸಿಬ್ಬಂದಿ, ತಿಪಟೂರು ಕ್ಷೇತ್ರದ 233 ಮತಗಟ್ಟೆಗಳಿಗೆ 1024 ಅಧಿಕಾರಿಗಳು, ತುರುವೇಕೆರೆ ಕ್ಷೇತ್ರದ 229 ಮತಗಟ್ಟೆಗಳಿಗೆ 1008 ಅಧಿಕಾರಿಗಳು, ಕುಣಿಗಲ್ ಕ್ಷೇತ್ರದ 264 ಮತಗಟ್ಟೆಗಳಿಗೆ 1160 ಅಧಿಕಾರಿಗಳು, ತುಮಕೂರು ನಗರ ಕ್ಷೇತ್ರದ 254 ಮತಗಟ್ಟೆಗಳಿಗೆ 1116 ಅಧಿಕಾರಿಗಳು ಮತ್ತು ಸಿಬ್ಬಂದಿ, ತುಮಕೂರು ಗ್ರಾಮಾಂತರ…

Read More

ತುಮಕೂರು ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 11 ವಿಧಾನಸಭಾ ಮತಕ್ಷೇತ್ರಗಳಿಗೆ ಮೇ.10 ರಂದು ಮತದಾನ ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಜಿಲ್ಲೆಯ ಮತದಾರರು ಚುನಾವಣಾ ಗುರುತಿನ ಚೀಟಿ (ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗದ ನಿಗಧಿಪಡಿಸಿರುವ 12 ಪರ್ಯಾಯ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಿಳಿಸಿದರು. ಮತದಾನಕ್ಕೆ ಪರ್ಯಾಯ ಗುರುತಿನ ಚೀಟಿ ಅಥವಾ ದಾಖಲೆಗಳು: ಮತದಾರರು ಮತ ಚಲಾಯಿಸಲು ಮತಗಟ್ಟೆಗಳಿಗೆ ಹೋದ ಸಂದರ್ಭದಲ್ಲಿ ಅವರು ಹೊಂದಿರುವ ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ(ಎಪಿಕ್ ಕಾರ್ಡ್)ಯನ್ನು ಹಾಜರುಪಡಿಸಬೇಕು, ಒಂದು ವೇಳೆ ಹಾಜರುಪಡಿಸಲು ಸಾಧ್ಯವಿಲ್ಲದಿದ್ದಲ್ಲಿ ಈ ಕೆಳಕಂಡ ಯಾವುದಾದರೂ ಒಂದು ಪರ್ಯಾಯ ದಾಖಲಾತಿಯನ್ನು ಮತಗಟ್ಟೆಗೆ ಬರುವ ಮತದಾರರನ್ನು ಗುರುತಿಸುವುದಕ್ಕಾಗಿ ಕಡ್ಡಾಯವಾಗಿ ಹಾಜರು ಪಡಿಸಬಹುದಾಗಿದೆ. ಆಧಾರ್ ಕಾರ್ಡ್, ಎಂಎನ್‍ಆರ್‍ಇಜಿಎ(ನರೇಗಾ) ಜಾಬ್ ಕಾರ್ಡ್, ಬ್ಯಾಂಕ್ ಹಾಗೂ ಅಂಚೆ ಕಚೇರಿ ನೀಡಿದ ಭಾವಚಿತ್ರವಿರುವ ಪಾಸ್‍ಬುಕ್, ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ…

Read More