Author: News Desk Benkiyabale

ತುಮಕೂರು ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಮಾಡುವಂತೆ ವೈದ್ಯರ ಮೇಲೆ ಒತ್ತಡ ತರುವುದು ಶಿಕ್ಷಾರ್ಹ ಅಪರಾಧವೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮಂಜುನಾಥ ತಿಳಿಸಿದರು. ಇತ್ತೀಚೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ತಂತ್ರ ವಿಧಾನಗಳ ನಿಷೇಧ ಕಾಯ್ದೆ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಗರ್ಭಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆಯನ್ವಯ ಗರ್ಭಪೂರ್ವ ಭ್ರೂಣಪತ್ತೆ ಮಾಡುವುದು ಕಂಡು ಬಂದಲ್ಲಿ ಅಂತಹ ಸ್ಕ್ಯಾನಿಂಗ್ ಸೆಂಟರ್‍ಗಳ ಪರವಾನಗಿ ರದ್ದುಪಡಿಸುವುದಲ್ಲದೆ ಮುಚ್ಚಲು ಕ್ರಮ ಕೈಗೊಳ್ಳಲಾಗುವುದು. ಭ್ರೂಣಪತ್ತೆ ಮಾಡಲು ವೈದ್ಯರ ಮೇಲೆ ಒತ್ತಡ ತರುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲು ಸೂಕ್ತ ಕ್ರಮ ವಹಿಸಲಾಗುವುದೆಂದು ಸಭೆಗೆ ತಿಳಿಸಿದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ: ರೇಖಾ ಮಾತನಾಡಿ, ಹಿಂದಿನ ಸಭೆಯಲ್ಲಿ ಕೈಗೊಂಡ ನಿರ್ಣಯ ಹಾಗೂ ಚರ್ಚೆಗಳ ಬಗ್ಗೆ ಸಲಹಾ ಸಮಿತಿ ಸದಸ್ಯರ ಗಮನಕ್ಕೆ ತಂದರು. ಸಭೆಯಲ್ಲಿ ಪಿಸಿ&ಪಿಎನ್‍ಡಿಟಿ…

Read More

ತುಮಕೂರು ಬೀದಿ ನಾಯಿ ಕಡಿತಕ್ಕೊಳಗಾದವರಿಗೆ ನೀಡುವ ಇಮ್ಯುನೋಗ್ಲೋಬಲಿನ್ ಚುಚ್ಚುಮದ್ದಿನ ವೆಚ್ಚವನ್ನು ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳೇ ಭರಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಸಮಗ್ರ ರೋಗಗಳ ಕಣ್ಗಾವಲು ಸಮಿತಿ ಸಭೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಬೀದಿ ನಾಯಿ ಕಡಿತಕ್ಕೊಳಗಾದವರಿಗೆ ಉಚಿತವಾಗಿ ಇಮ್ಯುನೋಗ್ಲೋಬಲಿನ್ ಚುಚ್ಚುಮದ್ದನ್ನು ಗ್ರಾಮ ಪಂಚಾಯತಿ, ಪುರಸಭೆ, ನಗರಸಭೆ, ಪಟ್ಟಣ ಪಂಚಾಯತಿ, ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳೇ ನೀಡುವ ವ್ಯವಸ್ಥೆ ಮಾಡಬೇಕು. ಬಿಪಿಎಲ್ ಪಡಿತರ ಚೀಟಿ ಹೊಂದಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ವೈದ್ಯಕೀಯ ಪ್ರಮಾಣ ಪತ್ರ ಹಾಜರುಪಡಿಸಿದವರಿಗೆ ಮಾತ್ರ ಉಚಿತ ಚುಚ್ಚುಮದ್ದಿನ ವೆಚ್ಚವನ್ನು ಸ್ಥಳೀಯ ಸಂಸ್ಥೆಗಳು ಭರಿಸಬೇಕೆಂದು ತಿಳಿಸಿದರು. ನಗರ ಪ್ರದೇಶಗಳಲ್ಲಿ ಮಾಂಸದ ತ್ಯಾಜ್ಯ ಎಲ್ಲೆಂದರಲ್ಲಿ ವಿಲೇವಾರಿ ಮಾಡುತ್ತಿರುವುದರಿಂದ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿದ್ದು, ಮಹಿಳೆಯರು ಮತ್ತು ಮಕ್ಕಳು ರಸ್ತೆಯಲ್ಲಿ ನಿರ್ಭಯವಾಗಿ ಓಡಾಡದಂತಾಗಿದೆ. ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳನ್ನು…

Read More

ತುಮಕೂರು ಶಿಸ್ತು, ಸಂಯಮ, ತಾಳ್ಮೆ, ಹೋರಾಟ, ತ್ಯಾಗ, ಬಲಿದಾನದ ಮೇಲೆ ಭವ್ಯ ಭಾರತ ನಿಂತಿರುವುದು. ಸ್ವಾತಂತ್ರ್ಯಕ್ಕಾಗಿ ಹೋರಾಡಿ ಜೀವ ಕೊಟ್ಟ ವೀರರಿಂದ ಇಂದು ನಮ್ಮೆಲ್ಲರ ಜೀವನ ನೆಮ್ಮದಿಯಿಂದ ಸಾಗಿದೆ. ಪರಿಸರ ಸ್ನೇಹಿ ಹಾಗೂ ಆರೋಗ್ಯ ಸಮಾಜದ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ ಹಾಗೂ ಆದ್ಯ ಕರ್ತವ್ಯವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಶಿವರಾಜು ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಪೀಠ ಶನಿವಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ಮೂರನೇ ವಿಶೇಷ ಉಪನ್ಯಾಸ ಮಾಲೆ ‘ದೇಶ ನಿರ್ಮಾಣದಲ್ಲಿ ಯುವಕರ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಣ್ಣ ಸಣ್ಣ ವಿಚಾರಗಳಿಂದಲೇ ದೇಶ ಕಟ್ಟಲು ಸಾಧ್ಯ. ಯುವಕನ ಮನೋಭಾವ, ಆಲೋಚನೆ ಇರುವ ಪ್ರತಿಯೊಬ್ಬನೂ ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಭಾಗಿಯಾಗಬೇಕು. ಪ್ರಜಾಪ್ರಭುತ್ವದಲ್ಲಿ ನಾವೆಲ್ಲರೂ ಅಭಿವೃದ್ಧಿ ಭಾರತದ ಕನಸನ್ನು ನನಸಾಗಿಸಲು ನಿಯಮಗಳನ್ನು ಪಾಲಿಸಬೇಕು. ಆಗಷ್ಟೇ ದೇಶದ ಬೆಳವಣಿಗೆ ಸಾಧ್ಯ ಎಂದರು. ಭಾರತ ತನ್ನ ಪ್ರಜೆಗಳಿಗೆ ಕೊಟ್ಟಿರುವ ಬಹುದೊಡ್ಡ ಉಡುಗೊರೆ ಸಂವಿಧಾನ. ಮಿಕ್ಕ ಎಲ್ಲಾ ಕೊಡುಗೆಗಳು ನಮ್ಮಿಂದಾಗಬೇಕು. ದಯೆ,…

Read More

ಗುಬ್ಬಿ ತಾಲೂಕಿನ ಎಲ್ಲಾ ಬೂತ್ ಗಳಲ್ಲಿಯೂ ಹಾಗೂ ಮನೆಗಳಿಗೆ ಬಿಜೆಪಿ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಜನವರಿ 21ರಿಂದ 29ರ ವರೆಗೆ ಮಾಡಲಾಗುತ್ತಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಪಂಚಾಕ್ಷರಿ ತಿಳಿಸಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಹಾಗೂ ಕೇಂದ್ರ ಸರ್ಕಾರವು ನೂರಾರು ಅಭಿವೃದ್ಧಿ ಯೋಜನೆಗಳನ್ನು ಮಾಡಿದ್ದು ಅವೆಲ್ಲವನ್ನು ಸಹ ಪ್ರತಿಯೊಂದು ಮನೆಗೆ ಮುಟ್ಟಿಸುವ ಕೆಲಸವನ್ನು ನಮ್ಮ ಕಾರ್ಯಕರ್ತರು ಮಾಡುತ್ತಾರೆ ಈ ವಿಜಯ ಸಂಕಲ್ಪ ಅಭಿಯಾನದಲ್ಲಿ ಹೆಚ್ಚಿನ ಕಾರ್ಯಕರ್ತರು ಮುಖಂಡರು ಗಳು ಭಾಗವಹಿಸಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೈರಪ್ಪ ಮಾತನಾಡಿ ಈಗಾಗಲೇ ಬಿಜೆಪಿ ಪಕ್ಷವು ಹಲವು ರೀತಿಯ ಯೋಜನೆಗಳನ್ನು ಮಾಡಿ ಅದನ್ನು ಜನರಿಗೆ ನೇರವಾಗಿ ತಲುಪಿಸುವ ಕೆಲಸವನ್ನು ಮಾಡುತ್ತಿದ್ದೇವೆ, ವಿಜಯ ಸಂಪರ್ಕ ಅಭಿಯಾನ ಮಾಡುವ ಮೂಲಕ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಪೆÇ್ರೀತ್ಸಾಹಿಸುವ ಮತ್ತು ಬೂತ್ ಗೆಲ್ಲುವ ಕಾರ್ಯಕ್ಕೆ ಮುಂದಾಗಿದ್ದೇವೆ ಈಗ ವಿಜಯ ಸಂಕಲ್ಪ ಅಭಿಯಾನ ಮಾಡುವ ಮೂಲಕ ಪ್ರತಿ ಮನೆಗೆ…

Read More

ತುಮಕೂರು ಸಮಾನತೆಯ ಸಮಾಜ ಕಟ್ಟುವ ಕನಸು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರದಾಗಿತ್ತು. ಮಾನವೀಯ ಮೌಲ್ಯಗಳ ಶಿಕ್ಷಣದಿಂದಷ್ಟೇ ಸಮಾನತೆ ಬೆಳೆದು ದೇಶ ಕಟ್ಟಲು ಸಾಧ್ಯವಾಗುವುದು ಎಂದು ನಂಬಿದ್ದರು. ನ್ಯಾಯ ಮಾರ್ಗದಲ್ಲಿ ನಡೆದರೆ ಗೆಲುವು ಖಂಡಿತ ಎಂಬುದು ಬೋಸರ ಧ್ಯೇಯೋದ್ದೇಶವಾಗಿತ್ತು ಎಂದು ಎಐಡಿಎಸ್‍ಒ ವಿದ್ಯಾರ್ಥಿ ಸಂಘಟನೆಯ ಜಿಲ್ಲಾಧ್ಯಕ್ಷೆ ಅಶ್ವಿನಿ ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಕನ್ನಡ ವಿಭಾಗ ಹಾಗೂ ಸಾಂಸ್ಕøತಿಕ ಚಟುವಟಿಕೆಗಳ ಘಟಕದ ವತಿಯಿಂದ ಗುರುವಾರ ಆಯೋಜಿಸಿದ್ದ ‘ನೇತಾಜಿ ಸುಭಾಷ್ ಚಂದ್ರ ಬೋಸ್’ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಶ್ರೀಮಂತ ವಕೀಲರ ಮಗನಾಗಿ, ಸಾಧಾರಣ ಬದುಕು ನಡೆಸಿದ ಬೋಸ್, ಭಾರತದ ಪ್ರತಿಯೊಬ್ಬ ಪ್ರಜೆಗೂ ಪ್ರೇರಣೆ. ಸಮಾನತೆಯ ದೇಶ ಕಟ್ಟುವ ಕನಸನ್ನು ನನಸಾಗಿಸುವಲ್ಲಿ, ಭಾರತ ಸ್ವತಂತ್ರ ರಾಷ್ಟ್ರವಾಗುವ ಹೋರಾಟದಲ್ಲಿ ತಮ್ಮ ಬದುಕನ್ನು ಮುಡಿಪಾಗಿಟ್ಟು ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರ ಸಾಲು ಸೇರಿದರು. ಅಧ್ಯಾತ್ಮಿಕ ಚಿಂತನೆಗಳು, ಹೋರಾಟ ಮನೋಭಾವಕ್ಕೆ ಪ್ರೇರಣೆಯಾಗಿ ಸ್ವಾಮಿ ವಿವೇಕಾನಂದರ ಜೀವನಾದರ್ಶವನ್ನು ಪಾಲಿಸಿ ಯಶ್ವಸ್ವಿಯಾದರು ಎಂದರು. ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ…

Read More

ಕೊರಟಗೆರೆ ಗಡ್ಡೋಬನಹಳ್ಳಿ ಗ್ರಾಮಸ್ಥರ ಮನವಿಯ ಮೇರೆಗೆ ನಿವೃತ್ತ ಐಎಎಸ್ ಅಧಿಕಾರಿ ಬಿ.ಹೆಚ್.ಅನಿಲ್‍ಕುಮಾರ್ ತನ್ನ ಸ್ವಂತ ಹಣದಿಂದಲೇ 5ಕೀಮೀ ರಸ್ತೆಯ ಜಂಗಲ್ ದುರಸ್ಥಿ ಕಾಮಗಾರಿಗೆ ಚಾಲನೆ ನೀಡಿರುವ ಘಟನೆ ಬುಧವಾರ ನಡೆದಿದೆ. ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ತೀತಾ ಗ್ರಾಪಂ ವ್ಯಾಪ್ತಿಯ ಮೇಳೆಹಳ್ಳಿಯ ಮುಖ್ಯರಸ್ತೆಯಿಂದ ಗಡ್ಡೋಬನಹಳ್ಳಿಗೆ ಸಂಪರ್ಕ ಕಲ್ಪಿಸುವ 5ಕೀಮೀ ರಸ್ತೆಯ ದುರಸ್ಥಿ ಕೆಲಸಕ್ಕೆ ಬಿಜೆಪಿ ಮುಖಂಡ ಬಿ.ಹೆಚ್.ಅನಿಲ್‍ಕುಮಾರ್ ಮುಂದಾಗಿದ್ದಾರೆ. ಮೇಳೆಹಳ್ಳಿ ಕ್ರಾಸಿನಿಂದ ಗಡ್ಡೋಬನಹಳ್ಳಿಗೆ 2ಕೀಮೀ ರಸ್ತೆ ಮತ್ತು ಗಡ್ಡೋಬನಹಳ್ಳಿ ಗ್ರಾಮದಿಂದ ಮಧ್ಯವೆಂಕಟಾಪುರ ಕ್ರಾಸಿಗೆ 3ಕೀಮೀ ಸೇರಿ ಒಟ್ಟು 5ಕೀಮೀ ಉದ್ದದ ರಸ್ತೆಯ ದುರಸ್ಥಿತಿ ಕೆಲಸವು ಪ್ರಾರಂಭವಾಗಿದೆ. ಗಡ್ಡೋಬನಹಳ್ಳಿ ಗ್ರಾಮದಲ್ಲಿ ಒಟ್ಟು 90ಮನೆಗಳಿದ್ದು 450ಕ್ಕೂ ಅಧಿಕ ಮತದಾರರು ಇದ್ದಾರೆ. ಪ್ರತಿನಿತ್ಯ 40ಕ್ಕೂ ಅಧಿಕ ವಿದ್ಯಾರ್ಥಿಗಳು ಇದೇ ಮಾರ್ಗವಾಗಿ ಶಾಲಾ ಮತ್ತು ಕಾಲೇಜುಗಳಿಗೆ ತೆರಳುತ್ತಾರೆ. ಗಡ್ಡೋಬನಹಳ್ಳಿ ಗ್ರಾಮಸ್ಥ ಕಾಮರಾಜು ಮಾತನಾಡಿ ತುಮಕೂರು ಜಿಲ್ಲೆಯಲ್ಲಿಯೇ ಕಾಣದಂತಹ ರಸ್ತೆ ನಮ್ಮೂರಿನಲ್ಲಿ ಸೀಗಲಿದೆ. ಜಂಗಲ್‍ಬೆಳೆದು ಅಪಘಾತವಾಗಿ ಕೈಕಾಲು ಮುರಿದು ಸಾಕಷ್ಟು ಜನ ಮನೆಯಲ್ಲಿ ಇದ್ದಾರೆ. ಜಂಗಲ್‍ಬೆಳೆದು ಸಂಚಾರಕ್ಕೆ ಸಮಸ್ಯೆ…

Read More

ತುಮಕೂರು ನಮ್ಮ ಶಿಕ್ಷಣ ಪದ್ದತಿ, ಉಪಯೋಗಿಸಿ ಬಿಸಾಡುವ ಆಲೋಚನಾ ಕ್ರಮಗಳು ಪರಿಸರದ ಮೇಲೆ ಕೆಟ್ಟ ಪರಿಣಾಮ ಉಂಟು ಮಾಡುತ್ತಿದ್ದು, ಮರು ಬಳಕೆ ಮಾಡುವಂತಹ ಪದ್ದತಿಯನ್ನು ನಾವೆಲ್ಲರೂ ಬೆಳೆಸಿಕೊಳ್ಳಬೇಕಿದೆ ಎಂದು ಆದಮ್ಯ ಚೇತನ ಸಂಸ್ಥೆಯ ಅಧ್ಯಕ್ಷೆ ಡಾ.ತೇಜಸ್ವಿನಿ ಆನಂತಕುಮಾರ್ ತಿಳಿಸಿದ್ದಾರೆ. ನಗರದ ಗಾಜಿನಮನೆಯಲ್ಲಿ ಸ್ವದೇಶಿ ಜಾಗರಣ್ ಮಂಚ್ ವತಿಯಿಂದ ಜನವರಿ 18 ರಿಂದ 22ವರೆಗೆ ಆಯೋಜಿಸಿರುವ ಸ್ವದೇಶಿ ಮೇಳವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ಜಾಗತೀಕರಣದ ಫಲವಾಗಿ ನಮ್ಮನ್ನು ಆವರಿಸಿಕೊಂಡಿರುವ ವಿದೇಶಿ ವ್ಯಾಮೋಹವನ್ನು ಕಳಚಿ, ಭಾರತೀಯ ಪದ್ದತಿಯನ್ನು ಪರಿಚಯಿಸುವ ನಿಟ್ಟಿನಲ್ಲಿ ಸ್ವದೇಶಿ ಜಾಗರಣ್ ಮಂಚ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ತುಮಕೂರು ಮೇಯರ್ ಶ್ರೀಮತಿ ಪ್ರಭಾವತಿ ಸುಧೀಶ್ವರ್ ಮಾತನಾಡಿ,ಭತ್ತಕುಟ್ಟಿ,ರಾಗಿ ಬೀಸಿ ಕಾರ್ಯಕ್ರಮ ಉದ್ಘಾಟಿಸಿ ದ್ದರಿಂದ ನನ್ನ ಬಾಲ್ಯ ಜ್ಞಾಪಕಕ್ಕೆ ಬಂತು.ನಾನು ಮದುವೆಯಾಗಿ ಬಂದ ನಂತರವು ನಮ್ಮ ಅತ್ತೆ ನಮಗೆ ಭತ್ತ ಕುಟ್ಟುವುದು, ರಾಗಿ ಬೀಸುವುದನ್ನು,ಹಿಟ್ಟು ರುಬ್ಬುವುದನ್ನು ಹೇಳಿಕೊಡುತ್ತಿದ್ದರು.ಆತುರದ ಜಗತ್ತಿನಲ್ಲಿ ಇಂದು ಎಲ್ಲವನ್ನು ಬಿಟ್ಟು ಹಲವಾರು ರೋಗ ರುಜೀನಗಳಿಗೆ ತುತ್ತಾಗುತ್ತಿದ್ದೇವೆ.ಇದನ್ನು ತಡೆಯುವ ನಿಟ್ಟಿನಲ್ಲಿ ನಾವೆಲ್ಲರೂ ಪ್ರಯತ್ನಿಸಬೇಕಿದೆ ಎಂದರು. ಕಾರ್ಯಕ್ರಮದ…

Read More

ತುಮಕೂರು ಜೀವನದಲ್ಲಿ ಕಣ್ಣಿನ ದೃಷ್ಟಿ ಬಹಳ ಮುಖ್ಯ. ಬದುಕು ಕಾಣಲು, ಜಗತ್ತಿನ ಬೆಳಕು ನೋಡಲು ಕಣ್ಣಿನ ಆರೋಗ್ಯ ಪ್ರತಿಯೊಬ್ಬರಿಗೂ ಅವಶ್ಯಕ. ಪೌಷ್ಠಿಕ ಆಹಾರ ಕಣ್ಣಿನ ಆರೋಗ್ಯದ ಕಾಳಜಿಗೆ ಪೂರಕವಾಗಲಿದೆ. ಕಣ್ಣಿನ ಆರೋಗ್ಯ ಕಾಪಾಡಿಕೊಂಡರೆ ಬದುಕು ಸುಂದರ ಎಂದು ಅಗರ್ವಾಲ್ಸ್ ಕಣ್ಣಿನ ಆಸ್ಪತ್ರೆ ನೇತ್ರ ತಜ್ಞ ಡಾ. ಗಿರೀಶ್ ರೆಡ್ಡಿ ಜಿ. ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಯುವ ರೆಡ್ ಕ್ರಾಸ್ ಘಟಕ ಹಾಗೂ ಅಗರ್ವಾಲ್ಸ್ ಕಣ್ಣಿನ ಆಸ್ಪತ್ರೆ ಇವರ ಸಹಯೋಗದೊಂದಿಗೆ ಗುರುವಾರ ಆಯೋಜಿಸಿದ್ದ ಎರಡು ದಿನದ ‘ಉಚಿತ ನೇತ್ರ ತಪಾಸಣಾ ಶಿಬಿರ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಡಿಜಿಟಲ್ ಯುಗದಲ್ಲಿ ತಾಂತ್ರಿಕ ಕೆಲಸಗಳಿಂದಾಗಿ ಸದಾ ಕಂಪ್ಯೂಟರ್, ಮೊಬೈಲ್ ಫೋನ್ ಬಳಕೆಯಿಂದಾಗಿ ಯುವಕರಲ್ಲಿ ಕಣ್ಣಿನ ಸಮಸ್ಯೆ ಬಹಳವಾಗಿ ಕಾಡುತ್ತಿದೆ. ಕತ್ತಲೆಯಲ್ಲಿ ಡಿಜಿಟಲ್ ಸ್ಕ್ರೀನ್ ಬಳಕೆಯಿಂದಾಗಿ ಕಣ್ಣಿನ ಆರೋಗ್ಯ ಹದಗೆಟ್ಟಿದೆ. ಕಣ್ಣಿನ ಆರೋಗ್ಯ ಕಾಪಾಡಲು ಆಹಾರ, ಚಟುವಟಿಕೆ ಹಾಗೂ ನಮ್ಮ ಅಭ್ಯಾಸಗಳಿಂದಷ್ಟೇ ಸಾಧ್ಯ ಎಂದರು. ತುಮಕೂರು ವಿಶ್ವವಿದ್ಯಾನಿಲಯ ಪರೀಕ್ಷಾಂಗ ಕುಲಸಚಿವ ಪೆÇ್ರ. ಪ್ರಸನ್ನ ಕುಮಾರ್ ಮಾತನಾಡಿ, ಒಂದು…

Read More

ತುಮಕೂರು ಪದ್ಮಭೂಷಣ, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಪರಮ ಪೂಜ್ಯ ಡಾ. ಶ್ರೀ. ಶ್ರೀ. ಶಿವಕುಮಾರಮಹಾಶಿವಯೋಗಿಗಳವರ 4ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮ ವನ್ನು ಶ್ರೀ ಸಿದ್ಧಗಂಗಾ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಹಿಂದಿನ 2ವರ್ಷಗಳಲ್ಲಿ ಕೋವಿಡ್-19ನಿಂದಾಗಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗಿತ್ತು. ಪ್ರಸಕ್ತ ವರ್ಷ ಪೂಜ್ಯರ ಸಂಸ್ಮರಣೋತ್ಸವವನ್ನು ದೊಡ್ಡಮಟ್ಟದಲ್ಲಿ ಆಚರಿಸಲಾಗುತ್ತಿದೆ. ಸರ್ಕಾರವು ಹಿಂದಿನ ವರ್ಷ ಈ ದಿನವನ್ನು ದಾಸೋಹ ದಿನವನ್ನಾಗಿ ಘೋಷಿಸಿತ್ತು. ಸದ್ಭಕ್ತರು, ಅಭಿಮಾನಿಗಳು, ಹಳೆ ವಿದ್ಯಾರ್ಥಿಗಳು ನಾಡಿನಾದ್ಯಂತ ಈ ದಿನವನ್ನು ದಾಸೋಹ ದಿನವನ್ನಾಗಿ ಆಚರಿಸುತ್ತಿದ್ದಾರೆ. ದಿನಾಂಕ:21.01.2023ರ ಶನಿವಾರ ಬೆಳಿಗ್ಗೆ 10.30ಗಂಟೆಗೆ ಸಮಾರಂಭವನ್ನು ಸನ್ಮಾನ್ಯ ಬಿ.ಎಸ್.ಯಡಿಯೂರಪ್ಪನವರು, ಮಾಜಿಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ಇವರು ಉದ್ಘಾಟಿಸಲಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಘನ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಪರಮಪೂಜ್ಯ ಶ್ರೀ ಶ್ರೀ ಸಿದ್ಧಲಿಂಗಮಹಾಸಾಮೀಜಿಯವರ ದಿವ್ಯನೇತೃತ್ವ, ಬೆಂಗಳೂರು ಬೇಲಿಮಠದ ಅಧ್ಯಕ್ಷರಾದ ಶಿವಾನುಭವ ಚರಮೂರ್ತಿ ಪರಮಪೂಜ್ಯ ಶ್ರೀ ಶ್ರೀ ಶಿವರುದ್ರಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ಜರುಗಲಿದೆ. ಈ ಭವ್ಯ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಮಾನ್ಯ ಸಚಿವರುಗಳಾದ ಜೆ.ಸಿ.ಮಾಧುಸ್ವಾಮಿ, ವಿ.ಸೋಮಣ್ಣ, ಅರಗ…

Read More

ತುಮಕೂರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಗ್ರಾಮೀಣ ಭಾಗದಲ್ಲಿ ಉದ್ಭವಿಸಿರುವ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ಅವರ ನಿಯೋಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿತು. ನಗರದ ಜಿಲ್ಲಾ ಪಂಚಾಯಿತಿ ಕಚೇರಿಗೆ ಗುರುವಾರ ವಿವಿಧ ಕಾಂಗ್ರೆಸ್ ಮುಖಂಡರೊಂದಿಗೆ ಭೇಟಿ ನೀಡಿ ಸಿಇಒ ಅವರೊಂದಿಗೆ ಚರ್ಚಿಸಿದ ಮುರಳೀಧರ ಹಾಲಪ್ಪ ಅವರು, ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಶಾಲೆಗಳ ಕೊಠಡಿಗಳನ್ನು ದುರಸ್ಥಿಗೊಳಿಸಿ ಶಾಲೆಗಳ ಸುತ್ತ ಕಾಂಪೌಂಡ್ ನಿರ್ಮಿಸಬೇಕು ಹಾಗೂ ಹೆಣ್ಣುಮಕ್ಕಳ ಶೌಚಾಲಯಗಳ ಬಗ್ಗೆ ತಕ್ಷಣ ಗಮನ ಹರಿಸಿ ಶೌಚಾಲಯಗಳಿಲ್ಲದ ಶಾಲೆಗಳಿಗೆ ಶೌಚಾಲಯಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಯಾವುದೇ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿಚಾರಿಸಿದರೆ ಚುನಾವಣೆಯತ್ತ ಬೆರಳು ಮಾಡಿ ತೋರಿಸದೆ, ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ಚಾಚೂ ತಪ್ಪದೇ ಅನುಷ್ಠಾನಗೊಳಿಸಲು ಜಿಲ್ಲಾ ಪಂಚಾಯತ್ ಅಡಿಯಲ್ಲಿ ಬರುವಂತಹ ಎಲ್ಲಾ ಇಲಾಖೆಗಳಿಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಪಂಚಾಯಿತಿಗೆ ಬರುವ ಯಾವುದಾದರೂ ಯೋಜನೆಗಳಿಗೆ ಬಳಸದೆ ವಾಪಸ್ ಹೋಗುವಂತಹ…

Read More