Author: News Desk Benkiyabale

ತುಮಕೂರು ಸಮಾಜಕ್ಕಾಗಿ ದುಡಿದವರನ್ನು ಈ ಜಗತ್ತು ಎಂದಿಗೂ ಮರೆಯುವುದಿಲ್ಲ. ಹಾಗಾಗಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿಗತ ಬೆಳವಣಿಗೆಯ ಜೊತೆಗೆ, ಈ ಸಮಾಜದ ಅಭಿವೃದ್ದಿಗೂ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಂಗಾಧರ್ ತಿಳಿಸಿದ್ದಾರೆ. ನಗರದ ಏಂಪ್ರೆಸ್ ಮಹಿಳಾ ಪದವಿಪೂರ್ವ ಕಾಲೇಜಿನ ಸಾಂಸ್ಕøತಿಕ, ಕ್ರೀಡೆ,ರಾಷ್ಟ್ರೀಯ ಸೇವಾ ಯೋಜನೆ, ಸ್ಕೌಟ್ಸ್ ಮತ್ತು ಗೈಡ್ಸ್,ಎನ್.ಎಸ್.ಎಸ್.ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡುತಿದ್ದ ಅವರು,ಸಮಾಜದ ಏಳಿಗೆಗಾಗಿ ದುಡಿದಂತಹ ಮಹಾತ್ಮಗಾಂಧಿ, ಬುದ್ದ,ಬಸವ,ಅಂಬೇಡ್ಕರ್, ಅಬ್ದುಲ್ ಕಲಾಂ ಇಂತಹವರನ್ನು ನಾಡಿನ ಜನತೆ ಇಂದಿಗೂ ಸ್ಮರಿಸುತ್ತಿದ್ದಾರೆ. ಹಾಗಾಗಿ ಮಕ್ಕಳು ಇವರುಗಳನ್ನು ಆದರ್ಶವಾಗಿಟ್ಟುಕೊಂಡು ಸಮಾಜಸೇವೆಯಲ್ಲಿ ತೊಡಗುವಂತೆ ಸಲಹೆ ನೀಡಿದರು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳು ಉತ್ತಮ ಅಂಕದ ಜೊತೆಗೆ, ಒಳ್ಳೆಯ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕಿದೆ. ಆಗ ಮಾತ್ರ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ.ಉತ್ತಮ ಅಂಕಗಳು ನಿಮಗೆ ಒಳ್ಳೆಯ ಉದ್ಯೋಗ, ಕೈತುಂಬ ವೇತನ ದೊರಕಿಸಬಹುದು. ಹಾಗೂ ಒಳ್ಳೆಯ ವ್ಯಕ್ತಿತ್ವ ನೀವು ಮಾಡುವ ಕೆಲಸದಲ್ಲಿ ಉನ್ನತ್ತಿಗೆ ಹೋಗಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಮಕ್ಕಳು ಅಂಕಗಳ ಜೊತೆಗೆ, ಒಳ್ಳೆಯ ವ್ಯಕ್ತಿತ್ವ…

Read More

ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿ ರಂಗಾಪುರ ಗ್ರಾಮ ಪಂಚಾಯಿತಿಯು 2021-22ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ. ಗ್ರಾಮ ಪಂಚಾಯತಿಗಳ ಕಾರ್ಯನಿರ್ವಹಣೆಯನ್ನು ಉತ್ತೇಜಿಸುವ ಉದ್ದೇಶದಿಂದ ನೀಡುವ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರವಾಗಿದೆ. ರಂಗಾಪುರ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಈ ಪಂಚಾಯತಿಯಲ್ಲಿ ಈಗಾಗಲೇ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಡಿಜಿಟಲ್ ಗ್ರಂಥಾಲಯ, ಸುಸಜ್ಜಿತ ಸಭಾಭವನ ನಿರ್ಮಾಣ ವಾಗಿದ್ದು, ಕರೋನ ಸಂಕಷ್ಟ ಕಾಲದಲ್ಲಿ ಉತ್ತಮ ನಿರ್ವಹಣೆ ತೋರಿದ್ದಾರೆ. ಗ್ರಾಮಪಂಚಾಯತಿ ಮಟ್ಟದಲ್ಲಿ ಕೆ.ಡಿ.ಪಿ ಸಭೆ ನಡೆಸಿ ಗ್ರಾ.ಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ವಿವಿಧ ಇಲಾಖೆಗಳ ಸೌಲಭ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಲಾಗಿದೆ. ನರೇಗಾ ಯೋಜನೆಯಡಿಯಲ್ಲಿ ಎಲ್ಲಾ ಗ್ರಾಮಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ, 15 ನೇ ಹಣಕಾಸು ಯೋಜನೆಯಡಿಯಲ್ಲಿ ಗ್ರಾಮಗಳಲ್ಲಿ ಹೈಮಾಸ್ಟ್ ದೀಪಗಳ ನಿರ್ಮಾಣ, ಕೃಷಿ ಹೊಂಡ, ಗೋಕಟ್ಟೆ, ಸೋಕ್ ಪಿಟ್, ಕುರಿಶೆಡ್ ಗಳು, ದನದ ಕೊಟ್ಟಿಗೆ ಗಳನ್ನು ನಿರ್ಮಾಣ ಮಾಡಿ ಸಾರ್ವಜನಿಕ ರಿಗೆ ಅನುಕೂಲ ಕಲ್ಪಿಸಲಾಗಿದೆ. ಹಣಕಾಸು ಮತ್ತು ಕಡತಗಳನ್ನು ಸಮರ್ಪಕವಾಗಿ ನಿರ್ವಹಣೆ…

Read More

ತುಮಕೂರು ಅನವಶ್ಯಕ ಭಾವನೆಗಳನ್ನು ನಿಗ್ರಹಿಸಿ, ಚಂಚಲತೆಯನ್ನು ಹೋಗಲಾಡಿಸಿಕೊಂಡು, ಮಾನಸಿಕ ಆರೋಗ್ಯ, ನಿರ್ಮಲ ಮನಸ್ಥಿತಿ ಮತ್ತು ಏಕಾಗ್ರತೆ ಕಾಪಾಡಿಕೊಂಡವರು ಸಾಧಕರಾಗುತ್ತಾರೆ. ಮನಸಿನ ಚಿಂತನೆಗಳು ನಡವಳಿಕೆಯ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ, ನಮ್ಮ ಆಲೋಚನೆಗಳ ಮೇಲೆ ನಿಗಾವಹಿಸಬೇಕು ಎಂದು ಸ್ನೇಹ ಮನೋವಿಕಾಸ ಕೇಂದ್ರದ ಮನೋವೈದ್ಯ ಡಾ. ಲೋಕೇಶ್ ಬಾಬು ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಲೈಂಗಿಕ ದೌರ್ಜನ್ಯ ತಡೆ ಘಟಕ, ಆಪ್ತ ಸಮಾಲೋಚನ ಘಟಕ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಘಟಕ ಹಾಗೂ ಮಹಿಳಾ ಸಬಲೀಕರಣ ಘಟಕ ಬುಧವಾರ ಆಯೋಜಿಸಿದ್ದ ‘ಮಾನಸಿಕ ಆರೋಗ್ಯ’ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಮಾನಸಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂಥ ಸಂಶೋಧನಾ ಕ್ಷಮತೆಯನ್ನು ರೂಢಿಸಿಕೊಳ್ಳಬೇಕು. ವೈಜ್ಞಾನಿಕ ಅರಿವು ಮತ್ತು ಚಿಂತನೆಯ ಮೂಲಕ ಅನಾಹುತಗಳನ್ನು ತಡೆಯಬಹುದು ಎಂದು ತಿಳಿಸಿದರು. ನಮ್ಮ ದೇಹದ ಎಲ್ಲಾ ಅಂಗಗಳು ನಮ್ಮ ಆರೋಗ್ಯ ಮತ್ತು ಪ್ರಾಣರಕ್ಷಣೆ ಮಾಡಲು ಪ್ರತಿಕ್ಷಣವೂ ಶ್ರದ್ಧೆಯಿಂದ ಕಾರ್ಯನಿರ್ವಹಿಸುತ್ತವೆ. ನಾವು ಭಾವನೆಗಳನ್ನು ಹತೋಟಿಯಲ್ಲಿರಿಸಿಕೊಳ್ಳಲು ಸಾಧ್ಯವಿಲ್ಲ. ಬದಲಾಗಿ, ಅವನ್ನು ಗಮನಿಸಿ, ಸಕಾರಾತ್ಮಕ ಚಿಂತನೆಗಳ ಮೂಲಕ…

Read More

ತುಮಕೂರು ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿಯ ಡಬಲ್ ಇಂಜಿನ್ ಸರಕಾರದ ದುರಾಡಳಿತ ಮತ್ತು ಜನವಿರೋಧಿ ನೀತಿಗಳನ್ನು ಮನೆ ಮನೆಗೆ ತಿಳಿಸುವ ನಿಟ್ಟಿನಲ್ಲಿ ಕೆಪಿಸಿಸಿ ವತಿಯಿಂದ ಕೈಗೊಂಡಿರುವ ಪ್ರಜಾಧ್ವನಿ ಬಸ್‍ಯಾತ್ರೆ ಜನವರಿ 24 ರಂದು ತುಮಕೂರಿನಲ್ಲಿ ನಡೆಯುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಪಕ್ಷದ ಗೆಲುವು ಸಾಧಿಸಲಿದೆ ಎಂಬ ಸಂದೇಶವನ್ನು ಜನರಿಗೆ ತಲುಪಿಸುವ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕೆಂದು ಮಾಜಿ ಉಪಮುಖ್ಯ ಮಂತ್ರಿ ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಎಲ್ಲಾ ಮುಖಂಡರ ತೀರ್ಮಾನದಂತೆ ಹಮ್ಮಿಕೊಂಡಿರುವ ಪ್ರಜಾಧ್ವನಿ ಬಸ್ ಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡುತಿದ್ದ ಅವರು, ಈಗಾಗಲೇ ಚಿತ್ರದುರ್ಗದಲ್ಲಿ ನಡೆದ ಐಕ್ಯತಾ ಸಮಾವೇಶ ಮತ್ತು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ನಾ ನಾಯಕಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಇಡೀ ರಾಜ್ಯಕ್ಕೆ ಸ್ಪಷ್ಟ ಸಂದೇಶವನ್ನು ನೀಡಿದ್ದೇವೆ.ಅದೇ ರೀತಿಯಲ್ಲಿ ಪ್ರಜಾಧ್ವನಿ…

Read More

ಕೊರಟಗೆರೆ ರೈತರ ಬೆಳೆಯ ರಕ್ಷಣೆಗೆ ಬೆಳೆವಿಮೆ ಮತ್ತು ಕೃಷಿಬೆಳೆ ವಹಿವಾಟಿಗೆ ರಾಗಿ ಖರೀದಿಕೇಂದ್ರ ಅವಶ್ಯಕತೆ ಇದೆ. ಕೊರಟಗೆರೆ ಕ್ಷೇತ್ರದ ರೈತರ ಮನವಿಗೆ ಮಾಜಿ ಸಿಎಂ ಕುಮಾರಣ್ಣ ಉತ್ತರ ನೀಡಿದ್ದಾರೆ. ಕೊರಟಗೆರೆಯಲ್ಲಿ ರೈತಚೈತನ್ಯ ಮತ್ತು ರೈತ ಸಂಕ್ರಾಂತಿ ಸಂವಾದ ಕಾರ್ಯಕ್ರಮವು ಯಶಸ್ವಿಯಾಗಿದೆ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ತಿಳಿಸಿದರು. ಕೊರಟಗೆರೆ ಪಟ್ಟಣದ ಲಕ್ಷ್ಮೀನರಸಿಂಹ ಕಲ್ಯಾಣ ಮಂಟಪದಲ್ಲಿ ಜಾತ್ಯಾತೀತ ಜನತಾದಳ ಪಕ್ಷದಿಂದ ಸೋಮವಾರ ಏರ್ಪಡಿಸಲಾಗಿದ್ದ ರೈತನಾಯಕ ಕುಮಾರಣ್ಣನ ಜೊತೆ ರೈತಚೈತನ್ಯ ಮತ್ತು ರೈತ ಸಂಕ್ರಾಂತಿಯ ವಿಡೀಯೊ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕರ್ನಾಟಕದ 224ಕ್ಷೇತ್ರದ ರೈತರ ಸಂಕಷ್ಟವನ್ನು ತಿಳಿಯುವ ಉದ್ದೇಶದಿಂದ ರೈತ ಸಂಕ್ರಾಂತಿ ಸಂವಾದ ಕಾರ್ಯಕ್ರಮ ನಡೆದಿದೆ. ರೈತನ ಪರವಾಗಿ ಸದಾ ಚಿಂತಿಸುವ ರೈತನಾಯಕ ಕುಮಾರಣ್ಣ ಮುಖ್ಯಮಂತ್ರಿ ಆದರೇ ರೈತರ ಆರ್ಥಿಕ ಅಭಿವೃದ್ದಿಗೆ ಸಹಕಾರಿ ಆಗಲಿದೆ. ಕೊರಟಗೆರೆಯ ರೈತರು ಮುಸುಕಿನ ಜೋಳ ಮತ್ತು ರಾಗಿಬೆಳೆಯ ಬಗ್ಗೆ ಸಂವಾದ ಕಾರ್ಯಕ್ರಮದಲ್ಲಿ ಚರ್ಚಿಸಿದ್ದಾರೆ ಎಂದು ಹೇಳಿದರು. ತೋವಿನಕೆರೆ ರೈತ ಭೀಮರಾಜು ಮಾತನಾಡಿ ಕೊರಟಗೆರೆ ಕ್ಷೇತ್ರದಲ್ಲಿ ಮಳೆಯಿಂದ ರಾಗಿಬೆಳೆಯು…

Read More

ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿಯ ಕೆಂಚಗಾನಹಳ್ಳಿ ಗ್ರಾಮದ ಸ.ಕಿ.ಪ್ರಾ.ಪಾಠಶಾಲೆಯಲ್ಲಿ ಸೋಮವಾರದಂದು ಸಂಕ್ರಾಂತಿ ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತಾನಾಡಿದ ಶಾಲೆಯ ಸಹಶಿಕ್ಷಕಿ ಹಾಗೂ ಕವಯಿತ್ರಿ ಅಶ್ವಿನಿ ಡಿ.ಎನ್. ಮಾತಾನಾಡಿ ಶಾಲೆಗಳಲ್ಲಿ ಹಬ್ಬಗಳನ್ನು ಆಚರಿಸುವ ಮೂಲಕ ಹಬ್ಬದ ಮಹತ್ವ ಹಾಗೂ ವಿಶೇಷತೆಯನ್ನು ವಿದ್ಯಾರ್ಥಿಗಳಿಗೆ ಹೇಳಬೇಕು ಹಾಗೆಯೇ ಪ್ರತಿದಿನವೂ ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಿಸುವುದರಿಂದ ಹಾಗೂ ವಿಶೇಷ ಚಟುವಟಿಕೆಗಳನ್ನು ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಕಲಿಕಾಶಕ್ತಿಯನ್ನು ಹೆಚ್ಚಿಸಲು ಸಹಾಯಕಾರಿಯಾಗಲಿದೆ ಎಂದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಕೃಷ್ಣಮೂರ್ತಿ. ಟಿ.ವೈ, ಅಡುಗೆ ಸಿಬ್ಬಂದಿ ಭವ್ಯ ಉಪಸ್ಥಿತರಿದ್ದರು.

Read More

ತುಮಕೂರು ತುಮಕೂರು ನಗರದ ಹೆಗಡೆ ಕಾಲೋನಿ ಬಳಿ ಇರುವ ರೈಲ್ವೆ ಅಂಡರ್ ಪಾಸ್ ನಿಂದಾಗಿ ಹಲವು ಸಮಸ್ಯೆ ಆಗುತ್ತಿದ್ದು ಇದರಿಂದ ಪಾದಚಾರಿಗಳು ಈ ಭಾಗದಲ್ಲಿ ಸಂಚರಿಸಲು ಆಗುತ್ತಿಲ್ಲ ಕೂಡಲೇ ಜಿಲ್ಲಾಡಳಿತ ಮಧ್ಯಪ್ರವೇಶಸಿ ಸಾರ್ವಜನಿಕರು ಹಾಗೂ ವಾಹನ ಸವಾರರ ಸಮಸ್ಯೆ ಬಗೆಹರಿಸಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಇಕ್ಬಾಲ್ ಅಹಮದ್ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರು ಕಳೆದ ಮೂರು ತಿಂಗಳ ಹಿಂದೆ ಆಟೋ ಚಾಲಕ ಅಮ್ಜದ್ ಖಾನ್ ಇದೆ ಜಾಗದಲ್ಲಿ ನೀರಿನಲ್ಲಿ ಕೊಚ್ಚಿ ಹೋಗಿ ಅಮೃತಪಟ್ಟಿದ್ದ ಘಟನೆ ಮಾಸುವ ಮುನ್ನಡೆ ಹಲವು ಅಪಘಾತಗಳು ನಡೆದಿದ್ದು ಇದರಿಂದ ಸಾರ್ವಜನಿಕರು ಪಾದಾಚಾರಿಗಳು ಮಕ್ಕಳು ಹಾಗೂ ಮಹಿಳೆಯರು ಈ ಭಾಗದಲ್ಲಿ ಸಂಚರಿಸಲು ಸಾಕಷ್ಟು ತೊಂದರೆ ಉಂಟಾಗುತ್ತಿದೆ ಎಂದ ಅವರು ಇನ್ನು ರೈಲ್ವೆ ಇಲಾಖೆಯಿಂದ ನಿರ್ಮಿಸಿರುವ ರೈಲ್ವೆ ಅಂಡರ್ ಪಾಸ್ ನಲ್ಲಿ ಸಾಕಷ್ಟು ಸಮಸ್ಯೆ ಉಂಟಾಗಿದೆ ಹಾಗೂ ಪ್ರತಿನಿತ್ಯ 20,000ಕ್ಕೂ ಹೆಚ್ಚು ಸಾರ್ವಜನಿಕರು ಸಂಚರಿಸುವ ಜನ ದಟ್ಟಣೆ ಪ್ರದೇಶವಾಗಿದ್ದು ಯಾವುದೇ ಸುರಕ್ಷತಾ…

Read More

ತುಮಕೂರು ಸಿದ್ದರಾಮೇಶ್ವರರ ಯಾವ ಜಾತಿಗೂ ಸೀಮಿತರಲ್ಲ, ಸಾಮಾಜಿಕ ಕ್ರಾಂತಿಯಲ್ಲಿ ಭಾಗವಹಿಸಿ ವಚನ ಕ್ರಾಂತಿಯನ್ನು ಮನೆಮನೆಗೆ ತಲುಪಿಸಿದ ಆದ್ಯ ಶರಣರು ಎಂದು ಶಾಸಕ ಜ್ಯೋತಿಗಣೇಶ್ ಅಭಿಪ್ರಾಯಪಟ್ಟರು. ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಡೆದ ರಾಜ್ಯ ಮಟ್ಟದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಗುರು ಸಿದ್ದರಾಮೇಶ್ವರರು ನೀಡಿದ ಸಂದೇಶ ಇಂದಿನ ಸಮಾಜಕ್ಕೂ ಅವಶ್ಯಕವಾಗಿದೆ ಎಂದರು. ವಚನ ಕ್ರಾಂತಿಯೊಂದಿಗೆ ಸಮಾಜದ ಪರಿವರ್ತನೆಗೆ ಶ್ರಮಿಸಿ, ನಾಡಿನೆಲ್ಲೆಡೆ ಕೆರೆ ಕಟ್ಟಿ ನೀರಿನ ಮಹತ್ವವನ್ನು 12ನೇ ಶತಮಾನದಲ್ಲಿಯೇ ತಿಳಿಸಿದ ಗುರು ಸಿದ್ದರಾಮೇಶ್ವರರ ಸಂದೇಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಮಾತನಾಡಿ, ಭೋವಿ ಸಮುದಾಯ ಶಿಕ್ಷಣಕ್ಕೆ ಒತ್ತು ನೀಡಬೇಕಿದೆ, ಸಮುದಾಯದಲ್ಲಿ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಸಮುದಾಯದ ಯುವಕ-ಯುವತಿಯರಿಗೆ ವಿದ್ಯಾಭ್ಯಾಸಕ್ಕೆ ಪೂರಕವಾದಂತಹ ವಾತಾವರಣವನ್ನು ನಿರ್ಮಿಸಬೇಕೆಂದು ಕರೆ ನೀಡಿದರು. ಸಮುದಾಯದ ಹಿತವನ್ನು ಕಾಯುವ ನಿಟ್ಟಿನಲ್ಲಿ ಸಮುದಾಯದ ಎಲ್ಲರು ಒಗ್ಗಟ್ಟಾಗಬೇಕಿದೆ, ಸಮಾಜದಲ್ಲಿ ಆಗುತ್ತಿರುವ ಬದಲಾವಣೆಯನ್ನು ಗಮನಿಸಿ ಒಟ್ಟಾಗಿ ವಿರೋಧಿಸಬೇಕಿದೆ, ಇಲ್ಲದೆಹೋದಲ್ಲಿ ಸಮುದಾಯ ಹಿಂದುಳಿಯುವುದರಲ್ಲಿ…

Read More

ಕೊರಟಗೆರೆ ನಿಮ್ಮ ಆಧಾರ್ ಕಾರ್ಡು ಮನೆಗೆ ಇನ್ನೂ ಬಂದಿಲ್ವಾ.. ಬ್ಯಾಂಕು ಚೇಕ್ ಬುಕ್ ನಿಮ್ಮ ಕೈಗೆ ಇನ್ನೂ ಸೇರಿಲ್ವಾ.. ರಿಜಿಸ್ಟರ್ ಪೋಸ್ಟ್-ಸ್ಪೀಡ್ ಪೋಸ್ಟ್ ಮನೆಗೆ ಬರ್ತಾ ಇಲ್ವಾ.. ಕೆಲಸದ ಆಹ್ವಾನದ ತುರ್ತುಕರೆ ನಿಮಗೇ ಬರೋದೇ ಇಲ್ಲ ಬೀಡಿ.. ಯಾಕೆ ಗೋತ್ತಾ ಮಲ್ಲೇಕಾವು ಅಂಚೆ ಕಚೇರಿಯ ಅಂಚೆ ಪಾಲಕ ಕಳೆದ 45ದಿನಗಳಿಂದ ಕಚೇರಿಗೆ ಬಂದೇ ಇಲ್ವಂತೆ..!! ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟ ಗ್ರಾಪಂ ವ್ಯಾಪ್ತಿಯ ಮಲ್ಲೇಕಾವು ಗ್ರಾಮದ ಅಂಚೆ ಕಚೇರಿಯ ಅಂಚೆ ಪಾಲಕ ನಾಗೇಂದ್ರ ಎಂಬಾತ ಕಳೆದ 45ದಿನಗಳಿಂದ ಕತ್ಯವ್ಯಕ್ಕೆ ಗೈರುಹಾಜರಿ. ಹತ್ತಾರು ಗ್ರಾಮಗಳಿಗೆ ತುರ್ತುಸೇವೆ ನೀಡಬೇಕಾದ ಅಂಚೆ ಪಾಲಕ ನಾಗೇಂದ್ರ ಕರ್ತವ್ಯಕ್ಕೆ ಗೈರಾಗಿ ನೂರಾರು ಸಮಸ್ಯೆಗಳು ಸೃಷ್ಟಿಯಾಗಿವೆ. ಬ್ಯಾಂಕು ಚೇಕ್, ಆಧಾರ್ ಕಾರ್ಡು, ಕೋರ್ಟ್ ನೊಟೀಸ್, ಎಟಿಎಂ ಕಾರ್ಡು, ರೇಷನ್‍ಕಾರ್ಡು, ಎಲ್‍ಐಸಿ ಬಾಂಡ್, ರಿಜೀಸ್ಟರ್ ಪೊಸ್ಟ್, ಸ್ಪೀಡ್ ಪೋಸ್ಟ್, ಜಾಬ್ ನೊಟೀಸ್, ಕೂರೀಯರ್, ಪಾರ್ಸಲ್‍ಗಳು ಹತ್ತಾರು ಗ್ರಾಮದ ನೂರಾರು ಜನ ಗ್ರಾಹಕರ ಕೈಸೇರದೇ ಕಳೆದ 45ದಿನಗಳಿಂದ ಮಲ್ಲೇಕಾವು ಅಂಚೆ ಕಚೇರಿಯಲ್ಲಿ…

Read More

ತುಮಕೂರು ಕಾರ್ಪೋರೇಟ್ ಬಂಡವಾಳದಾರರ ಪರವಾದ ಉದಾರವಾದಿ ನೀತಿಗಳು ದುಡಿಯುವ ಜನರನ್ನು ಅತ್ಯಂತ ನಿಕೃಷ್ಟ ಸ್ಥಿತಿಗೆ ತಳ್ಳಿವೆ. ಉದ್ಯೋಗದಿಂದ ಹೊರದೂಡಲ್ಪಡುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ನಿರುದ್ಯೋಗವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿ, ವಿದ್ಯಾವಂತ ನಿರುದ್ಯೋಗಿಗಳು ಉದ್ಯೋಗಕ್ಕಾಗಿ ಅಲೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮೋದಿ ಸರ್ಕಾರ ಕಾರ್ಪೊರೇಟ್ ಧಣಿಗಳ ತುಷ್ಟೀಕರಣಕ್ಕಾಗಿ 29 ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ, ನಾಲ್ಕು ಸಂಹಿತೆಗಳನ್ನಾಗಿಸಿದೆ. ಈ ಸಂಹಿತೆಗಳು ಕಾರ್ಮಿಕರಿಗೆ ಇದುವರೆಗೂ ಇದ್ದ ಹಕ್ಕುಗಳನ್ನು ನುಂಗಿಹಾಕಿವೆ. ಈ ಸಂಹಿತೆಗಳು ಕಾರ್ಮಿಕರ ಪ್ರತಿಭಟನೆಯ ಹಕ್ಕನ್ನು ಕಸಿದುಕೊಂಡು, ಶೋಷಣೆಯನ್ನು ತೀವ್ರಗೊಳಿಸಿವೆ. ಖಾಯಂ ಕೆಲಸಗಳಿಗೆ ತಿಲಾಂಜಲಿ ಇಡಲಾಗಿದೆ. ಬದಲಿಗೆ ನಿಗದಿತ ಅವಧಿ, ಓಜೆಟಿ, ನೀಮ್, ನೆಟಾಫ್ ಕಾರ್ಮಿಕರ ನೇಮಕಕ್ಕೆ ಕಾನೂನಿನ ರಕ್ಷಣೆ ಒದಗೀಸಲಾಗಿದೆ. ಕನಿಷ್ಟವೂ ಅಲ್ಲದ ಕೂಲಿ ಕೊಟ್ಟು ಗರಿಷ್ಟ ದುಡಿಮೆಗೆ ಹಚ್ಚಿ, ಲೂಟಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಸಂಪತ್ತು ಕೆಲವೇ ವ್ಯಕ್ತಿಗಳ ಕೈಯಲ್ಲಿ ಕೇಂದ್ರೀಕರಣಗೊಳ್ಳುತ್ತಿದೆ. ಪರಿಣಾಮ ಬಡತನ, ಹಸಿವು, ಅನಾರೋಗ್ಯ, ಅಪೌಷ್ಠಿಕತೆ ಹೆಚ್ಚುತ್ತಿದೆ. ಉಳ್ಳವರು ಮತ್ತು ಇಲ್ಲದವರ ನಡುವೆ ಭಾರಿ ಕಂದಕ ಸೃಷ್ಟಿಯಾಗುತ್ತಿದೆ.…

Read More