ಕೊರಟಗೆರೆ ದೇಶಕಂಡ ಪುಣ್ಯಕ್ಷೇತ್ರ ಲಕ್ಷಾಂತರ ಮಂದಿ ಭಕ್ತರಿಗೆ ದಿನಂಪ್ರತಿ ಉಚಿತವಾಗಿ ಅನ್ನ ದಾಸೋಹ ನೀಡುವ ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗಡೆ ಅವರು ಧಾರ್ಮಿಕ ಕಾರ್ಯಗಳಿಗೆ ಹಾಗೂ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ದಿನಂಪ್ರತಿ ಕೋಟ್ಯಾಂತರ ರೂ. ಅನುದಾನವನ್ನ ಬಿಡುಗಡೆಗೊಳಿಸುತ್ತಿದ್ದು ಗ್ರಾಮೀಣ ಭಾಗದ ದೇವಾಲಯಗಳ ಅಭಿವೃದ್ಧಿಗೆ ಸ್ಪಂಧಿಸುತ್ತಾ ಬಂದಿರುವುದು ಶ್ಲಾಘನೀಯ ವಾಗಿದ್ದು ಅದೇ ಮಾದರಿಯಲ್ಲಿ ಕೊರಟಗೆರೆ ತಾಲ್ಲೂಕಿನ ಹೊಳವನಳ್ಳಿ ಹೋಬಳಿ ವ್ಯಾಪ್ತಿಯ ಚಿಂಪುಗಾನಹಳ್ಳಿ ಗ್ರಾಮದ ಶಕ್ತಿ ಕೇಂದ್ರ ಶ್ರೀ ಶಿವ ಮಹಾಲಕ್ಷ್ಮಿ ಆಂಜನೇಯ ಟ್ರಸ್ಟ್ ಗೆ ದೇವಸ್ಥಾನ ಜೀರ್ಣೋದ್ಧಾರಕ್ಕೆ 3 ಲಕ್ಷ ಅನುದಾನವನ್ನ ಚೆಕ್ ಮೂಲಕ ಕಳಿಸಲಾಗಿದ್ದು ಇದನ್ನ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ದಿನೇಶ್ ತಿಳಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಡೆ ಅವರು ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಉದಾರವಾಗಿ ದಾನ ನೀಡಿದ್ದ ಚೇಕ್ ಅನ್ನು ಚಿಂಪುಗಾನಹಳ್ಳಿ ಗ್ರಾಮದಲ್ಲಿನ ಶ್ರೀ ಮಹಾಲಕ್ಷ್ಮಿ ಶಿವ ಆಂಜನೇಯ ಸ್ವಾಮಿ ನವಗ್ರಹ ಸೇವಾ…
Author: News Desk Benkiyabale
ತುಮಕೂರು ಬ್ರಹ್ಮಜ್ಞಾನ ಹೊಂದಿದ್ದ ಸವಿತಾ ಮಹರ್ಷಿಗಳು ಹಿಂದೂ ಧರ್ಮದ ಆಧಾರ ಸ್ತಂಭಗಳಂತಿರುವ ನಾಲ್ಕು ವೇದಗಳಲ್ಲಿ ಒಂದಾದ ಸಾಮವೇದವನ್ನು ರಚಿಸಿದ್ದಾರೆ. ಸಾಮ ಎಂದರೆ ಸಂಗೀತ ಹಾಗೂ ವೇದ ಎಂದರೆ ಜ್ಞಾನ ಎಂಬ ಅರ್ಥ ಇರುವುದರಿಂದ ಸಾಮ ವೇದವು ಸಂಗೀತ ಜ್ಞಾನದ ಭಂಡಾರವಾಗಿದೆ ಎಂದು ತಹಶೀಲ್ದಾರ್ ಸಿದ್ದೇಶ್ ತಿಳಿಸಿದರು. ನಗರದ ಡಾ. ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತುಮಕೂರು ಜಿಲ್ಲಾ ಸವಿತಾ ಸಮಾಜದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಶ್ರೀ ಸವಿತಾ ಮಹರ್ಷಿ ಅವರ ಜಯಂತ್ಯೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೆ.ಎಸ್. ಸಿದ್ದಲಿಂಗಪ್ಪ ಮಾತನಾಡಿ, ಭಾರತದ ಹಲವು ಭಾಗಗಳಲ್ಲಿ ಸವಿತಾ ಸಮಾಜ ಎಂಬ ಹೆಸರಿನಿಂದ ಕರೆಯುವ ಕ್ಷೌರಿಕ (ನಾಯಿಂದ) ಜನಾಂಗದ ಮೂಲಪುರುಷ ಸವಿತಾ ಮಹರ್ಷಿ. ಸವಿತಾ ಎಂಬ ಪದದ ಅರ್ಥ ವಿಷ್ಣು ಸಹಸ್ರನಾಮದ ಪ್ರಕಾರ ಸಕಲ ಜಗತ್ತನ್ನು ರಕ್ಷಿಸಿ ನಡೆಸುವನು ಎಂದರ್ಥ.…
ತುಮಕೂರು ಮಧುಗಿರಿ ಪಿಡಬ್ಲ್ಯೂಡಿ ಇಲಾಖೆಯ ಮ್ಯಾನೇಜರ್ ಆತ್ಮಹತ್ಯೆ ಶರಣಾಗಿರುವ ಘಟನೆ ವರದಿಯಾಗಿದೆ. ಮಧುಗಿರಿಯ ಪಿ. ಡಬ್ಲ್ಯೂಡಿ ಇಲಾಖೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿರುವ ಲಕ್ಷ್ಮೀನರಸಿಂಹಯ್ಯ ಎಂಬುವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಿವಗಂಗೆಯ ಪ್ರವಾಸಿ ಮಂದಿರದಲ್ಲಿ ನೇಣು ಹಾಕಿ ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ದಾಬಸ್ಪೇಟೆ ಪೆÇಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಇತ್ತೀಚಿಗೆ ತುಮಕೂರಿನ ಪಿಡಬ್ಲ್ಯೂಡಿ ಕಂಟ್ರಾಕ್ಟರ್ ಟಿ ಎನ್ ಪ್ರಸಾದ್ ಎಂಬುವವರು ತುಮಕೂರಿನ ದೇವರಾಯನ ದುರ್ಗದ ಗೆಸ್ಟ್ ಹೌಸ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು ಈಗ ಅದೇ ಇಲಾಖೆಯ ಮ್ಯಾನೇಜರ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪೆÇಲೀಸರ ತನಿಖೆಯ ನಂತರವಷ್ಟೇ ಸತ್ಯ ಹೊರ ಬರಬೇಕಾಗಿದೆ.
ಕೊರಟಗೆರೆ ತಾಲೂಕಿನ ಕಸಬಾ ಹೋಬಳಿಯ ತುಂಬಾಡಿ ಗ್ರಾಮದಲ್ಲಿ ನೂರಾರು ಕರವೇ ಕಾರ್ಯಕರ್ತರು ತುಂಬಾಡಿ ಗ್ರಾಮ ಘಟಕ ಹಾಗು ಹೋಬಳಿ ಘಟಕ ನೂತನವಾಗಿ ಉದ್ಘಾಟನೆ ಮಾಡುವ ಮುಖೇನ ಕರವೇ ನಾರಾಯಣಗೌಡರ ಬಣಕ್ಕೆ ತಾಲೂಕು ಅಧ್ಯಕ್ಷ ಶ್ರೀನಾಥ್ ಅವರ ಅಧ್ಯಕ್ಷತೆಯಲ್ಲಿ ಸೇರ್ಪಡೆಯಾದರು. ತಾಲೂಕು ಅಧ್ಯಕ್ಷ ಶ್ರೀನಾಥ್ ಮಾತನಾಡಿ. ನಾವೆಲ್ಲರೂ ಕನ್ನಡಿಗರು ಕನ್ನಡ ಜಲ ನುಡಿ ನಾಡಿಗಾಗಿ ಹೋರಾಡಬೇಕು ಯಾರಾದ್ರೂ ಪರಭಾಷಿಗರು ಕನ್ನಡದ ಸುದ್ದಿಗೆ ಬಂದರೆ ಕನ್ನಡಿಗರ ತಂಟೆಗೆ ಬಂದರೆ ಅವರ ವಿರುದ್ಧ ಹೋರಾಡಬೇಕು ಕನ್ನಡಿಗರನ್ನು ಕೆಣಕದಂತೆ ನೋಡಿಕೊಳ್ಳಬೇಕು ಪರಭಾಶಿಗರು ಕರ್ನಾಟಕಕ್ಕೆ ಬಂದರೆ ಅವರ ಮನೆಯಲ್ಲಿ ಅವರ ಭಾಷೆ ಮಾತನಾಡಲಿ ಹೊರಗಡೆ ಬಂದಾಗ ಕೆಲಸಗಳಲ್ಲಿ ಇದ್ದಾಗ ಕನ್ನಡದಲ್ಲಿ ಮಾತನಾಡಬೇಕು ಕನ್ನಡದಲ್ಲಿ ವ್ಯವಹರಿಸಬೇಕು ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎಂದು ಪರಭಾಷೆಗರಿಗೆ ಗೊತ್ತಾಗಬೇಕು ನಾವೆಲ್ಲರೂ ಒಗ್ಗಟ್ಟಾಗಿರಬೇಕು ಒಗ್ಗಟ್ಟಿನಲ್ಲಿ ಬಲವಿದೆ ಎಂದು ಪರಭಾಷೆಗರಿಗೆ ತೋರಿಸಬೇಕು ಎಂದು ತಿಳಿಸಿದರು. ತುಂಬಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಾರ್ವತಮ್ಮ ಮಾತನಾಡಿ ಕರ್ನಾಟಕದಲ್ಲಿ ಕನ್ನಡ ಶಾಲೆಗಳು ಕಣ್ಮರೆಯಾಗುತ್ತಿವೆ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸಬೇಕಾದ್ದು ಕನ್ನಡಿಗರಾದ ನಮ್ಮೆಲ್ಲರ…
ತುಮಕೂರು ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಶೈಕ್ಷಣಿಕ ಸಂಶೋಧನೆಗಳಿಗಾಗಿ ವಾರ್ಷಿಕವಾಗಿ 3ಕೋಟಿ ರೂ.ಗಳನ್ನು ಅನುದಾನವನ್ನು ಸಾಹೇ ವಿಶ್ವವಿದ್ಯಾನಿಲಯದಿಂದ ಮೀಸಲಿಟ್ಟಿದ್ದು, ಅದರ ಸದ್ಬಳಕೆ ಮಾಡಿಕೊಳ್ಳುವಂತೆ ಪ್ರಾಧ್ಯಾಪಕರಿಗೆ ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಹಾಗೂ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು ಡಾ. ಪರಮೇಶ್ವರ ಜಿ ಸಲಹೆ ನೀಡಿದರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿವಿಧ (ಮಾಹಿತಿ ವಿಜ್ಞಾನ, ಕಂಪ್ಯೂಟರ್ ಸೈನ್ಸ್, ತರಬೇತಿ ಮತ್ತು ನೇಮಕಾತಿ, ಎಂಸಿಎ) ವಿಭಾಗಗಳ ಕಂಪ್ಯೂಟರ್ ಲ್ಯಾಬ್‍ಗಳು ಹಾಗೂ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಪಿಎಲ್‍ಸಿ ಲ್ಯಾನ್‍ನ್ನು ಉದ್ಘಾಟಿಸಿ ನಂತರ ಪ್ರಾಧ್ಯಾಪಕರೊಂದಿಗೆ ಮಾತನಾಡಿದ ಅವರು ಈ ವಿಷಯವನ್ನು ತಿಳಿಸಿದರು. ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಸಂಶೋಧನೆÀಗೆ ಪ್ರಾಧ್ಯಾಪಕರು ಹೆಚ್ಚಿನ ಮಹತ್ವವನ್ನು ನೀಡಬೇಕು. ಆಧುನಿಕ ಸೌಲಭ್ಯಗಳನ್ನು ಬಳಸಿಕೊಂಡು ಸಂಶೋಧನೆಗಳನ್ನು ನಡೆಸಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ವಿವಿಧ ವಿಭಾಗಗಳ ಕಂಪ್ಯೂಟರ್ ಲ್ಯಾಬ್‍ಗಳನ್ನು ಮೇಲ್ದರ್ಜೆಗೆ ಉನ್ನತೀಕರಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅನುವು ಮಾಡಿಕೊಡಲಾಗುತ್ತಿದೆ, ತಂತ್ರಜ್ಞಾನ ದಿನೇ ದಿನೇ ಅಭಿವೃದ್ಧಿಗೊಳ್ಳುತ್ತಿದ್ದು, ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಅಧುನಿಕ ತಂತ್ರಜ್ಞಾನವುಳ್ಳ…
ತುಮಕೂರು ಪುರಾತನ ಕೆರೆ ಕಟ್ಟೆಗಳನ್ನು ಸಂರಕ್ಷಿಸಿ ಮುಂದಿನ ಯುವ ಪೀಳಿಗೆಗೆ ಉತ್ತಮ ಜಲಮೂಲಗಳನ್ನು ಸಂರಕ್ಷಿಸುವಂತೆ ತುಮಕೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಿ.ಜಯಪಾಲ್ ಕರೆ ನೀಡಿದರು. ತುಮಕೂರು ತಾಲ್ಲೂಕು ಗೂಳೂರು ಹೋಬಳಿ ಹರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿಣ್ಣೆಪಾಳ್ಳ ಕೆರೆಯಂಗಳದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಧ್ವಜಾರೋಹಣ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು. ಹಿರಿಯರು ನಮಗಾಗಿ ನೀಡಿರುವಂತಹ ಕೆರೆಗಳು, ಗೋಕಟ್ಟೆಗಳು, ಕಲ್ಯಾಣಿಗಳು ಸೇರಿದಂತೆ ಇತರೆ ಜಲ ಮೂಲ ತಾಣಗಳನ್ನು ಇಂದಿನ ಯುವ ಪೀಳಿಗೆ ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆ ಉತ್ತಮ ವಾತಾವರಣ ನಿರ್ಮಿಸಿಕೊಡಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು. ಸರ್ಕಾರದ ಸೂಚನೆಯಂತೆ ಈಗಾಗಲೇ ಒತ್ತುವರಿಯಾಗಿರುವಂತಹ ಕೆರೆ – ಕಟ್ಟೆಗಳನ್ನು ಸಂರಕ್ಷಿಸಿ ಒತ್ತುವರಿ ತೆರವುಗೊಳಿಸಲಾಗುವುದು. ಸರ್ಕಾರದ ಈ ಕಾರ್ಯಕ್ಕೆ ಗ್ರಾಮಸ್ಥರು ಸಹಕಾರ ನೀಡುವಂತೆ ಅವರು ಮನವಿ ಮಾಡಿದರು. ಅಮೃತ ಸರೋವರ ಕಾಮಗಾರಿ ಸ್ಥಳದಲ್ಲಿ ಧ್ವಜಾರೋಹಣ ನೆರವೇರಿಸಿದ ಕೊಟ್ಟಿಗೆಗೊಲ್ಲಹಳ್ಳಿ ಗ್ರಾಮದ ಮಾಜಿ ಸೈನಿಕರಾದ ಕುಂಭಯ್ಯ ಅವರು ಮಾತನಾಡಿ, ನಮ್ಮೂರು ಕೆರೆಯನ್ನು ಸಂರಕ್ಷಣೆ ಮಾಡುವುದು ನಮ್ಮೆಲರ ಜವಾಬ್ದಾರಿಯಾಗಿದೆ. ಮಳೆ…
ತುಮಕೂರು ಯುವಜನರಲ್ಲಿ ನಾಯಕತ್ವ ಬೆಳೆಸುವುದು, ವ್ಯಕ್ತಿತ್ವ ನಿರ್ಮಾಣ ಮಾಡುವ ಮಹತ್ವದ ಉದ್ದೇಶ ಹೊಂದಿರುವ ಐ ಯಾಮ್ ಇಂಡಿಯಾ ಅರ್ಗನೈಜೇಷನ್ ಸಂಸ್ಥೆ, ಯುವಜನರ ಸಮಗ್ರ ವಿಕಾಸಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಐ ಯಾಮ್ ಇಂಡಿಯಾದ ಸಂಚಾಲಕ ಹೆಚ್.ಎನ್.ಚಂದ್ರಶೇಖರ್ ತಿಳಿಸಿದ್ದಾರೆ. ನಗರದ ಶ್ರೀದೇವಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತಿದ್ದ ಅವರು, ಯುವಜನರ ನೋವು, ನಲಿವುಗಳನ್ನು ಪ್ರತಿನಿಧಿಸುವ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಯುವಜನರಿಗೆ ಮತದಾನದ ಮಹತ್ವ ಮತ್ತು ಪ್ರಾಮುಖ್ಯತೆಯನ್ನು ತಿಳಿಸುವ ನಿಟ್ಟಿನಲ್ಲಿ ಕಾಲೇಜು ಯುವಕ, ಯುವತಿಯರನ್ನೇ ಕೇಂದ್ರವಾಗಿಟ್ಟುಕೊಂಡು ಬೀದಿ ನಾಟಕ,ನೃತ್ಯ ರೂಪಕ, ಮಾಹಿತಿ ವಿನಿಯಮಯ, ಸಂವಾದ, ಚರ್ಚಾ ಸ್ಪರ್ಧೆ ಮತ್ತಿತರರ ಕಾರ್ಯಕ್ರಮಗಳ ಮೂಲಕ ಜಾಗೃತಿ ಅಭಿಯಾನ ನಡೆಸುತ್ತಿದೆ ಎಂದರು. ಶ್ರೀದೇವಿ ಚಾರಿಟಬಲ್ ಟ್ರಸ್ಟ್‍ನ ಟ್ರಸ್ಟಿ ಅಂಬಿಕಾ ಹುಲಿನಾಯ್ಕರ್ ಮಾತನಾಡಿ, ಮತದಾನವನ್ನು ಎಲ್ಲರ ಹಕ್ಕು. ಆದರೆ ಯುವಕಜನರಲ್ಲಿ ಇದರ ಬಗ್ಗೆ ಆಸಕ್ತಿ ಕಡಿಮೆಯಾಗಿದೆ. ಮತದಾರರು ಇಂತಹದ್ದೇ ಪಕ್ಷಕ್ಕೆ ಮತ ಹಾಕಿ…
ತುಮಕೂರು ಸಂವಿಧಾನದತ್ತವಾಗಿ ದಕ್ಕಿರುವ ಮತದಾನದ ಹಕ್ಕನ್ನು, ಆಸೆ, ಅಮೀಷಗಳಿಗೆ ಬಲಿಯಾಗಿ ಚಲಾಯಿಸುವುದರಿಂದ ದೇಶದ ಭವಿಷ್ಯ ಕುಂಠಿತವಾಗಲಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ನೂರುನ್ನಿಸಾ ಎಚ್ಚರಿಕೆ ನೀಡಿದ್ದಾರೆ. ನಗರದ ಬಟವಾಡಿಯ ಶ್ರೀಕೃಷ್ಣ ವಿದ್ಯಾಸಂಸ್ಥೆ, ಶ್ರೀಕೃಷ್ಣ ಕಾನೂನು ಕಾಲೇಜು ವತಿಯಿಂದ ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಆಸೆ,ಅಮೀಷಗಳಿಗೆ ಒಳಗಾಗಿ ಮತಚಲಾಯಿಸುವುದರಿಂದ ಆನರ್ಹರು ಸಂಸತ್ತು,ಶಾಸನಸಭೆಗಳಿಗೆ ಆಯ್ಕೆಯಾಗಿ,ದೇಶದ ಅರ್ಥಿಕ,ಸಾಮಾಜಿಕ,ಶೈಕ್ಷಣಿಕ, ರಾಜಕೀಯ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಉಂಟಾಗಲಿದೆ. ಹಾಗಾಗಿ ಮತದಾರರು ತಮ್ಮ ಮತ ಮಾರಿಕೊಳ್ಳದೆ, ಒಳ್ಳೆಯ ವ್ಯಕ್ತಿಗೆ ಮತಚಲಾಯಿಸಿ, ಈ ದೇಶದ ಭವಿಷ್ಯವನ್ನು ಉಜ್ವಲಗೊಳಿಸಲು ಸಹಕರಿಸಬೇಕೆಂದು ಕರೆ ನೀಡಿದರು. ಮತದಾನ ಎಂಬುದು ಈ ದೇಶದ ನಾಗರಿಕರಿಗೆ ಸಂವಿಧಾನದತ್ತವಾಗಿ ಲಭ್ಯವಾಗಿರುವ ಹಕ್ಕಾಗಿದೆ.ಈ ಬಗ್ಗೆ ಜನರಿಗೆ, ಅದರಲ್ಲಿಯೂ ಯುವಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಸರಕಾರ 2011 ರಿಂದ ಜನವರಿ 25ನ್ನು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಿಕೊಂಡು ಬರುತ್ತಿದೆ.ಮತದಾನವೆಂಬುದು ಒಂದು ಪವಿತ್ರ ಕಾರ್ಯ.ಈ ಕಾರ್ಯವನ್ನು ನಾವು ಸಮರ್ಪಕವಾಗಿ ಮಾಡಿದಲ್ಲಿ,ದೇಶಕ್ಕೆ…
ತುಮಕೂರು ಚುನಾವಣೆಗೂ ಮುನ್ನ ರಾಜ್ಯದ ನಾಲ್ಕು ಮೂಲೆಗಳಿಂದಲೂ ಯಾತ್ರೆ ನಡೆಸಿ, ಜನಾಭಿಪ್ರಾಯ ಸಂಗ್ರಹಿಸಿ, ಆದರ ಆಧಾರದಲ್ಲಿ ಪಕ್ಷದ ಪ್ರಾಣಾಳಿಕೆ ಸಿದ್ದಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದ ತುಮಕೂರು ವಿವಿ ಮುಂಭಾಗದ ಬಾಯರ್ಸ್ ಕಾಫಿ ಶಾಫ್ ಬಳಿ ತುಮಕೂರು ನಗರ ಬಿಜೆಪಿ ಮಂಡಲವತಿಯಿಂದ ಆಯೋಜಿಸಿದ್ದ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,9 ದಿನಗಳ ಈ ವಿಜಯ ಸಂಕಲ್ಪ ಅಭಿಯಾನದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಒಂದು ಲಕ್ಷ ಹೊಸ ಸದಸ್ಯರ ಸೇರ್ಪಡೆಗೆ ಅಗತ್ಯ ಕ್ರಮವನ್ನು ಕೈಗೊಳ್ಳುವಂತೆ ಕಾರ್ಯಕರ್ತರಿಗೆ ಸೂಚಿಸಿದರು. ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಈ ವಿಜಯ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾರವರು ಒಂದು ಕಡೆ, ನಾನು ತುಮಕೂರಿನಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ.ಮಿಸ್ ಕಾಲ್ ಕೊಡುವ ಮೂಲಕ ಜನರು ಪಕ್ಷದ ಸದಸ್ಯರಾಗಿ ನೊಂದಾವಣೆಯಾಗುವಂತೆ ಎಲ್ಲಾ ಕಾರ್ಯಕರ್ತರು ಜನರ ಮನವೊಲಿಸಬೇಕು.ಸದಸ್ಯರಾದವರ ಮನೆಗೆ ಸ್ಟಿಕರ್ ಅಂಟಿಸುವ ಕೆಲಸವನ್ನು ಮಾಡಬೇಕಾಗುತ್ತದೆ. ಸಂಘಟನೆಯ…
ತುಮಕೂರು ವಿಧಾನಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ದುರ್ಬಲ ವರ್ಗಗಳ ಜನರು ವಾಸಿಸುವ ಪ್ರದೇಶದ ನಕ್ಷೆ ತಯಾರಿಕೆಗೆ ಸಂಬಂಧಿಸಿದಂತೆ ಹೊಸದಾಗಿ ನೇಮಕ ಮಾಡಲಾದ ಸೆಕ್ಟರ್ ಅಧಿಕಾರಿ ಹಾಗೂ ಸೆಕ್ಟರ್ ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ಸಂಜೆ ತರಬೇತಿ ನೀಡಲಾಯಿತು. ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಶಹಪೂರ್‍ವಾಡ್ ಅವರು ಜಂಟಿಯಾಗಿ ಅಧಿಕಾರಿಗಳಿಗೆ ತರಬೇತಿ ನೀಡಿದರು. ನೇಮಕವಾದ ಸೆಕ್ಟರ್ ಅಧಿಕಾರಿಗಳು ಹಾಗೂ ಸೆಕ್ಟರ್ ಪೊಲೀಸ್ ಅಧಿಕಾರಿಗಳು ತಮ್ಮ ಮತಗಟ್ಟೆ ವ್ಯಾಪ್ತಿಯ ವಲ್ನರೆಬಲ್/ಕ್ರಿಟಿಕಲ್ ಪ್ರದೇಶಗಳಿದ್ದಲ್ಲಿ ಅವುಗಳನ್ನು ಗುರುತಿಸಿ ಸೋಮವಾರದೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ತರಬೇತಿಯಲ್ಲಿ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಯೋಗಾನಂದ, ತಹಶೀಲ್ದಾರ್ ಸಿದ್ದೇಶ್, ಡಿವೈಎಸ್‍ಪಿ, ಪಿಎಸ್‍ಐಗಳು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.











