Author: News Desk Benkiyabale

ತುಮಕೂರು ಮುಂಬರುವ ವಿಧಾನಸಭಾ ಚುನಾವಣೆ-2023 ಹಿನ್ನೆಲೆಯಲ್ಲಿ ತಮ್ಮ ಕಾರ್ಯವ್ಯಾಪ್ತಿಯ ವಿಧಾನಸಭಾ ಕ್ಷೇತ್ರದ ಎಲ್ಲಾ ಮತಗಟ್ಟೆಗಳ ಸಂಪೂರ್ಣ ಮಾಹಿತಿ ಅಧಿಕಾರಿಗಳಿಗೆ ಇರಬೇಕು ಎಂದು ಆರ್.ಓ ಮತ್ತು ಎ.ಆರ್.ಓ.ಗಳಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಸೂಚಿಸಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಇಂದು ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಯಾ ವಿಧಾನಸಭಾ ಕ್ಷೇತ್ರದ ಎಲ್ಲಾ ಮತಗಟ್ಟೆಗಳನ್ನು ಬೇಗ ತಲುಪುವ ರೀತಿಯಲ್ಲಿ ಸೆಕ್ಟರ್ ಮ್ಯಾಪ್ ಮತ್ತು ರೂಟ್ ಮ್ಯಾಪ್‍ಗಳನ್ನು ಸಿದ್ಧಪಡಿಸಿ ಸಲ್ಲಿಸಬೇಕು, ತಮ್ಮ ಹಂತದಲ್ಲಿ ಸ್ಟ್ರಾಂಗ್ ಟೀಮ್ ರಚಿಸಬೇಕು, ಚುನಾವಣೆಯ ದಿನ ಬೇಕಾಗುವ ವಾಹನಗಳ ಪಟ್ಟಿಯನ್ನು ಸಲ್ಲಿಸಬೇಕು, ಸೆಕ್ಟರ್‍ವೈಸ್ ಪ್ರಕಾರ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ವ್ಯವಸ್ಥೆ ರೂಪಿಸಬೇಕು ಎಂದು ಸೂಚಿಸಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಮತದಾರರಿಗೆ ಉಡು ಗೊರೆಗಳನ್ನು ನೀಡಿ ಆಮಿಷೊಡ್ಡುವುದಕ್ಕೆ ಅವಕಾಶವಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಉಡುಗೊರೆಗಳನ್ನು ಅನಧಿಕೃತವಾಗಿ ಅಥ ವಾ ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿರುವ ಪ್ರಕರಣಗಳು ಕಂಡುಬಂದಲ್ಲಿ ಆರ್.ಓ ಮತ್ತು ಎ.ಆರ್.ಓಗಳು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ವಿಧಾನಸಭಾ ಕ್ಷೇತ್ರವಾರು,…

Read More

ತುಮಕೂರು ದೇಶವನ್ನು ಹಿಂದೂ, ಮುಸ್ಲಿಂ ಎಂದು ವಿಭಾಗ ಮಾಡಿದ ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಯಾತ್ರೆ ಹಾಗು ಪ್ರಜಾಧÀ್ವನಿ ಕಾರ್ಯಕ್ರಮ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದ್ದಾರೆ. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಪರಿಶಿಷ್ಟ ಜಾತಿ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಎಸ್ಸಿ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು,ಸುರೇಶ್ ಗೌಡ ಎರಡು ಬಾರಿ ಶಾಸಕರಾಗಿ ಜನರಿಗೆ ಸ್ಪಂದಿಸಿ ದೀನ ದಲಿತರ ಪರ ಕೆಲಸ ಮಾಡುತ್ತಿದ್ದಾರೆ. ಬೇರೆ ಪಕ್ಷದವರು ಈಗ ಪಂಚತಂತ್ರ ಯಾತ್ರೆ ಹೆಸರಿನಲ್ಲಿ ಜನರನ್ನು ಮರುಳು ಮಾಡಲು ಹೊರಟಿದ್ದಾರೆ. ಆದರೆ ದೇಶದ ಜನರಿಗೆ ಗೊತ್ತಿದೆ. ಹಾಗಾಗಿ ಜನರ ನಾಡಿಮಿಡಿತ ಅರಿತು ಕೆಲಸ ಮಾಡುತ್ತಿರುವ ಬಿಜೆಪಿ ಯನ್ನು ರಾಜ್ಯದಲ್ಲಿ ಜನರು ಅಧಿಕಾರಕ್ಕೆ ತರಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ 09 ವರ್ಷಗಳಲ್ಲಿ ಅತ್ಯಂತ ನಿಕೃಷ್ಟಕ್ಕೆ ಒಳಗಾದ ಸಮುದಾಯಗಳಲ್ಲಿರುವ ಸಾಧಕರನ್ನು ಗುರುತಿಸಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸುವ ಕೆಲಸ ಮಾಡಿದೆ. ಜಿಲ್ಲೆಯ ಡಾ.ಸೂಲಗಿತ್ತಿ…

Read More

ತುಮಕೂರು ಅನಾದಿಕಾಲದಿಂದಲೂ ಶ್ರೇಷ್ಠ ಜಂಗಮರೆ ಜೈನ ಮುನಿಗಳಾಗಿದ್ದಾರೆ ಎಂದು ಚಿಕ್ಕತೊಟ್ಲುಕೆರೆಯ ಆಟವೀ ಜಂಗಮ ಸುಕ್ಷೇತ್ರದ ಶ್ರೀ ಆಟವೀ ಶಿವಲಿಂಗ ಮಹಾಸ್ವಾಮೀಜಿ ಹೇಳಿದರು. ಮಂದಾರಗಿರಿ (ಬಸ್ತಿಬೆಟ್ಟ)ಯಲ್ಲಿ ನಡೆಯುತ್ತಿರುವ ಶ್ರೀ ದಿವ್ಯಾಕಾಶ ಸಮವಸರಣ ಪಂಚ ಕಲ್ಯಾಣ ಪ್ರತಿಷ್ಠಾ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದಿಗಂಬರ ಜೈನ ಮುನಿಗಳು ಎಲ್ಲೆಲ್ಲಿ ಕುಳಿತು ಧರ್ಮೋ ಪದೇಶ ಮಾಡುತ್ತಾರೆಯೋ ಅದೇ ಮಠ ವಾಗಿ ಪರಿವರ್ತನೆಗೊಳ್ಳುತ್ತದೆ. ಅವರು ಎಲ್ಲೆಲ್ಲಿ ಪಾದಸ್ಪರ್ಶ ಮಾಡುತ್ತಾರೆಯೋ ಅದೇ ಒಂದು ಪುಣ್ಯಕ್ಷೇತ್ರವಾಗಿ ರೂಪಾಂತರಗೊಳ್ಳುತ್ತದೆ ಎಂದು ವಿಶ್ಲೇಷಣೆ ಮಾಡಿದರು. ನಾವು ಯಾರೂ ಕೈಲಾಸವನ್ನೂ ಇದುವರೆಗೂ ನೋಡಿಲ್ಲ ಆದ್ರೆ ಇಂದು ಮಂದಾರಗಿರಿಯಲ್ಲಿ ನೋಡಬಹುದಾಗಿದೆ. ಪರ್ವತದ ಮೇಲೆ ಇರುವ ಮಹಾವೀರ ತೀರ್ಥಂಕರ ದಿವ್ಯಾಕಾಶ ಸಮವಸರಣದಲ್ಲಿ ಕಾಣಬಹುದಾಗಿದೆ. ಸಮವಸರಣದಲ್ಲಿ ಸರಸ್ವತಿ ಹಾಗೂ ಲಕ್ಷ್ಮಿ ಪೂಜೆಯನ್ನು ಸಹ ನೋಡಬಹುದಾಗಿದೆ ಎಂದು ಹೇಳಿದರು. ಭೂಮಿಯ ಮೇಲೆ ಸಲ್ಲುವವರು ಭೂಲೋಕದಿಂದ ಹೊರಗೆ ಹೋದವರು ಅಲ್ಲಿಯೂ ಕೂಡ ಸಲ್ಲುವವರು ಎಂದು ಹೇಳಿದರು. ಮಂದಾರ ಗಿರಿಯು ನಿಸರ್ಗದ ಕೈಲಾಸದಂತೆ ಭಾಸವಾಗುತ್ತದೆ. ಈ ದೇಹವು ಆತ್ಮದ ದೇವಾಲಯವಾಗಿದೆ. ಅದನ್ನು ಶ್ರದ್ದಾ…

Read More

ತುಮಕೂರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ನಮ್ಮ ಕ್ಲಿನಿಕ್‍ನ್ನು ನಗರದ ಜಯಪುರ ಹಾಗೂ ದಿಬ್ಬೂರಿನಲ್ಲಿಂದು ಶಾಸಕ ಜ್ಯೋತಿಗಣೇಶ್ ಉದ್ಘಾಟಿಸಿದರು. ಜಯಪುರ ಮತ್ತು ದಿಬ್ಬೂರಿನಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಿಸಿದ ನಂತರ ಮಾತನಾಡಿದ ಶಾಸಕ ಜ್ಯೋತಿಗಣೇಶ್ ಅವರು, ರಾಜ್ಯ ಸರ್ಕಾರ ಸಾಮಾನ್ಯ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ನಮ್ಮ ಕ್ಲಿನಿಕ್‍ಗಳನ್ನು ಘೋಷಣೆ ಮಾಡಿದ್ದು, ರಾಜ್ಯಾದ್ಯಂತ 400ಕ್ಕೂ ಹೆಚ್ಚಿನ ನಮ್ಮ ಕ್ಲಿನಿಕ್‍ಗಳನ್ನು ಆರಂಭಿಸುತ್ತಿದೆ. ಅದರಲ್ಲೂ ನಗರಕ್ಕೆ 7 ನಮ್ಮ ಕ್ಲಿನಿಕ್ ಕೊಟ್ಟಿರುವುದು ವಿಶೇಷವಾಗಿದೆ ಎಂದರು. ಮೊದಲನೆಯದು ಮೆಳೇಕೋಟೆಯಲ್ಲಿ, ನಂತರ ಮರಳೂರು ದಿಣ್ಣೆಯಲ್ಲಿ ಆರಂಭಿಸಿದ್ದು, ಇಂದು ಜಯಪುರ ಮತ್ತು ದಿಬ್ಬೂರಿನಲ್ಲಿ ಲೋಕಾರ್ಪಣೆ ಮಾಡಲಾಗಿದೆ ಎಂದರು. ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಹೊರತುಪಡಿಸಿ ಹೆಚ್ಚುವರಿಯಾಗಿ ನಮ್ಮ ಕ್ಲಿನಿಕ್‍ನ್ನು ನೀಡಲಾಗಿದೆ. ನಗರದ 35 ವಾರ್ಡ್‍ಗಳಿಗೆ ಒಟ್ಟು 14 ಆರೋಗ್ಯ ಕೇಂದ್ರಗಳು ಜನರ ಆರೋಗ್ಯ ಕಾಪಾಡಲು ಸದಾ ಕಾರ್ಯನಿರತವಾಗಿರುತ್ತವೆ ಎಂದರು. ಜನರಿಗೆ ಆರೋಗ್ಯ ಭಾಗ್ಯ ಕೊಡುವಂತಹ ಕಲ್ಪನೆ ಈ ನಮ್ಮ ಕ್ಲಿನಿಕ್ ನದ್ದಾಗಿದೆ. ಇದು ಕೇಂದ್ರ ಮತ್ತು ರಾಜ್ಯ…

Read More

ತುಮಕೂರು ಮಹಿಳಾ ದಿನದಂದು ಕೋಲಾರದ ಸಂಸದರು ಕುಂಕುಮವಿಡದ ಸುಜಾತಳಿಗೆ ಬೆದರಿಕೆ ಹಾಕಿರುವುದು ಅಜ್ಞಾನದ, ಸ್ತ್ರೀದ್ವೇಷದ ನಡೆಯಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ತೀವ್ರವಾಗಿ ಖಂಡಿಸಿದೆ. ಕುಂಕುಮ ಮದುವೆಯಾದ ಮೇಲೆ ಬರುವುದಲ್ಲ. ಅದೊಂದು ಅಲಂಕಾರ. ಮದುವೆಯಾದವರೂ, ಆಗದಿದ್ದವರೂ. ಹೆಣ್ಣುಗಳೂ ಗಂಡುಗಳೂ ತಮಗಿಷ್ಟದ ಆಕಾರ, ಬಣ್ಣಗಳ ಬೊಟ್ಟಿಡುತ್ತಾರೆ. ಅದು ಸಂಪೂರ್ಣ ಅವರವರ ಆಯ್ಕೆಗೆ ಬಿಟ್ಟದ್ದು. ಅದು ಅವರ ಹಕ್ಕು ಎಂದು ಒಕ್ಕೂಟ ಹೇಳಿದೆ. ಇನ್ನೊಂದೆಡೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಮಹಿಳಾ ಲೇಖಕರಿಗೆ ಉಳಿದುಕೊಳ್ಳಲು ಸರಿಯಾದ ವ್ಯವಸ್ಥೆ ಮಾಡದೇ ಇದ್ದುದಕ್ಕೆ ಪ್ರಶ್ನೆ ಮಾಡಿದ್ದ ನಿರ್ಮಲಾ ಎಲಿಗಾರ್ ಅವರ ಸದಸ್ಯತ್ಚವನ್ನು ಕ.ಸಾಪ. ಅಧ್ಯಕ್ಷರು ರದ್ದುಗೊಳಿಸಿದ್ದಾರೆ. ಇವೆರೆಡೂ ಮಹಿಳಾ ದೌರ್ಜನ್ಯದ ಬೀಜರೂಪಿ ಮನಃಸ್ಥಿತಿಯಾಗಿದೆ. ಸರ್ವಸಮಾನತೆ ಪ್ರತಿಪಾದಿಸುವ ಸಂವಿಧಾನಕ್ಕೆ ವಿರೋಧಿಯಾಗಿದೆ ಎಂದು ಒಕ್ಕೂಟ ಖಂಡಿಸಿದೆ. ಜನಪ್ರತಿನಿಧಿಗಳು ತಾವು ಜನಸೇವಕರೇ ಹೊರತು ಸರ್ವಾಧಿಕಾರಿಗಳಲ್ಲ ಎಂದರಿತು ಮೊದಲು ಸಂವಿಧಾನವನ್ನು, ಬಾಬಾಸಾಹೇಬರನ್ನು ಸರಿಯಾಗಿ ಓದಿಕೊಳ್ಳಲಿ. ತಕ್ಷಣವೇ ಸಮಾಜದ ಕ್ಷಮೆ ಕೋರಲಿ. ಇಲ್ಲದಿದ್ದಲ್ಲಿ ಸಮತೆಯನ್ನು ಬಯಸುವ ಸ್ತ್ರೀಪುರುಷರೆಲ್ಲರೂ…

Read More

ತುಮಕೂರು ಚುನಾವಣಾ ಕರ್ತವ್ಯಕ್ಕೆ ನೇಮಕ ಮಾಡಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಾವುದೇ ನೆಪ ಹೇಳಿ ಗೈರು ಹಾಜರಾಗದೆ, ಕಡ್ಡಾಯವಾಗಿ ಚುನಾವಣಾ ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಫ್ಲೈಯಿಂಗ್ ಸ್ಕ್ವಾಡ್, ವಿಡಿಯೋ ವೀಕ್ಷಣಾ ತಂಡ, ಸ್ಟ್ಯಾಟಿಕ್ ತಂಡ, ಚುನಾವಣಾ ವೆಚ್ಚದ ತಂಡ, ಸೆಕ್ಟರ್ ಅಧಿಕಾರಿಗಳು ಸೇರಿದಂತೆ ವಿವಿಧ ಹಂತದ ಅಧಿಕಾರಿಗಳಿಗಾಗಿ ಸೋಮವಾರ ಏರ್ಪಡಿಸಿದ್ದ ‘ಚುನಾವಣಾ ತರಬೇತಿ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ 11 ವಿಧಾನಸಭಾ ಕ್ಷೇತ್ರಗಳ ಪೈಕಿ 2683 ಮತಗಟ್ಟೆಗಳಿದ್ದು, ಎಲ್ಲಾ ಮತಗಟ್ಟೆಗಳಲ್ಲಿಯೂ ಶಾಂತಿಯುತ ಮತದಾನ ಜರುಗುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ಅಧಿಕಾರಿಗಳು ಪೊಲೀಸ್ ಇಲಾಖೆ ಸಹಕಾರದಲ್ಲಿ ಕರ್ತವ್ಯ ನಿರ್ವಹಿಸಬೇಕು. ಚುನಾವಣಾ ಅಕ್ರಮಗಳು ಕಂಡು ಬಂದಾಗ ವಾಸ್ತವಾಂಶ ಅರಿತು ಯಾರಿಗೂ ಹೆದರದೆ ಪ್ರಕರಣಗಳನ್ನು ದಾಖಲಿಸಬೇಕು. ಯಾರ ಪರವಾಗಿಯೂ/ ವಿರೋಧವಾಗಿಯೂ ಕೆಲಸ ಮಾಡದೆ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕೆಂದು ಎಚ್ಚರಿಕೆ ನೀಡಿದರು. ಜಿಲ್ಲಾ ಪೊಲೀಸ್…

Read More

ತುಮಕೂರು ಜ್ಞಾನಾರ್ಜನೆಯ ಜೊತೆಗೆ ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳ ಹಸಿವನ್ನು ನೀಗಿಸುವ ಯೋಜನೆ ತುಮಕೂರು ವಿಶ್ವವಿದ್ಯಾನಿಲಯವು ಕೈಗೊಂಡಿರುವುದು ದೇಶದ ಎಲ್ಲಾ ವಿಶ್ವವಿದ್ಯಾನಿಲಯಗಳು ಅಳವಡಿಸಿಕೊಳ್ಳುವ ಮಾದರಿಯಾಗಿದೆ ಎಂದು ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯವು ಶ್ರೀ ರಾಮಕೃಷ್ಣ ಸೇವಾಶ್ರಮ, ಪಾವಗಡ ಮತ್ತು ಶ್ರೀ ಅನ್ನಪೂರ್ಣೇಶ್ವರಿ ಆಹಾರ ವಿತರಣಾ ಸಮಿತಿಯ ಸಹಯೋಗದೊಂದಿಗೆ ಸೋಮವಾರ ಆಯೋಜಿದ್ದ ‘ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ಮಧ್ಯಾಹ್ನದ ಭೋಜನ ಯೋಜನೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಮಾನಸಿಕವಾಗಿ ಸದೃಢರಾಗಬೇಕಾದರೆ ವಿದ್ಯೆಯ ಜೊತೆಗೆ ಆರೋಗ್ಯವೂ ಮುಖ್ಯ. ಪೌಷ್ಠಿಕಾಂಶಯುತ ಆಹಾರ ಸೇವನೆ ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ಈ ಯೋಜನೆಯು ಸ್ಥಳೀಯ ಆಹಾರ ಪದ್ಧತಿಯನ್ನು ಬಳಸಿಕೊಂಡು ರೈತರನ್ನು ಪೆÇ್ರೀತ್ಸಾಹಿಸುವಂತಾಗಬೇಕು ಎಂದು ಹೇಳಿದರು. ತುಮಕೂರು ವಿವಿ ಕುಲಪತಿ ಪೆÇ್ರ. ಎಂ. ವೆಂಕಟೇಶ್ವರಲು ಸ್ವಾಗತನುಡಿಗಳನ್ನಾಡಿ, ವಿದ್ಯಾಭ್ಯಾಸದ ಜೊತೆಗೆ ಆಹಾರ ನೀಡುವಂಥ ಶಕ್ತಿ ನಮ್ಮ ವಿವಿಗೆ ದೊರೆತಿರುವುದು ಭಾಗ್ಯವೇ ಸರಿ. ಸಾವಿರದ ಐನೂರು ವಿಧ್ಯಾರ್ಥಿಗಳಿಗೆ ಸತ್ವಭರಿತ ಆಹಾರ ನೀಡುವುದಕ್ಕೆ ಕೈಜೋಡಿಸಿದ ಎಲ್ಲರಿಗೂ…

Read More

ತುಮಕೂರು ಬಿಜೆಪಿಯ ತುಮಕೂರು ಜಿಲ್ಲಾ ಒಬಿಸಿ ಮೋರ್ಚಾದ ಸಮಾವೇಶ ಗುಬ್ಬಿಯ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಮಾರ್ಚ್ 07ರ ಮಂಗಳವಾರ ನಡೆಯಲಿದೆ. ಈ ಸಮಾವೇಶಕ್ಕೆ ತುಮಕೂರು ಸಂಘಟನಾತ್ಮಕ ಜಿಲ್ಲೆಯ ಸುಮಾರು 25000 ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾದ ಅಧ್ಯಕ್ಷ ಆಯರಹಳ್ಳಿ ಶಂಕರಪ್ಪ ತಿಳಿಸಿದರು. ಇವರು ತುಮಕೂರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಆಯೋಜಿಸಿದ ಜಿಲ್ಲಾ ಒಬಿಸಿ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳ ಸಮಾವೇಶದ ಪೂರ್ವಬಾವಿ ಸಭೆಯಲ್ಲಿ ಮಾತನಾಡುತ್ತಾ, ಕೇಂದ್ರ ಮತ್ತು ರಾಜ್ಯ ಬಿಜೆಪಿ ಡಬ್ಬಲ್ ಇಂಜಿನ್ ಸರ್ಕಾರಗಳು ಹಿಂದುಳಿದ ವರ್ಗದ ಜನಾಂಗದ ಶ್ರೇಯಾಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ನೀಡಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಆದ್ಯ ಗಮನ ನೀಡಿದೆ. ಸರ್ಕಾರದ ಯೋಜನೆ ಮತ್ತು ಕಾರ್ಯಕ್ರಮಗಳ ಮೂಲಕ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಭಾರೀ ಕೊಡುಗೆ ನೀಡಿರುವ ಡಬ್ಬಲ್ ಇಂಜಿನ್ ಸರ್ಕಾರಗಳಿಗೆ ಅಭಿನಂದಿಸಲು ಮತ್ತು ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳ ಮತದಾರರು ಮತದಾನ ಮಾಡಲು ಪ್ರೇರೇಪಿಸಲು ಬೃಹತ್ ಸಮಾವೇಶವನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರರವರ ನೇತೃತ್ವದಲ್ಲಿ ಆಯೋಜಿಸಲಾಗಿದೆ ಎಂದರು.…

Read More

ತುಮಕೂರು ಶ್ರಮಿಕ ವರ್ಗಕ್ಕೆ ಸೇರಿದ ಬೆಸ್ತರ(ಮೀನುಗಾರರ) ಸಮುದಾಯವನ್ನು ಗುರುತಿಸಿ, ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಿರುವ ಪಕ್ಷವೇಂದರೆ ಆದು ಕಾಂಗ್ರೆಸ್ ಮಾತ್ರ ಎಂದು ಕೆಪಿಸಿಸಿ ಮೀನುಗಾರರ ಘಟಕದ ರಾಜ್ಯಾಧ್ಯಕ್ಷ ಮಂಜುನಾಥ್ ಬಿ.ಸುಣಗಾರ ತಿಳಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಆಯೋಜಿಸಿದ್ದ ಡಿಸಿಸಿ ಮೀನುಗಾರರ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡುತಿದ್ದ ಅವರು, ಕಾಂಗ್ರೆಸ್ ಪಕ್ಷ ಪ್ರತಿ ಬಾರಿಯ ಚುನಾವಣೆಯಲ್ಲಿಯೂ ಮೀನುಗಾರರು, ಮೊಗವೀರರು, ಬೆಸ್ತರು ಹೀಗೆ ಸುಮಾರು 39 ವಿವಿಧ ಹೆಸರಿನಲ್ಲಿ ಗುರುತಿಸಿಕೊಂಡಿರುವ ಸಮುದಾಯಗಳಿಗೆ 5-8 ಸೀಟುಗಳನ್ನು ನೀಡಿ, ನಮ್ಮಗಳ ರಾಜಕೀಯ ಅವಕಾಶ ಕಲ್ಪಿಸಿದೆ.ಆದರೆ ಬಿಜೆಪಿ ಅತಿ ಹೆಚ್ಚು ಜನಸಂಖ್ಯೆ ಇರುವ ಗುರುಮಿಠಕಲ್ ಮತ್ತು ಕಾಪು ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಅವಕಾಶ ನೀಡುತ್ತಿದೆ. ಜೆಡಿಎಸ್‍ನಿಂದ ಇದುವರೆಗೂ ನಮ್ಮ ಸಮುದಾಯ ಒಬ್ಬರಿಗೂ ಟಿಕೇಟ್ ನೀಡಿಲ್ಲ. ಹಾಗಾಗಿ ಮೊಗವೀರ ಸಮುದಾಯ ಈ ಬಾರಿ ಕಾಂಗ್ರೆಸ್ ಪಕ್ಷದ ಕೈ ಬಲಪಡಿಸುವ ಕೆಲಸ ಮಾಡಬೇಕೆಂದರು. ರಾಜ್ಯದಲ್ಲಿ ಸುಮಾರು 85 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಮೋಗವೀರ ಸಮುದಾಯವನ್ನು ಗುರುತಿಸಿ ಮೊದಲ ಬಾರಿ…

Read More

ತುಮಕೂರು ಯಡಿಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಕ್ಷೇತ್ರದ 2023ನೇ ಸಾಲಿನ ಜಾತ್ರಾ ಕಾರ್ಯಕ್ರಮ ಮಾರ್ಚ್ 21, 2023ರಿಂದ ಪ್ರಾರಂಭಗೊಂಡು ಏಪ್ರಿಲ್ 6ರವರೆಗೆ ಜರುಗಲಿದ್ದು, ಜಾತ್ರಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ವಿವಿಧ ಇಲಾಖಾ ಅಧಿಕಾರಿಗಳು ತಮ್ಮ ಇಲಾಖಾ ಕಾರ್ಯ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಾತ್ರಾ ಕಾರ್ಯಕ್ರಮದ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಮುಖವಾಗಿ ಜಾತ್ರೆಗೆ ಬರುವ ಜಾನುವಾರುಗಳಿಗೆ ಸೋಂಕು ರೋಗ ಬಾರದಂತೆ ಪಶುಪಾಲನಾ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜಾತ್ರೆಗೆ ಆಗಮಿಸುವ ರಾಸುಗಳಿಗೆ ಜಾತ್ರೆಗೆ ಮುನ್ನ 15 ದಿನಗಳ ಹಿಂದೆ ಲಸಿಕೆ ಹಾಕಿರುವ ಪ್ರಮಾಣ ಪತ್ರ ಪಡೆಯಬೇಕು ಮತ್ತು ಉತ್ತಮ ರಾಸುಗಳಿಗೆ ಬಹುಮಾನ ನೀಡುವ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಆಯ್ಕೆ ಸಮಿತಿಯನ್ನು ರಚಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು. ಜಾತ್ರಾ ಕಾರ್ಯಕ್ರಮದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಶಿಸ್ತು ಪರಿಪಾಲನೆಗೆ ಹೆಚ್ಚಿನ ಸಂಖ್ಯೆಯಲ್ಲಿ…

Read More