ತುಮಕೂರು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ವೀರಶೈವ – ಲಿಂಗಾಯಿತ ಸಮುದಾಯದ ಕ್ಷೇತ್ರದ ಸಮಗ್ರ ಅಭಿವೃದ್ದಿಗಾಗಿ ಬಿ.ಸುರೇಶಗೌಡರನ್ನು ಬೆಂಬಲಿಸುವಂತೆ ಸಂಸದ ಜಿ.ಎಸ್.ಬಸವರಾಜು ಮನವಿ ಮಾಡಿದ್ದಾರೆ. ಗ್ರಾಮಾಂತರ ಬಿಜೆಪಿ ಕಚೇರಿ ಶಕ್ತಿಸೌಧದಲ್ಲಿ ಆಯೋಜಿಸಿದ್ದ ವೀರಶೈವ-ಲಿಂಗಾಯಿತ ಮುಖಂಡರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತಿದ್ದ ಅವರು, ಕಳೆದ ಚುನಾವಣೆಯಲ್ಲಿ ಕೆಲವರು ಮಾಡಿದ ಅಪಪ್ರಚಾರದಿಂದಾಗಿ ವೀರಶೈವ ಸಮಾಜ ಸುರೇಶಗೌಡ ಅವರನ್ನು ಕೈಬಿಟ್ಟ ಪರಿಣಾಮ ಸಾವಿರ ಮತಗಳ ಅಂತರದಿಂದ ಸೋಲು ಅನುಭವಿಸಬೇಕಾಯಿತು. ಈ ಬಾರಿ ಹಾಗಾಗದಂತೆ ಎಚ್ಚರಿಕೆ ವಹಿಸಬೇಕೆಂದರು. ಶಾಸಕ ಬಿ.ಸುರೇಶಗೌಡ ಅವರು ತಮ್ಮ 10 ವರ್ಷಗಳ ಅವಧಿಯಲ್ಲಿ ಹಲವಾರು ಯೋಜನೆಗಳನ್ನು ತಂದು ಕೆಲಸ ಮಾಡಿದ್ದಾರೆ. ಜಾತ್ಯಾತೀತವಾಗಿ ಕೆಲಸ ಮಾಡಿ,ಪೈಲೆಟ್ ಪ್ರಾಜೆಕ್ಟ್ ಮೂಲಕ ಪ್ರತಿ ರೈತರ ಪಂಪ್‍ಸೆಟ್‍ಗೆ ಪ್ರತ್ಯೇಕ ಟಿ.ಸಿ., ಮನೆ ಮನೆಗೆ ಕುಡಿಯುವ ನೀರು,ರಸ್ತೆ,ಚರಂಡಿ ಕಾಮಗಾರಿ ಕೈಗೊಂಡು ಕ್ಷೇತ್ರವನ್ನು ಮಾದರಿಯಾಗಿ ಅಭಿವೃದ್ದಿ ಪಡಿಸಿದ್ದಾರೆ. ಹಾಗಾಗಿ ಅವರನ್ನು ವೀರಶೈವ-ಲಿಂಗಾಯಿತ ಸಮಾಜ ಈ ಬಾರಿ ಕೈ ಹಿಡಿದರೆ,ಶಾಸಕರಾಗಿ,ಮಂತ್ರಿಯೂ ಆಗುವ ಅವಕಾಶ ವಿದೆ ಎಂದು ಜಿ.ಎಸ್.ಬಸವರಾಜು ನುಡಿದರು. ರವಿಶಂಕರ್ ಹೆಬ್ಬಾಕ ಮಾತನಾಡಿ, ಬಿಜೆಪಿ ಪಕ್ಷ…
Author: News Desk Benkiyabale
ಬೆಂಗಳೂರು ದಿನಗಳದಂತೆ ಕರ್ನಾಟಕದ ಚುನಾವಣಾ ಕಣ ರಂಗೇರುತ್ತಿದ್ದು, ಎಲ್ಲಾ ಪಕ್ಷಗಳು ತಮ್ಮ ಸ್ಟಾರ್ ಪ್ರಚಾರಕರೊಂದಿಗೆ ಮತದಾರ ಪ್ರಭುಗಳನ್ನು ಆಕರ್ಷಿಸಲು ಬಗೆ ಬಗೆಯ ವೇಷಭೂಷಣಗಳನ್ನು ಹಾಕುತ್ತಿದ್ದಾರೆ. ಭಾರತೀಯ ಜನತಾ ಪಕ್ಷ ತನ್ನ ರಾಷ್ಟ್ರೀಯ ನಾಯಕರ ಮುಂದಾಳತ್ವದಲ್ಲಿ ತಮ್ಮ ಜನಪರ ಅಭಿವೃದ್ಧಿ ಕಾರ್ಯಗಳ ಮೂಲಕ ಕರ್ನಾಟಕದ ಪ್ರಜ್ಞಾವಂತ ಮತದಾರರನ್ನು ತಲುಪುತ್ತಿದ್ದಾರೆ. ಕರ್ನಾಟಕ ಚುನಾವಣೆಗೆ ರೂಪುರೇಷೆಗಳನ್ನು ನಿರ್ಮಿಸಿರುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವ, ಚುನಾವಣಾ ಚಾಣಕ್ಯರಂದೆ ಖ್ಯಾತಿ ಪಡೆದ ಶ್ರೀ ಅಮಿತ್ ಶಾ ಈ ಬಾರಿ ಕರ್ನಾಟಕದಲ್ಲಿ ಪೂರ್ಣ ಬಹುಮತದ ಭಾರತೀಯ ಜನತಾ ಪಕ್ಷದ ಸರ್ಕಾರವನ್ನು ರಚಿಸಲು ಸಕಲ ಸಿದ್ಧತೆಗಳೊಂದಿಗೆ ಕೆಲ ದಿನಗಳಿಂದ ಕರ್ನಾಟಕದಲ್ಲಿಯೇ ಬೀಡು ಬಿಟ್ಟಿದ್ದಾರೆ. ಈ ವರ್ಷದ ಆರಂಭದಿಂದ ಕರ್ನಾಟಕದಲ್ಲಿ ಸುಮಾರು 20 ದಿನಗಳಿಗೂ ಹೆಚ್ಚು ಬಾರಿ ಸಾರ್ವಜನಿಕ ಸಭೆ ಮತ್ತು ರೋಡ್ ಶೋಗಳ ಮೂಲಕ ಭಾಜಪದ ಪರವಾಗಿ ಅದ್ದೂರಿ ಪ್ರಚಾರ ಮಾಡುತ್ತಿದ್ದಾರೆ. ಕರ್ನಾಟಕದ ತಳಮಟ್ಟದ ಸಮಸ್ಯೆಗಳನ್ನು ಅರಿತಿರುವ ಅಮಿತ್ ಷಾ ಅವರು ಕರ್ನಾಟಕದ ಎಲ್ಲಾ ಭಾಗಗಳನ್ನು ಸುತ್ತುತ್ತಾ ಭಾಜಪದ ಪರವಾಗಿ…
ತಮಕೂರು ಬಿಜೆಪಿ ಸಮಾವೇಶದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ತಮಕೂರಿಗೆ ಆಗಮಿಸಿದ್ದು. ವಿವಿ ಹೆಲಿಪ್ಯಾಡ್‍ನಿಂದ ಸಮಾವೇಶಕ್ಕೆ ತೆರಳುವ ದಾರಿಯುದ್ದಕ್ಕೂ ಮೋದಿ ರೋಡ್ ಶೋ ನಡೆಸಿದರು. ಅಪಾರ ಸಂಖ್ಯೆಯಲ್ಲಿ ಜನ ಸಾಗರವೇ ಸೇರಿದ್ದು, ಹೋವಿನ ಮಳೆ ಸುರಿಸಿದರು. ನಗರದ ತುಂಬೆಲ್ಲಾ ಬಿಜೆಪಿ ಬಾವುಟಗಳು ರಾರಾಜಿಸುತ್ತಿದ್ದವು. ಇಕ್ಕೆಲಗಳಲ್ಲಿ ನಿಂತ ಜನರು ಮೋದಿಯತ್ತಾ ಕೈಬಿಸಿ ಜೈ ಮೋದಿ ಎಂದು ಘೋಷಣೆಗಳನ್ನು ಕೂಗಿದರು. ಐಎಎಫ್‍ನ ಒI-17 ಹೆಲಿಕಾಪ್ಟರ್‍ನಲ್ಲಿ ಆಗಮಿಸಿದ ಪ್ರಧಾನಿಯನ್ನು ಬಿಜೆಪಿ ಮುಖಂಡರು ಸ್ವಾಗತಿಸಿದರು. ತುಮಕೂರಿನ ಸರ್ಕಾರಿ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡರು. ವೇದಿಕೆ ಮೇಲೆ ಮೋದಿಯವರಿಗೆ ಸುರೇಶ್‍ಗೌಡರು ಹಾರ, ಮಾಧುಸ್ವಾಮಿಯವರು ಶಾಲು, ರವಿಶಂಕರ್ ಹೆಬ್ಬಾಕರವರು ಕೃಷ್ಣಾರ್ಜುನ ಫೋಟೊ ನೀಡುವುದರ ಮೂಲಕ ಇನ್ನು ಹಲವಾರು ಬಿಜೆಪಿ ಮುಖಂಡರು ಅದ್ಧೂರಿಯಾಗಿ ಸ್ವಾಗತ ಕೋರಿದರು. ಕಲ್ಪತರು ನಾಡಿಗೆ ಕನ್ನಡದಲ್ಲೇ ನಮಸ್ಕರಿಸಿದ ಮೋದಿ, ಸಿದ್ಧಗಂಗಾ ಮಠ, ಆದಿಚುಂಚನಗಿರಿ ಮಠದ ಶ್ರೀಗಳನ್ನು ಸ್ಮರಿಸಿದರು. ಸಾಧುಸಂತರ ಹಾಗೂ ಜನರ ಆಶೀರ್ವಾದದಿಂದ ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದರು.…
ತುಮಕೂರು ಭರಣಿ ಮಳೆ ಹುಯ್ದರೆ ಧರಣಿಯೆಲ್ಲಾ ಆರಂಭ ಎಂಬ ಗಾದೆ ಮಾತಿದೆ. ಹಾಗಾಗಿ ಧರಣಿ ಮಳೆಗಾಗಿ ರೈತ ಸಮೂಹ ಆಗಸದತ್ತ ಮುಖಮಾಡಿ ಕುಳಿತಿದ್ದ ಸಂದರ್ಭದಲ್ಲಿ ರಾತ್ರಿಯಿಡೀ ಧಾರಾಕಾರ ವರ್ಷಧಾರೆಯಿಂದ ಹಳ್ಳಿಗಳಲ್ಲಿ ತೋಟಗಳು, ಕೃಷಿ ಭೂಮಿಗಳು ನೀರು ತುಂಬಿದ್ದರೆ, ನಗರ ಪ್ರದೇಶಗಳಲ್ಲಿನ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಕಳೆದ ವರ್ಷ ನಿಗದಿಗಿಂತ ಹೆಚ್ಚು ಮಳೆ ಸುರಿದ ರೀತಿಯಲ್ಲೆ ರಾತ್ರಿಯೂ ವರ್ಷಧಾರೆ ಸುರಿದಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಆದರೆ ನಗರ ಪ್ರದೇಶದ ಕೆಲ ತಗ್ಗು ಪ್ರದೇಶಗಳು ಜಲಾವೃತಗೊಂಡಿರುವುದರಿಂದ ಆ ಭಾಗದ ಜನರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ 3-4 ತಿಂಗಳಿಂದ ವರ್ಷಧಾರೆ ಇಲ್ಲದೆ ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನಸಾಮಾನ್ಯರಿಗೆ ರಾತ್ರಿ 11 ಗಂಟೆಗೆ ಆರಂಭವಾದ ಮಳೆ ಮಧ್ಯರಾತ್ರಿ 2 ಗಂಟೆವರೆಗೂ ಧಾರಾಕಾರವಾಗಿ ಸುರಿದಿದ್ದು, ನಂತರ ಮುಂಜಾನೆ ವರೆಗೂ ತುಂತುರು ಮಳೆಯಾಯಿತು. ಇಡೀ ರಾತ್ರಿ ವರ್ಷಧಾರೆ ಸುರಿದಿದ್ದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ತಾಕುಗಳು, ಅಡಿಕೆ, ತೆಂಗಿನ ತೋಟಗಳು ಜಲಾವೃತಗೊಂಡರೂ ಸಹ ಬೇಸಿಗೆಯ ಬಿಸಿಲಿನ ಝಳದಿಂದ ತತ್ತರಿಸಿದ್ದ…
ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರು ತಮ್ಮ ಪಕ್ಷದ ಅಭ್ಯರ್ಥಿ ಜ್ಯೋತಿಗಣೇಶ್ ಪರ ಮನೆ ಮನೆಗೆ ತೆರಳಿ ಮತಯಾಚಿಸಿದರು. ನಗರದ ಸಪ್ತಗಿರಿ ಬಡಾವಣೆ ಹಾಗೂ ನಳಂದ ಸ್ಕೂಲ್ ರಸ್ತೆಯಲ್ಲಿ ಮನೆ ಮನೆಗೆ ಭೇಟಿ ನೀಡಿ ಪಕ್ಷದ ಕರಪತ್ರಗಳನ್ನು ಹಂಚಿ ಮತಯಾಚಿಸಿದ ನಂತರ ಮಾತನಾಡಿದ ಕಟೀಲ್ ಅವರು, ಇಡೀ ಜಗತ್ತೇ ಮೆಚ್ಚಿರುವ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಪ್ರಿಯಾಂಕ ಖರ್ಗೆಯವರು ಕೂಡಲೇ ಪ್ರಧಾನಿಗಳ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರು, ಈ ಬಾರಿ ಕಲ್ಬುರ್ಗಿ ಕ್ಷೇತ್ರದ ಜನ ಪ್ರಿಯಾಂಕ ಖರ್ಗೆಯವರನ್ನು ಅಲ್ಲಿಂದ ಓಡಿಸುತ್ತಾರೆ ಎಂದು ತಿರುಗೇಟು ನೀಡಿದ್ದಾರೆ. ಈಗಾಗಲೇ ಪ್ರಿಯಾಂಕ ಖರ್ಗೆಯವರ ತಂದೆ ಮಲ್ಲಿಕಾರ್ಜುನ ಖರ್ಗೆಯವರನ್ನು ಅಲ್ಲಿನ ಜನ ಲಾಯಕ್ ಅಲ್ಲ ಎಂದು ಹೇಳಿ ಕಲ್ಬುರ್ಗಿಯಿಂದ ಹೊರಗಿಟ್ಟಿದ್ದಾರೆ. ಹಾಗೆಯೇ ಈ ಚುನಾವಣೆಯಲ್ಲಿ ಪ್ರಿಯಾಂಕ ಖರ್ಗೆಯವರನ್ನು ಸಹ ಅಲ್ಲಿಂದ ಓಡಿಸುತ್ತಾರೆ ಎಂದರು. ನರೇಂದ್ರ ಮೋದಿಯವರಿಗೆ ದೇಶದ ಜನ ಎರಡೆರಡು ಬಾರಿ ಬಹುಮತ…
ತುಮಕೂರು ಪ್ರಧಾನಿ ನರೇಂದ್ರ ಮೋದಿಯವರು ನುಡಿದಂತೆ ನಡೆಯಲ್ಲ. ಹಾಗಾಗಿ ನುಡಿದಂತೆ ನಡೆಯುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕೈ ಬಲಪಡಿಸಲು ಈ ಬಾರಿ ಜೆಡಿಎಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಬೇಕು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಹೇಳಿದರು. ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ. ಸುರೇಶ್‍ಬಾಬು ಪರ ಮತಯಾಚಿಸಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಮಹಿಳೆಯರಿಗೆ ಶಕ್ತಿ ತುಂಬುತ್ತೇನೆ ಅಂತ ಹೇಳುತ್ತಾರೆ. ಆದರೆ ಅವರು ನುಡಿದಂತೆ ಮೋದಿ ನಡೆಯುವುದಿಲ್ಲ ಎಂದರು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕೊಟ್ಟವರು ನಾವು. ಈಗಾಗಲೇ ನಾನು ಲೋಕಸಭೆ, ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸ್ ಮಾಡುವಂತೆ ಪತ್ರ ಬರೆದಿದ್ದೇನೆ. ಯಾವುದೇ ಒಂದು ಸಮಾಜಕ್ಕೆ ದೇವೇಗೌಡರಿಂದ ಅನ್ಯಾಯವಾಗಿಲ್ಲ ಎಂದು ಹೇಳಿದರು. ಸ್ತ್ರೀಶಕ್ತಿ ಸಂಘದ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್‍ಗೆ ಸ್ಪಷ್ಟ ಬಹುಮತ ನೀಡಿ ಅಧಿಕಾರಕ್ಕೆ ತಂದರೆ ಕುಮಾರಸ್ವಾಮಿ ಅವರು ನುಡಿದಂತೆ ನಡೆಯುತ್ತಾರೆ ಎಂದರು.…
ತುಮಕೂರು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಯಲ್ಲಿರುವ ಗೈರು ಮತದಾರ ರಿಗಾಗಿ ಅಂಚೆ ಮೂಲಕ ಮತದಾನ ಮಾಡಲು ಅನುವಾಗುವಂತೆ ಮೇ 2 ರಿಂದ 4ರವರೆಗೆ ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪೋಸ್ಟಲ್ ವೋಟಿಂಗ್ ಸೆಂಟರ್ ಅನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿಂದು ಎಲ್ಲ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು, ಪೋಸ್ಟಲ್ ವೋಟಿಂಗ್ ಸೆಂಟರ್ ಸ್ಥಾಪಿಸಿರುವ ಬಗ್ಗೆ ಎಲ್ಲ ಎವಿಇಎಸ್ ಮತದಾರರಿಗೆ ಎಸ್.ಎಂ.ಎಸ್. ಮೂಲಕ ಕಡ್ಡಾಯವಾಗಿ ಮಾಹಿತಿ ನೀಡಬೇಕು ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ವೆಬೆಸೈಟ್‍ನಲ್ಲಿ ಪ್ರಚುರಪಡಿಸಬೇಕು ಎಂದರು. ಎಲ್ಲ ಎವಿಇಎಸ್ ಮತದಾರರಿಗೆ ಪಿವಿಸಿ ಸ್ಥಾಪನೆಯ ಸ್ಥಳ, ವಿಳಾಸ, ದಿನಾಂಕ, ಸಮಯದ ಮಾಹಿತಿಯನ್ನು ಎಸ್.ಎಂ.ಎಸ್. ಮೂಲಕ ತಿಳಿಸಬೇಕು. ಪಿವಿ ಸೆಂಟರ್‍ನಲ್ಲಿ ಅಂಚೆ ಮತದಾನ ಮಾಡಲು ಮೇ 2 ರಿಂದ 4ರವರೆಗೆ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ…
ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಹೆಬ್ಬೂರು ಗ್ರಾಮ ಪಂಚಾಯತಿಯ ಮತಗಟ್ಟೆ ಕೇಂದ್ರದಲ್ಲಿ ಧ್ವಜಾರೋಹಣ ನೆರೆವೇರಿಸಿ ‘ನಮ್ಮ ನಡೆ ಮತಗಟ್ಟೆ ತೋರಿಸುವ ಕಡೆ’ ಎಂಬ ಅಭಿಯಾನದ ಮುಖಾಂತರ ಮತದಾನದ ಜಾಗೃತಿ ಅಭಿಯಾನಕ್ಕೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮನೆ ಮನೆ ಭೇಟಿ ವೇಳೆಯಲ್ಲಿ ವಿಶೇಷಚೇತನರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ಗಟ್ಟಿಗೊಳ್ಳಲು ಎಲ್ಲರ ಸಹಕಾರ ಅತ್ಯಗತ್ಯ, ವಯೋವೃದ್ದರು, ವಿಕಲಚೇತನ ಮತದಾರರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಚುನಾವಣಾ ಆಯೋಗವು ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿದೆ ಎಂದು ತಿಳಿಸಿದರು. ಮತದಾನವು ಪ್ರಜಾಪ್ರಭುತ್ವದ ಶ್ರೇಷ್ಠ ದಾನವಾಗಿದ್ದು, ಪ್ರತಿಯೊಬ್ಬರು ತಮ್ಮ ಮತವನ್ನು ಚಲಾಯಿಸುವ ಮುಖಾಂತರ ಮತದಾನ ಹಬ್ಬಕ್ಕೆ ಎಲ್ಲರೂ ಕೈ ಜೋಡಿಸಬೇಕು ಹಾಗೂ ಯಾವುದೇ ಹಣ ಆಮಿಷಕ್ಕೆ ಒಳಗಾಗದೇ ಮತದಾನ ಮಾಡಬೇಕು, ‘ಪ್ರತಿ ಶತ ಮತದಾನ ತುಮಕೂರು ಜಿಲ್ಲೆಯ ವಾಗ್ದಾನ’ ಎಂಬ ಧ್ಯೇಯವಾಕ್ಯದೊಂದಿಗೆ ಎಲ್ಲರೂ…
ಗುಬ್ಬಿ ಗುಬ್ಬಿಯಲ್ಲಿ ಎಸ್ ಡಿ ದಿಲೀಪ್ ಕುಮಾರ್ ಶಾಸಕರಾಗುವ ಮೂಲಕ ಮತ್ತೊಮ್ಮೆ ಡಬಲ್ ಇಂಜಿನ್ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ತಿಳಿಸಿದರು. ಪಟ್ಟಣದ ಚನ್ನಬಸವೇಶ್ವರ ಸ್ವಾಮಿ ದೇವಾಲಯದ ಆವರಣದಿಂದ ಬಸ್ ನಿಲ್ದಾಣದವರೆಗೆ ಬಿಜೆಪಿ ಅಭ್ಯರ್ಥಿ ಎಸ್ ಡಿ ದಿಲೀಪ್ ಕುಮಾರ್ ಪರವಾಗಿ ರೋಡ್ ಶೋ ಮಾಡಿ ಮತಯಾಚನೆ ಮಾಡಿ ಮಾತನಾಡಿದರು. ಮುಸ್ಲಿಮರಿಗಿದಂತಹ ಶೇ4 ಮೀಸಲಾತಿಯನ್ನು ಒಕ್ಕಲಿಗ ದಲಿತ,ಲಿಂಗಾಯುತ ಸೇರಿದಂತೆ ಇನ್ನಿತರೆ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಹೆಚ್ಚಿಸಿದೆ. ನರೇಂದ್ರ ಮೋದಿ ಅವರ ಆಡಳಿತದಿಂದಾಗಿ ದೇಶ ಸುರಕ್ಷಿತವಾಗಿದೆ ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದು ಈ ಬಾರಿಯೂ ಬಿಜೆಪಿಯ ಕಮಲ ಅರಳುವುದು ಸತ್ಯ ಮತ್ತೊಮ್ಮೆ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ರೈತರ ಪರವಾಗಿದ್ದು ರೈತರು ಬೆಳೆಯುವಂತಹ ಎಲ್ಲ ಬೆಳೆ ಗಳಿಗೆ ಬೆಂಬಲ ಬೆಲೆ ನೀಡಲು ಸಹ ನಮ್ಮ ಸರಕಾರ ಬದ್ಧವಾಗಿದೆ ಎಂದು ತಿಳಿಸಿದರು. ಬಿಜೆಪಿ ಅಭ್ಯರ್ಥಿ…
ತುರುವೆಕೆರೆ ಭಾರತೀಯ ಜನತಾ ಪಾರ್ಟಿಯವರಿಗೆ 40 ಎನ್ನುವ ನಂಬರ್ ಮೇಲೆ ಬಹಳ ಪ್ರೀತಿ. ಹಾಗಾಗಿ ಈ ಚುನಾವಣೆಯಲ್ಲಿ ಬಿಜೆಪಿಗೆ ಕೇವಲ 40 ಸೀಟುಗಳನ್ನು ಮಾತ್ರ ನೀಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ಕರೆ ನೀಡಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು 150 ಸ್ಥಾನಗಳ ಗೆಲ್ಲಿಸುವ ಮೂಲಕ ಅಧಿಕಾರಕ್ಕೆ ತರಬೇಕು ಎಂದು ಅವರು ಮನವಿ ಮಾಡಿದರು. ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಏರ್ಪಡಿಸಿದ್ದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರತಿ ಕಾಮಗಾರಿ, ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮೀಷನ್ ಪಡೆದಿರುವ ಬಿಜೆಪಿಯನ್ನು ಈ ಬಾರಿಯ ಚುನಾವಣೆಯಲ್ಲಿ ಕೇವಲ 40 ಸೀಟುಗಳಿಗೆ ಮಾತ್ರ ಸೀಮಿತಗೊಳಿಸಬೇಕು ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 150 ಸ್ಥಾನ ನೀಡಿದರೆ ಬಿಜೆಪಿಯವರು ನಮ್ಮ ಶಾಸಕರನ್ನು ಕದಿಯಲು ಆಗುವುದಿಲ್ಲ. ಆದ್ದರಿಂದ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಮನವಿ ಮಾಡಿದರು. ಬಿಜೆಪಿ ಕಾಂಗ್ರೆಸ್ ಶಾಸಕರಿಗೆ ಹಣ ಕೊಟ್ಟು ಖರೀದಿ ಮಾಡಿ ಸರ್ಕಾರವನ್ನು ರಚನೆ ಮಾಡಿದೆ. ಕಳೆದ 3 ವರ್ಷಗಳಿಂದ ಬಿಜೆಪಿ ಕರ್ನಾಟಕದಲ್ಲಿ ಕೇವಲ…











