Author: News Desk Benkiyabale

ತುಮಕೂರು ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಎಫ್‍ಎಸ್‍ಟಿ/ವಿಎಸ್‍ಟಿ/ ಎಸ್‍ಎಸ್‍ಟಿ ತಂಡಗಳಲ್ಲಿ ವಿಡಿಯೋಗ್ರಫಿ ಕರ್ತವ್ಯ ನಿರ್ವಹಿಸಲು ಉತ್ತಮ ನೈಪುಣ್ಯತೆ ಹೊಂದಿರುವ ವಿಡಿಯೋಗ್ರಾಫರ್‍ಗಳನ್ನು ನೇಮಕ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದರು. ತಮ್ಮ ಕಚೇರಿಯಲ್ಲಿ ಇತ್ತೀಚೆಗೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು, ಚುನಾವಣಾ ಕರ್ತವ್ಯಕ್ಕಾಗಿ ನೇಮಕ ಮಾಡಿಕೊಳ್ಳುವ ವಿಡಿಯೋಗ್ರಾಫರ್‍ಗಳು ಕನಿಷ್ಠ 21 ವರ್ಷ ವಯೋಮಿತಿ ಹಾಗೂ ದ್ವಿತೀಯ ಪಿಯುಸಿ ಉತ್ತೀರ್ಣ ಹೊಂದಿರಬೇಕು. ವಿಡಿಯೋಗ್ರಾಫಿ ಬಗ್ಗೆ ಅನುಭವ, ವೃತ್ತಿ ನೈಪುಣ್ಯತೆ ಹಾಗೂ ಉತ್ತಮ ವಿಡಿಯೋ ಉಪಕರಣ ಹೊಂದಿರುವವರನ್ನು ನೇಮಕ ಮಾಡಿಕೊಳ್ಳಬೇಕೆಂದು ಅವರು ನಿರ್ದೇಶನ ನೀಡಿದರು. ನೇಮಕವಾದ ವಿಡಿಯೋಗ್ರಾಫರ್‍ಗಳು ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವ ವೇಳೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳಿಂದ ಪಡೆದಿರುವ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಿರಬೇಕು. ದಿನದ 24 ಗಂಟೆಗಳು ವಿಡಿಯೋಗ್ರಾಫಿ ಮಾಡಬೇಕಾಗಿರುವುದರಿಂದ…

Read More

ತುಮಕೂರು ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಆಶ್ರಯ ನೀಡಿ ಅವರ ಬದುಕಿಗೆ ಬೆಳಕಾಗಿದ್ದ ಕಾಯಕ ಯೋಗಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೇ ನಾಡಿನ ಉದ್ದಗಲಕ್ಕೂ ಹೆಸರುವಾಸಿಯಾಗಿದ್ದ ಸಿದ್ದಗಂಗಾ ಮಠದ ಶಿವೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಜನ್ಮ ಜಯಂತಿ ಹಾಗೂ ಗುರುವಂದನಾ ಮಹೋತ್ಸವವನ್ನು ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಡಗರ ಸಂಭ್ರಮದಿಂದ ಆಚರಿಸಲಾಯಿತು. 12ನೇ ಶತಮಾನದ ಬಸವಣ್ಣನವರ ತತ್ವಾದರ್ಶಗಳನ್ನು ಚಾಚೂ ತಪ್ಪದೇ ಪಾಲನೆ ಮಾಡುತ್ತಾ ಸಮಾಜದ ಉದ್ಧಾರಕ್ಕೆ ಸದಾ ತುಡಿಯುತ್ತಿದ್ದ ಆಧುನಿಕ ಬಸವಣ್ಣ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಜಯಂತಿಗೆ ವಿವಿಧ ಮಠಾಧೀಶರು, ಹರಗುರುಚರಮೂರ್ತಿಗಳು, ಗಣ್ಯಾತಿ ಗಣ್ಯರು ಹಾಗೂ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ನಾಡಿನ ಭಕ್ತಾದಿಗಳ ಮನ ಮನೆಗಳ ದೈವೀ ಪ್ರಭೆಯಾಗಿದ್ದ ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ಐಕ್ಯರಾಗಿರುವ ಶಿವಯೋಗಿ ಮಂದಿರದ ಗದ್ದುಗೆಯಲ್ಲಿ ಮುಂಜಾನೆಯಿಂದಲೇ ಧಾರ್ಮಿಕ ವಿಧಿ ವಿಧಾನಗಳು, ಅಭಿಷೇಕ, ಅಷ್ಟೋತ್ತರ, ಮಹಾಮಂಗಳಾರತಿ, ಭಜನಾ ಮಂತ್ರ ಘೋಷಗಳು ಮೊಳಗಿದವು. ಕಳಸ ಸ್ಥಾಪನೆ ಶ್ರೀಗಳ 116ನೇ ಜಯಂತಿ…

Read More

ತುಮಕೂರು ಪದ್ಮಭೂಷಣ, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಡಾ. ಶ್ರೀಶ್ರೀಶ್ರೀ ಶಿವಕುಮಾರಸ್ವಾಮಿಜಿಯವರ 116ನೇ ಜಯಂತಿ ಹಾಗೂ ಗುರುವಂದನ ಮಹೋತ್ಸವ ಕಾರ್ಯಕ್ರಮವನ್ನು ಸಿದ್ದಗಂಗಾ ಮಠ ಆವರಣದಲ್ಲಿ ಏಪ್ರಿಲ್ 1ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ ಎಂದು ಮಠದ ಆಡಳಿತಾಧಿಕಾರಿ ಎಸ್. ವಿಶ್ವನಾಥಯ್ಯ ಅವರು ತಿಳಿಸಿದ್ದಾರೆ. ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಶ್ರೀ ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ.ಮ.ನಿ.ಪ್ರ.ಸ್ವ. ಪರಮಪೂಜ್ಯ ಶ್ರೀ ಶ್ರೀ ಸಿದ್ಧಲಿಂಗಸ್ವಾಮಿ, ಶ್ರೀ ಸುತ್ತೂರು ಮಠದ ವೀರಸಿಂಹಾಸನ ಮಠದ ಅಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಕೆರೆಗೋಡಿ ರಂಗಾಪುರ ಮಠ ಅಧ್ಯಕ್ಷರಾದ ಶ್ರೀ ಶ್ರೀ ಗುರುಪರದೇಶಿಕೇಂದ್ರ ಮಹಾಸ್ವಾಮಿಗಳು ಹಾಗೂ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ನೆರವೇರಿಸುವವರು. ಸಂಜೆ 5 ಗಂಟೆಗೆ ಶ್ರೀ ಶಿವಕುಮಾರಸ್ವಾಮೀಜಿ ಗಾನೋತ್ಸವವನ್ನು ನಾದಬ್ರಹ್ಮ ಹಂಸಲೇಖ ನೇತೃತ್ವದಲ್ಲಿ ನೃತ್ಯ ಮತ್ತು ಸಂಗೀತ ಸಂಜೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

Read More

ತುಮಕೂರು ಜಿಲ್ಲೆಯ 152 ಪರೀಕ್ಷಾ ಕೇಂದ್ರಗಳಲ್ಲಿ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಿದ್ದು, ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮೊದಲ ದಿನದ ಪರೀಕ್ಷೆ ಸುಲಲಿತವಾಗಿ ನಡೆಯಿತು. ಜಿಲ್ಲೆಯ 152 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 753 ಶಾಲೆಗಳ 35,069 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮಗಳಿಗೆ ಆಸ್ಪದವಾಗದಂತೆ ಸಿಸಿಟಿವಿ ಅಳವಡಿಸಲಾಗಿದೆ. ವಿದ್ಯಾರ್ಥಿಗಳು ಬೆಳಿಗ್ಗೆ 8.30ಕ್ಕೆ ತಮ್ಮ ಪೆÇೀಷಕರೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಬಂದು ತಮ್ಮ ನೋಂದಣಿ ಸಂಖ್ಯೆ ಹುಡುಕಾಟದಲ್ಲಿ ತೊಡಗಿದ್ದ ದೃಶ್ಯ ಸಾಮಾನ್ಯವಾಗಿತ್ತು. ಈ ಬಾರಿ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವ ಸಲುವಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 152 ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ನಗರ ಸೇರಿದಂತೆ ಜಿಲ್ಲೆಯ 10 ತಾಲ್ಲೂಕುಗಳಲ್ಲೂ 35,069 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದು, ನಗರದ ಎಂಪ್ರೆಸ್ ಶಾಲೆ, ಸಿದ್ದಗಂಗಾ ಹೈಸ್ಕೂಲ್, ಸರ್ಕಾರಿ ಪ್ರೌಢಶಾಲೆ ಸೇರಿದಂತೆ ಜಿಲ್ಲೆಯಾದ್ಯಂತ ಇರುವ 152 ಪರೀಕ್ಷಾ ಕೇಂದ್ರಗಳಲ್ಲೂ ವಿದ್ಯಾರ್ಥಿಗಳು…

Read More

ತುಮಕೂರು ಕಾರ್ಯಾಗಾರಗಳು ನಾಳಿನ ಕರ್ತವ್ಯಗಳನ್ನು ತಿಳಿಸಿ ಸಂಶೋಧನೆಗೆ ಪೂರಕವಾಗುವ ಕಲಿಕೆಯಲ್ಲಿನ ಅಗತ್ಯ ಬದಲಾವಣೆಗಳನ್ನು ಅಳವಡಿಸಿಕೊಳ್ಳುವಲ್ಲಿ ಸಹಕಾರಿಯಾಗುತ್ತದೆ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಜೀವರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಗಣೇಶ್ ನಾಗರಾಜು ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯ ವಿವಿ ವಿಜ್ಞಾನ ಕಾಲೇಜಿನ ಜೀವ ರಸಾಯನಶಾಸ್ತ್ರ ಅಧ್ಯಯನ ವಿಭಾಗ ಹಾಗೂ ಆಹಾರ ವಿಜ್ಞಾನ ಮತ್ತು ಪೌಷ್ಠಿಕಾಂಶ ಅಧ್ಯಯನ ವಿಭಾಗ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಜೀವರಸಾಯನಶಾಸ್ತ್ರ ಮತ್ತು ಆಹಾರ ವಿಜ್ಞಾನದಲ್ಲಿ ಇತ್ತೀಚಿನ ಆವಿಷ್ಕಾರಗಳು’ ಕುರಿತ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳ ನಿರಂತರ ವಿಷಯಾಭ್ಯಾಸ, ಉನ್ನತ ಶಿಕ್ಷಣ, ಅಧ್ಯಯನ, ಸಂಶೋಧನೆ ದೇಶಕ್ಕೆ ಕೊಡುಗೆಯಾಗಲಿದೆ. ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರವಹಿಸುತ್ತದೆ. ಅವಶ್ಯಕತೆಗೆ ಅನುಗುಣವಾಗಿ ಸಂಶೋಧನೆಗಳಿಂದ ಅಗತ್ಯ ಪೂರೈಕೆಯಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ರಸಾಯನಶಾಸ್ತ್ರ ವಿಜ್ಞಾನದ ಕೇಂದ್ರಬಿಂದು. ಗುಣಮಟ್ಟದ ಸಂಶೋಧನೆಗಳಾಗಬೇಕು. ಆ ಸಂಶೋಧನೆಗಳು ಮಾನವ ಕುಲಕ್ಕೆ ಅನ್ವಯವಾಗಬೇಕು. ವಿಶ್ವವಿದ್ಯಾನಿಲಯಗಳಲ್ಲಿನ ಸಂಪನ್ಮೂಲ ಬಳಕೆ, ಹಂಚಿಕೆಯಾದಾಗಲೇ…

Read More

ತುಮಕೂರು ಬಗರ್ ಹುಕುಂ ಜಮೀನಿನಲ್ಲಿ ಹಲವು ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದ ರೈತರ ಮೇಲೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮಾರಣಾಂತಿಕ ಹಲ್ಲೆ ಮಾಡಿ ಕ್ರೌರ್ಯ ಮೆರೆದಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರು ಬಳಿಯ ಗಂಗಯ್ಯನ ಪಾಳ್ಯದಲ್ಲಿ ನಡೆದಿದೆ. ಘಟನೆಯ ಹಿನ್ನೆಲೆ. ಕಳೆದ 8 ವರ್ಷಗಳಿಂದ ಬಗರ್ ಹುಕುಂ ಜಮೀನಿನಲ್ಲಿ ಹಲವು ರೈತರು ಸಾಗುವಳಿ ಮಾಡುತ್ತಿದ್ದು ಸಾಗುವಳಿ ಮಾಡುತ್ತಿದ್ದ ಜಮೀನಿಗೆ ಸಂಬಂಧಿಸಿದಂತೆ ರೈತರು ಹಾಗೂ ಅರಣ್ಯ ಇಲಾಖೆಯ ನಡುವೆ ಜಟಾಪಟಿ ನಡೆಯುತ್ತಿದ್ದು ಇತ್ತೀಚೆಗೆ ರೈತರು ಹಾಗೂ ಅರಣ್ಯ ಇಲಾಖೆಯ ಗಲಾಟೆ ಕಳೆದೊಂದು ವಾರದಿಂದ ನಡೆಯುತ್ತಿದ್ದು ಇಂದು ಏಕಾಏಕಿ ರೈತರ ಮೇಲೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ರೌಡಿಗಳಂತೆ ವರ್ತಿಸಿ ಮಾರಣಾಂತಿಕ ಹಲ್ಲೆ ನಡೆಸಿ ಕ್ರೌರ್ಯ ಮೆರೆದಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಎಡೆಮಾಡಿದೆ. ಘಟನೆಯ ಬಗ್ಗೆ ಮಾಹಿತಿ ಪಡೆಯಲು ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದಾಗ ಅರಣ್ಯ ಇಲಾಖೆ ಅಧಿಕಾರಿ ದುಗ್ಗಯ್ಯ ಘಟನೆಯ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ್ದು ಮಾಧ್ಯಮದವರು ತೆರಳಿ ಕೂಡಲ…

Read More

ತುಮಕೂರು ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಈ ಬಾರಿ ಗೈರು ಮತ(ವಿಕಲಚೇತನರು ಮತ್ತು 80 ವರ್ಷ ಮೇಲ್ಪಟ್ಟವರು)ದಾರರು ಅಂಚೆ ಮೂಲಕ ಮತದಾನ ಮಾಡಲು ಹೊಸದಾಗಿ ಪರಿಚಯಿಸಲಾಗಿರುವ ನಮೂನೆ 12ಡಿಯನ್ನು ಭರ್ತಿ ಮಾಡಿ ಹಿಂದಿರುಗಿಸಲು ಏಪ್ರಿಲ್ 18ರವರೆಗೂ ಅವಕಾಶ ನೀಡಬೇಕೆಂದು ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಗುರುವಾರ ಸಂಜೆ ವೀಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಮತಗಟ್ಟೆವಾರು ಗೈರು ಮತದಾರರ ಪಟ್ಟಿ ತಯಾರಿಸಿ ಅದಕ್ಕನುಗುಣವಾಗಿ ಎಲ್ಲ ಗೈರು ಮತದಾರರಿಗೂ ನಮೂನೆ 12ಡಿಯನ್ನು ವಿತರಣೆ ಮಾಡಲು ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಚುನಾವಣಾಧಿಕಾರಿಗಳಿಗೆ ಸೂಚಿಸಿದರಲ್ಲದೆ ಚುನಾವಣೆಗೆ ಸಂಬಂಧಿಸಿದಂತೆ ರಚಿಸಿರುವ ವಾಟ್ಸಪ್ ಗ್ರೂಪ್ ಅನ್ನು ಅಧಿಕಾರಿಗಳು ತಪ್ಪದೇ ಗಮನಿಸಿ ಯಾವುದೇ ಸಬೂಬು ಹೇಳದೆ ಜಿಲ್ಲಾ ಚುನಾವಾಣಾಧಿಕಾರಿಗಳು ನೀಡುವ ನಿರ್ದೇಶನವನ್ನು ಪಾಲಿಸಬೇಕು ಎಂದು ತಿಳಿಸಿದರು. ನಮೂನೆ 12ಡಿಯನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳು ಗೈರು ಮತದಾರರ ಮನೆಗೆ ಭೇಟಿ…

Read More

ತುಮಕೂರು ಕಲ್ಪತರುನಾಡಿನ ಶ್ರೀರಾಮ ಹಾಗೂ ಆಂಜನೇಯಸ್ವಾಮಿಯ ದೇವಾಲಯಗಳಲ್ಲಿ ಶ್ರೀರಾಮನವಮಿಯನ್ನು ವಿವಿಧ ಧಾರ್ಮಿಕ ಕೈಂಕರ್ಯಗಳೊಂದಿಗೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶ್ರೀರಾಮ ಮತ್ತು ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಇಂದು ಮುಂಜಾನೆಯಿಂದಲೇ ಶ್ರೀರಾಮನಾಮ ಸ್ಮರಣೆ ಮೊಳಗಿದವು. ನಗರದ ಬಾರ್‍ಲೈನ್ ರಸ್ತೆಯಲ್ಲಿರುವ ಶ್ರೀರಾಮ ದೇವಾಲಯದಲ್ಲಿ ಶ್ರೀರಾಮನಮವಿ ಅಂಗವಾಗಿ ಶ್ರೀಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿದವು. ಅದೇ ರೀತಿ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ, ಶೆಟ್ಟಿಹಳ್ಳಿ ಗೇಟ್‍ನಲ್ಲಿರುವ ಅಭಯ ಆಂಜನೇಯಸ್ವಾಮಿ ದೇವಾಲಯ, ಸೀತಾರಾಮ ದೇವಾಲಯ, ಕೋಟೆ ಆಂಜನೇಯಸ್ವಾಮಿ ದೇವಾಲಯ ಸೇರಿದಂತೆ ವಿವಿಧೆಡೆ ಇರುವ ಶ್ರೀರಾಮ ಹಾಗೂ ಆಂಜನೇಯ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದ್ದು, ಶ್ರೀರಾಮನಮಮಿಯನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು. ಬೆಳಿಗ್ಗೆಯಿಂದಲೇ ಶ್ರೀರಾಮ ಹಾಗೂ ಆಂಜನೇಯ ದೇವಾಲಯಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು. ಶ್ರೀರಾಮನಮವಿ ಅಂಗವಾಗಿ ದೇವಾಲಯಗಳಲ್ಲಿ ಪೂಜೆಯ ನಂತರ ಭಕ್ತಾದಿಗಳಿಗೆ ಪಾನಕ, ಮಜ್ಜಿ, ಹೆಸರುಬೇಳೆ ಹಂಚಲಾಯಿತು. ಕೆಲವು…

Read More

ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಪೊನ್ನಸಮುದ್ರ ಗ್ರಾಮಪಂಚಾಯಿತಿ ವ್ಯಾಪ್ತಿಯ ಕನಿಕಲಬಂಡೆ ಗ್ರಾಮದ ಕೆರೆಯ ಕಟ್ಟೆಯಲ್ಲಿ ಬೇಳೆದಿರುವ ಸೀಮೆಜಾಲಿ ಗಿಡಗಳನ್ನು ಕಿತ್ತು ಹಣ ಸಂಪಾದಿಸುವ ಉದ್ದೇಶದಿಂದ ಇಬ್ಬರು ವ್ಯಕ್ತಿಗಳು ಜೆ.ಸಿ.ಬಿ.ಯಿಂದ ಸುಮಾರು 1 ಕೀಲೋಮೀಟರ್ ದೂರದವರೆಗೂ ರಾತ್ರಿಗೆ ರಾತ್ರಿ ದ್ವಂಸ ಮಾಡಿರುವುದರಿಂದ ಕೆರೆಯ ನೀರೆಲ್ಲಾ ಖಾಲಿಯಾಗುತ್ತಿರುವ ಘಟನೆ ನಡೆದಿದ್ದು, ಇದನ್ನು ಗಮನಿಸಿದ ಗ್ರಾಮಸ್ಥರು ಕೃತ್ಯ ದಲ್ಲಿ ಬಳಸಿದ್ದ ಜೆ.ಸಿ.ಬಿ. ಚಾಲಕನನ್ನು ಹಿಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು, ಈ ಕೃತ್ಯವನ್ನು ಕನಿಕಲಬಂಡೆ ಗ್ರಾಮಸ್ಥರು ಖಂಡಿಸಿದ್ದು ಸಂಬಂದಪಟ್ಟ ತಹಶೀಲ್ದಾರ್, ಕಾರ್ಯಾಲಯ ಹಾಗೂ ಜಿಲ್ಲಾಪಂಚಾಯಿತಿ ಕಛೇರಿ ಹಾಗೂ ಪೊನ್ನಸಮುದ್ರ ಗ್ರಾಮಪಂಚಾಯಿತಿಗಳಿಗೆ ದೂರು ಸಲ್ಲಿಸಿದ್ದು ಇಲ್ಲಿಯವರೆಗೂ ಯಾವೊಬ್ಬ ಅಧಿಕಾರಿಯೂ ಸಹ ಸ್ಥಳಕ್ಕೆ ಬೇಟಿ ನೀಡದೆ ನಿರ್ಲಕ್ಷವಹಿಸಿದ್ದಾರೆ ಎಂದು ಗ್ರಾಮಸ್ಥರು ಅಲವತ್ತುಕೊಳ್ಳುತ್ತಿದ್ದಾರೆ. ಏನಿದು ಘಟನೆ ಬಿ. ಅಚ್ಚಮ್ಮನಹಳ್ಳಿ ಗ್ರಾಮದಿಂದ ಕನಿಕಲಬಂಡೆಗೆ ಹೋಗುವ ಮಾರ್ಗ ಮದ್ಯೆ ಸರ್ವೇ ನಂ 28 ರಲ್ಲಿ ನೂರಾರು ಎಕರೆಯ ಬ್ರಹ್ಮಯ್ಯನ ಕೆರೆ ಇದ್ದು, ಕಳೆದ 40 ವರ್ಷಗಳಿಂದ ಭತ್ತಿಹೋಗಿದ್ದ ಕೆರೆ, ಕಳೆದ ಸಾಲಿನಲ್ಲಿ ಮಳೆಯಿಂದ ಕೆರೆ ತುಂಬಿತ್ತು,…

Read More

ತುಮಕೂರು ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಮಾದರಿ ನೀತಿ ಸಂಹಿತೆ ಸಮರ್ಪಕ ಅನುಷ್ಠಾನಕ್ಕಾಗಿ ಮುಂದಿನ 45 ದಿನಗಳು ಎಲ್ಲಿಯೂ ಯಾವುದೇ ರೀತಿ ಚುನಾವಣಾ ಆಕ್ರಮ ನಡೆಯದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಸಂಬಂಧ ಮಾದರಿ ನೀತಿ ಸಂಹಿತೆಯ ಸಮರ್ಪಕ ಅನುಷ್ಠಾನಕ್ಕಾಗಿ ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯದ ಸಭಾಂಗಣದಲ್ಲಿ ಇಂದು ಕರೆಯಲಾಗಿದ್ದ ಲೀಡ್ ಬ್ಯಾಂಕ್ ಮ್ಯಾನೇಜರ್, ಸಹಕಾರ ಸಂಘಗಳ ಉಪನಿಬಂಧಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಮತ್ತು ಆಹಾರ ಇಲಾಖೆಯ ಜಂಟಿ ನಿರ್ದೇಶಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಾನ್ ಬ್ರೋಕರ್‍ಗಳು ಮತ್ತು ಇತರೆ ಲೇವಾದೇವಿದಾರರಿಗೆ ಚುನಾವಣಾ ನೀತಿ ಸಂಹಿತೆ ಕುರಿತು ಮಾಹಿತಿ ನೀಡುವುದು. ಅವರ ದಿನನಿತ್ಯದ ವಹಿವಾಟುಗಳ ಬಗ್ಗೆ ಗಮನವಹಿಸಿ ಅಕ್ರಮ ಹಣ ವರ್ಗಾವಣೆಯಾಗದಂತೆ ತಡೆಯುವುದು ಎಂದು ತಿಳಿಸಿದರು. ಪೆಟ್ರೋಲ್ ಬಂಕ್‍ಗಳಲ್ಲಿ ಜಮೆಯಾಗಿರುವ ಹಣ ಹಾಗೂ ಪ್ರತಿ ದಿನ ಲಭ್ಯವಿರುವ ದಾಸ್ತಾನಿನ ಮಾಹಿತಿಯನ್ನು ಪ್ರತಿ…

Read More