ಬೆಂಗಳೂರು ಸ್ಯಾಂಡಲ್ ವುಡ್ ನ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭಗವಾನ್ (90) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಕನ್ನಡ ಸಿನಿಮಾ ರಂಗದಲ್ಲಿ ದೊರೈ ಭಗವಾನ್ ಎಂದೇ ಜೋಡಿ ಖ್ಯಾತಿಯಾಗಿತ್ತು. ಈಗಾಗಲೇ ದೊರೆ ದೂರವಾಗಿದ್ದಾರೆ. ಅವರನ್ನು ಅರಸಿಕೊಂಡು ಭಗವಾನ್ ಹೊರಟಿದ್ದಾರೆ. ಶ್ರೀನಿವಾಸ್ ಕೃಷ್ಣ ಅಯ್ಯಂಗಾರ್ ಭಗವಾನ್ ಇವರು ಪೂರ್ಣ ಹೆಸರು. 1933ರಲ್ಲಿ ಮೈಸೂರಿನ ತಮಿಳು ಅಯ್ಯಂಗಾರ್ ಕುಟುಂಬದಲ್ಲಿ ಜನಿಸಿದ್ದ ಇವರು, ರಂಗಭೂಮಿ ಹಿನ್ನೆಲೆಯುಳ್ಳವರು. ಕಾಲೇಜು ದಿನಗಳಲ್ಲಿ ರಂಗಭೂಮಿಯ ಸಾಕಷ್ಟು ಚಟುವಟಿಕೆಗಳಲ್ಲಿ ತೊಡಗಿಕೊಂಡವರು. 1956ರಲ್ಲಿ ಕಣಗಾಲ್ ಪ್ರಭಾಕರ ಶಾಸ್ತ್ರಿಗಳಿಗೆ ಸಹಾಯಕ ನಿರ್ದೇಶಕರಾಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದವರು. 1966ರಲ್ಲಿ ತೆರೆಕಂಡ ಸಂಧ್ಯಾರಾಗ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾಗಿ ಭಡ್ತಿ ಪಡೆದವರು. ನಂತರ ನಿರ್ದೇಶಕ ದೊರೈರಾಜ್ ಜೊತೆಗೂಡಿ ಸ್ವತಂತ್ರ ನಿರ್ದೇಶಕರಾದವರು. 1993ರಲ್ಲಿ ದೊರೈರಾಜ್ ನಿಧನದ ನಂತರ ಒಂಟಿಯಾದರು ಭಗವಾನ್. ಬರೋಬ್ಬರಿ 49 ಸಿನಿಮಾಗಳನ್ನು ಈ ಜೋಡಿ ನಿರ್ದೇಶನ ವಿಶೇಷ. ಈ ಜೋಡಿಯ ಮತ್ತೊಂದು ದಾಖಲೆಯೆಂದರೆ 24 ಕಾದಂಬರಿ ಆಧರಿಸಿದ ಸಿನಿಮಾಗಳನ್ನು…
Author: News Desk Benkiyabale
ತುಮಕೂರು ಮಾಜಿ ಬಿಜೆಪಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದು ಇದರೊಂದಿಗೆ ಚಿಕ್ಕನಾಯಕನ ಹಳ್ಳಿ ವಿಧಾನ ಸಭಾ ಕ್ಷೇತ್ರದ ಚಿತ್ರಣ ಹೊಸದೊಂದು ತಿರುವು ಪಡೆದಿದ್ದು ಇಂದು ಸುರ್ಜೆವಾಲಾ ಸಮ್ಮಖದಲ್ಲಿ ಸೇರ್ಪಡೆಗೊಂಡರು ಈ ಕ್ಷಣವನ್ನು ಕಾಂಗ್ರೆಸ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಕಳೆದ ಬಾರಿ ಜೆ.ಸಿ. ಮಾಧು ಸ್ವಾಮಿ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದ ಕಿರಣ್ ಕುಮಾರ್ ಅವರಿಗೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಡುವುದಾಗಿ ಆಸ್ವಾಸನೆ ನೀಡಿದ್ದರು. ಅದರಂತೆ 2023 ರ ವಿಧಾನ ಸಭಾ ಚುನಾವಣೆ ಬರುವುದನ್ನೆ ಅವರು ಎದುರು ನೋಡುತ್ತಿದ್ದರು. ಆದರೆ ಹಾಲಿ ಸಚಿವರು ಆಗಿರುವ ಜೆ.ಸಿ. ಮಾಧುಸ್ವಾಮಿ ಅವರು ಮತ್ತೆ ಬಿಜೆಪಿ ಟಿಕೆಟ್ ಪಡೆಯುವ ಸುಳಿವು ಹಲವು ತಿಂಗಳಿನಿಂದ ಕಂಡು ಬಂದಿತ್ತು. ಇದರಿಂದ ತೀವ್ರ ಅಸಮಧಾನಗೊಂಡಿದ್ದ ಕೆ.ಎಸ್.ಕಿರಣ್ ಕುಮಾರ್ ಹಾಗೂ ಅವರ ಬೆಂಬಲಿಗರು ಮುಂದಿನ ಯೋಜನೆಗಳ ಬಗ್ಗೆ ತಯಾರಿ ನಡೆಸಿದ್ದರು. ಒಂದು ವೇಳೆ ಬಿಜೆಪಿ ಟಿಕೆಟ್ ತಪ್ಪಿದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎಂಬ ಸಲಹೆಗಳು ಬಂದಿದ್ದವು. ಕಾರ್ಯಕರ್ತರು ಹಾಗೂ ಅಭಿಮಾನಿಗಳ…
ತುಮಕೂರು ರಾಗಿ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಿರುವ ಜಿಲ್ಲೆಯ ಎಲ್ಲಾ ರೈತರು ನಿಗಧಿತ ವೇಳಾ ಪಟ್ಟಿಯನ್ವಯ ತಮಗೆ ಟೋಕನ್‍ನಲ್ಲಿ ನೀಡಿರುವ ದಿನಾಂಕಗಳಂದೇ ರಾಗಿಯನ್ನು ಖರೀದಿ ಕೇಂದ್ರಗಳಿಗೆ ತರುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ರೈತರಲ್ಲಿ ಮನವಿ ಮಾಡಿದ್ದಾರೆ. ರಾಗಿ ಕೇಂದ್ರದಲ್ಲಿ ನೋಂದಾಯಿಸಿಕೊಂಡಿರುವ ಎಲ್ಲಾ ರೈತರಿಂದ ರಾಗಿಯನ್ನು ಖರೀದಿಸಲಿದ್ದು, ರೈತರು ಅನವಶ್ಯಕ ಗೊಂದಲಗಳಿಗೆ ಒಳಗಾಗದೆ ಟೋಕನ್‍ನಲ್ಲಿ ನೀಡಿರುವ ದಿನಾಂಕದಂದೇ ರಾಗಿಯನ್ನು ಖರೀದಿ ಕೇಂದ್ರಗಳಿಗೆ ತರುವಂತೆ ಅವರು ಮನವಿ ಮಾಡಿದ್ದಾರೆ. 2022-23ನೇ ಸಾಲಿನ ಕನಿಷ್ಟ ಬೆಂಬಲ ಯೋಜನೆಯಡಿ ರೈತರಿಂದ ರಾಗಿ ಖರೀದಿಸುವ ಸಂಬಂಧ ಜಿಲ್ಲೆಯಲ್ಲಿ 11 ರಾಗಿ ಕೇಂದ್ರಗಳನ್ನು ತೆರಯಲಾಗಿರುತ್ತದೆ. ಈ ಯೋಜನೆಯಡಿ 63,735 ರೈತರಿಂದ ಸುಮಾರು 9ಲಕ್ಷ ಕ್ವಿಂಟಾಲ್ ರಾಗಿ ಮಾರಾಟ ಮಾಡಲು ಇಚ್ಚಿಸಿ ರಾಗಿ ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿರುತ್ತಾರೆ. ಖರೀದಿ ಪ್ರಕ್ರಿಯೆ ಈಗಾಗಲೇ ಚಾಲ್ತಿಯಲ್ಲಿದ್ದು, ನೋಂದಣಿ ಮಾಡಿರುವ ರೈತರಿಂದ ರಾಗಿ ಖರೀದಿಸುವ ಬಗ್ಗೆ ನಿಗಧಿತ ದಿನಾಂಕದಲ್ಲಿ ರಾಗಿ ದಾಸ್ತಾನನ್ನು ಖರೀದಿ ಕೇಂದ್ರಗಳಿಗೆ ತರುವಂತೆ ತಿಳಿಸಿ ಟೋಕನ್ ನೀಡಲಾಗಿರುತ್ತದೆ.
ತುಮಕೂರು ಇತಿಹಾಸ ಪ್ರಸಿದ್ಧ ದೇವರಾಯನದುರ್ಗದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಜಾತ್ರಾ ಮಹೋತ್ಸವವು ಫೆಬ್ರವರಿ 28 ರಿಂದ ಮಾರ್ಚ್ 12ರವರೆಗೆ ನಡೆಯಲಿದ್ದು, ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಪೂರ್ವಭಾವಿ ಸಿದ್ಧತೆ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ದೇವರಾಯನದುರ್ಗ ದೇವಾಲಯಕ್ಕೆ ಹೋಗುವ ರಸ್ತೆ ದುರಸ್ತಿ, ಡಾಂಬರೀಕರಣ ಕಾಮಗಾರಿ, ಬೀದಿ ದೀಪ ದುರಸ್ತಿ ಸೇರಿದಂತೆ ಅಗತ್ಯ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಜಾತ್ರೆಗೆ ಬರುವ ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಜಾತ್ರೆಯ ಸಮಯದಲ್ಲಿ ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಬೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶಿಸಿದರು. ಅಂತೆಯೇ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕೆಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು. ಭಕ್ತಾದಿಗಳಿಗೆ ದೇವರಾಯನದುರ್ಗಕ್ಕೆ ಹೋಗಿ ಬರಲು ಅನುವಾಗುವಂತೆ ಕೆ.ಎಸ್.ಆರ್.ಟಿ.ಸಿ ನಿಗಮದಿಂದ ವಿಶೇಷ ಸಾರಿಗೆ ವ್ಯವಸ್ಥೆ ಮಾಡಬೇಕಲ್ಲದೆ ದೇವಾಲಯದಿಂದ ಕುಂಭಿ ಬೆಟ್ಟಕ್ಕೆ ಮಿನಿ ಬಸ್‍ಗಳನ್ನು ನಿಯೋಜಿಸಬೇಕು ಎಂದು…
ತುಮಕೂರು ಜಿಲ್ಲೆಯಲ್ಲಿ ಫೆಬ್ರವರಿ ಅಂತ್ಯಕ್ಕೆ ಫಲಾನುಭವಿಗಳ ಸಮಾವೇಶವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಸಮಾವೇಶ ಕಾರ್ಯಕ್ರಮವನ್ನು ನಡೆಸಲಾಗುವುದು. ಸಮಾವೇಶದಲ್ಲಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ನೀಡಲಾಗುವುದು ಎಂದರು. ಕೃಷಿ, ತೋಟಗಾರಿಕೆ, ಸಮಾಜ ಕಲ್ಯಾಣ, ರೇಷ್ಮೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೀನುಗಾರಿಕೆ, ಕಾರ್ಮಿಕ ಇಲಾಖೆಗಳು ಸೇರಿದಂತೆ ವಿವಿಧ ನಿಗಮಗಳು ನೀಡುವ ಸಾಲ-ಸಹಾಯಧನ, ರೈತ ವಿದ್ಯಾನಿಧಿ, ವಿದ್ಯಾಸಿರಿ, ಗಂಗಾ ಕಲ್ಯಾಣ, ವಿದ್ಯಾರ್ಥಿವೇತನ, ಪಿಎಂ ಕಿಸಾನ್, ಪ್ರೋತ್ಸಾಹಧನ, ಕಾನೂನು ತರಬೇತಿ ಹಾಗೂ ಮತ್ತಿತರ ಸೌಲಭ್ಯಗಳಿಗಾಗಿ ಫಲಾನುಭವಿಗಳ ಆಯ್ಕೆ ಬಾಕಿಯಿದ್ದಲ್ಲಿ ಕೂಡಲೇ ಆಯ್ಕೆ ಮಾಡಿ ಇಲಾಖಾವಾರು ಪಟ್ಟಿಯನ್ನು ತುರ್ತಾಗಿ ಸಲ್ಲಿಸಬೇಕು ಎಂದು ಸೂಚಿಸಿದರು. ಮುಖ್ಯಮಂತ್ರಿ ಬೊಮ್ಮಾಯಿ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಫೆಬ್ರವರಿ ಮಾಹೆಯಲ್ಲಿ ಜಿಲ್ಲೆಗೆ ಭೇಟಿ ನೀಡುವ ನಿರೀಕ್ಷೆಯಿದ್ದು, ನಗರದಲ್ಲಿ ಉದ್ಘಾಟನೆಗೆ ಸಿದ್ಧಗೊಂಡಿರುವ ಕಟ್ಟಡ ಹಾಗೂ ಅಭಿವೃದ್ಧಿ ಕಾಮಗಾರಿಗಳ…
ತುಮಕೂರು ಚುನಾವಣಾ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧು ಕೋರಿರುವ ಅರ್ಜಿ ವಿಚಾರಣೆಯನ್ನು ಸುದೀರ್ಘವಾಗಿ ನಾಲ್ಕು ತಾಸು ನಡೆಸಿದ ಕರ್ನಾಟಕ ಹೈಕೋರ್ಟ್ ಶುಕ್ರವಾರ ಆದೇಶ ಕಾಯ್ದಿರಿಸಿದೆ. ವಿಶೇಷವೆಂದರೆ ಮಧ್ಯಾಹ್ನ 3.30ಕ್ಕೆ ಆರಂಭವಾದ ವಿಚಾರಣೆಯು ಸಂಜೆ 7.15ಕ್ಕೆ ಪೂರ್ಣಗೊಂಡಿತು. ಬಿಜೆಪಿಯ ಪರಾಜಿತ ಅಭ್ಯರ್ಥಿ ಬಿ ಸುರೇಶ್ ಗೌಡ ಸಲ್ಲಿಸಿರುವ ಚುನಾವಣಾ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು. ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲ ಮಂಜುನಾಥ್ ಹಿರಾಳ್ ಅವರು ಪ್ರಕರಣವನ್ನು ವಿನಾ ಕಾರಣ ಎಳೆದಾಡಲಾಗುತ್ತಿದೆ. ಇಷ್ಟು ದಿನ ವಾದ, ಸಾಕ್ಷ್ಯ ಪರಿಶೀಲನೆ, ಸಿಆರ್‍ಪಿಸಿ ಸೆಕ್ಷನ್ 98ರ ಅಡಿ ವಿಚಾರಣೆ ನಡೆಸಲಾಗಿದೆ. ವಿಭಿನ್ನವಾದ ಲಿಖಿತ ವಾದವನ್ನು ಸಲ್ಲಿಸುವ ಮೂಲಕ ನ್ಯಾಯಾಲಯದ ಹೊರೆ ಹೆಚ್ಚಿಸಿದ್ದಾರೆ. ಹೀಗಾಗಿ, ಅರ್ಜಿಯನ್ನು ತುರ್ತಾಗಿ ಇತ್ಯರ್ಥಪಡಿಸಬೇಕು ಎಂದು ಸಕಾರಣಗಳನ್ನು ಒಳಗೊಂಡ ಅಫಿಡವಿಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು ಇದನ್ನು ಪರಿಶೀಲಿಸಿದ ಪೀಠವು ಪ್ರತಿ ಬಾರಿಯೂ ವಿಚಾರಣೆ ಮುಂದೂಡಿಕೆಗೆ…
ಕುಣಿಗಲ್ ಆಸ್ತಿ ಆಸೆಗಾಗಿ ಹೆಂಡತಿಯೇ ಸುಪಾರಿ ನೀಡಿ ಗಂಡನನ್ನು ಕೊಲೆ ಮಾಡಿಸಿರುವ ಘಟನೆ ತಾಲೂಕಿನ ಹುತ್ರಿದುರ್ಗ ಹೋಬಳಿ ಸೀನಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪತ್ನಿ ಸೇರಿ ಎಂಟು ಮಂದಿ ಆರೋಪಿಗಳನ್ನು ಕುಣಿಗಲ್ ಪೆÇಲೀಸರು ಬಂಧಿಸಿದ್ದಾರೆ. ಸೀನಪ್ಪನಹಳ್ಳಿ ಗ್ರಾಮದ ಮಂಜುನಾಥ (25) ಕೊಲೆಯಾಗಿದ್ದು, ಆರೋಪಿಗಳಾದ ಈತನ ಪತ್ನಿ ಹರ್ಷಿತಾ (20), ಆಕೆಯ ಅಣ್ಣ (ದೊಡ್ಡಮ್ಮನ ಮಗ) ಬೆಂಗಳೂರಿನ ಅಂದರಹಳ್ಳಿಯ ರಘು, ರವಿಕಿರಣ್ ಹಾಗೂ ಕುಣಿಗಲ್ ತಾಲೂಕಿನ ಕಿತ್ನಾಮಂಗಲ ಗ್ರಾಮದ ಅರುಣ್, ಕೇಶವ, ನಟರಾಜು, ಸಂತೇಮಾವತ್ತೂರಿನ ಶ್ರೀಧರ್, ಮಾಗಡಿಯ ಉಮೇಶ್ ಸೇರಿ ಒಟ್ಟು ಎಂಟು ಮಂದಿಯನ್ನು ಪೆÇಲೀಸರು ಬಂಧಿಸಿದ್ದಾರೆ. ಘಟನೆ ವಿವರ; ಸೀನಪ್ಪನಹಳ್ಳಿ ಗ್ರಾಮದ ಮಂಜುನಾಥನ್ನು ಅಡುಗೆ ಗುತ್ತಿಗೆ ಕೆಲಸ ಮಾಡಿಕೊಂಡಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದನ್ನು, ಕಳೆದ 11 ತಿಂಗಳ ಹಿಂದೆ ಸೋಲೂರು ಹೋಬಳಿ 9 ಗುಂಟೆ ಗ್ರಾಮದ ಹರ್ಷಿತಾಳೊಂದಿಗೆ ಈತನ ವಿವಾಹವಾಗಿತ್ತು. ವಿವಾಹದ ಬಳಿಕ ಪತ್ನಿ ಹರ್ಷಿತಾಳನ್ನು ಮಂಜುನಾಥನ್ನು ತನ್ನ ಗ್ರಾಮವಾದ ಸೀನಪ್ಪನಹಳ್ಳಿಯ ತನ್ನ ಮನೆಯಲ್ಲಿ ಇರಿಸಿ ಬೆಂಗಳೂರಿನಿಂದ ಆಗಾಗ ಬಂದು…
ತುಮಕೂರು ರಾಜ್ಯದಲ್ಲಿ ಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ ಎತ್ತಿನಹೊಳೆ ಯೋಜನೆಯನ್ನು ಜಾರಿಗೆ ತಂದಿರುವುದು. ರಾಜ್ಯದ ಜನರಿಗೆ ಮೂಲಭೂತ ಸೌಕರ್ಯಗಳಲ್ಲಿ ಒಂದಾದ ನೀರಿನ ಸಮಸ್ಯೆಯನ್ನು ಸಂಪೂರ್ಣವಾಗಿ ಬಗೆಹರಿಸುವುದು ಜಿ. ಎಸ್. ಪರಮಶಿವಯ್ಯ ಅವರ ಕನಸಾಗಿತ್ತು. ಎಲ್ಲರ ಒಳಿತಿಗಾಗಿ ಸಿದ್ಧವಾದ ಯೋಜನೆಯಿದು ಎಂದು ಜಲ ಸಂಪನ್ಮೂಲ ಇಲಾಖೆಯ ಎತ್ತಿನಹೊಳೆ ಯೋಜನೆ ವಲಯದ ಮುಖ್ಯ ಅಭಿಯಂತರ ಮಾಧವ ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯದ ಜಿ. ಎಸ್. ಪರಮಶಿವಯ್ಯ ಅಧ್ಯಯನ ಪೀಠ ಮತ್ತು ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮಂಗಳವಾರ ಆಯೋಜಿಸಿದ್ದ ‘ಕರ್ನಾಟಕದಲ್ಲಿ ನೀರಾವರಿ ಯೋಜನೆಗಳು: ಅವಕಾಶಗಳು ಮತ್ತು ಸವಾಲುಗಳು’ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ ಈ ಎತ್ತಿನಹೊಳೆ ಯೋಜನೆಯನ್ನು ನಿರ್ಮಿಸಿದ್ದೇವೆ. ಇದರಲ್ಲಿ ಕಲುಷಿತ ನೀರನ್ನು ಶುದ್ಧಿಕರಿಸಿ ಬಳಸಲು ಮತ್ತು ನೀರನ್ನು ನೀರಾವರಿಯಲ್ಲಿ ಡ್ರಿಪ್ ಇರಿಗೆಷನ್ ಮೂಲಕ ಬಳಸಲು ಸೌಲಭ್ಯ ಒದಗಿಸುತ್ತಿದ್ದೇವೆ. ನೀರಾವರಿ ವ್ಯವಸ್ಥೆಯಲ್ಲಿ ಸ್ಪ್ರಿಂಕ್ಲರ್ ನೀರಾವರಿ ವ್ಯವಸ್ಥೆ, ಡ್ರಿಪ್ ನೀರಾವರಿ ವ್ಯವಸ್ಥೆ, ಟ್ಯಾಂಕ್ ವ್ಯವಸ್ಥೆ,…
ಚಿಕ್ಕನಾಯಕನಹಳ್ಳಿ ಲಾರಿ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನವದಂಪತಿಗಳು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪಟ್ಟಣದ ಹುಳಿಯಾರುಗೇಟ್ ಬಳಿ ಶನಿವಾರ ನಡೆದಿದೆ. ಪಟ್ಟಣದ ಅಂಬೇಡ್ಕರ್ ನಗರದಬಳಿಯ ಹೆದ್ದಾರಿಯಲ್ಲಿ ಹುಳಿಯಾರು ಕಡೆಯಿಂದ ವೇಗವಾಗಿ ಬರುತ್ತಿದ್ದ ಲಾರಿ ಮುಂದೆ ಹೋಗುತ್ತಿದ್ದ ಸರ್ಕಾರಿ ಬಸ್‍ನ್ನು ಹಿಂದಿಕ್ಕುವ ಧಾವಂತದಲ್ಲಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿಗಳು ಸ್ಥಳದಲ್ಲಿಯೇ ಮೃತಪಟ್ಟರು, ಕಾರಿನ ಚಾಲಕನಿಗೆ ತೀವ್ರ ಗಾಯಗಳಾಗಿದ್ದು ಚಿಕಿತ್ಸೆ ಪಡೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮೃತಪಟ್ಟ ದಂಪತಿಗಳಾದ ಮಧು ಹಾಗೂ ಅನುಷ ತಿಪಟೂರು ಬಳಿಯ ಮಾದಿಹಳ್ಳಿ ಗ್ರಾಮದವರಾಗಿದ್ದು, ಕೆಲ ತಿಂಗಳ ಹಿಂದೆ ವಿವಾಹವಾಗಿದ್ದರೆನ್ನಲಾಗಿದೆ. ಮದುವೆ ಕಾರ್ಯಕ್ರಮಕ್ಕಾಗಿ ಬಳ್ಳಾರಿಗೆ ತರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಲಾರಿ ಚಾಲಕ ತಪ್ಪಿಸಿಕೊಂಡಿದ್ದು, ಪ್ರಕರಣ ಚಿಕ್ಕನಾಯಕನಹಳ್ಳಿ ಠಾಣೆಯಲ್ಲಿ ದಾಖಲಾಗಿದೆ. ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿದ್ದು, ಮೃತ ದೇಹಗಳನ್ನು ಕಾರಿನಿಂದ ಹೊರತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಪೊಲೀಸರಿಗೆ ಸಹಕರಿಸಿದರು. ಚಿತ್ರ; 11ಸಿಎನ್‍ಎಚ್1ಇಪಿ. ಶೀರ್ಷಿಕೆ: ಪಟ್ಟಣದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಮಧು ಹಾಗೂ…
ತುಮಕೂರು ಇತಿಹಾಸ ಪ್ರಸಿದ್ದ ಸಿದ್ದಗಂಗಾ ಮಠದ ಆರಾಧ್ಯ ದೈವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯೂ ದನಗಳ ಜಾತ್ರೆ ನಡೆಯುತ್ತಿದ್ದು, ರಾಜ್ಯದ ವಿವಿಧೆಡೆಯಿಂದ ರೈತರು ಜಾನುವಾರುಗಳೊಂದಿಗೆ ಸಿದ್ದಗಂಗೆಗೆ ಬಂದು ಭರ್ಜರಿ ವ್ಯಾಪಾರದಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿ ಜಾನುವಾರುಗಳಿಗೆ ಕಾಣಿಸಿಕೊಂಡಿರುವ ಚರ್ಮಗಂಟು ರೋಗದ ಹಿನ್ನೆಲೆಯಲ್ಲಿ ಜಾನುವಾರು ಜಾತ್ರೆ ನಡೆಸದಂತೆ ಸರ್ಕಾರ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಶ್ರೀಮಠದ ವತಿಯಿಂದ ಈ ಬಾರಿ ಜಾನುವಾರು ಜಾತ್ರೆಯಲ್ಲಿ ರದ್ದುಪಡಿಸಲಾಗಿತ್ತು. ಈ ಸಂಬಂಧ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಸಹ ಮಠದ ವತಿಯಿಂದ ಜಾನುವಾರು ಜಾತ್ರೆ ನಡೆಯುವುದಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದರು. ಆದರೂ ಸಹ ಸ್ವತಃ ರೈತರೇ ರಾಸುಗಳೊಂದಿಗೆ ಸಿದ್ದಗಂಗೆಗೆ ಬಂದು ರಾಸುಗಳ ಮಾರಾಟ ಮತ್ತು ಖರೀದಿಯಲ್ಲಿ ತೊಡಗಿದ್ದಾರೆ. ಈ ಬಾರಿ ರಾಸುಗಳ ಜಾತ್ರೆಗೆ ಸುಮಾರು 80 ಸಾವಿರ, 1 ಲಕ್ಷ ರೂ.ಗಳಿಂದ ಹಿಡಿದು 7 ರಿಂದ 8 ಲಕ್ಷ ರೂ. ಬೆಲೆಯ ರಾಸುಗಳು ಬಂದಿದ್ದು, ಎಂದಿನಂತೆ ಜಾನುವಾರುಗಳ ಖರೀದಿ ಮತ್ತು…










