ತುಮಕೂರು 2023ರ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಜೆ.ಡಿ.ಎಸ್. ಅಭ್ಯರ್ಥಿಯಾದ ಎನ್.ಗೋವಿಂದರಾಜುರವರು ತಮ್ಮ ಕುಟುಂಬ ಸದಸ್ಯರೊಂದಿಗೆ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ನಾಮಪತ್ರವನ್ನು ಇಂದು ಶುಭದಿನವಾಗಿದ್ದರಿಂದ ಸಲ್ಲಿಸಿದ್ದು, ಹಲವಾರು ಹಿತೈಷಿಗಳು ಮತ್ತು ಸ್ನೇಹಿತರು ಇಂದು ಶುಭ ದಿನವಿರುವುದರ ಪ್ರಯುಕ್ತ ಇಂದೇ ನಾಮಪತ್ರ ಸಲ್ಲಿಸಿ ಎಂದು ಕಿವಿ ಮಾತು ಹೇಳಿದ್ದರು, ಹಾಗಾಗಿ ಇಂದು ಆತುರವಾಗಿ ನಾಮಪತ್ರವನ್ನು ಸಲ್ಲಿಸಿದ್ದು. ತಮ್ಮ ಅಪಾರ ಬೆಂಬಲಿಗರು ಮತ್ತು ಕಾರ್ಯಕರ್ತರೊಂದಿಗೆ ದಿನಾಂಕ 19-04-2023ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು. ನಾಮಪತ್ರವನ್ನು ಸಲ್ಲಿಸುವಾಗ ತಮ್ಮ ಮಗ, ಸೊಸೆ, ಮೊಮ್ಮಗು ಹಾಗೂ ಪಾಲಿಕೆ ಸದಸ್ಯರಾದ ಧರಣೇಂದ್ರ ಕುಮಾರ್ ರಾಜು ಅವರೊಂದಿಗೆ ನಾಮಪತ್ರವನ್ನು ಸಲ್ಲಿಸಿದ್ದು, ಜೆಡಿಎಸ್ ಅಭ್ಯರ್ಥಿ ನಾನೇ ಇದರಲ್ಲಿ ಯಾರೂ ಗೊಂದಲ ಪಡೆಬೇಕಾಗಿಲ್ಲವೆಂದರು.
Author: News Desk Benkiyabale
ತುಮಕೂರು : 2023ರ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿಯಾದ ಜಿ.ಬಿ.ಜ್ಯೋತಿಗಣೇಶ್ ರವರು ತಮ್ಮ ಆಪ್ತರೊಂದಿಗೆ ಚುನಾವಣಾಧಿಕಾರಿಗಳಿಗೆ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ನಾಮಪತ್ರವನ್ನು ಸೋಮವಾರ ಶುಭದಿನವಾಗಿದ್ದರಿಂದ ಸಲ್ಲಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಬೃಹತ್ ಸಂಖ್ಯೆಯ ಕಾರ್ಯಕರ್ತರೊಂದಿಗೆ ದಿನಾಂಕ 18-04-2023ರಂದು ಮತ್ತೊಮ್ಮೆ ನಾಮಪತ್ರವನ್ನು ಸಲ್ಲಿಸಲಾಗುವುದೆಂದು ತಿಳಿಸಿದರು. ಇನ್ನುಳಿದಂತ ಇಷ್ಟು ದಿನ ಹಲವಾರು ಕಾರ್ಯಕರ್ತರಲ್ಲಿ ಬಿಜೆಪಿ ಟಿಕೇಟ್ ಸೊಗಡು ಶಿವಣ್ಣರವರಿಗೆ ಆಗುತ್ತದೆಂದು ಗೊಂದಲ ಉಂಟಾಗಿತ್ತು, ಆದರೆ ಅವರಿಗೆ ಪಕ್ಷದಲ್ಲಿ ಉನ್ನತ ಸ್ಥಾನಮಾನವನ್ನು ನೀಡುವ ಕಾರ್ಯವಿತ್ತು, ಆದರೆ ಅವರು ಆತುರದಿಂದ ಪಕ್ಷಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ ಹಾಗಾಗಿ ನಾನು ಅವರ ಬಗ್ಗೆ ಏನೂ ಮಾತನಾಡುವುದಿಲ್ಲವೆಂದು ನಾಮಪತ್ರ ಸಲ್ಲಿಸಿದ ನಂತರ ಹೇಳಿದರು. ನಾಮಪತ್ರವನ್ನು ಸಲ್ಲಿಸುವಾಗ ತಮ್ಮ ಕೆಲವೇ ಕೆಲವು ಆಪ್ತರೊಂದಿಗೆ ಮಾತ್ರ ಉಮೇದುವಾರಿಕೆಯನ್ನು ಸಲ್ಲಿಸಿದ್ದೇನೆ ಎಂದರು.
ತುಮಕೂರು 2023-24ನೇ ಸಾಲಿನ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಕಾರ್ಯಗಳಿಗೆ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದ್ದು, ಯಾವುದೇ ರಾಜಕೀಯ ಪಕ್ಷದವರು ಚುನಾವಣಾ ಮತ್ತು ಪ್ರಚಾರ ಕಾರ್ಯಗಳಿಗೆ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರೂ ಆದ ವೈ.ಎಸ್. ಪಾಟೀಲ ಅವರು ಮನವಿ ಮಾಡಿದ್ದಾರೆ. ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ ನಿಷೇಧಿಸಲು ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರನ್ವಯ ಯಾವುದೇ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ನಿಷೇಧಿಸಿದೆ ಹಾಗೂ 14-18 ವಯಸ್ಸಿನ ಕಿಶೋರ ಕಾರ್ಮಿಕ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಎಲ್ಲಾ ತಾಲ್ಲೂಕಿನ ತಹಶೀಲ್ದಾರರುಗಳು ಮಕ್ಕಳ ರಕ್ಷಣಾ ಸಮಿತಿ ಹಾಗೂ ಬಾಲ ಕಾರ್ಮಿಕ ಯೋಜನೆಯ ಅಧ್ಯಕ್ಷರುಗಳು ಆಗಿರುವುದರಿಂದ ತಮ್ಮ ಕ್ಷೇತ್ರದಲ್ಲಿ ಯಾವುದೇ ರಾಜಕೀಯ ಪಕ್ಷಗಳು 18 ವರ್ಷದ…
ಚಿಕ್ಕನಾಯಕನಹಳ್ಳಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಒಳ ಮೀಸಲಾತಿ ಹೆಚ್ಚಿಸಿ 38 ವರ್ಷಗಳ ಸಮಸ್ಯೆಯನ್ನು ಬಗೆಹರಿಸುವಲ್ಲಿ ಯಶಸ್ವಿಯಾಗಿದೆ ಲಂಬಾಣಿ ಜನಾಂಗಕ್ಕೆ ಶೇಕಡ ಮೂರರಿಂದ ನಾಲ್ಕುವರೆ ಹೆಚ್ಚಿಸಿದ್ದೇವೆ ಇದನ್ನು ಕಾಂಗ್ರೆಸ್ಸಿಗರು ರಾಜಕೀಯ ಬಂಡವಾಳವನ್ನಾಗಿ ಮಾಡಿಕೊಂಡು ಹೊರಟಿರುವುದು ಎಷ್ಟರಮಟ್ಟಿಗೆ ಸರಿ ಎಂದು ಬಿಜೆಪಿ ಅಭ್ಯರ್ಥಿ ಜೆಸಿ ಮಾಧುಸ್ವಾಮಿ ಪ್ರಶ್ನಿಸಿದರು. ಅವರು ಚಿಕ್ಕನಾಯಕನಹಳ್ಳಿ ಪಟ್ಟಣದ ತಾತಯ್ಯನಗೋರಿಗೆ ಹಾಗೂ ಹಳೆಯೂರು ಆಂಜನೇಯ ಸ್ವಾಮಿಗೆ ಭೇಟಿ ನೀಡಿ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ತೆರಳಿ ಚುನಾವಣಾಧಿಕಾರಿ ಎ ಇ ರಘು ಸಹಾಯಕ ಚುನಾವಣೆ ಅಧಿಕಾರಿ ತಹಶೀಲ್ದಾರ್ ಅರ್ಚನಾ ಭಟ್ ಇವರಿಗೆ ನಾಮಪತ್ರ ಸಲ್ಲಿಸಿದರು ನಂತರ ತಾಲೂಕು ಕಚೇರಿ ಎದುರು ಸಾರ್ವಜನಿಕರು ಉದ್ದೇಶಿಸಿ ಮಾತನಾಡುತ್ತಾ ನನ್ನ ಕ್ಷೇತ್ರದಲ್ಲಿ ಮಾಡುತ್ತಿರುವ ಕಾರ್ಯಗಳೇ ಅಭಿವೃದ್ಧಿಗೆ ಸಾಕ್ಷಿಯಾಗಿದೆ ಈಗ ತಾಲೂಕು ಯಾವ ರೀತಿ ಇದೆ ಎಂದು ಜನರನ್ನು ಪ್ರಶ್ನಿಸಿದರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸರ್ಕಾರ ನೀಡಿದ ಮನೆಗಳನ್ನು ಬಿಟ್ಟು ವೆಸ್ಟ್ ಇಂಡಲ್ಲಿ…
ತುಮಕೂರು ನಗರದ ಸಿದ್ದಗಂಗಾ ಮಠಕ್ಕೆ ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಬಿ. ಸುರೇಶ್‍ಗೌಡ ಅವರು ಭೇಟಿ ನೀಡಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಹಿರಿಯ ಶ್ರೀಗಳ ಗದ್ದುಗೆ ದರ್ಶನ ಪಡೆದ ಬಳಿಕ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಿ ಆಶೀರ್ವಾದ ಪಡೆದ ನಂತರ ಮಾತನಾಡಿದ ಅವರು, ಶ್ರೀಮಠ ಮಠ ಪವಿತ್ರವಾದ ಕ್ಷೇತ್ರ. ನಾನು ಮೊದಲಿನಿಂದಲೂ ಯಾವುದೇ ಶುಭ ಕಾರ್ಯವನ್ನು ಕೈಗೊಳ್ಳಬೇಕಾದರೆ ಶ್ರೀಮಠಕ್ಕೆ ಬಂದು ಸ್ವಾಮೀಜಿಯವರ ಆಶೀರ್ವಾದ ಪಡೆಯುವುದು ರೂಢಿ. ಹಾಗೆಯೇ ಇಂದು ಸಹ ಶ್ರೀಕ್ಷೇತ್ರಕ್ಕೆ ಬಂದು ಹಿರಿಯ ಶ್ರೀಗಳ ಗದ್ದುಗೆ ದರ್ಶನ ಮಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದೇನೆ ಎಂದರು. ನಾನು ಗ್ರಾಮಾಂತರ ಕ್ಷೇತ್ರದಲ್ಲಿ ಪ್ರಮುಖವಾದ ಕಾರ್ಯಗಳನ್ನು ಮಾಡಬೇಕಾದರೆ ಸ್ವಾಮೀಜಿಯವರ ಆಶೀರ್ವಾದ ಪಡೆಯುತ್ತಿದ್ದೆ. ಚುನಾವೆಯಲ್ಲಿ ಸ್ಪರ್ಧೆ ಮಾಡುವಾಗಲೂ ಶ್ರೀಗಳ ಆಶೀರ್ವಾದ ಪಡೆಯುತ್ತಿದ್ದೆ. ಅದೇ ರೀತಿ ಈಗಲೂ ಸಹ ಹಿರಿಯ ಶ್ರೀಗಳ ಗದ್ದುಗೆ ದರ್ಶನ ಪಡೆದಿದ್ದೇನೆ. ಮಠಾಧ್ಯಕ್ಷರಾದ…
ತುಮಕೂರು ನಮ್ಮ ದೇಶದ ಅತ್ಯಂತ ಪವಿತ್ರವಾದ ಗ್ರಂಥ ಸಂವಿಧಾನ. ಇದಕ್ಕೆ ಮೂಲ ಕಾರಣಕರ್ತರಾಗಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ಯಾವುದೇ ಜಾತಿ, ತತ್ವಗಳಿಗೆ ಭೇದ ಭಾವ ತೋರಿಸದೆ ಎಲ್ಲವನ್ನು ಸಂವಿಧಾನದಲ್ಲಿ ಅಳವಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು. ಇದುವರೆಗೂ ಯಾರೇ ಪ್ರಯತ್ನ ಪಟ್ಟರೂ ಸಂವಿಧಾನವನ್ನು ಬದಲಾವಣೆ ಮಾಡಲು ಸಾಧ್ಯವಾಗಿಲ್ಲ. ನಮ್ಮ ದೇಶದ ತಳಹದಿಯನ್ನು ಬದಲಾವಣೆ ಮಾಡಲು ಯಾರಾದರೂ ಕೈ ಹಾಕಿದರೆ ಅದರಿಂದ ದೇಶದ ಭದ್ರತೆ, ಅಖಂಡತೆಗೆ ಧಕ್ಕೆ ಬರುತ್ತದೆ ಎಂದು ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಸರಳವಾಗಿ ಹಮ್ಮಿಕೊಂಡಿದ್ದ ಸಂವಿಧಾನಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 132ನೇ ಜಯಂತಿಯಲ್ಲಿ ಅವರ ಭಾವಚಿತ್ರ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದ ನಂತರ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಅಂಬೇಡ್ಕರ್‍ರವರನ್ನು ಸಮಗ್ರವಾಗಿ ಅಭ್ಯಸಿಸಬೇಕು. ಅವರ ಬಗ್ಗೆ ಸಮಗ್ರವಾಗಿ ತಿಳುವಳಿಕೆ ಹೊಂದಬೇಕು. ಸಮಗ್ರವಾಗಿ ಅವರನ್ನು ತಿಳುವಳಿಕೆ ಹೊಂದಿದಾಗ ಅವರ ಬಗ್ಗೆ ಏನನ್ನೂ ಮಾತನಾಡಲು ಸಾಧ್ಯವಿಲ್ಲ. ಅಷ್ಟು ಪವಿತ್ರವಾಗಿ…
ತುಮಕೂರು ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ, ನ್ಯಾಯ ಸಮ್ಮತ, ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಚುನಾವಣಾ ಅಕ್ರಮಗಳನ್ನು ಆನ್‍ಲೈನ್ ಮೂಲಕ ದಾಖಲಿಸಲು ಚುನಾವಣಾ ಆಯೋಗವು ಛಿಗಿIಉIಐ ಅiಣizeಟಿ ಒobiಟe ಂಠಿಠಿ(ಸಿ-ವಿಜಿಲ್ ಆ್ಯಪ್) ತಂತ್ರಾಂಶವನ್ನು ಬಿಡುಗಡೆ ಮಾಡಿದ್ದು, ಸಾರ್ವಜನಿಕರು ಯಾವುದೇ ರೀತಿಯ ಚುನಾವಣಾ ಅಕ್ರಮಗಳು ಕಂಡು ಬಂದರೆ ಕೂಡಲೇ ಸಿ-ವಿಜಿಲ್ ಆ್ಯಪ್ ಮೂಲಕ ದೂರು ದಾಖಲಿಸಬಹುದಾಗಿದೆ. 100 ನಿಮಿಷಗಳಲ್ಲಿ ದೂರುಗಳ ಇತ್ಯರ್ಥಃ ಸಿ-ವಿಜಿಲ್ ಆ್ಯಪ್ ಮೂಲಕ ದಾಖಲಾದ ಚುನಾವಣಾ ಅಕ್ರಮ ದೂರುಗಳನ್ನು ತ್ವರಿತಗತಿಯಲ್ಲಿ ಅಂದರೆ 100 ನಿಮಿಷಗಳ ಕಾಲಮಿತಿಯೊಳಗೆ ಇತ್ಯರ್ಥಪಡಿಸಲಾಗುವುದು. ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ನಿರ್ಧಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಮತ ಚಲಾಯಿಸುವಂತೆ ವಿವಿಧ ರೀತಿಯ ಆಮಿಷಗಳನ್ನು ನೀಡಬಹುದಾದ ಹಣ ವಿತರಣೆ, ಉಡುಗೊರೆ, ಕೂಪನ್ ವಿತರಣೆ, ಮದ್ಯ ವಿತರಣೆ, ಅನುಮತಿ ಇಲ್ಲದ ಪೋಸ್ಟರ್‍ಗಳು/ಬ್ಯಾನರ್‍ಗಳ ಅಳವಡಿಕೆ, ಬಂದೂಕುಗಳ ಪ್ರದರ್ಶನ ಹಾಗೂ ಬೆದರಿಕೆ, ಅನುಮತಿ ಇಲ್ಲದ ವಾಹನ ಅಥವಾ ಬೆಂಗಾವಲುಗಳು, ಆಸ್ತಿ ವಿರೂಪ, ಮತದಾನದ ದಿನದಂದು ಮತದಾರರ ಸಾಗಣೆ, ಮತಗಟ್ಟೆಯ 200 ಮೀ. ವ್ಯಾಪ್ತಿಯಲ್ಲಿ ಪ್ರಚಾರ,…
ತುಮಕೂರು ಕೊರಳಿಗೆ ಎರಡು ಗೋಣಿಚೀಲ ನೇತು ಹಾಕಿಕೊಂಡು ಮತ ಭಿಕ್ಷೆ ಕೇಳುವ ಮೂಲಕ ಸುದ್ದಿಯಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಅವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಬಿಜೆಪಿ ಜತೆಗಿನ ನಾಲ್ಕು ದಶಕಗಳ ಸಂಬಂಧ ಕಡಿದುಕೊಳ್ಳಲು ಮುಂದಾಗಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಏಪ್ರಿಲ್ 17 ರಂದು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಸೊಗಡು ಶಿವಣ್ಣ ತಯಾರಿ ನಡೆಸಿದ್ದಾರೆ. ಪಕ್ಷ ನನ್ನನ್ನು ಕಾಪಾಡುತ್ತದೆ ಎಂದುಕೊಂಡಿದ್ದೆ ಆದರೆ ನನಗೆ ನಂಬಿಕೆ ದ್ರೋಹ ಮಾಡಿದೆ. ಬಿಜೆಪಿಯ ಎಲ್ಲಾ ಸಾಮಗ್ರಿಗಳನ್ನು ನನ್ನ ಮನೆ ಹಾಗೂ ಕಚೇರಿಯ ಹೊರಗೆ ಎಸೆಯುತ್ತೇನೆ ಎಂದು ಬುಧವಾರ ನಡೆದ ಬೆಂಬಲಿಗರ ಸಭೆಯಲ್ಲಿ ಹೇಳಿದರು. 74 ವರ್ಷ ವಯಸ್ಸಿನ ಆರ್‍ಎಸ್‍ಎಸ್ ನಾಯಕ ತುಮಕೂರಿನಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2018 ರಲ್ಲಿ ಸಂಸದ ಜಿ ಎಸ್ ಬಸವರಾಜು ಅವರ ಪುತ್ರ ಹಾಲಿ ಶಾಸಕ ಜಿ ಬಿ ಜ್ಯೋತಿಗಣೇಶ್ ಅವರಿಗಾಗಿ ಟಿಕೆಟ್ ತ್ಯಾಗ ಮಾಡಿದ್ದರು. ಇಬ್ಬರೂ ಮೂಲತಃ ಕಾಂಗ್ರೆಸ್ಸಿನವರು, ಆರಂಭದಿಂದದೂ ಕಷ್ಟ ಪಟ್ಟು ನಾವು ಕಟ್ಟಿದ…
ತುಮಕೂರು ಭಾರತ್ ಸರಕಾರದ ಖೇಲೋ ಇಂಡಿಯಾ ಯೋಜನೆಯಡಿಯಲ್ಲಿ ಮುಂದಿನ 2028ರಲ್ಲಿ ನಡೆಯಲಿರುವ ಒಲಂಪಿಕ್ ತರಬೇತಿ ಕೇಂದ್ರಕ್ಕೆ ತುಮಕೂರಿನ ವಿವೇಕಾನಂದ ರೈಫಲ್ ಶೂಟಿಂಗ್ ಸಂಸ್ಥೆಯ ಐವರು ಉದಯೋನ್ಮುಖ ಶೂಟರ್‍ಗಳು ಆಯ್ಕೆಯಾಗಿದ್ದಾರೆ. ಭಾರತದ ಸರಕಾರದ ಖೇಲೋ ಇಂಡಿಯಾ ಯೋಜನೆಯಡಿ 2028ರಲ್ಲಿ ಲಾಸ್ ಎಂಜಲಿಸ್‍ನಲ್ಲಿ ನಡೆಯುವ ಒಲಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಅಗತ್ಯ ತರಬೇತಿ ನೀಡುವ ಸಲುವಾಗಿ ರೈಫಲ್ ಶೂಟಿಂಗ್, ಸುಮ್ಮಿಂಗ್ ಹಾಗೂ ಅಥ್ಲೇಟಿಕ್ ಕ್ರೀಡಾಪಟುಗಳನ್ನು ಆಯ್ಕೆ ಪ್ರಕ್ರಿಯೆ ನಡೆದಿದ್ದು,ತುಮಕೂರು ವಿವೇಕಾನಂದ ರೈಫಲ್ ಶೂಟಿಂಗ್ ಆಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ಸಿದ್ದಗಂಗಾ ಮಹಿಳಾ ಕಾಲೇಜಿನ ಕಿರಣ್‍ನಂದನ್,ವಿದ್ಯಾವಾಹಿನಿ ಕಾಲೇಜಿನ ಧ್ಯಾನ್ ಪಿ.ಎಂ.,ಬಿಷಪ್ ಸಾರ್ಜೇಂಟ್ ಶಾಲೆಯ ಪೂರ್ಣ ಚಂದ್ರ,ಬಟವಾಡಿಯ ಸೆಂಟ್ ಮೇರಿಸ್ ಶಾಲೆಯ ಸಾಧಿಕ್ ಸುಲ್ತಾನ್ ಹಾಗೂ ಸರ್ವೋದಯ ಶಿಕ್ಷಣ ಸಂಸ್ಥೆಯ ವಿಜೇತ ಶೆಟ್ಟಿ ಅವರುಗಳು ಆಯ್ಕೆಯಾಗಿದ್ದಾರೆ. ಒಲಂಪಿಕ್ ತರಬೇತಿ ಕ್ಯಾಂಪ್‍ಗೆ ಆಯ್ಕೆಯಾಗಿರುವ ಕ್ರೀಡಾಪಟುಗಳಿಗೆ ಬೆಂಗಳೂರಿನ ವಿದ್ಯಾನಗರದಲ್ಲಿ ಸುಮಾರು 82 ಕೋಟಿ ರೂ ವೆಚ್ಚದಲ್ಲಿ ಸಿದ್ದಗೊಂಡಿರುವ ಖೇಲೋ ಇಂಡಿಯಾ ಕ್ರೀಡಾ ಹಾಸ್ಟಲ್ ನಲ್ಲಿ ಉಚಿತ ಊಟ, ವಸತಿ, ಶಿಕ್ಷಣದೊಂದಿಗೆ ತರಬೇತಿ ನೀಡಿ,…
ತುಮಕೂರು ಮಧುಗಿರಿ ಕ್ಷೇತ್ರದಿಂದ ಹಿಂದುಳಿದ ವರ್ಗದ ನಾಯಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಎನ್.ರಾಜಣ್ಣ ಅವರ ವಿರುದ್ದ ನಾಯಕ ಸಮುದಾಯದ ಎಲ್.ಸಿ.ನಾಗರಾಜು ಅವರಿಗೆ ಟಿಕೇಟ್ ನೀಡುವ ಮೂಲಕ ಕೆ.ಎನ್.ಆರ್.ಅವರನ್ನು ಸೋಲಿಸುವುದರ ಜೊತೆಗೆ, ನಾಯಕ ಸಮುದಾಯವನ್ನು ಒಡೆಯುವ ಕೆಲಸವನ್ನು ಕಾಣದ ಕೈಗಳು ಮಾಡುತ್ತಿದ್ದು, ನಾಯಕ ಸಮುದಾಯದವರು ಜಾಗೃತರಾಗಿ ಮತದಾನ ಮಾಡುವಂತೆ ವಾಲ್ಮೀಕಿ ಸಮಾಜದ ಯುವ ಮುಖಂಡ ಕುಪ್ಪೂರು ಶ್ರೀಧರನಾಯಕ್ ಮನವಿ ಮಾಡಿದ್ದಾರೆ. ಖಾಸಗಿ ಹೊಟೇಲ್‍ನಲ್ಲಿ ಆಯೋಜಿಸಿದ್ದ ನಾಯಕ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಮಧುಗಿರಿ ಕ್ಷೇತ್ರದಿಂದ ಎಲ್.ಸಿ.ನಾಗರಾಜು ಸ್ಪರ್ಧೆ ಸಮಾಜ ಒಡೆಯುವ ಕುತಂತ್ರವಷ್ಟೇ. ಹಾಗಾಗಿ ಮಧುಗಿರಿ ಕ್ಷೇತ್ರದ ನಾಯಕ ಸಮುದಾಯಕ್ಕೆ ಸೇರಿದ ಪ್ರತಿಯೊಬ್ಬ ಮತದಾರರು ಬಹಳ ಎಚ್ಚರಿಕೆಯಿಂದ ಮತ ಚಲಾಯಿಸಬೇಕೆಂಬುದು ನಮ್ಮ ಮನವಿಯಾಗಿದೆ ಎಂದರು. ಕ್ಷೇತ್ರದಲ್ಲಿ ಪ್ರಚಾರ ನಡೆಸುವ ವೇಳೆ ಬಿಜೆಪಿ ಅಭ್ಯರ್ಥಿಯಾಗಿರುವ ಎಲ್.ಸಿ.ನಾಗರಾಜು ಅವರ ಮಕ್ಕಳು ನಮ್ಮ ತಾಯಿಯ ಸಾವಿಗೆ ಕೆ.ಎನ್.ರಾಜಣ್ಣ ಅವರ ಕಾರಣ ಎಂಬ ಸುಳ್ಳು ಸುದ್ದಿಯನ್ನು ಹರಡುತ್ತಾ,ಜನರಲ್ಲಿ ಕೆ.ಎನ್.ರಾಜಣ್ಣ ಅವರ ವಿರುದ್ದ ಅಕ್ರೋಶ ಉಂಟಾಗುವಂತೆ ಮಾಡಲು ಪ್ರಯತ್ನಿಸುತಿದ್ದಾರೆ. ಬಿಜೆಪಿ…











