ಪಾವಗಡ ತಾಲ್ಲೂಕಿನ ಹಿಂದುಳಿದ ಹಾಗೂ ಗಡಿ ಪ್ರದೇಶ, ಪಾವಗಡದಿಂದ 35 ಕಿ.ಮೀ. ದೂರವಿರುವ ವಡ್ರೇವು ಎಂಬ ಕುಗ್ರಾಮಕ್ಕೆ ಪೂಜ್ಯ ಸ್ವಾಮೀಜಿಯವರು ಅಲ್ಲಿಯ ಗೋಪಾಲಕರ ವಿನಂತಿಯ ಮೇರೆಗೆ ಹುಲ್ಲನ್ನು ವಿತರಿಸಲು ಸ್ವತಃ ತಾವೇ ಅಲ್ಲಿಗೆ ತೆರಳಿದ್ದರು. ಸುಮಾರು 150 ಹಸುಗಳಿಗೆ ಶುಭ್ರವಾದ ಹಾಗೂ ತಾಜಾ ಮೇವನ್ನು ವಿತರಿಸಿದ ದೃಶ್ಯ ನಿಜಕ್ಕೂ ಪೂಜ್ಯ ಸ್ವಾಮೀಜಿಯವರ ಹೃದಯ ವೈಶಾಲ್ಯತೆಯನ್ನು ತೋರಿಸುತ್ತದೆ. ಇಡೀ ರಾಜ್ಯ ಚುನಾವಣಾ ರಣಾಂಗಣದಲ್ಲಿ ತೊಡಗಿರುವಾಗ ದೂರದೂರದ ಮೂಕ ಪ್ರಾಣಿಗಳ ಮೂಕ ವೇದನೆ ಸ್ವಾಮೀಜಿಯವರ ಹೃದಯಕ್ಕೆ ತಟ್ಟಿದೆ. ಪ್ರತಿ ನಿತ್ಯ ಇಷ್ಟು ಜನರಿಗೆ ಹುಲ್ಲನ್ನು ನೀಡುವುದರ ಜೊತೆಗೆ ದೂರದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಮೊಳಕಾಲ್ಮೂರು, ನಾಯಕನಹಟ್ಟಿಗಳಿಗೆ ಹುಲ್ಲನ್ನು ವಿತರಿಸುತ್ತಿರುವುದು ಸ್ವಾಮೀಜಿಯವರ ಹೃದಯಾಂತರಾಳದ ವೇದನೆಯನ್ನು ಕಾಣಬಹುದಾಗಿದೆ. ಗೋಮಾತೆಯ ಸೇವೆಯನ್ನು ಕಳೆದ 30 ವರ್ಷಗಳಿಂದ ನಡೆಸುತ್ತಿರುವುದು ಯಾವುದೇ ಸರ್ಕಾರಿ ಸಹಾಯವಿಲ್ಲದೆ ಕೇವಲ ಇನ್ಫೋಸಿಸ್ ಫೌಂಡೇಷನ್ ಹಾಗೂ ಶ್ರೀಮತಿ ಸುಧಾಮೂರ್ತಿ ರವರ ಮೆ.ಮೂರ್ತಿ ಫೌಂಡೇಷನ್ ಇವರ ನೆರವಿನಿಂದ ಮುಂಗಾರು ಮಳೆ ಬರುವವರೆಗೆ ನಡೆಯುತ್ತದೆ ಎಂದು ಪೂಜ್ಯ ಸ್ವಾಮೀಜಿಯವರು ತಿಳಿಸಿರುತ್ತಾರೆ.
Author: News Desk Benkiyabale
ತುಮಕೂರು ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಅಂಗವಾಗಿ ‘ನಮ್ಮ ನಡೆ ಮತದಾರರಿಗೆ ಮತಗಟ್ಟೆ ತೋರಿಸುವ ಕಡೆ’ ಎಂಬ ವಿನೂತನ ಬೂತ್ ವಾಕ್ ಕಾರ್ಯಕ್ರಮವನ್ನು ಏ.25, 26 ಹಾಗೂ ಮೇ 5, 6ರಂದು ಒಟ್ಟಾರೆ 4 ದಿನ ಆಯೋಜಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿಂದು ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಇಂದು ನಡೆದ 11 ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು, ಬಿಎಲ್‍ಒ, ಕಂದಾಯ ಲೆಕ್ಕಾಧಿಕಾರಿ ಮತ್ತು ಪಿಡಿಓಗಳನ್ನೊಳಗೊಂಡ ಹಾಗೂ ಪಟ್ಟಣ ಮತ್ತು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬಿಎಲ್‍ಓ, ಬಿಲ್‍ಕಲೆಕ್ಟರ್ ಮತ್ತು ಹೆಲ್ತ್ ಇನ್ಸ್‍ಪೆಕ್ಟರ್‍ಗಳನ್ನೊಳಗೊಂಡ ತಂಡಗಳು ಪ್ರತಿಯೊಂದು ಮತಗಟ್ಟೆ ವ್ಯಾಪ್ತಿಯಲ್ಲಿ ಒಂದು ನಿರ್ಧಿಷ್ಟ ಸ್ಥಳವನ್ನು ಗುರುತಿಸಿ ಆ ಸ್ಥಳಕ್ಕೆ ಮತಗಟ್ಟೆ ವ್ಯಾಪ್ತಿಯ ಎಲ್ಲಾ ಮತದಾರರು ಬರುವಂತೆ ಪ್ರೇರೇಪಿಸಿ ಆ ಸ್ಥಳದಿಂದ ಅವರನ್ನು ಮತಗಟ್ಟೆ ಕೇಂದ್ರಕ್ಕೆ ಕರೆತಂದು ಅವರಿಗೆ ಮತಗಟ್ಟೆ ಪರಿಚಯ ಮಾಡಿಕೊಡಬೇಕು ಹಾಗೂ ಮತದಾರರಿಗೆ…
ಪಾವಗಡ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು ಈಗಾಗಲೇ ರಾಷ್ರ್ಟೀಯ ಮತ್ತು ಪ್ರಾದೇಶಿಕ ಪಕ್ಷಗಳಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಮಾಧ್ಯಮದ ಪ್ರತಿನಿಧಿಗಳನ್ನು ಕಡೆಗಣಿಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ. ಪತ್ರಕರ್ತರ ಪ್ರಶ್ನೆಗಳಿಗೆ ಅಭ್ಯರ್ಥಿಗಳ ಬಳಿ ಉತ್ತರ ಇಲ್ಲವೇ? ಅಥವಾ ಇವರ ಕಾರ್ಯವೈಖರಿ ಬಗ್ಗೆ ಜನತೆಯ ಮುಂದೆ ಇಡುತ್ತಾರೆ ಎಂಬ ಭಯವೇ? ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಹಲವು ಪ್ರಶ್ನೆಗಳು: ಪಾವಗಡ ವಿಧಾನಸಭಾ ಕ್ಷೇತ್ರದ ಜನತೆಗೆ ಕಳೆದ 75 ವರ್ಷಗಳಿಂದ ಆಳಿದ ನಾಯಕರೆಲ್ಲ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿ ಪಾವಗಡ ವಿಧಾನಸಭಾ ಕ್ಷೇತ್ರದ ಜನತೆಗೆ ಉಂಡೇ ನಾಮ ಹಾಕಿರುತ್ತಾರೆ. ಕ್ಷೇತ್ರದ ಜನತೆ ಮಾಧ್ಯಮದ ಮೂಲಕ ಕೇಳುತ್ತಿರುವ ಪ್ರಶ್ನೆಗಳು: ಪಾವಗಡ ತಾಲ್ಲೂಕಿಗೆ ಬೈಪಾಸ್ ರಸ್ತೆ ಇಲ್ಲದಿರುವುದೇಕೆ? ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ನಿಲ್ದಾಣ ನಿರ್ಮಾಣ ಮಾಡುವಲ್ಲಿ ವಿಫಲ ಹಾಗೂ ತುಮಕೂರು ಜಿಲ್ಲೆಗೆ ಸೇರಿದ್ದ ಪಾವಗಡ ವಿಧಾನಸಭಾ ಕ್ಷೇತ್ರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಡಿಪೋವನ್ನು…
ತುಮಕೂರು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 13 ರಿಂದ 20ರವರೆಗೆ 167 ಅಭ್ಯರ್ಥಿಗಳಿಂದ 258 ನಾಮಪತ್ರಗಳು ಸ್ವೀಕೃತವಾಗಿದ್ದವು. ಸ್ವೀಕೃತವಾದ ನಾಮಪತ್ರಗಳನ್ನು ಏಪ್ರಿಲ್ 21ರಂದು ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ್ದು, ಪರಿಶೀಲನೆ ನಂತರ 154 ನಾಮನಿರ್ದೇಶಿತ ಉಮೇದುವಾರರ ನಾಮಪತ್ರಗಳು ಕ್ರಮಬದ್ಧವಾಗಿವೆ ಹಾಗೂ 21 ನಾಮಪತ್ರಗಳು ತಿರಸ್ಕøತವಾಗಿವೆ. 128-ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕೆ.ಎಸ್.ಕಿರಣ್ ಕುಮಾರ್, ಆಮ್ ಆದ್ಮಿ ಪಕ್ಷದ ನಿಂಗರಾಜು ಎಸ್.ಸಿ., ಭಾರತೀಯ ಜನತಾ ಪಕ್ಷದ ಜೆ.ಸಿ.ಮಾಧುಸ್ವಾಮಿ, ಜನತಾದಳ(ಜಾತ್ಯಾತೀತ) ಪಕ್ಷದ ಸಿ.ಬಿ.ಸುರೇಶ್ ಬಾಬು, ಉತ್ತಮ ಪ್ರಜಾಕೀಯ ಪಕ್ಷದ ಜಯರಾಮ್ ಹೆಚ್.ಆರ್., ಭಾರತೀಯ ಬಹುಜನ ಕ್ರಾಂತಿ ದಳದ ಹೆಚ್.ಟಿ.ನಾಗರಾಜು, ಆಲ್ ಇಂಡಿಯಾ ಮಹಿಳಾ ಎಂಪವರ್‍ಮೆಂಟ್ ಪಕ್ಷದ ಎಂ.ಕೆ.ಪಾಷ, ಕರ್ನಾಟಕ ರಾಷ್ಟ್ರ ಸಮಿತಿಯ ಮಲ್ಲಿಕಾರ್ಜುನಯ್ಯ ಬಿ.ಎಸ್., ವೆಲ್‍ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಹನುಮಂತ ರಾಮ ನಾಯ್ಕ ಎಂ.ಬಿ., ಪಕ್ಷೇತರರಾದ ಕ್ಯಾಪ್ಟನ್ ಸೋಮಶೇಖರ್, ಗಂಗಾಧರಯ್ಯ, ಗಿರೀಶ್ ಆರ್., ನಾಸೀರ್ ಬೇಗ್ ಎಂ. ಸೇರಿದಂತೆ…
ಮಧುಗಿರಿ ಮಾಜಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್. ರಾಜಣ್ಣ ಗುರುವಾರ ಸಹಸ್ರಾರು ಕಾರ್ಯಕರ್ತರೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೃಹತ್ ರೋಡ್ ಶೋ ನಡೆಸಿ ನಂತರ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಶಕ್ತಿ ಪ್ರದರ್ಶನ : ಕೆ.ಎನ್. ರಾಜಣ್ಣನವರು ಉಮೇದುವಾರಿಕೆ ಸಲ್ಲಿಸುವ ಸಂದರ್ಭದಲ್ಲಿ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ ಸಹಸ್ರಾರು ಕಾರ್ಯಕರ್ತರು ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾದರು. ಬಿರು ಬಿಸಿಲಿಗೂ ಜಗ್ಗದ ಕಾರ್ಯಕರ್ತರು ಉತ್ಸಾಹದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕೆ.ಎನ್. ರಾಜಣ್ಣನವರ ಜೊತೆ ಹೆಜ್ಜೆ ಹಾಕಿದರು. ಮೊದಲಿಗೆ ಶಿರಾ ಗೇಟ್ ನಿಂದ ಆರಂಭವಾದ ಯಾತ್ರೆಯು ದಂಡೂರ ಬಾಗಿಲು ಮುಖಾಂತರ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ರಸ್ತೆ, ಡೂಂ ಲೈಟ್ ಸರ್ಕಲ್, ಹೈಸ್ಕೂಲ್ ರಸ್ತೆಯ ಮೂಲಕ ತಾಲೂಕು ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಾಯಿತು. ಉಮೇದುವಾರಿಕೆ ಸಲ್ಲಿಸಿದ ನಂತರ ಮಾಜಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್. ರಾಜಣ್ಣ ಮಾತನಾಡಿ ಈ ಬಾರಿ ರಾಜ್ಯದಲ್ಲಿ ಜನತೆ ಕಾಂಗ್ರೆಸ್ ಗೆ ಆಶೀರ್ವಾದಿಸುವ ವಿಶ್ವಾಸವಿದ್ದು, ಜಿಲ್ಲೆಯ 11 ಕ್ಷೇತ್ರಗಳಲ್ಲಿ 9…
ತುಮಕೂರು ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳಿಗೆ ಎಲ್ಲ ರಾಷ್ಟ್ರೀಯ ಪಕ್ಷಗಳು ಅನ್ಯಾಯ ಮಾಡಿದ್ದು, ಬಲಾಢ್ಯ ಸಮುದಾಯ ಓಲೈಸಲು 147 ಜಾತಿಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಕೊತ್ತಗೆರೆ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅವಕಾಶ ವಂಚಿತರಿಗೆ ಮೀಸಲಾತಿ ಕಲ್ಪಿಸಿದ್ದು, ಎಸ್ಸಿಎಸ್ಟಿ ಬುಡಕಟ್ಟು ಸಮುದಾಯವನ್ನು ನಿರ್ಲಕ್ಷಿಸಿದ್ದು, ಅಲೆಮಾರಿ ಸಮುದಾಯಗಳನ್ನು ರಾಜಕೀಯ ಅಧಿಕಾರದಿಂದ ದೂರ ಇಡಲಾಗಿದೆ ಎಂದರು. ಜಿಲ್ಲೆಯಲ್ಲಿ 85 ಸಾವಿರ ಅಲೆಮಾರಿ ಸಮುದಾಯದ ಮತಗಳಿದ್ದರು ಸಹ ಪ್ರಾತಿನಿಧ್ಯ ಸಿಗುತ್ತಿಲ್ಲ, ಸಂವಿಧಾನದ ತತ್ವಗಳನ್ನು ಗಾಳಿಗೆ ತೂರಲಾಗಿದೆ, ಸಾಮಾಜಿಕ ನ್ಯಾಯಕ್ಕಾಗಿ ಶೋಷಿತ ಸಮುದಾಯಗಳಿಗೆ ರಾಜಕೀಯ ಅಧಿಕಾರ ದೊರಕಿಸಿಕೊಡಬೇಕೆಂದು ಆಗ್ರಹಿಸಿದರು. ಕಾರ್ಯಾಧ್ಯಕ್ಷ ಆದರ್ಶ್ ಚಿನ್ನಯಲ್ಲಪ್ಪ ಮಾತನಾಡಿ ಬಿಜೆಪಿ ಸರ್ಕಾರ ಕಲ್ಪಿಸಿರುವ ಒಳ ಮೀಸಲಾತಿ ಅಸಂವಿಧಾನವಾಗಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನವಿದ್ದರು ಸಹ ಪರಿಶಿಷ್ಟರಲ್ಲಿಯೇ ಒಳ ಮೀಸಲಾತಿ ವರ್ಗಿಕರಣ ಮಾಡಲು ಹೊರಟಿರುವುದು ಖಂಡನೀಯ ಎಂದು ಹೇಳಿದರು. ಸಮಾನ ಅವಕಾಶ ವಂಚಿತರಿಗೆ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ನೀಡಿದ್ದ ಮೀಸಲಾತಿಯನ್ನು ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಅವೈಜ್ಞಾನಿಕವಾಗಿ…
ತುಮಕೂರು ವೆಬ್ ಕಾಸ್ಟಿಂಗ್ ಸಂಬಂಧ ಗುರುತಿಸಲಾಗಿರುವ ಮತಗಟ್ಟೆಗಳಿಗೆ ಕಡ್ಡಾಯವಾಗಿ ಆರ್‍ಐ ಮತ್ತು ವಿಎಗಳು ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಬೇಕು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಧಾನಸಭೆ ಚುನಾವಣೆ-2023ರ ಸಂಬಂಧ 11 ವಿಧಾನಸಭಾ ಕ್ಷೇತ್ರಗಳ ಆರ್‍ಒ/ಎಆರ್‍ಓಗಳಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸದರಿ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಅಗತ್ಯತೆ ಕುರಿತು ಸದರಿ ಅಧಿಕಾರಿಗಳು ಪುನರ್ ಪ್ರಮಾಣೀಕರಿಸಬೇಕು ಎಂದು ತಿಳಿಸಿದರು. 11 ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ಜಿಲ್ಲೆಗೆ ಆಗಮಿಸುವ ವೀಕ್ಷಕರಿಗೆ ಸಲ್ಲಿಸಲು ವಿಧಾನಸಭಾವಾರು ಬುಕ್‍ಲೆಟ್‍ಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು. ಚುನಾವಣಾ ಆಯೋಗದ ವೆಬ್‍ಸೈಟ್‍ನಲ್ಲಿ ವೀಕ್ಷಕರಿಗೆ ಸಂಬಂಧಿಸಿದಂತೆ ಹ್ಯಾಂಡ್ ಬುಕ್ ಪರಿಶೀಲಿಸಿ ಚೆಕ್‍ಲೀಸ್ಟ್ ಮಾಹಿತಿಯನ್ನು ಪಡೆದು ಬುಕ್‍ಲೆಟ್‍ಗಳನ್ನು ಸಿದ್ಧಪಡಿಸಬೇಕು ಎಂದು ತಿಳಿಸಿದರು. ಚುನಾವಣಾ ವೀಕ್ಷಕರುಗಳ ಲೈಸನ್ ಅಧಿಕಾರಿಗಳಾಗಿ ನೇಮಿಸಲ್ಪಟ್ಟಿರುವ ಅಧಿಕಾರಿಗಳು ಚುನಾವಣಾ ವೀಕ್ಷಕರುಗಳೊಂದಿಗೆ ಸಂಪೂರ್ಣ ಸಮ್ವನಯ ಸಾಧಿಸಿ ಅವರಿಗೆ…
ಕೊರಟಗೆರೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ದ ಎಂದು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್ ಅವರು ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಪ್ರಮುಖ ನಾಯಕರುಗಳು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದು ಗೆಲುವಿಗೆ ಶುಭ ಸೂಚನೆಯಾಗಿದೆ. ರಾಜ್ಯದಲ್ಲಿ ಈಗ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಅವರು ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಜನರ ಕಷ್ಟ-ಸುಖಗಳಿಗೆ ಸ್ಪಂದಿಸಿರುವುದೇ ನನ್ನ ಗೆಲುವಿಗೆ ಸಹಕಾರಿಯಾಗಲಿದೆ ಎಂದರು. ದಲಿತ ಮುಖ್ಯಮಂತ್ರಿ ಕೂಗಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ನಾನು ಈ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ಏಕೈಕ ಗುರಿಯಾಗಿದೆ. ಪಕ್ಷ ಬಹುಮತದೊಂದಿಗೆ ಗೆಲುವು ಸಾಧಿಸಿದ ಬಳಿಕ ಮುಖ್ಯಮಂತ್ರಿ ವಿಚಾರ ಮುನ್ನೆಲೆಗೆ ಬರಲಿದೆ ಎಂದರು. ಪರಮೇಶ್ವರ್…
ಗುಬ್ಬಿ ಬಿಜೆಪಿ ಪಕ್ಷದ ದುರಾಡಳಿತದಿಂದ ಜನ ಬೇಸತ್ತಿದ್ದಾರೆ ಶೇ 40 ಪರ್ಸೆಂಟ್ ಸರ್ಕಾರ ಬಿಜೆಪಿಯದ್ದು ಎಂದು ಗುಬ್ಬಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್ ಆರ್ ಶ್ರೀನಿವಾಸ್ ಕಿಡಿ ಕಾರಿದರು. ಪಟ್ಟಣದ ಚನ್ನಬಸವೇಶ್ವರ ಸ್ವಾಮಿ ದೇವಾಲಯದ ಆವರಣದಿಂದ ಮೆರವಣಿಗೆಯಲ್ಲಿ ಸಾಗಿ ಬಂದು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿ ಮಾತನಾಡಿದ ಅವರು ಜೆಡಿಎಸ್ ಪಕ್ಷವನ್ನು ನಾನು ಬಿಟ್ಟು ಬಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದು ಇಂದಿನ ಜನಸ್ತೋಮ ನೋಡಿದಾಗ ಸಂತೋಷವಾಗುತ್ತದೆ ನನ್ನ ಪ್ರತಿ ಚುನಾವಣೆಯಲ್ಲೂ ಇದೆ ಉತ್ಸಾಹದಿಂದ ನನ್ನ ಕಾರ್ಯಕರ್ತರು ನನ್ನ ಜೊತೆಯಲ್ಲಿದ್ದಾರೆ. ಕಾಂಗ್ರೆಸ್ ಪಕ್ಷವು ಹಲವು ಯೋಜನೆಗಳನ್ನು ಮಾಡಿದ್ದು ಉಚಿತ ವಿದ್ಯುತ್, ಮಹಿಳೆಯರಿಗೆ 2000 ರೂಪಾಯಿ ಸೇರಿದಂತೆ ಹಲವು ಯೋಜನೆಯನ್ನುಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಹಿಂದುಳಿದವರ ಕಲ್ಯಾಣ ಸೇರಿದಂತೆ ರಾಜ್ಯದ ಕಲ್ಯಾಣವನ್ನೇ ಮಾಡಿದ್ದರು ಈ ಬಾರಿ ಸಹ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ಧ ಇನ್ನೂ ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ನಾನು ಮೂರನೇ ಪ್ಲೇಸ್ ಗೆ ಹೋಗುತ್ತೇನೆಂದು…
ತುಮಕೂರು ಗ್ರಾಮಾಂತರದ ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೇ ಬಿಜೆಪಿಗೆ ಮತಹಾಕಿದರೆ ಗ್ರಾಮಾಂತರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದು ಮಾಜಿ ಶಾಸಕ ಬಿ.ಸುರೇಶ್ ಗೌಡ ಭರವಸೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಬಳಿ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು ನಕಲಿ ಬಾಂಡ್ ಹಂಚಿ ಹೈಕೋರ್ಟ್ ನಿಂದ ಅಸಿಂಧುಗೊಂಡಿರುವ ಶಾಸಕರಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ, ಚುನಾವಣೆಯಲ್ಲಿ ಗೆದ್ದರು ಸಹ ಮುಖ್ಯಮಂತ್ರಿ ಆಯ್ಕೆ ಮಾಡಲು ಮತ ಹಾಕದಂತೆ ನಿರ್ಬಂಧಿಸಿದೆ ಅದ್ಯಾವ ಮುಖ ಇಟ್ಕಂಡು ಮತ ಕೇಳೋಕೆ ಬರ್ತಾರೆ ಗೊತ್ತಿಲ್ಲ ಎಂದು ಟೀಕಿಸಿದರು. ಗ್ರಾಮಾಂತರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿಗೆ ಮತ ಹಾಕಿ, ಬಿಜೆಪಿ ಗೆಲ್ಲಬೇಕೆಂದರೆ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಸಕ್ರಿಯರಾಗಿ ಕೆಲಸ ಮಾಡಬೇಕು, ಬೂತ್ ಗೆದ್ದರೆ ಕ್ಷೇತ್ರ ಗೆದ್ದಂತೆ, 226 ಬೂತ್ ಗಳಲ್ಲಿ ಕಾರ್ಯಕರ್ತರು ಬಿಜೆಪಿಯನ್ನು ಗೆಲ್ಲಿಸಿದರೆ, ಗ್ರಾಮಾಂತರದಲ್ಲಿ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಗೆಲ್ಲಲಿದೆ ಎಂದರು. ಗ್ರಾಮಾಂತರ ಕ್ಷೇತ್ರದಲ್ಲಿದ್ದ 18 ಶಾಲೆಗಳನ್ನು ನಿರ್ವಹಣೆ ಮಾಡಲಾಗದೇ ಹಾಳು ಮಾಡಿದ…











