ತುಮಕೂರು ನಗರದ ಹೊರವಲಯದ ಶ್ರೀ ಅತಿಶಯ ಕ್ಷೇತ್ರ ಮಂದರಗಿರಿಯಲ್ಲಿ ಭಾರತದಲ್ಲೇ ಪ್ರಥಮವಾದ ವಿಶಿಷ್ಟ ವಾಸ್ತು ರಚನೆಯೊಂದಿಗೆ ಮಹಾವೀರ ತೀರ್ಥಂಕರರ ದಿವ್ಯಾ ಕಾಶ ಸಮವಶರಣವನ್ನು ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಸಮವಶರಣದ ಪಂಚಕಲ್ಯಾಣ ಪ್ರತಿಷ್ಠಾಪನಾ ಮಹೋತ್ಸವ ಸಮಾರಂಭ ಮಾ. 8 ರಿಂದ 13 ರವರೆಗೆ 6 ದಿನಗಳ ಕಾಲ ನಡೆಯಲಿದೆ. ಮಂದರಗಿರಿಯಲ್ಲಿ 6 ದಿನಗಳ ಕಾಲ ನಡೆಯುವ ಈ ಸಮಾರಂಭ ರಾಷ್ಟ್ರಮಟ್ಟದ್ದಾಗಿದ್ದು, ಸಹಸ್ರಾರು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜೈನ ಮುನಿಗಳು, ಮಾತಾಜಿಗಳು, ದಕ್ಷಿಣ ಭಾರತದ ವಿವಿಧ ಜೈನ ಮಠಗಳ ಪೀಠಾಧೀಶರು ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಶ್ರೀ ದಿಗಂಬರ ಜೈನ ಶ್ರೀ ಪಾರ್ಶ್ವನಾಥಸ್ವಾಮಿ ಜಿನ ಮಂದಿರ ಸಮಿತಿಯ ಅಧ್ಯಕ್ಷ ನಾಗರಾಜು ಎಸ್.ಜೆ. ಪತ್ರಿಕಾಗೋಷ್ಠಿಯಲ್ಲಿಂದು ತಿಳಿಸಿದರು. ಮಂದರಗಿರಿಯಲ್ಲಿ ದಿಗಂಬರ ಜೈನ ಮುನಿಗಳಾದ ಶ್ರೀ ಅಮೋಘ ಕೀರ್ತಿ ಮಹಾರಾಜ್ ಮತ್ತು ಅಮರಕೀರ್ತಿ ಮಹಾರಾಜ್ ಅವರ ನೇತೃತ್ವದಲ್ಲಿ ವಿಭಿನ್ನವಾದ ಶ್ರೀ ದಿವಾಕಾಶ ಸಮವಶರಣ ನಿರ್ಮಾಣಗೊಂಡಿದೆ. ಮೂರು ವರ್ಷಗಳಿಂದ ನಿರಂತರವಾಗಿ ಕಾಮಗಾರಿ ನಡೆಯುತ್ತಿದ್ದು, ನೂರಾರು ನುರಿತ…
Author: News Desk Benkiyabale
ತುಮಕೂರು ಕೊರಟಗೆರೆ ಕ್ಷೇತ್ರದ ವಿದ್ಯಾವಂತ ನಿರುದ್ಯೋಗಿ ಯುವಜನರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಮಾರ್ಚ್ 05ರ ಭಾನುವಾರ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಟಿಕೇಟ್ ಆಕಾಂಕ್ಷಿ ಹಾಗೂ ಸಮಾಜ ಸೇವಕ ಕೆ.ಎಂ.ಮುನಿಯಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಸ್ಥಳೀಯ ಮತ್ತು ಬೆಂಗಳೂರಿನ ವಿವಿಧೆಡೆಗಳಿಂದ ಸುಮಾರು 50ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗಾರ್ಥಿಗಳನ್ನು ಅರಿಸಿ ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುತಿದ್ದು,ಸ್ಕ್ರೀನಿಂಗ್ ನಂತರ ಆಯ್ಕೆಯಾಗುವ ಆರ್ಹ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರ ವಿತರಿಸಲಾಗುವುದು ಎಂದರು. ಕೊರಟಗೆರೆ ತಾಲೂಕು ಅಲ್ಲದೆ ಜಿಲ್ಲೆಯ ವಿವಿಧಡೆಗಳಿಂದ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸ ಬಹುದಾಗಿದೆ.ಐಟಿಐ,ಡಿಪ್ಲಮೋ,ಬಿ.ಎಸ್ಸಿ,ಬಿಕಾಂ,ಎಂಬಿಎ,ಎಂ.ಕಾಂ, ಐಐಟಿ ಮತ್ತು ಬಿಇ ಕಲಿತವರು ಮೇಳದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ.ಮೇಳಕ್ಕೆ ಬರುವ ಸಂದರ್ಭದಲ್ಲಿ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳ ಜೊತೆಗೆ,ಆಧಾರ್ ಕಾರ್ಡು ಹಾಗೂ ಭಾವಚಿತ್ರದೊಂದಿಗೆ ಹಾಜರಿರಬೇಕು. ಮಾರ್ಚ್ 05ರ ಭಾನುವಾರ ನಡೆಯುವ ವೇಳವನ್ನು ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟಿಸಲಿದ್ದು,ಮಾಜಿ ಶಾಸಕ…
ತುಮಕೂರು ನಗರದ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಾರ್ಚ್ 5ರಂದು ಹಮ್ಮಿಕೊಂಡಿರುವ “ಫಲಾನುಭವಿಗಳ ಸಮ್ಮೇಳನ” ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಉದ್ಘಾಟಿಸಲಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾಹಿತಿ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಗುರುವಾರ ಸಂಜೆ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಜರುಗಿದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿದ ಅವರು, ಮಾರ್ಚ್ 5ರ ಮುಖ್ಯಮಂತ್ರಿಗಳ ಕಾರ್ಯಕ್ರಮದ ಆಯೋಜನೆಯಲ್ಲಿ ಹಾಗೂ ಶಿಷ್ಟಾಚಾರದ ಪಾಲನೆಯಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ಅಚ್ಚುಕಟ್ಟಾಗಿ ಏರ್ಪಡಿಸಲು ವಿವಿಧ ಅಧಿಕಾರಿಗಳನ್ನು ನಿಯೋಜಿಸಿ, ಕರ್ತವ್ಯಗಳನ್ನು ಸೂಚಿಸಲಾಗಿದೆ ಎಂದು ಸಚಿವರಿಗೆ ತಿಳಿಸಿದರು. ಕಾರ್ಯಕ್ರಮಕ್ಕೆ ಎಲ್ಲಾ ತಾಲ್ಲೂಕುಗಳಿಂದ ವಿವಿಧ ಯೋಜನೆಗಳ 25,000 ಫಲಾನುಭವಿಗಳು ಆಗಮಿಸಲಿದ್ದು, ಫಲಾನುಭವಿಗಳನ್ನು ಕರೆ ತರಲು ಕೆಎಸ್‍ಆರ್‍ಟಿಸಿ ಹಾಗೂ ಖಾಸಗಿ ಸೇರಿದಂತೆ 358 ವಿಶೇಷ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದರು. ನಂತರ ಜಿಲ್ಲಾಧಿಕಾರಿಗಳು ಮಾತನಾಡುತ್ತಾ,…
ತುಮಕೂರು ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 25 ಸಾವಿರ ರೂ ನೀಡಬೇಕು, ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಮಾರಾಟ ವಾಗುವುದನ್ನು ತಡೆಯಲು ನ್ಯಾಫೇಡ್ ಮೂಲಕ ಖರೀದಿಸಲು ಮುಂದಾಗಬೇಕು ಹಾಗು ವಿದೇಶಗಳಿಂದ ಅಮದಾಗುತ್ತಿರುವ ಕೊಬ್ಬರಿಗೆ ಹೆಚ್ಚಿನ ಸುಂಕ ವಿಧಿಸಿ, ಕೊಬ್ಬರಿ ಬೆಳೆಗಾರರನ್ನು ರಕ್ಷಿಸುವಂತೆ ಒತ್ತಾಯಿಸಿ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು ರೈತ ಸಂಘ ಹಾಗು ಹಸಿರು ಸೇನೆಯ ಜಿಲ್ಲಾಧ್ಯಕ್ಷ ಆನಂದ ಪಟೇಲ್ ನೇತೃತ್ವದಲ್ಲಿ ನೂರಾರು ರೈತರು ಜಿಲ್ಲಾಧಿಕಾರಿ ಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು ಈ ವೇಳೆ ಮಾತನಾಡಿದ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ಕೆಂಕೆರೆ ಸತೀಶ್, ಸರಕಾರವೇ ನಿಗಧಿಪಡಿಸಿದ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ರೈತರ ಉತ್ಪನ್ನಗಳನ್ನು ಖರೀದಿಸುವುದು ಕಾನೂನಿನ ಪ್ರಕಾರ ತಪ್ಪು ಆದರೆ ರಾಜ್ಯದಲ್ಲಿ ಸರಕಾರವೇ ನಿಗಧಿಪಡಿಸಿದ ಬೆಂಬಲ ಬೆಲೆ 11750 ಕ್ಕಿಂತ ಕಡಿಮೆ ಬೆಲೆಗೆ ಮುಕ್ತ ಮಾರುಕಟ್ಟೆಯಲ್ಲಿ ಕೊಬ್ಬರಿಯನ್ನು ಕೊಳ್ಳಲಾಗುತ್ತಿದೆ.ಇಂತಹ…
ತುಮಕೂರು ಭಾರತೀಯ ಜನತಾ ಪಾರ್ಟಿಯ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಸಿದ್ದಗಂಗಾ ಮಠದಲ್ಲಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರವನ್ನು ಆರಂಭಿಸಿದರು. ಶ್ರೀಕ್ಷೇತ್ರದಲ್ಲಿ ಹಿರಿಯ ಶ್ರೀಗಳ ಗದ್ದುಗೆ ದರ್ಶನ ಪಡೆದ ನಂತರ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಮಾಜಿ ಸಚಿವ ಶಿವಣ್ಣ ಅವರು ಮತದಾರರ ಮನೆ ಮನೆಗೆ ತೆರಳಿ ಪಕ್ಷದ ಹಾಗೂ ತಮ್ಮ ಅಧಿಕಾರಾವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಮನವರಿಕೆ ಮಾಡಿಕೊಡುವ ಕಾರ್ಯವನ್ನು ಕೈಗೊಂಡರು. ತಮ್ಮ ಅಭಿಮಾನಿಗಳು, ಹಿತೈಷಿಗಳೊಂದಿಗೆ ಪ್ರಚಾರ ಕಾರ್ಯವನ್ನು ಆರಂಭಿಸಿದ ಮಾಜಿ ಸಚಿವ ಎಸ್. ಶಿವಣ್ಣ ಅವರು ಮಾತನಾಡಿ, ಮಹಾತ್ಮರ ಸನ್ನಿಧಿಯಿಂದ ಒಳ್ಳೆಯ ಕೆಲಸ ಆರಂಭಿಸುವುದು ವಾಡಿಕೆ. ನಾನು ಶ್ರೀಕ್ಷೇತ್ರದ ಭಕ್ತ. ಹಾಗಾಗಿ ಯಾವುದೇ ಒಂದು ಒಳ್ಳೆಯ ಕೆಲಸ ಮಾಡುವಾಗ ಇಲ್ಲಿಂದಲೇ ಶುರು ಮಾಡುವುದು ನನ್ನ ಪದ್ದತಿ ಎಂದರು. 1994 ರಿಂದ ನಾನು ತುಮಕೂರು ನಗರ ಕ್ಷೇತ್ರದಲ್ಲಿ…
ತುಮಕೂರು ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನ ಮತ್ತು ಪ್ರಗತಿ ರಥಕ್ಕೆ ಸಿದ್ದಗಂಗಾ ಮಠದಲ್ಲಿಂದು ಲಿಂಗೈಕ್ಯ ಹಿರಿಯ ಶ್ರೀಗಳಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸುವ ಮೂಲಕ ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ಚಾಲನೆ ನೀಡಿದರು. ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ರಥಯಾತ್ರೆ ಹಾಗೂ ವಿಜಯರಥಯಾತ್ರೆ ಕುರಿತು ಮಾತನಾಡಿದ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ, ರಾಜ್ಯಾದ್ಯಂತ ಈ ವಿಜಯ ರಥಯಾತ್ರೆ ನಡೆಯುತ್ತಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿಯೂ ಸರ್ಕಾರದ ಸಾಧನಗಳ ಕುರಿತು ಜನರಿಗೆ ಮನದಟ್ಟು ಮಾಡಿಕೊಡುವ ನಿಟ್ಟಿನಲ್ಲಿ ದೊಡ್ಡ ಎಲ್.ಸಿ.ಡಿ. ಸ್ಕ್ರೀನ್ ಇರುವ ವಾಹನದ ಮೂಲಕ ಕಾರ್ಯಕರ್ತರು ಪ್ರತಿ ಬಡಾವಣೆ, ಮನಗೆ ತೆರಳಿ ಪಕ್ಷದ ಕರಪತ್ರ ಹಂಚುವ ಜತೆಗೆ, ಪ್ರಣಾಳಿಕೆಗೆ ಅಗತ್ಯ ಸಲಹೆ, ಸೂಚನೆಗಳನ್ನು ಪಡೆಯಲಿದ್ದಾರೆ ಎಂದರು. ಈಗಾಗಲೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರು ಚಾಮರಾಜನಗರ ಜಿಲ್ಲೆ ಮಲೆಯ ಮಹದೇಶ್ವರ ದೇವಾಲಯದ ಆವರಣದಲ್ಲಿ ವಿಜಯ ಸಂಕಲ್ಪ ಮತ್ತು ವಿಜಯರಥಯಾತ್ರೆಗೆ ಚಾಲನೆ ನೀಡಿದ್ದಾರೆ. ನಾವು…
ತುರುವೇಕೆರೆ ತಾಲೂಕು ತೆಂಗು ಮತ್ತು ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಲೋಕಮ್ಮನಹಳ್ಳಿ ಕಾಂತರಾಜ್ ಮಾತನಾಡಿ ಲೋಕಮ್ಮನಹಳ್ಳಿ ಪೀಡರ್ ವ್ಯಾಪ್ತಿಯ ಸುಮಾರು 15 ಕ್ಕೂ ಹೆಚ್ಚು ಗ್ರಾಮಗಳ ವ್ಯಾಪ್ತಿಯ ರೈತರುಗಳು ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ವಿದ್ಯುತ್ ಪೋರೈಕೆ ಇಲ್ಲದೆ ಪರಿತಪಿಸುವಂತಾಗಿದೆ. ಹಗಲು 3 ಗಂಟೆ ಹಾಗೂ ರಾತ್ರಿ ವೇಳೆ 4 ಗಂಟೆ ಮೂರು ಪೇಸ್ ವಿದ್ಯುತ್ ನೀಡಬೇಕೆಂದು ಸರಕಾರದ ಆದೇಶವಿದೆ. ಕರ್ನಾಟಕ ವಿದ್ಯುತ್ಚಕ್ತಿ ಆಕ್ಟ್ ಉಲ್ಲಂಘಿಸುವ ಮೂಲಕ ಬೆಸ್ಕಾಂ ಅಧಿಕಾರಿಗಳು ರೈತರನ್ನು ವಂಚಿಸುತ್ತಿದ್ದಾರೆ ಎಂದು ದೂರಿದರು. ವಿದ್ಯುತ್ ಸಮಸ್ಯೆ ಬಗ್ಗೆ ಬೆಸ್ಕಾಂ ಅಧಿಕಾರಿಗಳನ್ನು ಕೇಳಿದರೇ ಉಡಾಫೆ ಉತ್ತರ ನೀಡುವ ಮೂಲಕ ರೈತರನ್ನು ಅಸಡ್ಡೆಯಿಂದ ಕಾಣುತ್ತಾರೆ. ಒಟ್ಟಾರೇ ಬೆಸ್ಕಾಂ ರೈತ ವಿರೋಧಿ ಅನುಸರಿಸುತ್ತಿದೆ .ಬೆಸ್ಕಾಂ ಕಚೇರಿ ಮುಂದೆ ಇಂದು ಕೆಲವೇ ರೈತರು ಸಾಂಕೇತಿಕ ಧರಣಿ ನಡೆಸಿ ಅಧಿಕಾರಿಗಳ ಗಮನ ಸೆಳೆಯುವ ಪ್ರಯತ್ನ ಇದಾಗಿದ್ದು ಅಧಿಕಾರಿಗಳು ತಕ್ಷಣ ಮೂರು ಪೇಸ್ ವಿದ್ಯುತ್ತನ್ನು ನೀಡಲು ಮುಂದಾಗಲಿ, ಇಲ್ಲವಾದಲ್ಲಿ ಶೀಘ್ರ ತಾಲೂಕಿನ ಎಲ್ಲಾ ರೈತರುಗಳನ್ನು ಒಟ್ಟಾಗಿ ಸೇರಿಸಿ ಬೆಸ್ಕಾಂ…
ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾ. 5ರಂದು “ಫಲಾನುಭವಿಗಳ ಸಮಾವೇಶ”ವನ್ನು ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಈ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು ಸಮಾವೇಶದಲ್ಲಿ ವಿವಿಧ ಇಲಾಖೆಯ ಯೋಜನೆಗಳಡಿ ಆಯ್ಕೆಯಾಗಿರುವ ಸುಮಾರು 25000 ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ನೀಡಲಾಗುವುದು ಎಂದರು. ಸಮಾವೇಶದಲ್ಲಿ ಕೃಷಿ, ತೋಟಗಾರಿಕೆ, ಸಮಾಜ ಕಲ್ಯಾಣ, ರೇಷ್ಮೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೀನುಗಾರಿಕೆ, ಕಾರ್ಮಿಕ ಇಲಾಖೆಗಳು ಸೇರಿದಂತೆ ವಿವಿಧ ನಿಗಮಗಳು ನೀಡುವ ಸಾಲ-ಸಹಾಯಧನ, ರೈತ ವಿದ್ಯಾನಿಧಿ, ವಿದ್ಯಾಸಿರಿ, ಗಂಗಾ ಕಲ್ಯಾಣ, ವಿದ್ಯಾರ್ಥಿವೇತನ, ಪಿಎಂ ಕಿಸಾನ್, ಪ್ರೋತ್ಸಾಹಧನ, ಕಾನೂನು ತರಬೇತಿ ಹಾಗೂ ಮತ್ತಿತರ ಸೌಲಭ್ಯಗಳನ್ನು ಮುಖ್ಯಮಂತ್ರಿಗಳು ಜಿಲ್ಲೆಯ ಫಲಾನುಭವಿಗಳಿಗೆ ವಿತರಿಸಲಿದ್ದು, ಜಿಲ್ಲೆಯ ಎಲ್ಲಾ ತಾಲೂಕಿನ ಫಲಾನುಭವಿಗಳನ್ನು ಕರೆ ತರುವ ಜವಾಬ್ದಾರಿಯನ್ನು ಆಯಾ ಇಲಾಖೆಯ ಅಧಿಕಾರಿಗಳಿಗೆ ವಹಿಸಿದರು. ಮುಖ್ಯಮಂತ್ರಿ ಬೊಮ್ಮಾಯಿ ಅವರು ನಗರದಲ್ಲಿ ಉದ್ಘಾಟನೆಗೆ ಸಿದ್ಧಗೊಂಡಿರುವ…
ತುಮಕೂರು ಮುಂಬರುವ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ನಗರ ಬಿಜೆಪಿ ಪಕ್ಷದಿಂದ ಅಧಿಕೃತ ಅಭ್ಯರ್ಥಿಯಾಗಿ ನಿಲ್ಲುವುದು ಖಚಿತವೆಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಸ್ಪಷ್ಠಪಡಿಸಿದ್ದಾರೆ. ನಗರದ ತಮ್ಮ ಕಛೇರಿಯಲ್ಲಿ ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಹಾಲಿ ಶಾಸಕರು ಮಾರ್ಚ್ 5 ರಂದು ತುಮಕೂರು ನಗರದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣವಾಗಿರುವ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಲು ಮುಖ್ಯಮಂತ್ರಿಗಳಾದಿಯಾಗಿ ರಾಷ್ಟ್ರೀಯ ಮತ್ತು ರಾಜ್ಯದ ಪ್ರಮುಖ ಬಿಜೆಪಿ ನಾಯಕರುಗಳು ಆಗಮಿಸಲಿದ್ದಾರೆಂದು ತಿಳಿಸಿದರು. ಶಿಕ್ಷಣದ ವಲಯದ ಅಭಿವೃದ್ಧಿ ಕಾಮಗಾರಿಗಳು, ಕ್ರೀಡಾ ವಲಯದ ಅಭಿವೃದ್ಧಿ ಕಾಮಗಾರಿಗಳು, ಜಲ ಸಂರಕ್ಷಣೆ ಹಾಗೂ ಕೆರೆಗಳ ಅಭಿವೃದ್ಧಿ ಕಾಮಗಾರಿಗಳು,ಕೊಳೆಗೇರಿ ಅಭಿವೃದ್ಧಿ ಕಾಮಗಾರಿಗಳು, ದೇವಾಲಯಗಳ ಜೀರ್ಣೋದ್ಧಾರ ಅಭಿವೃದ್ಧಿ, ಒಳಚರಂಡಿ ವ್ಯವಸ್ಥೆ ಸಮುದಾಯ ಭವನಗಳ ನಿರ್ಮಾಣ ಸೇರಿದಂತೆ ಇನ್ನೂ ಅನೇಕ ಅಭಿವೃದ್ಧಿ ಕಾಮಗಾರಿಗಳು ನನ್ನ ಅವಧಿಯಲ್ಲಿ ಆಗಿರುವುದರಿಂದ ಬಿಜೆಪಿ ಪಕ್ಷದ ಎಲ್ಲಾ ಪ್ರಮುಖ ಮುಖಂಡರು ನನ್ನ ಹೆಸರನ್ನು ರಾಷ್ಟ್ರೀಯ ಚುನಾವಣಾ ಆಯ್ಕೆ ಸಮಿತಿಗೆ ಶಿಫಾರಸ್ಸು ಮಾಡಿರುತ್ತಾರೆಂಬ ವಿಷಯವನ್ನೂ ಸಹ ಬಹಿರಂಗ ಪಡಿಸಿದ್ದಾರೆ. ನಾನು ತುಮಕೂರಿನ ನಗರದಿಂದ 2018ರಲ್ಲಿ ನಗರ…
ತುಮಕೂರು ರಾಜ್ಯದಲ್ಲಿ 2013 ರಿಂದ 2018ರವರಗೆ ಯಾವುದೇ ಕಳಂಕವಿಲ್ಲದೆ, ಎಲ್ಲಾ ವರ್ಗದ ಜನರಿಗೂ ಯೋಜನೆಗಳನ್ನು ನೀಡಿ, ಸರಕಾರದ ಸವಲತ್ತುಗಳು ದೊರೆಯುವಂತೆ ಮಾಡಿದ ಸಿದ್ದರಾಮಯ್ಯ ಅವರನ್ನು ಟಿಪ್ಪುವನ್ನು ಕೊಂದ ಹಾಗೆ ಕೊಲ್ಲಬೇಕು ಎಂಬ ಹೇಳಿಕೆ ನೀಡಿರುವ ಸಚಿವ ಡಾ.ಆಶ್ವಥನಾರಾಯಣ ಅವರನ್ನು ಬಂಧಿಸದೆ, ಸಚಿವ ಸಂಪುಟದಿಂದ ವಜಾ ಮಾಡದೇ ಇರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ ಎಂದು ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಪುಟ್ಟಸ್ವಾಮಿಗೌಡ ತಿಳಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ತುಮಕೂರು ನಗರ ಮತ್ತು ಗ್ರಾಮಾಂತರ ವಿಧಾನಸಭಾ ಕ್ಷೇತ್ರಗಳ ಕಾರ್ಮಿಕ ಘಟಕದ ಪದಾಧಿಕಾರಿಗಳು ಮತ್ತು ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,ರಾಜ್ಯಪಾಲರು ನಿಜವಾಗಿಯೂ ಸಂವಿಧಾನದತ್ತವಾಗಿ ನಡೆದುಕೊಂಡಿದ್ದರೆ,ಅವರನ್ನು ಮಂತ್ರಿ ಸ್ಥಾನದಿಂದ ವಜಾ ಮಾಡಬೇಕಾಗಿತ್ತು.ಆದರೆ ದುರ್ದೈವ,ಇಂದಿಗೂ ಅವರು ಅಧಿಕಾರದಲ್ಲಿ ಮುಂದುವರೆದಿದ್ದಾರೆ ಎಂದರು. ಕೇಂದ್ರ ಸರಕಾರದ ಕಳೆದ 9 ವರ್ಷಗಳ ಆಡಳಿತದಲ್ಲಿ ರೈತರು,ಕಾರ್ಮಿಕರು,ಬಡವರು ಭ್ರಮ ನಿರಶನಗೊಂಡಿದ್ದಾರೆ.ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಕಾರ್ಮಿಕರ ಪರವಾಗಿ ತಂದಿದ್ದ 44 ಕಾಯ್ದೆಗಳನ್ನು,4 ಸಂಹಿತೆಗಳಾಗಿ ಬದಲಾಯಿಸಿ,…











